Chariot Festival Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಏಪ್ರಿಲ್ 3 ರಂದು ಶ್ರೀ ಮಹಾಬಲೇಶ್ವರ ಸ್ವಾಮಿ ರಥೋತ್ಸವ : ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿ ಡಿಸಿ ಆದೇಶ
ಮೈಸೂರು,ಏಪ್ರಿಲ್,01,2021(www.justkannada.in) : ಏಪ್ರಿಲ್ 3 ರಂದು ಶ್ರೀ ಮಹಾಬಲೇಶ್ವರ ಸ್ವಾಮಿ ರಥೋತ್ಸವ ನಡಯಲಿದ್ದು, ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿ ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಮಹಾಬಲೇಶ್ವರ ಸ್ವಾಮಿ ದೇವಾಲಯದಲ್ಲಿ ರಥೋತ್ಸವ ದಿನದಂದು ಬೆಟ್ಟಕ್ಕೆ ಹೆಚ್ಚಿನ ಸಾರ್ವಜನಿಕರು ಆಗಮಿಸುವ ಹಿನ್ನಲೆ, ಕೋವಿಡ್ 19 ಹರಡುವಿಕೆ ತಡೆಯುವ ಉದ್ದೇಶದಿಂದ ಪ್ರವೇಶ ನಿಷೇಧಿಸಲಾಗಿದೆ.

ಉತ್ಸವದಲ್ಲಿ ಧಾರ್ಮಿಕ ಕಾರ್ಯಗಳು ದೇವಾಲಯ ಒಳ ಆವರಣದಲ್ಲಿ ನಡೆಯಲಿವೆ. ಅರ್ಚಕರು, ಸಿಬ್ಬಂದಿ ಸಮ್ಮುಖದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಸರಳ ರಥೋತ್ಸವ ಜರುಗಲಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಶ್ರೀ ಮಹಾಬಲೇಶ್ವರ ಸ್ವಾಮಿ ರಥೋತ್ಸವ ಸುರಕ್ಷಿತ ಹಾಗೂ ಸರಳವಾಗಿ ನಡೆಸಲು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವಕಾಶ ಕಲ್ಪಿಸಿದ್ದಾರೆ.

key words : 3rd-April-Sri Mahabaleshwar Swamy-Chariot Festival-public-Restrict-access-DC-Order

The post ಏಪ್ರಿಲ್ 3 ರಂದು ಶ್ರೀ ಮಹಾಬಲೇಶ್ವರ ಸ್ವಾಮಿ ರಥೋತ್ಸವ : ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿ ಡಿಸಿ ಆದೇಶ  appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೊಲ್ಲೂರಿನ ಮೂಕಾಂಬಿಕಾ ದೇವಿ ರಥೋತ್ಸವ: ದೇವಿ ದರ್ಶನ ಪಡದು ಸಂತೃಪ್ತರಾದ ಸಾವಿರಾರು ಭಕ್ತರು…
ಕೊಲ್ಲೂರು, ಅ 8,2019(www.justkannada.in):  ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಾ ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ದೇವಿಯ ವೈಭವದ ರಥೋತ್ಸವ ನೆರವೇರಿತು. ಈ ವೇಳೆ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದು ಸಂತೃಪ್ತರಾದರು.

ನವರಾತ್ರಿ ಪ್ರಾರಂಭವಾದ ದಿನದಿಂದ ನವರಾತ್ರಿಯವರೆಗೂ ದೇವಸ್ಥಾನದಲ್ಲಿ ವಿವಿಧ ಪೂಜೆ ಹಾಗೂ ಧಾರ್ಮಿಕ ಆಚರಣೆಯನ್ನು ಮಾಡಲಾಗಿತ್ತು. ಸೋಮವಾರ ಮಧ್ಯಾಹ್ನ ದೇಗುಲದಿಂದ ಹೊರಕ್ಕೆ ತರಲಾದ ಶ್ರೀ ದೇವಿಯ ಉತ್ಸವ ಮೂರ್ತಿಯ ಪ್ರದಕ್ಷಿಣಿ ಹಾಗೂ ಬಲಿ ಸೇವೆ ನಡೆದ ಬಳಿಕ ದೇವಿಯನ್ನು ಅಲಂಕರಿಸಿದ ಪುಷ್ಪ ರಥದಲ್ಲಿ ಕುಳ್ಳಿರಿಸಲಾಯಿತು.

ದೇವಸ್ಥಾನದ ತಂತ್ರಿ ನಿತ್ಯಾನಂದ ಅಡಿಗರು ರಥಾರೋಹಣಳಾದ ಶ್ರೀ ದೇವಿಗೆ ಪೂಜೆ ನೆರವೇರಿಸಿ, ಮಂಗಳಾರತಿ ಎತ್ತಿದ ಬಳಿಕ, ರಥ ಪೂಜೆಯ ನಡೆಸಲಾಯಿತು. ನಂತರ ಸೇರಿದ್ದ ಸಾವಿರಾರು ಜನರು ಶ್ರೀ ದೇವಿಯ ಜಯ ಘೋಷದೊಂದಿಗೆ ರಥವನ್ನು ಎಳೆದರು.

ದೇವಳದ ಒಳ ಪ್ರಾಂಗಣದಲ್ಲಿ ಮೂರು ಸುತ್ತು ಬಂದು ಮತ್ತೆ ರಥ ಮೂಲ ಸ್ಥಾನವನ್ನು ತಲುಪಿದ ಬಳಿಕ ರಥದ ಮೇಲಿನಿಂದ ಅರ್ಚಕರು ಎಸೆದ ನಾಣ್ಯವನ್ನು ಪಡೆದುಕೊಳ್ಳಲು ಭಕ್ತರು ಹರಸಾಹಸ ಪಟ್ಟರು. ಉತ್ಸವ ಮೂರ್ತಿಯನ್ನು ರಥದಿಂದ ಕೆಳಕ್ಕೆ ತರುವ ಕ್ಷಣಗಳಿಗಾಗಿ ಕಾಯುತ್ತಿದ್ದ ಭಕ್ತ ವರ್ಗ, ಕ್ಷಣ ಮಾತ್ರದಲ್ಲಿ ರಥಕ್ಕೆ ಅಲಂಕರಿಸಿದ್ದ ಹೂಗಳನ್ನು ಕಿತ್ತು ಅಲಂಕೃತ ರಥವನ್ನು ಬರಿದುಗೊಳಿಸಿದರು.

ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ದೇವಸ್ಥಾನದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್‌ ಎಂ ಶೆಟ್ಟಿ, ಸಮಿತಿಯ ಸದಸ್ಯರಾದ ವಂಡಬಳ್ಳಿ ಜಯರಾಮ ಶೆಟ್ಟಿ, ರಮೇಶ್‌ ಗಾಣಿಗಾ ಕೊಲ್ಲೂರು, ಜಯಂತಿ ವಿಜಯಕೃಷ್ಣ ಪಡುಕೋಣೆ, ರಾಜೇಶ್‌ ಕಾರಂತ, ಆಭಿಲಾಷ್‌ ಪಿ.ವಿ, ನರಸಿಂಹ ಹಳಗೇರಿ, ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣಪ್ರಸಾದ ಅಡ್ಯಾಂತಾಯ, ಕಾರ್ಯನಿರ್ವಹಣಾಧಿಕಾರಿ ಅರವಿಂದ ಸುತ್ತುಗುಂಡಿ, ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ಕೊಲ್ಲೂರು ಠಾಣಾಧಿಕಾರಿ ಎಂ.ಸಿ.ಶಿವಕುಮಾರ, ಮಾಜಿ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಚುಚ್ಚಿ ನಾರಾಯಣ ಶೆಟ್ಟಿ, ಕಿಶೋರ ಹೆಗ್ಡೆ, ಜಯಾನಂದ ಹೋಬಳಿದಾರ್‌, ಶರ್ಮಿಳಾ ಆಚಾರ್‌, ಮೋಹನ್‌ಚಂದ್ರ ನಂಬಿಯಾರ್‌ ಮುಂತಾದವರಿದ್ದರು.

Key words: kollur Mookambika Devi- Chariot Festival-  thousands – devotees

The post ಕೊಲ್ಲೂರಿನ ಮೂಕಾಂಬಿಕಾ ದೇವಿ ರಥೋತ್ಸವ: ದೇವಿ ದರ್ಶನ ಪಡದು ಸಂತೃಪ್ತರಾದ ಸಾವಿರಾರು ಭಕ್ತರು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.