also Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ನವವಿವಾಹಿತೆ ಸೂಸೈಡ್ ಕೇಸ್: ಪತಿಯೂ ಆತ್ಮಹತ್ಯೆ, ಅತ್ತೆ ಸ್ಥಿತಿ ಗಂಭೀರ
ಬೆಂಗಳೂರು, ಡಿಸೆಂಬರ್,27,2025 (www.justkannada.in): ಬೆಂಗಳೂರಿನಲ್ಲಿ ನವವಿವಾಹಿತೆ ಗಾನವಿ (26) ಆತ್ಮಹತ್ಯೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಗಾನವಿಯ ಪತಿ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಾಗೆಯೇ ಗಾನವಿಯ ಅತ್ತೆ ಸಹ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದಾರೆ.

ಹೌದು ನವವಿವಾಹಿತೆ ಗಾನವಿ ಆತ್ಮಹತ್ಯೆ ಬೆನ್ನಲ್ಲೇ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದು, ಮಗನ ಸಾವಿನ ಸುದ್ದಿ ತಿಳಿದು ಆತನ ತಾಯಿಯೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸೂರಜ್ ಮತ್ತು ಗಾನವಿ ಎರಡು ತಿಂಗಳ ಹಿಂದಷ್ಟೆ ಮದುವೆಯಾಗಿ ಹನಿಮೂನ್‌ ಗೆ ಶ್ರೀಲಂಕಾಗೆ ತೆರಳಿದ್ದರು. ಆದರೆ ಅಲ್ಲಿ ದಂಪತಿ ನಡುವೆ ಕಲಹಗಳು ಏರ್ಪಟ್ಟಿತ್ತು. ಹನಿಮೂನ್ ಮಧ್ಯದಲ್ಲೇ ಮೊಟಕುಗೊಳಿಸಿ ಗಾನವಿ ಬೆಂಗಳೂರಿಗೆ ವಾಪಸ್ ಆಗಿದ್ದರು. ಶ್ರೀಲಂಕಾದಿಂದ ವಾಪಸ್ ಆದ ಬಳಿಕ ಗಾನವಿ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.

ಈ ಸಂಬಂಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಮಹಾರಾಷ್ಟ್ರದಲ್ಲಿ ಪತಿ ಸೂರಜ್ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದೆ ಗಾನವಿಯ ಸಾವಿನ ಬಳಿಕ ಸೂರಜ್ ತಾಯಿ ಜಯಂತಿ ಹಾಗೂ ಸಹೋದರ ಸಂಜಯ್ ಜೊತೆ ನಾಗಪುರಕ್ಕೆ ತೆರಳಿದ್ದರು. ಪತ್ನಿಯ ಆತ್ಮಹತ್ಯೆಯ ವಿಚಾರದಲ್ಲಿ ಆಕೆಯ ಪೋಷಕರು ಹಾಗೂ ಸಂಬಂಧಿಕರ ಆಕ್ರೋಶ ಮತ್ತು ಅವರಿಂದಾದ ಅವಮಾನ ತಡೆಯಲಾಗದೆ ಸೂರಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದ್ದು ಆತನ ತಾಯಿ ಆತ್ಮಹತ್ಯೆಗೆ ಯತ್ನಿಸಿ ನಾಗಾಪುರದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

Key words: Wife, suicide case, Husband, also, commits, suicide

The post ನವವಿವಾಹಿತೆ ಸೂಸೈಡ್ ಕೇಸ್: ಪತಿಯೂ ಆತ್ಮಹತ್ಯೆ, ಅತ್ತೆ ಸ್ಥಿತಿ ಗಂಭೀರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ- ಶಾಸಕ ಹೆಚ್.ಸಿ ಬಾಲಕೃಷ್ಣ
ಬೆಂಗಳೂರು,ಅಕ್ಟೋಬರ್,15,2025 (www.justkannada.in):  ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಸಿಎಂ, ಡಿಸಿಎಂ ಮತ್ತು ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ ಎಂದು ಶಾಸಕ ಹೆಚ್.ಸಿ ಬಾಲಕೃಷ್ಣ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಹೆಚ್.ಸಿ ಬಾಲಕೃಷ್ಣ, ನನ್ನ ಹಿರಿತನ ಪರಿಗಣಿಸುತ್ತಾರೆ ಎಂಬ ವಿಶ್ವಾಸವಿದೆ. ನೋಡೋಣ. ರಾಜ್ಯದಲ್ಲಿ ಯಾವ ಕ್ರಾಂತಿಯೂ ನಡೆಯಲ್ಲ ಕ್ರಾಂತಿ ಆಗುತ್ತೆ ಎಂದು ಯಾರು ಹೇಳಿದ್ರು. ಸಿಎಂ ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು ಎಂದರು.

ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಒಂದು ಅವಕಾಶ ನೀಡುವ ವಿಶ್ವಾಸವಿದೆ. ಪಕ್ಷವನ್ನ ಅಧಿಕಾರಕ್ಕೆ ತರಲು ಡಿಕೆ ಶಿವಕುಮಾರ್ ಶ್ರಮ ವಹಿಸಿದ್ದಾರೆ.  ಡಿಕೆಶ ಶಿವಕುಮಾರ್ ಗೆ ಒಂದು ಅವಕಾಶ ನೀಡುವ ವಿಶ್ವಾಸವಿದೆ ಎಂದು ಹೆಚ್.ಸಿ ಬಾಲಕೃಷ್ಣ ತಿಳಿಸಿದರು.

Key words: I am, also, aspirant, ministerial post, MLA, H.C. Balakrishna

The post ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ- ಶಾಸಕ ಹೆಚ್.ಸಿ ಬಾಲಕೃಷ್ಣ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮರಿಗೌಡ ಅಷ್ಟೇ ಅಲ್ಲ ಸಚಿವ ಮಹದೇವಪ್ಪ ಕೂಡ ರಾಜೀನಾಮೆ ಕೊಡ್ತಾರೆ- ಸ್ನೇಹಮಯಿ ಕೃಷ್ಣ
ಮೈಸೂರು, ಅಕ್ಟೋಬರ್,16,2024 (www.justkannada.in):  ಮುಡಾ ಹಗರಣ ಸಂಬಂಧ ಮರಿಗೌಡ ಅಷ್ಟೇ ಅಲ್ಲ ಸಚಿವ ಮಹದೇವಪ್ಪ ಕೂಡ ರಾಜೀನಾಮೆ ಕೊಡ್ತಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.

ಮೈಸೂರಿನಲ್ಲಿ ಇಂದು ಮಾತನಾಡಿದ ಸ್ನೇಹಮಯಿ ಕೃಷ್ಣ, ನನ್ನ ಹೋರಾಟಕ್ಕೆ ಜಯ ಸಿಕ್ಕಿದೆ. ಮುಡಾ ಹಗರಣದಲ್ಲಿ ಎಲ್ಲರೂ ಕೂಡ ರಾಜೀನಾಮೆ ಕೊಟ್ಟು ಜೈಲಿಗೆ ಹೋಗುವ ಸಮಯ ಬರತ್ತೆ. ಸಚಿವ ಮಹದೇವಪ್ಪ ಕೂಡ ಅಕ್ರಮಗಳಿಗೆ ಸಹಕಾರ ನೀಡಿದ್ದಾರೆ. ಮಹದೇವಪ್ಪ ತಮ್ಮನ ಮಗ ನವೀನ್ ಬೋಸ್ ಹೆಸರಲ್ಲಿ ಸೆಟೆಲ್ ಮೆಂಟ್ ಡೀಡ್ ಮೂಲಕ ಸೈಟ್ ಪಡೆದುಕೊಂಡಿದ್ದಾರೆ. ಇದಕ್ಕೆ ಮಹದೇವಪ್ಪ ಸಹಕಾರ ಇದೆ ಎಂದರು.

ಸಿಎಂ ಸೂಚನೆ ಮೇರೆಗೆ ರಾಜೀನಾಮೆ ಕೊಟ್ಟಿದ್ದೇನೆ ಎಂಬ ಮರಿಗೌಡ ಹೇಳಿಕೆ ಸುಳ್ಳು. ತಪ್ಪು ಮಾಡಿದ್ದಾರೆ ರಾಜೀನಾಮೆ ಕೊಟ್ಟಿದ್ದಾರೆ. ಜನರಿಗೆ ಸುಳ್ಳು ಹೇಳುವ ಅವಶ್ಯಕತೆ ಇಲ್ಲ. ಮುಂದಿನ ದಿನಗಳಲ್ಲಿ ಇನ್ನೂ ಅನೇಕರು ರಾಜೀನಾಮೆ ಕೊಡ್ತಾರೆ . ಪ್ರಕರಣದಲ್ಲಿ ಸಿಎಂ ಸೇರಿ ಹಲವರು ರಾಜೀನಾಮೆ ಕೊಡ್ತಾರೆ ಎಂದು ಸ್ನೇಹಮಯಿ ಕೃಷ್ಣ ಹೇಳಿದರು.

ತಾಕತ್ತಿದ್ದರೆ ದಾಖಲೆ ಮುಂದಿಟ್ಟುಕೊಂಡು ಮಾತನಾಡಲಿ: ಎಂ.ಲಕ್ಷ್ಮಣ್ ಗೆ ಸವಾಲು

ತನ್ನ ವಿರುದ್ದ ವಾಗ್ದಾಳಿ ನಡೆಸಿ ಲೋಕಾಯುಕ್ತಕ್ಕೆ ದೂರು ನೀಡಿರುವ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ವಿರುದ್ದ ಕಿಡಿಕಾರಿದ ಸ್ನೇಹಮಯಿ ಕೃಷ್ಣ, ಎಂ.ಲಕ್ಷ್ಮಣ್ ಗೆ ಒಬ್ಬ ಅಯೋಗ್ಯ. ತಾಕತ್ತಿದ್ದರೆ ದಾಖಲೆ ಮುಂದಿಟ್ಟುಕೊಂಡು ಮಾತನಾಡಲಿ. ನಾಯಿ ಥರ ಬೊಗಳಿದರೆ ನಾನು ಕೇರ್ ಮಾಡಲ್ಲ. ಆನೆ ನಡೆಯುವಾಗ ನಾಯಿಗಳು ಬೊಗಳುತ್ತವೆ. ನಾನು ಇಂತಹವರಿಗೆ ಕೇರ್ ಮಾಡಲ್ಲ‌. ನನ್ನ ಹೋರಾಟ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿವೆ ಎಂದು ಕುಟುಕಿದರು.

ತಮ್ಮ ವಿರುದ್ಧ ಲೋಕಾಯುಕ್ತಕ್ಕೆ ಲಕ್ಷ್ಮಣ್ ದೂರು ವಿಚಾರ ಕುರಿತು ಪ್ರತಿಕ್ರಿಯಿಸಿದ ಸ್ನೇಹಮಯಿ ಕೃಷ್ಣ,  ಈ ಬೆದರಿಕೆಗೆ ನಾನು ಹೆದರುವುದಿಲ್ಲ. ಲಕ್ಷ್ಮಣ್ ಸಾಧನೆ ಏನು ? ಸುಖ ಸುಮ್ಮನೆ ಆರೋಪ ಮಾಡ್ತಾರೆ. ಒಂದು ದಾಖಲೆ ಬಿಡುಗಡೆ ಮಾಡಿಲ್ಲ. ನಾನು ಸವಾಲ್ ಹಾಕುತ್ತೇನೆ. ಲಕ್ಷ್ಮಣ್ ಗೆ ತಾಕ್ಕತ್ತಿದ್ರೆ ನನ್ನ ಮೇಲೆ ದಾಖಲೆ ಬಿಟ್ಟು ಮಾತನಾಡಲಿ. ನಾನೊಬ್ಬ ದೂರುದಾರ ನನ್ನ ಈ ರೀತಿ ಬೆದರಿಸಲು ನೋಡಿದ್ರೆ ನಾನು ಹೆದರಲ್ಲ. 100 ಕೋಟಿ ಕೇಳಿದ್ರು ಬ್ಲಾಕ್ ಮೇಲರ್ ಅಂತಾರೆ. ಯಾರಿಗೆ ಕೇಳಿದ್ದೆ ಕರೆದುಕೊಂಡು ಬನ್ನಿ ಅಂದರೆ ಮಾತೆ ಇಲ್ಲ. ಲಕ್ಷ್ಮಣ್ ದೂರು ನೀಡಿರುವ ಅರ್ಜಿಯನ್ನು ಕೋರ್ಟ್ ಗೆ ಸಲ್ಲಿಸುತ್ತೇನೆ . ಮುಂದಿನ ದಿನಗಳಲ್ಲಿ ಲಕ್ಷ್ಮಣ್ ಗೂ ಕೂಡ ಮುಡಾ ಕಂಟಕವಾಗಲಿದೆ ಎಂದು ಎಚ್ಚರಿಕೆ ನೀಡಿದರು.

Key words:, Minister, Mahadevappa, also, resign,  Snehamai Krishna

The post ಮರಿಗೌಡ ಅಷ್ಟೇ ಅಲ್ಲ ಸಚಿವ ಮಹದೇವಪ್ಪ ಕೂಡ ರಾಜೀನಾಮೆ ಕೊಡ್ತಾರೆ- ಸ್ನೇಹಮಯಿ ಕೃಷ್ಣ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾವಣ ಮಾತ್ರ ಅಲ್ಲ, ಸಿದ್ದರಾಮಯ್ಯ ಕೂಡ ರಾಮ ವಿರೋಧಿ –ಮಾಜಿ ಸಚಿವ ಸುನೀಲ್​ ಕುಮಾರ್​ ವಾಗ್ದಾಳಿ.
ಬೆಂಗಳೂರು, ಜನವರಿ,2,2024(www.justkannada.in):  ರಾವಣ ಮಾತ್ರ ಅಲ್ಲ, ಸಿದ್ದರಾಮಯ್ಯ ಕೂಡ ರಾಮನ ವಿರೋಧಿ ಎನ್ನುವುದನ್ನು ತೋರಿಸಿದ್ದಾರೆ ಎಂದು  ಶಾಸಕ ಹಾಗೂ ಮಾಜಿ ಸಚಿವ ವಿ.ಸುನೀಲ್ ಕುಮಾರ್ ಕಿಡಿಕಾರಿದ್ದಾರೆ.

ಕರಸೇವಕರ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಾಧ್ಯಮಗಳ ಜೊತೆ  ಮಾತನಾಡಿದ ಸುನೀಲ್ ಕುಮಾರ್, ರಾಮ ಮಂದಿರ ಉದ್ಘಾಟನೆಯಿಂದ ಇಡೀ ದೇಶವೇ ಖುಷಿ ಪಡುತ್ತಿದೆ. ಆದರೆ, ಸಿದ್ದರಾಮಯ್ಯ ಅವರು ಶ್ರೀಕಾಂತ ಪೂಜಾರಿ ಎಂಬುವವರನ್ನು ಬಂಧಿಸುವ ಮೂಲಕ ಅಪಶಕುನ ಮಾಡುತ್ತಿದ್ದಾರೆ.  ನಾನು ಪಟ್ಟಿ ಕೊಡುತ್ತೇನೆ, ನಿಮಗೆ ತಾಕತ್ ಇದ್ದರೆ ಕರಸೇವಕರನ್ನ ಬಂಧಿಸಿ. ನಾನೂ ಕರ ಸೇವೆಯಲ್ಲಿ ಭಾಗಿಯಾಗಿದ್ದೆ, ಬಂಧನ ಮಾಡಿದಾಕ್ಷಣ ಹಿಂದುತ್ವಕ್ಕೆ ಧಕ್ಕೆ ಮಾಡಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.

ಸರ್ಕಾರ ಹಿಂದುತ್ವದ ಪರ, ಹಿಂದೂಗಳ ಭಾವನೆ ಇದ್ದರೆ ನೂರು ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಲಿ. ಇನ್ನು ಮನೆ ಮನೆಗಳಲ್ಲಿ ದೀಪ ಬೆಳಗಿಸಿ ಎಂದು ಪ್ರಧಾನಿ ಕರೆ ಕೊಟ್ಟಿದ್ದಾರೆ. ಅದರಂತೆ ಸಿಎಂ ಹಾಗೂ ಸಚಿವರು ಕೂಡ ತಮ್ಮ ಮನೆಯಲ್ಲಿ ನಂದಾ ದೀಪ ಬೆಳಗಿಸಲಿ, ಸಿಎಂ ಕೂಡ ತಮ್ಮ ಕುಟುಂಬ ಸದಸ್ಯರ ಜೊತೆ ಸೇರಿ ದೀಪ ಹಚ್ಚಲಿ ಎಂದು  ಸುನೀಲ್ ಕುಮಾರ್ ಸಲಹೆ ನೀಡಿದರು.

Key words: Not only –Ravana- Siddaramaiah –also- anti-Rama – MLA-Sunil Kumar

The post ರಾವಣ ಮಾತ್ರ ಅಲ್ಲ, ಸಿದ್ದರಾಮಯ್ಯ ಕೂಡ ರಾಮ ವಿರೋಧಿ –ಮಾಜಿ ಸಚಿವ ಸುನೀಲ್​ ಕುಮಾರ್​ ವಾಗ್ದಾಳಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪಿಎಸ್ ಐ ಹಗರಣಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಕಾರಣ: ಸಂಪುಟದಿಂದ ವಜಾಗೊಳಿಸಿ- ಸಿದ‍್ಧರಾಮಯ್ಯ ಆಗ್ರಹ.
ಬೆಂಗಳೂರು,ಜುಲೈ,4,2022(www.justkannada.in): ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ADGP ಅಮೃತಪೌಲ್ ಬಂಧನವಾಗಿದ್ದು ಈ ಬೆನ್ನಲ್ಲೆ ಟ್ವಿಟ್ ಮಾಡಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ,  ಗೃಹ ಸಚಿ ಅರಗ ಜ್ಞಾನೇಂದ್ರ ಅವರನ್ನ ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ಧರಾಮಯ್ಯ, ಕಪಾಟಿನೊಳಗಿಂದ ಒಂದೊಂದೇ ಅಸ್ತಿಪಂಜರಗಳು ಹೊರಗೆ ಬೀಳುತ್ತಿವೆ. PSI ನೇಮಕಾತಿ ಹಗರಣದಲ್ಲಿ ADGP ಅಮೃತಪೌಲ್ ಬಂಧನವೇ ಇದಕ್ಕೆ ಸಾಕ್ಷಿ. ಹಗರಣವೇ ನಡೆದಿಲ್ಲ ಎಂದು ಮೈಮೇಲೆ ಬರುತ್ತಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ ಈಗ ಏನು ಹೇಳುತ್ತಾರೆ?

PSI ನೇಮಕಾತಿ ಹಗರಣದಲ್ಲಿ ಅಧಿಕಾರಿಗಳನ್ನು ಮಾತ್ರ ಹೊಣೆಮಾಡಿ ಜಾರಿಕೊಳ್ಳುವುದು ಬೇಡ. ಈ ಹಗರಣಕ್ಕೆ ಅಧಿಕಾರಿಗಳಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಕಾರಣ. ಸಿಎಂ ಬೊಮ್ಮಾಯಿ ಅವರು ಮೊದಲು ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಒತ್ತಾಯಿಸಿದ್ದಾರೆ.

Key words: Home Minister- Araga Gnanendra –also- responsible – PSI scam- Siddaramaiah

The post ಪಿಎಸ್ ಐ ಹಗರಣಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಕಾರಣ: ಸಂಪುಟದಿಂದ ವಜಾಗೊಳಿಸಿ- ಸಿದ‍್ಧರಾಮಯ್ಯ ಆಗ್ರಹ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವಿಧಾನಸೌಧ ಕಾರ್ಯಕ್ರಮದಲ್ಲಿ ಕನ್ನಡಕ್ಕೆ ಸಣ್ಣ ಜಾಗವೂ ಇಲ್ಲ : ರಾಜ್ಯ ಕಾಂಗ್ರೆಸ್ ಟ್ವೀಟ್
ಬೆಂಗಳೂರು,ಮಾರ್ಚ್,06,2021(www.justkannada.in) : ಕನ್ನಡವನ್ನು ವ್ಯವಸ್ಥಿತವಾಗಿ ತುಳಿಯುವ ನಾಗಪುರದ ಆದೇಶವನ್ನು  ಬಿ.ಎಸ್.ವೈ ಬಿಜೆಪಿ ಸರ್ಕಾರ ಶಿರಸಾವಹಿಸಿ ಪಾಲಿಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಟ್ವಿಟರ್ ನಲ್ಲಿ ಕಿಡಿಕಾರಿದೆ.

ವಿಧಾನಸೌಧದ ಎದುರು ಕರ್ನಾಟಕ ಸರ್ಕಾರದ ಕಾರ್ಯಕ್ರಮದಲ್ಲಿ ಕನ್ನಡಕ್ಕೆ ಸಣ್ಣ ಜಾಗವೂ ಇಲ್ಲದೇ ಹೋಯಿತೇ? ಬಹುಶಃ ಹಿಂದಿಯನ್ನೇ ರಾಜ್ಯದ ಆಡಳಿತ ಭಾಷೆಯನ್ನಾಗಿಸುವ ಬಿಜಪಿ ಪಕ್ಷದ ಹುನ್ನಾರವಿರುವಂತಿದೆ ಎಂದು ಅನುಮಾನವ್ಯಕ್ತಪಡಿಸಿದೆ.

keywords : vidanasowda-program-Kannada-also-no small-space-State-Congress-tweet

The post ವಿಧಾನಸೌಧ ಕಾರ್ಯಕ್ರಮದಲ್ಲಿ ಕನ್ನಡಕ್ಕೆ ಸಣ್ಣ ಜಾಗವೂ ಇಲ್ಲ : ರಾಜ್ಯ ಕಾಂಗ್ರೆಸ್ ಟ್ವೀಟ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರಿನ 11 ವಿಧಾನಸಭಾ ಕ್ಷೇತ್ರದಲ್ಲಿಯೂ “ಕಸಾಪ” ಗೆ ಸ್ವಂತ ಕಟ್ಟಡಕ್ಕೆ ಬದ್ಧ : ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು,ಫೆಬ್ರವರಿ,23,2021(www.justkannada.in) : ಕನ್ನಡದ ಉಳಿವು ಹಾಗೂ ಬೆಳವಣಿಗೆಗೆ ನಾನು ಹಾಗೂ ನಮ್ಮ ಸರ್ಕಾರ ಬದ್ಧವಿದೆ. ಈ ನಿಟ್ಟಿನಲ್ಲಿ ಮೈಸೂರು ಜಿಲ್ಲೆಯ ಹನ್ನೊಂದು ವಿಧಾನಸಭಾ ಕ್ಷೇತ್ರದಲ್ಲೂ ಸಹ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಗೆ ಸ್ವಂತ ನಿವೇಶನ, ಕಟ್ಟಡ ಕೊಡಿಸುವುದಕ್ಕೆ ನಾನು ಬದ್ಧವಾಗಿದ್ದೇನೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಹೆಚ್.ಡಿ.ಕೋಟೆಯಲ್ಲಿ ನಡೆಯುತ್ತಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲ ಹನ್ನೊಂದು ವಿಧಾನಸಭಾ ಕ್ಷೇತ್ರದಲ್ಲೂ ಸ್ವಂತ ಕಟ್ಟಡವನ್ನು ಕೊಡಬೇಕೆಂದು ಪ್ರಸ್ತಾವನೆ ಇಟ್ಟಿದ್ದಾರೆ. ಎಚ್.ಡಿ.ಕೋಟೆಯಲ್ಲೂ ಸಹ ನಿವೇಶನವನ್ನು ಕೊಡಬೇಕೆಂದು ಕೇಳಲಾಗಿದ್ದು, ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವನಾಗಿ ನಾನು ಸರ್ಕಾರದಿಂದ ಆದೇಶ ಹೊರಡಿಸಲು ಸ್ಪಂದಿಸುತ್ತೇನೆ ಎಂದು ವಿಶ್ವಾಸವ್ಯಕ್ತಪಡಿಸಿದರು.

ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆಗೆ ಜಿಲ್ಲಾ ಉಸ್ತುವಾರಿ ಸಚಿವನಾಗಿ ಆಗಮಿಸಿರುವುದು ನನಗೆ ಹೆಮ್ಮೆಯ ಹಾಗೂ ಸಂತಸದ ವಿಷಯ. ಕನ್ನಡ ಉಳಿವಿಗೆ ನಾವೆಲ್ಲರೂ ಬದ್ಧರಾಗಿದ್ದೇವೆ. ಈ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದರು.

ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಪ್ರೊ.ಎನ್.ಎಸ್.ತಾರಾನಾಥ್ ಅವರ ಬಗ್ಗೆ ಹೇಳಬೇಕೆಂದರೆ, ಅವರು ನಾಡಿನ ಹಿರಿಯ ವಿದ್ವಾಂಸರಾಗಿದ್ದಾರೆ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಲಭಿಸಬೇಕು ಎಂಬ ಕೂಗಿಗೆ ಅವರೂ ಧನಿಯಾಗಿದ್ದರು. ಕೊನೆಗೆ ಕನ್ನಡ ಶಾಸ್ತ್ರೀಯ ಭಾಷೆಯಾಗಲು ಇರುವ ಅರ್ಹತೆಯನ್ನು ತಿಳಿಸುವ ಸಮಗ್ರ ವರದಿಯನ್ನು ಸಿದ್ಧಪಡಿಸಲು ಆಗ ರಾಜ್ಯ ಸರ್ಕಾರ ರಚಿಸಿದ್ದ ಸಮಿತಿಯಲ್ಲಿ ಇವರೂ ಸಹ ಇದ್ದರು ಎಂದು ಹೇಳಿದರು.

ಕನ್ನಡದ ಎಲ್ಲ ಸಾಹಿತಿಗಳು, ಕವಿಗಳ ಹೋರಾಟದ ಫಲವಾಗಿ ಕೊನೆಗೂ ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ದೊರೆಯಿತು. ಹೀಗೆ, ಕನ್ನಡ ಎಂಬ ವಿಷಯ ಬಂದಾಗ ಎಲ್ಲರೂ ಒಗ್ಗಟ್ಟಾಗುವ ಗುಣ ತಾನಾಗಿಯೇ ಬರುತ್ತದೆ ಎಂದು ತಿಳಿಸಿದರು.

ಕೆಆರ್ ಎಸ್ ಬೃಂದಾವನ ಮಾದರಿಯ ಉದ್ಯಾನವನ; ಬಜೆಟ್ ನಲ್ಲಿ ಘೋಷಣೆ ಸಾಧ್ಯತೆ

ಕೆಆರ್‌ಎಸ್ ನಲ್ಲಿರುವ ಬೃಂದಾವನ ಉದ್ಯಾನದಂತೆ ಕಬಿನಿಯಲ್ಲೂ 48 ಕೋಟಿ ವೆಚ್ಚದಲ್ಲಿ ಉದ್ಯಾನವನ ನಿರ್ಮಿಸಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ. ಬರುವ ಬಜೆಟ್ ನಲ್ಲಿ ಇದು ಘೋಷಣೆಯಾಗುವ ಸಾಧ್ಯತೆ ಇದೆ ಎಂದರು.

ಎಚ್.ಡಿ.ಕೋಟೆಯಲ್ಲಿ ಮಳೆ ಬಂದಾಗ ಪ್ರವಾಹ ಉಂಟಾಗಿ ರಸ್ತೆ ಸಂಪರ್ಕ ಸ್ಥಗಿತವಾಗುವ ಬಗ್ಗೆ  ಗಮನಕ್ಕೆ ತಂದಿದ್ದರಿಂದ ಸೇತುವೆ ಹಾಗೂ ರಸ್ತೆ ನಿರ್ಮಾಣಕ್ಕೆ ಈಗಾಗಲೇ ಅನುಮೋದನೆ ದೊರಕಿಸಿಕೊಡಲಾಗಿದೆ. ಅಲ್ಲದೆ, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಾನು ಹಾಗೂ ನಮ್ಮ ಸರ್ಕಾರ ಬದ್ಧವಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಮ್ಮೇಳನಾಧ್ಯಕ್ಷ ಪ್ರೊಫೆಸರ್ ಎನ್.ಎಸ್.ತಾರಾನಾಥ, ಜಿಲ್ಲಾ ಕಸಾಪ ಅಧ್ಯಕ್ಷ  ಡಾ.ವೈ.ಡಿ.ರಾಜಣ್ಣ, ಹೆಚ್.ಡಿ.ಕೋಟೆ ತಾಲ್ಲೂಕು ಕಸಾಪ ಅಧ್ಯಕ್ಷ ಕನ್ನಡ ಪ್ರಮೋದ, ಶಾಸಕ  ಅನಿಲ್ ಚಿಕ್ಕಮಾದು, ಸಂಸದ ಶ್ರೀನಿವಾಸ್ ಪ್ರಸಾದ್ ಸೇರಿದಂತೆ ಅನೇಕ ಸಾಹಿತಿಗಳು ಉಪಸ್ಥಿತರಿದ್ದರು.

key words :  Mysore-11 Assembly-Also-field-“Kasapa”-own building-Commit-Minister-S.T.Somashekhar

The post ಮೈಸೂರಿನ 11 ವಿಧಾನಸಭಾ ಕ್ಷೇತ್ರದಲ್ಲಿಯೂ “ಕಸಾಪ” ಗೆ ಸ್ವಂತ ಕಟ್ಟಡಕ್ಕೆ ಬದ್ಧ : ಸಚಿವ ಎಸ್.ಟಿ.ಸೋಮಶೇಖರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜನ ರೊಚ್ಚಿಗೆದ್ದು “ಕತ್ತಿ” ಬೀಸಿದರೆ ಇದ್ದ ಕುರ್ಚಿಯೂ ಬಿಡಬೇಕಾದೀತು : ವಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಕೆ
ಬೆಂಗಳೂರು,ಫೆಬ್ರವರಿ,16,2021(www.justkannada.in) :  ಸಚಿವ ಉಮೇಶ್ ಕತ್ತಿಯವರೇ, ನಿಮ್ಮ ಅಧಿಕಪ್ರಸಂಗತನದ ವಿರುದ್ಧ ಜನ ರೊಚ್ಚಿಗೆದ್ದು ಕತ್ತಿ ಬೀಸಿದರೆ ಇದ್ದ ಕುರ್ಚಿಯೂ ಬಿಡಬೇಕಾದೀತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಕ್ರೋಶವ್ಯಕ್ತಪಡಿಸಿದ್ದಾರೆ.ಸಚಿವ ಉಮೇಶ್ ಕತ್ತಿಯವರೇ, ಈಗ ಕಷ್ಟಪಟ್ಟು ಗಳಿಸಿರುವ ಮಂತ್ರಿಸ್ಥಾನದಲ್ಲಿ ಕೂತು ಜನತೆಗೆ‌ ಒಳ್ಳೆಯದನ್ನು ಮಾಡಿ.

ನಿಮ್ಮದೇ ಒಂದು ರಾಜ್ಯ ಕಟ್ಟಿ ನೀವೇ ಮುಖ್ಯಮಂತ್ರಿಗಳಾದಾಗ ಇಂತಹ ತುಘಲಕ್ ದರ್ಬಾರ್ ನಡೆಸಿ ಎಂದು ಕಿಡಿಕಾರಿದ್ದಾರೆ.

key words : People-angry-Sword-blowing-chair-should-also-left-Opposition-leader-Siddaramaiah-Warning

The post ಜನ ರೊಚ್ಚಿಗೆದ್ದು “ಕತ್ತಿ” ಬೀಸಿದರೆ ಇದ್ದ ಕುರ್ಚಿಯೂ ಬಿಡಬೇಕಾದೀತು : ವಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಜೆಡಿಎಸ್ ಕೂಡ ಅವಕಾಶವಾದಿ ರಾಜಕಾರಣ ಮಾಡುತ್ತಿದೆ” : ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್
ಮೈಸೂರು,ಜನವರಿ,31,2021(www.justkannada.in) : ಜೆಡಿಎಸ್ ಕೂಡ ಅವಕಾಶವಾದಿ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ಜೆಡಿಎಸ್ ಗೆ ಎಲ್ಲಾ ರೀತಿಯಲ್ಲೂ ಸಹಾಯ ಮಾಡಿದೆ. ಕಾಂಗ್ರೆಸ್ ನಿಂದ ಒಂದು ಅಂಶವೂ ಜೆಡಿಎಸ್ ಗೆ ಅನ್ಯಾಯವಾಗಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್ ಹೇಳಿದರು.ಶಾಸಕರ ವಿಶ್ವಾಸ ಗಳಿಸಿದ್ದರೆ ಕುಮಾರಸ್ವಾಮಿ ಐದು ವರ್ಷ ಸಿಎಂ ಆಗಿ ಇರುತ್ತಿದ್ದರು. ಜೆಡಿಎಸ್ ಹಾಗೂ ಬಿಜೆಪಿ ಇಬ್ಬರು ಸಹ ಗೋಲ್ಡನ್ ಅವಕಾಶ ಕಳೆದುಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.

key words : JDS-Also-opportunistic-Politics-Doing-KPCC President-Dhruvanarayan

The post “ಜೆಡಿಎಸ್ ಕೂಡ ಅವಕಾಶವಾದಿ ರಾಜಕಾರಣ ಮಾಡುತ್ತಿದೆ” : ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

2021 ಕೂಡ ವೈದ್ಯರು, ಅರೆ ವೈದ್ಯ ಸಿಬ್ಬಂದಿಗೆ ಸವಾಲಿನ ವರ್ಷ –ಡಿಸಿಎಂ ಅಶ್ವಥ್ ನಾರಾಯಣ್…
ಬೆಂಗಳೂರು,ಜನವರಿ,22,2021(www.justkannada.in):  ಕೋವಿಡ್‌-19 ಸಂಕಷ್ಟ ಕಾಲದಲ್ಲಿ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ ವೈದ್ಯಕೀಯ, ಅರೆ ವೈದ್ಯಕೀಯ ಸಿಬ್ಬಂದಿ 2021ರಲ್ಲಿ ಮತ್ತಷ್ಟು ಸವಾಲುಗಳನ್ನು ಎದುರಿಸಲು ಸಜ್ಜಾಗಬೇಕಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಹೇಳಿದರು.

ಬೆಂಗಳೂರಿನ ಹೊಸಕೋಟೆ ಸಮೀಪದ ಎಂವಿಜೆ ವೈದ್ಯಕೀಯ ಕಾಲೇಜಿನ 12ನೇ ಘಟಿಕೋತ್ಸವದಲ್ಲಿ ಶುಕ್ರವಾರ  ಮಾತನಾಡಿದ  ಡಿಸಿಎಂ ಅಶ್ವಥ್ ನಾರಾಯಣ್, ಮುಂದಿನ ದಿನಗಳು ಹೆಚ್ಚು ಸವಾಲಿನಿಂದ ಕೂಡಿವೆ. ಯಾರೂ ಆ ಸಮಸ್ಯೆಗೆ ಬೆನ್ನು ತಿರುಗಿಸಬಾರದು. ಎಲ್ಲರೂ ಒಟ್ಟಾಗಿ ಹೋರಾಟ ಮಾಡದಿದ್ದರೆ ವೈರಸ್‌ ಮಾರಿಯನ್ನು ಗೆಲ್ಲಲು ಸಾಧ್ಯವಿಲ್ಲ. ವ್ಯಾಕ್ಸಿನ್‌ ಬಂದಿದ್ದರೂ ನಾವು ಸದಾ ಎಚ್ಚರದಿಂದ ಇರಬೇಕು ಎಂದರು.

ನಾನೂ ಒಬ್ಬ ವೈದ್ಯನಾಗಿ ಸಂಕಷ್ಟ ಕಾಲದಲ್ಲಿ ವೈದ್ಯರು ಎದುರಿಸುವ ಸಮಸ್ಯೆಗಳನ್ನು ಬಲ್ಲೆ. ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದ ಹೊತ್ತಿನಲ್ಲಿ ಸೋಂಕಿನ ಭೀತಿಯಿಂದ ಬಾಡಿಗೆ ಮನೆ, ವಸತಿ ಸಮುಚ್ಛಯಗಳಲ್ಲಿ ವಾಸವಿದ್ದ ವೈದ್ಯರು, ಅರೆವೈದ್ಯ ಸಿಬ್ಬಂದಿಯನ್ನು ಖಾಲಿ ಮಾಡಿಸಿದ ಅಮಾನವೀಯ ಘಟನೆಗಳು ನಡೆದಿವೆ. ಈ ಬಗ್ಗೆ ನನಗೆ ನೋವಿದೆ. ಆದರೆ, ಇವರೆಲ್ಲರೂ ತಮ್ಮ ವೈಯಕ್ತಿಕ ಸಮಸ್ಯೆಗಳನ್ನು ಪಕ್ಕಕ್ಕಿಟ್ಟು ಜನರ ಸೇವೆ ಮಾಡಿದರು. ಜೀವದ ಹಂಗು ತೊರೆದು ಕ್ವಾರಂಟೈನ್‌ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸಿದರು ಎಂದು ಡಿಸಿಎಂ ಅಶ್ವಥ್ ನಾರಾಯಣ್ ಮೆಚ್ಚುಗೆ ವ್ಯಕ್ತಪಡಿಸಿದರು.

ವೈದ್ಯಸೇವೆ ಎಂದರೆ ಹಣ ಮಾಡುವುದಲ್ಲ. ಸೇವಾ ಮನೋಭಾವ ಇಲ್ಲದಿದ್ದರೇ ಇದಕ್ಕೆ ಅರ್ಥವೇ ಇಲ್ಲ. ಇಂಥ ಸೇವಾ ತತ್ಪರತೆಯನ್ನು ನಾನು ಕೋವಿಡ್ ಕಾಲದಲ್ಲಿ ನೋಡಿದ್ದೇವೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದರು.

ವಿದ್ಯಾರ್ಥಿಗಳಿಗೆ ಕಿವಿಮಾತು…

ತಮ್ಮ ಘಟಿಕೋತ್ಸವ ಭಾಷಣದಲ್ಲಿ ಮುಖ್ಯವಾಗಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸೇವಾ ಮನೋಭಾವ ಹಾಗೂ ಕರ್ತವ್ಯನಿಷ್ಠೆಯ ಪಾಠ ಮಾಡಿದ ಡಾ.ಅಶ್ವತ್ಥನಾರಾಯಣ್; ಪ್ರತಿಯೊಬ್ಬರಿಗೂ ವಿದ್ಯಾರ್ಥಿ ಜೀವನ ಬಹಳ ಮುಖ್ಯವಾಗಿರುತ್ತದೆ. ಈ ಸಂದರ್ಭದಲ್ಲಿ ತಮ್ಮ ಗುರಿ ಏನು? ನಮಗಾಗಿ ನಮ್ಮ ಪೋಷಕರು ಎಷ್ಟೆಲ್ಲ ತ್ಯಾಗ ಮಾಡಿದ್ದಾರೆ ಎಂಬುದನ್ನು ಮರೆಯಬಾರದು. ಕ್ಯಾಂಪಸ್‌ನಿಂದ ಹೊರಡುವಾಗ ನಮ್ಮ ಗುರಿಯನ್ನು ಸಾಧಿಸಿಕೊಂಡೇ ಹೊರಬೀಳಬೇಕು ಎಂದು ಕಿವಿಮಾತು ಹೇಳಿದರು.

ನೀವು ಈಗ ನಿಮ್ಮ ಜೀವನದ ಬಹುದೊಡ್ಡ ತಿರುವಿನಲ್ಲಿ ನಿಂತಿದ್ದೀರಿ ಹಾಗೂ ಮುಂದೆ ನಿರ್ಧಾರಗಳನ್ನು ಕೈಗೊಳ್ಳುವ ಹಂತಕ್ಕೆ ಹೋಗುತ್ತಿದ್ದೀರಿ. ದೊಡ್ಡ ದೊಡ್ಡ ವ್ಯವಸ್ಥೆಗಳ ಭಾಗವಾಗುತ್ತೀರಿ ಎಂಬುದನ್ನು ಮನಗಾಣಬೇಕು. ನಾನೊಬ್ಬ ವೈದ್ಯಕೀಯ ವಿದ್ಯಾರ್ಥಿಯಾಗಿಯೂ ನಿಮಗೆ ಈ ಮಾತುಗಳನ್ನು ಹೇಳುತ್ತಿದ್ದೇನೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದರು.

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ,‌ ಎಂವಿಜೆ ಮೆಡಿಕಲ್‌ ಕಾಲೇಜ್‌ ಮತ್ತು ಆಸ್ಪತ್ರೆಯ ಅಧ್ಯಕ್ಷ  ಡಾ.ಎಂ.ಜೆ.ಮೋಹನ್, ಸಿಇಒ ಡಾ.ಎಂ.ಧರಣಿ ಹಾಗೂ ಪ್ರಾಂಶುಪಾಲ ಡಾ.ಡಾ.ಬಿ.ರವಿಚಂದರ್‌ ಮತ್ತಿತರರು ಹಾಜರಿದ್ದರು.

Key words: 2021 – also – challenging year – doctors – paramedics- DCM- Ashwath Narayan.

The post 2021 ಕೂಡ ವೈದ್ಯರು, ಅರೆ ವೈದ್ಯ ಸಿಬ್ಬಂದಿಗೆ ಸವಾಲಿನ ವರ್ಷ –ಡಿಸಿಎಂ  ಅಶ್ವಥ್ ನಾರಾಯಣ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.