ಸುವರ್ಣಸೌಧಕ್ಕೆ ಮುತ್ತಿಗೆಗೆ ಯತ್ನ: ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

ಬೆಳಗಾವಿ,ಡಿಸೆಂಬರ್,9,2025 (www.justkannada.in): ರೈತರ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಧೋರಣೆ  ತಾಳುತ್ತಿದೆ ಎಂದು ಆರೋಪಿಸಿ  ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ಬಿಜೆಪಿ ಮತ್ತು ರೈತ ಮುಖಂಡರ  ಪ್ರತಿಭಟನಾ ರ್ಯಾಲಿಯನ್ನ ಪೊಲೀಸರು ತಡೆದು ಪ್ರತಿಭಟನಾನಿರತರನ್ನ ವಶಕ್ಕೆ ಪಡೆದರು.

ಹಲಗಾ ಗ್ರಾಮದ ಬಳಿ  ಬಿಜೆಪಿ ಪ್ರತಿಭಟನಾ ರ್ಯಾಲಿಗೆ ಪೊಲೀಸರು ತಡೆಯೊಡ್ಡಿದ್ದು ಬಿಜೆಪಿ ನಾಯಕರಾದ ಬಿವೈ ವಿಜಯೇಂದ್ರ, ಸಿಟಿ ರವಿ ಸೇರಿ ಹಲವು ಮಂದಿಯನ್ನ ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಪೊಲೀಸರು ಬಿಜೆಪಿ ನಾಯಕರ ನಡುವೆ ತಳ್ಳಾಟ ನೂಕಾಟ ನಡೆಯಿತು.

ಪ್ರತಿಭಟನಾ ನಿರತರು ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ರೈತರ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಧೋರಣೆ  ತಾಳುತ್ತಿದೆ ಎಂದು ಆರೋಪಿಸಿ  ಬಿಜೆಪಿ ಮತ್ತು ರೈತರು ಪ್ರತಿಭಟನೆಗೆ ಮುಂದಾಗಿತ್ತು. ವಶಕ್ಕೆ ಪಡೆದ ಪ್ರತಿಭಟನಾಕಾರರನ್ನ ಪೊಲೀಸರು ಬಸ್ ನಲ್ಲಿ ಬೇರೆಡೆಗೆ ಸ್ಥಳಾಂತರಿಸಿದರು.

Key words: Suvarnasoudha, Protest, BJP leaders, Farmer, police