destination Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ದೇಶದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ವಿಫುಲ ಅವಕಾಶಗಳನ್ನು ಬಳಸಿಕೊಳ್ಳಿ- ಸಿಎಂ ಸಿದ್ದರಾಮಯ್ಯ ಕರೆ
ಬೆಂಗಳೂರು, ನವೆಂಬರ್, 18,2025 (www.justkannada.in): ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು,  ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿದೆ. ರಾಜ್ಯದಲ್ಲಿ ತಂತ್ರಜ್ಞಾನದ ವಿಫುಲ ಬಂಡವಾಳ ಅವಕಾಶಗಳನ್ನು ಬಳಸಿಕೊಳ್ಳಿ ಎಂದು ಹೂಡಿಕೆದಾರರಿಗೆಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಇಂದು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಸಾಫ್ಟ್ ವೇರ್ ಟೆಕ್ನಾಲಜೀ ಪಾರ್ಕ್ಸ್ ಆಫ್ ಇಂಡಿಯಾ, ಬೆಂಗಳೂರು ಇವರ ವತಿಯಿಂದ ಆಯೋಜಿಸಲಾದ ಬೆಂಗಳೂರು ಟೆಕ್ ಸಮ್ಮಿಟ್ 28 ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಮುಖ ನೀತಿಗಳ ರಚನೆ-ಐತಿಹಾಸಿಕ ಹೆಜ್ಜೆ

ಈ ಶೃಂಗಸಭೆಯಲ್ಲಿ, ಕರ್ನಾಟಕ ಮಾಹಿತಿ ತಂತ್ರಜ್ಞಾನ ನೀತಿ 2025–2030, ಬಾಹ್ಯಾಕಾಶ ತಂತ್ರಜ್ಞಾನ ನೀತಿ 2025-2030, ಮತ್ತು ಸ್ಟಾರ್ಟ್ಅಪ್ ನೀತಿ 2025-2030 ಗಳಂತಹ ಮೂರು ಪ್ರಮುಖ ನೀತಿಗಳನ್ನು ರಚಿಸುವ ಮೂಲಕ ಐತಿಹಾಸಿಕ ಹೆಜ್ಜೆಯನ್ನು ಇಡಲಾಗಿದೆ. ದತ್ತಾಂಶ ಚಾಲಿತ ಹಾಗೂ ಆಧುನಿಕ ತಂತ್ರಜ್ಞಾನಕ್ಕೆ ಪೂರಕವಾದ ಕರ್ನಾಟಕ ಮಾಹಿತಿ ತಂತ್ರಜ್ಞಾನ ನೀತಿಯಿಂದ, ರಾಜ್ಯವನ್ನು ನಾವೀನ್ಯತೆ ಮತ್ತು ಡೀಪ್ ಟೆಕ್ ಗಳಿಗೆ ಜಾಗತಿಕ ತಾಣವಾಗಿಸುವ ಗುರಿಯನ್ನು ಸರ್ಕಾರ ಹೊಂದಿದೆ. 2034 ರ ವೇಳೆಗೆ ಕರ್ನಾಟಕವನ್ನು ಭಾರತದ ಪ್ರಮುಖ ಬಾಹ್ಯಾಕಾಶ ತಂತ್ರಜ್ಞಾನ ಕೇಂದ್ರವಾಗಿ ಪರಿವರ್ತಿಸುವ ನಮ್ಮ ಗುರಿಗೆ ಬಾಹ್ಯಾಕಾಶ ತಂತ್ರಜ್ಞಾನ ನೀತಿ 2025-30 ಸಹಕಾರಿಯಾಗಲಿದೆ. ಹೊಸ ಸ್ಟಾರ್ಟ್ಅಪ್ ನೀತಿಯಿಂದ ಮುಂದಿನ ಐದು ವರ್ಷಗಳಲ್ಲಿ ಬಂಡವಾಳ ನೆರವು, ಮಾರುಕಟ್ಟೆ ಅವಕಾಶ, ಮೂಲಸೌಲಭ್ಯ, ಕೌಶಲ್ಯಾಭಿವೃದ್ಧಿಯಂತಹ ಕ್ರಮಗಳ ಮೂಲಕ 25,000 ಸ್ಟಾರ್ಟ್ಅಪ್ ಗಳ ಸ್ಥಾಪನೆಗೆ ನೆರವಾಗುವ ಗುರಿಯನ್ನು ಸರ್ಕಾರ ಹೊಂದಿದೆ.

ಕಳೆದ ಮೂರು ದಶಕಗಳಿಂದ ಬೆಂಗಳೂರಿನಲ್ಲಿ ಸಮಾವೇಶಗೊಳ್ಳುತ್ತಿರುವ  ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯು  ಅಂತರರಾಷ್ಟ್ರೀಯ ಸಹಭಾಗಿತ್ವದಲ್ಲಿ ನಾವೀನ್ಯತೆ  ಮತ್ತು ತಂತ್ರಜ್ಞಾನದಲ್ಲಿ ಹೊಸ  ಆವಿಷ್ಕಾರಗಳನ್ನು ಸಂಶೋಧಿಸಿ, ಸೃಷ್ಟಿಸಿ ಹೊಸ ದಿಕ್ಕಿನಲ್ಲಿ ಹೆಜ್ಜೆಗಳನ್ನಿಟ್ಟು ವಿಶ್ವದ ಗಮನವನ್ನು ಕರ್ನಾಟಕದತ್ತ ಸೆಳೆಯುತ್ತಿದೆ ಎಂದು ಹೆಮ್ಮೆಯಿಂದ ಹೇಳುತ್ತೇನೆ . ಈ ಸಮಾವೇಶದಲ್ಲಿ ಭಾಗವಹಿಸಿರುವ ಪ್ರತಿಯೊಬ್ಬ ಪರಿಣತರು ತಮ್ಮ  ಜ್ಞಾನ, ಕೌಶಲ್ಯಗಳನ್ನು ಈ ವೇದಿಕೆಯಲ್ಲಿ ಹಂಚಿಕೊಂಡು ರಾಜ್ಯದ ಭವಿಷ್ಯವನ್ನು ರೂಪಿಸುವಲ್ಲಿ ಪರಿವರ್ತನೆಯ ಹರಿಕಾರರಾಗುತ್ತಾರೆ ಎಂದರು .

ಪರಿವರ್ತನೆಯ ಮನ್ವಂತರಕ್ಕೆ ವೇದಿಕೆ

ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯು ಒಂದು ಸಮಾವೇಶಕ್ಕಿಂತಲೂ ಹೆಚ್ಚಾಗಿ ಹೊಸ ಹೊಸ ವಿಚಾರಗಳು, ಸಂವಾದಗಳು, ಬಂಡವಾಳ ಹೂಡಿಕೆ ಆವಿಷ್ಕಾರ ಮತ್ತು ಪರಿವರ್ತನೆಯ ಮನ್ವಂತರಕ್ಕೆ ವೇದಿಕೆಯಾಗಿದೆ.

ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಈ ಸಮ್ಮೇಳನ ಹಲವು ಉತ್ತಮ ಅವಕಾಶಗಳಿಗೆ ಜಾಗತಿಕ ವೇದಿಕೆಯಾಗಿ ಹೊಸ ಮುನ್ನುಡಿ ಬರೆಯಲಿ ಎಂದು ಹಾರೈಸುತ್ತೇನೆ ಎಂದರು.

ಈ  ವರ್ಷದ ಧ್ಯೇಯವಾಕ್ಯ: “ಭವಿಷ್ಯೀಕರಣಗೊಳ್ಳಿ-ಅಜ್ಞಾತವನ್ನು ರೂಪಿಸುತ್ತಾ, ಊಹಿಸಿಲಾಗದ್ದನ್ನು ಅಳೆಯುತ್ತಾ , ಜಗತ್ತನ್ನು ಮುಂದೆ  ಕೊಂಡೊಯ್ಯುವುದು” ಎಂಬುದಾಗಿದೆ. ಈ ಆಶಯ  ನಮ್ಮ ಸಾಮೂಹಿಕ ಧ್ಯೇಯದ  ಸಂಕಲ್ಪವನ್ನು ಎತ್ತಿ ಹಿಡಿಯುತ್ತದೆ. ಈ ಧ್ಯೇಯ ವಾಕ್ಯದ ಆಶಯದಂತೆ ಬೆಂಗಳೂರು  ತಂತ್ರಜ್ಞಾನ ಶೃಂಗಸಭೆ- 2025, ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ 600ಕ್ಕೂ ಹೆಚ್ಚು ಜಾಗತಿಕ ಭಾಷಣಕಾರರು, 1200ಕ್ಕೂ ಹೆಚ್ಚು ಪ್ರದರ್ಶಕರು, 60ಕ್ಕೂ ಹೆಚ್ಚು ದೇಶದ ನಿಯೋಗಗಳು ಮತ್ತು ಸಾವಿರಾರು ಪರಿಣತರು ಮುಂದಿನ ದಶಕಗಳಲ್ಲಿ ತಂತ್ರಜ್ಞಾನದ ರೂಪುರೇಷೆಗಳನ್ನು , ಹೊಸ ಸಾಧ್ಯತೆಗಳನ್ನು ಇಲ್ಲಿ ಸಂವಾದಿಸಿ, ಕೇವಲ ಕರ್ನಾಟಕಕ್ಕಾಗಲಿ ಅಥವಾ ಭಾರತಕ್ಕೆ ಆಗಲಿ ಮಾತ್ರವಲ್ಲ, ಇಡೀ ಜಗತ್ತಿಗೇ ತೆರೆದಿಡುತ್ತಾರೆ .ಬೆಂಗಳೂರು ತಂತ್ರಜ್ಞಾನ ಶೃಂಗಸಭೆ- 2025  ಪರಿವರ್ತನೆಯ ಹರಿಕಾರ ಎಂಬುದನ್ನು ಈಗಾಗಲೇ ಹೇಳಿದ್ದೇನೆ. ಇದು ಶೈಕ್ಷಣಿಕ ವಲಯವನ್ನು ಉದ್ಯಮಕ್ಕೆ  ಬೆಸೆಯುತ್ತದೆ.  ನವೋದ್ಯಮಗಳನ್ನು ಹೂಡಿಕೆದಾರರಿಗೆ ಪರಿಚಯಿಸುತ್ತದೆ. ಅನ್ಯ ದೇಶಗಳ ಪರಿಣಿತರನ್ನು ಸಂಶೋಧಕರನ್ನು, ನೀತಿ ನಿರೂಪಕರನ್ನು ಪರಸ್ಪರ ಬೆಸೆಯುವುದಲ್ಲದೇ , ಜಾಗತಿಕ ಮಾರುಕಟ್ಟೆಗಳನ್ನು ಸಂಪರ್ಕಿಸಲು ಬೃಹತ್ ವೇದಿಕೆಯಾಗಿದೆ ಎಂಬುದನ್ನು ಹೆಮ್ಮೆಯಿಂದ ಹೇಳುತ್ತೇನೆ ಎಂದರು

ಸುಸ್ಥಿರ ಅಭಿವೃದ್ಧಿ ನಮ್ಮ ಧ್ಯೇಯ ಭವಿಷ್ಯೀಕರಣಗೊಳ್ಳಿ ಎನ್ನುವ ಆಶಯ ನುಡಿಯಂತೆ ತಂತ್ರಜ್ಞಾನವು ಸಾಮಾಜಿಕ ಒಳಿತನ್ನು, ಆರ್ಥಿಕ ನ್ಯಾಯವನ್ನು, ಸುಸ್ಥಿರ ಅಭಿವೃದ್ಧಿಯನ್ನು ಮತ್ತು  ಸಮಾಜದ ಎಲ್ಲರಿಗೂ ಸಮೃದ್ಧಿಯನ್ನು ಒದಗಿಸಬೇಕು ಎಂಬ ನಮ್ಮ ನಂಬಿಕೆಯನ್ನು ನಾವು ಪುನರುಚ್ಚರಿಸುತ್ತೇವೆ. ಕೃತಕ ಬುದ್ಧಿಮತ್ತೆ, ಕ್ವಾಂಟಮ್, ಬಯೋಟೆಕ್, ಬಾಹ್ಯಾಕಾಶ ಮತ್ತು ಹಸಿರು ತಂತ್ರಜ್ಞಾನಗಳಿಂದ ಕೂಡಿರುವ  ಡಿಜಿಟಲ್ ಯುಗದಲ್ಲಿ ನಾವು ನಿಂತಿದ್ದೇವೆ. ಬೆಂಗಳೂರು ತಂತ್ರಜ್ಞಾನ ಶೃಂಗಸಭೆ-2025 ದಿಟ್ಟ, ಮಾನವೀಯ ಮತ್ತು ಪರಿವರ್ತನಾತ್ಮಕ ಭವಿಷ್ಯವನ್ನು ಸಹ-ಸೃಷ್ಟಿಸಲು ಇಡೀ ಜಗತ್ತಿಗೆ ಕರ್ನಾಟಕದ ಆಹ್ವಾನವಾಗಿದೆ. ದಶಕಗಳಿಂದ, ಬೆಂಗಳೂರನ್ನು ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯಲಾಗುತ್ತಿದೆ. ಆದರೆ ಇಂದು, ಅದು ಇನ್ನೂ ದೊಡ್ಡದಾಗಿ, ನಾವೀನ್ಯತೆ, ಪ್ರತಿಭೆ, ಸಂಶೋಧನೆ ಮತ್ತು ತಾಂತ್ರಿಕ ನಾಯಕತ್ವದ ಮುಂಚೂಣಿಯಲ್ಲಿ ಜಾಗತಿಕ ಕೇಂದ್ರವಾಗಿ ಬೆಳೆದು ನಿಂತಿದೆ ಎಂಬುದನ್ನು ಹೇಳಲು ಹೆಮ್ಮೆಯಾಗುತ್ತದೆ. ತಂತ್ರಜ್ಞಾನ ಶಕ್ತಿ ಕೇಂದ್ರವಾಗಿ ಕರ್ನಾಟಕದ ಬೆಳವಣಿಗೆ ಆಕಸ್ಮಿಕವಲ್ಲ. ಇದು ದೂರದೃಷ್ಟಿಯ ನೀತಿಗಳು, ಆಳವಾದ ಸಾಂಸ್ಥಿಕ ಶಕ್ತಿ ಮತ್ತು ಪ್ರತಿ ಹಂತದಲ್ಲೂ ಸೃಜನಶೀಲತೆ ಮತ್ತು ಶ್ರೇಷ್ಠತೆಯನ್ನು ಪೋಷಿಸುವ ಪರಿಸರ ವ್ಯವಸ್ಥೆಯ ಪರಿಣಾಮವಾಗಿದೆ.

ಕರ್ನಾಟಕವು ಜ್ಞಾನಕಾಶಿ ಎಂಬುದನ್ನು ಹೆಮ್ಮೆಯಿಂದ ಹೇಳುತ್ತೇನೆ‌.  85 ವಿಶ್ವವಿದ್ಯಾಲಯಗಳು, 243 ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಸುಮಾರು 1,800 ಐಟಿಐಗಳಿಗೆ ಕರ್ನಾಟಕ ನೆಲೆಯಾಗಿದೆ.ರಾಜ್ಯದ ನಿರುದ್ಯೋಗ ಪ್ರಮಾಣ 4.3% ರಷ್ಟು ಮಾತ್ರ ಇದ್ದು, ಇದು ರಾಜ್ಯದ ಸಮರ್ಥ ಉತ್ಪಾದಕತೆ ಮತ್ತು ಉದ್ಯೋಗಾವಕಾಶಗಳನ್ನು ಎತ್ತಿ ತೋರಿಸುತ್ತದೆ ಎಂದರು.

ಬೆಂಗಳೂರು ನಗರವು IISc, IIM-B, IIIT-B, NCBS, JNCASR, NIMHANS, DRDO ಪ್ರಯೋಗಾಲಯಗಳು, ISRO ಕೇಂದ್ರಗಳು ಮತ್ತು ಹಲವಾರು ವಿಶ್ವ ದರ್ಜೆಯ ಖಾಸಗಿ ವಿಶ್ವವಿದ್ಯಾಲಯಗಳಂತಹ ಪ್ರಮುಖ ಸಂಸ್ಥೆಗಳ ತವರಾಗಿ, ಸಾಟಿಯಿಲ್ಲದ ಬೌದ್ಧಿಕ ಪರಿಸರ ವ್ಯವಸ್ಥೆಯನ್ನು ಸೃಷ್ಟಿಸುತ್ತದೆ ಮತ್ತು ಪೋಷಿಸುತ್ತದೆ ಎಂಬುದು ಅತ್ಯಂತ ಮಹತ್ವದ ವಿಚಾರ. ಉದ್ಯಮಶೀಲತಾ ಶಕ್ತಿಗೆ  ಬೆಂಗಳೂರು ಅನ್ವರ್ಥವಾಗಿದೆ. ಕರ್ನಾಟಕವು 16,000 ಕ್ಕೂ ಹೆಚ್ಚು ನವೋದ್ಯಮಗಳಿಗೆ ನೆಲೆಯಾಗಿದೆ ಮತ್ತು ಭಾರತದ ಒಟ್ಟು ನವೋದ್ಯಮ ನಿಧಿಗೆ ಸುಮಾರು 47% ರಷ್ಟನ್ನು ರಾಜ್ಯವು ಕೊಡುಗೆ ನೀಡಿದೆ ಎಂಬುದನ್ನು ಹೆಮ್ಮೆಯಿಂದ ಹೇಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕರ್ನಾಟಕವು ಭಾರತದ ಅತಿದೊಡ್ಡ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ. ಭಾರತದ ಐಟಿ ರಫ್ತಿನಲ್ಲಿ ನಾವು 42% ಕೊಡುಗೆ ನೀಡುತ್ತೇವೆ, ಇದರ ಮೌಲ್ಯ 3.2 ಲಕ್ಷ ಕೋಟಿ ರೂ.ಗಳಿಗಿಂತ ಹೆಚ್ಚು ಮತ್ತು ಈ ಪ್ರಗತಿ ವರ್ಷದಿಂದ ವರ್ಷಕ್ಕೆ 27% ರಷ್ಟು ವೇಗವಾಗಿ ಬೆಳೆಯುತ್ತಿದೆ. ರಾಜ್ಯವು 550 ಕ್ಕೂ ಹೆಚ್ಚು ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು (ಜಿಸಿಸಿ) ಹೊಂದಿದೆ, ಇದು ಭಾರತದ ಒಟ್ಟು ಕಂಪನಿಯ ಮೂರನೇ ಒಂದು ಭಾಗವಾಗಿದೆ.

ಬೆಂಗಳೂರು ಸೆಮಿಕಂಡಕ್ಟರ್, ಏರೋಸ್ಪೇಸ್, ರಕ್ಷಣಾ, ಬಯೋಟೆಕ್, ಎಲೆಕ್ಟ್ರಾನಿಕ್ಸ್ ಉತ್ಪಾದನೆ, ಅನಿಮೇಷನ್ ಮತ್ತು ಗೇಮಿಂಗ್ ಮತ್ತು ಡೀಪ್-ಟೆಕ್‌ಗಳಿಗೆ ಪ್ರಮುಖ ಕೇಂದ್ರವಾಗಿದೆ. ನೀತಿ -ನಾವೀನ್ಯತೆ ಯ ರೂಪಿಸುವಲ್ಲಿ ಕರ್ನಾಟಕ ಯಾವಾಗಲೂ ಭಾರತವನ್ನು ಮುನ್ನಡೆಸಿದೆ. ನಾವು 1997 ರಲ್ಲಿಯೇ ಭಾರತದ ಮೊದಲ ತಂತ್ರಜ್ಞಾನ ನೀತಿಯನ್ನು ರೂಪಿಸಿದ್ದೇವೆ ಮತ್ತು ಹೊಸ ನೀತಿಗಳೊಂದಿಗೆ ಈ ನಾಯಕತ್ವವನ್ನು ಮುಂದುವರಿಸುತ್ತಿದ್ದೇವೆ ಎಂದರು.

ಜಾಗತಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಕರ್ನಾಟಕದ ಸಕ್ರಿಯ ಪಾಲ್ಗೊಳ್ಳುವಿಕೆ

ಸರ್ಕಾರದ ದೂರದೃಷ್ಟಿಯ ಆಡಳಿತದ ಪರಿಣಾಮವಾಗಿ , ಜಾಗತಿಕ ತಂತ್ರಜ್ಞಾನದ ಕ್ಷೇತ್ರದಲ್ಲಿ ಕರ್ನಾಟಕ ಸಕ್ರಿಯವಾಗಿ ಪಾಲ್ಗೊಂಡಿದೆ. ವಿದೇಶಿ ಬಂಡವಾಳ ಹೂಡಿಕೆ, ಜಾಗತಿಕ ಸಹಭಾಗಿತ್ವ ಹಾಗೂ ಬಹುರಾಷ್ಟ್ರೀಯ ಹೂಡಿಕೆಗಳಲ್ಲಿ ಕರ್ನಾಟಕವು ದೇಶದ ಪ್ರಮುಖ ರಾಜ್ಯಗಳಲ್ಲಿ ಒಂದಾಗಿದೆ. ನಮ್ಮ ಪರಿಸರ ವ್ಯವಸ್ಥೆಯು ವಿಶ್ವದರ್ಜೆಯ ಇಂಜಿನಿಯರಿಂಗ್, ಪಾರದರ್ಶಕ ನೀತಿ , ಸದೃಢ ಐಪಿ ಸಂಸ್ಕೃತಿ ಹಾಗೂ ವೈವಿಧ್ಯಮಯ ಜಾಗತಿಕ ಸಮುದಾಯಗಳನ್ನು ಒಳಗೊಂಡಿದೆ. ನಮ್ಮ ವಾಣಿಜ್ಯ ಪರಿಸರಕ್ಕೆ ಉನ್ನತಮಟ್ಟದ ಕಾನೂನು, ಆರ್ಥಿಕ ಹಾಗೂ ತಾಂತ್ರಿಕ ಬಲದ ಬೆಂಬಲವಿದೆ. ವಿಶೇಷವಾಗಿ ಬೆಂಗಳೂರಿನ ಹವಾಮಾನ, ಬಹುಸಂಸ್ಕೃತಿಗಳು ವಿಶ್ವದ ಜನರನ್ನು ಆಕರ್ಷಿಸುತ್ತವೆ.  ಒಟ್ಟಾರೆ ,ರಾಜ್ಯವು ಹೂಡಿಕೆದಾರರಿಗೆ ಸಂಶೋಧನೆಯಿಂದ ಮಾರುಕಟ್ಟೆಯವರೆಗೂ, ಮೂಲಸೌಕರ್ಯದಿಂದ ಕೌಶಲ್ಯದವರೆಗಿನ ಎಲ್ಲ ಅಗತ್ಯತೆಗಳನ್ನು ಪೂರೈಸುತ್ತಿದ್ದು, ಕರ್ನಾಟಕವು ಜಾಗತಿಕ ತಂತ್ರಜ್ಞಾನ ಕ್ರಾಂತಿಯನ್ನು ಮುನ್ನಡೆಸುತ್ತಿದೆ ಎಂದರು.

ಕ್ವಾಂಟಮ್ ತಂತ್ರಜ್ಞಾನಕ್ಕೆ ಒತ್ತು ನೀಡಿದ ಮೊದಲ ರಾಜ್ಯ ಕರ್ನಾಟಕ

ಡೀಪ್ ಸೈನ್ಸ್ ಮತ್ತು ಸುಧಾರಿತ ಇಂಜಿನಿಯರಿಂಗ್ ವ್ಯವಸ್ಥೆ ಒದಗಿಸಲು ರಾಜ್ಯ ಬದ್ಧವಾಗಿದ್ದು, ಎಐ, ಸೈಬರ್-ಭದ್ರತೆ, ದತ್ತಾಂಶ ವಿಜ್ಞಾನ, ಅನಿಮೇಷನ್ ಮತ್ತು ರೊಬೊಟಿಕ್ಸ್ ನಲ್ಲಿ ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.ಕ್ವಾಂಟಮ್ ತಂತ್ರಜ್ಞಾನದ ಮಾರ್ಗಸೂಚಿಗಳನ್ನು ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ. ‘ಬಿಯಾಂಡ್ ಬೆಂಗಳೂರು’ ಉಪಕ್ರಮದ ಮೂಲಕ ತಂತ್ರಜ್ಞಾನ ಆರ್ಥಿಕತೆಯ ವಿಕೇಂದ್ರೀಕರಣಕ್ಕೆ ಮುಂದಾಗಿರುವ ನಮ್ಮ ಸರ್ಕಾರ, ಮುಂದಿನ ಪೀಳಿಗೆಗಾಗಿ ಟೈರ್ 2 ನಗರಗಳನ್ನು ನಾವಿನ್ಯತೆಯ ಕ್ಲಸ್ಟರ್ ಗಳಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.

ತಂತ್ರಜ್ಞಾನದ ವಿಫುಲ ಬಂಡವಾಳ ಅವಕಾಶಗಳನ್ನು ಬಳಸಿಕೊಳ್ಳಿ- ಹೂಡಿಕೆದಾರರಿಗೆ ಸಿಎಂ ಕರೆ

ಈ ಎಲ್ಲ ಕ್ರಮಗಳು ಕೇವಲ ಆರ್ಥಿಕತೆಯನ್ನು ಕೇಂದ್ರೀಕರಿಸದೇ, ಸಮಾನ ಬೆಳವಣಿಗೆಗೂ ಬದ್ಧವಾಗಿವೆ. ರಾಜ್ಯದ ಪ್ರತಿ ಜಿಲ್ಲೆಯೂ ಹಾಗೂ ಯುವಪೀಳಿಗೆಯು ಡಿಜಿಟಲ್ ಯುಗಕ್ಕೆ ತೆರೆದುಕೊಳ್ಳುವ ಅವಕಾಶವನ್ನು ನೀಡಲಾಗಿದೆ. ನಮ್ಮ ಆಡಳಿತದ ಮಾದರಿಯು ಪಾರದರ್ಶಕತೆ, ನಿರೀಕ್ಷಿತ ನಡೆ ಹಾಗೂ ಸ್ಥಿರತೆಗೆ ಬದ್ಧವಾಗಿದೆ. ನಮ್ಮ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು,  ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿ ಮುಂದುವರೆದಿದೆ. ಸಂಶೋಧನೆ ಹಾಗೂ ಅಭಿವೃದ್ಧಿ ಕೇಂದ್ರವಾಗಲಿ, ಸ್ಟಾರ್ಟ್ ಅಪ್ ಆಗಲಿ, ಶೈಕ್ಷಣಿಕ ಸಂಶೋಧನೆಯಾಗಲಿ, ಯಾವುದೇ ಕ್ಷೇತ್ರದ ಬಂಡವಾಳ ಹೂಡಿಕೆ ಕರ್ನಾಟಕ ರಾಜ್ಯ ತಾಣವಾಗಿವೆ. ಎಐ , ಕ್ವಾಂಟಮ್ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಬಾಹ್ಯಾಕಾಶ ತಂತ್ರಜ್ಞಾನದಲ್ಲಿನ ವಿಫುಲ ಅವಕಾಶಗಳನ್ನು ಬಳಸಿಕೊಂಡು ಮಾನವ ಪ್ರಗತಿಗೆ ಎಲ್ಲರೂ ಒಟ್ಟಾಗಿ ಶ್ರಮಿಸಬೇಕೆಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

Key words: Karnataka most, reliable, investment, destination, CM, Siddaramaiah

The post ದೇಶದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ವಿಫುಲ ಅವಕಾಶಗಳನ್ನು ಬಳಸಿಕೊಳ್ಳಿ- ಸಿಎಂ ಸಿದ್ದರಾಮಯ್ಯ ಕರೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

‘ಬಂಗಾರ ಧಾಮ’ ಈಗ ಐತಿಹಾಸಿಕ ಪ್ರವಾಸಿ ತಾಣ..
ಶಿವಮೊಗ್ಗ,ಸೆಪ್ಟಂಬರ್,1,2025 (www.justkannada.in): ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಹೃದಯ ಭಾಗದಲ್ಲಿ ನಿರ್ಮಾಣಗೊಂಡಿರುವ ಬಂಗಾರ ಧಾಮವನ್ನು ರಾಜ್ಯ ಸರ್ಕಾರ ಐತಿಹಾಸಿಕ ಪ್ರವಾಸಿ ತಾಣವಾಗಿ ಗುರುತಿಸಿದೆ. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

‘ಬಂಗಾರ ಧಾಮ’ ವನ್ನು ಮಧು ಬಂಗಾರಪ್ಪ ಅವರ ನೇತೃತ್ವದ ಎಸ್. ಬಂಗಾರಪ್ಪ ಫೌಂಡೇಶನ್ ನಿರ್ವಹಿಸುತ್ತಿದೆ.  ಮಧು ಬಂಗಾರಪ್ಪ ಅವರು ತಮ್ಮ ಸ್ವಂತ ಖರ್ಚಿನಲ್ಲಿ ನಿರ್ಮಾಣ ಮಾಡಿರುವುದಲ್ಲದೇ ಬಂಗಾರ ಧಾಮವನ್ನು ಬಂಗಾರಪ್ಪ ನವರ ಚಿಂತನೆ, ಅಭಿರುಚಿ, ಜನಸಮೂಹದೊಂದಿಗೆ ಅವರಿಗಿದ್ದ ಬಾಂಧವ್ಯಕ್ಕೆ ತಕ್ಕಂತೆ ನಿರ್ಮಾಣವಾಗಿರುವುದು ವಿಶೇಷ.

ಗೃಹ ಸಚಿವ ಡಾ. ಜಿ. ಪರಮೇಶ್ವರ್,  ಕಾನೂನು, ಸಂಸತ್ತೀಯ ವ್ಯವಹಾರಗಳ ಸಚಿವ ಎಚ್. ಕೆ. ಪಾಟೀಲ್ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉನ್ನತ ಶಿಕ್ಷಣ ಸಚಿವ  ಡಾ. ಎಂ.ಸಿ. ಸುಧಾಕರ್; ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು, ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಅನೇಕ ಶಾಸಕರು, ಸಚಿವರು ಹಾಗೂ ಹಿರಿಯ ನಾಯಕರು ಈ ಸ್ಥಳಕ್ಕೆ ಭೇಟಿ ನೀಡಿ ‘ಬಂಗಾರ ಧಾಮ’ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅದಲ್ಲದೆ, ಈಗಾಗಲೇ ‘ಬಂಗಾರ ಧಾಮ’ ಅನೇಕ ಗಣ್ಯರು, ಸಾರ್ವಜನಿಕರು ಭೇಟಿ ನೀಡುತ್ತಿದ್ದಾರೆ.

ಬಂಗಾರ ಧಾಮವು ಕರ್ನಾಟಕದ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಸಾರೇಕೊಪ್ಪ ಬಂಗಾರಪ್ಪ ಮತ್ತು ಶಕುಂತಲಮ್ಮ ಅವರ ಪುಣ್ಯಸ್ಥಳವಾಗಿ ಅಭಿಮಾನಿಗಳ ಮನದಾಳದಲ್ಲಿ ವಿಶೇಷ ಸ್ಥಾನ ಪಡೆದಿದೆ. ಸೊರಬದ ಮಧ್ಯಭಾಗದಲ್ಲಿರುವ ಈ ಧಾಮವು ದೇಶದಲ್ಲಿಯೇ ವಿಭಿನ್ನ ಶಕ್ತಿಧಾಮವಾಗಿ ಗುರುತಿಸಿಕೊಂಡಿದೆ.

ಸುಮಾರು ಒಂದು ಕಾಲು ಎಕರೆ ಪ್ರದೇಶದಲ್ಲಿ ನಿರ್ಮಿಸಲಾದ ಧಾಮವು 100×100 ಅಡಿ ವ್ಯಾಪ್ತಿಯ ವಿಶಿಷ್ಟ ವಿನ್ಯಾಸದ ಪುಣ್ಯಸ್ಥಳವಾಗಿದ್ದು, ಗ್ರಾನೈಟ್ ಮತ್ತು ಮಾರ್ಬಲ್ ಕೆತ್ತನೆಯ ಕಲಾಕೃತಿಗಳು ಇದರ ಸೌಂದರ್ಯವನ್ನು ಹೆಚ್ಚಿಸಿವೆ. ಧ್ಯಾನಮಂದಿರ, ಕುಡಿಯುವ ನೀರು, ಶೌಚಾಲಯ, ವಾಕಿಂಗ್ ಪಾಥ್, ಹೂವಿನ ತೋಟ, ಅಲಂಕಾರಿಕ ಗಿಡಗಳು ಸೇರಿದಂತೆ ಅಗತ್ಯ ಸೌಲಭ್ಯಗಳು ಇಲ್ಲಿ ಲಭ್ಯ.

ಇದಲ್ಲದೆ, 1,500 ಮಂದಿಗೆ ಆಸನ ವ್ಯವಸ್ಥೆಯೊಂದಿಗೆ ಆಧುನಿಕ ಬಯಲು ರಂಗಮಂದಿರ ನಿರ್ಮಾಣಗೊಂಡಿದ್ದು, ಸಾಂಸ್ಕೃತಿಕ ಹಾಗೂ ಸಂಗೀತ ಕಾರ್ಯಕ್ರಮಗಳಿಗೆ ಅನುಕೂಲವಾಗಿದೆ. ಹೆಲಿಫ್ಯಾನ್ ಅಳವಡಿಕೆಯೊಂದಿಗೆ ವಾತಾವರಣ ಮತ್ತಷ್ಟು ಸುಂದರಗೊಂಡಿದೆ.

ಸಂಪಿಗೆ ಮರ, ಕಲ್ಪವೃಕ್ಷ, ಈಚಲು ಮರಗಳನ್ನು ಒಳಗೊಂಡ ಸಸ್ಯಸಂಪತ್ತಿ, 56 ಅಡಿ ಎತ್ತರದ ಕ್ಲಾಕ್ ಟವರ್, ವಿದ್ಯುತ್ ಅಲಂಕಾರ ಹಾಗೂ ಆಕರ್ಷಕ ಸಂಗೀತ ಬಂಗಾರಧಾಮದ ವೈಶಿಷ್ಟ್ಯಗಳಾಗಿ ಕಂಗೊಳಿಸುತ್ತಿವೆ.

ENGLISH SUMMARY..

‘Bangara Dhama’ Declared A Historic Tourist Destination

Head of S Bangarappa Foundation, and Minister Madhu Bangarappa Thanks State Government

Soraba: The Karnataka government has declared ‘Bangara Dhama’, located in the heart of Soraba town in Shivamogga district, as a historic tourist destination. On this occasion, School Education and Literacy Minister and Shivamogga District In-charge Minister, Shri Madhu Bangarappa, expressed his gratitude to the state government.

Bangara Dhama is managed by the S. Bangarappa Foundation, headed by Shri Madhu Bangarappa. Several leaders, including Home Minister Dr. G. Parameshwara; Minister for Law, Parliamentary Affairs and Legislation, Shri H. K. Patil; Chairman of the Legislative Council, Shri Basavaraj Horatti; Higher Education Minister, Dr. M. C. Sudhakar; Minor Irrigation Minister, Shri N. S. Boseraju; former minister, Shri Aravind Limbavali; along with several legislators, ministers, and senior leaders, have visited the site and spoken highly of Bangaradhama.

What makes Bangara Dhama unique is that it has been built entirely at the personal expense of Shri Madhu Bangarappa, reflecting the vision, taste and deep bond that Shri Bangarappa had with the people.

Bangara Dhama is the memorial of Karnataka’s veteran leader and former Chief Minister S. Bangarappa and Shakuntalamma. Situated at the center of Soraba town, the site has emerged as a unique spiritual landmark in the country.

Spread across nearly one and a quarter-acre, the Bangara Dhama features a specially designed 100×100 ft punyasthala adorned with granite and marble carvings that enhance its grandeur.

Facilities such as a meditation hall, drinking water, restrooms, walking paths, flower gardens and ornamental plants adorn the site.

The premises also house a modern open-air theatre with seating for 1,500 people, suitable for cultural and musical programs. The addition of a heli-fan has further beautified the environment.

Distinctive features include various flower plants and trees, a 56-foot clock tower, decorative lighting, and melodious music, all of which add to the charm of Bangara Dhama.

Key words: Bangara Dham, historical, tourist, destination, Madhu Bangarappa

The post ‘ಬಂಗಾರ ಧಾಮ’ ಈಗ ಐತಿಹಾಸಿಕ ಪ್ರವಾಸಿ ತಾಣ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಂದಿಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ- ಸಚಿವ ಡಾ.ಕೆ.ಸುಧಾಕರ್
ಚಿಕ್ಕಬಳ್ಳಾಪುರ, ಫೆಬ್ರವರಿ 25,2021(www.justkannada.in):  ಚಿಕ್ಕಬಳ್ಳಾಪುರದ ಜನಪ್ರಿಯ ನಂದಿ ಗಿರಿಧಾಮವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿಸಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ನಂದಿಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ನಂದಿಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶ ಆಕರ್ಷಕವಾಗಿದೆ. ಇದಕ್ಕೆ ಐತಿಹಾಸಿಕ, ಧಾರ್ಮಿಕ ಪ್ರಾಮುಖ್ಯವಿದ್ದು, ವಿಶೇಷವಾದ ಸಸ್ಯಸಂಪತ್ತು ಇದೆ. ಇವೆಲ್ಲವನ್ನೂ ಗಮನಿಸಿ ಪ್ರವಾಸೋದ್ಯಮ ಕ್ಷೇತ್ರವಾಗಿಸಬಹುದು. ಇದಕ್ಕಾಗಿ ನಮ್ಮ ಸರ್ಕಾರ ಈಗಾಗಲೇ 10 ಕೋಟಿ ರೂ. ಅನುದಾನ ನೀಡಿದೆ ಎಂದು ಮಾಹಿತಿ ನೀಡಿದರು.

ಕಳೆದ 15 ವರ್ಷಗಳಿಂದ ರೋಪ್ ವೇ ಬೇಕು ಎಂದು ಜನರು ಬೇಡಿಕೆ ಇಡುತ್ತಿದ್ದಾರೆ. ಅಂತಾರಾಷ್ಟ್ರೀಯ ಕಂಪನಿಯೊಂದು ಇದನ್ನು ಮಾಡಲು ಮುಂದಾಗಿ ನಂತರ ಕಾರಣಾಂತರದಿಂದ ಯೋಜನೆ ಕೈ ಬಿಟ್ಟಿತ್ತು. ಈಗ ಆ ಕನಸು ನನಸಾಗಲಿದೆ. ಇಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲು 10 ಎಕರೆಗೂ ಹೆಚ್ಚು ಜಾಗವನ್ನು ಪಡೆಯಲು ಪ್ರಯತ್ನಿಸಲಾಗಿದೆ. ಈ ರೀತಿ ಮಾಸ್ಟರ್ ಪ್ಲಾನ್ ಮಾಡಿ ಅನುಷ್ಠಾನಗೊಳಿಸಲಾಗುವುದು. ಮೂರ್ನಾಲ್ಕು ತಿಂಗಳಲ್ಲಿ ಕಾಮಗಾರಿ ಮುಗಿಯಬಹುದು ಎಂದರು.

ತಕ್ಷಣದಲ್ಲಿ ಟೆಂಡರ್ ಆಗಿ ಎಲ್ಲ ಬಗೆಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ನಂದಿಬೆಟ್ಟವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ರೂಪುಗೊಳಿಸಬೇಕಿದೆ. ಈ ತಾಣವು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು 30 ಕಿ.ಮೀ. ದೂರದಲ್ಲಿದೆ. ಬೆಂಗಳೂರು ನಗರದಿಂದ ಒಂದು ಗಂಟೆಯಲ್ಲಿ ಬರಬಹುದು. ಈ ಪ್ರದೇಶವನ್ನು ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೂಡ ಎಲ್ಲ ಸಹಕಾರ ನೀಡಲಾಗುವುದು ಎಂದು ಉತ್ತೇಜಿಸಿದ್ದಾರೆ ಎಂದರು.

ಇದರ ಜೊತೆಗೆ ಎಕೋ-ಟೂರಿಸಂ, ಸುತ್ತಮುತ್ತಲಿನ 5 ಬೆಟ್ಟಗಳಿಗೆ ಚಾರಣ ದಾರಿಗಳು, ಪುರಾತತ್ವ ಸ್ಮಾರಕಗಳು, ನೆಲ್ಲಿಕಾಯಿ ಬಸವಣ್ಣ ಮತ್ತು ಮಂಟಪಗಳು ಸಂರಕ್ಷಣೆ, ಸುಂದರೀಕರಣ ಸೇರಿದಂತೆ ವಿಶ್ವದರ್ಜೆಯ ಪ್ರವಾಸಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಮುಖ್ಯಮಂತ್ರಿಗಳು ಮಂಡಿಸಲಿರುವ ಆಯವ್ಯಯದಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಲಿದ್ದಾರೆ. ರಾಜ್ಯದಲ್ಲಿ ವಿಶಿಷ್ಟವಾದ ಪ್ರವಾಸಿ ತಾಣಗಳಿವೆ ಎಂದರು.

ಪ್ಲಾಸ್ಟಿಕ್ ನಿಷೇಧ

ನಂದಿಬೆಟ್ಟದಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ಸಂಪೂರ್ಣ ನಿಷೇಧಿಸಲು ತೀರ್ಮಾನಿಸಲಾಗಿದೆ. ಯಾವುದೇ ರೀತಿಯ ಪ್ಲಾಸ್ಟಿಕ್ ಒಳಗೆ ತೆಗೆದುಕೊಂಡು ಹೋಗಲು ಅವಕಾಶ ನೀಡದಿರಲು ನಿರ್ಧರಿಸಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

Key words: Nandigiridham- Development – International Tourist- Destination-Minister -Dr. K. Sudhakar

The post ನಂದಿಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ- ಸಚಿವ ಡಾ.ಕೆ.ಸುಧಾಕರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಜೈವಿಕವನಕ್ಕೆ ಶಂಕುಸ್ಥಾಪನೆ: ತುಮಕೂರು ಬಿಟಿ ಕ್ಷೇತ್ರಕ್ಕೆ ಹೇಳಿಮಾಡಿಸಿದ ತಾಣ ಎಂದ ಡಿಸಿಎಂ ಅಶ್ವಥ್ ನಾರಾಯಣ್…
ತುಮಕೂರು,ಆ,12,2020(www.justkannada.in):  ರಾಜಧಾನಿ ಬೆಂಗಳೂರಿಗೆ ಸರಿಸಮನಾಗಿ ಅಷ್ಟೇ ವೇಗದಿಂದ ಬೆಳೆಯುತ್ತಿರುವ ತುಮಕೂರು ಜಿಲ್ಲೆಯಲ್ಲಿ ಜೈವಿಕ ತಂತ್ರಜ್ಞಾನ ಕ್ಷೇತ್ರ ಅಭಿವೃದ್ಧಿಗೆ ವಿಪುಲ ಅವಕಾಶಗಳಿವೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ ಅಶ್ವತ್ಥನಾರಾಯಣ ಹೇಳಿದರು.

ಬುಧವಾರ ಇಲ್ಲಿ ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದ ಗ್ರಾಮೀಣಾಭಿವೃದ್ಧಿ ಕೇಂದ್ರದ ಅಡಿಯಲ್ಲಿ ಸ್ಥಾಪಿಸಲಾಗಿರುವ ಡಾ. ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಜೈವಿಕವನವನ್ನು ಸಸಿ ನೆಟ್ಟು ಶಂಕುಸ್ಥಾಪನೆ ಮಾಡಿ ಮಾತನಾಡಿದ ಅವರು, ಶೈಕ್ಷಣಿಕವಾಗಿ ಶ್ರೀಮಂತವಾಗಿರುವ ತುಮಕೂರು ಜಿಲ್ಲೆಯಲ್ಲಿ ಬಿಟಿ ಕ್ಷೇತ್ರಕ್ಕೆ ಹೇಳಿಮಾಡಿಸಿದ ವಾತಾವರಣವಿದೆ. ಇದೀಗ ಲೋಕಾರ್ಪಣೆ ಆಗಿರುವ ಜೈವಿಕವನವೂ ಉತ್ತಮ ಪ್ರಯತ್ನವಾಗಿದೆ ಎಂದರು.

ತುಮಕೂರು ರಾಜ್ಯದ ಅಭಿವೃದ್ಧಿಯಲ್ಲಿ ಮಹತ್ವದ ನಗರವಾಗಿದೆ. ಆದರೆ, ನಗರದ ಸುತ್ತಮುತ್ತಲಿನ ಪ್ರದೇಶಗಳು ಹಿಂದುಳಿದಿವೆ. ಲಭ್ಯವಿರುವ ತಂತ್ರಜ್ಞಾನವನ್ನು ಬಳಸಿಕೊಂಡು ಈ ಪ್ರದೇಶಗಳನ್ನು ಅಭಿವೃದ್ಧಿಪಡಿಸಲಾಗುವುದು. ಅದಕ್ಕೆ ಬೇಕಾದ ಎಲ್ಲ ಪ್ರಯತ್ನಗಳನ್ನು ಸರಕಾರ ಮಾಡಲಿದೆ. ಅಭಿವೃದ್ಧಿಯಲ್ಲಿ ಸುಸ್ಥಿರತೆ ಮತ್ತು ಕಮರ್ಷಿಯಲ್ ವಯಬಲಿಟಿ ಇಲ್ಲವಾದರೆ ಆ ಪ್ರಗತಿಗೆ ಯಾವುದೇ ಅರ್ಥವಿರುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಶೈಕ್ಷಣಿಕವಾಗಿ ಬಹಳಷ್ಟು ಮುಂದುವೆರದಿರುವ ತುಮಕೂರಿನಲ್ಲಿ ಅತ್ಯುತ್ತಮ ಮಾನವ ಸಂಪನ್ಮೂಲಕ್ಕೇನೂ ಕೊರತೆ ಇಲ್ಲ. ಹೀಗಾಗಿ ಜಿಲ್ಲೆಯ ಅಭಿವೃದ್ಧಿಗೆ ಸಮಸ್ಯೆಯಾಗುವುದಿಲ್ಲ. ಉತ್ತಮ ಹಾಗೂ ರಚನಾತ್ಮಕ ಯೋಜನೆಯನ್ನು ರೂಪಿಸಿ ಅದನ್ನು ಸಮರ್ಥವಾಗಿ ಜಾರಿ ಮಾಡುವ ಇಚ್ಚಾಶಕ್ತಿ ಬೇಕು. ಅಂತಹ ಇಚ್ಛಾಶಕ್ತಿ ಯಡಿಯೂರಪ್ಪ ಸರಕಾರಕ್ಕಿದೆ. ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ. ಜತೆಗೆ ಬದ್ಧತೆ ಹಾಗೂ ರಾಜಿಯಾಗದ ಗಟ್ಟಿತನವೂ ಸರಕಾರಕ್ಕಿದೆ ಎಂದು ಅವರು ನುಡಿದರು.

ಗ್ಲೋಬಲ್ ವಿಲೇಜ್:

ಕೋವಿಡ್-19 ನಮ್ಮೆಲ್ಲರ ಜೀವನಕ್ರಮವನ್ನೇ ಬದಲಿಸಿದೆ. ಜಗತ್ತೇ ಒಂದು ಹಳ್ಳಿಯಂತೆ ಆಗಿದೆ. ಟೆಕ್ನಾಲಜಿ ನಮ್ಮೆಲ್ಲರನ್ನು ಹತ್ತಿರ ಮಾಡಿದೆ. ಈಗ ಯಾವುದೂ ಹತ್ತಿರವೂ ಅಲ್ಲ, ದೂರವೂ ಅಲ್ಲ. ಜರ್ಮನಿಯಂಥ ದೇಶದಲ್ಲಿ ಕುಗ್ರಾಮದಂಥ ಪ್ರದೇಶದಲ್ಲೂ ಅದ್ಭುತವಾದ ಪ್ರಗತಿಯನ್ನು ನೋಡಬಹುದು. ಅಂತಹ ಸ್ಥಿತಿಯನ್ನು ನಮ್ಮ ದೇಶದಲ್ಲೂ ನೋಡಬೇಕಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅದು ಸಾಕಾರವಾಗುತ್ತಿದೆ ಎಂದು ಡಾ. ಅಶ್ವತ್ಥನಾರಾಯಣ ಹೇಳಿದರು.

ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸಚಿವ ಜೆ.ಸಿ. ಮಾಧುಸ್ವಾಮಿ ಮಾತನಾಡಿದರು. ಸಂಸದ ಜಿ.ಎಸ್. ಬಸವರಾಜು, ಶಾಸಕರಾದ ಜ್ಯೋತಿ ಗಣೇಶ್, ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಎಂ.ಆರ್. ದಿನೇಶ್ ಹಾಜರಿದ್ದರು.

Key words: DCM -Ashwath Narayan -Tumkur – perfect- destination – BT sector.

The post ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಜೈವಿಕವನಕ್ಕೆ ಶಂಕುಸ್ಥಾಪನೆ: ತುಮಕೂರು ಬಿಟಿ ಕ್ಷೇತ್ರಕ್ಕೆ ಹೇಳಿಮಾಡಿಸಿದ ತಾಣ ಎಂದ ಡಿಸಿಎಂ ಅಶ್ವಥ್ ನಾರಾಯಣ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.