Banu Mushtaq Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಸಾಹಿತಿ ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆ; ಸಂತಸ ವ್ಯಕ್ತಪಡಿಸಿದ ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು,ಸೆಪ್ಟಂಬರ್,22,2025 (www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮೈಸೂರು ದಸರಾ ಮಹೋತ್ಸವವನ್ನ ಸಾಹಿತಿ ಬಾನು ಮುಷ್ಕಾಕ್ ಅವರು ಉದ್ಘಾಟಿಸಿ ಹಿಂದೂ ಸಂಸ್ಕೃತಿಗೆ ಗೌರವ ಬರುವಂತೆ ನಡೆದುಕೊಂಡಿರುವುದು ಸಂತಸವನ್ನುಂಟು ಮಾಡಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನುಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ವಿರೋಧವಿತ್ತು. ಆದರೇ ಅವರು ಹಿಂದೂ ಸಂಸ್ಕೃತಿಗೆ ಗೌರವ ಬರುವಂತೆ ನಡೆದುಕೊಂಡಿದ್ದಾರೆ. ಹಿಂದೂ ಹೆಣ್ಣುಮಗಳ ರೀತಿ ದೇವಸ್ಥಾನಕ್ಕೆ ಬಂದು ಕೈಮುಗಿದಿದ್ದಾರೆ. ಆರತಿ ಬೆಳಗಿ ದೇವರ ಮುಂದೆ ನಿಂತು ಕೈಮುಗಿದಿದ್ದಾರೆ. ಇಂದು ಖುಷಿಯಾಗಿದೆ ಎಂದರು.

ಚಾಮುಂಡಿ ಆಶೀರ್ವಾದದಿಂದ ಬಾನು ಮುಷ್ತಾಕ್ ಉದ್ಘಾಟನೆ ಮಾಡಿದ್ದೇನೆ ಎಂದಿದ್ದಾರೆ. ಅವತ್ತೇ ಬಾನು ಮುಷ್ತಾಕ್ ಈ ಮಾತು ಹೇಳಿದ್ದರೇ ವಿರೋಧವೇ ಇರುತ್ತಿರಲಿಲ್ಲ. ಸಿಎಂ ಸಿದ್ಧರಾಮಯ್ಯ ಇದರಲ್ಲಿ ರಾಜಕೀಯ ಮಾಡಲು ಇದರಲ್ಲಿ ಹೊರಟಿದ್ದರು. ಹಿಂದೂಗಳ ಅನಿಸಿಕೆ ಪರವಾಗಿ ಬಾನು ಮುಷ್ತಾಕ್ ನಡೆದುಕೊಂಡಿದ್ದಾರೆ ಎಂದರು.

Key words: Inauguration, Dasara, Banu Mushtaq, Chalavadi Narayanaswamy

The post ಸಾಹಿತಿ ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆ; ಸಂತಸ ವ್ಯಕ್ತಪಡಿಸಿದ ಛಲವಾದಿ ನಾರಾಯಣಸ್ವಾಮಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದಸರಾ ಹಬ್ಬ ಸಮಗ್ರ ಸಂಸ್ಕೃತಿಯ ಪ್ರತೀಕ, ನಾಡಿನ ಜನರ ನಾಡಿ ಮಿಡಿತ- ಬಾನು ಮುಷ್ತಾಕ್
ಮೈಸೂರು, ಸೆಪ್ಟಂಬರ್,22,2025 (www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಕೇವಲ ಹಬ್ಬವಾಗಿರದೇ ನಾಡಿನ ಜನರ ನಾಡಿ ಮಿಡಿತ ಹಾಗೂ ಸಂಸ್ಕೃತಿಯ ಉತ್ಸವವಾಗಿದ್ದು ಸಮಗ್ರ ಸಂಸ್ಕೃತಿಯ ಪ್ರತೀಕವಾಗಿದೆ.  ಎಲ್ಲರನ್ನು ಒಳಗೊಳ್ಳುವ ಘಳಿಗೆ ಮತ್ತು ಸಮನ್ವಯದ ಮೇಳವಾಗಿದೆ ಎಂದು ಹನ್ನೊಂದು ದಿನದ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರು ಹಾಗೂ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ತಿಳಿಸಿದರು.

ಕರ್ನಾಟಕ ಸರ್ಕಾರ ಮತ್ತು ಜಿಲ್ಲಾಡಳಿತ ವತಿಯಿಂದ ಚಾಮುಂಡಿಬೆಟ್ಟದಲ್ಲಿ ಆಯೋಜಿಸಲಾಗಿದ್ದ ನಾಡ ಹಬ್ಬ ದಸರಾ ಉದ್ಘಾಟನೆ ಇಂದು ಶುಭ ವೃಶ್ಚಿಕ ಲಗ್ನದಲ್ಲಿ ಸಾಹಿತಿಗಳು ಹಾಗೂ 2025 ರ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ನಾಡದೇವಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಈ ನೆಲದಲ್ಲಿ ಹುಟ್ಟಿದ ಪ್ರತಿಯೊಂದು ಜೀವಿಗೂ ಮಣ್ಣಿನ ವಾರಸುದಾರಿಕೆ, ಜವಾಬ್ದಾರಿ, ಸ್ಪಂದನೆ ನೆನಪುಗಳು ಇವೆ. ಅಂತೆಯೇ ಮೈಸೂರು ಅರಸರ ಸಂಸ್ಕೃತಿಯ ಪರಂಪರೆಯಿಂದ ಹಿಡಿದು ಕನ್ನಡ ಭಾಷೆಯ ಹೃದಯದ ಆಳದ ಸ್ಪಂದನೆಯವರೆಗೆ ಈ ಹಬ್ಬವೂ ನಮ್ಮ ಸ್ಮರಣೆಯಲ್ಲಿರುತ್ತದೆ ಎಂದರು.

ಸಂಸ್ಕೃತಿ ಎಂದರೆ ಬೇರೆ ಬೇರೆ ಧ್ವನಿಗಳ ಸಂಗಮ ಮಾತ್ರವಲ್ಲದೇ ವಿಭಿನ್ನತೆಯಲ್ಲೇ ಏಕತೆಯ ಸುಗಂಧವಾಗಿದೆ. ದಸರಾ ಹಬ್ಬವು ಸಮಗ್ರ ಸಂಸ್ಕೃತಿಯ ಪ್ರತೀಕವಾಗಿದ್ದು, ಹೃದಯಗಳನ್ನು ಒಂದುಗೂಡಿಸುವ ಸೇತುವೆಯಾಗಿದೆ. ಹಾಗಾಗಿ ಇಲ್ಲಿ ದ್ವೇಷವನ್ನು ಬೆಳೆಸುವುದರ ಬದಲು ಪ್ರೀತಿಯನ್ನು ಹುಟ್ಟಿಸುವುದರೊಂದಿಗೆ ನಮ್ಮ ಜೀವನದ ಪಾಠಗಳು ಎಂದಿಗೂ ಹೊಸ್ತಿಲ ಗಡಿ ದಾಟದೇ, ಯಾರನ್ನು ನೋಯಿಸದ ಜೀವ ಪರ ಮಾನವೀಯ ದರ್ಶನಗಳನ್ನು ಬೆಳೆಸಿಕೊಳ್ಳುವ ಮೂಲಕ ಎಲ್ಲರನ್ನು ಒಳಗೊಳ್ಳುವಂತಹ ಮನಸ್ಸು ಹಾಗೂ ಬದುಕನ್ನು ಗೌರವಿಸುವುದಾಗಿದೆ ಎಂದು ತಿಳಿಸುವ ಮೂಲಕ ದಸರಾ ಉದ್ಘಾಟಕರಾಗಿ ಆಯ್ಕೆಯಾದ ಬಗ್ಗೆ ತಮಗೆ ಇರುವ ಹೆಮ್ಮೆ ಹಾಗೂ ಪ್ರೀತಿ ಕುರಿತು ತಿಳಿಸಿದರು.

ನಾವೆಲ್ಲರೂ ಪ್ರಜಾಪ್ರಭುತ್ವದ ಮೌಲ್ಯ, ನಂಬಿಕೆ ಮತ್ತು ಸಂಸ್ಕೃತಿಗಳನ್ನು ಗೌರವಿಸುವ ಮೂಲಕ ನಮ್ಮ ಬದುಕನ್ನು ಶ್ರೀಮಂತಗೊಳಿಸಿಕೊಳ್ಳಬೇಕಿದ್ದು, ದಸರಾ ಹಬ್ಬವು ಮೈಸೂರು ನಗರ, ನಾಡು, ದೇಶಕ್ಕೆ ಸೀಮಿತವಾಗದೇ ಜಗತ್ತಿನಾದ್ಯಂತ ಮಾನವ ಕುಲಕ್ಕೆ ಶಾಂತಿ, ಪ್ರೀತಿ ಮತ್ತು ನ್ಯಾಯದ ದೀಪ ಬೆಳಗಿಸುವಂತಿರಬೇಕೆಂದು ಆಶಿಸಿದರು.

ಇಡೀ ಜಗತ್ತು ಯುದ್ಧದ ಹಾದಿಯಲ್ಲಿ ನಡೆಯುತ್ತಿರುವಾಗ ಮನುಕುಲವೂ ದ್ವೇಷ ಮತ್ತು ರಕ್ತಪಾತದಲ್ಲಿ ಮುಳುಗುತ್ತಿರುವಾಗ ಮೈಸೂರು ದಸರಾ ಘೋಷಣೆ ನಮ್ಮೆಲ್ಲರ ಕಿವಿಗಳಲ್ಲಿ ಪ್ರತಿಧ್ವನಿಸಲಿ ಹಾಗೂ ಮೇಳೈಸಲಿ ಎಂದು ತಿಳಿಸುವ ಮೂಲಕ ಸರ್ವ ಜನಾಂಗದ ಶಾಂತಿಯ ತೋಟ ಎಂದರಲ್ಲದೇ, ನಾವೆಲ್ಲರೂ ಅಸ್ತ್ರಗಳಿಂದ ಅಲ್ಲ ಅಕ್ಷರಗಳಿಂದ ನಮ್ಮ ಬದುಕನ್ನು ಗೆಲ್ಲಬೇಕೆಂದರು.

ಮನುಷ್ಯ ಮನುಷ್ಯರನ್ನು ಪ್ರೀತಿಸಬೇಕು: ಜಾತಿ ಧರ್ಮದ ಆಧಾರದಲ್ಲಿ ದ್ವೇಷಿಸಬಾರದು-ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಬಾನು ಮುಷ್ತಾಕ್ ಅವರು ಹುಟ್ಟಿನಿಂದಲೇ ಮುಸ್ಲಿಂ ಮಹಿಳೆಯಾಗಿದ್ದರೂ, ಅವರು ಸಹ ಮನುಷ್ಯರೇ ಆಗಿರುತ್ತಾರೆ. ಮನುಷ್ಯ ಮನುಷ್ಯರನ್ನು ಪ್ರೀತಿಸಬೇಕಾಗಿದ್ದು, ನಾವು ಯಾರನ್ನು ಸಹ ಜಾತಿ, ಧರ್ಮದ ಆಧಾರದ ಮೇಲೆ ದ್ವೇಷಿಸಬಾರದು. ಹಾಗಾಗಿ ಎಲ್ಲರಲ್ಲೂ ಪರಸ್ಪರ ಪ್ರೀತಿಯಿಂದಿರಬೇಕು ಎಂದು ನಾಡಹಬ್ಬ ದಸರಾ ಹಬ್ಬದ ಉದ್ಘಾಟಕರ ಆಯ್ಕೆ ಕುರಿತು ಸ್ಪಷ್ಪನೆ ನೀಡಿದರು.

ವಿಜಯನಗರ ಅರಸರಿಂದಲೂ ಸಹ ದಸರಾ ಮಹೋತ್ಸವ ಆಚರಣೆಯಲ್ಲಿದ್ದು, ವಿಜಯನಗರ ಸಾಮ್ರಾಜ್ಯ ಪತನದ ನಂತರ 1610 ರಲ್ಲಿ ಶ್ರೀರಂಗಪಟ್ಟಣದಲ್ಲಿ ಮೊದಲು ದಸರಾ ಮಹೋತ್ಸವ ಆಚರಣೆ ನೆರವೇರಿತು. ಹಾಗಾಗಿ ನಾವು ಇತಿಹಾಸದ ಕುರಿತು ಅರಿತು ಕೊಳ್ಳುವುದು ಮುಖ್ಯವಾಗಿರುತ್ತದೆ. ಯಾರಿಗೆ ಇತಿಹಾಸ ತಿಳಿದಿರುವುದಿಲ್ಲವೋ ಅವರು ದೃಢ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿರುವುದಿಲ್ಲ. ಹಾಗಾಗಿಯೇ ಶಾಲಾ, ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಕಡ್ಡಾಯ ಮಾಡಲಾಗಿರುತ್ತದೆ ಎಂದರು.

ಹಕ್ಕುಗಳು ಮತ್ತು ಜವಾಬ್ದಾರಿಗಳು ಎರಡು ಒಂದೇ ಆಗಿದ್ದು, ಜೊತೆಯಲ್ಲಿರುತ್ತವೆ. ಆದ್ದರಿಂದ ಮುಂದಿನ ಪೀಳಿಗೆ ವ್ಯವಸ್ಥೆಯನ್ನು ಅರ್ಥ ಮಾಡಿಕೊಲ್ಳಬೇಕಾದರೆ ದಾರಿ ತಪ್ಪಿಸುವ ಕೆಲಸ ಮಾಡಬಾರದು. ಇತಿಹಾಸವನ್ನು ತಿರುಚಿ ತಮ್ಮ ಸ್ವಾರ್ಥ  ರಾಜಕೀಯಕ್ಕೆ ಬಳಸಿಕೊಳ್ಳಬಾರದು. ಅದಕ್ಕಾಗಿ ಬೇರೆ ವೇದಿಕೆಗಳಿದ್ದು ಇಂತಹ ಸುಸಂದರ್ಭದಲ್ಲಿ ನಾವೆಲ್ಲರೂ ಒಂದೇ ಎಂಬ ಭಾವ ಹೊಂದಿರಬೇಕೆಂದರು.

ನಮ್ಮ ಸಂವಿಧಾನ ಜಾತ್ಯಾತೀತ ಮತ್ತು ಧರ್ಮಾತೀತವಾಗಿದ್ದು, ಸಂವಿಧಾನವನ್ನು ಅರ್ಥೈಸಿಕೊಳ್ಳಬೇಕಿದೆ. ವೈವಿಧ್ಯತೆಯಲ್ಲಿ ಏಕತೆ ಸಾರಬೇಕಾಗಿದ್ದು, ಯಾವುದೇ ಧರ್ಮ, ಜಾತಿ ಸೇರಿದರೂ ನಾವೆಲ್ಲರೂ ಭಾರತೀಯರು. ಹಾಗಾಗಿ ಸಂವಿಧಾನದ ಮೂಲತತ್ವವನ್ನು ಅರ್ಥ ಮಾಡಿಕೊಳ್ಳಬೇಕು. ಇಲ್ಲವಾದರೆ ಸಂವಿಧಾನಕ್ಕೆ ಮಾಡುವ ಅಪಚಾರವಾಗುತ್ತದೆ ಎಂದರು.

ದಸರಾ ಹಬ್ಬ ಈ ಬಾರಿ ಹತ್ತು ದಿನವಲ್ಲದೇ ಹನ್ನೊಂದು ದಿನದ ಆಚರಣೆಯಾಗಿದ್ದು, ಎಂದಿನಂತೆ ಈ ಬಾರಿಯೂ ಸಹ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಅಲ್ಲದೇ ಈ ಬಾರಿಯ ಜಂಬೂ ಸವಾರಿಯಲ್ಲಿ ಗ್ಯಾರೆಂಟಿ ಯೋಜನೆ ಕುರಿತು ತಿಳಿಸಲಾಗುತ್ತಿದ್ದು, ಸ್ವಾತಂತ್ರ್ಯ ಬಂದು 78 ವರ್ಷವಾದರೂ ಅಸಮಾನತೆ, ತಾರತಮ್ಯ ಹೋಗಲಾಡಿಸಲು ಸಾಧ್ಯವಾಗಿರುವುದಿಲ್ಲ. ಹಾಗಾಗಿ ಈ ಐದು ಗ್ಯಾರೆಂಟಿ ಯೋಜನೆ ತರಲಾಗಿದೆ ವಿನಃ ರಾಜಕೀಯ ಲಾಭಕ್ಕಾಗಿ ಮಾಡಿರುವುದಲ್ಲ. ಕಡುಬಡವರಿಗೆ ಶಕ್ತಿ ತುಂಬಲು ಹಾಗೂ ಅವರನ್ನು ಆರ್ಥಿಕ, ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಜಾರಿಗೆ ತರಲಾಗಿದೆ. ಹಿಂದುಳಿದವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಮುಖ್ಯವಾಗಿ ಜಾತಿ ವ್ಯವಸ್ಥೆ ತೆಗೆದು ಹಾಕಬೇಕಾಗಿದ್ದು, ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ. ಮಹದೇವಪ್ಪ ಅವರು ಮಾತನಾಡಿ, ನಾಡಹಬ್ಬ ದಸರಾ ಮಹೋತ್ಸವವು ಸೌಹರ್ದತೆ ಸಡಗರದ ಹಬ್ಬವಾಗಿದ್ದು, ಸುಮಾರು 15 ನೇ ಶತಮಾನದಲ್ಲಿಯೇ ಶ್ರೀ ಕೃಷ್ಣ ದೇವರಾಯ ಒಡೆಯರ್ ಅವರು ಪ್ರಾರಂಭಿಸಿರುತ್ತಾರೆ ಎಂದರು.

ಕೃಷ್ಣ ದೇವರಾಯ ಒಡೆಯರ್ ಅವರು ತಮ್ಮ ಸಾಮಂತರನ್ನೆಲ್ಲಾ ಒಂದುಗೂಡಿಸಿ ತಮ್ಮ ಸಾಧನೆ ಹಾಗೂ ಗೆಲುವನ್ನು ಸಂಭ್ರಮದಿಂದ ಶಕ್ತಿ, ಸಾಹಿತ್ಯ, ಸೌಹರ್ದತಾ ವೈಭವಗಳ ಸಾರುವಿಕೆಗಾಗಿ ಈ ಆಚರಣೆ ಮಾಡಲಾಗುತ್ತಿದ್ದು, ಬಳಿಕ ಧಾರ್ಮಿಕ ಸಹಿಷ್ಣತೆಯಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಆಚರಿಸುತ್ತಿದ್ದರು. ಅಂತೆಯೇ ಈ ಹಬ್ಬವು ಚಾರಿತ್ರಿಕ ಹಿನ್ನೆಲೆಯನ್ನು ಹೊಂದಿದ್ದು, ಯಾವುದೇ ರೀತಿಯ  ಜಾತಿ, ಧರ್ಮ ಐತಿಹ್ಯವನ್ನು ಮೀರಿ ಆಚರಣೆ ಮಾಡಲಾಗುತ್ತದೆ. ಆದ್ದರಿಂದಲೇ ಈ ಹಬ್ಬವೂ ಅಂತರಾಷ್ಟ್ರೀಯ ಮಟ್ಟದಲ್ಲೂ ಸಹ ಛಾಪನ್ನು ಮೂಡಿಸಿದೆ ಎಂದರು.

ಕಾರ್ಯಕ್ರಮದಲ್ಲಿ ಪಶು ಸಂಗೋಪನೆ ಇಲಾಖೆ ಸಚಿವ ಕೆ.ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ಎಸ್ ತಂಗಡಗಿ, ಪ್ರವಾಸೋದ್ಯಮ ಇಲಾಖೆ ಸಚಿವ ಹೆಚ್.ಕೆ.ಪಾಟೀಲ್‌, ಆಹಾರ, ನಾಗರೀಕ ಮತ್ತು ಸರಬರಾಜು ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ, ಶಾಸಕ ಜಿ.ಟಿ.ದೇವೇಗೌಡ, ಅರಣ್ಯ ವಿಹಾರ ಧಾಮಗಳ ಅಧ್ಯಕ್ಷ ಅನಿಲ್ ಚಿಕ್ಕಮಾದು, ಚೆಸ್ಕಾಂ ಅಧ್ಯಕ್ಷ  ರಮೇಶ್ ಬಂಡಿ ಸಿದ್ದೇಗೌಡ, ಗ್ಯಾರೆಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದದ ಉಪಾಧ್ಯಕ್ಷರಾದ ಡಾ.ಪುಷ್ಪಾ ಅಮರನಾಥ್, ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕತನ್ವೀರ್ ಸೇಠ್, ಕೆ ಆರ್ ನಗರ ವಿಧಾನಸಭಾ ಕ್ಷೇತ್ರದ ಶಾಸಕ ರವಿಶಂಕರ್ ಡಿ, ನಂಜನಗೂಡು ವಿಧಾನ ಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವ ನಾರಾಯಣ್, ಕೃಷ್ಣ ರಾಜ ವಿಧಾನ ಸಭಾ ಕ್ಷೇತ್ರದ ಶಾಸಕ ಶ್ರೀವತ್ಸ, ಚಾಮರಾಜ ವಿಧಾನ ಸಭಾ ಕ್ಷೇತ್ರದ, ವಿಧಾನ ಪರಿಷತ್ ಸದಸ್ಯರಾದ ಡಿ.ತಿಮ್ಮಯ್ಯ, ಮಂಜೇಗೌಡ, ಶಿವಕುಮಾರ್ ಕೆ,  ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ಕನ್ನಡ ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಕೆ.ಎಂ. ಗಾಯಿತ್ರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ಕಾರ್ಯದರ್ಶಿ ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜು, ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರೂಪ, ಚಾಮುಂಡಿ ಬೆಟ್ಟದ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಾಗಮ್ಮ, ಉಪಾಧ್ಯಕ್ಷರು ಹಾಗೂ ದಸರಾ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.

Key words: Mysore dasara, symbol of holistic, culture, Banu Mushtaq

The post ದಸರಾ ಹಬ್ಬ ಸಮಗ್ರ ಸಂಸ್ಕೃತಿಯ ಪ್ರತೀಕ, ನಾಡಿನ ಜನರ ನಾಡಿ ಮಿಡಿತ- ಬಾನು ಮುಷ್ತಾಕ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದಸರಾ ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳ: ತಾಯಿ ಚಾಮುಂಡಿ ಶಕ್ತಿ, ಧೈರ್ಯ, ರಕ್ಷಕತ್ವದ ಸಂಕೇತ- ಬಾನು ಮುಷ್ತಾಕ್
ಮೈಸೂರು, ಸೆಪ್ಟೆಂಬರ್ 22,2025 (www.justkannada.in): ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತರಾಷ್ಟ್ರೀಯ ಬೂಕರ್ ಬಹುಮಾನ ವಿಜೇತೆ ಬಾನು ಮುಷ್ತಾಕ್ ಅವರು ತಿಳಿಸಿದರು.

ಇಂದು ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ಪ್ರಾರಂಭವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಿ ಸಾಹಿತಿ ಬಾನು ಮುಷ್ತಾಕ್ ಮಾತನಾಡಿದರು.

ಮೈಸೂರು ದಸರಾದ ಪವಿತ್ರದ ಕ್ಷಣದಲ್ಲಿ ಚಾಮುಂಡಿ ತಾಯಯ ಕೃಪೆಯ ನೆರಳಿನಲ್ಲಿ, ಈ ವೇದಿಕೆಯಿಂದ ನಿಮ್ಮೆದುರು ನಿಲ್ಲುವ ಅವಕಾಶ ದೊರೆತಿರುವುದು ನನ್ನ ಜೀವನದ ಅತ್ಯಂತ ಗೌರವದ ಘಳಿಕೆ.  ದಸರಾ ಎಂದರೆ ಕೇವಲ ಹಬ್ಬವಲ್ಲ, ಇದು ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳ. ಈ ನೆಲದಲ್ಲಿ ಹುಟ್ಟಿದ ಪ್ರತಿಯೊಂದು ಜೀವಕ್ಕೂ ಈ ಮಣ್ಣಿನ ಬಾರಿಸುದಾರಿಕೆ, ಸ್ಪಂದನೆ ಮತ್ತು ನೆನಪುಗಳಿವೆ ಎಂದರು.

ಸರ್ವ ಜನಾಂಗದ ಶಾಂತಿಯ ತೋಟ’-ಈ ನೆಲದ ಸಂಸ್ಕೃತಿ

ಮೈಸೂರು ಅರಸರ ಸಂಸ್ಕೃತಿಯ ಪರಂಪರೆಯಿಂದ ಹಿಡಿದು, ಕನ್ನಡ ಭಾಷೆಯ ಅಂತರಾಳದ ಹೃದಯಸ್ಪಂದನದವರೆಗೆ ಈ ಹಬ್ಬವು ನಮಗೆ ಸ್ಮರಿಸುತ್ತದೆ. ಸಂಸ್ಕೃತಿ ಎಂದರೆ ಬೇರೆ ಬೇರೆ ಧ್ವನಿಗಳ ಸಂಗಮ. ವಿಭಿನ್ನತೆಯಲ್ಲೇ ಏಕತೆಯ ಸುಗಂಧ. ಮಹಾರಾಜರು ಜಯಚಾಮರಾಜೇಂದ್ರ ಒಡೆಯರು ಮುಸ್ಲಿಂರ ನಂಬಿ, ಅವರನ್ನು ಅನುಮಾನಿಸದೇ, ಅಂಗರಕ್ಷಕರ ಪಡೆಯ ಸದಸ್ಯರಾಗಿದ್ದರು, ಇದು ನಮಗೆ ಬಹಳ ಹೆಮ್ಮೆಯ ಮತ್ತು ಅಪ್ಯಾಯಮಾನವಾದ ವಿಷಯ. ಸಂಸ್ಕೃತಿ ಎಂದರೆ ಹೃದಯದಗಲವನ್ನು ಹುಟ್ಟಿಸುವ  ನನ್ನ ಧಾರ್ಮಿಕ ನಂಬಿಕೆ, ಯಾವಾಗಲೂ  ಜೀವ ಪರ ಮಾನವೀಯಪರ. ಈ ನೆಲದ ಸಂಸ್ಕೃತಿಯ ಮೂಲ- ಎಲ್ಲರನ್ನೊಳಗೊಳ್ಳುವ ಎಲ್ಲರ ಬದುಕನ್ನು ಗೌರವಿಸುವ , ನಮ್ಮೆಲ್ಲರ ಸರ್ವ ಜನಾಂಗದ ಶಾಂತಿಯ ತೋಟ ಎಂದರು.

ದಸರಾ- ಶಾಂತಿಯ ಹಬ್ಬ, ಸೌಹಾರ್ಧ ಮೇಳ

ಮೈಸೂರು ದಸರಾ ಘೋಷಣೆಯ ನಮ್ಮೆಲ್ಲರ ಕಿವಿಯಲ್ಲಿ ಪ್ರತಿಧ್ವನಿಸಲಿ. ಇದು ಶಾಂತಿಯ ಹಬ್ಬ, ಸೌಹಾರ್ದದ ಮೇಳ, ಇದು ಸರ್ವಜನಾಂಗದ ಶಾಂತಿಯ ತೋಟ. ನಾವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸಿ, ಪರಸ್ಪರರ ನಂಬಿಕೆಗಳನ್ನು, ಸಂಸ್ಕೃತಿಗಳನ್ನು ಗೌರವಿಸುವುದರ ಮೂಲಕ ನಮ್ಮ ಬದುಕನ್ನು ಶ್ರೀಮಂತಗೊಳಿಸಬೇಕಿದೆ. ಈ ನೆಲದ ಸುಗಂಧವನ್ನು ಐಕ್ಯತೆಯಾಗಲಿ,  ನೆಲದ ಬಿಸಿಲು ಕೂಡ ಸೌಹಾರ್ದತೆಯಿಂದ ಕೂಡಿದೆ. ಈ ನೆಲದ ಬಿಸಿಲು ಕೂಡ ಮಾನವೀಯ ಪ್ರೀತಿಯ ಪ್ರತೀಕವಾಗಿದೆ. ಈ ಸಂದರ್ಭದಲ್ಲಿ ಚಾಮುಂಡಿ ತಾಯಿಯ ಮಹಿಮೆ ನಮ್ಮೆಲ್ಲರ ಜೀವನಕ್ಕೆ ಮಾರ್ಗದರ್ಶಕವಾಗಿರಲಿ. ತಾಯಿ ಚಾಮುಂಡಿಯ ಸತ್ಯ, ಧೈರ್ಯ ಹಾಗೂ ರಕ್ಷಕತ್ವದ ಸಂಕೇತ. ನಮ್ಮೊಳಗಿನ ದ್ವೇಷ, ಅಸಹಿಷ್ಣುತೆಗಳನ್ನು ನಾಶವಾಗಲೆಂದು  ಬಯಸುತ್ತೇನೆ. ಈ ದಸರಾ ಹಬ್ಬ ಕೇವಲ ಮೈಸೂರು ನಗರಕ್ಕೆ ಸೀಮಿತವಾಗದೇ, ನಮ್ಮ ನಾಡಿಗೆ ಮಾತ್ರ , ದೇಶಕ್ಕೆ ಮಾತ್ರ ಸೀಮಿತವಾಗದೇ  , ಇಡೀ ಜಗಗತ್ತಿನಾದ್ಯಂತ ಮಾನವ ಕುಲಕ್ಕೆ ಶಾಂತಿ ಸಹಾನುಭೂತಿ, ಪ್ರೀತಿ ಮತ್ತು ನ್ಯಾಯದ ದೀಪವನ್ನು ಬೆಳೆಗಿಸಲೆಂದು ಹಾರೈಸುತ್ತೇನೆ. ಇಂದು ಬೆಳೆಗಿಸಿದ ದೀಪ ಈ ಸಂದೇಶದೊಂದಿಗೆ ಇಡೀ ಪ್ರಪಂಚದಾದ್ಯಂತ ತನ್ನ ನೆಲೆಯನ್ನು ಕಂಡುಕೊಳ್ಳಲಿ ಎಂದು ಆಶಿಸುತ್ತೇನೆ ಎಂದರು.

ವ್ಯಕ್ತಿಯಿಂದ ಸಮಷ್ಠಿಯೆಡೆಗೆ ಸಾಗುವುದೇ ಬದುಕಿನ ನಿಜವಾದ ದಾರಿ

ನನ್ನ ಬದುಕು ನನಗೆ ಅನೇಕ ಪಾಠಗಳನ್ನು ಕಲಿಸಿದೆ. ಅದರಲ್ಲಿ ಮುಖ್ಯಪಾಠವೆಂದರೆ, ವ್ಯಕ್ತಿಯಿಂದ ಸಮಷ್ಠಿಯೆಡೆಗೆ ಸಾಗುವ ದಾರಿ ಮಾತ್ರ ನಿಜವಾದ ದಾರಿ. ನನ್ನ ಧಾರ್ಮಿಕ ನಂಬಿಕೆಗಳು, ನನ್ನ ಜೀವನ ದರ್ಶನ ಎಂದಿಗೂ ಜೀವಪರ. ಅವು ಮರದ ನೆರಳಿನಂತೆ, ತಂಪಾದ ನದಿಯಂತೆ, ಇಂದಿನ ಜಗತ್ತು ಯುದ್ಧದ ಜ್ವಾಲೆಯಲ್ಲಿ ಸುಡುತ್ತಿದೆ. ಇಂದು ಮನುಕುಲವು ದ್ವೇಷ ಮತ್ತು ರಕ್ತಪಾತದಲ್ಲಿ ಮುಳುಗಿರುವಾಗ, ದಸರಾ ಘೋಷಣೆಯು  ಎಲ್ಲರ ಕಿವಿಯಲ್ಲಿ ಪ್ರತಿಧ್ವನಿಸಲಿ , ಇದು ಶಾಂತಿಯ ಹಬ್ಬ, ಸೌಹಾರ್ದದ ಮೇಳ. ಇದು ಸರ್ವಜನಾಂಗದ ಶಾಂತಿಯ ತೋಟ. ನನ್ನ ಜೀವನದ ದರ್ಶನ ಯಾವತ್ತಿಗೂ ಜೀವಪರ. ಅಸ್ತ್ರಗಳಿಂದಲ್ಲ, ಅಕ್ಷರದಿಂದ ಬದುಕನ್ನು ಗೆಲ್ಲಬಹುದು. ಹಗೆಗಳಿಂದಲ್ಲ, ಪ್ರೀತಿಯಿಂದ ಬದುಕನ್ನು ಅರಳಿಸಬಹುದು  ಎಂದರು.

ಪ್ರತಿಯೊಬ್ಬರ ಧ್ವನಿಯನ್ನು ಗೌರವಿಸುವ ಮನೋಭಾವ

ಈ ನೆಲದ ಪರಂಪರೆಯೇ ಸರ್ವಜನಾಂಗದ ಶಾಂತಿಯ ತೋಟವಾಗಿದೆ. ಈ ತೋಟದಲ್ಲಿ ಪ್ರತಿ ಹೂವು ತನ್ನ ಬಣ್ಣದಲ್ಲೇ ಅರಳಲಿ, ಪ್ರತಿ ಹಕ್ಕಿ ತನ್ನ ರಾಗದಲ್ಲೇ ಹಾಡಲಿ, ಆದರೆ ಒಟ್ಟಿಗೆ ಸೇರಿದಾಗ ಅದು ಸೌಹಾರ್ದ ಸಿಂಫನಿಯಾಗಲಿ. ಪ್ರಜಾಪ್ರಭುತ್ವವು ಕೇವಲ ವ್ಯವಸ್ಥೆಯಲ್ಲ, ಅದು ಮೌಲ್ಯ. ಅದು ಪ್ರತಿಯೊಬ್ಬರ ಧ್ವನಿಯನ್ನು ಗೌರವಿಸುವ ಮನೋಭಾವ. ಅದು ಬೇರೆಯವರ ಬದುಕಿನಲ್ಲಿ ಅರ್ಥಪೂರ್ಣವಾಗಿ ನಡೆದುಕೊಳ್ಳುವ ಜವಾಬ್ದಾರಿ. ಅದನ್ನು ಗೌರವಿಸುವು ನಮ್ಮೆಲ್ಲರ ಕರ್ತವ್ಯ ಎಂದರು.

ನಾವೆಲ್ಲಾ ಒಂದೇ ಗಗನದಡಿಯ ಪಯಣಿಗರು

ನಾವು ಎಲ್ಲರೂ ಒಂದೇ ಗಗನದಡಿಯ ಪಯಣಿಗರು. ಆಕಾಶವು ಯಾರನ್ನೂ ಬೇರ್ಪಡಿಸುವುದಿಲ್ಲ. ಭೂಮಿ ಯಾರನ್ನೂ ತಳ್ಳುವುದಿಲ್ಲ. ಮನುಷ್ಯನು ಮಾತ್ರ ಗಡಿ ಹಾಕುತ್ತಾನೆ. ಆ ಗಡಿಗಳನ್ನು ನಾವೇ ಅಳಿಸಬೇಕು. ಇಂದು ಈ ಹಬ್ಬ ಮೈಸೂರಿನ ಬೀದಿಗಳಲ್ಲಿ ಮಾತ್ರವಲ್ಲ. ಇಡೀ ಜಗತ್ತಿನ ಹೃದಯಗಳಲ್ಲಿ ಬೆಳಗಲಿ ಎಂದರು.

ಸಂಪತ್ತನ್ನು ಹಂಚಿದಾದ ಮಾತ್ರ ಅದು ಬೆಳೆಯುತ್ತದೆ

ಇತಿಹಾಸದತ್ತ ನೋಡಿದರೆ ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದೆಂದಿಗೂ ಪ್ರಸ್ತುತವಾಗುತ್ತಾರೆ. ಅವರು ಹಂಚಿಕೊಳ್ಳುವ ಮನದ ಅರಸ. ರಾಜಕೀಯ, ಆರ್ಥಿಕ, ಸಾಮಾಜಿಕ ನ್ಯಾಯದ ಔದಾರ್ಯದ ದೊರೆಯಾಗಿದ್ದರು. ಭೇದ ಭಾವಕ್ಕಿಂತ ವಿಶಾಲ ಮನಸ್ಸಿಗೆ ಗೌರವವಿತ್ತು. ಅವರು ನೀಡಿದ ಸಂದೇಶ ಸಂಪತ್ತನ್ನು ಹಂಚಿದಾದ ಮಾತ್ರ ಅದು ಬೆಳೆಯುತ್ತದೆ. ಶಕ್ತಿಯನ್ನು ಹಂಚಿಕೊಂಡಾಗ ಮಾತ್ರ ದೀರ್ಘಕಾಲ ಬದುಕತ್ತದೆ ಎಂದರು.

ಸಂಸ್ಕೃತಿ ನಮ್ಮ ಬೇರು ಸೌಹಾರ್ದ ನಮ್ಮ ಶಕ್ತಿ

ಸಂಸ್ಕೃತಿ ನಮ್ಮ ಬೇರು. ಸೌಹಾರ್ದ ನಮ್ಮ ಶಕ್ತಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಭಾರತದ ನೆಲೆಯಲ್ಲಿ ನಮ್ಮ ಯುವಶಕ್ತಿಯೊಂದಿಗೆ ಸೇರಿ ಮಾನವೀಯ ಮೌಲ್ಯಗಳ, ಪ್ರೀತಿಯ ಹೊಸ ಸುಧಾರಿತ ಸಮಾಜವನ್ನು ಕಟ್ಟೋಣ. ತಾನೊಬ್ಬ ಕವಿಯತ್ರಿಯಾಗಿದ್ದು, ಕವಿತೆಯ ಮೂಲಕ ನನ್ನ ಸಂದೇಶವನ್ನು ತಿಳಿಸಲು ಬಯಸಿದ್ದು, ಮುಸ್ಲಿಂ ಹೆಣ್ಣುಮಗಳು ಬಾಗಿನವನ್ನು ಪಡೆದಾಗಿನ ತನ್ನ ಮನಸ್ಸಿನ ಭಾವನೆಯನ್ನು ವ್ಯಕ್ತಪಡಿಸುವ ಕವಿತೆಯನ್ನು ಓದಿದರು.

Key words: Mysore dasara, Chamundeshwari, symbol ,strength, courage, Banu Mushtaq

The post ದಸರಾ ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳ: ತಾಯಿ ಚಾಮುಂಡಿ ಶಕ್ತಿ, ಧೈರ್ಯ, ರಕ್ಷಕತ್ವದ ಸಂಕೇತ- ಬಾನು ಮುಷ್ತಾಕ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಬಾಗಿನ” ವಾಚಿಸಿ ದಸರಾ ಉದ್ಘಾಟನೆಗೆ ಮೆರಗು ತಂದ ಬಾನು ಮುಷ್ತಾಕ್.
ಮೈಸೂರು,ಸೆಪ್ಟಂಬರ್,22,2025 (www.justkannada.in): ಮೈಸೂರು ದಸರಾ ಉದ್ಘಾಟನೆ ಇದು ಜೀವನದ ಅತ್ಯಂತ ಗೌರವದ ಸಂಗತಿ ಇದು ನಾಡಿನ ಸಂಸ್ಕೃತಿಯ ಉತ್ಸವ ಹಾಗೂ ಸಮನ್ವಯದ ಮೇಳ ದಸರಾ ಕೇವಲ ಮೈಸೂರು ನಾಡು, ದೇಶಕ್ಕೆ ಮಾತ್ರ ಸೀಮಿತವಾಗಬಾರದು ಇಡೀ ಪ್ರಪಂಚದಾದ್ಯಂತ ನೆಲೆ ಕಂಡುಕೊಳ್ಳಲಿ ಎಂದು ಸಾಹಿತಿ ಬಾನು ಮುಷ್ತಾಕ್ ನುಡಿದರು.

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಿ ಮಾತನಾಡಿದ ಸಾಹಿತಿ ಬಾನು ಮುಷ್ತಾಕ್ ಅವರು, ದಸರಾ ಉತ್ಸವದ ಉದ್ಘಾಟನೆಯನ್ನು ತಾಯಿ ಚಾಮುಂಡೇಶ್ವರಿಯ ಕೃಪಾಶೀರ್ವಾದದಿಂದ ಉದ್ಘಾಟನೆ ಮಾಡಿದ್ದೇವೆ. ನನ್ನ ಆಪ್ತ ಗೆಳತಿ ಚಾಮುಂಡಿ ಬೆಟ್ಟಕ್ಕೆ ಕರೆದುಕೊಂಡು ಹೋಗುತ್ತೇನೆ ಎಂದು ಹೇಳಿದ್ದರು. ಆದರೆ ತಾಯಿ ಚಾಮುಂಡೇಶ್ವರಿ ನನ್ನ ಈ ರೀತಿ ಕರೆಸಿಕೊಳ್ಳುತ್ತಿದ್ದಾಳೆ. ಒಂದಷ್ಟು ವಿರೋಧಗಳು ವ್ಯಕ್ತವಾದರೂ ನನ್ನನ್ನ ತಾಯಿ ಕರೆಸಿಕೊಂಡಿದ್ದಾಳೆ ಚಾಮುಂಡಿ ತಾಯಿಯ ಕೃಪೆಯ ನೆರಳಿನಲ್ಲಿ ನಾನು ನಿಮ್ಮೆದುರು ನಿಂತಿದ್ದೇನೆ. ಇದು ಜೀವನದ ಅತ್ಯಂತ ಗೌರವದ ಸಂಗತಿ. ಇದು ನಾಡಿನ ಸಂಸ್ಕೃತಿಯ ಉತ್ಸವ ಹಾಗೂ ಸಮನ್ವಯದ ಮೇಳ. ಈ ನೆಲದಲ್ಲಿ ಹುಟ್ಟಿದ್ದ ಪ್ರತಿಯೊಬ್ಬರಿಗೂ ಇದರ ಅರ್ಹತೆ ಇದೆ ಎಂದರು.

ಎಲ್ಲರನ್ನು ಒಳಗೊಂಡು ಆಚರಿಸುವ ಹಬ್ಬ ಇದು. ನನ್ನ ಆಪ್ತ ಸಂಬಂಧಿಯೊಬ್ಬರು ನನಗೆ ಅವರು ಮಾವ ಆಗಬೇಕು. ಅವರು ಇಲ್ಲೇ ಬೆಳಗೊಳದಲ್ಲಿ ಇದ್ದರು. ಮಹಾರಾಜರ ಅಂಗರಕ್ಷಣೆಯ ತಂಡದಲ್ಲಿ ಸೈನಿಕರಾಗಿದ್ದರು. ಮಹಾರಾಜರು ಜಯಚಾಮರಾಜೇಂದ್ರ ಒಡೆಯರ್ ಮುಸ್ಲಿಂ ಅವರನ್ನು ನಂಬಿದರು. ಅವರ ಅಂಗಪಡೆಯ ಸದಸ್ಯರನ್ನಾಗಿ ಮಾಡಿಕೊಂಡಿದ್ದರು. ನನ್ನ ಧಾರ್ಮಿಕ ನಂಬಿಕೆಗಳು ಮಾನವೀಯ ದರ್ಶನಗಳನ್ನು ಕಲಿಸಿದೆ. ಎಲ್ಲರನ್ನು ಗೌರವವಿಸುದನ್ನು ಕಳಿಸಿದೆ. ಇದು ಸರ್ವಜನಾಂಗದ ಶಾಂತಿಯ ತೋಟ . ನಾವು ಎಲ್ಲರನ್ನೂ ಗೌರವಿಸೋಣ. ಈ ನೆಲದ ಹೂವುಗಳು ಐಕ್ಯತೆಯಿಂದ ಕೂಡಿರಲಿ. ನಮ್ಮೊಳಗಿನ ದ್ವೇಷ ಅಸಹಿಷ್ಣತೆ ಎಲ್ಲವನ್ನೂ ಹೋಗಿಸಲಿ. ಇಡೀ ಜಗತ್ತಿನ ಮಾನವನ ಕುಲಕ್ಕೆ ಶಾಂತಿ ಸಹನೆ ನ್ಯಾಯದ ದೀಪ ಬೆಳಗಿಸಲಿ. ಇಲ್ಲಿ ಬೇಳಗಿದ ದೀಪ ಜಗತ್ತನ್ನು ಬೆಳಗಲಿ ಎಂದು ಹೇಳಿದರು.

ವಿರೋಧ ಮಾಡಿದವರಿಗೆ ಭಾಷಣದ ಮೂಲಕ ಟಾಂಗ್ ಕೊಟ್ಟ ಬಾನುಮುಷ್ತಾಕ್

ಈ ನೆಲದ ಪರಂಪರೆ ಇದು ಸರ್ವಜನಾಂಗದ ಶಾಂತಿಯ ತೋಟದ ಅಂತ ಹೇಳುತ್ತೆ. ಪ್ರತಿ ಹೂ ತನ್ನ ತೋಟದಲ್ಲಿ ಅರಳಲಿ. ಒಟ್ಟಿಗೆ ಸೇರಿದಾಗ ಎಲ್ಲರೂ ಒಂದಾಗಲಿ. ನಾವೆಲ್ಲರೂ ಒಂದೇ ಗಗನದ ಪಯಣಿಕರು. ಭೂಮಿ ಯಾರನ್ನು ಹೊರ ತಳ್ಳಲ್ಲ. ಮನುಷ್ಯ ಮಾತ್ರ ಗಡಿ ಹಾಕುತ್ತಾನೆ. ಇದನ್ನು ನಾವೇ ಅಳಿಸಬೇಕು. ಆಸ್ತಗಳಿಂದಲ್ಲ ಅಕ್ಷರಗಳಿಂದ ನಾವು ಗೆಲ್ಲಬೇಕು ಎಂದು ವಿರೋಧ ಮಾಡಿದವರಿಗೆ ಭಾಷಣದ ಮೂಲಕ ಬಾನುಮುಷ್ತಾಕ್ ಟಾಂಗ್ ಕೊಟ್ಟರು

ಕೃಷ್ಣರಾಜ ಒಡೆಯರ್ ಸಾಮಾಜಿಕ ನ್ಯಾಯದ ದೊರೆ ಆಗಿದ್ದರು. ಭೇದ ಭಾವ ತೋರಲಿಲ್ಲ. ಶಕ್ತಿಯನ್ನು ಹಂಚಿಕೊಂಡರೆ ಧೀರ್ಘ ಕಾಲ ಉಳಿಯುತ್ತೆ ಅಂತ ಹೇಳಿದರು ಎಂದರು.

ನಾನು ಒಬ್ಬ ಸಾಹಿತಿ ಲೇಖಕಿ. ಸಾಹಿತ್ಯದ ಮೂಲಕ ಸಂದೇಶ ಸಾರುತ್ತೇನೆ. 10 ವರ್ಷದ ಹಿಂದೆ ಬರೆದಿದ್ದ ಪ್ರಕಟಣೆ ಆಗಿದೆಬಾಗಿನ ಅಂತ ಅದರ ಹೆಸರು. ಪ್ರೀತಿಯ ಸಮಾಜದ ಕಟ್ಟೋಣ ಎಲ್ಲರಿಗೂ ಸಮಪಾಲು ಸಮಬಾಳು ಇರಲಿ. ನಾನು ನೂರಾರು ದೀಪಗಳನ್ನು ಬೆಳಗಿದ್ದೇನೆ. ಪುಷ್ಪಾರ್ಚನೆ ಮಾಡಿದೇವೆ. ಮಂಗಳಾರತಿ ಸ್ವೀಕರಿಸಿದ್ದೇವೆ. ನನ್ನ ಹಿಂದೂ ಧರ್ಮದ ಸಂಬಂಧ ನನ್ನ ಆತ್ಮಕಥೆಯಲ್ಲಿ ಬರೆದಿದ್ದೇನೆ. ಅದು ನಾಳೆ ಪ್ರಕಟ ಆಗತ್ತೆ. ಎಷ್ಟೇ ಸವಾಲು ಬಂದರೂ ದಿಟ್ಟವಾಗಿ ನನ್ನನ್ನು ಆಹ್ವಾನ ನೀಡಿ ನೈತಿಕ ಬೆಂಬಲ ನೀಡಿದ ಸಿಎಂ ಜಿಲ್ಲಾಡಳಿತಕ್ಕೆ ನನ್ನ ಧನ್ಯವಾದಗಳು  ಎಂದು  ಬಾನು ಮುಸ್ತಾಕ್ ತಿಳಿಸಿದರು.

Key words: Banu Mushtaq, Mysore dasara, inauguration , Bagina

The post “ಬಾಗಿನ” ವಾಚಿಸಿ ದಸರಾ ಉದ್ಘಾಟನೆಗೆ ಮೆರಗು ತಂದ ಬಾನು ಮುಷ್ತಾಕ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಗೆ ಆಹ್ವಾನ : ಸುಪ್ರೀಂ ಮೆಟ್ಟಿಲೇರಿದ ವ್ಯಕ್ತಿ
ನವದೆಹಲಿ,ಸೆಪ್ಟಂಬರ್,18,2025 (www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಸಾಹಿತಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿರುವ ಸರ್ಕಾರದ ನಿರ್ಧಾರವನ್ನ ಪ್ರಶ್ನಿಸಿ ವ್ಯಕ್ತಿಯೊಬ್ಬರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ಬೆಂಗಳೂರಿನ ನಿವಾಸಿ ಗೌರವ್ ಎಂಬುವವರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು ತುರ್ತು ವಿಚಾರಣೆಗೆ ಪಟ್ಟಿ ಮಾಡುವಂತೆ ಮನವಿ ಮಾಡಿದ್ದಾರೆ. ತುರ್ತುವಿಚಾರಣೆಗೆ ಮುಖ್ಯನ್ಯಾಯಮೂರ್ತಿ ಬಿಆರ್ ಗವಾಯಿ ಒಪ್ಪಿಗೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮೈಸೂರು ದಸರಾ ಉದ್ಘಾಟನೆಗೆ ಹಿಂದೂ ಅಲ್ಲದವರಿಗೆ ಆಹ್ವಾನ ನೀಡಿದ್ದಾರೆ.  ಚಾಮುಂಡೇಶ್ವರಿ ದೇವಿ ಪೂಜೆಗೆ ಹಿಂದೂಯೇತರರಿಗೆ ಅವಕಾಶ ನೀಡಿದ್ದಾರೆ ಎಂದು ಅರ್ಜಿಯಲ್ಲಿ ಗೌರವ್ ಉಲ್ಲೇಖಿಸಿದ್ದಾರೆ.

ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ರಾಜ್ಯ ಪ್ರಾಯೋಜಿತ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ  ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ ಮೂವರು ಸಲ್ಲಿಸಿದ್ದ ಅರ್ಜಿಯನ್ನ  ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿತ್ತು.

Key words: writer, Banu Mushtaq, inaugurate Dasara, Supreme Court

The post ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಗೆ ಆಹ್ವಾನ :  ಸುಪ್ರೀಂ ಮೆಟ್ಟಿಲೇರಿದ ವ್ಯಕ್ತಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಿದ ಮಾಜಿ ಸಂಸದ: ಅರ್ಜಿ ವಜಾಗೊಳಿಸಿದ ಕೋರ್ಟ್.
ಬೆಂಗಳೂರು,ಸೆಪ್ಟಂಬರ್,15,2025 (www.justkannada.in):  ಈ ಬಾರಿಯ ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನ ಆಯ್ಕೆ ಮಾಡಿದ್ದನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನ ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ (Banu Mushtaq) ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ನಾಯಕ ಪ್ರತಾಪ್ ಸಿಂಹ  ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಸಿಜೆ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿಎಂ ಜೋಶಿ ಅವರಿದ್ದ ವಿಭಾಗೀಯ ಪೀಠ  ವಜಾಗೊಳಿಸಿದೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ದಸರಾ ಉದ್ಘಾಟನೆ ವಿಚಾರದಲ್ಲಿ ಯಾವುದೇ ಹಕ್ಕು ಉಲ್ಲಂಘನೆ ಆಗಿರುವುದು ಕಂಡುಬಂದಿಲ್ಲ, ಹೀಗಾಗಿ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ತಿಳಿಸಿದೆ.

ಇನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಪರ ವಾದ ಮಂಡಿಸಿದ ವಕೀಲ ಸುದರ್ಶನ್, ಬಾನು ಮುಷ್ತಾಕ್ ಅವರನ್ನು ಉದ್ಘಾಟನೆಗೆ ಆಹ್ವಾನಿಸಿದ್ದು ಸರಿಯಲ್ಲ. ಅವರು ಹಿಂದೂ ವಿರೋಧಿ, ಕನ್ನಡ ವಿರೋಧಿ ಹೇಳಿಕೆ ನೀಡಿದ್ದಾರೆ. ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆಯ ಸಂಪ್ರದಾಯವಿದೆ. ಆದರೆ, ಬಾನು ಮುಷ್ತಾಕ್ ಅವರಿಂದ ಉದ್ಘಾಟನೆಗೆ ವಿರೋಧವಿದೆ ಎಂದರು.

Key words: Former MP, Prathap Simha, Banu Mushtaq, Dasara, High Court

The post ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಿದ ಮಾಜಿ ಸಂಸದ: ಅರ್ಜಿ ವಜಾಗೊಳಿಸಿದ ಕೋರ್ಟ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಾನು ಮುಷ್ತಾಕ್ ​ರಿಂದ ಮೈಸೂರು ದಸರಾ ಉದ್ಘಾಟನೆ ತಡೆ ಕೋರಿ ಹೈಕೋರ್ಟ್ ಗೆ ಪ್ರತಾಪ್ ಸಿಂಹ ಅರ್ಜಿ
ಬೆಂಗಳೂರು, ಸೆಪ್ಟೆಂಬರ್​ ,6,2025 (www.justkannada.in):  ಬೂಕರ್‌ ಪ್ರಶಸ್ತಿ ಪುರಸ್ಕೃತೆ ಸಾಹಿತಿ ಬಾನು ಮುಷ್ತಾಕ್‌  ಅವರಿಂದ ಮೈಸೂರು ದಸರಾ ಉದ್ಘಾಟನೆಗೆ ತಡೆ ಕೋರಿ ಹೈಕೋರ್ಟ್ ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಅರ್ಜಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬಾನು ಮುಷ್ತಾಕ್ ರನ್ನು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವ ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಮಾಜಿ ಸಂಸದ  ಪ್ರತಾಪ್ ಸಿಂಹ ಅರ್ಜಿ ಸಲ್ಲಿಸಿದ್ದಾರೆ. ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು.  ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆಯ ಸಂಪ್ರದಾಯವಿದೆ. ಬಾನು ಮುಷ್ತಾಕ್ ಹಿಂದೂ ವಿರೋಧಿ,‌ ಕನ್ನಡ ವಿರೋಧಿ ಭಾವನೆ ಹೊಂದಿದ್ದಾರೆ. ಆದರೆ ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಅವರನ್ನು ಆಯ್ಕೆ ಮಾಡಿದೆ.

ಮೈಸೂರಿನ ರಾಜಮನೆತನದವರೂ ಸರ್ಕಾರದ ನಡೆ ವಿರೋಧಿಸಿದ್ದಾರೆ.  ಹೀಗಾಗಿ ಬಾನು ಮುಷ್ತಾಕ್ ​ರಿಗೆ ನೀಡಿದ ಆಹ್ವಾನ ಹಿಂಪಡೆಯುವಂತೆ ನಿರ್ದೇಶಿಸುವಂತೆ ಹೈಕೋರ್ಟ್ ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ ಎನ್ನಲಾಗಿದೆ.

Key words: Pratap Simha, High Court, inauguration, Mysore Dasara, Banu Mushtaq

The post ಬಾನು ಮುಷ್ತಾಕ್ ​ರಿಂದ ಮೈಸೂರು ದಸರಾ ಉದ್ಘಾಟನೆ ತಡೆ ಕೋರಿ ಹೈಕೋರ್ಟ್ ಗೆ ಪ್ರತಾಪ್ ಸಿಂಹ ಅರ್ಜಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆಗೆ ವಿರೋಧ: ಸೆ.9 ರಂದು ಚಾಮುಂಡಿ ಬೆಟ್ಟ ಚಲೋ
ಮೈಸೂರು,ಸೆಪ್ಟಂಬರ್, 6,2025 (www.justkannada.in):  ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಸೆಪ್ಟಂಬರ್ 9 ರಂದು ಚಾಮುಂಡಿ ಬೆಟ್ಟ ಚಲೋ ಹಮ್ಮಿಕೊಳ್ಳಲಾಗಿದೆ.

ಹಿಂದೂ ಜಾಗರಣಾ ವೇದಿಕೆಯಿಂದ ಸೆಪ್ಟಂಬರ್ 9 ರಂದು ನಗರದ ಕುರುಬರಹಳ್ಳಿ ವೃತ್ತದಿಂದ ಚಾಮುಂಡಿ ಬೆಟ್ಟದವರೆಗೆ ಚಾಮುಂಡಿ ಬೆಟ್ಟ ಚಲೋ ಆಯೋಜಿಸಲಾಗಿದೆ.  ನಮ್ಮ ನಡಿಗೆ ತಾಯಿ ಚಾಮುಂಡೇಶ್ವರಿ ಸನ್ನಿಧಿಗೆ ಎಂದು ಯಾತ್ರೆ ನಡೆಸಲು ಮುಂದಾಗಿದ್ದಾರೆ.

ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಆಯ್ಕೆ ಮಾಡಿರುವುದಕ್ಕೆ ಬಿಜೆಪಿ ನಾಯಕರು ಸೇರಿ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಇನ್ನು ಕಳೆದ ಎರಡು ದಿನಗಳ ಹಿಂದೆ  ಜಿಲ್ಲಾಡಳಿತ ವತಿಯಿಂದ ದಸರಾ ಉದ್ಘಾಟನೆಗೆ ಆಗಮಿಸುವಂತೆ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅಧಿಕೃತ ಆಹ್ವಾನ ನೀಡಲಾಗಿದೆ.

Key words: Banu Mushtaq,Dasara inauguration, Chamundi Hill Chalo

The post ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆಗೆ ವಿರೋಧ: ಸೆ.9 ರಂದು ಚಾಮುಂಡಿ ಬೆಟ್ಟ ಚಲೋ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ದಸರಾ ಉದ್ಘಾಟನೆ: ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅಧಿಕೃತ ಆಹ್ವಾನ
ಮೈಸೂರು,ಸೆಪ್ಟಂಬರ್,3,2025 (www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ  ಸಾಹಿತಿ ಬಾನು ಮುಷ್ತಾಕ್  ಅವರಿಗೆ  ಮೈಸೂರು ಜಿಲ್ಲಾಡಳಿತ ವತಿಯಿಂದ ಇಂದು ಅಧಿಕೃತ ಆಹ್ವಾನ ನೀಡಲಾಯಿತು.

ಇಂದು ಸರ್ಕಾರದ ಪರವಾಗಿ ದಸರಾ ವಿಶೇಷಾಧಿಕಾರಿಯೂ ಆಗಿರುವ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರು ಹಾಸನದ  ಬಾನು ಮುಷ್ತಾಕ್ ಅವರ ನಿವಾಸಕ್ಕೆ ತೆರಳಿ ಅಧಿಕೃತವಾಗಿ ಆಹ್ವಾನಿಸಿದರು.

ಸಾಹಿತಿ ಬಾನು ಮುಷ್ತಾಕ್ ಅವರಿಗೆ ಶಾಲು ಹೊದಿಸಿ, ಪೇಟ ತೊಡಿಸಿ ದಸರಾ ಉದ್ಘಾಟನೆಗೆ ಅಧಿಕೃತ ಆಹ್ವಾನ ನೀಡಲಾಯಿತು.  ಸೆಪ್ಟಂಬರ್ 22 ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ  ಮೈಸೂರು ದಸರಾ ಮಹೋತ್ಸವವನ್ನು ಬಾನು ಮುಷ್ತಾಕ್ ಅವರು   ಉದ್ಘಾಟಿಸಲಿದ್ದಾರೆ.

ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ ಕುಮಾರ್, ಅಪರ ಜಿಲ್ಲಾಧಿಕಾರಿ ಡಾ. ಪಿ.ಶಿವರಾಜು, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ ಮತ್ತು ಸ್ವಾಗತ ಸಮಿತಿಯವರು ಪಾಲ್ಗೊಂಡಿದ್ದರು.‌

Key words: Mysore Dasara, inauguration, Official invitation, Banu Mushtaq

The post ಮೈಸೂರು ದಸರಾ ಉದ್ಘಾಟನೆ: ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅಧಿಕೃತ ಆಹ್ವಾನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್ : ನಾಳೆ ಅಧಿಕೃತ ಆಹ್ವಾನ
ಮೈಸೂರು,ಸೆಪ್ಟಂಬರ್,2,2025 (www.justkannada.in): ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಉದ್ಘಾಟಕರಾಗಿ  ಆಯ್ಕೆಯಾಗಿರುವ  ಸಾಹಿತಿ ಭಾನು ಮುಷ್ತಾಕ್ ಅವರಿಗೆ ನಾಳೆ ಮೈಸೂರು ಜಿಲ್ಲಾಡಳಿತ ಅಧಿಕೃತ ಆಹ್ವಾನ ನೀಡಲಿದೆ.

ನಾಳೆ ಸಂಜೆ 4 ಗಂಟೆಗೆ ಹಾಸನದಲ್ಲಿರುವ ಸಾಹಿತಿ ಭಾನು ಮುಷ್ತಾಕ್ ಅವರ ಸ್ವಗೃಹಕ್ಕೆ ತೆರಳಿ ಸರ್ಕಾರದ ಪರವಾಗಿ ಜಿಲ್ಲಾಡಳಿತ ಅಧಿಕೃತ ಆಹ್ವಾನ  ನೀಡಲಿದೆ. ಈ ಕುರಿತು ಜಿಲ್ಲಾಡಳಿತ ಪ್ರಕಟಣೆ ಹೊರಡಿಸಿದ್ದು,  ನಾಳೆ ಅಧಿಕೃತ ಆಹ್ವಾನ ನೀಡಲು ಸಿದ್ಧತೆ ನಡೆಸಿದೆ.

ಸೆಪ್ಟಂಬರ್ 22ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮೈಸೂರು ದಸರಾ ಮಹೋತ್ಸವವನ್ನು ಸಾಹಿತಿ ಬಾನು ಮುಷ್ತಾಕ್  ಅವರು ಉದ್ಗಾಟಿಸಲಿದ್ದಾರೆ.

Key words: inaugurate, Mysore Dasara, Banu Mushtaq, Official invitation, tomorrow

The post ಮೈಸೂರು ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್ : ನಾಳೆ ಅಧಿಕೃತ ಆಹ್ವಾನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.