ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ.

ಬೆಂಗಳೂರು,ಜುಲೈ,25,2022(www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಶಂಕಿತ ಉಗ್ರನನ್ನ ಬಂಧಿಸಿದ್ದಾರೆ.

ತಿಲಕ್ ನಗರದಲ್ಲಿ ನೆಲೆಸಿದ್ದ ಶಂಕಿತ ಉಗ್ರ ಅಖ್ತರ್ ಹುಸೇನ್ ಲಷ್ಕರ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂನ ಅಖ್ತರ್ ಹುಸೇನ್ ಫುಡ್ ಡೆಲಿವರಿ ಯುವಕರ ಜತೆ ನೆಲೆಸಿದ್ಧ. ಶಂಕಿತನ ಬಗ್ಗೆ ಕೇಂದ್ರ ಗುಪ್ತದಳದಿಂದ‌ ಮಾಹಿತಿ ಬಂದಿತ್ತು.

ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ನಿನ್ನೆ ರಾತ್ರಿ ಶಂಕಿತ ಉಗ್ರ ಅಕ್ತರ್ ಹುಸೇನ್ ಮನೆ ಮೇಲೆ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಈ ಕುರಿತು ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

Key words: Suspected-terrorist- arrested – Bangalore.