ಬಾಗಲಕೋಟೆ,ಮೇ,24,2025 (www.justkannada.in): ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ರಾಮಮಂದಿರ ಮಠದ ಲೋಕೇಶ್ವರ ಮಹಾರಾಜ ಸ್ವಾಮೀಜಿಯನ್ನ ಬಂಧಿಸಲಾಗಿದೆ.
ರಾಯಭಾಗ ತಾಲೂಕಿನ ಮೇಖಳಿಯ ರಾಮಮಂದಿರ ಮಠದ ಲೋಕೇಶ್ವರ ಮಹಾರಾಜನ ಸ್ವಾಮೀಜಿ ವಿರುದ್ಧ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿಕೊಂಡು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಬಾಗಲಕೋಟೆಯ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಹಿಳಾ ಠಾಣೆ ಪೊಲೀಸರು ಮೂಡಲಗಿ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದರು. ಸದ್ಯ ಸ್ವಾಮೀಜಿ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿ ಜೈಲಿಗಟ್ಟಿದ್ದಾರೆ.
ಮೇ.13 ರಂದು ಬಾಲಕಿಯನ್ನು ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರ ಎಸಗಿ ನಂತರ ಬಾಗಲಕೋಟೆಯ ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋಗಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಸ್ವಾಮೀಜಿಯನ್ನು ಬಂಧಿಸಿದ್ದಾರೆ. ಲೋಕೇಶ್ವರ ಸ್ವಾಮೀಜಿ ತನ್ನ ಜೊತೆ ಅಪ್ರಾಪ್ತೆಯನ್ನು ರಾಯಚೂರು, ಬಾಗಲಕೋಟೆಯ ಲಾಡ್ಜ್ ಗಳಿಗೆ ಕರೆದುಕೊಂಡು ಹೋಗಿ 2 ದಿನಗಳ ಕಾಲ ಆಕೆ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೆ ಯಾರ ಬಳಿಯಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ ಎನ್ನಲಾಗಿದೆ.
Key words: Swamiji, arrested, allegedly, rape, minor girl