Debt Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ರಾಜ್ಯದಲ್ಲಿ ಹಲವು ಸಿಎಂ ಮಾಡಿದ ಸಾಲಕ್ಕಿಂತ ಸಿದ್ದರಾಮಯ್ಯ ಮಾಡಿದ ಸಾಲವೇ ಹೆಚ್ಚು- ಸಿ.ಟಿ ರವಿ
ದಾವಣಗೆರೆ,ಏಪ್ರಿಲ್,3,2026 (www.justkannada.in) ರಾಜ್ಯದಲ್ಲಿ ಅಡಳಿತ ನಡೆಸಿದ ಇತರೆ ಸಿಎಂಗಳಿಗಿಂತ ಸಿದ್ದರಾಮಯ್ಯ ಸಿಎಂ ಆಗಿ ಮಾಡಿದ ಸಾಲವೇ ಹೆಚ್ಚು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಆರೋಪಿಸಿದರು.

ಇಂದು ಮಾತನಾಡಿದ ಎಂಎಲ್ ಸಿ ಸಿ.ಟಿ ರವಿ, ಕಳೆದ 22 ವರ್ಷ ಆಡಳಿತ ನಡೆಸಿದ ಮುಖ್ಯಮಂತ್ರಿಗಳಿಗಿಂತ 8 ವರ್ಷ ಅಧಿಕಾರ ನಡೆಸಿದ ಸಿದ್ದರಾಮಯ್ಯ ಅವರು ಮಾಡಿದ ಸಾಲವೇ ಹೆಚ್ಚು. ಮುಖ್ಯಮಂತ್ರಿ ಅವಧಿಯಲ್ಲಿ ಅವರು ₹ 4.30 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ರಾಜ್ಯದ ಒಟ್ಟು ಸಾಲ ₹ 8.32 ಲಕ್ಷ ಕೋಟಿ ಇದೆ ಎಂದು ವಾಗ್ದಾಳಿ ನಡೆಸಿದರು.

ಸಚಿವರ ಆಪ್ತ ಬಳಗ ಡ್ರಗ್ಸ್ ದಂಧೆಯಲ್ಲಿ ತೊಡಗಿದೆ.  ಭ್ರಷ್ಟಾಚಾರ ತಾಂಡವಾಡುತ್ತಿದೆ.  ಜಿಲ್ಲಾ ಮಂತ್ರಿ ಸಂಸದರು ಜನ ಸಾಮಾನ್ಯರ ಕೈಗೆ ಸಿಗುತ್ತಿಲ್ಲ. ರಾಜ್ಯದಲ್ಲಿ ನಂದಿನಿ ಹಾಲು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಸಲಾಗಿದೆ. ಇಂಧನದ ಮೇಲೆ ಹೆಚ್ಚು ಸೆಸ್‌ ವಿಧಿಸಿ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆಯಾಗುವಂತೆ ಮಾಡಲಾಗಿದೆ. ರಾಜ್ಯದಲ್ಲಿರುವುದು ಹಗಲು ದರೋಡೆ ಸರ್ಕಾರ’ ಎಂದು ಹರಿಹಾಯ್ದರು.

Key words: Siddaramaiah, debt, MLC, C.T. Ravi

The post ರಾಜ್ಯದಲ್ಲಿ ಹಲವು ಸಿಎಂ ಮಾಡಿದ ಸಾಲಕ್ಕಿಂತ ಸಿದ್ದರಾಮಯ್ಯ ಮಾಡಿದ ಸಾಲವೇ ಹೆಚ್ಚು- ಸಿ.ಟಿ ರವಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೇಂದ್ರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ : ಬಿಜೆಪಿ ಟೀಕೆ ಶೋಭೆ ತರಲ್ಲ- ಸಚಿವ ಪ್ರಿಯಾಂಕ್ ಖರ್ಗೆ
ಬೀದರ್,ಮಾರ್ಚ್,7,2026 (www.justkannada.in):  ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಹೀಗಾಗಿ ಇಷ್ಟೊಂದು ಸಾಲದ ಹೊರೆ ಬಂದಿದೆ. ಟೀಕೆ ಮಾಡುವುದು ಬಿಜೆಪಿಗೆ ಶೋಭೆ ತರಲ್ಲ ಎಂದು  ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಯವರಿಗೆ ದೇಶ ರಾಜ್ಯವನ್ನ ಹೇಗೆ ನಡೆಸಬೇಕೆಂದು ಗೊತ್ತಿಲ್ಲ. ಕೇಂದ್ರ ಸರ್ಕಾರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ ಬಂದಿದೆ.  ಕೇಂದ್ರದಿಂದ ನಮಗೆ 80 ಸಾವಿರ ಕೋಟಿ ನಷ್ಟವಾಗಿದೆ.  ಕೇಂದ್ರ ಸರ್ಕಾರ 200 ಲಕ್ಷ ಕೋಟಿ ರೂ ಸಾಲ ಮಾಡಿದೆ.  ಬಿಜೆಪಿಯವರಿಗೆ ಈ ಪಾಲಿಶ್ ಹೇಳಿಕೆ ಶೋಭೆ ತರಲ್ಲ ಎಂದರು.

ಸಿಎಂ ಸಿದ್ದರಾಮಯ್ಯನವರ ಕೊನೇ ಬಜೆಟ್ ಎಂದು ಹೇಳಿಕೆ ನೀಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ತಿರುಗೇಟು ನೀಡಿದ ಸಚಿವ ಪ್ರಿಯಾಂಕ್ ಖರ್ಗೆ, ಯತ್ನಾಳ್ ಭವಿಷ್ಯ ಪಾಪ ಅವರಿಗೇ ಗೊತ್ತಿಲ್ಲ. ಕೊನೆಯ ಬಜೆಟ್ ಬಗ್ಗೆ ಸಿದ್ದರಾಮಯ್ಯ ಅವರೇ ನಿರ್ಧರಿಸಬೇಕು. ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದರು.

Key words: debt, burden, injustice, Central government, Minister, Priyank Kharge

The post ಕೇಂದ್ರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ : ಬಿಜೆಪಿ ಟೀಕೆ ಶೋಭೆ ತರಲ್ಲ- ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರೈತರಿಗೆ 8362.68 ಕೋಟಿ ರೂ. ಸಾಲ ವಿತರಣೆ: ಸಕಾಲದಲ್ಲಿ ಕೃಷಿ ಸಾಲ ಸಿಗುವುದನ್ನು ಖಾತ್ರಿಪಡಿಸಿ – ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು,ಆಗಸ್ಟ್,28,2025 (www.justkannada.in): ರಾಜ್ಯದಲ್ಲಿ ಪ್ರಸ್ತುತ ಸಾಲಿನಲ್ಲಿ 37 ಲಕ್ಷ ರೈತರಿಗೆ ರೂ.28ಸಾವಿರ ಕೋಟಿ ಸಾಲ ವಿತರಣೆ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8,69,284 ರೈತರಿಗೆ ರೂ.8362.68 ಕೋಟಿ ಸಾಲ ವಿತರಣೆ ಮಾಡಲಾಗಿದೆ. ರೈತರಿಗೆ ಸಕಾಲದಲ್ಲಿ ಕೃಷಿ ಸಾಲವನ್ನು ಸಿಗುವುದನ್ನು ಖಾತ್ರಿಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಬಾರ್ಡ್ ರಿಯಾಯಿತಿ ಬಡ್ಡಿ ದರದ ಸಾಲದ ಮಿತಿಯನ್ನು ಹಿಂದಿನ ಸಾಲಿನಲ್ಲಿದ್ದ ರೂ.5,600 ಕೋಟಿಗಳಿಂದ ರೂ.3,236.11 ಕೋಟಿಗೆ ಅಂದರೆ ಶೇ.42.21ರಷ್ಟು ಕಡಿಮೆ ಮಾಡಿದೆ. ಆದರೂ ಸಾಲ ವಿತರಣೆಯಲ್ಲಿ ಶೇ.96.07 ರಷ್ಟು ಪ್ರಗತಿ ಸಾಧಿಸಲಾಗಿದೆ. 2024-25ನೇ ಸಾಲಿನಲ್ಲಿ 29,75,598 ರೈತರಿಗೆ 25,939.09 ಕೋಟಿ ಕೃಷಿ ಸಾಲ ವಿತರಣೆ ಮಾಡಲಾಗಿದೆ.

ರಾಜ್ಯದಲ್ಲಿ 28516 ಸಹಕಾರ ಸಂಘಗಳು ಲಾಭದಲ್ಲಿದ್ದು, 14,670 ಸಂಘಗಳು ನಷ್ಟದಲ್ಲಿವೆ. ಸಾಲ ವಸೂಲಾತಿ ಸರಿಯಾಗಿ ಆಗದ ಕಾರಣ ಬಹುತೇಕ ಸಂಘಗಳು ನಷ್ಟದಲ್ಲಿದ್ದು, ಅಂತಹ ಸಾಲ ವಸೂಲಾತಿಗೆ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಬೇಕು.  ಇದರಲ್ಲಿ 2200 ಹಾಲು ಉತ್ಪಾದಕ ಸಂಘಗಳು ನಷ್ಟದಲ್ಲಿವೆ. ಹಾಲು ಉತ್ಪಾದಕ ಸಹಕಾರ ಸಂಘಗಳ ವೆಚ್ಚದ ಮೇಲೆ ನಿಗಾ ಇರಿಸಬೇಕು.  ಹಾಲು ಉತ್ಪಾದನೆಯನ್ನು ಹೆಚ್ಚಿಸುವುದು ಸಂಘಗಳ ಕಾರ್ಯದರ್ಶಿಗಳ ಜವಾಬ್ದಾರಿ.  ಹಾಲು ಉತ್ಪಾದಕ ಸಹಕಾರ ಸಂಘಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕು.

ಕನ್ನಡ ಸಾಹಿತ್ಯ ಪರಿಷತ್ ನ ಅವ್ಯವಹಾರಗಳ ಕುರಿತು ಡಿಆರ್ ಸಿಎಸ್ ತನಿಖೆ ನಡೆಸುತ್ತಿದೆ. ತನಿಖೆ ನಡೆಯುತ್ತಿರುವ ಸಂದರ್ಭದಲ್ಲೇ ಕೆಲವು ಸದಸ್ಯರ ಸದಸ್ಯತ್ವವನ್ನು ಪರಿಷತ್ ರದ್ದುಪಡಿಸುತ್ತಿರುವ ಕುರಿತು ದೂರುಗಳು ಬಂದಿದ್ದು, ಈ ಕುರಿತು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.

ಸಹಕಾರ ಸಂಘಗಳ ಹಿರಿಯ ನಿರೀಕ್ಷಕರ 126 ಹುದ್ದೆಗಳು ಹಾಗೂ ಸಹಕಾರ ಸಂಘಗಳ ನಿರೀಕ್ಷಕರ 403 ಹುದ್ದೆಗಳು ಖಾಲಿಯಿವೆ. ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸಿ ಎಂದು ಸೂಚಿಸಿದ ಸಿಎಂ ಸಿದ್ದರಾಮಯ್ಯ, ಸಹಕಾರ ಸಂಘಗಳ ನಿಬಂಧಕರ ಕಚೇರಿಯ ವ್ಯಾಪ್ತಿಯ ಸೇವೆಗಳನ್ನು ಗಣಕೀಕರಿಸುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ರಾಜ್ಯದಲ್ಲಿ 7074 ಗಿರವಿದಾರ ಸಂಸ್ಥೆಗಳು ಹಾಗೂ 1468 ಚೀಟಿ ಸಂಸ್ಥೆಗಳು ಕರ್ನಾಟಕ ಲೇವಾದೇವಿಗಾರರ ಅಧಿನಿಯಮ 1961, ಕರ್ನಾಟಕ ಗಿರವಿದಾರರ ಅಧಿನಿಯಮ 1961 ಮತ್ತು ಚೀಟಿನಿಧಿಗಳ ಅಧಿನಿಯಮ 1982ರಡಿ ನೋಂದಣಿಯಾಗಿವೆ. ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಗಿರವಿದಾರ ಸಂಸ್ಥೆಗಳು ಹಾಗೂ ಚೀಟಿ ಸಂಸ್ಥೆಗಳ ಮೇಲೆ ನಿಗಾ ಇರಿಸಬೇಕು. ರಾಜ್ಯದಲ್ಲಿ ಸಹಕಾರಿ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಸಹಕಾರ ಇಲಾಖೆ ಅಧಿಕಾರಿಗಳು ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಮುಖ್ಯಮಂತ್ರಿ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words: 8362.68 crore,  farmers,  Debt,  Distribution, CM Siddaramaiah

The post ರೈತರಿಗೆ 8362.68 ಕೋಟಿ ರೂ. ಸಾಲ ವಿತರಣೆ: ಸಕಾಲದಲ್ಲಿ ಕೃಷಿ ಸಾಲ ಸಿಗುವುದನ್ನು ಖಾತ್ರಿಪಡಿಸಿ – ಸಿಎಂ ಸಿದ್ದರಾಮಯ್ಯ ಸೂಚನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿಎಂ ಆಗಿ ಸಿದ್ದರಾಮಯ್ಯ 4.91 ಲಕ್ಷ ಕೋಟಿ ರೂ. ಸಾಲ: ಈ ವರ್ಷವೂ ತೆರಿಗೆ ಮಾರಿಹಬ್ಬ ಕಾದಿದೆ- ಆರ್.ಅಶೋಕ್
ಬೆಂಗಳೂರು, ಮಾರ್ಚ್,13,2025 (www.justkannada.in):  ಸಿದ್ದರಾಮಯ್ಯ ಅವರೊಬ್ಬರೇ ಮುಖ್ಯಮಂತ್ರಿಯಾಗಿ 4.91 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ಒಟ್ಟು ಸಾಲದಲ್ಲಿ ಶೇ.63 ರಷ್ಟು ಸಿದ್ದರಾಮಯ್ಯನವರು ಮಾಡಿರುವ ಸಾಲದ ಪಾಲಿದೆ. ಪ್ರತಿ ತಿಂಗಳು ಪರೋಕ್ಷವಾಗಿ ತೆರಿಗೆ ಹೆಚ್ಚಿಸುವ ಪರಿಸ್ಥಿತಿಗೆ ತಂದಿದ್ದಾರೆ. ಈ ವರ್ಷವೂ ತೆರಿಗೆ ಮಾರಿಹಬ್ಬ ಕಾದಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು.

ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಆರ್.ಅಶೋಕ್, ರಾಜ್ಯದಲ್ಲಿ ಸಾಲದ ಕೂಪಕ್ಕೆ ಹೋಗ್ತಾ ಇದ್ದೀವಿ.  ನಾವು ಬಡ್ಡಿ ಕಟ್ಟಲು ಸಾಲ ಮಾಡಬೇಕಾದ ಪರಿಸ್ಥಿತಿ ಬಂದಿದೆ.  2025 ರಲ್ಲೂ ನಾಡಿನ ಜನರಿಗೆ ಕಾದಿದೆ ಮಾರಿಹಬ್ಬ, ಪ್ರತಿ ತಿಂಗಳು ಪರೋಕ್ಷವಾಗಿ ತೆರಿಗೆ ಹೆಚ್ಚಿಸುವ ಪರಿಸ್ಥಿತಿಗೆ ತಂದಿದ್ದಾರೆ ಎಂದು  ಕಿಡಿಕಾರಿದರು.

ರಾಜ್ಯ ಸರ್ಕಾರ ಬಜೆಟ್‌ ನಲ್ಲಿ ಅಭಿವೃದ್ಧಿಯ ಅಂಶಗಳೇ ಇಲ್ಲ ಶಾಸಕರೇ ಅಭಿವೃದ್ಧಿಗೆ ಹಣ ಇಲ್ಲ.  ಆಶಾ ಕಾರ್ಯಕರ್ತರು, ಬಿಸಿಯೂಟ ಮತ್ತು ಅಂಗನವಾಡಿಯ ಸಿಬ್ಬಂದಿಗಳಿಗೆ ಸರಿಯಾಗಿ ಗೌರವ ಧನ ನೀಡುತ್ತಿಲ್ಲ, ಆತಿಥಿ ಉಪನ್ಯಾಸಕರಿಗೆ 6 ತಿಂಗಳಿನಿಂದಲೂ ವೇತನ ಕೊಟ್ಟಿಲ್ಲ. ಚನ್ನಗಿರಿಯ ಶಾಸಕರು ಅಭಿವೃದ್ಧಿಗೆ ಹಣ ಇಲ್ಲ, ವಿಷ ಕುಡಿಯುವ ಪರಿಸ್ಥಿತಿ ಬಂದಿದೆ ಎಂದು ಹೇಳುತ್ತಿದ್ದಾರೆ.  ಈ ಸರ್ಕಾರ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿದೆ ಎಂದು ಆರ್ .ಅಶೋಕ್ ಹರಿಹಾಯ್ದರು.

Key words: Siddaramaiah, CM, debt, Tax, Budget, R. Ashok

The post ಸಿಎಂ ಆಗಿ ಸಿದ್ದರಾಮಯ್ಯ 4.91 ಲಕ್ಷ ಕೋಟಿ ರೂ. ಸಾಲ: ಈ ವರ್ಷವೂ ತೆರಿಗೆ ಮಾರಿಹಬ್ಬ ಕಾದಿದೆ- ಆರ್.ಅಶೋಕ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿದ್ದರಾಮಯ್ಯ ಬಜೆಟ್ ನಲ್ಲೂ ದಾಖಲೆ, ಸಾಲದಲ್ಲೂ ದಾಖಲೆ- ಸಿ.ಟಿ ರವಿ ಟೀಕೆ
ಬೆಂಗಳೂರು,ಮಾರ್ಚ್,7,2025 (www.justkannada.in):  ಸಿಎಂ ಸಿದ್ದರಾಮಯ್ಯ ಇಂದು ಮಂಡಿಸಿದ 2025-26ನೇ ಸಾಲಿನ ಬಜೆಟ್ ಬಗ್ಗೆ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿ.ಟಿ ರವಿ ಟೀಕಿಸಿದ್ದಾರೆ.

ಈ ಕುರಿತು ಮಾತನಾಡಿರುವ ಎಂಎಲ್ ಸಿ ಸಿ.ಟಿ ರವಿ, ಸಿಎಂ ಸಿದ್ದರಾಮಯ್ಯರಿಗೆ ಹೆಚ್ಚು ಬಜೆಟ್ ಮಂಡಿಸಿದ ಖ್ಯಾತಿ ಇದೆ. ಹಾಗೆಯೇ ಹೆಚ್ಚು ಸಾಲ ಮಾಡಿದ ಖ್ಯಾತಿಯೂ ಸಿದ್ದರಾಮಯ್ಯಗೆ ಇದೆ. ಇದು ಮುಸ್ಲೀಮರ ಬಜೆಟ್,  ಸಾಲದ ಬಜೆಟ್,  ಯಾವುದೇ ಹೊಸ ಯೋಜನೆ ಘೋಷಣೆ ಮಾಡಿಲ್ಲ ಎಂದರು.

ಸಿದ್ದರಾಮಯ ಬಜೆಟ್ ನಲ್ಲೂ ದಾಖಲೆ ಸಾಲದಲ್ಲೂ ದಾಖಲೆ ಮಾಡಿದ್ದಾರೆ. ಈ ಹಿಂದಿನ ಬಜೆಟ್ ನಲ್ಲಿ ಘೋಷಿಸಿದ್ದ ಯೋಜನೆಗಳೇ ಇನ್ನು ಅನುಷ್ಟಾನಗೊಂಡಿಲ್ಲ ಎಂದು ಸಿಟಿ ರವಿ ಆರೋಪಿಸಿದರು.

Key words: Siddaramaiah, record, budget, record, debt , CT Ravi

The post ಸಿದ್ದರಾಮಯ್ಯ ಬಜೆಟ್ ನಲ್ಲೂ ದಾಖಲೆ, ಸಾಲದಲ್ಲೂ ದಾಖಲೆ- ಸಿ.ಟಿ ರವಿ ಟೀಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ತಾಯಿ ಮಾಡಿದ ಸಾಲಕ್ಕೆ 14 ವರ್ಷದ ಮಗನ ಮೇಲೆ ಹಲ್ಲೆ.
ಕೊಪ್ಪ,ಳ,ಜನವರಿ,7,2023(www.justkannada.in):  ಪೋಷಕರು ಮಾಡಿದ ಸಾಲಕ್ಕೆ ಮಗನ ಮೇಲೆ ಹಲ್ಲೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ  ಕೆ.ಹೊಸೂರಿನಲ್ಲಿ ಡಿಸೆಂಬರ್ 28 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕನಕರಾಯಪ್ಪ ರಾಜೇಶ್ವರಿ ಸೇರಿ 6 ಜನರು ಹಲ್ಲೆ ನಡೆಸಿದ್ದಾರೆ. 14 ವರ್ಷದ ಬಾಲಕನ ತಾಯಿ ಮಂಜುಳ ಎಂಬುವವರು 40 ಸಾವಿರ ರೂ. ಸಾಲ ಪಡೆದಿದ್ದರು. ಮಂಜುಳ 30 ಸಾವಿರ ರೂ. ವಾಪಸ್ ನೀಡಿದ್ದರು. ಇನ್ನು 10 ಸಾವಿರ ಬಾಕಿ ಇತ್ತು.

ಈ ನಡುವೆ ಅಸಲು ಬಡ್ಡಿ ಸೇರಿ 14 ಸಾವಿರಕ್ಕೆ ಬೇಡಿಕೆ  ಇಟ್ಟಿ ಇದೀಗ ಮಂಜುಳ ಪುತ್ರ 14 ವರ್ಷದ ಬಾಲಕನನ್ನ ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ್ದಾರೆ. ಈ ಕುರಿತು ಕೊಪ್ಪಳ ಎಸ್ ಪಿಗೆ ದೂರು ಸಲ್ಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: 14-year-old son- assaulted – debt –mother-koppal

The post ತಾಯಿ ಮಾಡಿದ ಸಾಲಕ್ಕೆ 14 ವರ್ಷದ ಮಗನ ಮೇಲೆ ಹಲ್ಲೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಾಲಬಾಧೆ ತಾಳಲಾರದೆ ಗುತ್ತಿಗೆದಾರ ಆತ್ಮಹತ್ಯೆಗೆ ಶರಣು.
ತುಮಕೂರು,ಡಿಸೆಂಬರ್,30,2022(www.justkannada.in):  ಸಾಲಬಾಧೆ ತಾಳಲಾರದೆ ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಜಿಲ್ಲೆ ದೇವರಾಯನದುರ್ಗದಲ್ಲಿ  ಈ ಘಟನೆ ನಡೆದಿದೆ. ಗುತ್ತಿಗೆದಾರ ಟಿ.ಎನ್ ಪ್ರಸಾದ್(50) ಆತ್ಮಹತ್ಯೆಗೆ ಶರಣಾದವರು. ಸಾಲ ಬಾಧೆ ತಾಳಲಾರದೇ ಗುತ್ತಿಗೆದಾರ ಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪ್ರವಾಸಿ ಮಂದಿರದಲ್ಲಿ ಫ್ಯಾನ್ ಗೆ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಸ್ಥಳಕ್ಕೆ ಕ್ಯಾತಸಂದ್ರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹ ಮರಣೋತ್ತರ ಪರೀಕ್ಷೆ ವರದಿಯ ಬಳಿಕ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬರಲಿದೆ.

Key words: debt-contractor –committed- suicide-tumkur

The post ಸಾಲಬಾಧೆ ತಾಳಲಾರದೆ ಗುತ್ತಿಗೆದಾರ ಆತ್ಮಹತ್ಯೆಗೆ ಶರಣು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೋದಿ ಸರ್ಕಾರದ ಸುಳ್ಳು ಸಂಭ್ರಮ; ಸಾಲದ ಸುನಾಮಿಯಲ್ಲಿ ದೇಶ ಮತ್ತು ರಾಜ್ಯ –ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆ.
ಬೆಂಗಳೂರು,ಜೂನ್,3,2022(www.justkannada.in): ಅಮೇರಿಕಾದಂತಹ ದೇಶಗಳಿಗೆ ಆರ್ಥಿಕತೆಯನ್ನು ನಿಭಾಯಿಸುವುದು ಹೇಗೆ ಎಂದು ಹೇಳಿಕೊಟ್ಟು ಮಾದರಿಯಾಗಿದ್ದ ಮನಮೋಹನಸಿಂಗ್ ಅವರು ರೂಪಿಸಿ ತಲೆ ಎತ್ತಿ ನಿಲ್ಲವಂತೆ ಮಾಡಿದ್ದ ಭಾರತದ ಆರ್ಥಿಕತೆಯನ್ನು ಪ್ರಧಾನಿ ನರೇಂದ್ರ ಮೋದಿಯವರ ದುರಾಡಳಿತವು ನೆಲ ಕಚ್ಚುವಂತೆ ಮಾಡಿದೆ. ಇದೇ ಅವರ ಎಂಟು ವರ್ಷಗಳ ಸಾಧನೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ.

ಮೋದಿಯವರು ಪ್ರಧಾನಿಯಾಗಿ ಎಂಟು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ ಅವರು, ದೇಶಕ್ಕೆ ಮುಂದೆ ಇನ್ನೂ ಕರಾಳ ದಿನಗಳು ಕಾದಿವೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಅವರು ಪತ್ರಿಕಾ ಹೇಳಿಕೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಈ ರೀತಿ ಟೀಕಿಸಿದ್ದಾರೆ.

ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಆಗಿದ್ದು 8 ವರ್ಷ. ಆದರೆ ದೇಶದ ಅಭಿವೃದ್ಧಿ ಮಾತ್ರ 20 ವರ್ಷ ಹಿಂದಕ್ಕೆ ಕುಸಿದಿದೆ.  ದೇಶ ವಿಶ್ವಗುರುವಾಗುವ ಬದಲು ಪಾತಾಳದತ್ತ ಕುಸಿಯುತ್ತಿದೆ. ಇದನ್ನು ನಾನು ಸೃಷ್ಟಿಸಿಕೊಂಡು ಹೇಳುತ್ತಿಲ್ಲ. ಸರ್ಕಾರದ ದಾಖಲೆಗಳೇ ಹೇಳುತ್ತಿವೆ.  ಮೋದಿ ಸರ್ಕಾರದ 8 ಮಹಾ ಡಿಸಾಸ್ಟರುಗಳನ್ನು ಪಟ್ಟಿ ಮಾಡಿದರೆ; ದೇಶ ಹಿಂದೆಂದೂ ಇಲ್ಲದಷ್ಟು ಸಾಲದ ಸುಳಿಗೆ ಸಿಲುಕಿದೆ. ರೂಪಾಯಿಯ ಬೆಲೆ ಪಾತಾಳಕ್ಕೆ ಕುಸಿಯುತ್ತಿದೆ.  ಬೆಲೆ ಏರಿಕೆಯು ಹಿಂದೆಂದೂ ಇಲ್ಲದ ಮಟ್ಟಕ್ಕೆ ಮುಟ್ಟಿದೆ. ಹಣದುಬ್ಬರ ಕಳೆದ 7 ವರ್ಷಗಳಲ್ಲಿ ತೀವ್ರಗತಿಗೆ ಮುಟ್ಟಿದೆ. ನಿರುದ್ಯೋಗ ತಾರಕಕ್ಕೇರಿದೆ. ರಾಜ್ಯಗಳ ಆರ್ಥಿಕತೆ ಕುಸಿದು ಹೋಗುತ್ತಿದೆ. ಒಕ್ಕೂಟ ವ್ಯವಸ್ಥೆ ಶಿಥಿಲವಾಗುತ್ತಿದೆ. ಇದರ ಜೊತೆಯಲ್ಲಿ ದೇಶದ ಪ್ರಜಾತಾಂತ್ರಿಕೆಯೂ ಭಯಭೀತವಾಗಿದೆ. ಡಿ ಮಾನಿಟೈಸೇಷನ್- ಜಿಎಸ್‍ ಟಿ ವ್ಯವಸ್ಥೆ, ಕೊರೋನ ಸಾಂಕ್ರಾಮಿಕದ ಎಡಬಿಡಂಗಿ ನಿರ್ವಹಣೆಗಳು  ದೇಶದ ಬೆನ್ನುಮೂಳೆಯನ್ನು ಟೊಳ್ಳು ಮಾಡಿವೆ. ದೇಶದ ಜನರು ಕಷ್ಟಪಟ್ಟು ಕಟ್ಟಿದ್ದ ಲಾಭದಾಯಕ ಸಂಸ್ಥೆ/ಕಂಪೆನಿ/ಕಾರ್ಖಾನೆಗಳನ್ನು ಖಾಸಗಿಯವರಿಗೆ ಬಿಡಿಗಾಸಿಗೆ ಮಾರಾಟ ಮಾಡಲಾಗುತ್ತಿದೆ. ರೈತ, ಕಾರ್ಮಿಕ, ಮಹಿಳೆ, ಯುವಜನರ ವಿರೋಧಿಯಾದ ಕಾನೂನುಗಳನ್ನು ಜಾರಿಗೆ ತಂದು ಮೂಲಕ ಜನರನ್ನು ಶತ್ರುಗಳಂತೆ ಭಾವಿಸಿ ದಮನಿಸಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಜನರನ್ನು ಬಡತನದ ದವಡೆಗೆ ತಳ್ಳಲಾಗುತ್ತಿದೆ. ಅಂಬಾನಿ, ಅದಾನಿಗಳಂಥ ಕಾರ್ಪೊರೇಟ್ ಬಂಡವಾಳಿಗರನ್ನು ಕೊಬಿಸ್ಬಿ ಮೆರೆಸಲಾಗುತ್ತಿದೆ.ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಈ ಎಂಟು ವರ್ಷಗಳಲ್ಲಿ ಮಾಡಿದ್ದೇನು ಹಾಗಿದ್ದರೆ? ಎಂದರೆ ತಮ್ಮ ಸ್ನೇಹಿತರಾದ ಬಂಡವಾಳಿಗರ ಸಂಪತ್ತು ಹೆಚ್ಚಿಸುವಂತೆ ನೋಡಿಕೊಂಡಿದ್ದು ಮತ್ತು ಜನರಿಗೆ ಸುಳ್ಳು ಹೇಳುತ್ತಾ ಬಂದಿದ್ದಷ್ಟೆ ಇವರ ಕೆಲಸ. ಕೆಲವು  ಬಿಜೆಪಿ ವಕ್ತಾರ ಮೀಡಿಯಾಗಳು ಆರ್ಥಿಕತೆ ಉತ್ತಮವಾಗಿದೆ ಎಂದು ತುತ್ತೂರಿ ಊದುತ್ತಿವೆ. ಆರ್ಥಿಕತೆಯ ವಾಸ್ತವವನ್ನು ಅರ್ಥ ಮಾಡಿಕೊಂಡರೆ ಮಾತ್ರ ಎದೆ ಒಡೆದು ಹೋದಂತಾಗುತ್ತದೆ.

ಭಾರತದಲ್ಲಿ ಕೆಲವರ ಸಂಪತ್ತು ಮಾತ್ರ ಹೆಚ್ಚುತ್ತಿದೆ. ಜನರ ತಲೆಯ ಮೇಲೆ ಸಾಲದ ಶೂಲವನ್ನು ಏರಿಸಲಾಗಿದೆ. ದೇಶದ ಸಾಲವನ್ನು ಯಾವ ಮಟ್ಟಕ್ಕೆ ಏರಿಸಲಾಗಿದೆಯೆಂದರೆ ಸರ್ಕಾರದ ದಾಖಲೆಗಳ ಪ್ರಕಾರ 2014 ರ ಮಾರ್ಚ್ ವೇಳೆಗೆ ಕೇಂದ್ರ ಸರ್ಕಾರ ಮಾಡಿರುವ ಸಾಲ 53.11 ಲಕ್ಷ ಕೋಟಿ ರೂಗಳಷ್ಟಿತ್ತು. ಇದು ದೇಶವು ಸ್ವಾತಂತ್ರ್ಯ ಗಳಿಸಿಕೊಂಡಾಗಿನಿಂದ ಮಾಡಿದ್ದ ಸಾಲ. ಈ ಸಾಲವು 2019-20 ರ ವೇಳೆಗೆ 106.45 ಲಕ್ಷ ಕೋಟಿಗೆ ಏರಿಕೆಯಾಯಿತು. 2022 ರ ಮಾರ್ಚ್-31 ರ ವೇಳೆಗೆ 139.57 ಲಕ್ಷ ಕೋಟಿಗಳಿಗೆ ತಲುಪಿದೆ. 2023 ರ ಮಾರ್ಚ್ ಅಂತ್ಯದ ವೇಳೆಗೆ 155 ಲಕ್ಷ ಕೋಟಿಗೆ ತಲುಪುವ ನಿರೀಕ್ಷೆಯಿದೆ.

ಇದೇ ಸಂದರ್ಭದಲ್ಲಿ ದೇಶದ ರಾಜ್ಯಗಳ ಸಾಲವೂ ಆತಂಕಕಾರಿಯಾಗುವಂತೆ ಏರಿಕೆಯಾಗಿದೆ. 2013-14 ರಲ್ಲಿ ಎಲ್ಲ ರಾಜ್ಯಗಳ ಒಟ್ಟು ಸಾಲ 22.12 ಲಕ್ಷ ಕೋಟಿಗಳಷ್ಟಿತ್ತು. ಅದು ಇದೇ ಮಾರ್ಚ್ ಅಂತ್ಯಕ್ಕೆ 70 ಲಕ್ಷ ಕೋಟಿಗೆ ಮುಟ್ಟಿದೆ. ಮುಂದಿನ ವರ್ಷದ ಮಾರ್ಚ್ ವೇಳೆಗೆ ಇದು 80 ಲಕ್ಷ ಕೋಟಿಗೆ ತಲುಪುತ್ತಿದೆ. ಇದರಿಂದಾಗಿ ದೇಶದ ಒಟ್ಟಾರೆ ಸಾಲ 235 ಲಕ್ಷ ಕೋಟಿಗಳಾಗಬಹುದು. ಇದು 2014 ರ ಮಾರ್ಚ್ 31 ರಂದು 75.23 ಲಕ್ಷ ಕೋಟಿಗಳಷ್ಟಿತ್ತು. ಇದರಿಂದಾಗಿ ದೇಶದ ಪ್ರತಿ ಪ್ರಜೆಯ ತಲೆಯ ಮೇಲೆ 170290 ರೂಪಾಯಿಗಳಷ್ಟು ಸಾಲ ಹೇರಿದಂತಾಗುತ್ತದೆ.

2014 ರಲ್ಲಿ ದೇಶದ ಜನಸಂಖ್ಯೆ 130 ಕೋಟಿಯಷ್ಟಿತ್ತು. ಆಗ ಪ್ರತಿಯೊಬ್ಬರ ತಲೆಯ ಮೇಲಿದ್ದ ಸಾಲದ ಪ್ರಮಾಣ 57692 ರೂ ಗಳಷ್ಟಿತ್ತು. ಇದು ಮೋದಿಯವರ ಮೊದಲ ಬೃಹತ್ ಸಾಧನೆ. ಜನರ ತಲೆಯ ಮೇಲಿನ ಸಾಲವನ್ನು ಸುಮಾರು 3 ಪಟ್ಟು ಅಥವಾ ಶೇ. 300 ರಷ್ಟು ಹೆಚ್ಚಿಸಿದ್ದು ಮೋದಿಯವರ ಸಾಧನೆ.

ಭಾರತದ ಹೊರಗಿನ ಸಾಲಗಳನ್ನು ಸಹ ತೀರಿಸಿ ಸುಭಿಕ್ಷವಾಗಿದೆ ಎಂದು ಕೆಲವು ಮಾಧ್ಯಮಗಳು ಹೇಳಿದವು. ಬಿಜೆಪಿಯ ಕೆಲವು ಅಂಧ ಹಿಂಬಾಲಕರು ಬಾಯಿಗೆ ಬಂದದ್ದನ್ನು ಹೇಳಿಕೊಂಡು ಓಡಾಡುತ್ತಿದ್ದಾರೆ. ಕೇಂದ್ರ ಸರ್ಕಾರದ ದಾಖಲೆಗಳ ಪ್ರಕಾರ ನೋಡಿದರೂ ಸಹ ದೇಶದ ಬಾಹ್ಯ ಸಾಲ 2013-14 ರಲ್ಲಿ 374483 ಕೋಟಿ ರೂಪಾಯಿಗಳಷ್ಟಿತ್ತು. ಅದು 2022 ರ ಮಾರ್ಚ್ ವೇಳೆಗೆ 657455 ಕೋಟಿಗಳಷ್ಟಾಗಿದೆ. ಇದು ಸರಿ ಸುಮಾರಾಗಿ ದುಪ್ಪಟ್ಟಾಗಿದೆ. ಪರಿಸ್ಥಿತಿ ಹೀಗಿರುವಾಗ ಕೇವಲ ಸುಳ್ಳು ನಿರೂಪಣೆಗಳನ್ನು ಮಾಡಿಕೊಂಡು ಜನರ ಕಣ್ಣಿಗೆ ಮಂಕು ಬೂದಿ ಎರಚುವುದನ್ನು ಬಿಟ್ಟು ಬೇರೇನೂ ನಡೆಯುತ್ತಿಲ್ಲ.

ಸಾಲ ಎಷ್ಟಿರಬೇಕು ನಿಯಂತ್ರಣ ಮಾಡುವುದಕ್ಕಾಗಿಯೆ  ಸರ್ಕಾರಗಳು ನಿಯಮಗಳನ್ನು ಮಾಡಿಕೊಂಡಿವೆ. ಅದರಲ್ಲಿ ಮುಖ್ಯವಾಗಿ ರಾಜ್ಯಗಳ ಸಾಲ ಅವುಗಳ ಒಟ್ಟು ಆಂತರಿಕ ಉತ್ಪನ್ನ[ ಜಿಎಸ್‍ಡಿಪಿ] ದ ಶೇ.25 ನ್ನು ಮೀರಬಾರದು. ಆದರೆ ಮಾರ್ಚ್ 31-2022ಕ್ಕೆ ರಾಜ್ಯಗಳ ಸಾಲದ ಪ್ರಮಾಣ ಶೇ. 31.2 ಕ್ಕೆ ಏರಿಕೆಯಾಗಿದೆ.  ಹಾಗೆಯೇ ದೇಶದ ಒಟ್ಟಾರೆ ಸಾಲ ಜಿಡಿಪಿಯ ಶೇ.60 ನ್ನು ಯಾವ ಕಾರಣಕ್ಕೂ ಮೀರಬಾರದು. ಆದರೆ 23 ರ ಮಾರ್ಚ್ ಅಂತ್ಯದ ವೇಳೆಗೆ ಈ ಪ್ರಮಾಣವು ಶೇ.89.6 ರಷ್ಟಕ್ಕೆ ಏರಿಕೆಯಾಗುತ್ತಿದೆ.

ಉದಾಹರಣೆಗೆ ದೇಶದ  ಒಟ್ಟಾರೆ ದುಡಿಮೆಯಲ್ಲಿ 100 ರೂಪಾಯಿಗೆ 90 ರೂಪಾಯಿಯಷ್ಟು ಸಾಲವಿದೆ ಎಂದು ಅರ್ಥ. ಕಳೆದ ವರ್ಷದ ಲೆಕ್ಕ ನೋಡಿದರೆ ದೇಶವು ದುಡಿದ 100 ರೂಪಾಯಿಯಲ್ಲಿ 44 ರೂಪಾಯಿ ಕೇವಲ ಬಡ್ಡಿ ಮುಂತಾದವಕ್ಕೆ ಖರ್ಚಾಗುತ್ತಿತ್ತು.

ಮೋದಿಯವರ ಸರ್ಕಾರ ಜಿಡಿಪಿಯ ಗಾತ್ರದ ಲೆಕ್ಕವನ್ನೂ ಸಹ ಸರಿಯಾಗಿ ಹೇಳುತ್ತಿಲ್ಲ. ಅದು 230 ರಿಂದ 270 ಲಕ್ಷ ಕೋಟಿಯವರೆಗೂ ಇರಬಹುದೆಂದು ಅಂದಾಜು ಮಾಡಲಾಗುತ್ತಿದೆ. ಈ ಲೆಕ್ಕದಲ್ಲಿ ನೋಡಿದರೂ ದೇಶದ ಒಟ್ಟು ದುಡಿಮೆಯನ್ನು ಮೀರಿ ಸಾಲ ಬೆಳೆದಿದೆ ಎಂದು ಅಂದಾಜಿಸಲಾಗಿದೆ. ಶ್ರೀಲಂಕಾ ದಿವಾಳಿ ಎದ್ದಿದ್ದು ಕೂಡ ಹೀಗೆಯೆ. ಯಾವುದೇ ದೇಶದಲ್ಲಾಗಬಹುದು ಅಥವಾ ಮನೆಯಲ್ಲಾಗಬಹುದು ದುಡಿಮೆಗಿಂತ ಸಾಲವೆ ಹೆಚ್ಚಾದರೆ  ಅದನ್ನು ಎಂದಾದರೂ ಒಳ್ಳೆಯ ಆರ್ಥಿಕತೆಯ ನಿರ್ವಹಣೆ ಎನ್ನಲು ಸಾಧ್ಯವೆ? ಅಥವಾ ದಿವಾಳಿ ಆರ್ಥಿಕತೆ ಎನ್ನಬೇಕೆ? ಎಂಬುದು ಸಾಮಾನ್ಯ ಜ್ಞಾನ ಇರುವವರಿಗೆಲ್ಲ ಅರ್ಥವಾಗುತ್ತದೆ.

ರಾಜ್ಯದ ಸಾಲ ಕೂಡ ಅಪಾಯಕಾರಿಯಾದ ಹಂತಕ್ಕೆ ಮುಟ್ಟಿದೆ. ಸರ್ಕಾರದ ದಾಖಲೆಗಳ ಪ್ರಕಾರ  2025-26 ರ ವೇಳೆಗೆ ಎಲ್ಲವೂ ನಿಯಂತ್ರಣದಲ್ಲಿದ್ದರೆ ರಾಜ್ಯದ ಸಾಲದ ಪ್ರಮಾಣ 7.38 ಕೋಟಿಗಳಷ್ಟಾಗಲಿದೆ.  ಸರ್ಕಾರದ ಈ ಅಂದಾಜು 2022-23 ರಲ್ಲೆ ಭಂಗವಾಗುತ್ತಿದೆ. ಮುಖ್ಯಮಂತ್ರಿ ಬೊಮ್ಮಾಯಿಯವರು ಮಾಧ್ಯಮಗಳ ಮುಂದೆ, ಸದನದಲ್ಲಿ ಹತ್ತಾರು ಬಾರಿ ‘ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ 67 ಸಾವಿರ ಕೋಟಿ ಸಾಲ ಮಾಡುತ್ತೇವೆ ಎಂದಿದ್ದರು, ಆದರೆ ಹಣಕಾಸು ಪರಿಸ್ಥಿತಿ  ಸುಧಾರಿಸಿದ ಕಾರಣ ನಾವು ಸಾಲದ ಪ್ರಮಾಣವನ್ನು 63 ಸಾವಿರ ಕೋಟಿಗೆ ಇಳಿಸುತ್ತೇವೆ ಎಂದಿದ್ದರು. ಆದರೆ ರಾಜ್ಯದ ಆರ್ಥಿಕ ಇಲಾಖೆಯು ನೀಡಿರುವ ದಾಖಲೆ ನೋಡಿದರೆ, ಸರ್ಕಾರವು ಈ ವರ್ಷ ಸಾಲದ ಪ್ರಮಾಣವನ್ನು ಇಳಿಸುವುದಿರಲಿ, ಯಡಿಯೂರಪ್ಪನವರು ಬಜೆಟ್ ನಲ್ಲಿ ಘೋಷಿಸಿದ್ದಕ್ಕಿಂತ 13000 ಕೊಟಿಗಳಷ್ಟು ಹೆಚ್ಚು ಅಂದರೆ 80.4 ಸಾವಿರ ಕೋಟಿಗಳಷ್ಟು ಸಾಲ ಮಾಡಿದ್ದಾರೆ. ಹಾಗಾಗಿ ಈ ವರ್ಷದ ಕಡೆಯ ಹೊತ್ತಿಗೆ  ರಾಜ್ಯದ ಸಾಲದ ಪ್ರಮಾಣ 5 ಲಕ್ಷದ 40 ಸಾವಿರ ಕೋಟಿಗಳಿಗೆ ಏರಿಕೆಯಾಗುತ್ತಿದೆ. 2018 ರ ಮಾರ್ಚ್‍ನಲ್ಲಿ ರಾಜ್ಯದ ಸಾಲದ ಪ್ರಮಾಣ 2.42 ಲಕ್ಷ ಕೋಟಿಗಳಷ್ಟಿತ್ತು. ಅಲ್ಲಿಂದ ಈಚೆಗೆ 3 ಲಕ್ಷ ಕೋಟಿಗೂ ಹೆಚ್ಚು ಸಾಲ ಮಾಡಲಾಗಿದೆ. ರಾಜ್ಯದ ಜನರ ತಲೆಯ ಮೇಲೆ ಸಾಲದ ಶೂಲ ಇರಿಯುತ್ತಿದೆ. ಇದು ಸರ್ಕಾರ ಮಾಡಿರುವ ಸಾಲ.

ರಾಜ್ಯದ ಜನರು ಎಂಥ ಬಿಕ್ಕಟ್ಟಿನಲ್ಲಿದ್ದಾರೆಂದರೆ, ತಮ್ಮ ಮನೆಗಳಲ್ಲಿದ್ದ ಚಿನ್ನವನ್ನು ಒತ್ತೆ ಇಟ್ಟು ಸುಮಾರು 4.5 ಲಕ್ಷ ಕೋಟಿ ಸಾಲವನ್ನು ಮುತ್ತುಟ್, ಮಣಪ್ಪುರಂ ಮುಂತಾದ 4 ಕಂಪೆನಿಗಳಿಂದಲೆ ಪಡೆದಿದ್ದಾರೆ. ನಮ್ಮ ರಾಜ್ಯದ ರೈತರು ಕೃಷಿಗಾಗಿ ಮಾಡಿರುವ ಸಾಲದ ಪ್ರಮಾಣ 2022 ರ ಜನವರಿ ವೇಳೆಗೆ 1.60 ಲಕ್ಷ ಕೋಟಿಗೆ ಏರಿಕೆಯಾಗಿದೆ.

ಕೇಂದ್ರ ಸರ್ಕಾರ ಕಾರ್ಪೊರೇಟ್ ಕಂಪೆನಿಗಳ ಪರವಾದ ನಿಲುವು ತಾಳಿರುವುದರಿಂದ, ಜನಪರ ಆರ್ಥಿಕ ನೀತಿ ಇಲ್ಲದಿರುವುದರಿಂದ ದೇಶವನ್ನು ಸಾಲದ ಸುನಾಮಿಗೆ ಸಿಲುಕಿಸಿದ್ದಾರೆ. ರಾಜ್ಯಕ್ಕೆ ನ್ಯಾಯಯುತವಾಗಿ ಕೊಡಬೇಕಾದಷ್ಟು ಅನುದಾನಗಳನ್ನು, ತೆರಿಗೆ ಹಂಚಿಕೆಯನ್ನು ಮಾಡದಿರುವುದರಿಂದ ನಮ್ಮ ರಾಜ್ಯವು ಸಾಲದ ಸುಳಿಗೆ ಸಿಲುಕಿಕೊಂಡಿದೆ. 15 ನೇ ಹಣಕಾಸು ಆಯೋಗವು ನಮ್ಮ ರಾಜ್ಯಕ್ಕೆ ಹೆಚ್ಚುವರಿಯಾಗಿ 5495 ಕೋಟಿ ರೂ ಗಳನ್ನು ಶಿಫಾರಸ್ಸು ಮಾಡಿದ್ದರೂ ಅದನ್ನು ಕೊಡುವುದಿಲ್ಲವೆಂದು ಹೇಳಿ ರಾಜ್ಯದ ಜನರ ಬೆನ್ನಿಗೆ ಇರಿದ ನಿರ್ಮಲಾ ಸೀತಾರಾಮನ್ ಅವರನ್ನು ಮತ್ತೆ ರಾಜ್ಯದಿಂದ ರಾಜ್ಯಸಭೆಗೆ ಆರಿಸಲು ಬಿಜೆಪಿ ಟಿಕೆಟ್ ನೀಡಿ ನಮ್ಮ ಜನರಿಗೆ ಅವಮಾನ ಮಾಡಿದೆ.

ಕೇಂದ್ರ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯು ಜನಪರವಾದ ನೀತಿ ಹೊಂದಿಲ್ಲದ ಕಾರಣ ರಾಜ್ಯದ ಜನರು ಸಾಲದ ಸಂಕೋಲೆಗೆ ಸಿಲುಕುತ್ತಿದ್ದಾರೆ. 3-4 ವರ್ಷಗಳ ಹಿಂದೆ ದೇಶದಲ್ಲಿ ಆರ್ಥಿಕ ಶಿಸ್ತಿಗೆ ಹೆಸರಾಗಿದ್ದ ನಮ್ಮ ರಾಜ್ಯ ಇಂದು ದಿವಾಳಿಯಂಚಿಗೆ ಬಂದು ನಿಂತಿದೆ ಎಂದು ಸಿದ್ಧರಾಮಯ್ಯ  ಹರಿಹಾಯ್ದಿದ್ದಾರೆ.

Key words: Modi government-false excitemen- debt – former CM-Siddaramaiah

ENGLISH SUMMARY….

False celebration of Modi govt.; Country and State is in loan Tsunami: Former CM Siddaramaiah

Bengaluru, June 3, 2022 (www.justkannada.in): “Former Prime Minister and Economist Manmohan Singh had taught the entire world how to build and manage the economy of a country. But the present Prime Minister Narendra Modi through his misgovernance has destroyed our economy. It is the only achievement in the last eight years,” alleged leader of the opposition Siddaramaiah.

Siddaramaiah released a press statement on the occasion of the completion of eight years of Modi’s governance and mentioned that country will face more difficult days in the future.

The Modi government has completed eight years. But the development of the country has reverted to 20 years. Instead of becoming ‘a Vishwaguru’, our country is reaching the lowest level. I am not saying this, government documents itself is saying it. If we make a list of mega-disasters that have occurred during the 8 years of Modi’s government we can see that our country has been entangled in a deep swirl of loans. The value of the rupee has reached its lowest, inflation has reached an all-time high. The unemployment and political scenario of the states has reached their lowest level. The federal system is destroyed and the democracy is under threat. Modi’s decisions like demonetization, GST, mismanagement of corona have broken the country’s spine,” he mentioned.

Keywords: Leader of the Opposition/ Siddaramaiah/ BJP government/ PM Modi/ 8 years

The post ಮೋದಿ ಸರ್ಕಾರದ ಸುಳ್ಳು ಸಂಭ್ರಮ; ಸಾಲದ ಸುನಾಮಿಯಲ್ಲಿ ದೇಶ ಮತ್ತು ರಾಜ್ಯ –ಮಾಜಿ ಸಿಎಂ  ಸಿದ್ದರಾಮಯ್ಯ ಟೀಕೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಾಲ ಬಾಧೆ ತಾಳಲಾರದೆ ರೈತ ಮಹಿಳೆ ಆತ್ಮಹತ್ಯೆಗೆ ಶರಣು.
ಮೈಸೂರು,ಡಿಸೆಂಬರ್,27,2021(www.justkannada.in): ಸಾಲ ಬಾಧೆ ತಾಳಲಾರದೆ ರೈತ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಕೆ.ಆರ್.ನಗರ ತಾಲೂಕಿನ ಸಾಲೇಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ಎಸ್.ಆರ್.ಸುಕನ್ಯ (55) ಆತ್ಮಹತ್ಯೆಗೆ ಶರಣಾದ ರೈತ ಮಹಿಳೆ.  ಸುಕನ್ಯ ಹೊಸೂರು ಸಹಕಾರ ಸಂಘದಲ್ಲಿ 60 ಸಾವಿರ ಕೈ ಸಾಲವಾಗಿ 5 ಲಕ್ಷದಷ್ಟು ಸಾಲ ಮಾಡಿಕೊಂಡಿದ್ದರು.

ಒಂದು ಎಕರೆ 39 ಗುಂಟೆ ಜಮೀನು ಹೊಂದಿದ್ಧ ರೈತ ಮಹಿಳೆ ಸುಕನ್ಯ ತರಕಾರಿ,ಶುಂಠಿ, ಭತ್ತದ ಬೆಳೆಗಳನ್ನ ಬೆಳೆದಿದ್ದರು. ಆದರೆ ಬೆಳೆಗಳು ಕೈ ಕೊಟ್ಟ ಪರಿಣಾಮವಾಗಿ  ಸುಕನ್ಯ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: farmer –woman-commits –suicide- after – debt.

The post ಸಾಲ ಬಾಧೆ ತಾಳಲಾರದೆ ರೈತ ಮಹಿಳೆ ಆತ್ಮಹತ್ಯೆಗೆ ಶರಣು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಶಾಸಕ ಜಿಟಿ ದೇವೇಗೌಡರ ಪುತ್ರ ಹರೀಶ್ ಗೌಡಗೆ ಖಡಕ್ ವಾರ್ನಿಂಗ್ ಕೊಟ್ಟ ಸಚಿವ ಎಸ್.ಟಿ ಸೋಮಶೇಖರ್.
ಮೈಸೂರು,ನವೆಂಬರ್,20,2021(www.justkannada.in): ಎಂಡಿಸಿಸಿ ಬ್ಯಾಂಕ್ ಸಾಲ ಹಂಚಿಕೆಯಲ್ಲಿ ತಾರತಮ್ಯ ಮಾಡಬಾರದು. ಒಂದು ವೇಳೆ ಮಾಡಿದ್ರೆ ಅಧ್ಯಕ್ಷರನ್ನು ಬಲಿ ಹಾಕಬೇಕಾಗುತ್ತೆ ಎಂದು ಶಾಸಕ ಜಿಟಿ ದೇವೇಗೌಡರ ಪುತ್ರ ಹರೀಶ್ ಗೌಡಗೆ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಖಡಕ್ ವಾರ್ನಿಂಗ್ ನೀಡಿದರು.

ಜನಸ್ವರಾಜ್ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಎಸ್ ಟಿ ಸೋಮಶೇಖರ್, ಎಂಡಿಸಿಸಿ ಬ್ಯಾಂಕ್ ವ್ಯಾಪ್ತಿಗೆ ಮೈಸೂರು ಚಾಮರಾಜನಗರ ನಗರದ 15 ವಿಧಾನಸಭಾ ಕ್ಷೇತ್ರಗಳು ಬರುತ್ತವೆ. ಕೇವಲ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಮಾತ್ರ ಸಾಲ ಕೊಡೋದಲ್ಲ. ಎಲ್ಲಾ ಕ್ಷೇತ್ರಗಳಿಗೂ ಸಮಾನವಾಗಿ ಸಾಲ ಹಂಚಿಕೆ ಮಾಡಬೇಕು. 602 ಕೋಟಿ ಬೆಳೆ ಸಾಲ ಹಂಚಿಕೆ ಆಗಬೇಕಿದೆ. ಇನ್ನೂ 58 % ಸಾಲದ ಗುರಿ ಇದೆ.

ಡಿಸಿಸಿ ಬ್ಯಾಂಕ್ ಗಳಲ್ಲಿ ಅಧ್ಯಕ್ಷರು ತಮ್ಮ ಹಿಂಬಾಲಕರು, ಬೇಕಾದವರಿಗೆ ಮಾತ್ರ ಸಾಲ ಕೊಡುತ್ತಿದ್ದಾರೆ ಎನ್ನುವ ದೂರುಗಳು ಕೇಳಿಬಂದಿವೆ. ಈ ಸಂಬಂಧ ಈಗಾಗಲೇ ಕೋಲಾರ ಡಿಸಿಸಿ ಬ್ಯಾಂಕ್ ಅಧ್ಯಕ್ಷರಿಗೆ ನೋಟೀಸ್ ಕೊಟ್ಟಿದ್ದೇನೆ ಎಂದು ಎಸ್ ಟಿ ಸೋಮಶೇಖರ್ ತಿಳಿಸಿದರು.

Key words: President – MDCC bank  – debt-mysore-Minister- ST Somashekhar.

The post ಶಾಸಕ ಜಿಟಿ ದೇವೇಗೌಡರ ಪುತ್ರ ಹರೀಶ್ ಗೌಡಗೆ ಖಡಕ್ ವಾರ್ನಿಂಗ್ ಕೊಟ್ಟ ಸಚಿವ ಎಸ್.ಟಿ ಸೋಮಶೇಖರ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.