declare Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಸೆ.13 ರಂದು ಮಹಿಳಾ ನೌಕರರ ದಿನಾಚರಣೆ ಘೋಷಣೆ- ಸಿಎಂ ಸಿದ್ದರಾಮಯ್ಯ ಭರವಸೆ
ಬೆಂಗಳೂರು, ಡಿಸೆಂಬರ್, 4,2025 (www.justkannada.in): ಸರ್ಕಾರದ ಆಡಳಿತ ಯಂತ್ರದಲ್ಲಿ ಗಣನೀಯ ಕೊಡುಗೆ ನೀಡುತ್ತಿರುವ ಮಹಿಳಾ ನೌಕರರನ್ನು ಅಭಿನಂದಿಸಿ, ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆಯಾಗಿ ಘೋಷಣೆ ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದರು.

ಇಂದು  ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಬೆಂಗಳೂರು, ವತಿಯಿಂದ ಆಯೋಜಿಸಿದ್ದ ಮಹಿಳಾ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಮಹಿಳಾ  ನೌಕರರಿಗೆ ಋತುಚಕ್ರ ರಜೆಯನ್ನು ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆಯನ್ನು ಮಂಜೂರು ಮಾಡಲು ಸರ್ಕಾರ ನಿರ್ಧರಿಸಿದೆ. ಸಂಘದ ಕಚೇರಿಯ ಕಾರ್ಯಚಟುವಟಿಕೆಗಳಿಗೆ ಬಾಲಭವನದಲ್ಲಿ ಸ್ಥಳಾವಕಾಶ ನೀಡಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರೊಂದಿಗೆ ಚರ್ಚಿಸಲಾಗಿದೆ.  ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆಯಾಗಿ ಘೋಷಣೆ ಮಾಡಲಾಗುವುದು ಎಂದರು.

ಲಿಂಗತಾರತಮ್ಯ ಹೋಗಲಾಡಿಸಲು ಸರ್ಕಾರ ಬದ್ಧ

ಸರ್ಕಾರದ ಆಡಳಿತ ಯಂತ್ರದಲ್ಲಿ ಗಣನೀಯ ಕೊಡುಗೆ ನೀಡುತ್ತಿರುವ ಮಹಿಳಾ ನೌಕರರು ಪುರುಷರಿಗೆ ಸರಿಸಮನಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜ್ಯದಲ್ಲಿ ಲಿಂಗತಾರತಮ್ಯ ಹೋಗಲಾಡಿಸಲು ಸರ್ಕಾರ ಬದ್ಧವಾಗಿದೆ. ಎಲ್ಲರನ್ನೂ ಸಮಾನವಾಗಿ ಕಾಣುವ ಬದ್ಧತೆ ನಮ್ಮ ಸರ್ಕಾರದ್ದಾಗಿದೆ ಎಂದರು.

ಮೂಢನಂಬಿಕೆ ಹಾಗೂ ಅಂಧ ಶ್ರದ್ಧೆಗಳ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಿ

ಹಿಂದಿನ ಕಾಲದಲ್ಲಿ ಮಹಿಳೆಯರು ಅಕ್ಷರ ಸಂಸ್ಕೃತಿಯನ್ನು ವಂಚಿತರಾಗಿದ್ದರು. ಸಂವಿಧಾನ ಜಾರಿಯ ನಂತರ  ಎಲ್ಲರಿಗೂ ಶಿಕ್ಷಣ ಸೇರಿದಂತೆ ಸಮಾನ ಹಕ್ಕುಗಳನ್ನು ನೀಡಲಾಯಿತು. ಸ್ವಾತಂತ್ರ್ಯ ಬಂದಾಗ ದೇಶದಲ್ಲಿ ಸಾಕ್ಷರತೆಯ ಪ್ರಮಾಣ 10 ರಿಂದ ಶೇ.12 ರಷ್ಟಿತ್ತು. ಇಂದು ಈ ಪ್ರತಿಶತ ಸುಮಾರು 78 ಕ್ಕೆ ಏರಿದೆ. ಮಹಿಳೆಯರು ತಮ್ಮ ಮಕ್ಕಳ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಅವರಲ್ಲಿ ವೈಚಾರಿಕತೆ ಹಾಗೂ ವೈಜ್ಞಾನಿಕತೆಯನ್ನು ಬೆಳೆಸಬೇಕು. ಸಮಾಜದಲ್ಲಿ ಮೂಢನಂಬಿಕೆ ಹಾಗೂ ಅಂಧಶ್ರದ್ಧೆಗಳ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಮಹಿಳೆಯರು ವೈಚಾರಿಕತೆ ಮತ್ತು ವೈಜ್ಞಾನಿಕತೆಯನ್ನು ಬೆಳೆಸಿಕೊಳ್ಳಬೇಕು

ಮಹಿಳೆಯರು ವೈಚಾರಿಕತೆ ಮತ್ತು ವೈಜ್ಞಾನಿಕತೆಯನ್ನು ಬೆಳೆಸಿಕೊಳ್ಳಬೇಕೆಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು. ಸಾಧ್ಯವಾದ ಮಟ್ಟಿಗೆ ಮೂಢ ನಂಬಿಕೆಗಳು ಮತ್ತು ಅಂಧ ಶ್ರದ್ಧೆಗಳನ್ನ  ದೂರ ಮಾಡುವಂಥ ಕೆಲಸ ಮಾಡಬೇಕು. ಮಕ್ಕಳಿಗೂ ಇದನ್ನು ಹೇಳಿಕೊಡಿ. ಆಗ ಮಾತ್ರ ಆರೋಗ್ಯಕರ, ಸಮಾನತೆಯ ಸಮಾಜ ನಿರ್ಮಾಣ ಸಾಧ್ಯ. ಸಂವಿಧಾನವೂ ಇದನ್ನೇ ಹೇಳುತ್ತದೆ. ಈ ಬಾರಿ ನಾನು ಮುಖ್ಯಮಂತ್ರಿಯಾದ ಬಳಿಕ  ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆಯನ್ನು ಓದಿಸಲಾಗುತ್ತಿದೆ. ನಮ್ಮ ಸಮಾಜದಲ್ಲಿ ಅನೇಕ ಜಾತಿ, ಧರ್ಮಗಳಿವೆ. ಯಾವುದೇ ಕಾರಣಕ್ಕೂ ಮಕ್ಕಳಿಗೆ ಜಾತಿಯನ್ನು ಮುಂದಿಟ್ಟುಕೊಂಡು ಜಾತೀಯತೆಯನ್ನು ತುಂಬುವ ಕೆಲಸ ಮಾಡಬಾರದು. ಶಿಕ್ಷಣ ನೀಡುವುದು ಜಾತಿ ವ್ಯವಸ್ಥೆ ಹೋಗಬೇಕೆನ್ನುವ ಕಾರಣಕ್ಕೆ. ಅದರ ಉದ್ದೇಶ ಸಫಲವಾಗಬೇಕು ಎಂದರು. ವೈದ್ಯರು, ವಿಜ್ಞಾನಿಗಳೂ ಸೇರಿದಂತೆ ವಿದ್ಯಾವಂತರು ಕೂಡ ಮೂಢನಂಬಿಕೆಗಳನ್ನು ಉಳ್ಳವರಾಗಿದ್ದಾರೆ. ಮಕ್ಕಳನ್ನು ಮೂಢನಂಬಿಕೆಗಳಿಂದ ದೂರ ಇಡಬೇಕು ಹಾಗೂ ಮಹಿಳೆಯರು ಹಾಗೂ ಮಕ್ಕಳು ಜಾತ್ಯತೀತವಾಗಿರಬೇಕು ಎಂದರು.

ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಸಬಲರಾಗಬೇಕು

ಮಹಿಳೆಯರ ಸಬಲೀಕರಣವಾಗಬೇಕು ಎಂಬ ಉದ್ದೇಶದಿಂದ 3.5 ಕೋಟಿ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತವಾಗಿ ಓಡಾಡುತ್ತಿದ್ದಾರೆ. ಇದನ್ನು ಸಾಮಾಜಿಕ ಬಂಡವಾಳ ಎಂದು ಕರೆಯುತ್ತೇವೆ. ಉಳಿತಾಯವಾಗುವ ಹಣವನ್ನು ಮಕ್ಕಳ ಶಿಕ್ಷಣ ಮುಂತಾದವುಕ್ಕೆ ಬಳಸಿಕೊಳ್ಳಲಾಗುತ್ತದೆ. ಆರನೇ ಮತ್ತು ಏಳನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಿದ್ದು ನಮ್ಮ ಸರ್ಕಾರವೇ ಎಂದ ಸಿಎಂ ಸಿದ್ದರಾಮಯ್ಯ, ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಸಬಲರಾಗಬೇಕು. ಸ್ವಾತಂತ್ರ್ಯ ದೊರಕಿದ್ದು ಯಶಸ್ವಿಯಾಗಲು ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕು ಎಂದು ಡಾ: ಬಿ.ಆರ್.ಅಂಬೇಡ್ಕರ್ ಹೇಳಿದ್ದರು. ಸರ್ಕಾರದ ಕೆಲಸಗಳಲ್ಲಿ ದಕ್ಷತೆ ಹೆಚ್ಚಾಗಲಿ ಎಂದರು.

Key words: September 13, Women Workers’ Day, declare, CM, Siddaramaiah

The post ಸೆ.13 ರಂದು ಮಹಿಳಾ ನೌಕರರ ದಿನಾಚರಣೆ ಘೋಷಣೆ- ಸಿಎಂ ಸಿದ್ದರಾಮಯ್ಯ ಭರವಸೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿದ್ಧರಾಮಯ್ಯ ಅವರನ್ನೇ ಐದು ವರ್ಷದ ಅವಧಿಗೂ ಸಿಎಂ ಎಂದು ಘೋಷಿಸಿ: ಪತ್ರ ಚಳುವಳಿ
ಮೈಸೂರು,ಅಕ್ಟೋಬರ್,29,2025 (www.justkannada.in): ಸಿದ್ಧರಾಮಯ್ಯ ಅವರನ್ನೇ ಐದು ವರ್ಷದ ಅವಧಿಗೂ ಮುಖ್ಯಮಂತ್ರಿ ಎಂದು ಘೋಷಿಸಿ ಎಂದು ಒತ್ತಾಯಿಸಿ ಕಾಂಗ್ರೆಸ್ ನಾಯಕ ರಾಹುಲ್‍ ಗಾಂಧಿಗೆ ಪತ್ರ ಚಳುವಳಿಯ ಮೂಲಕ  ಅಹಿಂದ ಸಂಘಟನೆಗಳು ಮನವಿ ಮಾಡಿದವು.

ಮೈಸೂರಿನಲ್ಲಿ ಅಹಿಂದ ಮುಖಂಡರು ಹಾಗೂ ಕರ್ನಾಟಕರಾಜ್ಯ ಹಿಂದುಳಿದವರ್ಗಗಳಜಾಗೃತ ವೇದಿಕೆ (ರಿ) ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು ನೇತೃತ್ವದಲ್ಲಿ ಪತ್ರ ಚಳುವಳಿ ನಡೆಯಿತು.

ಈ ವೇಳೆ ಮಾತನಾಡಿದ ಕೆ.ಎಸ್.ಶಿವರಾಮು,  ಈ ನಾಡು ಕಂಡಂತಹ ಅಪ್ರತಿಮ ನಾಯಕ ಶೋಷಿತ ಸಮುದಾಯಗಳ ಗಟ್ಟಿಧ್ವನಿ ಅಹಿಂದ ಸಮುದಾಯಗಳ ಸಿದ್ದರಾಮಯ್ಯ ರವರ ನಾಯಕತ್ವದಲ್ಲಿ 2023ರ ವಿಧಾನಸ ಭಾಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 135 ಸ್ಥಾನವನ್ನಗೆಲ್ಲುವುದರ ಮೂಲಕ ಕರ್ನಾಟಕರಾಜ್ಯದಲ್ಲಿ ಮತ್ತೆಕಾಂಗ್ರೆಸ್ ಪಕ್ಷದ ಸರ್ಕಾರ ಅಸ್ತಿತ್ವಕ್ಕೆ ಬರಲು ಕಾರಣವಾಯಿತು. ಈ ದೊಡ್ಡ  ಮಟ್ಟದ  ಗೆಲುವಿಗೆ ಸಿದ್ದರಾಮಯ್ಯನವರ ನಾಯಕತ್ವ ಹಾಗೂ ಅಹಿಂದ ಸಮುದಾಯಗಳು ಸಿದ್ದರಾಮಯ್ಯರ ನಾಯಕತ್ವದಲ್ಲಿಒಗ್ಗಟ್ಟಿನಿಂದ ಕಾಂಗ್ರೆಸ್ ಪಕ್ಷಕ್ಕೆ ಮತ ಚಲಾಯಿಸುವುದರ ಮೂಲಕ ಕಾಂಗ್ರೆಸ್ ಪಕ್ಷದ ಸರ್ಕಾರ ಕರ್ನಾಟಕದಲ್ಲಿ ಆಳ್ವಿಕೆ ನಡೆಸಲು ಕಾರಣಿಭೂತರು ಸಿದ್ದರಾಮಯ್ಯ ಅವರು ನಾಯಕತ್ವದಲ್ಲಿ ನಂಬಿಕೆ ಇಟ್ಟು ಇಡಿ ಶೋಷಿತ ಸಮುದಾಯಗಳು ಅಂದಿನಿಂದ ಇಂದಿನವರೆಗೂ ಕಾಂಗ್ರೆಸ್ ಪಕ್ಷದ ಜೊತೆಗೆ ಗಟ್ಟಿಯಾಗಿ ನಿಂತಿವೆ, ಮುಂದೆ ಕೂಡ ರಾಜ್ಯದಲ್ಲಿ ಮತ್ತು ದೇಶದಲ್ಲಿ ಶೋಷಿತ ಸಮುದಾಯಗಳು ನಿಮ್ಮನ್ನು ಈ ದೇಶದ  ಪ್ರಧಾನಮಂತ್ರಿಯಾಗಿ ನೋಡಬೇಕೆಂದು ಬಯಸುತ್ತೇವೆ ಮತ್ತು ಬೆಂಬಲಿಸುತ್ತೆವೆ.

ರಾಹುಲ್‍ ಗಾಂಧಿ ಅವರೇ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ನೆಲೆ ತುಂಬಾ ಭದ್ರವಾಗಿದೆ ಅದಕ್ಕೆ ಮೂಲ ಕಾರಣ ಸಿದ್ದರಾಮಯ್ಯ ರವರ ಆಡಳಿತ ಜನಪರ ಗ್ಯಾರಂಟಿ ಯೋಜನೆ ನಿರ್ವಹಣೆ ಅಹಿಂದ ಸಮುದಾಯಗಳ ಮೇಲೆ ಅವರು ಇಟ್ಟಿರುವ ಪ್ರೀತಿ ಕಾಳಜಿ ಸಾಮಾಜಿಕ ನ್ಯಾಯ ಪರ ಸಿದ್ಧಾಂತ ಶೋಷಿತ ಸಮುದಾಯಗಳಿಗೆ ನೀಡುತ್ತಿರುವ ಕೊಡುಗೆಗಳು ಸಮುದಾಯಗಳಿಗೆ ಗಟ್ಟಿಧ್ವನಿ ಯಾಗಿ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಸಿದ್ಧಾಂತದಲ್ಲಿ ನಂಬಿಕೆ ಇಟ್ಟು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಆಡಳಿತ ನಡೆಸುತ್ತಿದ್ದಾರೆ. ನಿಮ್ಮನ್ನು ಭೇಟಿ ಮಾಡಲು ಕರ್ನಾಟಕದ ಅಹಿಂದ ನಾಯಕರುಗಳು ನಿಯೋಗ ಆಗಮಿಸುತ್ತಿದ್ದು ಸಮಯವನ್ನು ನಿಗದಿ ಮಾಡಿಕೊಳ್ಳಲು ಮನವಿ ಮಾಡುತ್ತೇವೆ ಎಂದು ತಿಳಿಸಿದರು.

ಪತ್ರ ಚಳುವಳಿಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ರಾಜ್ಯಾಧ್ಯಕ್ಷರು ಅಹಿಂದ ಮುಖಂಡ ಕೆ.ಎಸ್.ಶಿವರಾಮು ಜಿಲ್ಲಾ ಕುಂಬಾರರ ಸಂಘದ ಅಧ್ಯಕ್ಷರಾದ ಎಚ್‍ಎಸ್ ಪ್ರಕಾಶ್‍ಜಿ ಲ್ಲಾ ಮಡಿವಾಳರ ಸಂಘದ ಅಧ್ಯಕ್ಷರಾದ ರವೀನಂದನ್‍ ಜಿಲ್ಲಾಉಪ್ಪಾರರ ಸಂಘದ ಅಧ್ಯಕ್ಷರಾದ ಯೋಗೇಶ್‍ಉಪ್ಪಾರ್‍ದಲಿತ ಮಹಾಸಭದ ಅಧ್ಯಕ್ಷರಾದ ರಾಜೇಶ್‍ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ದೇವಗಲ್ಲಿ ಸೋಮಶೇಖರ್‍ ದಲಿತ ಮುಖಂಡರಾದ ರಾಜಶೇಖರ್‍ಎಫ್ ಎಂ ಕಲೀಮ್, ರಹೀಮ್‍ ಖಾನ್ ಮಹಮದ್ ಆಲಿ ಲೋಕೇಶ್‍ಕುಮಾರ್ ಹರೀಶ್ ಮೊಗಣ್ಣ  ಮಂಜುಳಾ ಮಂಜುನಾಥ್  ಛಾಯಾ ಅನಿಲ್ ನಿಂಗರಾಜು ಸುನಿಲ್  ನಾರಾಯಣ್‍ರವಿ ನಜರ್ಬಾದ್ ದಿನೇಶ್ ಶಿಂಶ ಮಹೇಶ್ ಸಂತೋಷ್ ಕಿರಾಳ್ ಕಾಳೇಗೌಡ ಅಪ್ಪುಗೌಡ ಕುರುಬರಹಳ್ಳಿ ಪ್ರಕಾಶ್ ಉಪಸ್ಥಿತರಿದ್ದರು.

Key words: Declare, Siddaramaiah, CM, five-year, term, Letter movement

The post ಸಿದ್ಧರಾಮಯ್ಯ ಅವರನ್ನೇ ಐದು ವರ್ಷದ ಅವಧಿಗೂ ಸಿಎಂ ಎಂದು ಘೋಷಿಸಿ: ಪತ್ರ ಚಳುವಳಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

POK ವಾಪಸ್ ಪಡೆಯಲು ಒಳ್ಳೆಯ ಸಮಯವಿತ್ತು: ಆದ್ರೆ ಕದನ ವಿರಾಮ ಘೋಷಿಸಿದ್ದು ಯಾಕೆ? ವಿ.ಎಸ್ ಉಗ್ರಪ್ಪ
ಬಳ್ಳಾರಿ,ಮೇ,15,2025 (www.justkannada.in):  ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪಿಒಕೆ ವಾಪಸ್ ಪಡೆಯಲು ಒಳ್ಳೆಯ ಸಮಯವಿತ್ತು. ಆದರೆ ಈ ವೇಳೆ ಕದನ ವಿರಾಮ ಘೋಷಿಸಿದ್ದು ಯಾಕೆ?  ಎಂದು ಕೇಂದ್ರ ಸರ್ಕಾರದ ವಿರುದ್ದ ಮಾಜಿ ಸಂಸದ ವಿಎಸ್ ಉಗ್ರಪ್ಪ ಕಿಡಿಕಾರಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ವಿಎಸ್ ಉಗ್ರಪ್ಪ,  ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲಿನ ಉಗ್ರರ ದಾಳಿಯಲ್ಲಿ 28 ಜನರು ಸಾವನ್ನಪ್ಪಿದರು. ಈ ಹಿನ್ನೆಲೆಯಲ್ಲಿ ಉಗ್ರರ ಮೇಲೆ ಭಾರತೀಯ ಸೇನೆ ನಡೆಸಿದ್ದ ಅಪರೇಷನ್ ಸಿಂಧೂರ ದಾಳಿಯಿಂದ ಪಾಕ್ ಆಕ್ರಮಿತ ಪಿಓಕೆ ವಾಪಸ್ ಪಡೆಯಲು ಮತ್ತು ಉಗ್ರರ ನೆಲೆಗಳೊಂದಿಗೆ ಅವರ ಬಳಿಯಿರುವ ಶಸ್ತ್ರಾಸ್ತ್ರಗಳನ್ನು ನಾಶ ಪಡಿಸಲು ಒಳ್ಳೆಯ ಅವಕಾಶ ಇತ್ತು. ಆದರೆ, ಪ್ರಧಾನಿ ಮೋದಿಯವರು ಏಕೆ ಕದನ ವಿರಾಮ ಘೋಷಿಸಿದರೋ ಗೊತ್ತಿಲ್ಲ. ಕದನ ವಿರಾಮ ಘೋಷಣೆ ಮಾಡಿದ್ದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್. ಇದಕ್ಕೆ ಅಮೆರಿಕ ಮಧ್ಯಸ್ಥಿಕೆ ವಹಿಸಿದ್ದು ಯಾಕೆ..? ಎಂದು ಪ್ರಶ್ನಿಸಿದರು.

ಕದನ ವಿರಾಮ ಘೋಷಿಸಲು ಯಾರೊಂದಿಗೆ ಚರ್ಚಿಸಿದ್ದರು. ಸೇನಾ ಮುಖ್ಯಸ್ಥರೊಂದಿಗೆ ಚರ್ಚಿಸಿದ್ಧಾರಾ? ಸರ್ವಪಕ್ಷಗಳ ಸಭೆ ಕರೆದಾಗ ಪ್ರಧಾನಿ ನರೇಂದ್ರ ಮೋದಿಯವರೇ ಗೈರು ಹಾಜರಾಗುತ್ತಾರೆ. ಯಾರೊಂದಿಗೆ ಚರ್ಚಿಸಿ ನಿರ್ಣಯ ಕೈಗೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರೀಯ ನಾಯಕತ್ವವನ್ನು ಪ್ರದರ್ಶಿಸಬೇಕು ಎಂದು ವಿ.ಎಸ್ ಉಗ್ರಪ್ಪ ಕುಟುಕಿದರು.

Key words: POK,  declare, ceasefire,  VS Ugrappa

The post POK ವಾಪಸ್ ಪಡೆಯಲು ಒಳ್ಳೆಯ ಸಮಯವಿತ್ತು: ಆದ್ರೆ ಕದನ ವಿರಾಮ ಘೋಷಿಸಿದ್ದು ಯಾಕೆ? ವಿ.ಎಸ್ ಉಗ್ರಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಿಸಲು ಸಮ್ಮತಿಸಿವೆ- ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ನವದೆಹಲಿ,ಮೇ,10,2025 (www.justkannada.in):  ಭಾರತ-ಪಾಕಿಸ್ತಾನ ಎರಡು ದೇಶಗಳು ಈ ಕ್ಷಣದಿಂದಲೇ ಕದನ ವಿರಾಮ ಘೋಷಿಸಲು ಸಮ್ಮತಿಸಿವೆ ಎಂದು ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಟ್ವಿಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಬಗ್ಗೆ ವರದಿಯಾಗಿದೆ.  ಭಾರತ -ಪಾಕ್ ಕದಮ ವಿರಾಮ ಘೋಷಿಸಲು  ಒಪ್ಪಿಗೆ ನೀಡಿವೆ. ರಾತ್ರಿಯಿಡಿ ಮಾತುಕತೆಯಿಂದ ಅಮೆರಿಕಾ ಮಧ್ಯಸ್ಥಿಕೆಯಿಂದಲೇ ಕದನ ವಿರಾಮ ಘೋಷಣೆಗೆ ಒಪ್ಪಿಗೆ  ನೀಡಿವೆ ಎಂದು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

ಹಾಗೆಯೇ ತಟಸ್ಥ ಸ್ಥಳದಲ್ಲಿ ಎರಡು ದೇಶಗಳ ನಡುವೆ ಮಾತುಕತೆ ಎಂದ ಟ್ರಂಪ್  ತಿಳಿಸಿದ್ದಾರೆ.

Key words: India, Pakistan, declare, ceasefire, US President, Donald Trump

The post ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಿಸಲು ಸಮ್ಮತಿಸಿವೆ- ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟ
ಬೆಂಗಳೂರು, ಮೇ,1,2025 (www.justkannada.in): ನಾಳೆ ರಾಜ್ಯ ಎಸ್ ಎಸ್ ಎಲ್ ಸಿ ಪರೀಕ್ಷೆ  ಫಲಿತಾಂಶ ಪ್ರಕಟವಾಗಲಿದೆ.

ನಾಳೆ ಬೆಳಗ್ಗೆ 12.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಘೋಷಣೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ  ಹೆಚ್.ಬಸವರಾಜೇಂದ್ರ ಅವರು, 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ: 21-03-2025 ರಿಂದ 04-04-2025ರವರೆವಿಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ.

ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ  ಪ್ರಕಟಿಸುವ ಸಂಬಂಧ ದಿನಾಂಕ 02-05-2025 ರಂದು ಬೆಳಿಗ್ಗೆ 11.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ  ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ತಿಳಿಸಿದ್ದಾರೆ.

ಮಧ್ಯಾಹ್ನ 12.30ರ ಬಳಿಕ ಫಲಿತಾಂಶ ಪ್ರಕಟವಾಗಲಿದ್ದು,  ವಿದ್ಯಾರ್ಥಿಗಳು ತಮ್ಮ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣಕ್ಕೆ ಭೇಟಿ ನೀಡಿ, ತಮ್ಮ ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿಯನ್ನು ನಮೂದಿಸಿ ಪಡೆಯಬಹುದಾಗಿದೆ.

Key words: SSLC exam, result, declare, tomorrow

The post ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನನಗಾಗಲಿ ಸಿದ್ಧರಾಮಯ್ಯರಿಗಾಗಲಿ ಅಭ್ಯರ್ಥಿ ಘೋಷಿಸುವ ಅಧಿಕಾರ ಇಲ್ಲ- ಡಿ.ಕೆ ಶಿವಕುಮಾರ್.
ಬೆಂಗಳೂರು,ನವೆಂಬರ್,21,2022(www.justkannada.in):  ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನ ಘೋಷಿಸುವ ಅಧಿಕಾರ ನನಗಾಗಲಿ, ಸಿದ್ಧರಾಮಯ್ಯರಿಗಾಗಲಿ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು.

ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ನಿನ್ನೆ ಅಭ್ಯರ್ಥಿಯನ್ನ ಸಿದ‍್ಧರಾಮಯ್ಯ ಘೋಷಿಸಿದ್ಧ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಡಿ.ಕೆ ಶಿವಕುಮಾರ್, ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನ ಘೋಷಿಸುವ ಅಧಿಕಾರ ನನಗಾಗಲಿ ಸಿದ‍್ಧರಾಮಯ್ಯರಿಗಾಗಲಿ ಇಲ್ಲ. ಎಐಸಿಸಿಗೆ ಮಾತ್ರ ಅಭ್ಯರ್ಥಿಗಳನ್ನ ಘೋಷಿಸುವ ಅಧಿಕಾರವಿದೆ. ಮಲ್ಲಿಕಾರ್ಜುನ ಖರ್ಗೆಯೇ ನಮ್ಮ ಹೈಕಮಾಂಡ್ ಎಂದರು.

ಸಿದ್ದರಾಮಯ್ಯ ಅವರು ಗಂಗಾವತಿಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಬಗ್ಗೆ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಕೆಲ ಸಂದರ್ಭಗಳಲ್ಲಿ ಕಳೆದ ಬಾರಿ ಸೋಲು ಕಂಡವರಿಗೆ ಉತ್ತೇಜನ ನೀಡುವ ಉದ್ದೇಶದಿಂದಲೂ ಹೇಳಿರಬಹುದು  ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.

Key words:  declare -candidate –AICC- decision-DK Shivakumar

The post ನನಗಾಗಲಿ ಸಿದ್ಧರಾಮಯ್ಯರಿಗಾಗಲಿ ಅಭ್ಯರ್ಥಿ ಘೋಷಿಸುವ ಅಧಿಕಾರ ಇಲ್ಲ- ಡಿ.ಕೆ ಶಿವಕುಮಾರ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೂಡಲೇ ಕಪ್ಪು ಶಿಲೀಂಧ್ರ ಸೋಂಕನ್ನು ‘ಸಾಂಕ್ರಾಮಿಕ ರೋಗ’ ಎಂದು ಘೋಷಿಸಿ- ರಾಜ್ಯ ಸರ್ಕಾರಕ್ಕೆ ಹೆಚ್.ಡಿ ಕುಮಾರಸ್ವಾಮಿ ಆಗ್ರಹ…
ಬೆಂಗಳೂರು,ಮೇ,21,2021(www.justkannada.in): ಕೂಡಲೇ ಕಪ್ಪು ಶಿಲೀಂಧ್ರ ಸೋಂಕನ್ನು ‘ಸಾಂಕ್ರಾಮಿಕ ರೋಗ’ ಎಂದು ಘೋಷಿಸುವಂತೆ ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕಪ್ಪು ಶಿಲೀಂಧ್ರ ಸೋಂಕನ್ನು (ಮ್ಯೂಕರ್‌ ಮೈಕೊಸಿಸ್‌) ತೆಲಂಗಾಣ, ತಮಿಳುನಾಡು, ರಾಜಸ್ಥಾನ, ಒಡಿಶಾ, ಗುಜರಾತ್‌, ಚಂಡೀಗಢದಲ್ಲಿ ಸಾಂಕ್ರಾಮಿಕ ರೋಗ ಎಂದು ಘೋಷಿಸಲಾಗಿದೆ. ಕೇಂದ್ರ ಸರ್ಕಾರವೂ ಇದನ್ನು ಸಾಂಕ್ರಾಮಿಕ ಎಂದು ಘೋಷಿಸುವಂತೆ ರಾಜ್ಯಗಳಿಗೆ ಸದ್ಯ ಹೇಳಿದೆ. ರಾಜ್ಯವೂ ಈ ಮಾರಕ ಕಾಯಿಲೆಯನ್ನು ಈ ಕೂಡಲೇ ‘ಸಾಂಕ್ರಾಮಿಕ’ ಎಂದು  ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

ರೋಗದ ತಡೆಗಾಗಿ ತ್ವರಿತ, ಅಗತ್ಯ ಕ್ರಮ ಕೈಗೊಳ್ಳಲು, ಮುಂಚೂಣಿಯಲ್ಲಿ ಹೋರಾಡುವವರನ್ನು ರಕ್ಷಿಸಲು ‘1897ರ ಸಾಂಕ್ರಾಮಿಕ ರೋಗ ತಡೆ ಕಾಯಿದೆ’ಯನ್ನು ಕಪ್ಪು ಶಿಲೀಂಧ್ರ ರೋಗದ ವಿಚಾರದಲ್ಲಿ ಜಾರಿ ಮಾಡಲೇಬೇಕಾಗಿದೆ. ಕಪ್ಪು ಶಿಲೀಂಧ್ರ ರೋಗದಲ್ಲಿ ಸಾವಿನ ಸಾಧ್ಯತೆಗಳು ಹೆಚ್ಚಿವೆ. ಮಾರಕ, ಭಯಾನಕವೂ ಆಗಿರುವ ಈ ಕಾಯಿಲೆಯನ್ನು ಹಿಮ್ಮೆಟ್ಟಿಸಲೇಬೇಕಿದೆ.

ಸಾಂಕ್ರಾಮಿಕ ರೋಗಗಳ ನಿರ್ವಹಣೆ ವಿಚಾರದಲ್ಲಿ ರಾಜ್ಯ ಸರ್ಕಾರ ತೋರುತ್ತಿರುವ ಆಲಸ್ಯ ಸರಿಯಲ್ಲ. ಕಪ್ಪು ಶಿಲೀಂಧ್ರ ರೋಗದ ನಿರ್ವಹಣೆಯಲ್ಲಿ ಸರ್ಕಾರ ಪದೇ ಪದೆ ಎಡವುತ್ತಿರುವುದು ಕಾಣಿಸುತ್ತಿದೆ. ರೋಗದ ಚಿಕಿತ್ಸೆಗೆ ಅಗತ್ಯವಿರುವ ಔಷಧಗಳ ದಾಸ್ತಾನು ಹೊಂದದೇ ಇರುವುದು, ಅಗತ್ಯ ಪ್ರಮಾಣದ ಔಷಧವನ್ನು ಕೇಳಿ ಪಡೆದುಕೊಳ್ಳದೇ ಇರುವುದು ಇದಕ್ಕೆ ಸಾಕ್ಷಿ ಎಂದು ಹೆಚ್.ಡಿ ಕುಮಾರಸ್ವಾಮಿ ಸರ್ಕಾರವನ್ನ ಕುಟುಕಿದ್ದಾರೆ.

ಕೋವಿಡ್‌ನಿಂದ ಗುಣವಾದವರೇ ಹೆಚ್ಚಾಗಿ ಕಪ್ಪು ಶಿಲೀಂಧ್ರ ಕಾಯಿಲೆ ತುತ್ತಾಗುತ್ತಾರೆ ಎಂದು ತಜ್ಞರು ಹೇಳಿದ್ದಾರೆ. ಹಾಗಾದರೆ, ಕಪ್ಪು ಶಿಲೀಂಧ್ರದ ಸಂಭಾವ್ಯ ಅಪಾಯ ಕರ್ನಾಟಕಕ್ಕೆ ಹೆಚ್ಚು. ಕೋವಿಡ್‌ ಪ್ರಕರಣಗಳು ಕರ್ನಾಟಕದಲ್ಲಿ ಅತ್ಯಧಿಕ ಪ್ರಮಾಣದಲ್ಲಿವೆ. ಅಂದರೆ, ಕಪ್ಪು ಶಿಲೀಂಧ್ರ ರೋಗವೂ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳುವ ಅಪಾಯವಿದೆ.

ಕಪ್ಪು ಶಿಲೀಂಧ್ರ ರೋಗವನ್ನು ಸರ್ಕಾರ ಕೂಡಲೇ ಸಾಂಕ್ರಾಮಿಕ ರೋಗ ಎಂದು ಘೋಷಿಸಬೇಕು. ಈ ಕಾಯಿಲೆಯ ಚಿಕಿತ್ಸೆಗೆ ಬೇಕಿರುವ ಔಷಧಗಳನ್ನು ಸಮರ್ಪಕವಾಗಿ ಸಂಗ್ರಹಿಸಬೇಕು. ಇದರ ವಿರುದ್ಧ ಹೋರಾಡಲು ಅಗತ್ಯವಿರುವ ನೇತ್ರ ತಜ್ಞರು, ಇಎನ್‌ಟಿ ಪರಿಣತರು, ಜನರಲ್ ಸರ್ಜನ್‌ಗಳು, ನರರೋಗ ತಜ್ಞರು, ದಂತವೈದ್ಯರನ್ನು ಸರ್ಕಾರ ಸನ್ನದ್ಧ ಸ್ಥಿತಿಯಲ್ಲಿ ಇಡಬೇಕು ಎಂದು ಹೆಚ್.ಡಿಕೆ ಸಲಹೆ ನೀಡಿದ್ದಾರೆ.

Key words: Immediately -declare – black fungus- infection – epidemic-former CM-HD Kumaraswamy

The post ಕೂಡಲೇ ಕಪ್ಪು ಶಿಲೀಂಧ್ರ ಸೋಂಕನ್ನು ‘ಸಾಂಕ್ರಾಮಿಕ ರೋಗ’ ಎಂದು ಘೋಷಿಸಿ- ರಾಜ್ಯ ಸರ್ಕಾರಕ್ಕೆ ಹೆಚ್.ಡಿ ಕುಮಾರಸ್ವಾಮಿ ಆಗ್ರಹ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಇಂದು ಸಂಜೆ ವಿಜಯನಗರ ವೈಭವ ಸಾರುವ ”ಹಂಪಿ ಉತ್ಸವ”
ಬಳ್ಳಾರಿ,ನವೆಂಬರ್,13,2020(www.justkannada.in) ; ಹೊಸಪೇಟೆ ತಾಲೂಕಿನಲ್ಲಿ ವಿಜಯನಗರ ವೈಭವ ಸಾರುವ ಹಂಪಿ ಉತ್ಸವ ಇಂದು ಸಂಜೆ4ಕ್ಕೆ ನಡೆಯಲಿದೆ.ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್‌ ಹಂಪಿಯ ಉದ್ಧಾನ ವೀರಭದ್ರೇಶ್ವರ ದೇವಸ್ಥಾನದ ಬಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಹಂಪಿಯ ಉದ್ಧಾನ ವೀರಭದ್ರೇಶ್ವರ ದೇವಸ್ಥಾನದಿಂದ ವಿರೂಪಾಕ್ಷೇಶ್ವರ ದೇವಸ್ಥಾನದವರೆಗೆ ವಿವಿಧ ಜಾನಪದ ಕಲಾ ತಂಡಗಳಿಂದ ಶೋಭಾಯಾತ್ರೆ ನಡೆಯಲಿದೆ. ವಿವಿಧ ತಾಲೂಕುಗಳಿಂದ ವಿವಿಧ ಪ್ರಕಾರದ ಜಾನಪದ ಕಲಾ ತಂಡಗಳ ಪ್ರದರ್ಶನ ಶೋಭಾಯಾತ್ರೆಗೆ ಮೆರುಗು ನೀಡಲಿದೆ. ಇದಾದ ನಂತರ ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಲಿದೆ.

ಸಂಜೆ 7ಕ್ಕೆ ತುಂಗಾ ಆರತಿ ಕಾರ್ಯಕ್ರಮ

ಹಂಪಿಯ ತುಂಗಭದ್ರಾ ದಡದ ವೇದಿಕೆ ಬಳಿ ಸಂಜೆ 7ಕ್ಕೆ ತುಂಗಾ ಆರತಿ ಕಾರ್ಯಕ್ರಮ ನಡೆಯಲಿದೆ. ಪ್ರತಿ ಹಂಪಿ ಉತ್ಸವದಲ್ಲಿ ನಡೆದಂತೆ ಈ ಹಂಪಿ ಉತ್ಸವದಲ್ಲಿಯೂ ತುಂಗಾ ಆರತಿ ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್‌. ಆನಂದಸಿಂಗ್‌ ಹಾಗೂ ಮುಖ್ಯ ಅತಿಥಿಗಳು, ಅತಿಥಿಗಳು ಮತ್ತು ವಿಶೇಷ

ಆಹ್ವಾನಿತರು ಉಪಸ್ಥಿತರಿರಲಿದ್ದಾರೆ.

key words : Declare-glory-Vijayanagar-this-evening-Hampi Festival

The post ಇಂದು ಸಂಜೆ ವಿಜಯನಗರ ವೈಭವ ಸಾರುವ ”ಹಂಪಿ ಉತ್ಸವ” appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯದಲ್ಲಿ ಕೇಂದ್ರ ಸರಕಾರ ರಾಷ್ಟ್ರೀಯ ವಿಪತ್ತು ಘೋಷಿಸಲಿ : ರೈತ ಮುಖಂಡ ಕುರುಬೂರು ಶಾಂತಕುಮಾರ್
ಮೈಸೂರು,ಅಕ್ಟೋಬರ್,18,2020(www.justkannada.in) :  ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ ಅತಿವೃಷ್ಟಿ ನದಿ ಪ್ರವಾಹ ಬೆಳೆನಷ್ಟ ಹಳ್ಳಿಗಳ ಮುಳುಗಡೆ ಬಗ್ಗೆ ಕೇಂದ್ರ ಸರಕಾರ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲಿ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘ, ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.ಕಳೆದ ವರ್ಷ ಅತಿವೃಷ್ಟಿ ಹಾನಿಯಿಂದ 35 ಸಾವಿರ ಕೋಟಿ ರೂ. ಉತ್ತರ ಕರ್ನಾಟಕ ಭಾಗದಲ್ಲಿ ನಷ್ಟ ಅನುಭವಿಸಿದ್ದಾರೆ. ಕಳೆದ 2-3 ತಿಂಗಳಿಂದ ಸುರಿಯುತ್ತಿರುವ ಭೀಕರ ಮಳೆ ಪ್ರವಾಹ ದಿಂದ, ಭೀಮಾ ನದಿ, ಕೃಷ್ಣಾ ನದಿ ನೀರಿನ ಪ್ರವಾಹದಿಂದ 10 ಲಕ್ಷ ಹೆಕ್ಟರ್ ಕೃಷಿ ಭೂಮಿಯಲ್ಲಿ ಬೆಳೆದಿದ್ದ ಕಬ್ಬು, ಹತ್ತಿ, ಮೆಕ್ಕೆಜೋಳ, ಬಾಳೆ ಮತ್ತಿತರ ಬೆಳೆಗಳು ಸಾವಿರಾರು ಗ್ರಾಮಗಳು ನೀರಿನಲ್ಲಿ ಮುಳುಗಿದೆ ಎಂದು ಬೇಸರವ್ಯಕ್ತಪಡಿಸಿದ್ದಾರೆ.

ರಾಜ್ಯದ 25ಸಂಸದರು ನಿದ್ರಿಸುತ್ತಿದ್ದಾರೆ

ಈ ಗ್ರಾಮಗಳ ಜನರನ್ನು ಒಂದು ವಾರವಾದರೂ ಭೇಟಿ ಮಾಡುವ ಸೌಜನ್ಯವನ್ನು ಸರ್ಕಾರದ ಯಾವುದೇ ಅಧಿಕಾರಿಗಳು ಮಾಡಿಲ್ಲ. ಜನಪ್ರತಿನಿಧಿಗಳು ದಿಕ್ಕೆಟ್ಟಿದ್ದಾರೆ, ರೈತರ ಬಾಳು ನರಕವಾಗಿದೆ, ರಾಜ್ಯದ 25ಸಂಸದರು ನಿದ್ರಿಸುತ್ತಿದು, ಕೇಂದ್ರವನ್ನು ಎಚ್ಚರಿಸುವ ಯಾವುದೇ ಕಾರ್ಯ ನಡೆಸುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಕೇಂದ್ರ ಸಚಿವರ ತಂಡ ಪ್ರವಾಹ ಪೀಡಿತ ಸ್ಥಳಕ್ಕೆ ಭೇಟಿ ನೀಡಿ ವಾಸ್ತವ ಸಂಗತಿ ಅರಿಯಲಿ

ಕೇಂದ್ರ ಸರ್ಕಾರ ಪದೇಪದೇ ರಾಜ್ಯದ ಬಗ್ಗೆ ನಿರ್ಲಕ್ಷ ಧೋರಣೆ ತಾಳುತಿದೆ. ಕಳೆದ ವರ್ಷ 35 ಸಾವಿರ ಕೋಟಿ ನಷ್ಟಕ್ಕೆ ಕೇವಲ ಮೂರು ಸಾವಿರ ಕೋಟಿ ನೀಡಿ ತೇಪೆ ಹಾಕಿದ್ದಾರೆ. ಈಗಲಾದರೂ ಕೇಂದ್ರ ಸಚಿವರ ತಂಡ ಪ್ರವಾಹ ಪೀಡಿತ ಸ್ಥಳಕ್ಕೆ ಭೇಟಿ ನೀಡಿ ವಾಸ್ತವ ಸಂಗತಿಯನ್ನು ಅರಿತು ಇದು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿಲಿ ಎಂದು ಒತ್ತಾಯಿಸಿದ್ದಾರೆ.

ದಸರಾ, ಅಬ್ಬರದ ಚುನಾವಣೆಯಲ್ಲಿ ನೊಂದ ಜನರ ಗೋಳು ಕೇಳುವವರಾರು

ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ದಸರಾ ಆಚರಣೆ, ಅಬ್ಬರದ ಚುನಾವಣೆ ಬಗ್ಗೆ ಕಾಳಜಿವಹಿಸುವ ಬದಲು ನೊಂದ ಜನರ ರಕ್ಷಣೆಗೆ ಸರ್ಕಾರ ಸಮಾರೋಪದಿಯದಲ್ಲಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಿ. ಕೇಂದ್ರ ಸರ್ಕಾರ ಕೃಷಿಕ್ಷೇತ್ರವನ್ನು ನಾಶಮಾಡುವ ಕಾಯ್ದೆಗಳನ್ನು ಜಾರಿಗೆ ತರುವ ಬದಲು ಡಾ ಎಂ.ಎಸ್.ಸ್ವಾಮಿನಾಥನ್ ವರದಿಯಂತೆ ಕೃಷಿ ಉತ್ಪನ್ನಗಳಿಗೆ ಬೆಲೆ ನಿಗದಿ ಮಾಡಿ ಶಾಸನಬದ್ಧ ದರ ಮಾನದಂಡ ಜಾರಿಗೆ ತರಲಿ ಎಂದರು.

ಎಫ್ ಆರ್ ಪಿ ದರ ಆವೈಜ್ಞಾನಿಕ

ರಾಜ್ಯದಲ್ಲಿನ ಸಕ್ಕರೆ ಕಾರ್ಖಾನೆಗಳು ಎಫ್ ಆರ್ ಪಿ ಬೆಲೆ ನಿಗದಿ ಮಾನದಂಡ ಜಾರಿಯಾದ ಎರಡು ಮೂರು ವರ್ಷದಿಂದ ಸಕ್ಕರೆ ಇಳುವರಿಯನ್ನು ಕಡಿಮೆ ತೋರುತ್ತಿರುವುದರಿಂದ ಕಬ್ಬಿನ ಎಫ್  ಆರ್ ಪಿ ದರದಲ್ಲಿಯೂ ರೈತರಿಗೆ ಮೋಸವಾಗುತಿದೆ. ಪ್ರಸಕ್ತ ಸಾಲಿನಲ್ಲಿ ನಿಗದಿಮಾಡಿರುವ  ಎಫ್ ಆರ್ ಪಿ ದರ ಆವೈಜ್ಞಾನಿಕವಾಗಿದೆ. ಆದ್ದರಿಂದ ಪ್ರಸಕ್ತ ಸಾಲಿನ ಕಬ್ಬಿನ ಬೆಲೆಯನ್ನು ರಾಜ್ಯ ಸರ್ಕಾರ ಟನ್ಗೆ 3,300 ನಿಗದಿ ಮಾಡಲಿ ಎಂದು ಆಗ್ರಹಿಸಿದರು.

key words : central-government-declare-national-disaster-state-Farmer-leader-Kuruburu Shanthakumar

The post ರಾಜ್ಯದಲ್ಲಿ ಕೇಂದ್ರ ಸರಕಾರ ರಾಷ್ಟ್ರೀಯ ವಿಪತ್ತು ಘೋಷಿಸಲಿ : ರೈತ ಮುಖಂಡ ಕುರುಬೂರು ಶಾಂತಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಆರ್.ಆರ್ ನಗರ ಉಪಚುನಾವಣೆ: ಜೆಡಿಎಸ್ ಅಭ್ಯರ್ಥಿ ಘೋಷಣೆ…
ಬೆಂಗಳೂರು,ಅಕ್ಟೋಬರ್,13,2020(www.justkannada.in): ತೀವ್ರಕುತೂಹಲ ಮೂಡಿಸಿರುವ ಆರ್.ಆರ್ ನಗರ ಉಪಚುನಾವಣಾ ಕ್ಷೇತ್ರದ ಕಣ ರಂಗೇರಿದ್ದು ಈಗಾಗಲೇ ಕಾಂಗ್ರೆಸ್ ನಿಂದ  ಐಎಎಸ್ ಅಧಿಕಾರಿ ದಿ. ಡಿ.ಕೆ ರವಿ ಅವರ ಪತ್ನಿ ಕುಸುಮಾ ಅವರಿಗೆ ಟಿಕೆಟ್ ನೀಡಿದರೇ ಬಿಜೆಪಿ ಇಂದು ಅಥವಾ ನಾಳೆ ಅಭ್ಯರ್ಥಿಯನ್ನ ಫೈನಲ್ ಮಾಡಲಿದೆ. ಈ ನಡುವೆ ಜೆಡಿಎಸ್ ತನ್ನ ಅಭ್ಯರ್ಥಿಯನ್ನ ಘೋಷಣೆ ಮಾಡಿದೆ.

ಆರ್. ಆರ್ ನಗರ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಜ್ಞಾನಭಾರತಿ ಕೃಷ್ಣಮೂರ್ತಿ ಅವರಿಗೆ ಟಿಕೆಟ್ ನೀಡಲಾಗಿದೆ. ಈ ಕುರಿತು ಮಾತನಾಡಿ ಮಾಹಿತಿ ನೀಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, “ಜ್ಞಾನ ಭಾರತಿ ಕೃಷ್ಣಮೂರ್ತಿ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಟಿಕೆಟ್ ಕೊಟ್ಟಿದ್ದೇವೆ. ಎಲ್ಲರೂ ಅವರನ್ನು ಬೆಂಬಲಿಸಬೇಕು” ಎಂದು  ಹೇಳಿದ್ದಾರೆ.

“ಜ್ಞಾನ ಭಾರತಿ ಕೃಷ್ಣಮೂರ್ತಿ ತಂದೆ ನಮ್ಮ ಪಕ್ಷಕ್ಕಾಗಿ ದುಡಿದವರು. ಸ್ವಂತ ದುಡಿಮೆಯಿಂದ ಕೃಷ್ಣಮೂರ್ತಿ ಬೆಳೆದು ಬಂದಿದ್ದಾರೆ. ಕೃಷ್ಣಮೂರ್ತಿ ಪಕ್ಷದ ನಿಷ್ಟಾವಂತ ಕಾರ್ಯಕರ್ತ.  ಹೀಗಾಗಿ ಅವರಿಗೆ ಟಿಕೆಟ್ ಕೊಟ್ಟಿದ್ದು ನಾಳೆ ಅವರು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಇನ್ನು ನನ್ನ ಹಾಗೂ ಮುನಿರತ್ನ ಮಧ್ಯೆ ಸ್ನೇಹ ಇದೆ. ಆದರೆ ಸ್ನೇಹವೇ ಬೇರೆ ಚುನಾವಣೆ ಬೇರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ನಾನು ಸಿನಿಮಾ ರಂಗದಿಂದ ಬಂದವನು ಮುನಿರತ್ನ ಕೂಡ ಸಿನಿಮಾ ಕ್ಷೇತ್ರದವರು. ಹೀಗಾಗಿ ನಮ್ಮ ನಡುವೆ ಸ್ನೇಹವಿದೆ. ಚುನಾವಣೆ ಸಂದರ್ಭದಲ್ಲಿ ಅದು ಅನ್ವಯಿಸಲ್ಲ ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

Key words: RR nagar-by-election-JDS Candidate= Declare- former CM- hd kumaraswamy

The post ಆರ್.ಆರ್ ನಗರ ಉಪಚುನಾವಣೆ: ಜೆಡಿಎಸ್ ಅಭ್ಯರ್ಥಿ ಘೋಷಣೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.