BDA President | Just Kannada - Daily News Updates

ಭ್ರಷ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಶತಃಸಿದ್ಧ: ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್
ಬೆಂಗಳೂರು,ನವೆಂಬರ್,20,2021(www.justkannada.in):  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಿವಿಧ ಇಲಾಖೆಗಳ ಮೇಲೆ ಎಸಿಬಿ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ತಪ್ಪಿತಸ್ಥ ಅಧಿಕಾರಿಗಳು ಮತ್ತು ಸಿಬ್ಬಂದಿದ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲಾಗುವುದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್  ಎಂದು ಸ್ಪಷ್ಟಪಡಿಸಿದ್ದಾರೆ.

ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ನಡೆಸುವವರನ್ನು ರಕ್ಷಣೆ ಮಾಡುವ ಪ್ರಮೇಯವೇ ಇಲ್ಲ. ಭ್ರಷ್ಟರ ವಿರುದ್ಧ ತನಿಖೆ ನಡೆಸುವ ಎಸಿಬಿಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದರು.

ಸಾರ್ವಜನಿಕರಿಂದ ಹಲವಾರು ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಶುಕ್ರವಾರ ಸಂಜೆ ಬಿಡಿಎ ಕಚೇರಿ ಮೇಲೆ ದಾಳಿ ನಡೆಸಿ ಕಡತಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ಪ್ರಕ್ರಿಯೆ ಶನಿವಾರವೂ ಮುಂದುವರಿಯಿತು. ವಿಶ್ವೇಶ್ವರಯ್ಯ ಬಡಾವಣೆ ಮತ್ತು ಅರ್ಕಾವತಿ ಬಡಾವಣೆಯಲ್ಲಿ ನಿವೇಶನ ಹಂಚಿಕೆ ವಿಚಾರದಲ್ಲಿ ಸಾಕಷ್ಟು ಅಕ್ರಮಗಳು ನಡೆದಿವೆ ಎಂದು ಸಾರ್ವಜನಿಕರು ಎಸಿಬಿಗೆ ದೂರು ನೀಡಿದ್ದರು. ಈ ಆಧಾರದಲ್ಲಿ ದಾಳಿ ನಡೆದಿದೆ ಎಂದು ವಿಶ್ವನಾಥ್ ತಿಳಿಸಿದರು.

ನಾನು ಬಂದಾಗ ಭ್ರಷ್ಟಾಚಾರ ಮಾಡಿ ಸಿಕ್ಕಿಕೊಂಡಿದ್ದವರ ವಿರುದ್ಧ ಕ್ರಮ ತೆಗೆದುಕೊಂಡಿದ್ದೆವು. ಇದು ಸಾರ್ವಜನಿಕರ ಹಣಕಾಸು ವ್ಯವಹಾರ ನಡೆಯುವ ಸಂಸ್ಥೆ. ನಾನೂ ಸಹ ದೂರುಗಳನ್ನು ನಾವೂ ಎಸಿಬಿಗೆ ಕೊಟ್ಡಿದ್ದೇನೆ. ಇದಕ್ಕೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ಒದಗಿಸುವುದಾಗಿ ಎಸಿಬಿ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು.

ಎಸಿಬಿಗೆ ಸಂಪೂರ್ಣ ಸಹಕಾರ

ಭ್ರಷ್ಟಾಚಾರ ಮುಕ್ತ ಆಡಳಿತ ವ್ಯವಸ್ಥೆ ಇರಬೇಕೆಂಬುದು ನಮ್ಮ ಬಿಜೆಪಿ ಸರ್ಕಾರದ ಗುರಿಯಾಗಿದೆ. ಅದರಂತೆ ಬಿಡಿಎ ಸಂಸ್ಥೆಯನ್ನೂ ಭ್ರಷ್ಟ ಮುಕ್ತ ಮಾಡಿ ಸಾರ್ವಜನಿಕ ಸ್ನೇಹಿ ಸಂಸ್ಥೆಯನ್ನಾಗಿ ಮಾಡಲು ಪಣ ತೊಟ್ಟಿದ್ದೇವೆ. ಈ ನಿಟ್ಟಿನಲ್ಲಿ ಎಸಿಬಿ ನಡೆಸಿರುವ ದಾಳಿಯನ್ನು ಸ್ವಾಗತ ಮಾಡುತ್ತೇನೆ ಮತ್ತು ತನಿಖೆ ವಿಚಾರದಲ್ಲಿ ತನಿಖಾ ಸಂಸ್ಥೆಗೆ ಸಂಪೂರ್ಣ ಸಹಕಾರ ನೀಡಲಾಗುತ್ತದೆ ಎಂದು ಹೇಳಿದರು.

ದಾಳಿಯ ವೇಳೆ ಅಕ್ರಮಕ್ಕೆ ಸಂಬಂಧಿಸಿದಂತೆ ಯಾವೆಲ್ಲಾ ದಾಖಲೆಗಳು ಲಭಿಸಿವೆ ಎಂಬುದರ ಬಗ್ಗೆ ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿ ವರದಿ ನೀಡಲಿದ್ದಾರೆ. ನಂತರವಷ್ಟೇ ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳಿಗೆ ವಿವರಣೆ ನೀಡುವೆ

ಈ ದಾಳಿಯ ಸಂಬಂಧ ಸಂಪೂರ್ಣ ಮಾಹಿತಿ ಪಡೆದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿವರಿಗೆ ವಿವರಣೆ ನೀಡಲಿದ್ದೇನೆ ಎಂದು ತಿಳಿಸಿದರು.

ನಾನು ಬಿಡಿಎ ಅಧ್ಯಕ್ಷನಾಗಿ ಕಳೆದ ವರ್ಷದ ನವೆಂಬರ್ 26 ರಂದು ಅಧಿಕಾರ ವಹಿಸಿಕೊಂಡು ಸಂಸ್ಥೆಯನ್ನು ಭ್ರಷ್ಟಮುಕ್ತವನ್ನಾಗಿ ಮಾಡುವ ಗುರಿಯನ್ನು ಹಾಕಿಕೊಂಡಿದ್ದೆ. ಅದರಂತೆ, ಸಂಸ್ಥೆಯಲ್ಲಿ ಹಾಸುಹೊಕ್ಕಾಗಿದ್ದ ಬ್ರೋಕರ್ ಗಳ ಹಾವಳಿಯನ್ನು ತಪ್ಪಿಸಿದ್ದೇನೆ ಎಂದರು.

ನನ್ನ ಅವಧಿಯಲ್ಲಿ ಭ್ರಷ್ಟಾಚಾರ, ಅವ್ಯವವಹಾರ ನಡೆಯಲು ಬಿಟ್ಟಿಲ್ಲ. ಹಿಂದೆ ದೊಡ್ಡ ಅವ್ಯವಹಾರಗಳು ಆಗಿವೆ. ಹಿಂದಿನ ಆಯುಕ್ತರ ಅವಧಿಗಳಲ್ಲಿ ಸಾಕಷ್ಟು ಅವ್ಯವಹಾರ ಆಗಿರುವುದು ಈಗಿನ ಪರಿಸ್ಥಿತಿಗೆ ಕಾರಣವಾಗಿದೆ. ಇದಕ್ಕಾಗಿ ಒಂದು ಪ್ರತ್ಯೇಕ ತನಿಖಾ ಸಂಸ್ಥೆಯನ್ನು ರಚನೆ ಮಾಡಿದರೆ ಎಲ್ಲಾ ತಪ್ಪಿತಸ್ಥರಿಗೆ ಶಿಕ್ಷೆ ಆಗಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

50 ಸಾವಿರ ಕೋಟಿ ರೂಪಾಯಿ ಮೌಲ್ಯದ ಆಸ್ತಿ

ಬೆಂಗಳೂರು ನಗರದಲ್ಲಿ ಬಿಡಿಎಗೆ ಸೇರಿದ 50 ಸಾವಿರ ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಆಸ್ತಿ ಇದೆ ಎಂದು ಅಂದಾಜಿಸಲಾಗಿದೆ. ಈ ಪೈಕಿ ಈಗಾಗಲೇ 400 ಕ್ಕೂ ಹೆಚ್ಚು ಎಕರೆಯಷ್ಟು ಆಸ್ತಿಯನ್ನು ಗುರುತಿಸಿ ಭೂಕಬಳಿಕೆದಾರರ ಕಪಿಮುಷ್ಠಿಯಿಂದ ಬಿಡಿಸಿಕೊಳ್ಳುವ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ ಎಂದರು.

ಕಮಿಷನ್ ದಂಧೆ

ಬಿಜೆಪಿ ಕಮಿಷನ್ ದಂಧೆ ನಡೆಸುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿರುವುದಕ್ಕೆ ತಿರುಗೇಟು ನೀಡಿದ ವಿಶ್ವನಾಥ್ ಅವರು, ಕಮೀಷನ್ ದಂಧೆಯನ್ನು ಆರಂಭ ಮಾಡಿದ್ದೇ ಕಾಂಗ್ರೆಸ್ ನವರು. ಅವರ ಆಡಳಿತದಲ್ಲಿ ಶೇಕಡ 20 ರಷ್ಟು ಮಾತ್ರ ಫಲಾನುಭವಿಗಳಿಗೆ ತಲುಪುತ್ತಿತ್ತು. ಉಳಿದ ಹಣ ಏಜೆನ್ಸಿಗಳಿಗೆ ಹೋಗುತ್ತಿತ್ತು ಎಂದು ವಾಗ್ದಾಳಿ ನಡೆಸಿದರು.

ಯಾವುದೇ ದಾಖಲೆ ಇಲ್ಲದೇ ಆರೋಪ ಮಾಡುವುದು ಸರಿಯಲ್ಲ. ದೂರಿಗೆ ತಕ್ಕಂತೆ ನಿಖರವಾದ ದಾಖಲೆ ಕೊಡಲಿ. ಸರ್ಕಾರ ಸೂಕ್ತ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

Key words: Legal action –against- corrupt –officials- BDA President -SR Vishwanath

ಬೆಂಗಳೂರು ನಗರ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ 2035- ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್….
ಬೆಂಗಳೂರು,ಡಿಸೆಂಬರ್,29,2020(www.justkannada.in):  ಕ್ಷಿಪ್ರವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಸಮಗ್ರ ಮಾಸ್ಟರ್ ಪ್ಲಾನ್ -2035 ಅನ್ನು ರೂಪಿಸಲಾಗುವುದು ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ.

ಬೆಂಗಳೂರು ನಗರದ ಉಸ್ತುವಾರಿಯನ್ನು ಹೊಂದಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಮಾಸ್ಟರ್ ಪ್ಲಾನ್ ಸಿದ್ಧಪಡಿಸುವ ಸಂಬಂಧಿತ ಆರಂಭಿಕ ಸಭೆಯು ಮಂಗಳವಾರ ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಮೊದಲ ವರ್ಚುವಲ್ ಸಭೆಯಲ್ಲಿ ನಮ್ಮ ಬೆಂಗಳೂರು ಪ್ರತಿಷ್ಠಾನದ ತಜ್ಞರೊಂದಿಗೆ ಸಂವಾದ ನಡೆಸಿದರು.

ಈ ವೇಳೆ ಮಾತನಾಡಿದ ಎಸ್.ಆರ್ ವಿಶ್ವನಾಥ್, ಮುಂದಿನ 20-25 ವರ್ಷಗಳ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಮಾಸ್ಟರ್ ಪ್ಲಾನ್ ಸಿದ್ದಪಡಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಂಘಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು ಸೇರಿದಂತೆ ನಗರಾಭಿವೃದ್ಧಿ ಕ್ಷೇತ್ರದಲ್ಲಿ ತಜ್ಞರೆನಿಸಿಕೊಂಡಿರುವವರ ಅಭಿಪ್ರಾಯ, ಸಲಹೆ ಸೂಚನೆಗಳನ್ನು ಪಡೆಯಲಾಗುತ್ತಿದೆ ಎಂದರು.

ಪ್ರಸ್ತುತ ಸಿಲಿಕಾನ್ ಸಿಟಿ ಬೆಳೆಯುತ್ತಿರುವ ವೇಗವನ್ನು ಗಮನಿಸಿದರೆ ಆತಂಕ ತರುವಂತದ್ದಾಗಿದೆ. ಅಷ್ಟೊಂದು ವೇಗವಾಗಿ ಬೆಳೆಯುತ್ತಿರುವುದರಿಂದ ನಾಗರಿಕರಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದು ಒಂದು ಬಹುದೊಡ್ಡ ಸವಾಲಿನ ಕೆಲಸವಾಗಲಿದೆ ಎಂದರು.

ಬಿಬಿಎಂಪಿ ವ್ಯಾಪ್ತಿ ವಿಸ್ತಾರವಾಗುತ್ತಿದ್ದಂತೆಯೇ ಬೆಂಗಳೂರು ನಗರದ ವ್ಯಾಪ್ತಿಯೂ ಹಿಗ್ಗಲಿದೆ. ಇದರಿಂದ ಬೃಹತ್ ಬೆಂಗಳೂರಿನ ವ್ಯಾಪ್ತಿಗೆ ಹೊಸ ಹೊಸ ಪ್ರದೇಶಗಳು ಸೇರ್ಪಡೆಗೊಳ್ಳುತ್ತವೆ. ಅಂತಹ ಪ್ರದೇಶಗಳಿಗೆ ಸೂಕ್ತವಾದ ಮೂಲಸೌಕರ್ಯಗಳನ್ನು ಒದಗಿಸುವುದು ಬಿಡಿಎ, ಬಿಎಂಆರ್ ಡಿಎ, ಬಿಬಿಎಂಪಿ ಸೇರಿದಂತೆ ಇನ್ನಿತರೆ ಸಂಸ್ಥೆಗಳ ಕರ್ತವ್ಯವಾಗಿದೆ. ಈ ದಿಸೆಯಲ್ಲಿ ಬಿಡಿಎ ನೇತೃತ್ವದಲ್ಲಿ ಮಾಸ್ಟರ್ ಪ್ಲಾನ್ ಅನ್ನು ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಈ ಹಿಂದೆ ಹಲವು ಬಾರಿ ಎಲ್ಲರೂ ಸೇರಿ ಒಂದು ಉತ್ತಮವಾದ ಮಾಸ್ಟರ್ ಪ್ಲಾನ್ ಅನ್ನು ಸಿದ್ಧಪಡಿಸಿದ್ದರೂ ಅದರ ಜಾರಿಯಲ್ಲಿ ಹಿಂದೆ ಬಿದ್ದಿದ್ದೇವೆ. ಈ ಕಾರಣದಿಂದಾಗಿಯೇ ಅವೈಜ್ಞಾನಿಕ ರೀತಿಯ ಬೆಳವಣಿಗೆಯನ್ನು ಕಂಡಿದ್ದೇವೆ. ಈ ಹಿನ್ನೆಲೆಯಲ್ಲಿ ಇಂತಹ ಲೋಪಗಳು ಮರುಕಳಿಸದಂತೆ ಎಚ್ಚರ ವಹಿಸಿ 2035 ಪ್ಲಾನ್ ಅನ್ನು ಸಿದ್ಧಪಡಿಸಲಾಗುತ್ತಿದೆ.

ಹೊಣೆಗಾರಿಕೆ ನಿಗದಿ

ಇದನ್ನು ಜಾರಿಗೊಳಿಸುವ ತಳಮಟ್ಟದ ಅಧಿಕಾರಿಗಳಿಂದ ಮೇಲ್ಮಟ್ಟದ ಅಧಿಕಾರಿಗಳವರೆಗೆ ಎಲ್ಲರನ್ನೂ ಜವಾಬ್ದಾರರನ್ನಾಗಿ ಮಾಡುವ ಬಗ್ಗೆ ಗಂಭೀರ ಚಿಂತನೆ ನಡೆಸಲಾಗಿದೆ. ಯಾವುದೇ ಲೋಪವಾದರೂ ಅವರನ್ನು ಜವಾಬ್ದಾರರನ್ನಾಗಿಸುವ ಕಠಿಣ ಕಾನೂನನ್ನು ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದರು.

ಕೆರೆ, ಉದ್ಯಾನ, ಪರಿಸರ ಸಂರಕ್ಷಣೆಗೆ ಆದ್ಯತೆ

ಮಾಸ್ಟರ್ ಪ್ಲಾನ್ 2035 ರಲ್ಲಿ ಕೆರೆ, ಉದ್ಯಾನ, ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಕೆರೆಗಳ ಪುನರುಜ್ಜೀವನಕ್ಕೆ ಕಾಲಮಿತಿ ನಿಗದಿ, ಪ್ರಸ್ತುತ ಇರುವ ಉದ್ಯಾನಗಳನ್ನು ಒತ್ತುವರಿಯಿಂದ ಮುಕ್ತಗೊಳಿಸುವುದು, ಹಸಿರು ಬೆಳೆಸುವುದು ಸೇರಿದಂತೆ ಇನ್ನಿತರೆ ಪರಿಸರ ಸ್ನೇಹಿ ಕ್ರಮಗಳನ್ನು ಈ ಪ್ಲಾನ್ ನಲ್ಲಿ ಅಳವಡಿಸಲಾಗುತ್ತದೆ ಎಂದರು.

ನಗರ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಅಷ್ಟ ದಿಕ್ಕುಗಳ ಅಭಿವೃದ್ಧಿಗೂ ಒತ್ತು ನೀಡಲಾಗುತ್ತದೆ. ಎಲ್ಲಾ ದಿಕ್ಕುಗಳಲ್ಲಿಯೂ ಸಾರ್ವಜನಿಕರಿಗೆ ಅಗತ್ಯವಾದ ಮೂಲಸೌಕರ್ಯಗಳನ್ನು ಒದಗಿಸುವ ಯೋಜನೆಗಳನ್ನು ರೂಪಿಸಲಾಗುತ್ತದೆ ಎಂದು ಅವರು ತಿಳಿಸಿದರು.

ಸಂಘಸಂಸ್ಥೆಗಳಿಂದ ಸಲಹೆ ಸೂಚನೆ ಸಂಗ್ರಹ

ಮಾಸ್ಟರ್ ಪ್ಲಾನ್ ಅನ್ನು ಸಮಗ್ರವಾಗಿಸುವ ನಿಟ್ಟಿನಲ್ಲಿ ಸಂಘಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು, ನಾಗರಿಕ ಸಂಸ್ಥೆಗಳು ಸೇರಿದಂತೆ ಇನ್ನಿತರೆ ಕ್ಷೇತ್ರಗಳ ಪರಿಣಿತರಿಂದ ಅಗತ್ಯ ಸಲಹೆ, ಅಭಿಪ್ರಾಯಗಳನ್ನು ಸಂಗ್ರಹಿಸಲಾಗುತ್ತದೆ ಎಂದು ತಿಳಿಸಿದರು.

ಬಿಡಿಎ ಆಯುಕ್ತರಾದ ಡಾ.ಮಹದೇವ್ ಅವರು ಮಾತನಾಡಿ, ನಗರಾಭಿವೃದ್ಧಿಯಲ್ಲಿ ಪರಿಣಿತಿ ಹೊಂದಿರುವ ತಜ್ಞರು ನೀಡುವ ಸಲಹೆ ಸೂಚನೆಗಳನ್ನು ಮಾಸ್ಟರ್ ಪ್ಲಾನ್ ನಲ್ಲಿ ಅಳವಡಿಸಿಕೊಳ್ಳಲಾಗುತ್ತದೆ. ಈ ಮೂಲಕ ಒಂದು ದೂರದೃಷ್ಟಿಯುಳ್ಳ ಮಾಸ್ಟರ್ ಪ್ಲಾನ್ ಅನ್ನು ಸಿದ್ಧಪಡಿಸಲಾಗುತ್ತದೆ ಎಂದು ತಿಳಿಸಿದರು.

ಈ ವರ್ಚುವಲ್ ಸಂವಾದದಲ್ಲಿ ನಮ್ಮ ಬೆಂಗಳೂರು ಪ್ರತಿಷ್ಠಾನದ ವಿವಿಧ ಕ್ಷೇತ್ರಗಳ ಪರಿಣಿತರಾದ ಹರೀಶ್, ಸ್ನೇಹ ನಂದಿಹಾಳ್, ಸ್ಮಿತಾ ಸಿಂಗ್, ಬೃಂದಾಶಾಸ್ತ್ರಿ, ವಿಶ್ವನಾಥ್, ಮೀನಾಕ್ಷಿ ಪ್ರಭು, ಡಾ.ಚಂಪಕ ರಾಜಗೋಪಾಲ್, ಐಐಎಸ್ಸಿಯ ಪ್ರೊಫೆಸರ್ ಆಶಿಶ್ ವರ್ಮಾ, ನಿತಿನ್ ಶೇಷಾದ್ರಿ, ರವೀಂದ್ರ ಶ್ರೀನಿವಾಸ್ ಮತ್ತು ಬಿಡಿಎ ಕಾರ್ಯದರ್ಶಿ ವಾಸಂತಿ ಅಮರ್ ಸೇರಿದಂತೆ ಮೊದಲಾದವರು ಪಾಲ್ಗೊಂಡಿದ್ದರು.

Key words: Master Plan 2035 – Integrated- Development -Bangalore City-BDA President -SR Vishwanath.