Monday, October 12, 2026

Dasara Wishes

BJP DasraWishes_JK DasraWishes JK
Happy Dasara
Home Cinema ಸುಶಾಂತ್ ಸಿಂಗ್ ಪ್ರಕರಣ ಸಿಬಿಐಗೆ: ಸುಪ್ರೀಂ ಕೋರ್ಟ್ ಸೂಚನೆ

ಸುಶಾಂತ್ ಸಿಂಗ್ ಪ್ರಕರಣ ಸಿಬಿಐಗೆ: ಸುಪ್ರೀಂ ಕೋರ್ಟ್ ಸೂಚನೆ

ಮುಂಬೈ, 06, 2020 (www.justkannada.in): ಕೇಂದ್ರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಿದೆ.

ಬಿಹಾರ ಸರಕಾರ ಪ್ರಕರಣವನ್ನು ಕೇಂದ್ರ ತನಿಖಾ ದಳಕ್ಕೆ ವರ್ಗಾಯಿಸುವಂತೆ ಕೇಂದ್ರ ಸರಕಾರಕ್ಕೆ ಒತ್ತಾಯಿಸಿತ್ತು. ಆದರೆ ಮಹಾರಾಷ್ಟ್ರ ಸರ್ಕಾರ ಅದಕ್ಕೆ ವಿರೋಧ ವ್ಯಕ್ತಪಡಿಸಿತ್ತು.

ಸರ್ವೋಚ್ಛ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿದ ಇದುವರೆಗಿನ ತನಿಖಾ ವರದಿಯನ್ನು ಸಲ್ಲಿಸುವಂತೆ ಮಹಾರಾಷ್ರ ಪೊಲೀಸರಿಗೆ ಸೂಚಿಸಿತ್ತು.

ಕೇಂದ್ರ ಸರಕಾರದ ಪರವಾಗಿ ಕೋರ್ಟ್ನಲ್ಲಿ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ,ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ ಅವರ ಕೋರಿಕೆ ಮೇರೆಗೆ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.