ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀಗಳು…

0
349

ಉಡುಪಿ,ಡಿ26,2019(www.justkannada.in): ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಸುತ್ತೂರು ಶ್ರೀ ದೇಶಿಕೇಂದ್ರ ಸ್ವಾಮೀಜಿಗಳು ಭೇಟಿ ನೀಡಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದರು.

ಅನಾರೋಗ್ಯದಿಂದಾಗಿ ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಪೇಜಾವರ ಶ್ರೀ ವಿಶ್ವೇಶ್ವರ ತೀರ್ಥ ಸ್ವಾಮೀಜಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.  ಹೀಗಾಗಿ ಸುತ್ತೂರು ಶ್ರೀಗಳು ಮಣಿಪಾಲ್ ಆಸ್ಪತ್ರೆಗೆ ತೆರಳಿ  ಪೇಜಾವರ  ಶ್ರೀಗಳ ಆರೋಗ್ಯ ವಿಚಾರಿಸಿದರು. ಬಳಿಕ ಪೇಜಾವರ ಶ್ರೀಗಳ ಅರೋಗ್ಯ ಸುಧಾರಿಸಲೆಂದು ಸುತ್ತೂರು ಶ್ರೀಗಳು ಪ್ರಾರ್ಥಿಸಿದರು.

ಇದಾದ ಬಳಿಕ  ಪೇಜಾವರ ಮಠದ ಕಿರಿಯ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳೊಂದಿಗೆ ಚರ್ಚೆ ನಡೆಸಿದ ಸುತ್ತೂರು ದೇಶೀಕೇಂದ್ರ  ಸ್ವಾಮೀಜಿಗಳು ಪೇಜಾವರ ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು.

Key words: suttur- desikendra sri-visit- udupi -manipal hospital-pejavar shri- health