Acquisition Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಸರ್ಕಾರಿ ಜಮೀನು ಕಬಳಿಸುವ ಭೂಗಳ್ಳರ ವಿರುದ್ದ ಕಠಿಣ ಕಾನೂನು ಕ್ರಮ- ಸಚಿವ ಕೃಷ್ಣಭೈರೇಗೌಡ
ಬೆಂಗಳೂರು, ಆಗಸ್ಟ್,13,2025 (www.justkannada.in):  ಸರ್ಕಾರಿ ಜಮೀನು ಕಬಳಿಸುವ ಭೂಗಳ್ಳರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಂದಾಯ ಇಲಾಖೆ ಸಚಿವ  ಕೃಷ್ಣಭೈರೇಗೌಡ ತಿಳಿಸಿದರು.

ವಿಧಾನಪರಿಷತ್ ನಲ್ಲಿ ಸದಸ್ಯ ರಾಮೋಜಿ ಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣಭೈರೇಗೌಡ, ಭೂಗಳ್ಳರ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಲು ತಿದ್ದುಪಡಿ ಮಾಡಿರುವ ಕಾಯ್ದೆ ಈ ತಿಂಗಳ ಅಂತ್ಯದೊಳಗೆ ಜಾರಿಗೆ ಬರಲಿದೆ. ಇದುವರೆಗೂ ಸರ್ಕಾರಿ ಜಮೀನು ಕಬಳಿಸಿದವರು ಕಾನೂನಿನಿಂದ ತಪ್ಪಿಸಿಕೊಳ್ಳುತ್ತಿದ್ದರು. ನ್ಯಾಯಾಲಯದಿಂದ ತಡೆಯಾಜ್ಞೆ ತರುವುದು ಸೇರಿದಂತೆ ಹಲವು ದಾರಿಗಳಿಂದ ನುಣುಚಿಕೊಳ್ಳುತ್ತಿದ್ದರು. ನೂತನ ಕಾಯ್ದೆಯಲ್ಲಿ ಹಲವಾರು ಕಠಿಣ ಕಾನೂನು ಕ್ರಮಗಳನ್ನು ಸೇರ್ಪಡೆ ಮಾಡಿದ್ದೇವೆ ಎಂದರು.

ಹಾಗೆಯೇ ಯಾರೇ ಆಗಲಿ ಸರ್ಕಾರಿ ಜಮೀನು ಕಬಳಿಸಿರುವುದು ಅಥವಾ ಕಬಳಿಸುವವರಿಗೆ ಪ್ರತ್ಯಕ್ಷವಾಗಿ , ಪರೋಕ್ಷವಾಗಿ ಸಹಾಯ ಮಾಡುವ  ಅಧಿಕಾರಿಗಳ ವಿರುದ್ದವೂ ಕಾನೂನು ಕ್ರಮ ಕೈಗೊಳ್ಳಲು ಹೊಸ ಕಾನೂನಿನಲ್ಲಿ ಅವಕಾಶವಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

Key words: Strict, legal action, against, government land, acquisition

The post ಸರ್ಕಾರಿ ಜಮೀನು ಕಬಳಿಸುವ ಭೂಗಳ್ಳರ ವಿರುದ್ದ ಕಠಿಣ ಕಾನೂನು ಕ್ರಮ- ಸಚಿವ ಕೃಷ್ಣಭೈರೇಗೌಡ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದೇವನಹಳ್ಳಿ ಭೂ ಸ್ವಾಧೀನ ಬಿಕ್ಕಟ್ಟು: ಜು.15ಕ್ಕೆ ಸಿಎಂ ಅಂತಿಮ ತೀರ್ಮಾನ- ಸಚಿವ ಎಂ.ಬಿ ಪಾಟೀಲ್
ಬೆಂಗಳೂರು,ಜುಲೈ,14,2025 (www.justkannada.in): ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಹೈಟೆಕ್‌ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್‌ ಸ್ಥಾಪನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 15ರಂದು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಒಟ್ಟಿನಲ್ಲಿ ಕೃಷಿ ಮತ್ತು ಕೈಗಾರಿಕೆ ಎರಡನ್ನೂ ಸರಿದೂಗಿಸಿಕೊಂಡು ಹೋಗಬೇಕೆನ್ನುವುದು ತಮ್ಮ ಕಳಕಳಿಯಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ʻಅಲ್ಲಿ ಕೆಲವರು ಭೂಸ್ವಾಧೀನ ಬೇಡವೆಂದು ಹೋರಾಟ ಮಾಡುತ್ತಿದ್ದಾರೆ. ಮತ್ತೆ ಕೆಲವರು 449 ಎಕರೆ ಜಮೀನನ್ನು ಬಿಟ್ಟುಕೊಡಲು ಸಿದ್ಧವಾಗಿದ್ದು, ಎಕರೆಗೆ 3.5 ಕೋಟಿ ರೂ. ಪರಿಹಾರ ಕೇಳುತ್ತಿದ್ದಾರೆ. ರೈತರಲ್ಲೇ ಈ ಬಗ್ಗೆ ಬೇರೆ ಬೇರೆ ಅಭಿಪ್ರಾಯಗಳಿವೆ. ಸರಕಾರವು ಎಲ್ಲಾ ರೀತಿಯ ಸಾಧಕ-ಬಾಧಕಗಳನ್ನೂ ಪರಿಶೀಲಿಸುತ್ತಿದೆʼ ಎಂದಿದ್ದಾರೆ.

ಶನಿವಾರದಂದು ʻಚನ್ನರಾಯಪಟ್ಟಣ ಹೋಬಳಿ ರೈತ ಹೋರಾಟ ಸಮಿತಿʼ ಹೆಸರಿನಲ್ಲಿ ಕೆಲವು ರೈತರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, 449 ಎಕರೆಯನ್ನು ಸರಕಾರಕ್ಕೆ ಕೊಡುವುದಾಗಿ ಹೇಳಿದ್ದಾರೆ. ಯೋಜನೆಗೆ ಸಂಬಂಧಿಸಿದಂತೆ ಮೊದಲು ಅಧಿಸೂಚನೆ ಹೊರಟಿದ್ದೇ ಇಷ್ಟು ಭೂಮಿಗೆ. ಸರಕಾರವು ನಿಜವಾದ ರೈತರ ದನಿಗೆ ಬೆಲೆ ಕೊಡುತ್ತದೆಯೇ ವಿನಾ ರೈತರ ಹೆಸರಿನಲ್ಲಿ ಏನೇನೋ ಮಾತನಾಡುತ್ತಿರುವವರಿಗಲ್ಲ ಎಂದು  ತಿಳಿಸಿದ್ದಾರೆ.

ದೇವನಹಳ್ಳಿ ಸುತ್ತಮುತ್ತ ಯಾವ್ಯಾವ ಬಿಲ್ಡರ್‌ ಗಳು ಎಷ್ಟೆಷ್ಟು ಭೂಮಿ ಖರೀದಿಸಿದ್ದಾರೆ, ಯಾರ ಜೊತೆ ಅವರು ಒಪ್ಪಂದ ಮಾಡಿಕೊಂಡಿದ್ದಾರೆ, ಯಾವ ರಾಜಕಾರಣಿಗಳ ಜಮೀನು ಎಷ್ಟಿದೆ, ಹೋರಾಟದ ಹಿಂದೆ ಯಾರ ಕುಮ್ಮಕ್ಕಿದೆ ಎನ್ನುವುದೆಲ್ಲ ನಮಗೆ ಗೊತ್ತಿದೆ. ದೇವನಹಳ್ಳಿ ಸುತ್ತಲಿನ ಪರಿಸರದಲ್ಲಿ ಕೃಷಿ ಉಳಿಯಬೇಕು ಎನ್ನುವ ಕೂಗೂ ಎದ್ದಿದೆ. ಹೀಗಾಗಿ ಸರಕಾರವು ಶಾಶ್ವತ ಕೃಷಿ ವಲಯ ಮಾಡುವ ಬಗ್ಗೆಯೂ ಚಿಂತಿಸುತ್ತಿದೆ. ಈಗ ಕೆಲವರು ಇದು ಬೇಡ ಎನ್ನುತ್ತಿದ್ದಾರೆ. ಈ ರೀತಿಯ ದ್ವಂದ್ವ ಸರಿಯಲ್ಲ ಎಂದು  ಸಚಿವ ಎಂ.ಬಿ ಪಾಟೀಲ್ ಹೇಳಿದರು.

ಭೂಸ್ವಾಧೀನ ಬೇಡವೆಂದು ಕೆಲವು ಸಾಹಿತಿಗಳು, ಚಿಂತಕರು ನಮ್ಮ ಪಕ್ಷದ ಹೈಕಮಾಂಡ್‌ ಗೆ ಪತ್ರ ಬರೆದಿದ್ದಾರೆ. ಅದನ್ನು ನಾನು ವಿರೋಧಿಸುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹೋರಾಡುವ ಹಕ್ಕಿದೆ. ನಾವು ಎಲ್ಲ ಸಾಧ್ಯತೆಗಳನ್ನೂ ಪರಿಶೀಲಿಸುತ್ತಿದ್ದು, ಕಾನೂನು ತಜ್ಞರ ಅಭಿಪ್ರಾಯ ಪಡೆಯುತ್ತಿದ್ದೇವೆ ಎಂದು ಎಂ.ಬಿ ಪಾಟೀಲ್ ನುಡಿದಿದ್ದಾರೆ

ನಾಯಕತ್ವದಲ್ಲಿ ಗೊಂದಲವಿಲ್ಲ

ರಾಜ್ಯ ಕಾಂಗ್ರೆಸ್‌ ಸರಕಾರದಲ್ಲಿ ನಾಯಕತ್ವದ ಗೊಂದಲವೇನೂ ಇಲ್ಲ. ಪಕ್ಷದಲ್ಲಿ ರಾಜ್ಯ ಉಸ್ತುವಾರಿಯಾಗಿರುವ ರಣದೀಪ್‌ ಸುರ್ಜೇವಾಲ ಅವರು ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ನಮ್ಮ ಪಕ್ಷದ ಶಾಸಕರ ಅಭಿಪ್ರಾಯ ಕೇಳಿದ್ದಾರೆ. ಅದರಲ್ಲಿ ತಪ್ಪೇನೂ ಇಲ್ಲ. ಕೊನೆಗೂ ದುಡ್ಡು ಕೊಡುವುದು ಮುಖ್ಯಮಂತ್ರಿಗಳೇ ತಾನೇ ಎಂದು ಎಂ.ಬಿ ಪಾಟೀಲ್ ಸ್ಪಷ್ಟಪಡಿಸಿದರು.

ಬಿಜೆಪಿ ನಮ್ಮ ಐವತ್ತರಿಂದ ಅರವತ್ತು ಶಾಸಕರ ಮೇಲೆ ಕಣ್ಣಿಟ್ಟು, ಏಜೆಂಟರನ್ನು ಕಳಿಸುತ್ತಿದೆ ಎಂದು ನಮ್ಮ ಪಕ್ಷದ ಶಾಸಕರೇ ಹೇಳಿದ್ದಾರೆ. ಆದರೆ, ನಮ್ಮಲ್ಲಿ 140ಕ್ಕೂ ಹೆಚ್ಚು ಶಾಸಕರಿದ್ದಾರೆ. ಪಕ್ಷಾಂತರ ಆಗಬೇಕೆಂದರೆ 80-90 ಶಾಸಕರು ಹೋಗಬೇಕಾಗುತ್ತದೆ. ಈಗ ಯಾರೂ ಅಷ್ಟು ಮೂರ್ಖರಿಲ್ಲ. ಹಿಂದೇನೋ 17 ಶಾಸಕರು ಬಿಜೆಪಿಗೆ ಹೋದರು. ಈಗ ಅದೆಲ್ಲ ನಡೆಯುವುದಿಲ್ಲ. ವಾಸ್ತವವಾಗಿ ಬಿಜೆಪಿ-ಜೆಡಿಎಸ್‌ ಕೂಟದ 18-20 ಶಾಸಕರು ಕಾಂಗ್ರೆಸ್‌ ಬಾಗಿಲು ಬಡಿಯುತ್ತಿದ್ದಾರೆ ಎಂದು ತಿಳಿಸಿದರು.

Key words: Devanahalli, land, acquisition, Minister, M.B. Patil

The post ದೇವನಹಳ್ಳಿ ಭೂ ಸ್ವಾಧೀನ ಬಿಕ್ಕಟ್ಟು: ಜು.15ಕ್ಕೆ ಸಿಎಂ ಅಂತಿಮ ತೀರ್ಮಾನ- ಸಚಿವ ಎಂ.ಬಿ ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವಾಯುಪಡೆ ಸ್ವಾಧೀನದ ಪೀಣ್ಯ, ಜಾರಕಬಂಡೆ ಅರಣ್ಯಭೂಮಿ ಮರುವಶಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ
ಬೆಂಗಳೂರು, ಮಾರ್ಚ್,5,2025 (www.justkannada.in):  ಬೆಂಗಳೂರಿನ ಪೀಣ್ಯ ಪ್ಲಾಂಟೇಷನ್ ಮತ್ತು ಜಾರಕಬಂಡೆ ಕಾವಲು ಪ್ರದೇಶದಲ್ಲಿ ಪ್ರಸ್ತುತ ಭಾರತೀಯ ವಾಯುಪಡೆ ವಶದಲ್ಲಿರುವ 444.12 ಎಕರೆ ಅರಣ್ಯ ಭೂಮಿಯನ್ನು ನಿಯಮಾನುಸಾರ ಮರು ವಶಕ್ಕೆ ಪಡೆಯುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಾಯುಪಡೆಗೆ 1987ರಲ್ಲಿ ಮಂಜೂರು ಮಾಡಲಾಗಿದ್ದ 570 ಎಕರೆ ಭೂಮಿಯ ಪೈಕಿ ಅರಣ್ಯ ಎಂದು ಅಧಿಸೂಚನೆ ಆಗಿರುವ 452 ಎಕರೆ ಮಂಜೂರಾತಿ ರದ್ದುಪಡಿಸಿ, 2017ರಲ್ಲಿ ಸರ್ಕಾರ ಆದೇಶ ಹೊರಡಿಸಿದೆ. ಆದರೂ ಭಾರತೀಯ ವಾಯುಪಡೆ ಮಾ.1ರಂದು ಎಫ್.ಸಿ. (ಅರಣ್ಯ ತೀರುವಳಿ) ಅನುಮತಿ ಪಡೆಯದೆ ಅಕ್ರಮವಾಗಿ ನಿರ್ಮಾಣ ಕಾಮಗಾರಿ ಆರಂಭಿಸಿತ್ತು. ಇದನ್ನು ತಡೆಯಲಾಗಿದೆ ಎಂದು ಅರಣ್ಯಾಧಿಕಾರಿಗಳು ಇಂದು ತಿಳಿಸಿದ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಈ ಸೂಚನೆ ನೀಡಿದ್ದಾರೆ.

ಸರ್ಕಾರದ 2017ರ ಆದೇಶದನ್ವಯ ಮ್ಯುಟೇಷನ್ ಆಗಿದ್ದು, ಪ್ರಸ್ತುತ ಈ ಜಮೀನಿನ ಪಹಣಿಯಲ್ಲಿ ಮೀಸಲು ಅರಣ್ಯ ಎಂದು ನಮೂದಾಗಿದೆ. ಅರಣ್ಯ ಇಲಾಖೆ ಈ ವಿಷಯವನ್ನು ವಾಯುಪಡೆಯ ಅಧಿಕಾರಿಗಳ ಗಮನಕ್ಕೆ ತಂದು ಸದರಿ ಜಮೀನು, ಮೀಸಲು ಅರಣ್ಯ ಎಂಬ ಫಲಕವನ್ನೂ ಹಾಕಿದೆ. ಈ ಅರಣ್ಯ ಭೂಮಿ ತೆರವು ಮಾಡುವಂತೆ ರಕ್ಷಣಾ ಸಚಿವಾಲಯಕ್ಕೆ ಪತ್ರವನ್ನೂ ಬರೆಯಲಾಗಿದೆ. ಸಂಪೂರ್ಣ ಮಾಹಿತಿ ಇದ್ದರೂ ವಾಯುಪಡೆ ಅನಧಿಕೃತವಾಗಿ, ನಿಯಮ ಮೀರಿ ನಿರ್ಮಾಣ ಕಾಮಗಾರಿ ನಡೆಸುತ್ತಿತ್ತು, ಪ್ರಸ್ತುತ ಕಾಮಗಾರಿ ನಿಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಪ್ರಸ್ತುತ 444 ಎಕರೆ ಜಮೀನಿನ ಪೈಕಿ ಸುಮಾರು 15 ಎಕರೆ ಪ್ರದೇಶದಲ್ಲಿ ವಾಯುಪಡೆ ಶೂಟಿಂಗ್ ರೇಂಜ್ ನಿರ್ಮಿಸಿಕೊಂಡು ತರಬೇತಿ ನೀಡುತ್ತಿದೆ. ಸ್ವಲ್ಪ ಜಮೀನಿನಲ್ಲಿ ವಾಯುಪಡೆಯ ಕಚೇರಿ ಇತ್ಯಾದಿ ನಿರ್ಮಿಸಿದೆ. ಉಳಿದ ಭೂಮಿ ಅರಣ್ಯ ಸ್ವರೂಪದಲ್ಲೇ ಇದ್ದು, ಮರ, ಗಿಡಗಳಿಂದ ಸಮೃದ್ಧವಾಗಿದೆ ಎಂದು ಅಧಿಕಾರಿಗಳು ವಿವರಿಸಿದರು. ಕೂಡಲೇ ಅರಣ್ಯ ಸ್ವರೂಪದ ಜಮೀನನ್ನು ವಶಕ್ಕೆ ಪಡೆಯಲು ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುವಂತೆ ಮತ್ತು ವಾಯುಪಡೆ ಬಳಕೆ ಮಾಡುತ್ತಿರುವ ಜಮೀನಿಗೆ ಸಂಬಂಧಿಸಿದಂತೆ ಪರ್ವೇಶ್ ಪೋರ್ಟಲ್ ನಲ್ಲಿ ನಿಯಮಾನುಸಾರ ಅರ್ಜಿ ಹಾಕಿ ಎಫ್.ಸಿ. ಪಡೆಯಲು ವಾಯುಪಡೆಗೆ ಪತ್ರ ಬರೆಯಲು ಈಶ್ವರ ಖಂಡ್ರೆ ಸೂಚಿಸಿದರು.

Key words: Air Force, acquisition, forest land, rehabilitation, Minister, Ishwar Khandre

The post ವಾಯುಪಡೆ ಸ್ವಾಧೀನದ ಪೀಣ್ಯ, ಜಾರಕಬಂಡೆ ಅರಣ್ಯಭೂಮಿ ಮರುವಶಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಖಾಸಗಿ ಆಸ್ಪತ್ರೆಗಳಲ್ಲಿನ ಶೇ. 50 ರಷ್ಟು ಹಾಸಿಗೆ ಸ್ವಾಧೀನಕ್ಕೆ ಜಂಟಿ ಕಾರ್ಯಾಚರಣೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ…
ಬೆಂಗಳೂರು,ಏಪ್ರಿಲ್,22,2021(www.justkannada.in):  ದಿನೇದಿನೇ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಖಾಸಗಿ ಆಸ್ಪತ್ರೆಗಳಲ್ಲಿನ ಶೇ. 50ರಷ್ಟು ಹಾಸಿಗೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಜಂಟಿ ಕಾರ್ಯಾಚರಣೆ ಮಾಡುವಂತೆ ಬಿಬಿಎಂಪಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್  ಹಾಗೂ ಬೆಂಗಳೂರಿನ ಉಪ ಪೊಲೀಸ್ ಆಯುಕ್ತರ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಈ ಕಟ್ಟುನಿಟ್ಟಿನ ಆದೇಶ ಮಾಡಿದರು.

ಈ ಕುರಿತು ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಬೆಂಗಳೂರು ನಗರವನ್ನು 8 ವಲಯಗಳನ್ನಾಗಿ ವಿಂಗಡನೆ ಮಾಡಲಾಗಿದೆ.  ಒಂದೊಂದು ವಲಯಕ್ಕೆ ಒಬ್ಬ ಉಪ ಪೊಲೀಸ್ ಆಯುಕ್ತ ಹಾಗೂ ಬಿಬಿಎಂಪಿ ಜಂಟಿ ಆಯುಕ್ತರ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಮುಂದಿನ ಮೂರು ನಾಲ್ಕು ದಿನಗಳಲ್ಲಿ ತಮ್ಮ ವ್ಯಾಪ್ತಿಯ ಖಾಸಗಿ ಆಸ್ಪತ್ರೆಗಳಿಗೆ ದಿಡೀರ್ ಭೇಟಿ ನೀಡಬೇಕು. ಆಸ್ಪತ್ರೆಯಲ್ಲಿರುವ ವಾಸ್ತವ ಸ್ಥಿತಿಯನ್ನು ತಿಳಿದುಕೊಳ್ಳಲು ತಪಾಸಣೆ ಮಾಡಬೇಕು.  ಅಲ್ಲಿ ಖಾಲಿ ಇರುವ ಬೆಡ್ ಗಳ ಬಗ್ಗೆ ಮಾಹಿತಿ ಪಡೆಯಬೇಕು.  ಪ್ರತಿಯೊಂದು ಆಸ್ಪತ್ರೆ ಸರ್ಕಾರಕ್ಕೆ ಶೇಕಡ 50ರಷ್ಟು ಹಾಸಿಗೆಗಳನ್ನು ಬಿಟ್ಟುಕೊಡುವಂತೆ ನೋಡಿಕೊಳ್ಳಬೇಕು. ಇದುವರೆಗೆ ಖಾಸಗಿ ಆಸ್ಪತ್ರೆಗಳು 7000 ಬೆಡ್ ಗಳನ್ನು ಸರ್ಕಾರಕ್ಕೆ ನೀಡಿವೆ.  ಆದರೆ ಇನ್ನೂ 4000 ಹಾಸಿಗೆ ಗಳನ್ನು ಸರ್ಕಾರದ ಸುಪರ್ದಿಗೆ ಪಡೆದುಕೊಳ್ಳಬೇಕಾಗಿದೆ. ಅದರಲ್ಲಿಯೂ ಆಕ್ಸಿಜನ್ ಇರುವ ಹಾಸಿಗೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಜಂಟಿ ಕಾರ್ಯಾಚರಣೆ ಮೂಲಕ ಆಕ್ಸಿಜನ್ ಇರುವ ಬೇಡಗಳನ್ನು ಪಡೆದುಕೊಳ್ಳುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವ ಬೊಮ್ಮಾಯಿ ತಾಕೀತು ಮಾಡಿದರು.

ಲಾಕ್ ಡೌನ್ ಮಾದರಿಯಲ್ಲಿ ಬಿಗಿ ಕ್ರಮ ಕೈಗೊಳ್ಳಿ- ಪೊಲೀಸ್ ಆಯುಕ್ತರಿಗೆ ಸೂಚನೆ

ಕಳೆದ ಬಾರಿಯ ಲಾಕ್ ಡೌನ್ ಸಂದರ್ಭದಲ್ಲಿ ಕೈಗೊಳ್ಳಲಾಗಿದ್ದ ಬಿಗಿ ಕ್ರಮಗಳನ್ನು ನಾಳೆ ರಾತ್ರಿಯಿಂದ ಆರಂಭವಾಗಲಿರುವ ವಾರಾಂತ್ಯದ  ಕರ್ಫ್ಯೂ ಸಂದರ್ಭದಲ್ಲಿಯೂ ಜಾರಿಗೊಳಿಸಿ. ಮುಖ್ಯ ಮತ್ತು ಸಣ್ಣ ರಸ್ತೆಗಳಿಗೆ ಬ್ಯಾರಿಕೇಡ್ ಗಳನ್ನು ಅಳವಡಿಸಿ.  ವಾಹನ ಸಂಚಾರ ನಿರ್ಬಂಧಿಸಿ. ಅನವಶ್ಯಕವಾಗಿ ಬೆಂಗಳೂರಿಗೆ ಬರುವವರನ್ನು ನಿರ್ಬಂಧಿಸಿ. ವಿನಾಕಾರಣ ತಿರುಗಾಡಲು ಜನರಿಗೆ ಅವಕಾಶ ನೀಡಬೇಡಿ.  ಕಾನೂನು ಉಲ್ಲಂಘನೆ ಮಾಡುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ. ವಿನಾಕಾರಣ ಓಡಾಡುವ ಜನ ಬಳಸುವ ವಾಹನಗಳನ್ನು ಸೀಜ್  ಮಾಡಿ.  ಒಳ್ಳೆ ಮಾತಿನಲ್ಲಿ ಕೇಳದಿದ್ದರೆ ಕಠಿಣ ಕ್ರಮ ಜರುಗಿಸಿ ಎಂದು ಪೊಲೀಸ್ ಅಧಿಕಾರಿಗಳಿಗೆ ಸಚಿವ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ವಾರಂತ್ಯದ ಕರ್ಫ್ಯೂ ಸಂದರ್ಭದಲ್ಲಿ ಮದುವೆ ಸಮಾರಂಭ ನಡೆಯುತ್ತಿವೆ. ಕಲ್ಯಾಣ ಮಂಟಪ ಹಾಗೂ ಸಭಾ ಮಂದಿರಗಳ ಮಾಲೀಕರ ಜೊತೆಗೆ ಮಾತನಾಡಿ.  ಅವರಿಂದ ಕಾನೂನು ಉಲ್ಲಂಘನೆ ಆಗದಿರುವ ಕುರಿತು ಮುಚ್ಚಳಿಕೆಯನ್ನು ಪಡೆಯಿರಿ.  ಕಾನೂನು ಉಲ್ಲಂಘನೆ ಮಾಡುವ ಚೌಟ್ರಿ ಹಾಗೂ ಕಲ್ಯಾಣ ಮಂಟಪಗಳನ್ನು ಮುಲಾಜಿಲ್ಲದೆ ಬಂದ್ ಮಾಡಿ ಎಂದು ಪೊಲೀಸ್ ಅಧಿಕಾರಿಗಳಿಗೆ ಸಚಿವ ಬೊಮ್ಮಾಯಿ ಕಟ್ಟುನಿಟ್ಟಿನ ಅಪ್ಪಣೆ ಮಾಡಿದರು.

ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು ಪೊಲೀಸರ ಜವಾಬ್ದಾರಿ.  ಹೀಗಾಗಿ ಪೊಲೀಸ್ ಸಿಬ್ಬಂದಿಯ ಸುರಕ್ಷತೆಗೆ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ.  ಪೊಲೀಸ್ ಠಾಣೆಗಳನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ. ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸುವ ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಎಲ್ಲ ವೈದ್ಯಕೀಯ ಸೌಲಭ್ಯಗಳನ್ನು ಪೊಲೀಸ್ ಸಿಬ್ಬಂದಿಗೆ ಒದಗಿಸಲಾಗಿದೆ ಎಂದು ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

Key words: Joint operation – acquisition -50 per cent- bed -private hospitals- Home Minister- Basavaraja Bommai

The post ಖಾಸಗಿ  ಆಸ್ಪತ್ರೆಗಳಲ್ಲಿನ ಶೇ. 50 ರಷ್ಟು ಹಾಸಿಗೆ ಸ್ವಾಧೀನಕ್ಕೆ ಜಂಟಿ ಕಾರ್ಯಾಚರಣೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಭೂಸುಧಾರಣಾ ಕಾಯ್ದೆ ತಿದ್ದುಪಡಿಗೆ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ ವಿಚಾರ: ಸಿಎಂ ಬಿಎಸ್ ವೈ ಪ್ರತಿಕ್ರಿಯಿಸಿದ್ದು ಹೀಗೆ…
ಬೆಂಗಳೂರು,ಜೂ,13,2020(www.justkannada.in):  ಸರ್ಕಾರ ಜಾರಿಗೆ ತರಲು ಹೊರಟಿರುವ ಭೂಸುಧಾರಣಾ ಕಾಯ್ದೆ ತಿದ್ದುಪಡಿಗೆ ಮಾಜಿ ಸಿಎಂ ಸಿದ್ಧರಾಮಯ್ಯ ವಿರೋಧ ವ್ಯಕ್ತಪಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ, ಕಾಯ್ದೆ ಜಾರಿಗೆ ತರಲು ಸಿದ್ಧರಾಮಯ್ಯ ಸಹಕರಿಸಬೇಕು ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಹಲವು ಅನುಕೂಲಗಳಿವೆ. ಇದರಿಂದ ಯಾರೂ ಬೇಕಾದರೂ ಭೂಮಿ ಖರೀದಿಸಬಹುದು. ಕೃಷಿ ಚಟುವಟಿಕೆಗೆ ಅನುಕೂಲವಾಗಲಿದೆ. ರೈತರ ಭೂಮಿಗೆ ಉತ್ತಮ ಬೆಲೆ ಸಿಗುತ್ತದೆ ಎಂದು ನುಡಿದರು.

ಹೀಗಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಜಾರಿಗೆ ಸಹಕರಿಸಬೇಕು. ಇದುಮುಂದೆ ಸಿದ್ಧರಾಮಯ್ಯ ಅವರಿಗೆ ಗೊತ್ತಾಗುತ್ತದೆ. ಕಾಯ್ದೆಗೆ ತಿದ್ದುಪಡಿ ತರುತ್ತಿರುವುದನ್ನ ಎಲ್ಲರೂ ಸ್ವಾಗತಿಸುತ್ತಿದ್ದರೆ. ಸಿದ್ಧರಾಮಯ್ಯ ಜತೆ ನಾನು ಚರ್ಚೆ ಮಾಡುತ್ತೇನೆ. ಈ ಬಗ್ಗೆ ಅವರಿಗೆ ಮನವರಿಕೆ ಮಾಡಿಕೊಡುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

Key words: Former CM- Siddaramaiah -opposes Land –Acquisition- Act-CM BS Yeddyuarappa

The post ಭೂಸುಧಾರಣಾ ಕಾಯ್ದೆ ತಿದ್ದುಪಡಿಗೆ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ ವಿಚಾರ: ಸಿಎಂ ಬಿಎಸ್ ವೈ ಪ್ರತಿಕ್ರಿಯಿಸಿದ್ದು ಹೀಗೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.