approval | Just Kannada - Daily News Updates
ಮಂಗಳೂರಿನಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆ: 32,611 ಕೋಟಿ ರೂ. ಯೋಜನೆಗಳಿಗೆ ಅನುಮೋದನೆ
ಮಂಗಳೂರು, ಸೆಪ್ಟೆಂಬರ್,19,2026 (www.justkannada.in):  ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಮಹತ್ವದ ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ  ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ 2026, 150 ಎಕರೆ ಪ್ರದೇಶದಲ್ಲಿ ಮೀನುಗಾರಿಕೆ ಪಾರ್ಕ್ ನಿರ್ಮಾಣ ಸೇರಿದಂತೆ 32,611 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಂಗಳೂರಿನಲ್ಲಿ ಶುಕ್ರವಾರ ನಡೆದ  ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದ ಸಿಎಂ ಡಿ.ಕೆ. ಶಿವಕುಮಾರ್,  ಇದರಲ್ಲಿ 16,000 ಕೋಟಿ ರೂ. ಗ್ರಾಮೀಣಾಭಿವೃದ್ಧಿ ಯೋಜನೆಯಾಗಿದ್ದು, ಉಳಿದ ಮೊತ್ತ ಕರಾವಳಿ ಜಿಲ್ಲೆಗಳಿಗೆ ಸಂಬಂಧಿಸಿದೆ ಎಂದು ವಿವರಿಸಿದರು.
ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ತುಳು
ನಮ್ಮ ಸರ್ಕಾರ ಜನರ ಭಾವನೆಯನ್ನು ಗೌರವಿಸಿದೆ.   ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತುಳು ಭಾಷೆ ಎರಡನೇ ಆಡಳಿತ  ಭಾಷೆಯಾಗಿ ಘೋಷಣೆಯಾಗಬೇಕೆನ್ನುವ ಬೇಡಿಕೆ ಬಹಳ ದಿನಗಳದ್ದು. ಹಿಂದಿನವರು ಈ ತೀರ್ಮಾನ ಏಕೆ ಮಾಡಲಿಲ್ಲ ಎಂದು ಚರ್ಚಿಸುವುದಿಲ್ಲ. ಟೀಕೆಗಳು ಸಾಯುತ್ತವೆ ಕೆಲಸಗಳು ಉಳಿಯುತ್ತವೆ. ಸಭೆಯಲ್ಲಿ ಅನೇಕ ಸಲಹೆಗಳು ಬಂದಿವೆ.
ಬದ್ಧತೆ ಇರುವ ಸರ್ಕಾರ
ನಮಗೆ ಬದ್ಧತೆ ಇದೆ. ನಾವು ಜನರ  ಭಾವನೆ ಮೇಲಲ್ಲ.  ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ. ಭಾವನೆಗಳ ಆಧಾರದ ಮೇಲೆ ಸಮಾಜ ಕಟ್ಟಲ್ಲ. ಸಾಮಾಜಿಕ ಆರ್ಥಿಕ ಶಕ್ತಿ ತುಂಬಿ ಬದುಕು ಕಟ್ಟಿಕೊಡಲಾಗುವುದು ಎಂದು ತಿಳಿಸಿದರು.
ಅವಶ್ಯತೆ ಇದ್ದಲ್ಲಿ ಆರ್ಥಿಕ ಹಾಗೂ  ಕಾನೂನು ಚೌಕಟ್ಟು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ  ಸಚಿವ ಸಂಪುಟ ಸಭೆ ನಡೆಸುವ ತೀರ್ಮಾನ ಮಾಡಿ ಆಗ ಅಗತ್ಯವಿರುವ ವಿಚಾರಗಳ ಬಗ್ಗೆ ತೀರ್ಮಾನಿಸಲಾಗುವುದು. ಇದು ಟೀಮ್ ಕರ್ನಾಟಕ. ಸಚಿವ ಸಂಪುಟ ನಿಮ್ಮ ಜೊತೆ ಇದೆ. ತುಳು ಭಾಷೆಯನ್ನು ಉಡುಪಿ  ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಸೀಮಿತವಾಗಿ ರಾಜ್ಯದ ಹೆಚ್ಚುವರಿ  ಆಡಳಿತ ಭಾಷೆಯಾಗಿ ಘೋಷಣೆ ಮಾಡಲಾಗುವುದು.
ಮಾಜಿ ಸಚಿವ ರಮಾನಾಥ ರೈ ಅವರು ತುಳು ಭಾಷೆಗೆ 2 ನೇ  ಹೆಚ್ಚುವರಿ ಭಾಷೆಯಾಗಿ ಘೋಷಿಸಲು ಮೊದಲು ಬೇಡಿಕೆ ಇಟ್ಟಿದ್ದರು ಎಂದು ಸ್ಮರಿಸಿದರು.  ಸಚಿವ ಯು.ಟಿ. ಖಾದರ್‌, ಶಾಸಕ ಅಶೋಕ್‌ ಕುಮಾರ್‌ ರೈ ಸೇರಿದಂತೆ ಹಲವು ಜನಪ್ರತಿನಿಧಿಗಳು ಒಟ್ಟಾಗಿ ಒತ್ತಡ ಹೇರಿದ್ದರು ಎಂದು ಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದರು.
ತುಳು ಭಾಷೆ ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಅಂಗೀಕರಿಸಿದ ಹಿನ್ನೆಲೆಯಲ್ಲಿ ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ಸಿಎಂ ಡಿಕೆ ಶಿವಕುಮಾರ್ ಅಭಿನಂದಿಸಿದರು.
ದಕ್ಷಿಣ ಕನ್ನಡಕ್ಕೆ ಮಂಗಳೂರು ಮರುನಾಮಕರಣ: ಜನಾಭಿಪ್ರಾಯ ಸಂಗ್ರಹ
ಮಂಗಳೂರಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಇದೆ. ದಕ್ಷಿಣ ಕನ್ನಡದ ಬದಲಿಗೆ ಮಂಗಳೂರು ಎಂದು ಹೆಸರಿಸುವ ಬಗ್ಗೆ ಜನಾಭಿಪ್ರಾಯ ಪಡೆದು ತೀರ್ಮಾನಿಸಲಾಗುವುದು. ಕರಡು ಅಧಿಸೂಚನೆ ಹೊರಡಿಸಿ ಒಂದು ತಿಂಗಳ ಅವಧಿ ನೀಡಿ, ಜನರ ಭಾವನೆ, ಜನರ ಅಭಿಪ್ರಾಯ ಪಡೆದು ತೀರ್ಮಾನಿಸಲಾಗುವುದು ಎಂದರು.
ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ
ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈವರೆಗಿನ ಎಲ್ಲಾ ನೀತಿಗಳಿಗಿಂತ ಭಿನ್ನವಾದ ನೀತಿ ಇದಾಗಲಿದೆ. ಹೂಡಿಕೆದಾರರಿಗೆ ಹೆಚ್ಚಿನ ಶಕ್ತಿ ಹಾಗೂ ಸಾಲ  ಮರುಪಾವತಿಗೆ ಸಮಯಾವಕಾಶ ನೀಡಲಾಗುವುದು. ಮಲೆನಾಡು ಒಳಗೊಂಡಂತೆ  ಕರಾವಳಿ ಪ್ರದೇಶದಲ್ಲಿ ಹೊಸ ಪ್ರವಾಸೋದ್ಯಮ ನೀತಿ ಮೂಲಕ ಪ್ರವಾಸೋದ್ಯಮ ಯೋಜನೆಗಳನ್ನು ಮೂಲಸೌಕರ್ಯ ಯೋಜನೆಗಳೆಂದು ಪರಿಗಣಿಸಲಾಗುವುದು. ಅಲ್ಲದೆ ಅನೇಕ ಪ್ರೋತ್ಸಾಹಕಗಳನ್ನು ನೀಡಲು  ಯೋಜಿಸಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್  ಅವರು ತಿಳಿಸಿದರು.
ಮೀನುಗಾರಿಕಾ ವಿಶ್ವವಿದ್ಯಾಲಯ
ಮೀನುಗಾರಿಕೆಗೆ ಸಂಬಂಧಿಸಿದಂತೆ  Fisheries,  Blue economy university ಯನ್ನು ಸ್ಥಾಪಿಸಲಾಗುವುದು. ಪ್ರಸ್ತುತ ಮೀನುಗಾರಿಕಾ ಕಾಲೇಜಿನ ವಿದ್ಯಾರ್ಥಿಗಳ ಪ್ರವೇಶವನ್ನು 60 ರಿಂದ 200 ಸೀಟುಗಳಿಗೆ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದರು.
ಈ ಭಾಗದಲ್ಲಿ ಕಿದ್ವಾಯಿ,  ಜಯದೇವ ಆಸ್ಪತ್ರೆಗೆ ಬೇಡಿಕೆ ಬಂದಿದೆ ಎಂದು ತಿಳಿಸಿದ ಅವರು ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ 549 ಕೋಟಿ ರೂ. ಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ 10-12 ಕಡೆ ಸಚಿವ ಸಂಪುಟ ಸಭೆ
ಬೆಂಗಳೂರಿನಿಂದಾಚೆಗೆ ಮಂಗಳೂರಿನಲ್ಲಿ ಮೊದಲ ಬಾರಿ ಸಚಿವ ಸಂಪುಟ ಸಭೆ ನಡೆಸಿರುವುದು ಸ್ವಾಗತಾರ್ಹ. ಇತರ ಜಿಲ್ಲೆಗಳಲ್ಲೂ ಸಚಿವ ಸಂಪುಟ ಸಭೆ ನಡೆಸುವಿರಾ? ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ ಡಿಕೆ ಶಿವಕುಮಾರ್, ಮುಂದಿನ 15 ತಿಂಗಳ ಅವಧಿಯಲ್ಲಿ 10 – 12 ಸ್ಥಳಗಳಲ್ಲಿ ಸಚಿವ ಸಂಪುಟ ಸಭೆ ನಡೆಸುವ ಉದ್ದೇಶವಿದೆ. ಎಲ್ಲಿ ಸಾಮರ್ಥ್ಯವಿದೆ, ಅಗತ್ಯವಿದೆ- ಅಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗುವುದು ಎಂದು ಅವರು ತಿಳಿಸಿದರು.
ಸಮಗ್ರ ಕರ್ನಾಟಕ, ಸಮೃದ್ಧ ಕರ್ನಾಟಕವಾಗಿಸುವುದು ನಮ್ಮ ಗುರಿ ಎಂದು ಅವರು ವಿವರಿಸಿದರು.
ದೇಶದಲ್ಲೇ ಗಮನ ಸೆಳೆದ ದಕ್ಷಿಣ ಕನ್ನಡ
ಇಂದು ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ವಿವಿಧ ಆಯಾಮದ ಅಭಿವೃದ್ಧಿ ಯೋಜನೆಗಳನ್ನು ನೀಡುತ್ತಿದ್ದೀರಿ. ರಾಜ್ಯದ ಇತರ ಭಾಗಗಳಿಗೂ ಇದನ್ನು ವಿಸ್ತರಿಸುವಿರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಖಂಡಿತವಾಗಿ ವಿಸ್ತರಿಸಲಾಗುವುದು ಎಂದರು. ಜೊತೆಗೆ ದಕ್ಷಿಣ ಕನ್ನಡ ಧಾರ್ಮಿಕವಾಗಿ, ಶೈಕ್ಷಣಿಕವಾಗಿ ದೇಶದಲ್ಲೇ ಗಮನ ಸೆಳೆದಿದೆ. ದೇಶಕ್ಕೆ 6 ರಾಷ್ಟ್ರೀಕೃತ ಬ್ಯಾಂಕುಗಳನ್ನು ನೀಡಿ ಆರ್ಥಿಕ ಶಕ್ತಿಯನ್ನು ಹೊಂದಿರುವ ಸ್ಥಳವಿದು. ಬಂದರುಗಳಿವೆ. ಶಿಕ್ಷಣ, ಆರೋಗ್ಯ ಕ್ಷೇತ್ರಗಳ ಪ್ರಮುಖ ಕೇಂದ್ರವಾಗಿದೆ ಎಂದು ವಿವರಿಸಿದರು.
ಕಸ್ತೂರಿ ರಂಗನ್ ವರದಿ: ಸಭೆಗಳಲ್ಲಿ ಭಾಗಿ
ಇಂದು ಹೆಬ್ರಿಯಲ್ಲಿ ಕಸ್ತೂರಿರಂಗನ್ ವರದಿ ಬಗ್ಗೆ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ನಾಳೆ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜನರ ಅಭಿಪ್ರಾಯ ಪಡೆಯಲಾಗುವುದು ಎಂದು ತಿಳಿಸಿದರು.
ಪ್ರಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನತೆ ತೋರಿಸಿದ ಅಭಿಮಾನ, ಸ್ವಾಗತಕ್ಕೆ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿಗಳು, ದಕ್ಷಿಣ ಕನ್ನಡ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಬೆಳೆದಿರುವ ಜಿಲ್ಲೆ. ಇಡೀ ದೇಶ ದಕ್ಷಿಣ ಕನ್ನಡದ ಇತಿಹಾಸ ಪರಂಪರೆಯನ್ನು ತಿಳಿದಿದೆ. ಈ ಜಿಲ್ಲೆಯ ಅಭಿವೃದ್ಧಿಗೆ ನಾವು ಅಳಿಲು ಸೇವೆ ಮಾಡಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆಯನ್ನು ನಡೆಸಲಾಗಿದೆ ಎಂದರು.
ಪಕ್ಷಭೇದ ಮರೆತು ಶಾಸಕರು, ಸಂಸದರು, ವಿಧಾನಪರಿಷತ್ತು ಸದಸ್ಯರೂ ಸೇರಿದಂತೆ ಸಲಹೆ ನೀಡಿ, ಜಿಲ್ಲೆಯ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ ಎಂದು ಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದರು.
ಭಾಷೆಯ ಕುರಿತ ಭಾವನೆ ದೊಡ್ಡದು
ತುಳು ಭಾಷೆಯನ್ನು ಆಡಳಿತ ಭಾಷೆಯಾಗಿ ಘೋಷಿಸುವ ಕುರಿತು ಈ ಭಾಗದ ಜನರ ಭಾವನೆ, ಒತ್ತಡಗಳ ಕುರಿತು ವಿವರಿಸಿದ ಸಿಎಂ ಡಿಕೆ ಶಿವಕುಮಾರ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಶಾಸಕರಾದ ನಂತರ ಅಧಿವೇಶನದಲ್ಲಿ ಕೇಳಿದ ಮೊದಲ ಪ್ರಶ್ನೆ  ತುಳು ಭಾಷೆಯ ಕುರಿತಾದುದು. ನನಗೆ ಆಶ್ಚರ್ಯವಾಗಿತ್ತು. ಆದರೆ ಅವರ ಮೊದಲ ಭಾವನೆ ಇದ್ದದ್ದು ಭಾಷೆಯ ಮೇಲೆ. ಇಂದು ಅವರು 500 ಕೋಟಿ ಮೆಡಿಕಲ್ ಕಾಲೇಜು ಮಂಜೂರು ಮಾಡಿಸಿಕೊಂಡು ಲಾಟರಿ ಹೊಡೆದಿದ್ದಾರೆ, ಅದು ಬೇರೆ ವಿಷಯ. ಯು.ಟಿ. ಖಾದರ್ ಆಗ ಸ್ಪೀಕರ್ ಆಗಿದ್ದರು. ಇಬ್ಬರೂ ತುಳುವಿನಲ್ಲಿ ಮಾತನಾಡುತ್ತ, ಇತರರೂ ಸೇರಿ ಒತ್ತಡ ಹೇರಿದರು ಎಂದು ಸ್ಮರಿಸಿದರು.
ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಗೋಲಗುಂಬಜ್ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಒಪ್ಪಿಗೆ- ಸಚಿವ ಎಂ.ಬಿ ಪಾಟೀಲ್
ಬೆಂಗಳೂರು,ಜೂನ್,20,2026 (www.justkannada.in): ಮೈಸೂರು- ಫಂಡರಾಪುರ ನಡುವೆ ಸಂಚರಿಸುವ ಗೋಲ್ ಗುಂಬಜ್ ಎಕ್ಸ್ ಪ್ರೆಸ್ ರೈಲನ್ನು ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಗಳ ಮೂಲಕ ಓಡಿಸಲು ರೈಲ್ವೆ ಮಂಡಳಿ ಶುಕ್ರವಾರ ಒಪ್ಪಿಗೆ ನೀಡಿದ್ದು, ಇದರಿಂದ ವಿಜಯಪುರ, ಬಾಗಲಕೋಟೆ ಭಾಗದ ಜನರ ಬಹು ದಿನಗಳ ಬೇಡಿಕೆಗೆ ಮನ್ನಣೆ ಸಿಕ್ಕಂತಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಹರ್ಷ ವ್ಯಕ್ತಪಡಿಸಿದ್ದಾರೆ.
ವಿಜಯಪುರ ಕಡೆಗೆ ಚಲಿಸುವ ರೈಲುಗಳನ್ನು ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕವೇ  ಓಡಿಸಬೇಕೆಂದು ಹಲವು ಬಾರಿ ಪತ್ರ ಬರೆದು ಕೋರಿಕೆ ಸಲ್ಲಿಸಲಾಗಿತ್ತು. ಅದಕ್ಕೆ ರೈಲ್ವೆ ಮಂಡಳಿ, ಸಕಾರಾತ್ಮಕವಾಗಿ ಸ್ಪಂದಿಸಿದ್ದು ಹೆಚ್ವಿನ ಅನುಕೂಲ ಆಗಲಿದೆ. ಇದಕ್ಕಾಗಿ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಮತ್ತು ವಿ.ಸೋಮಣ್ಣ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದರಿಂದ ಎರಡೂ ನಗರಗಳ ನಡುವಿನ ಪ್ರಯಾಣ ಅವಧಿ ಸುಮಾರು 55 ನಿಮಿಷ ಕಡಿಮೆ ಆಗಲಿದೆ. ಇದರ ಜತೆಗೆ ಸದ್ಯ ವಿಜಯಪುರ- ಬೆಂಗಳೂರು ‌ನಡುವೆ ವಾರದಲ್ಲಿ ಎರಡು ದಿನ ಸಂಚರಿಸುತ್ತಿರುವ ವಿಶೇಷ ರೈಲನ್ನು ಕೂಡ ಕಾಯಂ‌ ಮಾಡಬೇಕು ಎಂದು ಎಂ.ಬಿ ಪಾಟೀಲ್ ಒತ್ತಾಯಿಸಿದ್ದಾರೆ.
ಬೈಪಾಸ್ ಮಾರ್ಗದಲ್ಲಿ ರೈಲು ಸಂಚರಿಸಲು ಶುರುವಾದ ಮೇಲೆ ಗೋಲ್ ಗುಂಬಜ್ ಎಕ್ಸ್ ಪ್ರೆಸ್ ಇನ್ನು ಮುಂದೆ ಹುಬ್ಬಳ್ಳಿ ಮತ್ತು ಗದಗದಲ್ಲಿ ಊರೊಳಕ್ಕೆ ಹೋಗುವುದಿಲ್ಲ. ಆದರೆ, ಅಲ್ಲಿಯ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಹುಬ್ಬಳ್ಳಿ ದಕ್ಷಿಣ ಮತ್ತು ಗದಗ ಬೈಪಾಸ್ ನಿಲ್ದಾಣಗಳಲ್ಲಿ ರೈಲು ನಿಲುಗಡೆ ಇರಲಿದೆ. ಹಾಗೆಯೇ, ರಾಜ್ಯ ಸರಕಾರದ ಕೋರಿಕೆಯಂತೆ ಮೈಸೂರು-ಫಂಡರಾಪುರ ನಡುವೆ ಮತ್ತೊಂದು ರೈಲು ಸೇವೆಯನ್ನು ಆದಷ್ಟು ಶೀಘ್ರವೇ ಪ್ರಾರಂಭಿಸಬೇಕು ಎಂದು ಸಚಿವ ಎಂ.ಬಿ ಪಾಟೀಲ್ ಅವರು ಕೋರಿದ್ದಾರೆ.
ಹುಬ್ಭಳ್ಳಿ ಮತ್ತು ಗದಗದಲ್ಲಿ ಊರೊಳಕ್ಕೆ ರೈಲುಗಳು ಹೋಗುವುದರಿಂದ ವಿಜಯಪುರ, ಬಾಗಲಕೋಟೆ ಮುಂತಾದ ಜಿಲ್ಲೆಗಳ ಜನರಿಗೆ ಪ್ರಯಾಣಕ್ಕೆ ಹೆಚ್ವು ಕಾಲ ಹಿಡಿಸುತ್ತದೆ. ಆದ್ದರಿಂದ ಇಲ್ಲಿ ಬೈಪಾಸ್ ಮೂಲಕವೇ ಓಡಿಸಬೇಕೆಂದು ಕೇಂದ್ರ ಸರಕಾರದ ಗಮನವನ್ನು ನಿರಂತರವಾಗಿ ಸೆಳೆಯಲಾಗುತ್ತಿತ್ತು. ಈ ಸಂಬಂಧ ಪತ್ರ ವ್ಯವಹಾರ, ಅನುಸರಣಾ ಸಭೆಗಳು ಒಂದೇ ಸಮನೆ ನಡೆಯುತ್ತಿತ್ತು. ತಮ್ಮ ಬೇಡಿಕೆಗೆ ವೈಷ್ಣವ್ ಮತ್ತು ಸೋಮಣ್ಣ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಎಂ.ಬಿ ಪಾಟೀಲ್  ಹರ್ಷಿಸಿದ್ದಾರೆ.
ವೇಳಾಪಟ್ಟಿ ಬದಲು
ಮೈಸೂರು-ಫಂಡರಾಪುರ ನಡುವೆ ಸಂಚರಿಸುವ ಗೋಲ್ ಗುಂಬಜ್ ಎಕ್ಸ ಪ್ರೆಸ್ ಬೈಪಾಸ್ ಮಾರ್ಗಗಳಲ್ಲಿ ಓಡಲು ಆರಂಭಿಸಿದ ಬಳಿಕ ಮೈಸೂರಿನಿಂದ ಮಧ್ಯಾಹ್ನ 3.50ಕ್ಕೆ ಹೊರಟು ಮರುದಿನ ಬೆಳಿಗ್ಗೆ 10.05ಕ್ಕೆ ಫಂಡರಾಪುರವನ್ನು ತಲುಪಲಿದೆ. ಹಾಗೆಯೇ ಫಂಡರಾಪುರದಿಂದ ಬೆಳಿಗ್ಗೆ ಮಧ್ಯಾಹ್ನ 1.15ಕ್ಕೆ ಹೊರಟು ಮರುದಿನ ಬೆಳಿಗ್ಗೆ 11.30ಕ್ಕೆ ಮೈಸೂರನ್ನು ತಲುಪಲಿದೆ. ಮೊದಲಿಗೆ ಹೋಲಿಸಿದರೆ ಪ್ರಯಾಣದಲ್ಲಿ 55 ನಿಮಿಷ ಉಳಿತಾಯವಾಗಲಿದೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
Key words: Approval, Golagumbaz Express, train, Hubballi, Gadag, bypass, Minister, M.B. Patil
ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ: 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ
ಬೆಂಗಳೂರು, ಅಕ್ಟೋಬರ್ 29,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ  ಇಂದು ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ   ಒಟ್ಟು 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು.
ಪ್ರತಿ ವರ್ಷ ಕನಕ ಉತ್ಸವ
ಕಾಗಿನೆಲೆಯಲ್ಲಿ ಪ್ರತಿ ವರ್ಷ ಕನಕ ಉತ್ಸವವನ್ನು  ಆಚರಿಸಲು ಕ್ರಮ ಕೈಗೊಳ್ಳಲಾಗುವುದು. ಉತ್ಸವ ಸಂದರ್ಭದಲ್ಲಿ ಜಿಲ್ಲೆಯ ದಾರ್ಶನಿಕರ ಜೀವನಾದರ್ಶಗಳನ್ನು ಪ್ರತಿಬಿಂಬಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನಕ ಅಧ್ಯಯನ ಪೀಠ ಸಮನ್ವಯದಿಂದ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ಸಭೆಯಲ್ಲಿ ಸೂಚಿಸಲಾಯಿತು.
ಪ್ರಾಧಿಕಾರದಲ್ಲಿ ಸಂಚಿತ ನಿಧಿಯನ್ನು ಸ್ಥಾಪಿಸಿ ಕಾರ್ಯಕ್ರಮಗಳನ್ನು ನಿರಂತರವಾಗಿ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು. ಪ್ರಾಧಿಕಾರದ ಆದಾಯ ಹೆಚ್ಚಳಕ್ಕೆ ಯೋಜನೆಗಳನ್ನು ರೂಪಿಸಬೇಕು.
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕನಕದಾಸರ ಕರ್ಮಭೂಮಿ ಕಾಗಿನೆಲೆ ಮತ್ತು ಜನ್ಮಭೂಮಿ ಸ್ಥಳವಾದ ಬಾಡ ಗ್ರಾಮ ಹಾಗೂ ಸುತ್ತಮುತ್ತಲಿನ ಪರಂಪರೆಯ ತಾಣಗಳನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಗೊಳಿಸುವ ಬಗ್ಗೆ ವಿವಿಧ ಯೋಜನೆಗಳ ಕ್ರಿಯಾ ಯೋಜನೆ ಅನುಮೋದನೆಗೆ ಸಲ್ಲಿಸಲಾಯಿತು.
ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕಲಾಭವನ ನಿರ್ಮಾಣ,ಕನಕ ವಸ್ತು ಸಂಗ್ರಹಾಲಯದಲ್ಲಿ ಒಳವಸ್ತು ಶಿಲ್ಪ ಸಂಗ್ರಹಾಲಯ ನಿರ್ಮಾಣ, ಚೆನ್ನಕೇಶವ ದೇವಾಲಯ, ಮೆಟ್ಟಿಲು, ಗೋಪುರ, ಕಮಾನುಗಳ ನಿರ್ಮಾಣ, ಕದರಮಂಡಲಗಿ ವೆಂಕಟೇಶ್ವರ ದೇವಸ್ಥಾನ, ಸಮುದಾಯ ಭವನ ನಿರ್ಮಾಣ ಮಾಡಲು ತೀರ್ಮಾನಿಸಲಾಯಿತು.
ಪ್ರಾಧಿಕಾರದ ವ್ಯಾಪ್ತಿಯ ಉದ್ಯಾನಗಳ ವಾರ್ಷಿಕ ನಿರ್ವಹಣೆ ಗುತ್ತಿಗೆ ನೀಡುವ ಕುರಿತು ಹಾಗೂ ಕನಕ ಪರಿಸರ ಉದ್ಯಾನದಲ್ಲಿ ಖಾಲಿ ಇರುವ ಜಾಗದಲ್ಲಿ ಬಟಾನಿಕಲ್ ಗಾರ್ಡನ್ ನಿರ್ಮಿಸಲು    ನಿರ್ಧರಿಸಲಾಯಿತು. ಕಾಗಿನೆಲೆ ಗ್ರಾಮದ ವ್ಯಾಪ್ತಿಯಲ್ಲಿ ಇತರ ಅಭಿವೃದ್ಧಿ  ಕಾಮಗಾರಿಗಳನ್ನು ಶೀಘ್ರ ಕೈಗೊಳ್ಳಲು ಚರ್ಚಿಸಲಾಯಿತು.
ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್, ಸಚಿವರಾದ ಶಿವಾನಂದ ಪಾಟೀಲ,   ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್ ಎಂ ರೇವಣ್ಣ,  ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.
Key words: Kaginele, Development, Authority, meeting, Approval, action plan
1,741.60 ಕೋಟಿ ಬಂಡವಾಳ ಹೂಡಿಕೆಯ 63 ಯೋಜನೆಗಳಿಗೆ ಅನುಮೋದನೆ
ಬೆಂಗಳೂರು,ಮೇ,28,2025 (www.justkannada.in):  ಬೃಹತ್ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಇಲ್ಲಿ ನಡೆದ 153ನೇ ರಾಜ್ಯ ಮಟ್ಟದ   ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯು, ರಾಜ್ಯದ ನಾಲ್ಕು ಪ್ರಮುಖ ಜಿಲ್ಲೆಗಳಲ್ಲಿ ₹1,741.60 ಕೋಟಿ ಬಂಡವಾಳ ಹೂಡಿಕೆಯ ಒಟ್ಟು 63 ಯೋಜನೆಗಳಿಗೆ  ಅನುಮೋದನೆ ನೀಡಿದ್ದು, ಇದರಿಂದ 7,219 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.
ʼದಕ್ಷಿಣ ಕನ್ನಡ, ತುಮಕೂರು, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಅತ್ಯಾಧುನಿಕ ಫೀಡ್‌ ಪ್ಲ್ಯಾಂಟ್‌, ಪ್ರಿಫ್ಯಾಬ್ರಿಕೇಟೆಡ್‌ ಮ್ಯಾಡುಲರ್‌, ಬಸ್‌ ಬಾಡಿ ಬಿಲ್ಡಿಂಗ್‌, ವೈಮಾಂತರಿಕ್ಷ ಹಾಗೂ ರಕ್ಷಣಾ ವಲಯಕ್ಕೆ ಸಂಬಂಧಿಸಿದ ಎಲೆಕ್ಟ್ರಾನಿಕ್ಸ್‌ ಸಿಸ್ಟಮ್ಸ್‌ ಮತ್ತು ಬಿಡಿಭಾಗ ತಯಾರಿಕೆ ಸೇರಿದಂತೆ 60 ಯೋಜನೆಗಳು ಮತ್ತು  ಹೆಚ್ಚುವರಿ ಬಂಡವಾಳ ಹೂಡಿಕೆಯ 3 ಯೋಜನೆಗಳು  ಒಳಗೊಂಡಂತೆ ಒಟ್ಟು 63  ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆʼ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರು ತಿಳಿಸಿದ್ದಾರೆ.
ʼಅನುಮೋದನೆ ಪಡೆದ ಯೋಜನೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರಿ ತಾಲ್ಲೂಕಿನಲ್ಲಿ ₹125.88 ಕೋಟಿ ವೆಚ್ಚದ ಅತ್ಯಾಧುನಿಕ  ಫೀಡ್‌ ಪ್ಲ್ಯಾಂಟ್‌,  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ  ₹97.52 ಕೋಟಿ ವೆಚ್ಚದ  ಪ್ರಿಫ್ಯಾಬ್ರಿಕೇಟೆಡ್‌ ಮಾಡ್ಯುಲರ್‌ ಪ್ರಾಡಕ್ಟ್ಟ್‌ ಘಟಕ, ತುಮಕೂರು ಜಿಲ್ಲೆಯ ಹಿರೇಹಳ್ಳಿಯಲ್ಲಿ  ₹91.2 ಕೋಟಿ ವೆಚ್ಚದ  ಟ್ರಾನ್ಸ್‌ ಫಾರ್ಮರ್‌ ರೇಡಿಯೇಟರ್‌ ತಯಾರಿಕಾ ಘಟಕ ಸ್ಥಾಪನೆ ಪ್ರಮುಖವಾಗಿವೆ.
₹50 ಕೋಟಿಗೂ ಹೆಚ್ಚಿನ ಮೊತ್ತದ ಬಂಡವಾಳ ಹೂಡಿಕೆಯ 7 ಪ್ರಮುಖ ಬೃಹತ್‌ ಹಾಗೂ ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ  593.80 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದೆ. 2,093 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.
₹15 ಕೋಟಿಗಳಿಂದ  ₹50 ಕೋಟಿ ಒಳಗಿನ 53 ಹೊಸ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ ರಾಜ್ಯದಲ್ಲಿ ₹1,106.6 ಕೋಟಿ ಮೊತ್ತದ ಬಂಡವಾಳ ಹೂಡಿಕೆಯಾಗಲಿದೆ.  4,961 ಜನರಿಗೆ  ಉದ್ಯೋಗ ಅವಕಾಶಗಳು ದೊರೆಯಲಿವೆ.
ಹೆಚ್ಚುವರಿ ಬಂಡವಾಳ ಹೂಡಿಕೆಯ 3 ಯೋಜನೆಗಳಿಂದ   41.20 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಯಾಗಲಿದೆ.  165 ಜನರಿಗೆ ಉದ್ಯೋಗ ಅವಕಾಶ ದೊರೆಯಲಿವೆʼ ಎಂದು ಸಚಿವ ಎಂ.ಬಿ ಪಾಟೀಲ್ ವಿವರಿಸಿದ್ದಾರೆ.
ಸಭೆಯಲ್ಲಿ ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಸೆಲ್ವಕುಮಾರ್‌, ಕೈಗಾರಿಕಾ ಇಲಾಖೆ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಹಾಗೂ ಕಾರ್ಯನಿರ್ವಾಹಕ ಸದಸ್ಯ ಡಾ. ಎನ್‌. ಮಹೇಶ್‌, ಐಟಿಬಿಟಿ ಇಲಾಖೆಯ ನಿರ್ದೇಶಕ  ರಾಹುಲ್‌ ಎಸ್‌. ಸಂಕನೂರ, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Key words: Approval, 63 projects, investment, Rs. 1,741.60 crore, Minister, MB Patil
3,500.86 ಕೋಟಿ ರೂ. ಬಂಡವಾಳ ಹೂಡಿಕೆಯ 69 ಯೋಜನೆಗಳಿಗೆ ಅನುಮೋದನೆ- ಸಚಿವ ಎಂ.ಬಿ ಪಾಟೀಲ್
ಬೆಂಗಳೂರು,ಮಾರ್ಚ್,29,2025 (www.justkannada.in): ವಿಜಯಪುರ ಜಿಲ್ಲೆಯಲ್ಲಿ ಕರ್ನಾಟಕ ಸೋಪ್ಸ್‌ ಆ್ಯಂಡ್‌ ಡಿಟರ್‌ಜೆಂಟ್ಸ್‌ ಲಿಮಿಟೆಡ್‌ನ (ಕೆಎಸ್‌ಡಿಎಲ್‌) ₹ 250 ಕೋಟಿ ಮೊತ್ತದ ತಯಾರಿಕಾ ಘಟಕ ಸ್ಥಾಪನೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕಾ ಬೆಳವಣಿಗೆ  ಉತ್ತೇಜಿಸಲು ಮತ್ತು ಉದ್ಯೋಗ ಸೃಷ್ಟಿಸಲು ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯು 69 ಯೋಜನೆಗಳ ಒಟ್ಟು ₹3,500.86 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಪ್ರಸ್ತಾವಗಳಿಗೆ ಅನುಮೋದನೆ ನೀಡಿದೆ.
ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಏಕಗವಾಕ್ಷಿ ಅನುಮೋದನಾ ಸಮಿತಿಯ 152ನೇ  ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇದರಿಂದ ರಾಜ್ಯದಲ್ಲಿ 24,954 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.
ತುಮಕೂರು, ವಿಜಯಪುರ, ರಾಮನಗರ, ಕೋಲಾರ, ಬೆಳಗಾವಿ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಈ ಹೊಸ ಕೈಗಾರಿಕೆಗಳು ಅಸ್ತಿತ್ವಕ್ಕೆ ಬರಲಿವೆ. ಹೊಸದಾಗಿ ಅಸ್ತಿತ್ವಕ್ಕೆ ಬರಲಿರುವ ಕೈಗಾರಿಕೆಗಳಲ್ಲಿ ಮಷಿನ್‌ ಟೂಲ್‌, ತಂಪು ಪಾನೀಯ, ಕಾರ್‌ ಎಲೆಕ್ಟ್ರಾನಿಕ್ಸ್‌ ಮತ್ತು ಸೆಮಿಕಂಡಕ್ಟರ್‌, ಕಬ್ಬಿಣ ಮತ್ತು ಉಕ್ಕು, ಪರಿಶುದ್ಧ ಜಲಜನಕ  ಅನಿಲ, ಹಾಲಿನ ಪುಡಿ ತಯಾರಿಕೆ ಘಟಕಗಳು ಇವೆʼ ಎಂದು ಸಚಿವ ಎಂ. ಬಿ. ಪಾಟೀಲ್ ತಿಳಿಸಿದ್ದಾರೆ.
50 ಕೋಟಿ ರೂ.ಗೂ ಹೆಚ್ಚು ಬಂಡವಾಳ ಹೂಡಿಕೆಯ 12 ಪ್ರಮುಖ ಬೃಹತ್ ಮತ್ತು ಮಧ್ಯಮ  ಯೋಜನೆಗಳಿಗೆ ನೀಡಿರುವ ಅನುಮೋದನೆಗಳಿಂದ ₹ 2311.88 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 18,972 ಜನರಿಗೆ ಉದ್ಯೋಗಾವಕಾಶಗಳು ದೊರೆಯಲಿವೆ.  ₹ 15 ಕೋಟಿಯಿಂದ ₹ 50 ಕೋಟಿ ಒಳಗಿನ ಬಂಡವಾಳ ಹೂಡಿಕೆಯ 55 ಹೊಸ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ ₹ 1148.98 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು ಅಂದಾಜು 5,832 ಜನರಿಗೆ ಉದ್ಯೋಗ ಅವಕಾಶಗಳು ಲಭ್ಯವಾಗಲಿವೆ. ಹೆಚ್ಚುವರಿ ಬಂಡವಾಳ ಹೂಡಿಕೆಯ 2 ಯೋಜನೆಗೆ ನೀಡಿರುವ ಅನುಮೋದನೆಯಿಂದ ₹ 40  ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು ಅಂದಾಜು 150 ಜನರಿಗೆ ಉದ್ಯೋಗವಕಾಶ ಲಭ್ಯವಾಗಲಿವೆ ಎಂದು ಸಚಿವ ಎಂ.ಬಿ ಪಾಟೀಲ್ ವಿವರಿಸಿದ್ದಾರೆ.
ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಸೆಲ್ವಕುಮಾರ್‌, ಕೈಗಾರಿಕಾ ಅಭಿವೃದ್ಧಿ ಆಯುಕ್ತ ಗುಂಜನ್‌ ಕೃಷ್ಣ,, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಹಾಗೂ ಕಾರ್ಯನಿರ್ವಾಹಕ ಸದಸ್ಯ ಡಾ. ಎನ್‌. ಮಹೇಶ್‌, ಐಟಿಬಿಟಿ ಇಲಾಖೆಯ ನಿರ್ದೇಶಕ ರಾಹುಲ್‌ ಎಸ್‌. ಸಂಕನೂರ್‌, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Key words: 3,500.86 crore, Approval, Investment, 69 Projects, Minister, MB Patil
ನಾಗಮಂಗಲದಲ್ಲಿ ಸ್ವಯಂಚಾಲಿತ ಪರೀಕ್ಷಾ ಪಥ : ಆಡಳಿತಾತ್ಮಕ ಅನುಮೋದನೆ
ಮಂಡ್ಯ,ಫೆಬ್ರವರಿ,19,2025 (www.justkannada.in): 2023-24ನೇ ಸಾಲಿನ ರಸ್ತೆ ಸುರಕ್ಷತಾ ನಿಧಿಯ ಕ್ರಿಯಾ ಯೋಜನೆಯಡಿ  ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ನಿರ್ಮಿಸುವ ಕಾಮಗಾರಿಯನ್ನು ನಾಗಮಂಗಲದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ನಾಗಮಂಗಲ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ವ್ಯಾಪ್ತಿಯಲ್ಲಿ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ನಿರ್ಮಿಸುವ ಕಾಮಗಾರಿಯನ್ನು 698  ಲಕ್ಷ ರೂ. ಅಂದಾಜು ವೆಚ್ಚದಲ್ಲಿ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಇವರ ವತಿಯಿಂದ ಕೈಗೊಳ್ಳಲು ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ ಎಂದು ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Key words: Automated test track , Nagamangala,  Administrative,  approval
ಸ್ಯಾಟಲೈಟ್ ರಿಂಗ್ ರಸ್ತೆ(STRR) ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ –ಸಂಸದ ಡಾ. ಸಿ ಎನ್ ಮಂಜುನಾಥ್
ಬೆಂಗಳೂರು,ಸೆಪ್ಟಂಬರ್,11,2024 (www.justkannada.in): ಮಹತ್ವಾಕಾಂಕ್ಷೆಯ ಸ್ಯಾಟಲೈಟ್ ರಿಂಗ್ ರಸ್ತೆ(STRR) ಯೋಜನೆಗೆ ಕೇಂದ್ರ ಸರ್ಕಾರದ ಅನುಮೋದನೆ ನೀಡಲಾಗಿದ್ದು ಬೆಂಗಳೂರು ನಗರ, ಗ್ರಾಮೀಣ ಮತ್ತು ಸುತ್ತಮುತ್ತಲಿನ ತಾಲ್ಲೂಕುಗಳಿಗೆ ಪ್ರಯೋಜನವಾಗಲಿದೆ ಎಂದು ಸಂಸದ ಡಾ. ಸಿ ಎನ್ ಮಂಜುನಾಥ್ ತಿಳಿಸಿದರು.
4-5 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ಕಾಮಗಾರಿಗೆ ಚಾಲನೆ ನೀಡಬೇಕೆಂದು ಮಾಜಿ ಪ್ರಧಾನಮಂತ್ರಿ  ಎಚ್.ಡಿ. ದೇವೇಗೌಡ ಅವರು ಹಾಗೂ ಸಂಸದ ಡಾ. ಸಿ ಎನ್ ಮಂಜುನಾಥ್ ಅವರು  ಸಂಸತ್ ಅಧಿವೇಶನದ ಸಂದರ್ಭದಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಈ ಕಾಮಗಾರಿಗೆ ಅನುಮೋದನೆ ನೀಡಲು ಮನವಿ ಸಲ್ಲಿಸಿದ್ದರು, ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು 45 ದಿನಗಳಲ್ಲಿ ಪ್ರಾರಂಭ ಮಾಡುವುದಾಗಿ ಭರವಸೆ ನೀಡಿದ್ದರು,ಆಶ್ಚರ್ಯ ಎಂದರೆ 30 ದಿನಗಳಲ್ಲೇ ಅನುಮೋದನೆ ನೀಡಿದ್ದಾರೆ.
₹4,750 ಕೋಟಿಗಳ ಅಂದಾಜಿನ ಸ್ಯಾಟಲೈಟ್ ಟೌನ್ ರಿಂಗ್ ರೋಡ್ (STRR) ಯೋಜನೆಗೆ ಟೆಂಡರ್ ಪ್ರಕ್ರಿಯೆಗೆ ಅನುಮೋದನೆ ನೀಡಲಾಗಿದೆ. ಈ ಪ್ರಮುಖ ಮೂಲಸೌಕರ್ಯ ಯೋಜನೆಯು ಈಡಿ ಬೆಂಗಳೂರು ನಗರ ಗ್ರಾಮೀಣ ಮತ್ತು ಸುತ್ತಮುತ್ತಲಿನ ತಾಲ್ಲೂಕುಗಳಾದ  ಡಾಬಸ್ ಪೇಟೆ ದೇವನಹಳ್ಳಿ ದೊಡ್ಡಬಳ್ಳಾಪುರ ಸರ್ಜಾಪುರ ಹೊಸಕೋಟೆ ಕನಕಪುರ ಅತ್ತಿಬೆಲೆ ಸೂಲಿಬೆಲೆ ತಟ್ಟೆಕೆರೆ ರಾಮನಗರ ಮಾಗಡಿ ಮತ್ತು ಆನೇಕಲ್‌ಗೆ ಗಣನೀಯ ಪ್ರಯೋಜನವನ್ನು ನೀಡುತ್ತದೆ. ಇದು ವಾಹನ ಸಂಚಾರ ದಟ್ಟಣೆಯನ್ನು ನಿವಾರಿಸುವುದು ಮತ್ತು ಪ್ರಯಾಣದ ದಕ್ಷತೆ, ಸುರಕ್ಷತೆಯನ್ನು ಹೆಚ್ಚಿಸುವುದರ ಜೊತೆಗೆ ಪ್ರಯಾಣದ ಸಮಯ ಉಳಿಯುತ್ತದೆ.
ಈ ಯೋಜನೆಯನ್ನು ಭಾರತಮಾಲಾ ಪರಿಯೋಜನಾ ಯೋಜನೆಯಡಿಯಲ್ಲಿ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ನಿರ್ಮಿಸಲಾಗುತ್ತಿದೆ ಹಾಗೂ ಈ ಪ್ರದೇಶದ ಅಭಿವೃದ್ಧಿಗೆ ಪ್ರಮುಖ ಮೈಲಿಗಲ್ಲಾಗಿದೆ, ಬೆಂಗಳೂರಿನ ಸಂಚಾರ ಸಮಸ್ಯೆಗಳಿಗೆ ದೀರ್ಘಕಾಲಿಕ ಪರಿಹಾರವನ್ನು ನೀಡುತ್ತದೆ ಮತ್ತು ಸಾವಿರಾರು ದೈನಂದಿನ ಪ್ರಯಾಣಿಕರಿಗೆ ಸಂಪರ್ಕವನ್ನು ಸುಧಾರಿಸಲು ನೆರವಾಗಲಿದೆ.
ಸಮಸ್ತ ರಾಜ್ಯದ ಜನತೆಯ ಪರವಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮತ್ತು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು  ಸ್ಯಾಟಲೈಟ್ ಟೌನ್ ರಿಂಗ್ ರೋಡ್ (STRR) ಯೋಜನೆಗೆ ಟೆಂಡರ್ ಪ್ರಕ್ರಿಯೆಯನ್ನು ಅನುಮೋದಿಸಿದ್ದಕ್ಕಾಗಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಸಂಸದ ಡಾ.ಸಿಎನ್ ಮಂಜುನಾಥ್ ತಿಳಿಸಿದ್ದಾರೆ.
ಈ ದೂರದೃಷ್ಟಿ ಯೋಜನೆಯು ಬೆಂಗಳೂರು ನಗರ,ಗ್ರಾಮೀಣ ಮತ್ತು ಸುತ್ತಮುತ್ತಲಿನ ತಾಲ್ಲೂಕುಗಳಾದ ಕನಕಪುರ, ಮಾಗಡಿ, ರಾಮನಗರ, ದಾಬಸ್ ಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ಸುಲಿಬೆಲೆ ಮತ್ತು ಅನೇಕಲ್‌ಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ, ಸಂಚಾರ ದಟ್ಟಣೆಯನ್ನು ನಿವಾರಿಸುತ್ತದೆ ಮತ್ತು ಪ್ರಯಾಣದ ಸಮಯವನ್ನು ಕಡಿಮೆಗೊಳಿಸುತ್ತದೆ. ಅನೇಕ ವರ್ಷಗಳ ಕಾಲ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಈ ಯೋಜನೆಯು ಮುಂದುವರೆಯುತ್ತಿರುವುದರಿಂದ ಸಂಸದರಾದ ಸನ್ಮಾನ್ಯ ಡಾ. ಸಿ ಎನ್ ಮಂಜುನಾಥ್ ಅವರು ಸಂತಸ ವ್ಯಕ್ತಪಡಿಸಿದರು.
Key words: Central Government, Approval, Satellite Ring Road (STRR) Project , Dr. C N Manjunath
ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಒಪ್ಪಿಗೆ.
ಬೆಂಗಳೂರು,ಸೆಪ್ಟಂಬರ್,20,2022(www.justkannada.in): ಉತ್ತರ ಕನ್ನಡ ಜಿಲ್ಲೆಯ ಜನರ ಕನಸು ನನಸಾಗುವ ಕಾಲ ಸನಿಹವಾಗಿದ್ದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಿಎಂ ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.
ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆ ವಿಚಾರ ಕುರಿತು ಆರೋಗ್ಯ ಸಚಿವ ಸುಧಾಕರ್  ನೇತೃತ್ವದಲ್ಲಿ ಪ್ರಥಮ ಹಂತದ ಸಭೆ ನಡೆಯಿತು. ಸಭೆಯಲ್ಲಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಶಿವರಾಮ್ ಹೆಬ್ಬಾರ್ ಉತ್ತರ ಕನ್ನಡ ಜಿಲ್ಲಾ ಶಾಸಕರು ಉಪಸ್ಥಿತರಿದ್ದರು.
ಈ ಸಂಬಂಧ ಸರ್ಕಾರ  ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಕಳಿಸಿದ್ದು, ಶೀಘ್ರವೇ ಆರ್ಥಿಕ ಇಲಾಖೆಯಿಂದ ಗ್ರೀನ್ ಸಿಗ್ನಲ್ ಸಾಧ್ಯತೆ ಎನ್ನಲಾಗಿದೆ.
ಸಭೆ ಬಳಿಕ ಮಾತನಾಡಿದ ಶಾಸಕಿ ರೂಪಾಲಿ ನಾಯ್ಕ್, ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ಒಪ್ಪಿದೆ. ಸಚಿವರು ಒಪ್ಪಿದ್ದಾರೆ. ಜಾಗ ನಿಗದಿಪಡಿಸಬೇಕಿದೆ.  ತಾತ್ಕಾಲಿಕವಾಗಿ ಮೆಡಿಕಲ್ ಕಾಲೇಜು ಮೇಲ್ದರ್ಜೆಗೆ ಏರಿಸಲು ತೀರ್ಮಾನಿಸಲಾಗಿದೆ.  ಸದನ ಮುಗಿದ ಬಳಿಕ ಸಚಿವ ಸುಧಾಕರ್ ಜಿಲ್ಲೆಗೆ ಭೇಟಿ ನೀಡಲಿದ್ದಾರೆ  ಎಂದು ತಿಳಿಸಿದರು.
Key words:  approval – construction -super specialty hospital – Uttara Kannada -district
ENGLISH SUMMARY…
Nod for construction of a super-speciality hospital in Uttar Kannada District
Bengaluru, September 20, 2022 (www.justkannada.in): The dreams of the people of Uttar Kannada appear to realize soon, as Chief Minister Basavaraj Bommai today gave ethical permission to establish a super-specialty hospital in Uttara Kannada District.
The first level meeting regarding the establishment of a super-specialty hospital in Uttara Kannada District was held today under the leadership of Health Minister Dr. K. Sudhakar. Minister Kota Srinivas Poojari, Shivaram Hebbar, and Uttara Kannada District MLAs were present at the meeting.
A proposal has been sent to the finance department for approval, and it is expected it will be approved soon.
Speaking after the meeting, MLA Rupali Naik informed that the State Govt. had given its consent to construct a super-specialty hospital in Uttara Kannada District. “The Minister has agreed and a suitable has to be identified. It is also decided to upgrade the medical college. Minister Dr. K. Sudhakar will visit the district soon,” he said.
Keywords: Health Minister/ Dr. K. Sudhakar/ Super-speciality hospital/ Uttara Kannada District
ಪೀಣ್ಯ ಕೈಗಾರಿಕಾ ಪ್ರದೇಶದ ಮೂಲ ಸೌಕರ್ಯಗಳ ಅಭಿವೃದ್ಧಿಯ 100 ಕೋಟಿ ರೂ. ಯೋಜನೆಗೆ ಅನುಮೋದನೆ.
ಬೆಂಗಳೂರು,ಜೂನ್ 21,2022(www.justkannada.in):  ಏಷ್ಯಾ ಖಂಡದ ಅತ್ಯಂತ ದೊಡ್ಡ ಕೈಗಾರಿಕಾ ಪ್ರದೇಶಗಳಲ್ಲಿ ಒಂದಾದ ಪೀಣ್ಯ ಕೈಗಾರಿಕಾ ಪ್ರದೇಶದ ಮೂಲ ಸೌಕರ್ಯಗಳ ಅಭಿವೃದ್ಧಿಗಾಗಿ 100 ಕೋಟಿ  ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲಿರುವ ಕಾಮಗಾರಿಗಳಿಗೆ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜು ಅವರ ಅಧ್ಯಕ್ಷತೆಯ ಉನ್ನತಮಟ್ಟದ ಸಮಿತಿ ಅನುಮೋದನೆ ನೀಡಿದೆ.
ವಿಧಾನಸೌಧದಲ್ಲಿ  ನಡೆದ ಸಭೆಯಲ್ಲಿ 12 ಸಾವಿರ ಉದ್ಯಮಿಗಳಿದ್ದು, ವಾರ್ಷಿಕ 5 ಸಾವಿರ ಕೋಟಿ ರೂಪಾಯಿ ತೆರಿಗೆ   ಪಾವತಿಸುತ್ತಿರುವ ಪೀಣ್ಯ ಕೈಗಾರಿಕಾ ಪ್ರದೇಶಕ್ಕೆ ಮೂಲ ಸೌಕರ್ಯ ಕಲ್ಪಿಸುವುದು ಆದ್ಯತೆಯ ಕೆಲಸವಾಗಿದ್ದು, ರೂ. 100   ಕೋಟಿಗಳ ವೆಚ್ಚದಲ್ಲಿ ಮೂಲ ಸೌಕರ್ಯ  ಕಲ್ಪಿಸಲು  ಟೆಂಡರ್‌ ಕರೆಯಲು ಸಿದ್ದತೆ ನಡೆಸುವಂತೆ ಸಚಿವ ಎಂಟಿಬಿ ನಾಗರಾಜು ಸೂಚಿಸಿದರು.
ಪೀಣ್ಯ ಕೈಗಾರಿಕಾ ಪ್ರದೇಶಕ್ಕೆ ಮೂಲ ಸೌಕರ್ಯ ಕಲ್ಪಿಸುವ ಕೆಲಸ ಸಮರೋಪಾದಿಯಲ್ಲಿ ನಡೆಯಬೇಕು. ಗುಣಮಟ್ಟಮತ್ತು   ಪ್ರಮಾಣದ ವಿಷಯದಲ್ಲಿ ಕಟ್ಟೆಚ್ಚರ ವಹಿಸಬೇಕು ಎಂದು ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.
ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಇಲಾಖೆ ನಿರ್ದೇಶಕಿ ಸತ್ಯಭಾಮ, ಕೆಎಸ್ಎಸ್ಐಡಿಸಿ ವ್ಯವಸ್ಥಾಪಕ ನಿರ್ದೇಶಕ ಎಸ್.ಜೆ.ಸೋಮಶೇಖರ್ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
Key words: Rs 100 crore –infrastructure-development -Peenya Industrial Area-. Approval – project
” ಪುನೀತ್ ರಾಜ್‍ಕುಮಾರ್ ರಸ್ತೆ ” ನಾಮಕರಣಕ್ಕೆ ಬಿಬಿಎಂಪಿ ಅಧಿಕೃತ ಅನುಮೋದನೆ.
Key words: BBMP- approval – Punith Rajkumar -road -name