ಟಿ-20: ವಿಂಡೀಸ್ ವಿರುದ್ಧ ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ

ಗಯಾನ, ಆಗಸ್ಟ್ 07, 2019 (www.justkannada.in): ಭಾರತ-ವೆಸ್ಟ್ ಇಂಡೀಸ್ ನಡುವೆ ನಡೆದ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತ ಏಳು ವಿಕೆಟ್ ಗಳಿಂದ ಗೆದ್ದು ಸರಣಿಯನ್ನು 3-0 ನಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.

ವಿಂಡೀಸ್ ನೀಡಿದ್ದ 147 ರನ್ ಗುರಿ ಬೆನ್ನತ್ತಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ (59) ಹಾಗೂ ರಿಷಬ್ ಪಂತ್ (65*) ಅವರ ಅದ್ಭುತ ಆಟದ ನೆರವಿನಿಂದ 19.1 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 150 ರನ್ ಗಳಿಸಿತ್ತು.

ಕೊಹ್ಲಿ 37 ಎಸೆತಗಳಲ್ಲಿ ಅರ್ಧ ಶತಕ ಸಿಡಿಸಿ, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಅರ್ಧಶತಕಗಳನ್ನು ಸಿಡಿಸಿದ ರೋಹಿಒತ್ ಶರ್ಮಾ ದಾಖಲೆ ಮುರಿದಿದ್ದಾರೆ.