RSS ಪಥಸಂಚನದಲ್ಲಿ ಭಾಗಿಯಾಗಿದ್ದ PDO ಅಮಾನತಿಗೆ ಕೆಎಟಿ ತಡೆ

ಬೆಂಗಳೂರು,ಅಕ್ಟೋಬರ್,30,2025 (www.justkannada.in): ಆರ್‌ ಎಸ್‌‍ಎಸ್‌‍ ಪಥಸಂಚನದಲ್ಲಿ ಭಾಗಿಯಾಗಿದ್ದಕ್ಕೆ ಗ್ರಾಮೀಣ ಅಭಿವೃದ್ದಿ ಅಧಿಕಾರಿ(PDO) ಅಮಾನತುಮಾಡಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ.

ರಾಯಚೂರು ಜಿಲ್ಲೆ ಪಿಡಿಒ ಪ್ರವೀಣ್‌ ಕುಮಾರ್‌ ಅಮಾನತು ಮಾಡಿದ್ದ ಸರ್ಕಾರದ ಆದೇಶಕ್ಕೆ ಕರ್ನಾಟಕ ಆಡಳಿತ ನ್ಯಾಯಾಧೀಕರಣ (ಕೆಎಟಿ) ಮಧ್ಯಂತರ ತಡೆಯಾಜ್ಞೆ ನೀಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ತಮನ್ನು ಸೇವೆಯಿಂದ ಅಮಾನತು ಮಾಡಿರುವುದನ್ನು ಪ್ರಶ್ನಿಸಿ ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಪಿಡಿಒ ಪ್ರವೀಣ್‌ ಕುಮಾರ್‌ ಅವರು, ಕೆಎಟಿ ಮೊರೆ ಹೋಗಿದ್ದರು.ಅರ್ಜಿ ವಿಚಾರಣೆ ನಡೆಸಿದ ಕೆಇಟಿ ಸರಕಾರದ ಆದೇಶಕ್ಕೆ ಮಧ್ಯಂತರ ನೀಡಿದೆ.

2025ರ ಅಕ್ಟೋಬರ್‌ 12 ರಂದು ಲಿಂಗಸುಗೂರು ಪಟ್ಟಣದಲ್ಲಿ ಏರ್ಪಡಿಸಿದ್ದ ಆರ್‌ಎಸ್‌‍ಎಸ್‌‍ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಿಡಿಒ ಪ್ರವೀಣ್‌ ಕುಮಾರ್‌ ಕೆ.ಪಿ. ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು.

Key words: KAT, stays, suspension , PDO, involved , RSS, conspiracy