Saturday, August 15, 2026

BDA Apartments

Home Cinema ‘ಸ್ವರ್ಣ ಕಮಲ’ ಮುಡಿಗೇರಿಸಿಕೊಂಡ ‘ಸರ್ಕಾರಿ ಪ್ರಾಥಮಿಕ ಶಾಲೆ ಕಾಸರಗೋಡು’

‘ಸ್ವರ್ಣ ಕಮಲ’ ಮುಡಿಗೇರಿಸಿಕೊಂಡ ‘ಸರ್ಕಾರಿ ಪ್ರಾಥಮಿಕ ಶಾಲೆ ಕಾಸರಗೋಡು’

ಬೆಂಗಳೂರು, ಡಿಸೆಂಬರ್ 2, 2019 (www.justkannada.in): ರಿಷಬ್ ಶೆಟ್ಟಿ ‘ಸರ್ಕಾರಿ ಪ್ರಾಥಮಿಕ ಶಾಲೆ ಕಾಸರಗೋಡು’ ಚಿತ್ರಕ್ಕೆ ಸ್ವರ್ಣಕಮಲ ಪ್ರಶಸ್ತಿ ಲಭಿಸಿದೆ.

ಕನ್ನಡ ಚಲನಚಿತ್ರರಂಗದ ಖ್ಯಾತಿ ರಾಷ್ಟ್ರಮಟ್ಟದಲ್ಲಿ ಮತ್ತಷ್ಟು ಪ್ರಜ್ವಲಿಸುತ್ತಿದೆ. ದೆಹಲಿಯಲ್ಲಿಂದು ನಡೆದ 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ರಿಷಬ್ ಶೆಟ್ಟಿಯವರಿಗೆ ‘ಸ್ವರ್ಣ ಕಮಲ’ ನೀಡಿ ಗೌರವಿಸಿದ್ದಾರೆ.

ಕಳೆದ ವರ್ಷ ಬಿಡುಗಡೆಯಾಗಿದ್ದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಸೂಪರ್ ಹಿಟ್‍ ಆಗಿತ್ತು ಗಡಿನಾಡು ಕಾಸರಗೋಡಿನಲ್ಲಿ ಕನ್ನಡ ಶಾಲೆಗಳನ್ನು ಉಳಿಸುವ ಸಕಾರಾತ್ಮಕ ಸಂದೇಶ ಸಾರುವ ಚಿತ್ರಕ್ಕೆ ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು.