20 thousand Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಕೋವಿಡ್ ಪರೀಕ್ಷೆಗೆ ವೇಗ: ರಿಸಲ್ಟ್ ತಡವಾದ್ರೆ ಲ್ಯಾಬ್ ಗಳಿಗೆ ದಂಡ: 20 ಸಾವಿರ ಆಕ್ಸಿಜನ್ ಬೆಡ್ ವ್ಯವಸ್ಥೆಗೆ ಮುಂದಾದ ಸರ್ಕಾರ….
ಬೆಂಗಳೂರು,ಮೇ,8,2021(www.justkannada.in): ರಾಜ್ಯದಲ್ಲಿ ಕೊರೋನಾ  2ನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಕೋವಿಡ್ ನಿಯಂತ್ರಣಕ್ಕಾಗಿ 14 ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಿರುವ ರಾಜ್ಯ ಸರ್ಕಾರ  ಚಿಕಿತ್ಸೆಗಾಗಿ 20 ಸಾವಿರ ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಲು ಮುಂದಾಗಿದೆ.

ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್ ಈ ಬಗ್ಗೆ ಮಾಹಿತಿ ನೀಡಿದರು. ಸುಪ್ರೀಂ ಕೋರ್ಟ್ 1,200 ಮೆಟ್ರಿಕ್ ಟನ್‌ ಆಮ್ಲಜನಕವನ್ನು ರಾಜ್ಯಕ್ಕೆ ಹಂಚಿಕೆ ಮಾಡಲು ಕೇಂದ್ರ ಸರಕಾರಕ್ಕೆ ಆದೇಶ ನೀಡಿದ ಬೆನ್ನಲ್ಲೇ ಸರಕಾರವು ಆಕ್ಸಿಜನ್‌ ಬೆಡ್‌ಗಳ ಪ್ರಮಾಣವನ್ನು ಇನ್ನೂ 20,000 ಹೆಚ್ಚಿಸಲು ಮುಂದಾಗಿದೆ ಎಂದು ಕೋವಿಡ್‌ ಕಾರ್ಯಪಡೆ ಅಧ್ಯಕ್ಷ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಪ್ರಕಟಿಸಿದರು.

“ಒಟ್ಟು 20,000 ಆಕ್ಸಿಜನ್‌ ಬೆಡ್‌ ಗಳ ಪೈಕಿ ತಕ್ಷಣವೇ ತುರ್ತಾಗಿ 10,000 ಬೆಡ್‌ ವ್ಯವಸ್ಥೆ ಮಾಡಲಾಗುವುದು. ಇದರೊಂದಿಗೆ ರಾಜ್ಯದಲ್ಲಿ ಉಂಟಾಗಿರುವ ಆಕ್ಸಿಜನ್‌ ಬೆಡ್‌ ಗಳ ಹಾಹಾಕಾರ ನೀಗಲಿದೆ ಎಂದು ತಿಳಿಸಿದ ಡಿಸಿಎಂ ಅಶ್ವಥ್ ನಾರಾಯಣ್, ಕೋವಿಡ್‌ ಬರುವ ಮುನ್ನ ರಾಜ್ಯದಲ್ಲಿ ದಿನಕ್ಕೆ 100 ಮೆ.ಟನ್‌ ಆಕ್ಸಿಜನ್‌ ಮಾತ್ರ ಖರ್ಚಾಗುತ್ತಿತ್ತು. ಆದರೆ, ಈಗ ನಿತ್ಯವೂ 950 ಮೆ.ಟನ್‌ ಬೇಕಾಗುತ್ತಿದೆ. ಸದ್ಯಕ್ಕಿರುವ ಆಕ್ಸಿಜನ್‌ ಬೆಡ್‌ ಗಳಿಗೆ ಸಾಕಾಗುವಷ್ಟು ಆಮ್ಲಜನಕ ನಮ್ಮಲ್ಲಿದೆ. ಆದರೆ, ಸೋಂಕಿತರು ಹೆಚ್ಚುತ್ತಿರುವುದರಿಂದ  ಅನಿವಾರ್ಯವಾಗಿ ಬೆಡ್‌ ಗಳನ್ನೂ ಹೆಚ್ಚಿಸಬೇಕಾಗಿರುವುದರಿಂದ ಹೆಚ್ಚುವರಿ ಆಮ್ಲಜನಕವೂ ಬೇಕಿದೆ. ಆ ಕೊರತೆ ನ್ಯಾಯಾಲಯದ ಆದೇಶದಿಂದ ನೀಗಲಿದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು

ಕೋವಿಡ್‌ ಕೇರ್‌ ಸೆಂಟರ್‌ ಗಳಲ್ಲೂ ಆಕ್ಸಿಜನ್‌ ಬೆಡ್‌ ಹಾಕಲು ನಿರ್ಧರಿಸಲಾಗಿದೆ. ಅಲ್ಲಿಗೆ ಅಗತ್ಯ ನುರಿತ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದ ಅವರು, ಸದ್ಯಕ್ಕೆ ಈಗ ರಾಜ್ಯದಲ್ಲಿ 70,000 ಬೆಡ್‌ ಗಳನ್ನು ಕೋವಿಡ್‌ಗೆ ಮೀಸಲಾಗಿ ಇಡಲಾಗಿದ್ದು, ಈ ಪೈಕಿ ಸರಕಾರದಿಂದ 35,000 ಹಾಗೂ ಖಾಸಗಿ ಆಸ್ಪತ್ರೆಗಳ ವತಿಯಿಂದ 35,000 ಬೆಡ್‌ಗಳಿವೆ. ಈ ಒಟ್ಟು ಬೆಡ್‌ಗಳ ಪೈಕಿ 50,000 ಆಕ್ಸಿಜನ್‌ ಬೆಡ್‌ಗಳಿವೆ ಎಂದು ತಿಳಿಸಿದರು.

ಇದೇ ವೇಳೆ ಆಕ್ಸಿಜನ್‌ ಬೆಡ್‌ ಗಳ ಕೊರತೆಯನ್ನು ನೀಗಿಸಲು ಕ್ರಮ ವಹಿಸಲಾಗಿದೆ. ಶೇ.30ರಿಂದ 40ರಷ್ಟು ಗಂಭೀರವಲ್ಲದ ಸೋಂಕಿತರು ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿ ಆಕ್ಸಿಜನ್‌ ಬೆಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವರನ್ನು ಕೂಡಲೇ ಸ್ಟೆಪ್‌ಡೌನ್‌ ಆಸ್ಪತ್ರೆಗಳಿಗೆ ಶಿಫ್ಟ್‌ ಮಾಡಲು ಸರಕಾರ ನಿರ್ಧರಿಸಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದರು.

ರೆಮಿಡಿಸಿವಿರ್‌ ಸಮಸ್ಯೆ ಇಲ್ಲ:

ರೆಮಿಡಿಸಿವಿರ್‌ ಕೊರತೆ ಈಗಿಲ್ಲ. 9ನೇ ತಾರೀಖಿನ ವರೆಗೂ 30,900 ಡೋಸ್‌ ಹಂಚಿಕೆಯಾಗಿತ್ತು. ಇನ್ನು 70,000 ಡೋಸ್‌ ಬರುವುದು ಬಾಕಿ ಇದೆ. ಇವತ್ತು-ನಾಳೆಗೆ ಕೊರತೆ ಇಲ್ಲ. ಎಲ್ಲ ಜಿಲ್ಲೆಗಳಿಗೂ ಹಂಚಿಕೆ ಮಾಡಲಾಗಿದೆ. ಹತ್ತನೇ ತಾರೀಖಿನ ನಂತರ ಒಂದು ವಾರ ಕಾಲ 2,60,000 ಡೋಸ್ ಹಂಚಿಕೆಯಾಗಿದ್ದು, ರಾಜ್ಯಕ್ಕೆ ಬರುವುದಿದೆ. ಈ ಲೆಕ್ಕದ ಪ್ರಕಾರ ಪ್ರತಿದಿನ ರಾಜ್ಯಕ್ಕೆ 37,000 ಡೋಸ್ ಲಭ್ಯವಾಗುತ್ತಿದೆ. ಹೀಗಾಗಿ ಕೊರತೆ ಪ್ರಶ್ನೆ ಇಲ್ಲ ಎಂದು ಉಪ ಮುಖ್ಯಮಂತ್ರಿ  ಅಶ್ವತ್ ನಾರಾಯಣ್ ತಿಳಿಸಿದರು.

ನಿತ್ಯವೂ ನಮಗೆ ಪೂರೈಕೆ ಮಾಡಬೇಕಾದ ರೆಮಿಡಿಸಿವಿರ್‌ ಕೋಟಾ ಸಕಾಲಕ್ಕೆ, ಸರಿಯಾಗಿ ಪೂರೈಕೆ ಮಾಡುವಂತೆ ಎಲ್ಲ ತಯಾರಿಕಾ ಕಂಪನಿಗಳಿಗೆ ಸರಕಾರ ಇವತ್ತೇ ನೊಟೀಸ್‌ ಕೂಡ ಜಾರಿ ಮಾಡುತ್ತಿದೆ ಎಂದೂ ಉತ್ತರಿಸಿದರು.

ಕೋವಿಡ್‌ ರಿಸಲ್ಟ್‌ ತಡವಾದರೆ ಲ್ಯಾಬ್‌ ಗೆ ದಂಡ:

ಇನ್ನು ಮುಂದೆ 24 ಗಂಟೆ ಒಳಗಾಗಿ ಕೋವಿಡ್‌ ಪರೀಕ್ಷೆ ರಿಸಲ್ಟ್‌ ನೀಡಲಾಗುವುದು. ಯಾವ ಲ್ಯಾಬೇ ಆಗಿರಲಿ. ಅದು ಖಾಸಗಿಯಾಗಿರಲಿ ಅಥವಾ ಸರಕಾರದ್ದೇ ಆಗಿರಲಿ ಸರಕಾರ ನಿಗದಿ ಮಾಡಿದ ಸಮಯದೊಳಗೆ ಫಲಿತಾಂಶ ನೀಡದಿದ್ದರೆ ಪ್ರತಿ ಟೆಸ್ಟಿಗೆ 100ರಿಂದ 150 ರೂಪಾಯಿ ದಂಡ ವಿಧಿಸಲಾಗುವುದು ಎಂದು ಡಿಸಿಎಂ ಎಚ್ಚರಿಕೆ ಕೊಟ್ಟರು.

ಇಷ್ಟು ದಿನ ಸೋಂಕಿತರು ತಡವಾಗಿ ಪರೀಕ್ಷೆಗೆ ಬರುತ್ತಿದ್ದರು. ತಡವಾಗಿ ಪರೀಕ್ಷೆ ಮಾಡಿಸಿಕೊಂಡು ತಡವಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಹೀಗಾಗಿ ಪ್ರಾಣ ಹಾನಿ ಹೆಚ್ಚಾಗುತ್ತಿತ್ತು. ಮುಂದೆ ಹೀಗೆ ಆಗಬಾರದು ಎಂದು ಅವರು ತಿಳಿಸಿದರು.

ಆರ್‌ಟಿಪಿಸಿಆರ್‌ ಟೆಸ್ಟ್‌ ಗೆ ವೇಗ ಕೊಡಲಾಗಿದೆ. ಕೋವಿಡ್‌ ಬಂದಾಗ ಸರಕಾರಿ ವಲಯದಲ್ಲಿ ಕೇವಲ ಒಂದೇ ಲ್ಯಾಬ್‌ ಇತ್ತು. ಇವತ್ತು 91 ಲ್ಯಾಬ್‌ಗಳಿವೆ. ಖಾಸಗಿ ವಲಯದಲ್ಲಿ 150 ಲ್ಯಾಬ್‌ಗಳಿವೆ. ದಿನಕ್ಕೆ ಸರಕಾರದ ವತಿಯಿಂದ 10,500 ಟೆಸ್ಟ್‌ಗಳನ್ನು ಮಾಡಬಹುದು. ಖಾಸಗಿ ಲ್ಯಾಬ್‌ಗಳಲ್ಲಿ 70,000 ಜನರಿಗೆ ಟೆಸ್ಟ್‌ ಆಗುತ್ತಿದೆ. ಅಂಕಿ-ಅಂಶಗಳ ಪ್ರಕಾರ 93% ಆರ್‌ಟಿಪಿಸಿಆರ್‌ ಟೆಸ್ಟ್‌ ಆಗುತ್ತಿದ್ದರೆ, 7% ಮಾತ್ರ ರಾಟ್‌ ಟೆಸ್ಟ್‌ ಆಗುತ್ತಿದೆ. ಈಗ ರಾಟ್‌ ಟೆಸ್ಟ್‌ ಅನ್ನು ಎಷ್ಟು ಬೇಕಾದರೂ ಮಾಡಲು ಐಸಿಎಂಆರ್‌ ಒಪ್ಪಿಗೆ ಕೊಟ್ಟಿದ್ದು, ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೂ ರಾಟ್‌ ಕಿಟ್‌ಗಳನ್ನು ಒದಗಿಸಿ ಪರೀಕ್ಷೆಗಳನ್ನು ಹೆಚ್ಚಿಸಲಾಗುವುದು ಎಂದರು ಡಿಸಿಎಂ.

ಔಷಧ ಕೊರತೆ ಇಲ್ಲ:

ರಾಜ್ಯದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್‌ ಔಷಧಿಗಳನ್ನು ಅಗತ್ಯ ಪ್ರಮಾಣದಲ್ಲಿ ಒದಗಿಸಲಾಗುತ್ತಿದೆ. ಜತೆಗೆ, ವೈದ್ಯಕೀಯ ಬಳಕೆ ವಸ್ತುಗಳ ಕೊರತೆ ಇಲ್ಲದಂತೆ ನೋಡಿಕೊಳ್ಳಲಾಗಿದೆ. ಇನ್ನೆರಡು ದಿನದಲ್ಲಿ ಅಷ್ಟೂ ಪಿಎಚ್‌ಸಿಗಳಿಗೆ ಮತ್ತೂ ಅಗತ್ಯವಾದಷ್ಟು ಔಷಧಿ ಮತ್ತು ಸರಂಜಾಮುಗಳನ್ನು ಒದಗಿಸಲಾಗುವುದು ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು. ಇನ್ನೊಂದೆಡೆ ಎಲ್ಲ ವೈದ್ಯರು ಮತ್ತು ಆಸ್ಪತ್ರೆಗಳಿಗೆ ಕೋವಿಡ್‌ ಸೋಂಕಿತರನ್ನು ಟ್ರೀಟ್‌ ಮಾಡುವ ಬಗ್ಗೆ ಸ್ಪಷ್ಟ ಮಾರ್ಗಸೂಚಿ ನೀಡಲಾಗಿದೆ. ಯಾವ ಕಾರಣಕ್ಕೂ ಅದನ್ನು ಮೀರುವಂತಿಲ್ಲ ಎಂದು ತಿಳಿಸಿದರು.

ಬೂತ್‌ ಮಟ್ಟದಲ್ಲಿ ಬಿಜೆಪಿ ಕಾರ್ಯಕರ್ತರ ನೆರವು:

ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಕೋವಿಡ್‌ ಸೋಂಕಿರಿಗೆ ನೆರವಾಗುತ್ತಿದ್ದಾರೆಂಬ ಮಾಹಿತಿ ಹಂಚಿಕೊಂಡ ಡಿಸಿಎಂ, ಬೂತ್‌ ಮಟ್ಟದಲ್ಲಿ ಕಾರ್ಯಕರ್ತರು ಸೋಂಕಿತರಿಗೆ ಅಗತ್ಯವಾದ ಎಲ್ಲ ನೆರವು ಕೊಡುತ್ತಿದ್ದಾರೆ, ಆಹಾರ ಧಾನ್ಯ, ಔಷಧಿ, ವೈದ್ಯಕೀಯ ಸಂಪರ್ಕ, ಮಾಸ್ಕ್‌ ತಲುಪಿಸುವ ಕೆಲಸ ಮಾಡುತ್ತಿದ್ದಾರೆ. 250 ಕೇಂದ್ರಗಳ ಮೂಲಕ ರಾಜ್ಯಾದ್ಯಂತ ಕಾರ್ಯಕರ್ತರು ಸಮರೋಪಾದಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಅಲ್ಲದೆ, ಕೋವಿಡ್‌ ಕೇರ್‌ಗಳಲ್ಲೂ ಕಾರ್ಯಕರ್ತರು ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಅಶ್ವಥ್ ನಾರಾಯಣ್ ಹೇಳಿದರು.

ಸರಕಾರದ ಕೋವಿಡ್‌ ಯಂತ್ರಾಂಗದ ಜತೆ ಸೇರಿ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಶಕ್ತಿ ತುಂಬುವ ಕೆಲಸವನ್ನು ಪಕ್ಷ ಮಾಡುತ್ತಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದರು. ವಿಧಾನಪರಿಷತ್‌ ಸದಸ್ಯ ರವಿಕುಮಾರ್‌, ಪಕ್ಷದ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ, ಬಿಜೆಪಿ ಮಾಧ್ಯಮ ಸಂಚಾಲಕ ಪ್ರಶಾಂತ್‌ ಇದ್ದರು.

Key words: Speed -covid test-govt – 20 thousand -oxygen bed- system-DCM Ashwath narayan

The post ಕೋವಿಡ್ ಪರೀಕ್ಷೆಗೆ ವೇಗ: ರಿಸಲ್ಟ್ ತಡವಾದ್ರೆ ಲ್ಯಾಬ್ ಗಳಿಗೆ ದಂಡ: 20 ಸಾವಿರ ಆಕ್ಸಿಜನ್ ಬೆಡ್ ವ್ಯವಸ್ಥೆಗೆ ಮುಂದಾದ ಸರ್ಕಾರ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದೇವರಾಜ ಮಾರುಕಟ್ಟೆಯಲ್ಲಿ 38 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಶ, 20 ಸಾವಿರ ದಂಡ
ಮೈಸೂರು,ಏಪ್ರಿಲ್,15,2021(www.justkannada.in) : ಪಾಲಿಕೆ ಅಧಿಕಾರಿಗಳು ಮೈಸೂರು ನಗರದ ದೇವರಾಜ ಮಾರುಕಟ್ಟೆಯಲ್ಲಿ 38 ಕೆಜಿಯ ನಿಷೇದಿತ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದು, 20 ಸಾವಿರ ದಂಡ ವಿಧಿಸಿದ್ದಾರೆ.

ಗುರುವಾರ ಆರೋಗ್ಯ ನಿರೀಕ್ಷಕ ಯೋಗೇಶ್ & ತಂಡ ದೇವರಾಜ ಮಾರುಕಟ್ಟೆಯಲ್ಲಿ ಕಾರ್ಯಾಚರಣೆ ನಡೆಸಿ 38 ಕೆಜಿಯ ನಿಷೇದಿತ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದು, 20 ಸಾವಿರ ದಂಡ ವಿಧಿಸಿದ್ದಾರೆ. ನಿಷೇದಿತ ಪ್ಲಾಸ್ಟಿಕ್ ಬಳಸದಂತೆ ಎಚ್ಚರಿಕೆ ನೀಡಿದ್ದಾರೆ.

key words : Devaraja-market-38 kg-Prohibited-Plastic-container-20 thousand-fine

The post ದೇವರಾಜ ಮಾರುಕಟ್ಟೆಯಲ್ಲಿ 38 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಶ, 20 ಸಾವಿರ ದಂಡ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಇಬ್ಬರು ಕುಖ್ಯಾತ ಖದೀಮರ ಬಂಧನ: ನಗದು ಮತ್ತು ಬೈಕ್, ಮೊಬೈಲ್ ವಶಕ್ಕೆ
ಮೈಸೂರು,ಮಾರ್ಚ್,19,2021(www.justkannada.in) : ಎಂಟು ರಾಬರಿ, 4 ಎಕ್ಸ್ ಟಾರ್ಷನ್, ಕಳ್ಳತನ ಸೇರಿ 13 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಕುಖ್ಯಾತ ಖದೀಮರನ್ನು ಮೇಟಗಳ್ಳಿ ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳಾದ ಜಮೀಲ್ ಖಾನ್(28), ಶಂಕರ್(42) ಬಂಧನ

ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಎಕ್ಸ್ ಟಾರ್ಷನ್ ಮತ್ತು ಬೆದರಿಕೆಗೆ ಸಂಬಂಧಿಸಿದಂತೆ ದಾಖಲಾದ ದೂರಿನ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು ತಾಂತ್ರಿಕ ಸಾಕ್ಷ್ಯಾಧಾರಗಳು ಮತ್ತು ಬಾತ್ಮೀದಾರರ ಮಾಹಿತಿ ಮೇರೆಗೆ ಆರೋಪಿಗಳಾದ ರಾಜೇಂದ್ರನಗರದ ಜಮೀಲ್ ಖಾನ್(28), ಶಂಕರ್(42) ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿವಿಧ ಪೊಲೀಸ್ ಠಾಣೆಗಳಲ್ಲಿ ತಲಾ 1ರಂತೆ 12 ರಾಬರಿ, ಎಕ್ಸ್ ಟಾರ್ಷನ್ ದೂರು ದಾಖಲು

ತನಿಖೆ ವೇಳೆ ಆರೋಪಿ ಜಮೀರ್ ಖಾನ್ ಮೊಹಮ್ಮದ್ ಜಮೀರ್ ಜೊತೆಗೆ ಸೇರಿ 2017ರಿಂದ ಇಲ್ಲಿಯವರೆಗೆ ಇದೇ ತರಹದ ಸಾಕಷ್ಟು ಪ್ರಕರಣಗಳನ್ನು ಮಾಡಿರುವುದಾಗಿ ತಿಳಿಸಿದ್ದು, ಇವರಿಬ್ಬರುಗಳ ವಿರುದ್ಧ ಮೈಸೂರು ನಗರದ ಕುವೆಂಪು ನಗರ, ವಿವಿ ಪುರಂ, ಜಯಲಕ್ಷ್ಮೀಪುರಂ, ಸರಸ್ವತಿಪುರಂ, ನರಸಿಂಹರಾಜ ಪೊಲೀಸ್ ಠಾಣೆಗಳಲ್ಲಿ ಮತ್ತು ಇಲವಾಲ ಪೊಲೀಸ್ ಠಾಣೆ, ಮದ್ದೂರು ಪೊಲೀಸ್ ಠಾಣೆ, ಶ್ರೀರಂಗಪಟ್ಟಣ ಗ್ರಾಮಾಂತರ ಹಾಗೂ ಟೌನ್ ಠಾಣೆಗಳಲ್ಲಿ ಬೆಂಗಳೂರಿನ ಚಾಮರಾಜ ಪೇಟೆ ಮತ್ತು ಕುಂಬಳಗೋಡು ಪೊಲೀಸ್ ಠಾಣೆಗಳಲ್ಲಿ ಮತ್ತು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ತಲಾ 1ರಂತೆ 12 ರಾಬರಿ, ಎಕ್ಸ್ ಟಾರ್ಷನ್ ಮತ್ತು ಒಂದು ಬೈಕ್ ಕಳ್ಳತನದ ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ.

ಜಮೀಲ್ ಖಾನ್ ಶಂಕರ್ ಜೊತೆಗೆ ಕೃತ್ಯ ನಡೆಸಿ, ಸಿಕ್ಕಿ ಬಿದ್ದಿದ್ದು ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಎಕ್ಸ್ ಟಾರ್ಷನ್ ಮತ್ತು ಬೆದರಿಕೆ ಪ್ರಕರಣ ದಾಖಲಾಗಿದೆ. ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಡಿಸಿಪಿಗಳಾದ ಡಾ.ಎ.ಎನ್.ಪ್ರಕಾಶ್ ಗೌಡ, ಗೀತ ಪ್ರಸನ್ನ, ನರಸಿಂಹರಾಜ ವಿಭಾಗದ ಎಸಿಪಿ ಶಿವಶಂಕರ್ ಮಾರ್ಗದರ್ಶನದಲ್ಲಿ ಮೇಟಗಳ್ಳಿ ಠಾಣೆ ಇನ್ಸ್ ಪೆಕ್ಟರ್ ಎ.ಮಲ್ಲೇಶ್ ಹಾಗೂ ಸಿಬ್ಬಂದಿ ಯಶಸ್ವಿಯಾಗಿ ನಿಭಾಯಿಸಿದ್ದಾರೆ.

key words : arrest-two notorious-cadres-20 thousand-cash-1 bike-2 mobile-money

The post “ಇಬ್ಬರು ಕುಖ್ಯಾತ ಖದೀಮರ ಬಂಧನ:  ನಗದು ಮತ್ತು ಬೈಕ್, ಮೊಬೈಲ್ ವಶಕ್ಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮುಂದಿನ 2-3 ವರ್ಷಗಳಲ್ಲಿ ಸ್ಟಾರ್ಟ್‌ಅಪ್‌ ಸಂಖ್ಯೆ 20 ಸಾವಿರಕ್ಕೆ ಏರಲಿದೆ- ಡಿಸಿಎಂ ಡಾ. ಅಶ್ವತ್ಥನಾರಾಯಣ್…
ಬೆಂಗಳೂರು,ಫೆ,11,2020(www.justkannada.in):   ಉದ್ಯಮಶೀಲತೆ ಹೆಚ್ಚಿದಾಗ ಉದ್ಯೋಗಾವಕಾಶವೂ ಹೆಚ್ಚುವುದು, ಸದ್ಯ 9 ಸಾವಿರ ನವೋದ್ಯಮಗಳಿದ್ದು ಮುಂದಿನ 2-3 ವರ್ಷಗಳಲ್ಲಿ ಈ ಸಂಖ್ಯೆ 20 ಸಾವಿರಕ್ಕೆ ಏರಲಿದೆ. ಅದಕ್ಕೆ ಬೇಕಿರುವ ಅಗತ್ಯ ಸೌಲಭ್ಯ ಒದಗಿಸಲು ನಮ್ಮ ಸರ್ಕಾರ ಬದ್ಧ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್‌. ಅಶ್ವತ್ಥನಾರಾಯಣ್ ತಿಳಿಸಿದ್ದಾರೆ.

ಕರ್ನಾಟಕ ಕೌಶಲ ಅಭಿವೃದ್ಧಿ ಪ್ರಾಧಿಕಾರ ಹಾಗೂ ವಿಶ್ವ ಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ ಜಂಟಿಯಾಗಿ ಆಯೋಜಿಸಿದ್ದ’ಉದ್ಯೋಗದಾತರ ಅಗತ್ಯಕ್ಕೆ ಅನುಗುಣವಾಗಿ ಕೌಶಲ ತರಬೇತಿ’ ಕುರಿತ ವಿಶೇಷ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಡಿಸಿಎಂ ಡಾ. ಅಶ್ವತ್ಥನಾರಾಯಣ್, “ಕೌಶಲ ಅಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ಮರುದಿನವೇ ಈ ಕಾರ್ಯಾಗಾರದಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ,”ಎಂದರು.

“ಯುವ ಜನರಿಗೆ ಉದ್ಯೋಗಾವಕಾಶಗಳ ಸೃಷ್ಟಿಗೆ  ಕೇಂದ್ರ ಹಾಗೂ ರಾಜ್ಯ ಸರ್ಕಾರ ಆದ್ಯತೆ ನೀಡುವುದು. ಉದ್ಯೋಗಾವಕಾಶಗಳು ಸಾಕಷ್ಟಿವೆ. ಆದರೆ, ನಮ್ಮ ಯುವ ಜನರಿಗೆ ಅದರ ಬಗ್ಗೆ ಮಾಹಿತಿ ಇರುವುದಿಲ್ಲ. ಉದ್ಯೋಗಕ್ಕಾಗಿ ಯಾರ ಕಾಲು ಹಿಡಿಯಬಾರದು, ಉದ್ಯೋಗದ ಮಾಹಿತಿ ಒಂದೇ ವೇದಿಕೆಯಡಿ ಸಿಗುವಂತಾಗಬೇಕು ಈ ನಿಟ್ಟಿನಲ್ಲಿ ಕಾಲೇಜು ಮಟ್ಟದಲ್ಲೇ ಮಾಹಿತಿ ಒದಗಿಸುವ ಕೆಲಸಗಳಾಗುತ್ತಿವೆ. ಜತೆಗೆ, ಐಟಿಐ ಹಾಗೂ ಎಂಜನಿಯರಿಂಗ್‌ ಪಠ್ಯಕ್ರಮಗಳನ್ನು ಪರಿಷ್ಕರಿಸಿ, ಸರಳಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು,”ಎಂದು ಅಶ್ವಥ್ ನಾರಾಯಣ್ ತಿಳಿಸಿದರು.

ಯುವ ಸಬಲೀಕರಣ ಕೇಂದ್ರ

“ನಮ್ಮ ಸರ್ಕಾರ ಆರಂಭಿಸಿರುವ ಯುವ ಸಬಲೀಕರಣ ಕೇಂದ್ರದ ಮೂಲಕ ಪ್ರತಿ ಪ್ರೌಢ ಶಾಲೆಯಲ್ಲೂ ಒಬ್ಬ ಸಮಾಲೋಚಕರನ್ನು ನಿಗದಿಪಡಿಸಿ, ಅವರಿಗೆ ಭತ್ಯೆ ನೀಡಲಾಗುವುದು. ಪ್ರೌಢಶಾಲೆ ಮಟ್ಟದಲ್ಲೇ ಮುಂದಿನ ಓದು, ಕೌಶಲ ತರಬೇತಿ, ಶಿಕ್ಷಣ ಸಾಲದ ಬಗ್ಗೆ ಮಾಹಿತಿ ನೀಡಲಾಗುವುದು. ಇಂಟರ್ನ್‌ಶಿಪ್‌, ಅಪ್ರೆಂಟಿಸ್‌ಶಿಪ್‌, ಪ್ರಾಜೆಕ್ಟ್‌ ಹಾಗೂ ಮುಂದಿನ ವೃತ್ತಿ ಜೀವನದ ಬಗ್ಗೆಯೂ ವಿದ್ಯಾರ್ಥಿಗಳಿಗೆ ಮಾಹಿತಿ ಒದಗಿಸಲಾಗುತ್ತಿದೆ. ವಿದೇಶಗಳಲ್ಲಿ ಪ್ರಾಥಮಿಕ ಶಿಕ್ಷಣದ ಸಂದರ್ಭದಲ್ಲಿ ಔದ್ಯೋಗಿಕ ಮಾಹಿತಿ ನೀಡುವ ವ್ಯವಸ್ಥೆ ಇದೆ. ಆದರೆ, ನಮ್ಮಲ್ಲಿ  ಪದವಿ ಮುಗಿಸಿ ಕೆಲಸಕ್ಕಾಗಿ ಕೌಶಲ್ಯ ಕಲಿಯುವವರಿದ್ದಾರೆ. ಹಾಗಾಗಿ ವಿದ್ಯಾರ್ಥಿ ದೆಸೆಯಲ್ಲೇ ಮುಂದಿನ ಉದ್ಯೋಗಕ್ಕೆ ಅಗತ್ಯ ಕೌಶಲ್ಯ ಕಲಿಯುಲು ಅವಕಾಶ ಕಲ್ಪಿಸಲಾಗಿದೆ,”ಎಂದು ಅಶ್ವಥ್ ನಾರಾಯಣ್ ತಿಳಿಸಿದರು.

ನಮ್ಮ ಸರ್ಕಾರ ಕನ್ನಡಿಗರ ಪರ

ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ  ಒತ್ತಾಯಿಸಿ ಕರ್ನಾಟಕ ಸಂಘಟನೆಗಳ ಕರೆ ನೀಡಿರುವ ಬಂದ್‌ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಅಶ್ವಥ್ ನಾರಾಯಣ್, “ನಮ್ಮ  ಸರ್ಕಾರ ಕನ್ನಡಿಗರ ಪರವಾಗಿ ಕೆಲಸ ಮಾಡುತ್ತಿದೆ. ಅದಕ್ಕಿಂತ ಮುಖ್ಯವಾಗಿ ನಾವು ಭಾರತೀಯರು ಎಂಬುದನ್ನು ಮರೆಯವಂತಿಲ್ಲ. ಬೆಂಗಳೂರು ಈ ಮಟ್ಟಕ್ಕೆ  ಬೆಳೆಯಲು ಕಾರಣ ನಮ್ಮ ಔದಾರ್ಯತೆ, ಎಲ್ಲರನ್ನು ಪ್ರೀತಿಯಿಂದ ಒಪ್ಪಿಕೊಳ್ಳುವ ಗುಣ. ಈ  ವೈವಿಧ್ಯತೆಯನ್ನು ನಾವು ಉಳಿಸಿಕೊಳ್ಳಬೇಕು. ನಾವಿಂದು ವಿಶ್ವ ಮಟ್ಟದಲ್ಲಿ ಸ್ಪರ್ಧೆ ಮಾಡಬೇಕಿದ್ದು, ಈ ವಿಚಾರದಲ್ಲಿ ಓಲೈಕೆ ರಾಜಕಾರಣ ಮಾಡುವುದಲ್ಲ,”ಎಂದು ಹೇಳಿದರು.

ಕೈಗಾರಿಕೆಗಳಿಗೆ ಬೇಕಾದ ಕೌಶಲ್ಯ ಕಲಿಕೆ

“5 ಟ್ರಿಲಿಯನ್‌ ಎಕಾನಮಿ ಸಾಧಿಸಲು ಹೆಚ್ಚಿನ ಕೈಗಾರಿಕೆಗಳು ಬರಬೇಕು, ಉದ್ಯೋಗ ಅವಕಾಶ ಹೆಚ್ಚಬೇಕು, ಈ ನಿಟ್ಟಿನಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ಬಹಳ ಮುಖ್ಯ. ಉದ್ದಿಮೆಗಳಿಗೆ ಬೇಕಾದ ಮಾನವ ಸಂಪನ್ಮೂಲ ಒದಗಿಸಲು ಸೂಕ್ತ ತರಬೇತಿ ಅಗತ್ಯ ಈ ನಿಟ್ಟಿನಲ್ಲಿ ಕೌಶಲ ತರಬೇತಿ ಕೇಂದ್ರಗಳ ಜತೆ ಕೈಗಾರಿಕೆಗಳು ಕೈ ಜೋಡಿಸಿದರೆ ಉತ್ತಮ.  ಕಾರ್ಪೊರೇಟ್‌ ಕಂಪನಿಗಳು ತಮ್ಮ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ (ಸಿಎಸ್‌ಆರ್‌) ಐಟಿ ಬಿಟಿ ವಲಯಗಳು ಉದ್ಯೋಗ ಸೃಷ್ಟಿಗೆ ಪೂರಕ ಕೌಶಲ್ಯ ತರಬೇತಿ ನೀಡಬಹುದು,”ಎಂದು  ಕರ್ನಾಟಕ ಕೌಶಲ ಅಭಿವೃದ್ಧಿ ಪ್ರಾಧಿಕಾರದ  ಅಧ್ಯಕ್ಷೆ ರತ್ನಪ್ರಭಾ ತಿಳಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಕೌಶಲ ಅಭಿವೃದ್ಧಿ ಪ್ರಾಧಿಕಾರದ  ಅಧ್ಯಕ್ಷೆ ರತ್ನಪ್ರಭಾ, ಕರ್ನಾಟಕ ಉದ್ಯೋಗ ತರಬೇತಿ ಮತ್ತು ಕೌಶಲ ಅಭಿವೃದ್ಧಿ ನಿಗದ ನಿರ್ದೇಶಕ ರಾಘವೇಂದ್ರ ಉಪಸ್ಥಿತರಿದ್ದರು.

Key words:  startup – expected – rise – 20 thousand – next 2-3 years- DCM -Dr. Ashwath narayan.

The post ಮುಂದಿನ 2-3 ವರ್ಷಗಳಲ್ಲಿ ಸ್ಟಾರ್ಟ್‌ಅಪ್‌ ಸಂಖ್ಯೆ 20 ಸಾವಿರಕ್ಕೆ ಏರಲಿದೆ- ಡಿಸಿಎಂ  ಡಾ. ಅಶ್ವತ್ಥನಾರಾಯಣ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.