Thursday, August 6, 2026

BDA Apartments

Home Front Page ಉಪಚುನಾವಣೆಯಲ್ಲಿ ಗೆಲುವ ಸಾಧಿಸಿದ 15 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ…

ಉಪಚುನಾವಣೆಯಲ್ಲಿ ಗೆಲುವ ಸಾಧಿಸಿದ 15 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ…

ಬೆಂಗಳೂರು,ಡಿ,22,2019(www.justkannada.in):  ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ನೂತನ ಶಾಸಕರು ಇಂದು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ವಿಧಾನಸೌಧದಲ್ಲಿ ನಡೆದ ಪ್ರಮಾಣ ವಚನಸ್ವೀಕಾರ ಕಾರ್ಯಕ್ರಮದಲ್ಲಿ 15 ಕ್ಷೇತ್ರಗಳ ನೂತನ ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು. ನೂತನ ಶಾಸಕರಿಗೆ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು  ಪ್ರತಿಜ್ಞಾವಿಧಿ ಬೋಧಿಸಿದರು.

ನೂತನ ಶಾಸಕರಾದ ರಮೇಶ್‍ಜಾರಕಿ ಹೊಳಿ (ಗೋಕಾಕ್),ಬಿ.ಸಿ.ಪಾಟೀಲ್(ಹಿರೇಕೆರೂರು), ಎಸ್.ಟಿ.ಸೋಮಶೇಖರ್ (ಯಶವಂತಪುರ), ಮಹೇಶ್ ಕುಮಟಳ್ಳಿ(ಅಥಣಿ), ಶ್ರೀಮಂತ ಪಾಟೀಲ್(ಕಾಗವಾಡ), ಡಾ.ಕೆ.ಸುಧಾಕರ್ (ಚಿಕ್ಕಬಳ್ಳಾಪುರ),  ಭೈರತಿ ಬಸವರಾಜ್(ಕೆ.ಆರ್.ಪುರ), ಕೆ.ಸಿ.ನಾರಾಯಣಗೌಡ (ಕೆ.ಆರ್.ಪೇಟೆ), ಕೆ.ಗೋಪಾಲಯ್ಯ (ಮಹಾಲಕ್ಷ್ಮಿ ಲೇಔಟ್), ಆನಂದ್‍ಸಿಂಗ್(ವಿಜಯನಗರ), ಎಂ.ಜಿ.ಅರುಣ್ ಕುಮಾರ್(ರಾಣೆಬೆನ್ನೂರು), ಶಿವರಾಮ ಹೆಬ್ಬಾರ್(ಯಲ್ಲಾಪುರ), ನೂತನ ಶಾಸಕರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕಾಂಗ್ರೆಸ್‍ನ ರಿಜ್ವಾನ್ ಅರ್ಷದ್(ಶಿವಾಜಿನಗರ), ಎಚ್.ಪಿ.ಮಂಜುನಾಥ್(ಹುಣಸೂರು) ಹಾಗೂ  ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ(ಹೊಸಕೋಟೆ) ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು.

Key words: Sworn -15 new mla’s- by-elections-won-vidhansoudha