ವಿಜಯಪುರ,ಜನವರಿ,1,2026 (www.justkannada.in): ಖಾಸಗಿ ಸಹಭಾಗಿತ್ವದ ಮೆಡಿಕಲ್ ಕಾಲೇಜಿಗೆ ವಿರೋಧಿಸಿ ವಿಜಯಪುರದಲ್ಲಿ ನಡೆಯುತ್ತಿದ್ದ ವೇಳೆ ಪ್ರತಿಭಟನೆ ತಡೆ ನೀಡಿ ಬಂಧಿಸಲು ಯತ್ನಿಸಿದ ವೇಳೆ ಪೊಲೀಸರಿಗೆ ಸಂಗನಬಸವ ಸ್ವಾಮೀಜಿ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.
ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣವಾಗುತ್ತಿರುವ ಮೆಡಿಕಲ್ ಕಾಲೇಜಿಗೆ ವಿರೋಧಿಸಿ ಪ್ರತಿಭಟನಾಕಾರರು ಇಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದಲೂ ಈ ಪ್ರತಿಭಟನೆ ನಡೆಯುತ್ತಿದ್ದು ಸಂಗನಬಸವ ಸ್ವಾಮೀಜಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಈ ವೇಳೆ ಸೊಲ್ಲಾಪುರ ರಸ್ತೆಯಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದು, ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ನೂಕಾಟ ತಳ್ಳಾಟ ನಡೆದಿದೆ. ಈ ಸಮಯದಲ್ಲಿ ಸ್ವಾಮೀಜಿ ಅವರ ಮೊಬೈಲ್ ಅನ್ನು ಪೊಲೀಸರು ಕಸಿದು ಎಳೆದಾಡಿದ್ದಾರೆ ಎನ್ನಲಾಗಿದೆ. ಸಿಟ್ಟಿಗೆದ್ದ ಸಂಗನಬಸವ ಸ್ವಾಮೀಜಿ ಏಕಾಏಕಿ ಕರ್ತವ್ಯ ನಿರತ ಪಿಎಸ್ ಐ ಲಮಾಣಿ ಹಾಗೂ ಮತ್ತೋರ್ವ ಪೊಲೀಸ್ ಸಿಬ್ಬಂದಿಗೆ ಕಪಾಳ ಮೋಕ್ಷ ಮಾಡಿದ್ದಾರೆ ಎನ್ನಲಾಗಿದೆ.
Key words: Swamiji, slapped, police, protest







