College Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಕಾಲೇಜು ಕ್ಯಾಂಪಸ್ ಕಲುಷಿತಗೊಳಿಸುತ್ತಿರುವ ಕಾಂಗ್ರೆಸ್: ಮಾಜಿ ಮೇಯರ್ ಶಿವಕುಮಾರ್ ಆಕ್ರೋಶ
ಮೈಸೂರುಜುಲೈ23,2026 (www.justkannada.in): ಕಾಂಗ್ರೆಸ್ ಪಕ್ಷವು ಶಾಲಾ- ಕಾಲೇಜು ಆವರಣವನ್ನು ರಾಜಕೀಯ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಶೈಕ್ಷಣಿಕ ವಾತಾವರಣವನ್ನು ಕಲುಷಿತಗೊಳಿಸುತ್ತಿದೆ ಮಾಜಿ ಮೇಯರ್ ಶಿವಕುಮಾರ್ ಆರೋಪಿಸಿದ್ದಾರೆ.

ಮಹಾರಾಣಿ ಕಾಲೇಜು ಸಭಾಂಗಣದಲ್ಲಿ ಬುಧವಾರ ರಾಹುಲ್ ಗಾಂಧಿ ಅವರ ಬ್ಯಾನರ್ ಅಳವಡಿಕೆ ಹಾಗೂ ಫೋಟೋ ಪ್ರದರ್ಶನ ಕಳವಳಕಾರಿ ಬೆಳವಣಿಗೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಶಿಕ್ಷಣ ಸಂಸ್ಥೆಗಳ ವರ್ಗೀಕರಣ ಮತ್ತು ನಿಯಂತ್ರಣ ಅಧಿನಿಯಮ- 1989ರ ಅನ್ವಯ, ಕಾಲೇಜು ಕ್ಯಾಂಪಸ್ಗಳಲ್ಲಿ ರಾಜಕೀಯ ಚಟುವಟಿಕೆಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಶಾಲೆ- ಕಾಲೇಜು ಆವರಣವು ದೈನಂದಿನ ಪಾಠ ಪ್ರವಚನದೊಂದಿಗೆ ಪಠ್ಯೇತರ ಚಟುವಟಿಕೆಗಳು, ಆಟೋಟ ಕಾರ್ಯಕ್ರಮಗಳು, ಶಾರೀರಿಕ ಶಿಕ್ಷಣ ಮತ್ತು ವ್ಯಾಯಾಮ ಮತ್ತಿತರ ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಸದ್ವಿನಿಯೋಗ ಆಗಬೇಕೆಂದು ಸ್ಪಷ್ಟ ಮಾರ್ಗಸೂಚಿಯನ್ನು ಹಲವಾರು ಸುತ್ತೋಲೆಗಳ ಮೂಲಕ ಹೊರಡಿಸಲಾಗಿದೆ.

ಅದಾಗ್ಯೂ, ಕಾಂಗ್ರೆಸ್ ಶಾಸಕರ ಒತ್ತಡಕ್ಕೆ ಮಣಿದು ಪದವ್ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಮತ್ತು ಮಹಾರಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಕಾರ್ಯಕ್ರಮ ಆಯೋಜನೆಗೆ ಅವಕಾಶ ನೀಡಿರುವುದು ಸರ್ಕಾರದ ನೀತಿ- ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ.

ಕಾಂಗ್ರೆಸ್ ಪಕ್ಷವು ರಾಜ್ಯ ಮತ್ತು ದೇಶಾದ್ಯಂತ ವಿದ್ಯಾರ್ಥಿಗಳನ್ನು ಬಳಸಿಕೊಂಡು ಚಿಲ್ಲರೆ ರಾಜಕೀಯ ಮಾಡುತ್ತಿರುವುದು ಮಹಾರಾಣಿ ಕಾಲೇಜಿನಲ್ಲಿ ನಡೆದ ವಿದ್ಯಮಾನದಿಂದ ಬಯಲಾಗಿದೆ. ಇಂತಹ ಷಡ್ಯಂತ್ರವನ್ನು ದೇಶದ ನಾಗರಿಕರು ಹಾಗೂ ವಿದ್ಯಾರ್ಥಿಗಳೇ ಹಿಮ್ಮೆಟ್ಟಿಸಲಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

Key words: Congress, polluting, college, campuses, Former Mayor, Shivakumar

The post ಕಾಲೇಜು ಕ್ಯಾಂಪಸ್ ಕಲುಷಿತಗೊಳಿಸುತ್ತಿರುವ ಕಾಂಗ್ರೆಸ್: ಮಾಜಿ ಮೇಯರ್ ಶಿವಕುಮಾರ್ ಆಕ್ರೋಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ನನ್ನ ಗುರಿ: ಸಿಎಂ ಸಿದ್ದರಾಮಯ್ಯ
ಬೆಳಗಾವಿ ಅಕ್ಟೋಬರ್, 4,2025 (www.justkannada.in): ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರು. ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಉದ್ಘಾಟನೆ ಹಾಗೂ ಗೃಹ ವೈದ್ಯರ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಯ ಉದ್ಘಾಟನೆ, ಬೆಳಗಾವಿ ಸ್ಮಾರ್ಟ್ ಸಿಟಿ ಅನುದಾನದಲ್ಲಿ ನಿರ್ಮಾಣಗೊಂಡ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ಬಸ್ ನಿಲ್ದಾಣದ ಉದ್ಘಾಟನೆ, ರಾಣಿ ಚನ್ನಮ್ಮ ವಿವಿಯ ಹಿರೇಬಾಗೇವಾಡಿ ಹೊಸ ಆವರಣದಲ್ಲಿ ಪಿ.ಎಂ ಉಷಾ ವಿವಿಧ ಕಟ್ಟಡಗಳ ಹಾಗೂ ರಾಷ್ಟ್ರೀಯ ಹೆದ್ದಾರಿಯಿಂದ ವಿವಿಯ ನೂತನ ಆವರಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಬರಿ ಆಸ್ಪತ್ರೆ ಕಟ್ಟಡ ಕಟ್ಟಿದರೆ ಸಾಲದು. ಅದಕ್ಕೆ ತಕ್ಕಂತೆ ತಜ್ಞ ವೈದ್ಯರನ್ನೂ ನೇಮಿಸುತ್ತೇವೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನಿಸಿದ್ದೇವೆ. ಸದ್ಯ ಪ್ರಭಾಕರ್ ಕೋರೆ ಅವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಸರ್ಕಾರಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದಕ್ಕಾಗಿ ಕೋರೆ ಅವರಿಗೆ ಅಭಿನಂದಿಸುತ್ತೇನೆ ಎಂದರು.

ನಮ್ಮ ಸರ್ಕಾರ ಅಸಮಾನತೆಯನ್ನು ಅಳಿಸುವ ದಿಕ್ಕಿನಲ್ಲಿ ತಳ ಸಮುದಾಯಗಳಿಗೆ ಅವಕಾಶ ಮತ್ತು ಅನುಕೂಲಗಳನ್ನು ಕಲ್ಪಿಸುತ್ತಿದೆ. ಅಸಮಾನತೆ ಇರುವವರೆಗೆ ತಳ ಸಮುದಾಯಗಳ ಜನ ಮುಖ್ಯವಾಹಿನಿಗೆ ಬರಲು ಸಾಧ್ಯವಿಲ್ಲ ಎನ್ನುವ ಮಾತುಗಳನ್ನು ನೆನಪಿನಲ್ಲಿ ಇಟ್ಟುಕೊಂಡು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದರು.

ಬುದ್ದ-ಬಸವ-ಗಾಂಧಿ-ಅಂಬೇಡ್ಕರ್ ಆಶಯದಂತೆ ನಮ್ಮ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಸಮಾಜದ ಕಟ್ಟ ಕಡೆಯವರಿಗೂ ಅಭಿವೃದ್ಧಿ ತಲುಪಿದಾಗ ಮಾತ್ರ ಸಮಾಜದ, ದೇಶದ ಅಭಿವೃದ್ಧಿ ಸಾಧ್ಯ ಎನ್ನುವುದು ಎಲ್ಲರ ಆಶಯವಾಗಿದೆ. ಹೀಗಾಗಿ ಎಲ್ಲರ ಕಲ್ಯಾಣ ಕಾರ್ಯಕ್ರಮಗಳನ್ನು ನಾವು ರೂಪಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ವಿವರಿಸಿದರು.

ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಜಾರಿಗೆ ತಂದ ಭಾಗ್ಯಗಳು, ಈಗ ಜಾರಿಗೆ ತಂದಿರುವ ಗ್ಯಾರಂಟಿಗಳು ರಾಜ್ಯದ ಜನರ ಕೊಳ್ಳುವ ಶಕ್ತಿಯನ್ನು, ತಲಾ ಆದಾಯವನ್ನು ಹೆಚ್ಚಿಸಿ‌ ಮಹಿಳೆಯರನ್ನೂ ಆರ್ಥಿಕವಾಗಿ ಸಬಲರನ್ನಾಗಿ ಮಾಡಲಾಗಿದೆ ಎಂದರು.

ಬಡವರಿಗೆ ಆರ್ಥಿಕವಾಗಿ ಶಕ್ತಿ ಬಂದರೆ ಸಮಾಜದ ಜಾತಿ ವ್ಯವಸ್ಥೆ, ಅಸಮಾನತೆ ಅಳಿಸಲು ಸಾಧ್ಯವಾಗುತ್ತದೆ ಎಂದರು.

ರಾಜ್ಯದ ಎಂಟು ಜಿಲ್ಲೆಗಳಲ್ಲಿ ಶೇ 95 ರಷ್ಟು ಅಧಿಕ ಮಳೆಯಾಗಿ ರಾಜ್ಯದಲ್ಲಿ 10 ಲಕ್ಷ ಹೆಕ್ಟೇರ್ ಬೆಳೆ ನಾಶ ಆಗಿರುವ ಅಂದಾಜಿದೆ. ಈ ಬೆಳೆ ಹಾನಿಗೆ ದಾಖಲೆ ಮೊತ್ತದ ಪರಿಹಾರ ಹಣ ನೀಡಿ ರೈತರು, ಬೆಳೆಗಾರರು, ಕೃಷಿಕರ ನೆರವಿಗೆ ಧಾವಿಸಿದ್ದೇವೆ ಎಂದರು.

ಸಚಿವರಾದ ಶರಣ ಪ್ರಕಾಶ್ ಪಾಟೀಲ್, ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ರಾಮಲಿಂಗಾರೆಡ್ಡಿ, ಎಂ.ಸಿ.ಸುಧಾಕರ್ ಸೇರಿ ಹಲವು ಗಣ್ಯರು, ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

Key words: government medical, college, multi-specialty hospital, CM Siddaramaiah

The post ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ನನ್ನ ಗುರಿ: ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರಿನ‌ ಪ್ರತಿಷ್ಠಿತ ಕಾಲೇಜಿನಲ್ಲೇ ಅವ್ಯವಸ್ಥೆ ಆಗರ: ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
ಮೈಸೂರು,ಅಕ್ಟೋಬರ್,15,2024 (www.justkannada.in): ಸೂಕ್ತ ಮೂಲಭೂತ ವ್ಯವಸ್ಥೆ ಇಲ್ಲದ ಹಿನ್ನೆಲೆಯಲ್ಲಿ ಮೈಸೂರಿನ ಯುವರಾಜ ಕಾಲೇಜು ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಕಾಲೇಜಿನಲ್ಲಿ ಅವ್ಯವಸ್ಥೆ ಆಗರದಿಂದ ಬೇಸತ್ತ ವಿದ್ಯಾರ್ಥಿಗಳು  ತರಗತಿ ಬಹಿಷ್ಕರಿಸಿ ಧರಣಿ ನಡೆಸಿದರು.  ಸೂಕ್ತ ಶೌಚಾಲಯ, ಕುಡಿಯುವ ನೀರು, ಸ್ವಚ್ಚತೆ ಆದ್ಯತೆ ಕೊಡದ ಕಾಲೇಜು ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ಮೂಲಕ ಕಿಡಿಕಾರಿದರು.

ಯುವರಾಜ ಕಾಲೇಜಿಗೆ ವಿದ್ಯಾರ್ಥಿಗಳು ಬೇರೆ ಬೇರೆ ಜಿಲ್ಲೆಗಳಿಂದ ಬಂದು ವ್ಯಾಸಂಗಮಾಡುತ್ತಾರೆ.  ಆದರೆ. ಕಾಲೇಜಿನಲ್ಲಿ  ಗಬ್ಬೇದ್ದು ನಾರುವ ಶೌಚಾಲಯ, ಶುದ್ಧ ಕುಡಿಯುವ ನೀರಿಲ್ಲದೆ ಪರದಾಡುವ ಪರಿಸ್ಥಿತಿ ಉಂಟಾಗಿದೆ.‌ ಪ್ರತಿಷ್ಠಿತ ಕಾಲೇಜಿನಲ್ಲೇ ಸೂಕ್ತ ಮೂಲಭೂತ ವ್ಯವಸ್ಥೆ ವಿದ್ಯಾರ್ಥಿಗಳಿಗಿಲ್ಲ. ವಸತಿ ನಿಲಯದಲ್ಲೂ ಗುಣಮಟ್ಟದ ಊಟ ಕೊಡುತ್ತಿಲ್ಲ. ಇತ್ತ ಕಾಲೇಜಿನಲ್ಲೂ ಸೂಕ್ತ ವ್ಯವಸ್ಥೆಗಳಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.  ಕೂಡಲೇ ಮೂಲಭೂತ ವ್ಯವಸ್ಥೆಗಳನ್ನು ಕಲ್ಪಿಸುವಂತೆ ಆಗ್ರಹಿಸಿದರು.

Key words: Mysore, prestigious, college, protest , students

The post ಮೈಸೂರಿನ‌ ಪ್ರತಿಷ್ಠಿತ ಕಾಲೇಜಿನಲ್ಲೇ ಅವ್ಯವಸ್ಥೆ ಆಗರ: ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜೆಎಸ್ ಎಸ್ ವೈದ್ಯಕೀಯ ಕಾಲೇಜು ವತಿಯಿಂದ ವಿಶ್ವ ಪರಿಸರ ದಿನ : ಜಾಗೃತಿ ಜಾಥಾ, ಕಿರು ನಾಟಕ ಪ್ರದರ್ಶನ.
ಮೈಸೂರು,ಜೂನ್,7,2024 (www.justkannada.in):  ಸಮುದಾಯ ವೈದ್ಯಶಾಸ್ತ್ರವಿಭಾಗ, ಜೆ ಎಸ್ ಎಸ್ ನಗರ ಆರೋಗ್ಯ ಕೇಂದ್ರ, ಜೆ ಎಸ್ ಎಸ್ ವೈದ್ಯಕೀಯ ಕಾಲೇಜು, ಮೈಸೂರು, ಮೇದರ್ ಬ್ಲಾಕ್, ಬಂಬೂ ಬಜಾರ್‌ನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.

ಸಮುದಾಯ ವೈದ್ಯಶಾಸ್ತ್ರವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ಸುನೀಲ್ ಕುಮಾರ್ ಡಿ ಅವರು ಲ್ಯಾಂಡ್ ರೀಸ್ತೋರೆಶನ್, ಸ್ಟಾಪ್ಪಿಂಗ್ ಡೆಸರ್ಟಿಫಿಕೇಶನ್ ಮತ್ತು ಬಿಲ್ಡಿಂಗ್ ಡ್ರಾಟ್ ರಿಸೈಲೆನ್ಸ್” ವಿಷಯದ ಕುರಿತು ಉಪನ್ಯಾಸ ನೀಡಿದರು. ಪರಿಸರ ಸಂರಕ್ಷ ಣೆ ಮತ್ತು ಗಿಡಗಳನ್ನು ನೆಡುವ ಮಹತ್ವವನ್ನು ಒತ್ತಿ ಹೇಳಿದರು.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಮೇದಾರ ಬ್ಲಾಕ್‌ ನ ಬೀದಿಗಳಲ್ಲಿ  ಜಾಥಾ ಮಾಡುವ ಮುಖಾಂತರ  ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು ಮತ್ತು ಕಿರುನಾಟಕ ಪ್ರದರ್ಶಿಸಲಾಯಿತು.

ಜೆ ಎಸ್ ಎಸ್ ಯು ಎಚ್ ಸಿ ಆವರಣದಲ್ಲಿ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಜೆ ಎಸ್ ಎಸ್ ಯು ಎಚ್ ಸಿ ಸಿಬ್ಬಂದಿ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಸಸಿಗಳನ್ನು ನೆಟ್ಟರು.

ಸಮುದಾಯ ವೈದ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ.ಸುನೀಲ್ ಕುಮಾರ್ ಡಿ, ಜೆಎಸ್ಎಸ್ ಯುಎಚ್‌ ಸಿ ಯ ವೈದ್ಯಾಧಿಕಾರಿ ಡಾ.ರಾಮ ಹೆಚ್.ವಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಭಾಗ್ಯಲಕ್ಷ್ಮಿ, ಜೆಎಸ್ಎಸ್ ಎಂಸಿಯ ಇಂಟರ್ನ್‌ ಗಳು ಮತ್ತು ಜೆಎಸ್‌ಎಸ್ ಡಿಸಿ, ಜೆಎಸ್‌ಎಸ್ ಯುಎಚ್‌ ಸಿ ಮತ್ತು ಶಾಲೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

Key words: World Environment Day, JSS Medical, College, mysore

The post ಜೆಎಸ್ ಎಸ್ ವೈದ್ಯಕೀಯ ಕಾಲೇಜು ವತಿಯಿಂದ ವಿಶ್ವ ಪರಿಸರ ದಿನ : ಜಾಗೃತಿ ಜಾಥಾ, ಕಿರು ನಾಟಕ ಪ್ರದರ್ಶನ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನನ್ನ ಓದು ಅರ್ಧಕ್ಕೆ ನಿಲ್ಲಿಸಿದ್ದೆ: ಈಗ ಮತ್ತೆ ಕಾಲೇಜಿಗೆ ಹೋಗ್ತೇನೆ; ಹಿಜಾಬ್ ಹೋರಾಟಗಾರ್ತಿ ಮುಸ್ಕಾನ್ ಹೇಳಿಕೆ.
ಮಂಡ್ಯ,ಡಿಸೆಂಬರ್,23,2023(www.justkannada.in):  ಹಿಜಾಬ್ ನಿಷೇಧ ವಾಪಸ್ ಪಡೆಯುವ ಸಿಎಂ ಸಿದ್ದರಾಮಯ್ಯ ನಿರ್ಧಾರವನ್ನ ಮಂಡ್ಯದಲ್ಲಿ ಹಿಜಾಬ್ ಹೋರಾಟಗಾರ್ತಿ ಮುಸ್ಕಾನ್ ಸ್ವಾಗತಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಮುಸ್ಕಾನ್, ಹಿಜಾಬ್ ನಿಷೇಧ ವಾಪಸ್  ಪಡೆಯುವ ನಿರ್ಧಾರ ಸ್ವಾಗತಿಸುತ್ತೇನೆ. ಆದೇಶ ಹಿಂಪಡೆಯುವ ನಿರ್ಧಾರ ದಿಂದ ಖುಷಿಯಾಗಿದೆ. ನನ್ನ ಓದು ಅರ್ಧಕ್ಕೆ ನಿಲ್ಲಿಸಿದ್ದೆ. ಈಗ ಮತ್ತೆ ಕಾಲೇಜಿಗೆ ಹೋಗುತ್ತೇನೆ ಎಂದಿದ್ದಾರೆ.

ಕೋರ್ಟ್ ನಿಂದ ನ್ಯಾಯ ಸಿಗುವ ವಿಶ್ವಾಸವಿದೆ. ಹಿಜಾಬ್ ನಿಂದ ವಿದ್ಯಾಭ್ಯಾಸ ಬಿಟ್ಟಿದ್ದವರು ವಾಪಸ್ ಕಾಲೇಜಿಗೆ ಬನ್ನಿ. ಮಕ್ಕಳ ಶಿಕ್ಷಣದಲ್ಲೂ ರಾಜಕೀಯ ಮಾಡಬಾರದು. ನಮ್ಮ ಹಕ್ಕು ನಮಗೆ ನೀಡಿದಕ್ಕೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್  ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.

Key words: Hijab –activist-Muskan-mandya-college

The post ನನ್ನ ಓದು ಅರ್ಧಕ್ಕೆ ನಿಲ್ಲಿಸಿದ್ದೆ: ಈಗ ಮತ್ತೆ ಕಾಲೇಜಿಗೆ ಹೋಗ್ತೇನೆ; ಹಿಜಾಬ್ ಹೋರಾಟಗಾರ್ತಿ ಮುಸ್ಕಾನ್ ಹೇಳಿಕೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪಶುವೈದ್ಯಕೀಯ ಮಹಾವಿದ್ಯಾಲಯ‌ ಲೋಕಾರ್ಪಣೆ: ಗ್ಯಾರಂಟಿ ಜಾರಿಯಿಂದ ರಾಜ್ಯದ ಜಿಡಿಪಿ ಹೆಚ್ಚಳ- ಸಿಎಂ ಸಿದ್ದರಾಮಯ್ಯ ವಿಶ್ವಾಸ.
ಬೆಳಗಾವಿ, ಆಗಸ್ಟ್.11,2023(www.justkannada.in): ರಾಜ್ಯ ಸರಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ರೈತರು, ಬಡವರು, ಮಹಿಳೆಯರು, ಕಾರ್ಮಿಕರು, ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಯೊಂದು ಕುಟುಂಬಕ್ಕೆ ಐದು ಸಾವಿರ ರೂಪಾಯಿ ಲಭಿಸುತ್ತಿದೆ. ಇದರಿಂದ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ. ಇದರಿಂದ ರಾಜ್ಯದ ಜಿಡಿಪಿ ಹೆಚ್ಚಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಅಥಣಿ ತಾಲ್ಲೂಕಿನ ಕೊಕಟನೂರಿನಲ್ಲಿ ಶುಕ್ರವಾರ (ಆ.11) ನಡೆದ ಸಮಾರಂಭದಲ್ಲಿ ಪಶುವೈದ್ಯಕೀಯ ಮಹಾವಿದ್ಯಾಲಯ ಲೋಕಾರ್ಪಣೆಗೊಳಿಸಿ ವಿವಿಧ ಅಭಿವೃದ್ಧಿ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ಶಕ್ತಿ ಯೋಜನೆಯಡಿ ಇದುವರೆಗೆ 35 ಕೋಟಿ ಮಹಿಳೆಯರು ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಇದರಿಂದ ಸರಕಾರದ‌ ಆದಾಯ ಕೂಡ ಹೆಚ್ಚಾಗಲಿದೆ. ರಾಜ್ಯದ 1.30 ಕೋಟಿಗೂ ಅಧಿಕ ಕುಟುಂಬಗಳಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ದೇಶದಲ್ಲೇ ಅಪರೂಪದ ಯೋಜನೆಯಾಗಿದೆ.‌ ವರ್ಷಕ್ಕೆ 35 ಸಾವಿರ ಕೋಟಿ ರೂಪಾಯಿ ಇದಕ್ಕೆ ವಿನಿಯೋಗಿಸಲಾಗುವುದು ಎಂದರು.

ಗ್ಯಾರಂಟಿ ಅನುಷ್ಠಾನ ಸೇರಿದಂತೆ ಸರಕಾರದ‌ ಸಾಧನೆಯು ವಿರೋಧ ಪಕ್ಷವನ್ನು ಕಂಗೆಡಿಸಿದೆ.‌ ಏನೇ ಆದರೂ ಸರಕಾರ ನೀಡಿರುವ ಎಲ್ಲ ಭರವಸೆಗಳನ್ನು ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಚುನಾವಣಾ ಸಂದರ್ಭದಲ್ಲಿ ನೀಡಲಾದ ಪ್ರತಿಯೊಂದು ಭರವಸೆಗಳನ್ನು ಸರಕಾರ ಈಡೇರಿಸಲಿದೆ. ನುಡಿದಂತೆ ನಡೆಯುವ ಸರಕಾರ ನಮ್ಮದು ಎಂದರು.

ಕಳೆದ ಬಾರಿ 165 ಭರವಸೆಗಳ ಪೈಕಿ 158 ಈಡೇರಿಸಲಾಗಿದೆ. ಅದೇ ರೀತಿ ಈ ಸಲ ನೀಡಲಾಗಿರುವ ಐದು ಗ್ಯಾರಂಟಿ ಇತ್ತೀಚಿನ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಿಸಲಾದ 76 ಭರವಸೆಗಳನ್ನು ಈಡೇರಿಸಲು ಪ್ರಸಕ್ತ ಸಾಲಿನ ಬಜೆಟ್ ನಲ್ಲಿಯೇ ಕ್ರಮ ಕೈಗೊಳ್ಳಲಾಗಿದೆ. ಐದು ಗ್ಯಾರಂಟಿ ಯೋಜನೆಗಳ ಪೈಕಿ ಮೂರು ಈಗಾಗಲೇ ಈಡೇರಿಸಲಾಗಿದೆ. ಗೃಹಲಕ್ಷ್ಮೀ ಈ ಮಾಹೆಯಲ್ಲಿ ಜಾರಿಗೆ ತರಲಾಗುತ್ತಿದ್ದು, ಐದನೇ ಗ್ಯಾರಂಟಿ ಯುವ ನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಜಾರಿಗೊಳಿಸಲಾಗುವುದು. ಪ್ರಮುಖ ಸಮಾಜ ಸುಧಾರಕರ ಪೈಕಿ ಬಸವಣ್ಣ ನನಗೆ ಅತ್ಯಂತ ಇಷ್ಟವಾದ ವ್ಯಕ್ತಿ. ಆದ್ದರಿಂದ ಬಸವ ಜಯಂತಿಯ ದಿನ ಪ್ರಮಾಣವಚನ ಸ್ವೀಕರಿಸಿ ನುಡಿದಂತೆ ನಡೆದಿರುತ್ತೇವೆ. ಆದ್ದರಿಂದ ಜನರು ಮತ್ತೇ ಆಶೀರ್ವಾದ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಜ್ಯದಲ್ಲಿ ಪಶು ಸಂಪತ್ತು ಅಧಿಕವಾಗಿದ್ದು, ಪಶು ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಯಿಂದ ಜಾನುವಾರುಗಳ ಆರೋಗ್ಯ ರಕ್ಷಣೆಯ ಜತೆಗೆ ಕೃಷಿ ಅಭಿವೃದ್ಧಿಗೆ ಪೂರಕವಾಗಲಿದೆ.

ಅಥಣಿ ಮತಕ್ಷೇತ್ರಕ್ಕೆ ಶಾಸಕ ಲಕ್ಷ್ಮಣ ಸವದಿ ಅವರು ಕೊಡುಗೆ ಅಪಾರವಾಗಿದೆ. ಆಯಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಸವದಿ ಅವರ ಸಾಧನೆ ಅಭಿನಂದನಾರ್ಹ.ನೀರಾವರಿ ಯೋಜನೆ ಅನುಷ್ಠಾನ ಸೇರಿದಂತೆ ಎಲ್ಲಾ ಬೇಡಿಕೆ ಹಂತ ಹಂತವಾಗಿ ಈಡೇರಿಸಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಸಮಾರಂಭದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಅಥಣಿ ಹಾಗೂ ಕಾಗವಾಡ ಮತಕ್ಷೇತ್ರದ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.

ಅಥಣಿ ಶಾಸಕರ ನೀರಾವರಿ ಯೋಜನೆಗಳ ಕನಸು ದೊಡ್ಡದಾಗಿವೆ. ಇಡೀ ಕ್ಷೇತ್ರದ ಜನರ ಬದುಕು ಹಸನಾಗಿಸಲು ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅವರು ‌ಬಯಸಿದ್ದಾರೆ.  ಈ ಭಾಗದ ಜನರು ಮಾತ್ರವಲ್ಲ. ಜಾನುವಾರುಗಳ ಅನುಕೂಲಕ್ಕಾಗಿ ಪಶು ವೈದ್ಯಕೀಯ ಮಹಾವಿದ್ಯಾಲಯವನ್ನು ಶಾಸಕ ಲಕ್ಷ್ಮಣ ಸವದಿ ಸ್ಥಾಪಿಸುವ ಮೂಲಕ ತಮ್ಮ ಕಳಕಳಿಯನ್ನು ಪ್ರದರ್ಶಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಸರಕಾರ ನುಡಿದಂತೆ ನಡೆಯುತ್ತಿದ್ದು, ಐದೂ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತರಲಾಗುವುದು ಎಂದು ಹೇಳಿದರು.

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಮಾತನಾಡಿ, ಲೋಕಾರ್ಪಣೆಗೊಂಡಿರುವ ಪಶು ವೈದ್ಯಕೀಯ ಮಹಾವಿದ್ಯಾಲಯವು ಮುಂಬರುವ ದಿನಗಳಲ್ಲಿ ರೈತ ಸಮುದಾಯ, ವಿದ್ಯಾರ್ಥಿಗಳು ಹಾಗೂ ಈ ಭಾಗದ ಜಾನುವಾರುಗಳಿಗೆ ಅನುಕೂಲವಾಗಲಿದೆ ಎಂದರು.

ಮಹಾವಿದ್ಯಾಲಯಕ್ಕೆ ಅಗತ್ಯ ಮೂಲಸೌಕರ್ಯವನ್ನು ಒದಗಿಸಲಾಗುವುದು. ಅಥಣಿ ಭಾಗದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನವನ್ನು ಸರಕಾರ ನೀಡಲಿದೆ. ಮುಖ್ಯಮಂತ್ರಿ ‌ಸಿದ್ದರಾಮಯ್ಯನವರ ಹಿಂದಿನ ಆಡಳಿತ ಅವಧಿಯಲ್ಲಿನ ಅಭಿವೃದ್ಧಿ ಪಥದಲ್ಲಿ ಹೊಸ ಸರಕಾರ ಸಾಗಲಿದೆ ಎಂದು ಹೇಳಿದರು.

ನಾಲ್ಕು ಟಿ.ಎಂ.ಸಿ. ನೀರು ವಿನಿಮಯ ಒಪ್ಪಂದಕ್ಕೆ ಜಾರಕಿಹೊಳಿ ಮನವಿ.

ಮಹಾರಾಷ್ಟಕ್ಕೆ ಮಳೆಗಾಲದಲ್ಲಿ ನಾಲ್ಕು ಟಿ.ಎಂ.ಸಿ.‌ನೀಡಿ ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಮಹಾರಾಷ್ಟ್ರದಿಂದ ನಮ್ಮ ರಾಜ್ಯಕ್ಕೆ ನಾಲ್ಕು ಟಿ.ಎಂ.ಸಿ. ನೀರು ವಿನಿಮಯ ಮಾಡಿಕೊಳ್ಳುವ ಒಪ್ಪಂದಕ್ಕೆ ಸರಕಾರ ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಮನವಿ ಮಾಡಿಕೊಂಡರು. ಈ ರೀತಿಯ ಒಪ್ಪಂದದಿಂದ ಸರಕಾರಕ್ಕೆ ಯಾವುದೇ ರೀತಿಯ ಆರ್ಥಿಕ ಹೊರೆಯಾಗುವುದಿಲ್ಲ ಎಂದು ಹೇಳಿದರು.

ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ.ವೆಂಕಟೇಶ್ ಅವರು‌ ಮಾತನಾಡಿ, ಈ ಭಾಗದ ವಿದ್ಯಾರ್ಥಿಗಳು ಮತ್ತು ಜಾನುವಾರುಗಳನ್ನು ಸಾಕಿಕೊಂಡಿರುವ ರೈತ ಸಮುದಾಯಕ್ಕೆ ಪಶು ವೈದ್ಯಕೀಯ ಮಹಾವಿದ್ಯಾಲಯವು ಅನುಕೂಲವಾಗಲಿದೆ ಎಂದು ಹೇಳಿದರು. ವೈದ್ಯರು, ಔಷಧಿಗಳ ಕೊರತೆಯ ಮಧ್ಯೆಯೂ ಪಶುಸಂಗೋಪನೆ ಇಲಾಖೆಯ ಉತ್ತಮ ಸೇವೆ ಒದಗಿಸುತ್ತಿದೆ ಎಂದು ಸಚಿವ ವೆಂಕಟೇಶ್ ತಿಳಿಸಿದರು.

ರಾಜ್ಯದಲ್ಲಿಯೇ ಅತೀ ಹೆಚ್ಚು ಜಾನುವಾರುಗಳು ಇರುವ ಬೆಳಗಾವಿ ಜಿಲ್ಲೆಯಲ್ಲಿ ಹಾಲಿನ ಉತ್ಪಾದನೆ ಕೂಡ ಹೆಚ್ಚಿನ ಪ್ರಮಾಣದಲ್ಲಿದೆ. ಇದನ್ನು ಪರಿಗಣಿಸಿ ಇನ್ನಷ್ಟು ಉತ್ತಮ ಸೇವೆ ಒದಗಿಸಲು ಬದ್ಧವಿರುವುದಾಗಿ ಅವರು ಭರವಸೆ ನೀಡಿದರು.

ಇದೇ ವೇಳೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಅಥಣಿ ಕ್ಷೇತ್ರದ ಅಭಿವೃದ್ಧಿಯಾಗಬೇಕು ಎಂಬುದು ಶಾಸಕ ಲಕ್ಷ್ಮಣ ಸವದಿ ಅವರ ಏಕೈಕ ಬೇಡಿಕೆಯಾಗಿದೆ ಎಂದರು.

ಐದು ಗ್ಯಾರಂಟಿ ಯೋಜನೆಗಳ ಪೈಕಿ ಈಗಾಗಲೇ ಮೂರು ಗ್ಯಾರಂಟಿ ಅನುಷ್ಠಾನಗೊಳಿಸಲಾಗಿದ್ದು, ಇದೇ ತಿಂಗಳಿನಲ್ಲಿ ಗೃಹಲಕ್ಷ್ಮೀ ಗ್ಯಾರಂಟಿ ಯೋಜನೆ ಜಾರಿಗೆ ತರಲಾಗುವುದು. ಬೆಳಗಾವಿಯಲ್ಲಿ 11 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಈ ಯೋಜನೆಯ ಲಾಭ ದೊರಕಲಿದೆ ಎಂದು ಹೆಬ್ಬಾಳಕರ್ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದು ಹೇಳಿದರು.

70 ಸಾವಿರ ಎಕರೆ ನೀರಾವರಿ ಸೌಲಭ್ಯಕ್ಕೆ ಮನವಿ:

ಪ್ರಾಸ್ತಾವಿಕವಾಗಿ ಮಾತನಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು, ಭಾಗ್ಯದ ಬಾಗಿಲುಗಳನ್ನು ತೆರದ ಬಳಿಕ ಮೊದಲ ಬಾರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಅಥಣಿ ಮತ ಕ್ಷೇತ್ರದ ಜನರ ಋಣವನ್ನು ತೀರಿಸಲು ಅವಕಾಶ ನೀಡಬೇಕು ಎಂದು ಹೇಳಿದರು.

70 ಸಾವಿರ ಎಕರೆ ಜಮೀನು ಇನ್ನೂ ನೀರಾವರಿಯಿಂದ ವಂಚಿತಗೊಂಡಿದ್ದು, ಇದಕ್ಕೆ ಅವಕಾಶ ಕಲ್ಪಿಸಬೇಕು. ಅದೇ ರೀತಿ ಒಂಬತ್ತು ಹಳ್ಳಿಗಳು ಮತ್ತು ಜಮೀನು ಸವಳು-ಜವಳು ಸಮಸ್ಯೆಯಿಂದ ಬಾಧಿತಗೊಂಡಿರುತ್ತವೆ ಇದಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಮನವಿ ಮಾಡಿಕೊಂಡರು.

ಕೃಷಿ ಮಹಾವಿದ್ಯಾಲಯ ಸ್ಥಾಪನೆಗೆ  ತಕ್ಷಣಕ್ಕೆ 20 ಕೋಟಿ ಒದಗಿಸಬೇಕು. ಅಥಣಿ ಭಾಗದ ಒಣ ದ್ರಾಕ್ಷಿಯನ್ನು ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪೌಷ್ಟಿಕಾಹಾರ ತಯಾರಿಕೆಗೆ ಖರೀದಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಶಾಸಕ ಲಕ್ಷ್ಮಣ ಸವದಿ ವಿನಂತಿಸಿದರು.

ಕಾಗವಾಡ ಶಾಸಕ ಭರಮಗೌಡ ಕಾಗೆ ಮಾತನಾಡಿ, ನೂತನ ಕಾಗವಾಡ ತಾಲ್ಲೂಕಿಗೆ ಸರಕಾರಿ ಕಚೇರಿಗಳು ಸೇರಿದಂತೆ ಎಲ್ಲ  ಮೂಲಸೌಕರ್ಯ ಒದಗಿಸಬೇಕು ಎಂದು ಒತ್ತಾಯಿಸಿದರು. ಕಾಗವಾಡ ತಾಲ್ಲೂಕಿನ ಎರಡು ಹೋಬಳಿಗಳನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು.

ಏತ‌ ನೀರಾವರಿ ಯೋಜನೆ ಅನುಷ್ಠಾನಗೊಳಿಸಬೇಕು; 2015 ವರೆಗಿನ ಖಾಸಗಿ ಶಾಲೆಗಳನ್ನು ಅನುದಾನಕ್ಕೊಳಪಡಿಸಬೇಕು; ಸೌಲಭ್ಯಗಳಿಂದ ವಂಚಿತಗೊಂಡಿರುವ ಗಡಿಭಾಗದ ಅಥಣಿ ಹಾಗೂ ಕಾಗವಾಡ ಕ್ಷೇತ್ರಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಬೇಕು ಎಂದು ಭರಮಗೌಡ ಕಾಗೆ ಅವರು ಕ್ಷೇತ್ರದ ಜನರ ಪರವಾಗಿ ವಿನಂತಿಸಿದರು.

ಅಥಣಿಯಲ್ಲಿ ಬಸವೇಶ್ವರರ ಪುತ್ಥಳಿ ಅನಾವರಣ:

ಇದಕ್ಕೂ ಮುಂಚೆ ಅಥಣಿಯ ಬಸವೇಶ್ವರ ವೃತ್ತದಲ್ಲಿ ಸ್ಥಾಪಿಸಲಾಗಿರುವ ಜಗಜ್ಯೋತಿ ಶ್ರೀ ಬಸವೇಶ್ವರರ ಪುತ್ಥಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಲೋಕೋಪಯೋಗಿ ಇಲಾಖೆ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್.ಎಸ್.ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಸರಕಾರದ ವಿಧಾನಸಭೆ ಮುಖ್ಯ ಸಚೇತಕರಾದ ಅಶೋಕ‌ ಪಟ್ಟಣ, ಶಾಸಕರಾದ ಭರಮಗೌಡ ಕಾಗೆ, ವಿಶ್ವಾಸ ವೈದ್ಯ, ಜೆ.ಟಿ.ಪಾಟೀಲ, ಮಹೇಂದ್ರ ತಮ್ಮಣ್ಣವರ, ಬಾಬಾಸಾಹೇಬ್ ಪಾಟೀಲ, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ, ಚನ್ನರಾಜ್ ಹಟ್ಟಿಹೊಳಿ, ಕೊಕಟನೂರ ಗ್ರಾಮ ಪಂಚಾಯತಿ ಅಧ್ಯಕ್ಷೆ ಪೂಜಾರಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್ ಸೇರಿದಂತೆ ಅನೇಕ ಜನಪ್ರತಿನಿಧಿಗಳು ವೇದಿಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸ್ವಾಗತಿಸಿದರು. ಬೀದರ್ ನ ಪಶು ಮತ್ತು ಮೀನುಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಸಿ.ವೀರಣ್ಣ ವಂದಿಸಿದರು.

ಕೊಕಟನೂರ‌ ಗ್ರಾಮ ಸೇರಿದಂತೆ ಅಥಣಿ ಮತಕ್ಷೇತ್ರದ ಸಾವಿರಾರು ಜನರು ಸಮಾರಂಭದಲ್ಲಿ ‌ಪಾಲ್ಗೊಂಡಿದ್ದರು.

Key words: Veterinary- College – GDP of – implementation –guarantee- CM Siddaramaiah

The post ಪಶುವೈದ್ಯಕೀಯ ಮಹಾವಿದ್ಯಾಲಯ‌ ಲೋಕಾರ್ಪಣೆ: ಗ್ಯಾರಂಟಿ ಜಾರಿಯಿಂದ ರಾಜ್ಯದ ಜಿಡಿಪಿ ಹೆಚ್ಚಳ- ಸಿಎಂ ಸಿದ್ದರಾಮಯ್ಯ ವಿಶ್ವಾಸ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹಾಡಹಗಲೇ ಕಾಲೇಜಿನಲ್ಲಿ ಚಾಕುವಿನಿಂದ ಇರಿದು ವಿದ್ಯಾರ್ಥಿನಿ ಹತ್ಯೆ: ತಾನೂ ಆತ್ಮಹತ್ಯೆಗೆ ಯತ್ನಿಸಿದ ಯುವಕ.
ಬೆಂಗಳೂರು,ಜನವರಿ,2,2023(www.justkannada.in): ಯುವಕನೊಬ್ಬ ಹಾಡಹಗಲೇ ಕಾಲೇಜಿನಲ್ಲಿ ಚಾಕುವಿನಿಂದ ಇರಿದು ವಿದ್ಯಾರ್ಥಿನಿ ಹತ್ಯೆ ಮಾಡಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಯಲಹಂಕ ತಾಲ್ಲೂಕು ರಾಜಾನುಕುಂಟೆ ಪ್ರೆಸಿಡನ್ಸಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಯುವಕನೋರ್ವ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದಿದ್ದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಬಳಿಕ ಯುವಕ ತನೂ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಪ್ರೀತಿ ಪ್ರೇಮದ ವಿಚಾರಕ್ಕೆ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ರಾಜಾನುಕುಂಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Key words:  student – stabbed – death – college -bangalore

The post ಹಾಡಹಗಲೇ ಕಾಲೇಜಿನಲ್ಲಿ ಚಾಕುವಿನಿಂದ ಇರಿದು ವಿದ್ಯಾರ್ಥಿನಿ ಹತ್ಯೆ: ತಾನೂ ಆತ್ಮಹತ್ಯೆಗೆ ಯತ್ನಿಸಿದ ಯುವಕ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಾಲೇಜು ಕೊಠಡಿ ಖಾಲಿ ಮಾಡುವಂತೆ ಬೆಂಗಳೂರು ವಿವಿ ಮಾಜಿ ಕುಲಪತಿಗೆ ಯುವಿಸಿಇ ಆದೇಶ.
ಬೆಂಗಳೂರು, ಡಿಸೆಂಬರ್ 13, 2022 (www.justkannada.in): ವಿಶ್ವವಿದ್ಯಾಲಯ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜಿನಲ್ಲಿ (ಯುವಿಸಿಇ), 2018ರಲ್ಲೇ ಬೋಧನಾ ವೃತ್ತಿಯಿಂದ ನಿವೃತ್ತರಾದರೂ ಸಹ ಇನ್ನೂ ಅನಧಿಕೃತವಾಗಿ ಇರುವಂತಹ ಕೊಠಡಿಯನ್ನು ಕೂಡಲೇ ತೆರವುಗೊಳಿಸುವಂತೆ ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಕುಲಪತಿ ಕೆ.ಆರ್. ವೇಣುಗೋಪಾಲ್ ಅವರಿಗೆ ಸೂಚನೆ ನೀಡಿದೆ.

ಸೋಮವಾರದಂದು, ಈಗ ಸ್ವಾಯತ್ತ ವಿಶ್ವವಿದ್ಯಾಲಯವಾಗಿರುವ ಯುವಿಸಿಇನ ಆಡಳಿತ ಮಂಡಳಿ ಸದಸ್ಯರ ಎರಡನೇ ಸಭೆ ನಡೆಯಿತು. ಈ ಸಭೆಯಲ್ಲಿ ವೇಣುಗೋಪಾಲ್ ಅವರಿಗೆ ತತ್‌ ಕ್ಷಣವೇ ಕೊಠಡಿಯನ್ನು ತೆರವುಗೊಳಿಸುವಂತೆ ಸೂಚಿಸಲಾಯಿತು. ವೇಣುಗೋಪಾಲ್ ಅವರು ವಿಶ್ವವಿದ್ಯಾಲಯದಲ್ಲಿ ಕಂಪ್ಯೂಟರ್ ವಿಜ್ಞಾನ ವಿಭಾಗದ ಬೋಧಕರಾಗಿದ್ದಾಗ ಅವರಿಗೆ ಯುವಿಸಿಇ ವತಿಯಿಂದ ಒಂದು ಕೊಠಡಿಯನ್ನು ನೀಡಲಾಗಿತ್ತು.

ಈ ಸಂಬಂಧ ಮಾತನಾಡಿರುವ ಯುವಿಸಿಇನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದಂತೆ, “ಸೇವೆಯಿಂದ ನಿವೃತ್ತರಾದ ನಂತರವೂ ಸಹ ಹಾಗೂ ಅವರು ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಯಾಗಿದ್ದಾಗಲೂ ಸಹ ಅವರು ಆ ಕೊಠಡಿಯನ್ನು ಉಪಯೋಗಿಸುತ್ತಿದ್ದರು. ಅವರ ಸೇವಾ ಹಿರಿತನವನ್ನು ಗಮನಿಸಿ, ಹಾಗೂ ಆಗ ಅವರು ವಿಶ್ವವಿದ್ಯಾಲಯದ ಕುಲಪತಿಯಾಗಿದ್ದ ಕಾರಣದಿಂದಾಗಿ ನಾವು ಅವರನ್ನು ಪ್ರಶ್ನಿಸರಲಿಲ್ಲ. ಆದರೆ ಅವರು ಕುಲಪತಿ ಸೇವಾವಧಿ ಪೂರ್ಣಗೊಂಡ ನಂತರವೂ ಸಹ, ತಡರಾತ್ರಿಯವರೆಗೆ ಹಾಗೂ ರಜಾ ದಿನಗಳಲ್ಲಿ ಆ ಕೊಠಡಿಯನ್ನು ಬಳಸುವುದನ್ನು ಮುಂದುವರೆಸಿದರು.”

ವಿಶ್ವವಿದ್ಯಾಲಯದ ಅನುಮೋದನೆ ಇಲ್ಲದೆಯೇ ವೇಣುಗೋಪಾಲ್ ಅವರು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ತರಗತಿಗಳನ್ನೂ ಸಹ ತೆಗೆದುಕೊಳ್ಳುತ್ತಿದ್ದರಂತೆ. “ಓರ್ವ ಅತಿಥಿ ಉಪನ್ಯಾಸಕನಾಗಿ ತರಗತಿಗಳನ್ನು ತೆಗೆದುಕೊಳ್ಳಬೇಕಾದರೂ ಸಹ ಅದಕ್ಕೆ ಮೀಸಲಾಗಿರುವ ನಿಬಂಧನೆಗಳನ್ನು ಪಾಲಿಸಬೇಕು,” ಎಂದು ಯುವಿಸಿಯ ಹಿರಿಯ ಅಧಿಕಾರಿ ತಿಳಿಸಿದರು.

ಯುವಿಸಿಇ ಪ್ರಾಂಶುಪಾಲರು ವೇಣುಗೋಪಾಲ್ ಅವರಿಗೆ ಹಾಗೂ ಮಧ್ಯಂತರ ನಿರ್ದೇಶಕ ಹೆಚ್.ಎನ್. ರಮೇಶ್ ಅವರಿಗೆ ಈ ಸಂಬಂಧ ಒಂದು ಪತ್ರವನ್ನು ಬರೆದಿದ್ದು, ಆ ಪತ್ರದ ಒಂದು ಪ್ರತಿ ಮಾಧ್ಯಮಕ್ಕೂ ಲಭ್ಯವಾಗಿದೆ. ಆ ಪತ್ರದ ಸಾರಾಂಶ ಹೀಗಿದೆ: “ತಾವು ಯುವಿಸಿಯ ಕಂಪ್ಯೂಟರ್ ಸೈನ್ಸ್ ಹಾಗೂ ಇಂಜಿನಿಯರಿಂಗ್ ವಿಭಾಗದಲ್ಲಿ ಬೋಧನಾ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿದ್ದ ಅವಧಿಯಲ್ಲಿ ತಮಗೆ ಒಂದು ಕಾಲೇಜಿನ ಕೊಠಡಿಯೊಂದನ್ನು ಬಳಸಲು ನೀಡಲಾಗಿತ್ತು. ಆದರೆ ತಾವು ಅಕ್ಟೋಬರ್ ೩೧, ೨೦೧೮ರಂದು ಸೇವೆಯಿಂದ ನಿವೃತ್ತರಾದರೂ ಸಹ ಈಗಲೂ ಆ ಕೊಠಡಿಯನ್ನು ತೆರವುಗೊಳಿಸಿಲ್ಲ. ಆ ಕೊಠಡಿ ಇತರೆ ಅಧಿಕೃತ ಉದ್ದೇಶಗಳಿಗೆ ಅತ್ಯವಶ್ಯಕವಾಗಿರುವ ಕಾರಣದಿಂದಾಗಿ ತತ್‌ಕ್ಷಣವೇ ಆ ಕೊಠಡಿಯನ್ನು ತೆರವುಗೊಳಿಸಬೇಕೆಂದು ಈ ಮುಲಕ ಸೂಚಿಸಲಾಗಿದೆ.”

“ತಮಗೆ ನಿವೃತ್ತಿಯ ನಂತರವೂ ಸಹ ವಿದ್ಯಾರ್ಥಿಗಳಿಗೆ ಪಾಠ ಹೇಳುವುದು ತುಂಬಾ ಇಷ್ಟವಾದ ಕೆಲಸ ಎಂದು, ಬೋಧನೆಯಲ್ಲಿ ತಮಗಿರುವ ಆಸಕ್ತಿಯ ಬಗ್ಗೆ ನಮಗೆ ತಿಳಿದಿದೆ. ಆದರೆ ನೀವು ನಿಮ್ಮ ಬೋಧನಾ ವೃತ್ತಿಯನ್ನು ಮುಂದವರೆಸಲು ಬಯಸಿದರೆ, ಸುಸ್ವಾಗತ. ಆದರೆ ಬಿಓಜಿ ಅಧ್ಯಕ್ಷರಿಂದ ಮುಂಚಿತವಾಗಿ ಅನುಮೋದನೆಯನ್ನು ಪಡೆದುಕೊಳ್ಳಬೇಕು,” ಎಂದು ಪತ್ರದಲ್ಲಿ ವಿವರಿಸಲಾಗಿದೆ.

ಈ ಸಂಬಂಧ ಸಂಪರ್ಕಿಸಿದಾಗ ಯುವಿಸಿಇ ಆಡಳಿತ ಮಂಡಳಿ ಅಧ್ಯಕ್ಷರಾದ ಬಿ. ಮುತ್ತುರಾಮನ್ ಅವರು, ಇದೊಂದು ಆಂತರಿಕ ವಿಷಯವಾಗಿದೆ ಎಂದು ತಿಳಿಸಿ ತಮ್ಮ ಅಭಿಪ್ರಾಯವನ್ನು ನೀಡಲು ನಿರಾಕರಿಸಿದರು. ವೇಣುಗೋಪಾಲ್ ಅವರು ಈ ಸಂಬಂಧ ಮಾತನಾಡಲು ಲಭ್ಯವಾಗಲಿಲ್ಲ.

ಸುದ್ದಿ ಮೂಲ: ಡೆಕ್ಕನ್ ಹೆರಾಲ್ಡ್

Key words: UVCE -orders – former –VC- Bangalore University – college- room

The post ಕಾಲೇಜು ಕೊಠಡಿ  ಖಾಲಿ ಮಾಡುವಂತೆ ಬೆಂಗಳೂರು ವಿವಿ ಮಾಜಿ ಕುಲಪತಿಗೆ ಯುವಿಸಿಇ ಆದೇಶ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

4.10 ಕೋಟಿ ರೂ. ವೆಚ್ಚದಲ್ಲಿ ಕಾಲೇಜಿನ ನೂತನ ಕಟ್ಟಡ ಕಾಮಗಾರಿ: ಶಾಸಕ ಎಸ್.ಎ.ರಾಮದಾಸ್ ಭೂಮಿ ಪೂಜೆ.
ಮೈಸೂರು, ನ.04, 2022 : (www.justkannada.in news) ಕುವೆಂಪುನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನೂತನ ಕಟ್ಟಡ ಕಾಮಗಾರಿಗೆ ಶಾಸಕ ಎಸ್.ಎ.ರಾಮದಾಸ್ ಭೂಮಿ ಪೂಜೆ ನೆರವೇರಿಸಿದರು.

ಮೈಸೂರು ನಗರ, ನಾಚನಹಳ್ಳಿ, ಕುಪ್ಪಲೂರು, ೩ನೇ ಹಂತ, ಎ ವಲಯ ಬಡಾವಣೆಯಲ್ಲಿನ ನಾಗರೀಕ ಸೌಕರ್ಯ ನಿವೇಶನ ಮೈಸೂರಿನ ಕುವೆಂಪುನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಮಂಜೂರಾಗಿದ್ದು, ಸದರಿ ನಿವೇಶದಲ್ಲಿ ಕಟ್ಟಡ ನಿರ್ಮಾಣ ಮಾಡಲು, ಸರ್ಕಾರ 4.10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.

ಈ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಬೆಂಗಳೂರಿನ ರೈಟ್ಸ್ ಸಂಸ್ಥೆಗೆ ಗುತ್ತಿಗೆ ನೀಡಲಾಗಿದೆ. ಕಟ್ಟಡ ನಿರ್ಮಾಣ ಕಾಮಗಾರಿಗೆ ಇಂದು ಶಾಸಕ ಎಸ್ಎ ರಾಮದಾಸ್ ಭೂಮಿ ಪೂಜೆ ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ಮೈಸೂರಿನ ಮೇಯರ್ ಶಿವಕುಮಾರ್, ಉಪಮೇಯರ್ ಡಾ|| ರೂಪ, ನಗರಪಾಲಿಕೆ ಸದಸ್ಯೆ ಶಾರದ ಈಶ್ವರ್, ಕಾಲೇಜು ಅಭಿವೃದ್ದಿ ಮಂಡಳಿಯ ಸದಸ್ಯರು, ಕಾಲೇಜಿನ ಪ್ರಂಶುಪಾಲರಾದ ಡಾ. ರಾಗಿಣಿ ಎನ್, ಅಧ್ಯಾಪಕರು, ಸಿಬ್ಬಂದಿವರ್ಗ , ವಿದ್ಯಾರ್ಥಿಗಳು ಹಾಗೂ ರೈಟ್ ಸಂಸ್ಥೆಯ ಅಧಿಕಾರಿಗಳು ಉಪಸ್ಥಿತರಿದ್ದರು.

key words : mysore-bjp-mla-ramadas-college-foundation

The post 4.10 ಕೋಟಿ ರೂ. ವೆಚ್ಚದಲ್ಲಿ ಕಾಲೇಜಿನ ನೂತನ ಕಟ್ಟಡ ಕಾಮಗಾರಿ: ಶಾಸಕ ಎಸ್.ಎ.ರಾಮದಾಸ್ ಭೂಮಿ ಪೂಜೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಕಟ್ಟಡ ಕುಸಿತ ಹಿನ್ನೆಲೆ ಸಭೆ: ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಪ್ರಾಂಶುಪಾಲರು.
ಮೈಸೂರು,ಅಕ್ಟೋಬರ್, 27,2022(www.justkannada.in):  ಇತ್ತೀಚೆಗೆ ನಗರದ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಕಾಲೇಜು ಕಟ್ಟಡ ಕುಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಜೊತೆ ಪ್ರಾಂಶುಪಾಲರು, ಅಧ್ಯಾಪಕರು  ಸಭೆ ನಡೆಸಿ ಧೈರ್ಯ ತುಂಬಿದರು.

ನಿರಂತರ ಮಳೆಯ ಪರಿಣಾಮ ಇತ್ತೀಚಿಗೆ ಕಾಲೇಜು ಕಟ್ಟಡ ಕುಸಿದುಬಿದ್ದಿತ್ತು. ಹೀಗಾಗಿ  ವಿದ್ಯಾರ್ಥಿಗಳಲ್ಲಿ ಆತಂಕ ಮನೆ ಮಾಡಿತ್ತು. ಆತಂಕ ದೂರ ಮಾಡುವ ಸಲುವಾಗಿ ಇಂದು ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಮಾತನಾಡಿದ ಪ್ರಾಂಶುಪಾಲ ಡಾ.ಡಿ ರವಿ ಅವರು, ಕುಸಿದ ಪಾರಂಪರಿಕ ಕಟ್ಟಡದಲ್ಲಿ ಪ್ರಯೋಗಶಾಲೆ ಮತ್ತು ಕೆಲವು ತರಗತಿಗಳು ನಡೆಯುತ್ತಿದ್ದವು. ಸದರಿ ತರಗತಿಗಳನ್ನು ಪಕ್ಕದಲ್ಲೇ ಇರುವ ಹೊಸ ಕಟ್ಟಡದಲ್ಲಿ ನಡೆಸಲಾಗುತ್ತದೆ. ತರಗತಿಗಳು ಯಾವ ತೊಂದರೆಯೂ ಇಲ್ಲದೆ ನಡಯಲಿವೆ ಎಂದು ಪ್ರಾಂಶುಪಾಲರಾದ ಡಾ. ಡಿ.ರವಿ ಅವರು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.

ಲೋಕೋಪಯೋಗಿ ಇಲಾಖೆಯ ಇಂಜಿನಿಯರುಗಳ ತಂಡ ಕಾಲೇಜಿನ ಪಾರಂಪರಿಕ ಕಟ್ಟಡವನ್ನು ಪರಿಶೀಲನೆ ನಡೆಸಿದ್ದು ಇನ್ನು ಕೆಲವೇ ದಿನಗಳಲ್ಲಿ ವರದಿ ನೀಡಲಿದ್ದಾರೆ. ಆ ನಂತರ ಮುಂದಿನ ಕ್ರಮವನ್ನು ಇಲಾಖೆ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.

ಗಾಳಿಸುದ್ದಿ ನಂಬದಿರುವಂತೆ ಹಾಗು ಕುತೂಹಲಕ್ಕೂ ಕುಸಿದು ಬಿದ್ದಿರುವ ಕಟ್ಟಡದ ಬಳಿ ಹೋಗದಂತೆ ಎಚ್ಚರ ವಹಿಸುವಂತೆ  ಸೂಚಿಸಿದರು. ಸಭೆಯಲ್ಲಿ ಅಧ್ಯಾಪಕರು, ಕಛೇರಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

Key words: mysore-Maharani Women- Science -College -building –collapse- meeting

The post ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಕಟ್ಟಡ ಕುಸಿತ ಹಿನ್ನೆಲೆ ಸಭೆ: ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಪ್ರಾಂಶುಪಾಲರು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.