content Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಪದವಿ ಶಿಕ್ಷಣದಲ್ಲಿ ಭಾಷಾ ವಿಷಯ ಒಂದು ವರ್ಷದ ಅವಧಿಗೆ ಮಿತಿಗೊಳಿಸಿರುವುದು ಕನ್ನಡಕ್ಕೆ ಮಾಡಿದ ದ್ರೋಹ- ಸಿದ್ಧರಾಮಯ್ಯ ಕಿಡಿ.
ಬೆಂಗಳೂರು,ಜೂನ್,18,2021(www.justkannada.in):  ಮೂರು ವರ್ಷಗಳ ಅವಧಿಯ ಪದವಿ ಶಿಕ್ಷಣದಲ್ಲಿ ಭಾಷಾ ವಿಷಯಗಳನ್ನು ನಾಲ್ಕು ಸೆಮಿಸ್ಟರ್‌ ಗಳ ಅವಧಿಗಳಲ್ಲಿ ಕಲಿಸುತ್ತಿದ್ದು ಅದನ್ನು ಒಂದು ವರ್ಷದ ಅವಧಿಯ ಎರಡು ಸೆಮಿಸ್ಟರ್‌ ಗಳಿಗೆ ಮಿತಿಗೊಳಿಸಿರುವುದು ಕನ್ನಡಕ್ಕೆ ಮಾಡಿದ ದ್ರೋಹ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ಹೊಸ ಶಿಕ್ಷಣ ನೀತಿಯ ಭಾಗವಾಗಿ ಈಗ ಇರುವ ಮೂರು ವರ್ಷದ ಬದಲಾಗಿ ನಾಲ್ಕು ವರ್ಷದ ಪದವಿ ಕೋರ್ಸ್ ಅನ್ನು  ಅಳವಡಿಸಲು ಉದ್ದೇಶಿಸಲಾಗಿದೆ. ಅದಕ್ಕೋಸ್ಕರ ಪಠ್ಯಕ್ರಮ ರಚನೆಗೆ ಸಂಬಂಧಪಟ್ಟಂತೆ ನೇಮಿಸಲಾಗಿದ್ದ ಕಾರ್ಯಪಡೆಯ ಪಠ್ಯಪುಸ್ತಕ ರಚನೆಯ ಉಪಸಮಿತಿಯು ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ಕನ್ನಡವನ್ನೂ ಒಳಗೊಂಡಂತೆ ಎಲ್ಲಾ ಭಾಷಾ ವಿಷಯಗಳನ್ನು ಕೇವಲ ಎರಡು ಸೆಮಿಸ್ಟರ್‌ ಗಳಿಗೆ ಅಂದರೆ ಒಂದು ವರ್ಷಕ್ಕೆ ಮಾತ್ರ ಮಿತಿಗೊಳಿಸಿ ಶಿಫಾರಸ್ಸುಗಳನ್ನು ಮಾಡಿದೆ. ಈ ಶಿಫಾರಸ್ಸುಗಳು ‘ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರುದ್ಧವಾಗಿವೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಮುಖ ಉದ್ದೇಶಗಳಲ್ಲಿ ದೇಶ ಭಾಷೆಗಳಿಗೆ ಪ್ರಾಮುಖ್ಯ ನೀಡಬೇಕು ಎಂಬ ಅಂಶವೂ ಇದೆ. ಆದರೆ ರಾಜ್ಯದ ಈ ಸಮಿತಿಯು ಕನ್ನಡದ ಪಾಲಿಗೆ ಮಹಾ ದ್ರೋಹವೆಸಗುವಂತಹ ಶಿಫಾರಸ್ಸುಗಳನ್ನು ಮಾಡಿದೆ ಎಂಬ ಆರೋಪಗಳನ್ನು ನಾಡಿನ ಹಿರಿಯರು ಮಾಡುತ್ತಿದ್ದಾರೆ.

ಸಾಮಾನ್ಯವಾಗಿ ಒಂದು ಸೆಮಿಸ್ಟರ್‌ನಲ್ಲಿ ಗರಿಷ್ಠವೆಂದರೆ 90 ದಿನಗಳ ಅವಧಿಯ ಬೋಧನೆ ಇರುತ್ತದೆ. ಪ್ರತಿ ವಿಷಯಕ್ಕೆ ಸಾಮಾನ್ಯವಾಗಿ ವಾರಕ್ಕೆ 4 ಗಂಟೆಯ ಅವಧಿಯಿರುತ್ತದೆ. ಒಂದು ಸೆಮಿಸ್ಟರ್‌ ನಲ್ಲಿ ಒಂದು ವಿಷಯಕ್ಕೆ  48 ಗಂಟೆ ಬೋಧನಾ ಅವಧಿ ಇರುತ್ತದೆ. ಎರಡು ಸೆಮಿಸ್ಟರುಗಳಿಂದ ಗರಿಷ್ಠ 96 ಗಂಟೆಗಳು ಇರುತ್ತವೆ. ಕೇವಲ 96 ಗಂಟೆಗಳ ಅವಧಿಯಲ್ಲಿ ಯಾವ ವಿಷಯವನ್ನು ಕಲಿಸಲು ಸಾಧ್ಯ?  ಎಂದು ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.

ವಿಜ್ಞಾನ, ವಾಣಿಜ್ಯ, ಅರ್ಥಶಾಸ್ತ್ರ, ಕಾನೂನು ಮತ್ತು ತಾಂತ್ರಿಕ ಶಿಕ್ಷಣವನ್ನು ಕಲಿಯುವ ವಿದ್ಯಾರ್ಥಿ ತನ್ನ ಕಲಿಕೆಯುದ್ದಕ್ಕೂ ಬೌದ್ಧಿಕತೆಯನ್ನು ರೂಪಿಸಿಕೊಳ್ಳುವುದರ ಜೊತೆಗೆ ಆರೋಗ್ಯಕರವಾದ ಮನಸ್ಸನ್ನೂ ಕಟ್ಟಿ ಕೊಳ್ಳಬೇಕಾಗುತ್ತದೆ. ಹೀಗಿರುವಾಗ ಸರ್ಕಾರವು ವಿದ್ಯಾರ್ಥಿಗಳಿಗೆ ಭಾಷಾ ವಿಷಯಗಳನ್ನು ಕಲಿಯದಂತೆ ಮಾಡಿದರೆ ಅವರು ಜಗತ್ತಿನ ಶ್ರೇಷ್ಠ ಮಹಾಕಾವ್ಯಗಳಾದ ರಾಮಾಯಣ, ಮಹಾಭಾರತ ಮುಂತಾದವುಗಳನ್ನು ಕಲಿಯುವುದು ಹೇಗೆ?

ಕೇವಲ ಅದಾನಿ, ಅಂಬಾನಿಗಳಂಥ ಲೂಟಿಕೋರರ ಮಾದರಿಗಳನ್ನು ಕಲಿಸಲು ಹೊರಟಿದೆಯೆ ….?

ಕನ್ನಡದ ಶ್ರೇಷ್ಠ ಅಭಿವ್ಯಕ್ತಿಗಳಾದ ವಚನಗಳನ್ನು, ಪಂಪ, ರನ್ನ, ಕುಮಾರವ್ಯಾಸ ಮತ್ತು ಹರಿದಾಸರ ಕಾವ್ಯಗಳನ್ನು ಕಲಿಯುವುದು ಹೇಗೆ? ಆಧುನಿಕ ಸಾಹಿತ್ಯದ ಸಂದರ್ಭದಲ್ಲಿ ಮೇರು ಸಾಹಿತಿಗಳಾದ ಕುವೆಂಪು, ಕಾರಂತ ಬೇಂದ್ರೆ, ಮಾಸ್ತಿ, ಪುತಿನ ಮುಂತಾದವರು ರೂಪಿಸಿದ ಜೀವನೋತ್ಸಾಹದ ಬದುಕಿನ ದರ್ಶನಗಳನ್ನು ಮಕ್ಕಳು ಕಲಿಯುವುದು ಹೇಗೆ?

ದೇಶದ ಸಂಸ್ಕೃತಿ, ಭಾಷೆ,‌ ಮಹಾಕಾವ್ಯಗಳು, ಪುರಾಣಗಳು, ಕಲೆ, ಜನಪದ ಮುಂತಾದ ಪರಂಪರೆಗಳ ಬಗ್ಗೆ ಮಾತನಾಡುವ ಬಿಜೆಪಿಯು ಪದವಿ ಕಲಿಯುವ ನಮ್ಮ ವಿದ್ಯಾರ್ಥಿಗಳಿಗೆ ಭಾಷಾ ವಿಷಯಗಳನ್ನು ಕಲಿಯದಂತೆ ಮಾಡಿ ಕೇವಲ ಅದಾನಿ, ಅಂಬಾನಿಗಳಂಥ ಲೂಟಿಕೋರರ ಮಾದರಿಗಳನ್ನು ಕಲಿಸಲು ಹೊರಟಿದೆಯೆ  ಎಂಬ ಅನುಮಾನ ಮೂಡುತ್ತಿದೆ.

ನಮ್ಮ ದೇಶಕ್ಕೆ ಜ್ಞಾನ ಇರುವ, ದುಡ್ಡು ಇರುವ ಜನರ ಅಗತ್ಯ ಎಷ್ಟಿದೆಯೋ ಅದಕ್ಕಿಂತ ಹೆಚ್ಚು ಮಾನವೀಯ ಹೃದಯ ಇರುವ ಮನುಷ್ಯರ ಅಗತ್ಯವಿದೆ. ಅಂಥದ್ದಕ್ಕೆ ವಿರುದ್ಧವಾದ ನಿಲುವುಗಳನ್ನು ರೂಪಿಸುವುದಕ್ಕಾಗಿ “ರಾಷ್ಟ್ರೀಯ ಶಿಕ್ಷಣ ನೀತಿ”ಯ ಹೆಸರನ್ನು ಬಳಸಿಕೊಳ್ಳಲಾಗುತ್ತಿದೆ. ಅದರ ಭಾಗವಾಗಿಯೇ ಉಪಸಮಿತಿಯವರು ಭಾಷೆಗಳ ಕಲಿಕೆಯನ್ನು ಎರಡು ಸೆಮಿಸ್ಟರುಗಳಿಗೆ ಇಳಿಸಿದ್ದಾರೆ. ಸರ್ಕಾರ ಈ ಸಮಿತಿಯ ಶಿಫಾರಸ್ಸುಗಳನ್ನು ಒಪ್ಪಿಕೊಂಡಿದ್ದೆ ಆದರೆ ಅದು ಬಹಳ ದೊಡ್ಡ ಮಟ್ಟದ ಕನ್ನಡ ದ್ರೋಹವಾಗುತ್ತದೆ, ಸರಿಪಡಿಸಲಾಗದ ಜನದ್ರೋಹವಾಗುತ್ತದೆ ಎಂದು ಸಿದ್ಧರಾಮಯ್ಯ ಕಿಡಿಕಾರಿದ್ದಾರೆ.

ಪದವಿಯಲ್ಲಿ ಮಕ್ಕಳಿಗೆ ಭಾಷೆಯನ್ನು ಕಲಿಸುವಾಗ ವ್ಯಾಕರಣ, ಛಂದಸ್ಸುಗಳನ್ನು ಕಲಿಸುವುದಿಲ್ಲ. ಬದಲಾಗಿ ವಿದ್ಯಾರ್ಥಿಯ ಕೋರ್ಸಿಗೆ ಪೂರಕವಾದ ಪಠ್ಯವನ್ನೂ ಕಲಿಸಲಾಗುತ್ತದೆ. ಉದಾಹರಣೆಗೆ ವಿಜ್ಞಾನವನ್ನು ಕಲಿಯುವ ವಿದ್ಯಾರ್ಥಿಗಳು ಶಿವರಾಮ ಕಾರಂತರ, ಪೂರ್ಣಚಂದ್ರ ತೇಜಸ್ವಿಯವರ ಬರಹಗಳನ್ನು ಕಲಿಯುತ್ತಾರೆ. ಅದೇ ರೀತಿ ಗೆಲಿಲಿಯೋ, ಸ್ಟೀಫನ್ ಹಾಕಿಂಗ್, ಐನ್‌ಸ್ಟೆನ್, ಜಗದೀಶ್ ಚಂದ್ರ ಬೋಸ್, ಅಬ್ದುಲ್ ಕಲಾಂ ಮುಂತಾದವರ ಜೀವನದ ಸಾಧನೆಗಳನ್ನು, ಮಾದರಿಗಳನ್ನು ಮಾತೃಭಾಷೆಯಲ್ಲಿ ಕಲಿಯುತ್ತಾರೆ. ಹಾಗೆಯೇ ವಾಣಿಜ್ಯದ ವಿದ್ಯಾರ್ಥಿಗಳೂ ಸಹ ಯಶಸ್ವಿ ಸಂವಹನವನ್ನು ನಡೆಸುವುದು ಹೇಗೆ ಎಂಬುದನ್ನು ಕಲಿಯುತ್ತಾರೆ. ಹಾಗೂ ಉತ್ತಮ ಉದ್ಯಮಿ ಆಗುವುದರ ಜತೆಯಲ್ಲಿ ಉತ್ತಮ ಮನುಷ್ಯನಾಗುವುದು ಹೇಗೆ ಎಂಬುದನ್ನೂ ಕಲಿಯುತ್ತಾರೆ.

ಆದ್ದರಿಂದ 4 ವರ್ಷದ ಕೋರ್ಸಿಗೆ ಅನುಗುಣವಾಗಿ ಈಗ 3 ವರ್ಷಕ್ಕೆ ಅಥವಾ  ಆರು ಸೆಮಿಸ್ಟರುಗಳಿಗೆ ಭಾಷಾ ವಿಷಯವನ್ನು ಬೋಧಿಸಲು ಕ್ರಮ ತೆಗೆದುಕೊಳ್ಳಬೇಕು. ಹಾಗೆ ಮಾಡುವುದರಿಂದ ನಮ್ಮ ಮಕ್ಕಳು ಉತ್ತಮ ಪರಂಪರೆಗಳಿಗೆ ವಾರಸುದಾರರಾಗಲು ಸಾಧ್ಯವಾಗುತ್ತದೆ. ಹಾಗೂ ರಾಷ್ಟçಕ್ಕೆ ಬೇಕಾದ ಉತ್ತಮ ಮನುಷ್ಯರು ರೂಪುಗೊಳ್ಳಲು ಸಹಾಯವಾಗುತ್ತದೆ.

ಅದರ ಬದಲಾಗಿ ರಾಷ್ಟ್ರೀಯ ಶಿಕ್ಷಣ ನೀತಿಯ ಹೆಸರಿನಲ್ಲಿ ಕನ್ನಡದ ಕುತ್ತಿಗೆಯನ್ನು ಹಿಸುಕುವ ಕೆಲಸಕ್ಕೆ ಸರ್ಕಾರ ಮುಂದಾಗುವುದಾದರೆ ಅದರ ವಿರುದ್ಧ ತೀವ್ರ ಸ್ವರೂಪದ ಪ್ರತಿಭಟನೆಗಳನ್ನು ನಡೆಸಬೇಕಾಗುತ್ತದೆ. ಈ ನಾಡು ಎಂದಿಗೂ ನಾಡು, ನುಡಿಗೆ ದ್ರೋಹ ಎಸಗಿದವರನ್ನು ಕ್ಷಮಿಸಿಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಸರ್ಕಾರಕ್ಕೆ ಸಿದ್ಧರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಮಕ್ಕಳಿಗೆ ಉದ್ಯೋಗಾಧಾರಿತ ಶಿಕ್ಷಣವನ್ನು ರೂಪಿಸಬೇಕಾಗಿದೆ.  ಹಾಗಾಗಿ ಹೊಸ ಪಠ್ಯಕ್ರಮವನ್ನು ರೂಪಿಸುವಾಗ ಸಂಬಂಧಿಸಿದ ತಜ್ಞರುಗಳ ಕುಳಿತು ಚರ್ಚಿಸಿ ಆರೋಗ್ಯಕರವಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಜೊತೆಗೆ ನಾಡು-ನುಡಿಗಳನ್ನು ಕಟ್ಟಲು ಪೂರಕವಾಗುವ ಪಠ್ಯಗಳನ್ನು ರೂಪಿಸಬೇಕು. ಆರು ಸೆಮಿಸ್ಟರುಗಳಲ್ಲೂ ಕನ್ನಡ ಭಾಷಾ ವಿಷಯವನ್ನು ಎಲ್ಲಾ ಪದವಿ ಮಕ್ಕಳಿಗೂ ಕಡ್ಡಾಯವಾಗಿ ಕಲಿಸಲೇಬೇಕೆಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

Key words: Kannada –language- content – graduate education – limited – one year-former CM- Siddaramaiah

The post ಪದವಿ ಶಿಕ್ಷಣದಲ್ಲಿ ಭಾಷಾ ವಿಷಯ ಒಂದು ವರ್ಷದ ಅವಧಿಗೆ ಮಿತಿಗೊಳಿಸಿರುವುದು ಕನ್ನಡಕ್ಕೆ ಮಾಡಿದ ದ್ರೋಹ- ಸಿದ್ಧರಾಮಯ್ಯ ಕಿಡಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಟಿಪ್ಪು ಸೇರಿ ಹಲವು ವಿಷಯ ಪಠ್ಯದಿಂದ ಕೈಬಿಟ್ಟಿರುವ ನಿರ್ಧಾರದಿಂದ ಹಿಂದೆ ಸರಿಯದಿದ್ರೆ ಉಗ್ರ ಹೋರಾಟ- ಸರ್ಕಾರಕ್ಕೆ ಮೈಸೂರಿನಲ್ಲಿ ಎಚ್ಚರಿಕೆ…
ಮೈಸೂರು,ಜು,31,2020(www.justkannada.in): ಟಿಪ್ಪು ಸಲ್ತಾನ್ ಸೇರಿದಂತೆ ಹಲವು ವಿಷಯವನ್ನು ಪಠ್ಯದಿಂದ ಕೈಬಿಟ್ಟಿರುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಯಿತು.

ನಗರದ ಪುರಭವನದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಇಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿ  ಟಿಪ್ಪು ಸೇರಿ ಹಲವು ವಿಷಯ ಪಠ್ಯದಿಂದ ಕೈಬಿಟ್ಟಿರುವ ನಿರ್ಧಾರದಿಂದ ಹಿಂದೆ ಸರಿಯದಿದ್ರೆ ಉಗ್ರ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರತಿಭಟನಾಕಾರರು,   ಸಂಗೊಳ್ಳಿ ರಾಯಣ್ಣ , ರಾಣಿ ಅಬ್ಬಕ್ಕ , ಟಿಪ್ಪು ಸುಲ್ತಾನ್ , ಏಸುಕ್ರಿಸ್ತ , ಪ್ರವಾದಿ , ಸಂವಿಧಾನ ಮೊದಲಾದ ವಿಷಯಕ್ಕೆ ಸಂಬಂಧಿಸಿದ ಪಠ್ಯವನ್ನು ಪಠ್ಯಕ್ರಮದಿಂದ ಕೈಬಿಟ್ಟಿರುವುದು ದುರ್ದೈವದ ಸಂಗತಿ .

ದೇಶಪ್ರೇಮಿ ಟಿಪ್ಪು ಸುಲ್ತಾನ್ ಕುರಿತು ಇರುವ ಇತಿಹಾಸವನ್ನು ಪಠ್ಯದಿಂದ ತೆಗೆದು ಹಾಕುವ ನಿರ್ಧಾರಕ್ಕೆ ಸರ್ಕಾರ ಹೊರಟಿರುವುದು ಖಂಡನೀಯ . ಸ್ವಾತಂತ್ರ್ಯಕ್ಕಾಗಿ ಟಿಪ್ಪು ಸುಲ್ತಾನ್ ಪಟ್ಟ ಕಷ್ಟದ ಹೋರಾಟವನ್ನು ನಾಶಪಡಿಸುತ್ತಿರುವುದು ದುರ್ದೈವದ ಸಂಗತಿ.

ಸಂಗೊಳ್ಳಿ ರಾಯಣ್ಣ , ರಾಣಿ ಅಬ್ಬಕ್ಕ , ಟಿಪ್ಪು ಸುಲ್ತಾನ್ ಇವರೆಲ್ಲ ದೇಶಭಕ್ತರು . ಅವರಿಗೆ ಗೌರವ ನೀಡುವುದು ಯುವಜನತೆಯ ಕರ್ತವ್ಯ . ಟಿಪ್ಪು ವಿಚಾರ ಮಾತ್ರವಲ್ಲದೆ ಸಂವಿಧಾನ ಜಾತ್ಯಾತೀತತೆ , ಪ್ರಜಾಪ್ರಭುತ್ವ ಮುಂತಾದ ವಿಷಯಗಳನ್ನು ಒಳಗೊಂಡ ಪಠ್ಯವನ್ನು ಕಡಿತ ಮಾಡುತ್ತಿದೆ . ಈ ನಿರ್ಧಾರದಿಂದ ಹಿಂದಕ್ಕೆ ಸರಿಯಬೇಕು , ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

Key words: Tippu history- drop -content –protest- mysore

The post ಟಿಪ್ಪು ಸೇರಿ ಹಲವು ವಿಷಯ ಪಠ್ಯದಿಂದ ಕೈಬಿಟ್ಟಿರುವ ನಿರ್ಧಾರದಿಂದ ಹಿಂದೆ ಸರಿಯದಿದ್ರೆ ಉಗ್ರ ಹೋರಾಟ- ಸರ್ಕಾರಕ್ಕೆ ಮೈಸೂರಿನಲ್ಲಿ ಎಚ್ಚರಿಕೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.