100 km. Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಬೆಂಗಳೂರಿನಿಂದ 100 ಕಿ.ಮೀ. ದೂರದ ಸ್ಥಳಗಳಿಗೆ ಚತುಷ್ಪಥ ರೈಲ್ವೆ-ಕೇಂದ್ರ ಸಚಿವ ವಿ. ಸೋಮಣ್ಣ
ಬೆಂಗಳೂರು,ಜೂನ್,29,2026 (www.justkannada.in):  ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ ಚತುಷ್ಪಥ ರೈಲ್ವೆ ಮಾರ್ಗಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಜತೆಗೆ ರಾಜಧಾನಿಯಿಂದ ಕರಾವಳಿ ಭಾಗದ ಮಂಗಳೂರಿಗೆ ಕೂಡ ಇದೇ ರೀತಿ ಚತುಷ್ಪಥ ಮಾರ್ಗ ಅಭಿವೃದ್ಧಿಯನ್ನೂ ಪರಿಗಣಿಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಚನ್ನಪಟ್ಟಣ ತಾಲ್ಲೂಕಿನ ಎಲೆಕೇರಿ ಬಳಿ ನೂತನವಾಗಿ ನಿರ್ಮಿಸಿರುವ ರಸ್ತೆ ಮೇಲ್ಸೇತುವೆ ಉದ್ಘಾಟಿಸಿ ಕೇಂದ್ರ ಸಚಿವ ವಿ.ಸೋಮಣ್ಣ ಮಾತನಾಡಿದರು.

ಇದಕ್ಕೂ ಮೊದಲು ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ ಅವರು ಕರ್ನಾಟಕದ ರೈಲ್ವೇ ಬೇಡಿಕೆಗಳನ್ನು ಸಮಾರಂಭದಲ್ಲಿ ಪ್ರಸ್ತಾಪಿಸಿದ್ದರು. ಇದರಲ್ಲಿ ಅವರು ಬೆಂಗಳೂರಿನಿಂದ ತುಮಕೂರು, ಮೈಸೂರು, ಗೌರಿಬಿದನೂರು ಮಾರ್ಗವಾಗಿ ಹಿಂದೂಪುರ ಮತ್ತು ಕೋಲಾರಕ್ಕೆ ಚತುಷ್ಪಥ ಹಳಿ ನಿರ್ಮಿಸಬೇಕು ಎಂದು ಕೋರಿದ್ದರು.

ಈ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸೋಮಣ್ಣ, ಬೆಂಗಳೂರು-ತುಮಕೂರು ಚತುಷ್ಪಥ ಮಾರ್ಗದ ಸರ್ವೆ ಮುಗಿದಿದ್ದು, ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆಗಳನ್ನು ಆರಂಭಿಸಲಾಗುವುದು. ಮುಂದಿನ ಒಂದೂವರೆ- ಎರಡು ವರ್ಷದಲ್ಲಿ ಕಾಮಗಾರಿ ಮುಗಿಸುವ ಉದ್ದೇಶ ಇದೆ. ಹಾಗೆಯೇ ಬೆಂಗಳೂರು- ಮೈಸೂರು ಚತುಷ್ಪಥ ನಿರ್ಮಾಣಕ್ಕೆ ಸಮೀಕ್ಷೆ ಮಾಡಲು ತೀರ್ಮಾನಿಸಲಾಗಿದೆ ಎಂದು ಅವರು ವಿವರಿಸಿದರು.

ಎಂ‌ ಬಿ ಪಾಟೀಲರು ಪ್ರಸ್ತಾಪಿಸಿರುವ ಬೇಡಿಕೆಗಳು ಸರಿಯಾಗಿವೆ. ಅವರ ಕೋರಿಕೆಯಂತೆ ಬೆಂಗಳೂರು-ಕೋಲಾರ ನಡುವೆ ನೇರ ರೈಲು ಸಂಪರ್ಕ ಕಲ್ಪಿಸಲಾಗುವುದು. ಸದ್ಯಕ್ಕೆ ವೈಟ್ ಫೀಲ್ಡ್ ತನಕ ಇರುವ ನಾಲ್ಕು ಪಥದ ಮಾರ್ಗವನ್ನು ಮುಂದಕ್ಕೂ ಕೊಂಡೊಯ್ಯಲಾಗುವುದು. ಇದಕ್ಕೆ ಬೇಕಾದ ಭೂಸ್ವಾಧೀನವನ್ನು ಕೇಂದ್ರ ಸರ್ಕಾರವೇ ನಡೆಸುತ್ತದೆ ಎಂದು ಅವರು ಭರವಸೆ ನೀಡಿದ್ದಾರೆ.

ಬೆಂಗಳೂರು-ಮಂಗಳೂರು ಚತುಷ್ಪಥ ಮಾರ್ಗ

ರಾಜಧಾನಿ ಬೆಂಗಳೂರಿನಿಂದ ಕರಾವಳಿಯ ಮಂಗಳೂರಿಗೆ ತ್ವರಿತ ರೈಲು ಸಂಚಾರ ವ್ಯವಸ್ಥೆ ಆಗಬೇಕಿದೆ. ಇದಕ್ಕಾಗಿ ಸಕಲೇಶಪುರ-ಗುಂಡ್ಯ ನಡುವೆ ಸಮಾನಾಂತರವಾಗಿ ರಸ್ತೆ ಮತ್ತು ರೈಲು ಮಾರ್ಗ ಆಗಬೇಕೆಂದು ಎಂ.ಬಿ ಪಾಟೀಲ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದರು. ಇದಕ್ಕೆ ಸ್ಪಂದಿಸಿದ ಸೋಮಣ್ಣ ಅವರು ಇದೊಂದು ಉಪಯುಕ್ತ ಸಲಹೆಯಾಗಿದ್ದು, ಈ ಎರಡೂ ನಗರಗಳ ನಡುವೆ ಚತುಷ್ಪಥ ರೈಲು ಮಾರ್ಗ ಅಭಿವೃದ್ಧಿ ಅಗತ್ಯ ಇದೆ. ಬಂದರು ನಗರ ಮಂಗಳೂರಿಗೆ ಸಂಪರ್ಕ ಮಾಡುವುದರಿಂದ ಅನೇಕ ಪ್ರಯೋಜನಗಳು ಆಗಲಿವೆ. ಇದು ಕೂಡ ನಮ್ಮ ಆದ್ಯತೆಯಾಗಿದೆ ಎಂದು ಸೋಮಣ್ಣ ವಿವರಿಸಿದ್ದಾರೆ.

ತುಮಕೂರು- ಚಿತ್ರದುರ್ಗ- ದಾವಣಗೆರೆ ಮಾರ್ಗದಲ್ಲಿ ಭರದಿಂದ ಕಾಮಗಾರಿ ನಡೆಯುತ್ತಿದೆ. ಈಗ ಏಕಪಥವಾಗಿರುವ ಈ ಮಾರ್ಗವನ್ನು ಜೋಡಿಹಳಿ ಮಾಡಬೇಕು ಎಂದು ಪಾಟೀಲರು ಬೇಡಿಕೆ ಇಟ್ಟಿದ್ದಾರೆ. ಇದನ್ನು ಕೂಡ ಪರಿಗಣಿಸಲಾಗುವುದು ಎಂದು ವಿ. ಸೋಮಣ್ಣ ಅವರು ನುಡಿದಿದ್ದಾರೆ.

ಸಚಿವರಿಬ್ಬರು ವಿಶೇಷ ರೈಲಿನಲ್ಲಿ ಪ್ರಯಾಣ

ರೈಲ್ವೆ ಮೂಲಸೌಕರ್ಯದ ಗುಣಮಟ್ಟ, ಸುರಕ್ಷತೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಲು ಬಳಸಲಾಗುವ SPIC (Self-Propelled Inspection Car) ಎಂಬ ವಿಶೇಷ ರೈಲ್ವೆ ಪರಿಶೀಲನಾ ವಾಹನದಲ್ಲಿ ಇಬ್ಬರೂ ಸಚಿವರು (ಸೋಮಣ್ಣ, ಪಾಟೀಲ) ಪ್ರಯಾಣಿಸಿದರು. ಬೆಂಗಳೂರು ರೈಲ್ವೆ ನಿಲ್ದಾಣದಿಂದ ಚನ್ನಪಟ್ಟಣದವರೆಗೆ ಪ್ರಯಾಣ ಬೆಳೆಸಿದರು. ಬಳಿಕ ಅದೇ ರೈಲಿನಲ್ಲಿ ವಾಪಸ್ಸಾದರು.

ಈ ಸಂದರ್ಭದಲ್ಲಿ ಕರ್ನಾಟಕದಲ್ಲಿ ಪ್ರಗತಿಯಲ್ಲಿರುವ ಹಾಗೂ ಪ್ರಸ್ತಾವಿತ ರೈಲ್ವೆ ಯೋಜನೆಗಳ ಕುರಿತು ಪಾಟೀಲ ಅವರು ರೈಲ್ವೆ ಸಚಿವರ ಜತೆ ಚರ್ಚೆ ನಡೆಸಿದರು. ಈ ಕುರಿತ ಪತ್ರ ಕೂಡ ಪಾಟೀಲ ಅವರು ರೈಲ್ವೆ ಸಚಿವರಿಗೆ ಹಸ್ತಾಂತರ ಮಾಡಿದರು.

ವಿಜಯಪುರಕ್ಕೆ ವಂದೇ ಭಾರತ್ ಸ್ಲೀಪರ್ ರೈಲು

ಕಿತ್ತೂರು ಕರ್ನಾಟಕ ಭಾಗದ ವಿಜಯಪುರಕ್ಕೆ ವಂದೇ ಭಾರತ್ ಸ್ಲೀಪರ್ ರೈಲು ಸೇವೆ ಆರಂಭಿಸಬೇಕು ಎನ್ನುವ ಸಚಿವ ಎಂ.ಬಿ.ಪಾಟೀಲ ಅವರ ಬೇಡಿಕೆಗೆ ಸ್ಪಂದಿಸಿದ ಸೋಮಣ್ಣ ಅವರು ಇನ್ನು 3-4 ತಿಂಗಳಲ್ಲಿ ಅದು ನನಸಾಗಲಿದೆ ಎಂದು ಘೋಷಿಸಿದರು.

ವಂದೇ ಭಾರತ್ ರೈಲಿಗೆ ಬದಲಾಗಿ ಸ್ಲೀಪರ್ ರೈಲು ಓಡಿಸಲಾಗುವುದು. ಈ ಕುರಿತು ಸದ್ಯದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.

ಅಲ್ಲದೆ, ಬೆಂಗಳೂರು- ವಿಜಯಪುರ ನಡುವೆ ವಾರಕ್ಕೆ ಎರಡು ಸಲ ಸಂಚರಿಸುತ್ತಿರುವ ವಿಶೇಷ ರೈಲನ್ನು ಕಾಯಂ ಮಾಡಲಾಗುವುದು. ಜತೆಗೆ ಇಲ್ಲಿರುವ ಸಣ್ಣಪುಟ್ಟ ತೊಂದರೆಗಳನ್ನು ನಿವಾರಿಸಲಾಗುವುದು. ಅಲ್ಲದೆ ಐಟಿ ರಾಜಧಾನಿ ಬೆಂಗಳೂರು ಮತ್ತು ಆರ್ಥಿಕ ರಾಜಧಾನಿ ಮುಂಬಯಿಯನ್ನು ಬೆಸೆಯಲು ಬೆಂಗಳೂರು-ಪುಣೆ ಮಧ್ಯೆ ಹೈಸ್ಪೀಡ್ ರೈಲು ಆರಂಭಿಸಬೇಕು ಎನ್ನುವ ಬೇಡಿಕೆ ಸೂಕ್ತವಾಗಿದೆ. ಅದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುವುದು ಎಂದು ಸೋಮಣ್ಣ ತಿಳಿಸಿದರು.

ಸಚಿವರಿಂದ ರಾಮೋಹಳ್ಳಿ ರೈಲ್ವೆ ಸೇತುವೆ ಕಾಮಗಾರಿ ವೀಕ್ಷಣೆ

ಚನ್ನಪಟ್ಟಣಕ್ಕೆ ತೆರಳುವ ಮಾರ್ಗದ ಮಧ್ಯದಲ್ಲಿ,ಕೇಂದ್ರ ಸಚಿವ ಸೋಮಣ್ಣ ಮತ್ತು ಸಚಿವ ಎಂ. ಬಿ ಪಾಟೀಲ್ ಇಬ್ಬರೂ ಬೆಂಗಳೂರು ನಗರದ ಕುಂಬಳಗೋಡಿನ ಸಮೀಪದ ರಾಮೋಹಳ್ಳಿಯಲ್ಲಿ ನಡೆಯುತ್ತಿರುವ ರೈಲ್ವೆ ಕೆಳ ಸೇತುವೆಯ ಕಾಮಗಾರಿಗಳನ್ನು ವೀಕ್ಷಿಸಿ, ಅಗತ್ಯ ಸೂಚನೆಗಳನ್ನು ನೀಡಿದರು. ಮಳೆ ನೀರು ನಿಲ್ಲದಂತೆ ನಿಗಾ ವಹಿಸಿ ಕಾಮಗಾರಿ ಮುಗಿಸಲು ಇಬ್ಬರೂ ಸಚಿವರು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸಂಸದ ಡಾ.ಸಿ.ಎನ್.ಮಂಜುನಾಥ, ಶಾಸಕ ಸಿ ಪಿ ಯೋಗೀಶ್ವರ್, ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಯಶವಂತ ಗುರಿಕಾರ್, ನೈರುತ್ಯ ರೈಲ್ವೆ ಮುಖ್ಯ ಆಡಳಿತಾಧಿಕಾರಿ ಎ.ಕೆ.ಗುಪ್ತ, ಹೆಚ್ಚುವರಿ ವಿಭಾಗೀಯ ವ್ಯವಸ್ಥಾಪಕ ಪ್ರವೀಣ್ ಕಾತರಕಿ, ಮೂಲಸೌಕರ್ಯ ಇಲಾಖೆ ಜಂಟಿ ಕಾರ್ಯದರ್ಶಿ ಚಂದ್ರಶೇಖರ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

key words: Four-track, railway,  places, 100 km, Bengaluru-Union Minister, V. Somanna

The post ಬೆಂಗಳೂರಿನಿಂದ 100 ಕಿ.ಮೀ. ದೂರದ ಸ್ಥಳಗಳಿಗೆ ಚತುಷ್ಪಥ ರೈಲ್ವೆ-ಕೇಂದ್ರ ಸಚಿವ ವಿ. ಸೋಮಣ್ಣ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅರಮನೆ ನಗರಿಯಲ್ಲಿ ಝಗಮಗಿಸುವ ದೀಪಾಲಂಕಾರಕ್ಕೆ ಸಿದ್ಧತೆ: ವಿದ್ಯುತ್ ಬೆಳಕಿನಿಂದ ಕಂಗೊಳಿಸಲಿವೆ 100 ಕಿ.ಮೀ. ವ್ಯಾಪ್ತಿಯ 80 ವೃತ್ತಗಳು.
ಮೈಸೂರು,ಅಕ್ಟೋಬರ್,1,2021(www.justkannada.in):  ಒಲಂಪಿಕ್ಸ್‌ನಲ್ಲಿ ಚಿನ್ನದ ಪದಕ ಪಡೆದ ನೀರಜ್ ಚೋಪ್ರಾ ಪ್ರತಿಕೃತಿ ಈ ಬಾರಿಯ ನಾಡಹಬ್ಬ ದಸರಾ ದೀಪಾಲಂಕಾರದಲ್ಲಿ ಪ್ರಮುಖ ಆಕರ್ಷಣೆಯಾಗಿದ್ದು, ಒಟ್ಟು 100 ಕಿ.ಮೀ. ವ್ಯಾಪ್ತಿಯಲ್ಲಿ 80 ವೃತ್ತಗಳು ವಿದ್ಯುತ್ ಬೆಳಕಿನಿಂದ ಕಂಗೊಳಿಸಲಿವೆ.

ಕಳೆದ ಬಾರಿ ಕೋವಿಡ್ ಕಾರಣದಿಂದ ಕೇವಲ 50 ಕಿ.ಮೀ. ವ್ಯಾಪ್ತಿಯಲ್ಲಿ ಮೈಸೂರು ದಸರಾ ದೀಪಾಲಂಕಾರ ಉಪ ಸಮಿತಿ ಹಾಗೂ ಸೆಸ್ಕ್ ವತಿಯಿಂದ ದೀಪಾಲಂಕಾರ ಮಾಡಲಾಗಿತ್ತು. ಆದರೆ, ಈ ವರ್ಷ ಕೊರೊನಾ ಸ್ವಲ್ಪ ಕ್ಷೀಣಿಸಿರುವ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ 26 ಮಹನೀಯರ ಪ್ರತಿಕೃತಿಗಳು ವಿದ್ಯುತ್ ವೈಭವದಿಂದ ಝಗಮಗಿಸಲಿವೆ. ಅಲ್ಲದೆ, ಸ್ವಾತಂತ್ರ್ಯ ಬಂದು 75 ವರ್ಷ ಆಗಿರುವುದರಿಂದ ನಗರದ 4 ಕಡೆ ಅಮೃತ ಮಹೋತ್ಸವದ ಸಂದೇಶವನ್ನು ದೀಪಗಳು ಸಾರಲಿವೆ.

ಅ.7ರಿಂದ 15ರವರೆಗೆ ದೀಪಾಲಂಕಾರ ನಡೆಯಲಿದ್ದು, ಪ್ರತಿದಿನ ಸಂಜೆ 7 ಗಂಟೆಯಿಂದ ರಾತ್ರಿ 9.30ರವರೆಗೆ ಉರಿಯಲಿದೆ. ಇದರ ಮುತುವರ್ಜಿಗಾಗಿ ಪ್ರತಿ ಕಿಲೋಮೀಟರ್ ಹಾಗೂ ವೃತ್ತಕ್ಕೆ ಒಬ್ಬರಂತೆ ಸಿಬ್ಬಂದಿ ನಿಯೋಜಿಸಲಾಗಿದೆ. 8 ಮಂದಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಇಬ್ಬರು ‌ಕಾರ್ಯಪಾಲಕ ಎಂಜಿನಿಯರ್ ಹಾಗೂ ಒಬ್ಬ ಸೂಪರಿಡೆಂಟ್ ಎಂಜಿನಿಯರ್ ಮಾರ್ಗದರ್ಶನದಲ್ಲಿ ದೀಪಾಲಂಕಾರ ಪ್ರಕ್ರಿಯೆ ನಡೆಯಲಿದೆ. 10 ಸೇವಾ ವಾಹನ ಕೆಲಸ ಮಾಡಲಿವೆ.

26 ಮಹನೀಯರ ಪ್ರತಿಕೃತಿ:

ಪ್ರತಿ ವರ್ಷದಂತೆ ನಗರದ ಪ್ರಮುಖ ರಸ್ತೆಗಳಿಗೆ ಮಹನೀಯರ ಪ್ರತಿಕೃತಿಯನ್ನು ವಿದ್ಯುತ್ ದೀಪದಿಂದ ಅಲಂಕೃತಗೊಳಿಸಲಾಗುತ್ತದೆ. ಸರ್ ಎಂ. ವಿಶ್ವೇಶ್ವರಯ್ಯ, ಡಾ.ಬಿ.ಆರ್.ಅಂಬೇಡ್ಕರ್, ಬುದ್ಧ, ರಾಜೇಂದ್ರ ಸ್ವಾಮೀಜಿ, ಶಿವಕುಮಾರ ಸ್ವಾಮೀಜಿ ಸೇರಿದಂತೆ 26 ಪ್ರತಿಕೃತಿಗಳು ಈ ಬಾರಿಯ ಪ್ರಮುಖ ಆಕರ್ಷಣೆ.  ಒಲಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಛೋಪ್ರಾಘಿಪ್ರತಿಕೃತಿಯನ್ನು ಮಹಾರಾಜ ಅಥವಾ ಓವಲ್ ಮೈದಾನದಲ್ಲಿ ಅಳವಡಿಸಲಾಗುತ್ತದೆ. ರಾಜಮಾರ್ಗ ಸಂಪೂರ್ಣ ಬನ್ನಿಮಂಟಪದವರೆಗೆ ಗೋಲ್ಡನ್ ಕಲರ್ ದೀಪಗಳು ಬಂದರೆ, ಉಳಿದ ಕಡೆ ಎಲ್‌ ಇಡಿ ದೀಪಗಳು ದಸರಾ ಸಂಭ್ರಮವನ್ನು ಹೆಚ್ಚಿಸಲಿವೆ. ಇದರಿಂದ 10ನೇ ಒಂದರಷ್ಟು ವಿದ್ಯುತ್ ಉಳಿತಾಯವಾಗಲಿದೆ.

4 ಕಡೆ ಅಮೃತ ಮಹೋತ್ಸವ ಅಲಂಕಾರ:

ಮೈಸೂರು-ಬೆಂಗಳೂರಿಗೆ ಪ್ರವೇಶ ಕಲ್ಪಿಸುವ ಹೆದ್ದಾರಿ ದ್ವಾರದಲ್ಲೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ದೀಪಾಲಂಕಾರ ಪ್ರವಾಸಿಗರನ್ನು ಸ್ವಾಗತಿಸಲಿದೆ. ಅಲ್ಲದೆ, ಹಾರ್ಡಿಂಗ್ ಸರ್ಕಲ್‌ನಲ್ಲಿ ಮತ್ತೊಂದು ಪ್ರತಿಕೃತಿ ಅಳವಡಿಸಲಾಗುತ್ತದೆ. ಅಂದಾಜು 1.25 ಲಕ್ಷ ಯುನಿಟ್ ವಿದ್ಯುತ್ ಇದಕ್ಕಾಗಿ ಬಳಕೆಯಾಗಲಿದೆ. 4.5 ಲಕ್ಷ ರೂ. ಖರ್ಚಾಗಬಹುದೆಂದು ಅಂದಾಜಿಸಲಾಗಿದ್ದು, ದಾನಿಗಳ ನೆರವು ಪಡೆದುಕೊಳ್ಳಲು ಸೆಸ್ಕ್ ಚಿಂತನೆ ನಡೆಸಿದೆ. ಅರಮನೆ, ದುರ್ಗಾ, ವಿಷ್ಣುಘಿ, ರಥ ರೂಪದ ದೀಪಗಳು ಇರಲಿದ್ದುಘಿ, ಪ್ರಮುಖ ಧಾರ್ಮಿಕ ಕೇಂದ್ರ ಚಾಮುಂಡಿಬೆಟ್ಟದ ಮಧ್ಯದಲ್ಲಿ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಸುಸ್ವಾಗತ ವಿದ್ಯುತ್ ದೀಪ ದಸರಾ ಮೆರುಗನ್ನು ಹೆಚ್ಚಿಸಲಿದೆ.

ಒಟ್ಟು 100  ಕಿ.ಮೀ ವ್ಯಾಪ್ತಿಯಲ್ಲಿ 80 ವೃತ್ತಗಳಿಗೆ ದೀಪಾಲಂಕಾರ ಮಾಡಲಾಗುತ್ತಿದ್ದು ಒಟ್ಟು1.25 ಲಕ್ಷ  ವಿದ್ಯುತ್ ಯುನಿಟ್ ಬಳಕೆ ಮಾಡಲಾಗುತ್ತಿದೆ.

ಈ ಬಾರಿ 100 ಕಿ.ಮೀ. ವ್ಯಾಪ್ತಿಯಲ್ಲಿ ನಗರದಾದ್ಯಂತ ವಿದ್ಯುತ್ ದೀಪಗಳು ಕಂಗೊಳಿಸಲಿವೆ. ಬೆಟ್ಟದಲ್ಲಿ ವೆಲ್‌ಕಮ್ ದೀಪಗಳು ಇರಲಿವೆ. 26 ಮಹನೀಯರ ಪ್ರತಿಕೃತಿಗಳು ಪ್ರವಾಸಿಗರನ್ನು ಆಕರ್ಷಿಸಲಿವೆ. ಎಲ್ಲಾ ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದು ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಜಯವಿಭವ ಸ್ವಾಮಿ ತಿಳಿಸಿದ್ದಾರೆ.

4 ಕಡೆ ಅಮೃತ್ ಮಹೋತ್ಸವ ಹಾಗೂ 1 ಕಡೆ ನೀರಜ್ ಚೋಪ್ರಾ ಅವರ ಪ್ರತಿಕೃತಿ ಈ ಬಾರಿಯ ದೀಪಾಲಂಕಾರದ ಆಕರ್ಷಣೆ.  ಒಟ್ಟು 80 ವೃತ್ತಗಳಿಗೆ ದೀಪಾಲಂಕಾರ ವ್ಯವಸ್ಥೆ ಮಾಡಲಾಗುತ್ತಿದೆ. ನಿಗದಿತ ಸಮಯಕ್ಕೆ ನಮ್ಮ ಗುರಿ ಸಾಧನೆ ಮಾಡಲಾಗುವುದು ಎಂದು  ಸೆಸ್ಕ್ ಅಧೀಕ್ಷಕ ಎಂಜಿನಿಯರ್ ನಾಗೇಶ್ ಎಸ್ ತಿಳಿಸಿದ್ದಾರೆ.

Key words: glowing lights –mysore dasra-Electric- lighting – cover- 100 km.

ENGLISH SUMMARY…

Mysuru preparing for illumination: 80 circles to dip in shower of lights

Mysuru, October 1, 2021 (www.justkannada.in): A model of the Olympic gold medal winner Neeraj Chopra will be one of the major attractions in this year’s Mysuru Dasara Mahotsav. About 80 circles in the 100 km vicinity of the city will be illuminated.

Last year the illumination was restricted to 50 km due to COVID-19 Pandemic. This year, as the effect of the COVID-19 Pandemic, has reduced 26 major circles in the city limits will be illuminated. Special illumination, with a message on the occasion of 75th Independence day, will be made at 4 major circles. The illumination arrangements will be from October 7 to 15, daily from 7.00 pm to 9.30 pm. An observer will be watching the arrangements every km. The illumination works will be made under the guidance of eight assistant executive engineers, two executive engineers, and one superintendent engineer. Ten service vehicles will be pressed into service.

Keywords: Mysuru Dasara Mahotsav/ illumination/

The post ಅರಮನೆ ನಗರಿಯಲ್ಲಿ ಝಗಮಗಿಸುವ ದೀಪಾಲಂಕಾರಕ್ಕೆ ಸಿದ್ಧತೆ: ವಿದ್ಯುತ್ ಬೆಳಕಿನಿಂದ ಕಂಗೊಳಿಸಲಿವೆ 100 ಕಿ.ಮೀ. ವ್ಯಾಪ್ತಿಯ 80 ವೃತ್ತಗಳು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.