Bhovi community Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಭೋವಿ ಜನಾಂಗದ ಮಹಿಳೆಯರನ್ನು ಒಟ್ಟಗೂಡಿಸಿ ಸಂಘ ರಚಿಸಿ- ರಾಮಪ್ಪ ಎಂ
ಮೈಸೂರು, ಮೇ.26,2026 (www.justkannada.in): ಭೋವಿ ಜನಾಂಗದ ಮಹಿಳೆಯರನ್ನು  ಒಟ್ಟಗೂಡಿಸಿ ಸಂಘ ರಚಿಸಿ, ಅವರಿಗೆ ಸರ್ಕರದ ಸಾಲ ಯೋಜನೆಗಳನ್ನು ಒದಗಿಸಿ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬಹುದು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ ಎಂ‌ ಅವರು ತಿಳಿಸಿದರು.

ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ರಾಮಪ್ಪ ಎಂ‌ ಮಾತನಾಡಿದರು. ಮೈಕ್ರೋ ಕ್ರೆಡಿಟ್ ಯೋಜನೆಯಡಿ ಭೋವಿ ಜನಾಂಗದ ಕನಿಷ್ಠ 10 ಮಹಿಳಾ ಸದಸ್ಯರಿರುವ ಮಹಿಳಾ ಸ್ವಸಹಾಯ ಸಂಘಗಳಿಗೆ ಉತ್ಪದನಾ ಚಟುವಟಿಕೆಗೆ 2.50 ಲಕ್ಷ ಸಹಾಯಧನ ಮತ್ತು  2.50 ಲಕ್ಷ ಸಾಲವಾಗಿರುತ್ತದೆ. ಭೋವಿ ಜನಾಂಗದ ಹೆಣ್ಣು ಮಕ್ಕಳು ಈ ಯೋಜನೆ ಪಡೆಯಲು ಮುಂದೆ ಬರಬೇಕು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಭೋವಿ ಜನಾಂಗದ ಮುಖ‍ಂಡರು ಮಹಿಳೆಯರಿಗೆ ಮಾಹಿತಿ ನೀಡಿ ಅವರನ್ನು ಯೋಜನೆ ಪಡೆದುಕೊಳ್ಳುವಂತೆ ಪ್ರೇರೇಪಿಸಬೇಕು ಎಂದರು‌.

ಭೋವಿ ಜನಾಂಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಿ.  ದಾಖಲಾತಿ ಪಡೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟಲ್ ವ್ಯವಸ್ಥೆ ಸಿಗಲಿದೆ. ಕಾಲೇಜು, ಶಾಲೆಗಳಿಗೆ ದಾಖಲಾತಿ ಪ್ರಾರಂಭವಾಗಿದ್ದು, ಜಾತಿ ಪ್ರಮಾಣಪತ್ರವನ್ನು ವಿಳಂಭವಾಗದಂತೆ ಒದಗಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಾಲ ಯೋಜನೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಫಲಾನುಭವಿಗಳ ಪಟ್ಟ ಬ್ಯಾಂಕ್ ವರು  ಲೀಡ್ ಬ್ಯಂಕ್ ವ್ಯವಸ್ಥಾಪಕರಿಗೆ ನೀಡಿದರೆ, ಸಾಲ ನೀಡಲು ಬ್ಯಾಂಕ್ ನಿರಾಕರಿಸಿದರೆ, ನಿರಾಕರಿಸಿದಕ್ಕೆ ನಿಖರ ಮಾಹಿತಿ ದೊರಕುತ್ತದೆ ಎಂದರು.

ಭೋವಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಶಾಸಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಆಯ್ಕೆ ಮಾಡಲಾಗುವುದು. ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲೂ ಶೇ 100 ರಷ್ಟು ಸಾಧನೆ ಮಾಡಬೇಕು. ಭೋವಿ ಜನಾಂಗದ ಮುಖಂಡರಿಗೆ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಹೆಚ್ಚು ಜನರು ಅರ್ಜಿ ಸಲ್ಲಿಸುವಂತೆ ನೋಡಿಕೊಳ್ಳಿ ಎಂದರು.

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ  ಚಂದ್ರ ನಾಯಕ್ ಅವರು ಮಾತನಾಡಿ ಭೋವಿ ಅಭಿವೃದ್ಧಿ ನಿಗಮವನ್ನು 2016  ರಲ್ಲಿ ಸ್ಥಾಪನೆ ಮಾಡಲಾಯಿತು. ನಿಗಮದಿಂದ  ಸೌಲಭ್ಯ ಪಡೆಯಲು ಭೋವಿ, ಒಡ್, ಒಡ್ಡೆ, ಒಡ್ಡರ್, ವಡ್ಡರ್, ವಡ್ಡರ, ಕಲ್ಲು ಒಡ್ಡರ, ಗೋವಿ(ನಾನ್ ಗೋಸ್ಟ್) Govi (non gosta), ಮಣ್ಣು ವಡ್ಡರ ಒಟ್ಟು 9 ಜಾತಿಗಳಿಗೆ ಸೇರಿದ ವ್ಯಕ್ತಿಗಳಾಗಿರಬೇಕು. ವಿವಿಧ ರೀತಿಯ ಸಾಲ ಸೌಲಭ್ಯ ಒದಗಿಸಿ ಅವರ ಆರ್ಥಿಕ ಮಟ್ಟ ಸುಧಾರಿಸುವುದು ನಿಗಮದ ಉದ್ದೇಶವಾಗಿದೆ.   ಇದಲ್ಲದೇ ಸಮಾಜ ಕಲ್ಯಾಣ ಇಲಾಖೆ ಹಾಗೂ ಇತರೆ ಇಲಾಖೆಯ ಎಸ್.ಸಿ‌ಎಸ್.ಪಿ ಯೋಜನೆಯಡಿ ರೂಪಿಸಿರುವ ಸೌಲಭ್ಯಗಳನ್ನು ಸಹ ಪಡೆಯಬಹುದು ಎಂದರು.

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ನೀಡಲಾಗುವ ಸ್ವಯಂ ಉದ್ಯೋಗ ನೇರಸಾಲ ಯೋಜನೆ,ಕುರಿ/ ಮೇಕೆ ಸಾಕಾಣಿಕೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜಬೆ, ಹೈನುಗಾರಿಕೆ, ಸ್ವಾವಲಂಭಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯ ಉಪಯುಕ್ತತೆಯ ಬಗ್ಗೆ ವಿವರಿಸಿದರು.

ಭೋವಿ ಜನಾಂಗದವರು ಯೋಜನೆಗಳ ಬಗ್ಗೆ ಮಾಹಿತಿ ಪಡೆದು ಸರ್ಕಾರ ರೂಪಿಸಿರುವ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು ಎಂದರು

2011 ರ  ಜನಗಣತಿಯ ಪ್ರಕಾರ  ಭೋವಿ ಜನಾಂಗದ 11.20 ಲಕ್ಷ ಜನಸಂಖ್ಯೆ ಇದ್ದು, ಮೈಸೂರು ಜಿಲ್ಲೆಯಲ್ಲಿ 14,376 ಗಂಡಸರು, 14202 ಮಹಿಳೆಯರು ಸೇರಿದಂತೆ ಒಟ್ಟು 28578 ಜನರಿದ್ದಾರೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ  ಯುಕೇಶ್ ಕುಮಾರ್ ಅವರು ಮಾತನಾಡಿ ಈವರೆಗೆ ಬ್ಯಾಂಕ್ ನಿಂದ ಸಾಲ ಪಡೆಯದೇ ಇರುವ ಫಲಾನುಭವಿಗಳ ಸಿಬಿಲ್ ಸ್ಕೋರ್  ಶೂನ್ಯ ಇರುತ್ತದೆ ಇದು ಸಾಲ ಪಡೆಯಲು ಸಮಸ್ಯೆಯಾಗುವುದಿಲ್ಲ. ಭೋವಿ ನಿಗಮದವರು  ಯೋಜನೆವಾರು  ನೋಡಲ್ ಅಧಿಕಾರಿ ನೇಮಕ ಮಾಡಿ ಫಲಾನುಭವಿಗಳು ಹಾಗೂ ಬ್ಯಾಂಕ್ ನೊಂದಿಗೆ ಸಮನ್ವಯ ಕೆಲಸ ನಿರ್ವಹಿಸಬೇಕು. ಬ್ಯಾಂಕ್ ನಿಂದ ಸಾಲ ನೀಡಲು ನಿರಾಕರಣೆಯಾದರೆ ನಿಖರವಾದ ಕಾರಣ ಸಿಗುತ್ತದೆ ಹಾಗೂ ಸಮಸ್ಯೆ ಇದ್ದಲಿ ಸರಿಪಡಿಸಬಹುದು, ಶೇ 100 ರಷ್ಟು ಗುರಿ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್, ಉಪ ಪೊಲೀಸ್ ಆಯುಕ್ತೆ ಕರ್ನಾಟಕ ಕಾನೂನು ಸುವ್ಯವಸ್ಥೆ ಡಿಸಿಪಿ  ಹರ್ಷ ಪ್ರಿಯಂವದ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಭೀಮಪ್ಪ ಕೆ ಲಾಳಿ ಚೆಸ್ಕಾಂ ಚೀಫ್ ಇಂಜಿನಿಯರ್ ಸುನೀಲ್  ಭೋವಿ ಸಮುದಾಯದ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.

Key words: Form, association, Bhovi community,  Ramappa M

The post ಭೋವಿ ಜನಾಂಗದ ಮಹಿಳೆಯರನ್ನು  ಒಟ್ಟಗೂಡಿಸಿ ಸಂಘ ರಚಿಸಿ- ರಾಮಪ್ಪ ಎಂ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧ: ಭೋವಿ ಜನಾಂಗ ಶಿಕ್ಷಣಕ್ಕೆ ಒತ್ತು ನೀಡಿ- ಸಿಎಂ ಸಿದ್ದರಾಮಯ್ಯ
ಮೈಸೂರು, ಮೇ,6,2026 (www.justkannada.in):  ಆರ್ಥಿಕ ಹಾಗೂ ಸಾಮಾಜಿಕ ಶಕ್ತಿಗಾಗಿ ಶಿಕ್ಷಣ ಅಗತ್ಯವಾಗಿದ್ದು, ಭೋವಿ ಜನಾಂಗದವರು ಶಿಕ್ಷಣಕ್ಕೆ ಒತ್ತು ನೀಡಬೇಕೆಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ಜಿಲ್ಲಾಡಳಿತದ ವತಿಯಿಂದ ಮೈಸೂರಿನ ಕಲಾಮಂದಿರದಲ್ಲಿ ಆಯೋಜಿಸಿದ್ದ ಸಿದ್ದರಾಮೇಶ್ವರ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ರಾಜ್ಯದಲ್ಲಿ ಸಮಸಮಾಜ ನಿರ್ಮಿಸುವ ಸಂಕಲ್ಪವನ್ನು ಸರ್ಕಾರ ಹೊಂದಿದೆ. ಉತ್ಪಾದಿಸಿದ ಸಂಪತ್ತು ಸಮಾನವಾಗಿ ಹಂಚಿಕೆಯಾಗಿಬೇಕು. ರಾಜ್ಯದ ಸರ್ವರಿಗೂ ಸಮಪಾಲು, ಸಮಬಾಳು ಸಿಗಬೇಕೆಂಬುದೇ ಸರ್ಕಾರದ ಉದ್ದೇಶ. ಸಿದ್ದರಾಮೇಶ್ವವರೂ ಸೇರಿದಂತೆ ಸಂತಮಹಾಶಯರು, ಸಮಾಜದಲ್ಲಿ ಜಾತಿವರ್ಗಗಳ ವ್ಯವಸ್ಥೆಗಳು ತೊಲಗಬೇಕು ಎಂದು ಬಯಸಿದ್ದರು. ಬಸವಾದಿ ಶರಣರು 12ನೇ ಶತಮಾನದಲ್ಲಿ ಸಮಾನತೆಯ ಸಿದ್ಧಾಂತವನ್ನು ಬೋಧಿಸಿದ್ದರು. ಶೋಷಣೆಗೊಳಗಾದ ಹಾಗೂ ಅವಕಾಶವಂಚಿತ ಸಮುದಾಯಗಳು ಸಂಘಟಿತರಾಗುವ ಸಮ್ಮೇಳನಗಳು ಉತ್ತಮ ಕಾರ್ಯಗಳಾಗಿವೆ ಎಂದರು.

ನಾನು ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿರಿಸಿದ್ದೇನೆ

ಬಸವ ಜಯಂತಿಯಂದು ನಾನು 2013 ಮೇ 13 ರಂದು ನಾನು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದೆ. ಬಸವಣ್ಣನವರು ಬೋಧಿಸಿದಂತೆ ನಾನು ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿರಿಸಿದ್ದೇನೆ. ರಾಜಕೀಯ ಸ್ವಾತಂತ್ರ್ಯವು, ಆರ್ಥಿಕ ಹಾಗೂ ಸಾಮಾಜಿಕ ಸ್ವಾತಂತ್ರ್ಯದ ತಳಹದಿಯ ಮೇಲೆ ನಿಂತಿದೆ. ಶಿಕ್ಷಣ ಪಡೆದಾಗ ಮಾತ್ರ ಸಾಮಾಜಿಕ ಆರ್ಥಿಕ ಶಕ್ತಿ ದೊರಕಲು ಸಾಧ್ಯ ಎಂದರು.

ಗ್ಯಾರಂಟಿ ಯೋಜನೆಗಳು ಮಹಿಳಾ ಸಮೂಹಕ್ಕೆ ವರದಾನ

ಆರ್ಥಿಕವಾಗಿ ಶಕ್ತಿಯಿಲ್ಲದವರಿಗೆ ಗ್ಯಾರಂಟಿ ಯೋಜನೆಗಳನ್ನು ಸಮಾನವಾಗಿ ನೀಡಲಾಗಿದೆ. ಮಹಿಳೆಯರಿಗೆ ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ತಾರತಮ್ಯವಿಲ್ಲದೇ ನೀಡಲಾಗುತ್ತಿದೆ. ನಮ್ಮ ಸರ್ಕಾರ ಭೋವಿ ನಿಗಮವೂ ಸೇರಿದಂತೆ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳ ಸಾಲವನ್ನು ಮನ್ನಾ ಮಾಡಲಾಗಿದೆ. ಪರಿಶಿಷ್ಟ ಜಾತಿಯ ಸಮುದಾಯಗಳಲ್ಲಿನ ಅಸಮಾನತೆ ಹೋಗಲಾಡಿಸಲು ಐತಿಹಾಸಿಕ ಒಳ ಮೀಸಲಾತಿಯನ್ನು ಜಾರಿಗೊಳಿಸಿದೆ ಎಡಗೈಗೆ 5.25%, ಬಲಗೈಗೆ 5.25%, ಹಾಗೂ ಇತರ ಉಪಜಾತಿಗಳಿಗೆ 4.5% ಹಂಚಿಕೆ ಮಾಡಲಾಗಿದೆ ಎಂದರು.

ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧ

ಈಗ ಜಾತಿ ಸಮೀಕ್ಷೆ ನಡೆಯುತ್ತಿದ್ದು, ಜಾತಿ ಸಮೀಕ್ಷೆ ವರದಿ ಬಂದ ನಂತರ ಚರ್ಚೆ ಮಾಡೋಣ ಎಂದರು. ನಮ್ಮ  ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದೆ. ಯಾರಿಗೂ ಅನ್ಯಾಯವಾಗಬಾರದು, ನೂರಕ್ಕೆ ನೂರು ಅಲ್ಲದಿದ್ದರೂ 99% ನ್ಯಾಯ ಒದಗಿಸಲು ಪ್ರಯತ್ನಿಸಲಾಗುವುದು ಎಂದರು.

ಅವಕಾಶಗಳಿಂದ ಯಾರೂ ವಂಚಿತರಾಗಬಾರದು

ಸಮುದಾಯದವರು ಇಟ್ಟಿರುವ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ, ಸಮುದಾಯದವರಿಗೆ  ಕುಲಪತಿ, ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.   ಏಳು ಕೋಟಿ ಜನರಿಗೂ ನ್ಯಾಯ ಸಿಗಬೇಕು ಹಾಗೂ ಯಾರೂ ಅವಕಾಶಗಳಿಂದ ವಂಚಿತರಾಗಬಾರದು ಎಂದರು.  ಸಂವಿಧಾನ ರಚನೆಯಾದ ನಂತರ ಸಮಾನತೆಯನ್ನು ಸಾಧಿಸುವತ್ತ ದೇಶ ಸಾಗಿದ್ದು, ಸಂವಿಧಾನ ಹೇಳುವಂತೆಯೇ ನಡೆದುಕೊಳ್ಳುತ್ತೇವೆ ಎಂದರು.

ಸಹಿಷ್ಣುತೆಯನ್ನು ರೂಡಿಸಿಕೊಳ್ಳಬೇಕು

ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವ ಸಂವಿಧಾನದ ಮೂಲ ತತ್ವಗಳು. ಜಡತ್ವದಿಂದ ಕೂಡಿರುವ ಜಾತಿ ವ್ಯವಸ್ಥೆಯನ್ನು ಸುಧಾರಿಸಬೇಕಿದೆ. ಎಲ್ಲಾ ಜಾತಿಗಳನ್ನು ಪ್ರೀತಿಸಿ, ಅವರೂ ನಮ್ಮನ್ನು ಪ್ರೀತಿಸುವಂತೆ ಮಾಡಬೇಕು ಹಾಗೂ ಸಹಿಷ್ಣುತೆಯನ್ನು ರೂಡಿಸಿಕೊಳ್ಳಬೇಕು. ಉತ್ಪಾದನೆಯಲ್ಲಿ ಎಲ್ಲರೂ ಭಾಗವಹಿಸಿ ಉತ್ಪನ್ನವನ್ನು ಸಮಾನವಾಗಿ ಹಂಚಿಕೊಳ್ಳಬೇಕು ಎಂದು ಸಿದ್ಧರಾಮೇಶ್ವರರು ನಮಗೆ ಬೋಧಿಸಿದ್ದರು.  ಅವರು ನಡೆದ ಹಾದಿಯಲ್ಲಿಯೇ ನಮ್ಮ ಸರ್ಕಾರವೂ ನಡೆಯುತ್ತಿದೆ  ಎಂದರು.

Key words: Government, education, Bhovi community, CM Siddaramaiah

The post ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧ: ಭೋವಿ ಜನಾಂಗ ಶಿಕ್ಷಣಕ್ಕೆ ಒತ್ತು ನೀಡಿ- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.