Exhibition Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಮೈಸೂರು: ಮೇ 8ರಿಂದ ಚರಕದ ಕೈಮಗ್ಗ ಉತ್ಪನ್ನಗಳ ಪ್ರದರ್ಶನ, ಮಾರಾಟ
ಮೈಸೂರು,ಮೇ,4,2026 (www.justkannada.in): ಇಲ್ಲಿನ ವಿಜಯನಗರದ ಕನ್ನಡ ಸಾಹಿತ್ಯ ಪರಿಷತ್ ರಸ್ತೆಯಲ್ಲಿನ ಜಗನ್ನಾಥ್ ಸೆಂಟರ್ ಫಾರ್ ಆರ್ಟ್ ಅಂಡ್ ಕಲ್ಚರ್ ಸಂಸ್ಥೆಯಲ್ಲಿ ಮೇ 8ರಿಂದ 10ರ ವರೆಗೆ ಸಾಗರ ಸಮೀಪದ ಹೆಗ್ಗೋಡು-ಭೀಮನಕೋಣೆಯ ಚರಕ ಮಹಿಳಾ ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘವು ನೈಸರ್ಗಿಕ ಬಣ್ಣದ ಅಪ್ಪಟ ಹತ್ತಿ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ಜೊತೆಗೆ ಕೊಂಡುಕೊಳ್ಳುವವರ ಸಮಾವೇಶ ಆಯೋಜಿಸಿದೆ.

ಮೇ 8ರಂದು ಮಧ್ಯಾಹ್ನ 12 ಗಂಟೆಗೆ ಮೇಳಕ್ಕೆ ಸುತ್ತೂರು ಶ್ರೀವೀರ ಸಿಂಹಾಸನ ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಚಾಲನೆ ನೀಡುವರು. ಅತಿಥಿಗಳಾಗಿ ಮೈಸೂರು ಬುಕ್ ಕ್ಲಬ್ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕಿ ಶುಭಾ ಸಂಜಯ್ ಅರಸ್ ಭಾಗವಹಿಸುವರು. ಚರಕದ ಸಂಸ್ಥಾಪಕರಾದ ರಂಗಕರ್ಮಿ ಪ್ರಸನ್ನ ಉಪಸ್ಥಿತರಿರುವರು.

ಸಮಾರಂಭದಲ್ಲಿ ಮಠಾಧೀಶರು ತೊಡುವ ಕಷಾಯವಸ್ತ್ರ ಬಿಡುಗಡೆ, ಬೇವು ಮತ್ತು ಅರಿಸಿನ ಬಣ್ಣದಲ್ಲಿನ ಸಿದ್ಧ ಉಡುಪುಗಳು ಅನಾವರಣಗೊಳ್ಳಲಿವೆ. ಮೇಳದಲ್ಲಿ ಚರಕದ ನೈಸರ್ಗಿಕ ಬಣ್ಣದ ಕೈಮಗ್ಗದ ಬಟ್ಟೆಗಳು, ಸಿದ್ಧ ಉಡುಪುಗಳು ಇರಲಿವೆ. ಉತ್ತರ ಕರ್ನಾಟಕದ ಕೈಮಗ್ಗದ ಸೀರೆಗಳು, ನೈಸರ್ಗಿಕ ಬಣ್ಣದ ಬೆಡ್ ಸ್ಪ್ರೆಡ್ ದೊರೆಯಲಿವೆ. ಜಮ್ದಾನಿ ಸೀರೆ, ಕುರ್ತಾ, ಶರ್ಟ್ ಹಾಗೂ ಗೃಹಾಲಂಕಾರ ಉಡುಪುಗಳು ಸಿಗಲಿವೆ.

ಮೇಳವು ಮೂರು ದಿನಗಳವರೆಗೆ ಬೆಳಿಗ್ಗೆ 10.30ರಿಂದ ರಾತ್ರಿ 7.30ರ ವರೆಗೆ ನಡೆಯಲಿದೆ. ಈ ಮೇಳವನ್ನು ರಾಜ್ಯ ಕೈಮಗ್ಗ ಮತ್ತು ಜವಳಿ ಇಲಾಖೆಯ ಪವಿತ್ರವಸ್ತ್ರ ಯೋಜನೆಯಡಿ ಆಯೋಜಿಸಲಾಗಿದೆ. ಮಾಹಿತಿಗೆ 63638 85215/74111 20862 ಸಂಪರ್ಕಿಸಬಹುದು.

ENGLISH SUMMARY…

Mysuru: A handloom exhibition and sale by Charaka Women’s Multi-purpose Industrial Cooperative Society, founded by theatre personality Prasanna, will be held from May 8 to 10 at Jagannath Centre for Art & Culture, Vijayanagar.

The fair will showcase natural-dyed pure cotton handloom products, including sarees from North Karnataka, jamdani sarees, kurtas, shirts, bedspreads, and home décor items.

The event will be inaugurated on May 8 at 12 PM by Sri Shivarathri Deshikendra Swamiji of Suttur Mutt. Shubha Sanjay Urs, founder of Mysore Book Club Charitable Trust, will attend as chief guest.

The exhibition will be open daily from 10:30 AM to 7:30 PM. Visitors can also explore special collections like saffron robes and neem- and turmeric-dyed garments.

The event is organized under the State Handloom & Textiles Department’s “Pavitra Vastra” scheme.

Key words: Mysore, Exhibition, sale, handloom, products, May 8th

The post ಮೈಸೂರು: ಮೇ 8ರಿಂದ ಚರಕದ ಕೈಮಗ್ಗ ಉತ್ಪನ್ನಗಳ ಪ್ರದರ್ಶನ, ಮಾರಾಟ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು: ಆಹಾರ ಮಳಿಗೆಯ ವಸ್ತು ಪ್ರದರ್ಶನ ಉದ್ಘಾಟಿಸಿದ ಆಹಾರ ಸಚಿವ ಕೆಹೆಚ್. ಮುನಿಯಪ್ಪ.
ಮೈಸೂರು, ಅಕ್ಟೋಬರ್,25,2025 (www.justkannada.in):  ದಸರಾ ಪ್ರಯುಕ್ತ ಸ್ಥಾಪಿಸಲಾಗಿರುವ ಆಹಾರ ಮಳಿಗೆಯ ವಸ್ತು ಪ್ರದರ್ಶನವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ವತಿಯಿಂದ ಆಯೋಜಿಸಿದ್ದು  ಆಹಾರ ಇಲಾಖೆಯ  ವಸ್ತು ಪ್ರದರ್ಶನ ಮಳಿಗೆಯನ್ನು ಇಂದು ಸಮಾಜ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ ಮಹದೇವಪ್ಪ ಹಾಗೂ ಆಹಾರ ಸಚಿವ ಕೆಹೆಚ್. ಮುನಿಯಪ್ಪ ರವರು ಉದ್ಘಾಟಿಸಿದರು.

ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಕುರಿತು ವಸ್ತು ಪ್ರರ್ದಶನದಲ್ಲಿ ಹಳ್ಳಿಯ ಜೀವನಶೈಲಿಯ ಕುರಿತ ಪ್ರದರ್ಶನ  ಮಾಡಲಾಗಿದ್ದು  ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ, ಜೋಳ ,ರಾಗಿಯ ಕುರಿತು ಹಾಗೂ ಕಾನೂನು ಮಾಪನ ಶಾಸ್ತ್ರದ ಇಲಾಖೆಯ ತೂಕದ ಸಾಮಗ್ರಿಗಳ ಕುರಿತು ವಸ್ತು ಪ್ರದರ್ಶನವನ್ನು ಮಾಡಲಾಗಿತ್ತು. ಹಸಿವು ಮುಕ್ತ ಕರ್ನಾಟಕ  ಸಂಕಲ್ಪದೊಂದಿಗೆ ಸಮೃದ್ದ ಹಳ್ಳಿಯ ಚಿತ್ರಣವನ್ನು ಪ್ರದರ್ಶಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಸಚಿವರು ಪಡಿತರ ಕಾರ್ಡ್ ಗಳು ಪರಿಷ್ಕರಣೆ ನಡೆಸಲಾಗಿತ್ತಿದ್ದು ಅರ್ಹರು ಒಂದು ವೇಳೆ ಬಿಪಿಎಲ್ ನಿಂದ ಎಪಿಎಲ್ ಗೆ ವರ್ಗಾವಣೆ ಯಾಗಿದ್ದರೆ ಸಂಬಂಧಿಸಿದ ತಾಲ್ಲೂಕಿನಲ್ಲಿ ತಹಶಿಲ್ದಾರರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದಾಗ ಅವರು ಪರಿಶೀಲನೆ ನಡೆಸಿ ಪುನಃ ಕಾರ್ಡ್ ವಿತರಿಸಲು ಕ್ರಮವಹಿಸಲಾಗುವುದು ಎಂದರು.

ಅನ್ನಭಾಗ್ಯ ಯೋಜನೆಯಡಿ ಅರ್ಹ ಪ್ರತಿ ಫಲಾನುಭವಿಗೆ 10 ಕೆಜಿ ಅಕ್ಕಿ ವಿತರಣೆ ಮಾಡುತ್ತಿದ್ದು ಮುಂದಿನ ತಿಂಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ ಕಿಟ್ ವಿತರಿಸಲು ಕ್ರಮವಹಿಸಲಾಗುತ್ತಿದೆ  ಎಂದರು.

ಆಹಾರವನ್ಬು ವ್ಯರ್ಥ ಮಾಡಬೇಡಿ: ಡಾ: ಹೆಚ್.ಸಿ ಮಹದೇವಪ್ಪ

ಪ್ರತಿಯೊಬ್ಬರಿಗೂ ಆಹಾರ ಬಹಳ ಮುಖ್ಯವಾಗಿದ್ದು, ಆಹಾರವನ್ನು ವ್ಯರ್ಥ ಮಾಡದೇ ಸಮರ್ಪಕವಾಗಿ ಬಳಸಿಕೊಳ್ಳಬೇಕು. ಚೆಲ್ಲದಿರಿ ಅನ್ನ ಬಡವರಿಗದೇ ಚಿನ್ನ ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಅವರು ಹೇಳಿದರು.

ಅಂತ್ಯೋದಯ ಅಂದರೆ ಹಸಿವನ್ನು ಅಂತ್ಯ ಮಾಡುವುದು. ಆಹಾರ ನಾಗರಿಕ ಸರಬರಾಜು ಸಚಿವರಾಗಿ ಮುನಿಯಪ್ಪ‌ ಅವರು ಬಿಪಿಎಲ್ ಅಂತ್ಯೋದಯ ಕುಟುಂಬಗಳಿಗೆ 10 ಕೆಜಿ ಉಚಿತ ಅಕ್ಕಿ ನೀಡುವ ಯೋಜನೆ ತಂದರು. ಇದನ್ನು ಈಗ 5 ಕೆಜಿ ಅಕ್ಕಿ ಹಾಗೂ ಉಳಿದ 5 ಕೆಜಿ ಗೆ ಇಂದಿರಾ ಕಿಟ್ ಮೂಲಕ ಬೇಳೆ , ಎಣ್ಣೆ ಅಂತಹ ಆಹಾರಧಾನ್ಯ ನೀಡಲು ಸಂಪುಟದಲ್ಲಿ ಅನುಮೋದನೆ ಪಡೆದಿದ್ದಾರೆ ಎಂದು ತಿಳಿಸಿದರು.

ನಮ್ಮ ಸರ್ಕಾರವು ಪ್ರತಿಯೊಬ್ಬರಿಗೂ ಬದುಕುವ ಹಕ್ಕು ನೀಡುವ ಸಲುವಾಗಿ ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದು ಪ್ರತಿ ಕುಟುಂಬಗಳಿಗೂ ಆಹಾರಧಾನ್ಯ ನೀಡುತ್ತಿದ್ದೇವೆ, ಅದರಂತೆ ಇಂದು ಆಹಾರ ಇಲಾಖೆ ಮಳಿಗೆಯಲ್ಲಿ ಅನೇಕ ಉಪಯುಕ್ತ ಮಾಹಿತಿಗಳು ಇವೆ. ಇದನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್  ಹಾಗೂ ಜಿಲ್ಲಾ ಜೆಂಟಿ ಉಪ ನಿರ್ದೇಶಕ ಮಂಟೇಸ್ವಾಮಿ, ತೂಕ ಮತ್ತು ಮಾಪನ‌ ಇಲಾಖೆ ಅಧಿಕಾರಿ ಮಹದೇವ ಸ್ವಾಮಿ ಹಾಗೂ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

Key words: Mysore, Food Minister, KH. Muniyappa , food stall, exhibition

The post ಮೈಸೂರು: ಆಹಾರ ಮಳಿಗೆಯ ವಸ್ತು ಪ್ರದರ್ಶನ ಉದ್ಘಾಟಿಸಿದ ಆಹಾರ ಸಚಿವ ಕೆಹೆಚ್. ಮುನಿಯಪ್ಪ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ದಸರಾ: ವಿಂಟೇಜ್, ಕ್ಲಾಸಿಕ್ ಕಾರುಗಳ ಪ್ರದರ್ಶನ
ಮೈಸೂರು, ಸೆಪ್ಟಂಬರ್,23, 2025 (www.justkannada.in):  ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2025ರ ಅಂಗವಾಗಿ  ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶ(ಇನ್‌ ಫೋಸಿಸ್ ಕ್ಯಾಂಪಸ್ ಹತ್ತಿರ)ದಲ್ಲಿನ ಎಂಜಿಎಸ್(ಎಂ.ಗೋಪಿನಾಥ್ ಶೆಣೈ) ವಿಂಟೇಜಸ್‌ ನಲ್ಲಿ ಸೆ.26ರವರೆಗೆ ಐದು ದಿನಗಳ ಕಾಲ ಹಮ್ಮಿಕೊಂಡಿರುವ ವಿಂಟೇಜ್ ಹಾಗೂ ಕ್ಲಾಸಿಕ್ ಕಾರುಗಳ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.

ವೇದಿಕೆ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿದ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್, 1967ರ ಮರ್ಸಿಡಿಸ್ ಬೆಂಜ್ 230 ಎಸ್ ಹಾಗೂ 1932ರ ಎಂಜಿ ಮಾರಿಸ್ ಕಾರಿನಲ್ಲಿ ಕುಳಿತು ಸುತ್ತು ಹಾಕುವ ಮೂಲಕ ವಿದ್ಯುಕ್ತ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅರುಣ್ ಯೋಗಿರಾಜ್ ಅವರು, ಮೈಸೂರಿಗರು ಹಾಗೂ ಮೈಸೂರಿಗೆ ಆಗಮಿಸುವ ಪ್ರವಾಸಿಗರಿಗೆ ತಮ್ಮ ನೆಚ್ಚಿನ ಹಳೆ ಕಾರುಗಳ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ. ಅಪರೂಪದ ಆಕರ್ಷಕ ಹಳೆ ಕಾರುಗಳನ್ನು ನೋಡಬಹುದಾಗಿದ್ದು, ಸಂಗ್ರಹ ಮಾಡಿರುವುದು ಅತ್ಯಂತ ಶ್ಲಾಘನೀಯ. ಇಂದಿಗೂ ಇಲ್ಲಿರುವ ಕಾರುಗಳ ನಿರ್ವಹಣೆ ಅಚ್ಚುಕಟ್ಟಾಗಿದ್ದು, ರೈಡ್ ಮಾಡಲು ರೆಡಿಯಾಗಿವೆ ಎಂದು ಸಂತಸ ವ್ಯಕ್ತಪಡಿಸಿದರು.

ಕೈಗಾರಿಕೋದ್ಯಮಿ ಎಂ.ಗೋಪಿನಾಥ್ ಶೆಣೈ ಮಾತನಾಡಿ, ದಸರಾ ಅಂಗವಾಗಿ ಕಳೆದ ನಾಲ್ಕು ವರ್ಷಗಳಿಂದ ವಿಂಟೇಜ್ ಕಾರುಗಳ ರ್ಯಾಲಿ ನಡೆಸಲಾಗುತ್ತಿತ್ತು. ರ್ಯಾಲಿ ವೇಳೆ ಸಾಕಷ್ಟು ಜನರಿಗೆ ವಿಂಟೇಜ್ ಕಾರುಗಳನ್ನು ನೋಡುವ ಅವಕಾಶ ದೊರೆಯುತ್ತಿರಲಿಲ್ಲ. ಹಾಗಾಗಿ ಈ ವರ್ಷ ಐದು ದಿನಗಳ ಪ್ರದರ್ಶನವನ್ನು ಹಮ್ಮಿಕೊಂಡಿದ್ದೇವೆ. 1909 ರಿಂದ 1970 ರವರೆಗಿನ ಸುಮಾರು 50ಕ್ಕೂ ಹೆಚ್ಚು ಅಪರೂಪದ ವಿಂಟೇಜ್ ಕಾರುಗಳು ಹಾಗೂ 40ಕ್ಕೂ ಹೆಚ್ಚು ಬೈಕ್‌ ಗಳು ಇದ್ದು ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಮಾಡಿಕೊಡಲಗಿದೆ ಎಂದರು.

ಸಾವಿತ್ರಿ ಗೋಪಿನಾಥ್ ಶೆಣೈ, ಉದ್ಯಮಿ ಮಾದವ ಶೆಣೈ, ವಿಜಯ ಯೋಗಿರಾಜ್, ಬಿಜೆಪಿ ಮುಖಂಡ ಹೆಚ್.ಜಿ.ಗಿರಿಧರ್, ಸತ್ಯನಾರಾಯಣ ಭಟ್, ಶಿವಕುಮಾರ್, ಮಾಧವ ಪೈ, ಎನ್.ರವಿ, ಅನಿಲ್, ಬಿಜೆಪಿ ಮುಖಡರಾದ ಕೇಬಲ್ ಮಹೇಶ್, ಜೋಗಿ ಮಂಜು, ಸುರೇಶ್ ನಾಯಕ್ ಮತ್ತಿತರರಿದ್ದರು.

Key words; Mysore Dasara, Vintage, classic cars, exhibition

The post ಮೈಸೂರು ದಸರಾ: ವಿಂಟೇಜ್, ಕ್ಲಾಸಿಕ್ ಕಾರುಗಳ ಪ್ರದರ್ಶನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು: ಆ.19 ರಂದು ಛಾಯಾಚಿತ್ರ ಪ್ರದರ್ಶನ ಮತ್ತು ಸ್ಪರ್ಧೆ
ಮೈಸೂರು,ಆಗಸ್ಟ್,5,2025 (www.justkannada.in): ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆಗಸ್ಟ್ 19 (ಮಂಗಳವಾರ) ರಂದು ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದ್ದು ಇದರ ಅಂಗವಾಗಿ ಸುದ್ದಿ ಛಾಯಾಚಿತ್ರ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಆಗಸ್ಟ್ 19ರಂದು ಪತ್ರಕರ್ತರ ಭವನದಲ್ಲಿ ನಡೆಯುವ ವಿಶ್ವ ಛಾಯಾಗ್ರಹಣ ದಿನಾಚರಣೆ ಸಮಾರಂಭದಲ್ಲಿ ಛಾಯಚಿತ್ರ ಪ್ರದರ್ಶನ ಮತ್ತು ಸ್ಪರ್ಧೆ ನಡೆಯಲಿದ್ದು, ಇದೇ ಸಮಾರಂಭದಲ್ಲಿ ಗಣ್ಯರು ಬಹುಮಾನ ಮತ್ತು ಪ್ರಮಾಣ ಪತ್ರ ವಿತರಣೆ ಮಾಡಲಿದ್ದಾರೆ.

ಛಾಯಾಚಿತ್ರ ಪ್ರದರ್ಶನ ಮತ್ತು ಸ್ಪರ್ಧೆಯಲ್ಲಿ ಭಾಗವಹಿಸುವ ಛಾಯಾಗ್ರಾಹಕರು ಈ ಕೆಳಕಂಡ ನಿಯಮಾವಳಿಗಳನ್ನು ಅನುಸರಿಸಬೇಕು:

ಸುದ್ದಿ ಛಾಯಾಚಿತ್ರವು ದಿನಾಂಕ: 01-01-2023ರಿಂದ 31-07-2025ರ ಅವಧಿಗೆ ಒಳಪಟ್ಟಿರಬೇಕು.

ಛಾಯಾಗ್ರಾಹಕರು 12 *18 ಅಳತೆಯ 3 ಛಾಯಾಚಿತ್ರವನ್ನು ಮುದ್ರಿಸಿ ಪ್ರದರ್ಶನಕ್ಕೆ ನೀಡತಕ್ಕದ್ದು.

ಛಾಯಾಚಿತ್ರದಲ್ಲಿ ಛಾಯಾಗ್ರಾಹಕರ ಹೆಸರು ಮತ್ತು ಚೌಕಟ್ಟು ಇರಬಾರದು.

ವನ್ಯ ಜೀವಿ ಸಂಬಂಧಿಸಿದ ಚಿತ್ರಗಳನ್ನು ಪರಿಗಣಿಸಲಾಗುವುದಿಲ್ಲ.

ಮೊದಲ ಬಹುಮಾನ 10,000 ರೂ, ಎರಡನೇ ಬಹುಮಾನ 5,000 ರೂ. ಮತ್ತು ಮೂರನೇ ಬಹುಮಾನ 3,000 ರೂ. ಗಳ ನಗದು ಪುರಸ್ಕಾರವನ್ನು ನಿಗದಿಪಡಿಸಲಾಗಿದ್ದು, ಎಲ್ಲ ಸ್ಪರ್ಧಾಳುಗಳಿಗೆ ಪ್ರಮಾಣ ಪತ್ರ ವಿತರಿಸಲಾಗುವುದು.

ಹಿರಿಯ ಛಾಯಾಗ್ರಾಹಕರು, ಹಿರಿಯ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ವಿಭಾಗದ ಸಿಬ್ಬಂದಿಗಳು ತೀರ್ಪುಗಾರರಾಗಿ ಆಗಮಿಸಲಿದ್ದು, ಇವರ ತೀರ್ಮಾನವೇ ಅಂತಿಮವಾಗಿರುತ್ತದೆ.

ಛಾಯಾಚಿತ್ರಗಳನ್ನು ಆಗಸ್ಟ್ 15ರೊಳಗೆ ಜಿಲ್ಲಾ ಪತ್ರಕರ್ತರ ಸಂಘಕ್ಕೆ ತಲುಪಿಸಬೇಕು.

ಹೆಚ್ಚಿನ ಮಾಹಿತಿಗೆ ಮೊ. ನಂ. 9741511340, 9845653548, 7019329722 ಇಲ್ಲಿಗೆ ಸಂಪರ್ಕಿಸಬಹುದಾಗಿದೆ.

Key words: Photography, exhibition, competition, Mysore District Journalists Association

The post ಮೈಸೂರು:  ಆ.19 ರಂದು ಛಾಯಾಚಿತ್ರ ಪ್ರದರ್ಶನ ಮತ್ತು ಸ್ಪರ್ಧೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಾಧ್ಯಮ ಅಕಾಡೆಮಿಯಿಂದ ಪ್ರಥಮ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನ
ಬೆಂಗಳೂರು, ಫೆಬ್ರುವರಿ 5,2025 (www.justkannada.in):  ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನವನ್ನು ಏರ್ಪಡಿಸಿದೆ.

ಈ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಮೊದಲ ಮೂರು ಛಾಯಾಚಿತ್ರಗಳಿಗೆ ಕ್ರಮವಾಗಿ 35,000/- ರೂ., 25,000/- ರೂ. ಹಾಗೂ 15,000/- ರೂ. ನಗದು ಬಹುಮಾನ ನೀಡಲಾಗುವುದು. ಆಯ್ದ ಅತ್ಯುತ್ತಮ ಛಾಯಾಚಿತ್ರಗಳನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಮಾರ್ಚ್‌ ತಿಂಗಳಲ್ಲಿ ಅಕಾಡೆಮಿ ವತಿಯಿಂದ ಏರ್ಪಡಿಸಲಾಗುವ ಸುದ್ದಿ ಛಾಯಾಗ್ರಹಣ ಕುರಿತ ಕಾರ್ಯಾಗಾರದ ಸಂದರ್ಭದಲ್ಲಿ ಛಾಯಾಚಿತ್ರ ಪ್ರದರ್ಶನದಲ್ಲಿ ಇರಿಸಲಾಗುವುದು.

ಸ್ಪರ್ಧೆಯ ಷರತ್ತುಗಳು:

ಈ ಸ್ಪರ್ಧೆಗೆ ಪ್ರವೇಶ ಉಚಿತವಾಗಿದ್ದು, ದಿನಾಂಕ :01-01-.202 4 ರಿಂದ 31-01-2025 ರ ಅವಧಿಯಲ್ಲಿ ಚಿತ್ರಿಸಿರುವ ಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸ್ವೀಕರಿಸಲಾಗುವುದು.

ಪ್ರತಿ ಸುದ್ದಿ ಛಾಯಾಚಿತ್ರ ಗ್ರಾಹಕರು ತಾವೇ ಚಿತ್ರಿಸಿರುವ ಎರಡು ಸುದ್ದಿ ಛಾಯಾಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸಲ್ಲಿಸಬಹುದು.

ಸುದ್ದಿ ಛಾಯಾಚಿತ್ರಗಳನ್ನು ಚಿತ್ರಿಸಿರುವುದಕ್ಕೆ ಯಾವುದೇ ಭೌಗೋಳಿಕ ಪರಿಮಿತಿ ಇರುವುದಿಲ್ಲ.

ಪ್ರತಿ ಸ್ಪರ್ಧಿಯೂ ಅವರು ಸುದ್ದಿ ಛಾಯಾಚಿತ್ರಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕೆಯ ಸಂಪಾದಕರಿಂದ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ದೃಢೀಕರಣ ಪತ್ರ ಅಥವಾ  ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪತ್ರಕರ್ತರಿಗಾಗಿ ನೀಡುವ Accreditation Card ಹೊಂದಿರುವವರು ಅದರ ದೃಢೀಕೃತ ಪ್ರತಿಯನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಲಗತ್ತಿಸಬೇಕು.

ಛಾಯಾಚಿತ್ರಗಳ ಮೇಲೆ ಹೆಸರು, ಶೀರ್ಷಿಕೆ ಹಾಗೂ ವಾಟರ್ ಮಾರ್ಕ್‌ಗಳು ಇರಬಾರದು.

ಸ್ಪರ್ಧೆಗೆ ಕಳಿಸುವ ಛಾಯಾಚಿತ್ರಗಳ ಅಂದರೆ ಡಿಜಿಟಲ್ ಇಮೇಜ್ ಗಳನ್ನುJPEG format ನಲ್ಲಿಮಾತ್ರ ಸಲ್ಲಿಸಬೇಕು.

ಪ್ರದರ್ಶನಕ್ಕೆ ಆಯ್ಕೆಯಾಗುವ ಛಾಯಾಚಿತ್ರಗಳನ್ನು20”x 30” ಅಳತೆಯಲ್ಲಿ ಮುದ್ರಣ  ಮಾಡಿಸಬೇಕಾಗಿರುವುದರಿಂದ ನೀವು ಕಳಿಸುವ ಇಮೇಜ್ ಗಳು 20”x 30” ಅಳತೆಯ ,300 DPI ನಲ್ಲಿದ್ದು ಕನಿಷ್ಠ 5MB ಗಾತ್ರದಲ್ಲಿರಬೇಕು.

ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರಿಸಿರುವ ಚಿತ್ರಗಳನ್ನುಸ್ಪರ್ಧೆಗೆ ಸ್ವೀಕರಿಸಲಾಗುವುದಿಲ್ಲ.

ಸ್ಪರ್ಧೆಯಲ್ಲಿ ಭಾಗವಹಿಸುವ ಸುದ್ದಿಛಾಯಾಚಿತ್ರಗಳು ಸಹಜವಾಗಿರಬೇಕು. ಚಿತ್ರದಲ್ಲಿನ ಯಾವುದೇ ಭಾಗವನ್ನುತೆಗೆಯುವುದಾಗಲಿ ಅಥವಾ ಸೇರಿಸುವುದಾಗಲಿ ಮಾಡಿರಬಾರದು.

ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಛಾಯಾಗ್ರಾಹಕರು mediaacademy.karnataka.gov.in ವೆಬ್ಸೈಟ್ನಲ್ಲಿ ಇರುವ ನಿಗದಿತ ಅರ್ಜಿಯನ್ನು Down load ಮಾಡಿಕೊಂಡು ಭರ್ತಿಮಾಡಿ, ತಮ್ಮ ಪಾಸ್ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಇಮೇಜ್ಗಳನ್ನು photo.karnatakamediaacademy@gmail.com ಇ-ಮೇಲ್ ವಿಳಾಸಕ್ಕೆ ದಿನಾಂಕ: 15-02-2025 ರಂದು ಸಂಜೆ 5:00ಗಂಟೆ ಒಳಗಾಗಿ ಸಲ್ಲಿಸತಕ್ಕದ್ದು. ನಂತರ ಬಂದ ಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.

ಸ್ಪರ್ಧೆಗೆ ಬಂದಿರುವ ಛಾಯಾಚಿತ್ರಗಳನ್ನುಪ್ರಶಸ್ತಿಗೆ ಹಾಗೂ ಪ್ರದರ್ಶನಕ್ಕೆಆಯ್ಕೆಮಾಡಲು ಸುದ್ದಿ ಛಾಯಾಗ್ರಹಣ ಕ್ಷೇತ್ರದಲ್ಲಿಅನುಭವ ಹೊಂದಿರುವ ಮೂವರು ತೀರ್ಪುಗಾರರಿದ್ದುಅವರು ತೆಗೆದುಕೊಂಡ ತೀರ್ಮಾನವೇ ಅಂತಿಮವಾಗಿರುತ್ತದೆ.

ಪ್ರಶಸ್ತಿಗೆ ಆಯ್ಕೆಯಾದ ಮೂರು ಛಾಯಾಚಿತ್ರಗಳಿಗೆ ಪ್ರಥಮ ಬಹುಮಾನ: ರೂ.35,000/ ದ್ವಿತೀಯ ಬಹುಮಾನ: ರೂ. 25000, ಹಾಗೂ ತೃತೀಯ ಬಹುಮಾನ: ರೂ.15000ಗಳನ್ನುನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್‌ ಸಂಖ್ಯೆ 9448227768 ಹಾಗೂ 9449245980 ನ್ನು ಸಂಪರ್ಕಿಸಬಹುದು.

Key words: photography competition, exhibition, Media Academy

The post ಮಾಧ್ಯಮ ಅಕಾಡೆಮಿಯಿಂದ ಪ್ರಥಮ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜ.10 ರಿಂದ ಅಯೋಧ್ಯೆ ಶ್ರೀ ರಾಮಲಲ್ಲಾ ಮೂರ್ತಿಗೆ ನಿರ್ಮಿಸಿದ್ದ ಪೀಠ ಮತ್ತು ಉಳಿ, ಸುತ್ತಿಗೆಗಳ ಪ್ರದರ್ಶನ
ಮೈಸೂರು,ಜನವರಿ,10,2025 (www.justkannada.in):  ಅಯೋಧ್ಯೆಯ ಶ್ರೀರಾಮಲಲ್ಲಾ ಮೂರ್ತಿಗೆ ನಿರ್ಮಿಸಿದ್ದಂತಹ ಪೀಠ ಹಾಗೂ ಶ್ರೀ ರಾಮಲಲ್ಲಾರ ಮೂರ್ತಿಯ ಕೆತ್ತನೆಗೆ ಬಳಸಿದ್ದ ಉಳಿ ಸುತ್ತಿಗೆಗಳನ್ನ ಜನವರಿ 10 ರಿಂದ  ಜ.12ರವರೆಗೆ ಪ್ರದರ್ಶನಕ್ಕೆ ಇಡುವುದಾಗಿ ಶಿಲ್ಪ ಕಲಾವಿದ ಡಾ. ಅರುಣ್ ಯೋಗಿರಾಜ್ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಶಿಲ್ಪಿ ಅರುಣ್ ಯೋಗಿರಾಜ್, ಇದೇ ಜನವರಿ 10ನೇ ತಾರೀಖಿನಿಂದ 12ನೇ ತಾರೀಖಿನವರೆಗೆ ನಮ್ಮದೇ ಬ್ರಹ್ಮರ್ಷಿ ಕಶ್ಯಪ ಶಿಲ್ಪ ಕಲಾಶಾಲ (ರಿ) ಸಾಹುಕಾರ್ ಚೆನ್ನಯ್ಯ ರಸ್ತೆ ಗಂಗೋತ್ರಿ ಬಡಾವಣೆ (ವಾಣಿವಿಲಾಸ ವಾಟ‌‌ರ್ ಟ್ಯಾಂಕ್ ಹತ್ತಿರ) ಇಲ್ಲಿ ಭಾರತೀಯ ಶಿಲ್ಪಶಾಸ್ತ್ರ ಪ್ರಕಾರದ ಕೃಷ್ಣಶಿಲೆಯಲ್ಲಿ ನಿರ್ಮಿಸಿರುವ ಶ್ರೀ ವಿಷ್ಣುವಿನ ಮೂರ್ತಿಯನ್ನು ಪೂರ್ವಪ್ರತಿಷ್ಠಾಪನಾ ಪ್ರದರ್ಶನ ಜೊತೆಗೆ ಅಯೋಧ್ಯೆ ಶ್ರೀ ರಾಮಲಲ್ಲಾ ಮೂರ್ತಿಗೆ ನಿರ್ಮಿಸಿದ್ದಂತಹ ಪೀಠ ಹಾಗೂ ಶ್ರೀ ರಾಮಲಲ್ಲಾರ ಮೂರ್ತಿಯ ನೇತ್ರೋನ್ಮಿಲನಕ್ಕೆ  ಬಳಸಿದಂತಹ ಉಳಿ, ಸುತ್ತಿಗೆಗಳು ಮತ್ತು ಅನಂದ ತಾಂಡವ ಶಿವಮೂರ್ತಿಯ ಶಿಲ್ಪಗಳನ್ನು ಪ್ರದರ್ಶನಕ್ಕೆ ಇರಿಸಲಾಗಿದೆ ಎಂದು ತಿಳಿಸಿದ್ದಾರೆ.

ಜನವರಿ 10ರ  ಬೆಳಗ್ಗೆ 10 ಗಂಟೆಗೆ ಪ್ರದರ್ಶನ ಉದ್ಘಾಟನೆಯಾಗಲಿದ್ದು ಜನವರಿ 12ರವರೆಗೆ ಪ್ರತಿ ದಿನ ಬೆಳಗ್ಗೆ 10 ರಿಂದ ಸಂಜೆ 7.30 ರವರೆಗೆ ಪ್ರದರ್ಶನವಿರಲಿದೆ ಎಂದು ಅರುಣ್ ಯೋಗಿರಾಜ್ ತಿಳಿಸಿದ್ದಾರೆ.

Key words: Exhibition, Ayodhya, Shri Ram Lalla, mysore, Arun yogiraj

The post ಜ.10 ರಿಂದ ಅಯೋಧ್ಯೆ ಶ್ರೀ ರಾಮಲಲ್ಲಾ ಮೂರ್ತಿಗೆ ನಿರ್ಮಿಸಿದ್ದ ಪೀಠ ಮತ್ತು ಉಳಿ, ಸುತ್ತಿಗೆಗಳ ಪ್ರದರ್ಶನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಖಾದಿ ಉತ್ಸವ, ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
ಬೆಳಗಾವಿ ಡಿಸೆಂಬರ್, 26,2024 (www.justkannada.in): ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ವಿಶೇಷವಾಗಿ ರೂಪಿಸಿರುವ ಸರಸ್ ಮೇಳ ಮತ್ತು  ಖಾದಿ ಉತ್ಸವ, ವಸ್ತುಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್ ಅವರು ನಗರದ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ  ಗುರುವಾರ ವಿದ್ಯುಕ್ತ ಚಾಲನೆ ನೀಡಿದರು.

ಬೆಳಗ್ಗೆ ನಗರದ ಟಿಳಕವಾಡಿಯಲ್ಲಿನ ವೀರಸೌಧದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ನೇರವಾಗಿ ಸರ್ದಾರ್ ಹೈಸ್ಕೂಲ್ ಮೈದಾನಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹಾಗೂ ಇನ್ನೀತರ ಗಣ್ಯರು ಆತ್ಮೀಯವಾಗಿ ಬರಮಾಡಿಕೊಂಡರು.

ಶತಮಾನೋತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಸಚಿವ ಎಚ್.ಕೆ.ಪಾಟೀಲ್ , ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ, ಕೆ.ಎಚ್.ಮುನಿಯಪ್ಪ, ಲಕ್ಷ್ಮಿ ಹೆಬ್ಬಾಳ್ಕರ್, ಎಂ.ಬಿ.ಪಾಟೀಲ್ , ಡಾ. ಎಂ.ಸಿ.ಸುಧಾಕರ, ದಿನೇಶ್ ಗುಂಡೂರಾವ್, ಭೈರತಿ ಸುರೇಶ, ಶಾಸಕರಾದ ಆರ್ ವಿ ದೇಶಪಾಂಡೆ, ದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಸೇರಿದಂತೆ ಹಲವಾರು ಗಣ್ಯರೊಂದಿಗೆ  ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್, ಬೆಳಗಾವಿ ನಗರದಲ್ಲಿ ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳು ಹಾಗೂ ಖಾದಿ ಉತ್ಪನ್ನಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ ‘ಅಸ್ಮಿತೆ’ ವ್ಯಾಪಾರ ಮೇಳ-2024ವನ್ನು ಉದ್ಘಾಟಿಸಿದರು.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ ಮತ್ತು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಮತ್ತು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಾನಗರ ಪಾಲಿಕೆ ಸಹಭಾಗಿತ್ವದಲ್ಲಿ  ಈ  ಸರಸ್ ಮೇಳ  ಮತ್ತು ಖಾದಿ ಉತ್ಸವವು  ಆರಂಭವಾಗಿದ್ದು, ಡಿ.26ರಿಂದ ಜನವರಿ 04ರವರೆಗೆ ನಡೆಯಲಿದೆ.

ಎಲ್ಲಾ ಜಿಲ್ಲೆಗಳಿಂದ ಸ್ವ-ಸಹಾಯ ಗುಂಪಿನ ಮಹಿಳೆಯರು ಭಾಗಿ..

ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸ್ವ-ಸಹಾಯ ಗುಂಪಿನ ಮಹಿಳೆಯರು ತಮ್ಮ ತಮ್ಮ ಜಿಲ್ಲೆಯ ಪ್ರಮುಖ ಉತ್ಪನ್ನಗಳೊಂದಿಗೆ ಭಾಗವಹಿಸಿದ್ದು, ಒಟ್ಟು 150 ಮಳಿಗೆಗಳನ್ನು ಸ್ಥಾಪಿಸಲಾಗಿದೆ.  ಅದರಲ್ಲಿ 10 ಆಹಾರ ಮೇಳದ ಮಳಿಗೆಗಳು ಮತ್ತು 50 ಖಾದಿ ಉತ್ಪನ್ನಗಳ ಮೇಳಗಳು ಒಳಗೊಂಡಿದೆ. ಈ ಮೇಳಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶವಿದ್ದು, ದಿನಾಂಕ:26-12-2024 ರಿಂದ 04.01.2025ರವರೆಗೆ ಪ್ರತಿ ದಿನ ಬೆಳಿಗ್ಗೆ 10.30 ಯಿಂದ ರಾತ್ರಿ 9.30 ರವರೆಗೆ ಪ್ರದರ್ಶನ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

ಪ್ರತಿ ದಿನ ಸಾಂಸ್ಕೃತಿಕ ಕಾರ್ಯಕ್ರಮ.

ಪ್ರತಿ ದಿನ ಸಂಜೆ 6.30 ರಿಂದ 9.00 ಗಂಟೆಯವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಬೆಳಗಾವಿಯಲ್ಲಿ ಆಯೋಜಿಸಲಾಗುತ್ತಿರುವ ಸತತ 4ನೇ ವರ್ಷದ ಈ ಮೇಳದಲ್ಲಿ ಪ್ರಮುಖವಾಗಿ ನಗರ ಹಾಗೂ ಗ್ರಾಮೀಣ ಸ್ವ-ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸುವ ಉತ್ಪನ್ನಗಳು ಮಾರಾಟ ಮಾಡುವುದು ವಿಶೇಷತೆಯಾಗಿದೆ.

ಆಕರ್ಷಣೀಯ ಅಕ್ಕ ಕೆಫೆ:

ಸರ್ಕಾರವು 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ರಾಜ್ಯದಲ್ಲಿ 50 ‘ಅಕ್ಕ ಕೆಫೆ’ಗಳನ್ನು ಒಂದೇ ಮಾದರಿ ವಿನ್ಯಾಸದಡಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಕಾರ್ಯಕ್ರಮದಡಿ ಅಂದಾಜು 1200 ಸ್ವ-ಸಹಾಯ ಗುಂಪಿನ ಮಹಿಳೆಯರಿಗೆ ಜೀವನೋಪಾಯಕ್ಕೆ ಅನುಕೂಲ ಕಲ್ಪಿಸಲಾಗುತ್ತಿದೆ. ಮುಂದುವರೆದು, ‘ಅಕ್ಕ-ಕಫೆ’ ಕಾರ್ಯಕ್ರಮದ ಭಾಗವಾಗಿ ಈ ಮೇಳದ ಮೈದಾನದಲ್ಲಿನ ಆಹಾರ ಕೋರ್ಟ್‌ನ್ನು “ಅಕ್ಕ-ಕೆಫೆ” ಶೀರ್ಷಿಕೆಯಡಿ ಆಕರ್ಷಣೀಯವಾಗಿ ಸಿದ್ದಪಡಿಸಲಾಗಿದೆ.

ಸ್ಥಳದಲ್ಲೇ ಆಹಾರ ತಯಾರಿಕೆ..

ಈ ಆಹಾರ ಮಳಿಗೆಗಳಲ್ಲಿ ಉತ್ತರ ಕರ್ನಾಟಕದಲ್ಲಿ ಹೆಸರುವಾಸಿಯಾದ ಗಿರಮಿಟ್/ಚುರುಮರಿ ಮಂಡಕ್ಕಿ, ಜೋಳದ ಖಡಕ್ ರೊಟ್ಟಿ ಸೇರಿದಂತೆ ಹೋಳಿಗೆ, ಮಂಗಳೂರು ನೀರ್‌ ದೋಸೆ ಮತ್ತು ಮಾಂಸಹಾರಿ ಆಹಾರಗಳಾದ ಬ್ಯಾಂಬು ಬಿರಿಯಾನಿ ಮುಂತಾದವುಗಳನ್ನು ಸ್ಥಳದಲ್ಲೇ ತಯಾರಿಸಿ ಕೊಡಲಾಗುತ್ತಿದೆ.

ವಿಶೇಷ ಅಭಿಯಾನ:

ರಾಜ್ಯದಲ್ಲಿ ಅಭಿಯಾನದಡಿ 2.79 ಲಕ್ಷ ಸ್ವ-ಸಹಾಯ ಗುಂಪುಗಳಡಿ 29.66 ಲಕ್ಷ ಕುಟುಂಬಗಳನ್ನು ಗ್ರಾಮೀಣ ಹಾಗೂ ನಗರ ಜೀವನೋಪಾಯ ಅಭಿಯಾನದಡಿ ಹಾಗೂ 45 ಸಾವಿರ ಸ್ವ-ಸಹಾಯ ಗುಂಪುಗಳಡಿ 4.50 ಲಕ್ಷ ಕುಟುಂಬಗಳನ್ನು ಗ್ರಾಮೀಣ ಹಾಗೂ ನಗರ ಜೀವನೋಪಾಯಅಭಿಯಾನದಡಿ ಸಂಘಟಿಸಲಾಗಿದ್ದು, ಪ್ರತಿಯೊಬ್ಬ ಮಹಿಳೆಯು ಸ್ಮಾವಲಂಬನೆಯ ಬದುಕಿನೊಂದಿಗೆ ತನ್ನ ಕುಟುಂಬದ ಅಭಿವೃದ್ಧಿಗೆ ಪೂರಕ ಸೇವೆಗಳನ್ನು ಪಡೆಯುವಲ್ಲಿ ಪೂರಕ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ.

ಉತ್ಪನ್ನಗಳಿಗೆ ಮಾರುಕಟ್ಟೆ:

ರಾಜ್ಯದಲ್ಲಿ ಈ ಮಹಿಳೆಯರು ಉತ್ಪನ್ನಗಳ ಮಾರಾಟಕ್ಕೆ ಪ್ರತಿಯೊಂದು ಹಳ್ಳಿ, ಸಂತೆ, ತಾಲ್ಲೂಕು ಮಟ್ಟದಲ್ಲಿ ಮಾಸಿಕ ಸಂತೆ, ಜಿಲ್ಲಾ ವಸ್ತು ಪ್ರದರ್ಶನ ಮಾರಾಟ ಮೇಳ ಏರ್ಪಡಿಸುವುದಷ್ಟೆ ಅಲ್ಲದೆ ಇತರೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ನಡೆಯುವ ಮೇಳಗಳಿಗೆ ರಾಜ್ಯದ ಮಹಿಳೆಯರನ್ನು ನಿಯೋಜನೆ ಮಾಡುವ ಮೂಲಕ ಅವರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಬೆಳಗಾವಿಯಲ್ಲಿ ಕಳೆದ 3 ವರ್ಷದಿಂದ ಬೃಹತ್ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಿದಂತೆ ಈ ವರ್ಷವು ಸಹ  ಮೇಳ ಆಯೋಜಿಸಲಾಗಿದೆ ಎಂದು ರಾಷ್ಟ್ರೀಯ ಜೀವನೋಪಾಯ ಅಭಿಯಾನದ ‌ನಿರ್ದೇಶಕಿ ಪಿ.ಐ.ವಿದ್ಯಾ ಅವರು ತಿಳಿಸಿದರು.

ನವನವೀನ ಉತ್ಪನ್ನಗಳು:

ಬೆಳಗಾವಿಯ ಈ ಮೇಳದ ಮಳಿಗೆಗಳಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶದ ಸ್ವ-ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸಿರುವ ಉತ್ಪನ್ನಗಳಾದ ಚನ್ನಪಟ್ಟಣದ ಮರದ ಗೊಂಬೆಗಳು, ಕೊಪ್ಪಳದ ಕಿನ್ನಾಳ ಆಟದ ಸಾಮಾನುಗಳು, ಮೊಳಕಾಲ್ಮೂರು ಸೀರೆಗಳು, ಇಳಕಲ್ ಸೀರೆಗಳು, ರೇಷ್ಮೆ ಸೀರೆಗಳು, ವಿವಿಧ ನವಾಕರ್ಷಣೆಯ ಬಟ್ಟೆಗಳು, ನಾರಿನ ಉತ್ಪನ್ನದ ಬ್ಯಾಗ್ ಗಳು, ಮಸಾಲಾ ಉತ್ಪನ್ನಗಳು, ಸಿರಿ ಧಾನ್ಯ ಉತ್ಪನ್ನಗಳು, ಮೌಲ್ಯವರ್ಧಿತ ಕರಾವಳಿ ಉತ್ಪನ್ನಗಳು, ವಿವಿಧ ಬಗೆಯ ಖಾದಿ ಉತ್ಪನ್ನಗಳು, ಬಾಳೆ ನಾರಿನಿಂದ ಉತ್ಪಾದಿಸಿದ ಉತ್ಪನ್ನಗಳು, ಗೃಹಾಲಂಕಾರಿಕ ವಸ್ತುಗಳು, ಆಯುರ್ವೇದ ಔಷಧಿಯುತ ಉತ್ಪನ್ನಗಳು, ಪಾರಂಪರಿಕ ವಸ್ತುಗಳು, ಗೃಹೋಪಯೋಗಿ ವಸ್ತುಗಳು, ನವೀನ ವಿನ್ಯಾಸದ ಆಭರಣಗಳು, ಆಹಾರ ಉತ್ಪನ್ನಗಳು ಸೇರಿದಂತೆ ಅನೇಕ ಉತ್ಪನ್ನಗಳು  ಸಾರ್ವಜನಿಕರಿಗೆ ಕೈಗೆಟುಕುವ ಬೆಲೆಯಲ್ಲಿ ಲಭ್ಯವಿವೆ.

Key words: CM Siddaramaiah, inaugurates, Khadi festival, exhibition

The post ಖಾದಿ ಉತ್ಸವ, ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸೆ. 26ರಿಂದ ಮೈಸೂರು ದಸರಾ ವಸ್ತು ಪ್ರದರ್ಶನ ಪ್ರಾರಂಭ: ಈ ಬಾರಿ ವಿಶೇಷತೆ ಏನು..?
ಮೈಸೂರು,ಆಗಸ್ಟ್,24,2022(www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಒಂದುವರೆ ತಿಂಗಳ ಮುಂಚೆಯೇ ಸಕಲ ಸಿದ್ಧತೆ ಮಾಡಲಾಗುತ್ತಿದ್ದು ಈ ನಡುವೆ  ಸೆಪ್ಟಂಬರ್ 26 ರಿಂದ ಈ ಬಾರಿ ದಸರಾ ವಸ್ತು ಪ್ರದರ್ಶನ ಪ್ರಾರಂಭವಾಗಲಿದೆ.

ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಮಾಹಿತಿ ನೀಡಿದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಮೂರ್ತಿ , ವಿಶೇಷ ಕಾರ್ಯಕ್ರಮಗಳೊಂದಿಗೆ 90 ದಿನಗಳ ಕಾಲ ವಸ್ತುಪ್ರದರ್ಶನ  ಆಯೋಜನೆ ಮಾಡಲಾಗಿದೆ. ಈ ಬಾರಿಯ ವಸ್ತುಪ್ರದರ್ಶನದಲ್ಲಿ ಪುನೀತ್ ರಾಜ್ ಕುಮಾರ್ ನೆನಪಿಗಾಗಿ 7 ಸ್ಯಾಂಡ್ ಮ್ಯೂಸಿಯಂ ಆಯೋಜನೆ ಮಾಡಲಾಗಿದೆ, ಯೋಗ 3ಡಿ ವಿಡಿಯೋ ಮ್ಯಾಪಿಂಗ್ ಇರಲಿದೆ ಎಂದರು.

ಹಾಗೆಯೇ ಆವರಣದಲ್ಲಿ ವೆಜ್ ಅಂಡ್ ನಾನ್ ವೆಜ್ ಪ್ರತ್ಯೇಕ ಸ್ಟಾಲ್ ಇರಲಿದೆ.  6 ಮಂದಿ ಸ್ವಾತಂತ್ರ್ಯ ಹೋರಾಟಗಾರರ ಮರಳಾಕೃತಿ ನಿರ್ಮಿಸಲಾಗುತ್ತದೆ, ಆ 6 ಮಂದಿ ಸ್ವಾತಂತ್ರ್ಯ ಹೋರಾಟಗಾರರನ್ನ  ಇನ್ನು ಆಯ್ಕೆ ಮಾಡಿಲ್ಲ. ಇನ್ನು ಕಾವೇರಿ ಬಹುಮಾಧ್ಯಮ ಕಲಾ ಗ್ಯಾಲರಿ ಉದ್ಘಾಟನೆಯಾಗಲಿದೆ.

ವಸ್ತುಪ್ರದರ್ಶನದ ಅವರಣವನ್ನ ಪ್ಲಾಸ್ಟಿಕ್ ಮುಕ್ತ ವಲಯ ಎಂದು ಘೋಷಣೆ ಹಿನ್ನೆಲೆ ಪ್ಲಾಸ್ಟಿಕ್ ಬಳಸುವಂತಿಲ್ಲ. ಪ್ಲಾಸ್ಟಿಕ್ ಬಳಕೆ ತಡೆಗಟ್ಟಲು  ಪ್ರಾಧಿಕಾರದ ವತಿಯಿಂದಲೇ  ಆರ್ ಓ ಪ್ಲಾಂಟ್ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತದೆ. ಎರಡು ವರ್ಷಗಳ ಕೋವಿಡ್ ಬಳಿಕ ಅದ್ದೂರಿ ವಸ್ತು ಪ್ರದರ್ಶನ ನಡೆಯುತ್ತಿದ್ದು, ಈ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು, ನಗರದ ಜನತೆ ಆಗಮಿಸುವಂತೆ ಮಿರ್ಲೆ ಶ್ರೀನಿವಾಸ್ ಗೌಡ ಮನವಿ ಮಾಡಿದ್ದಾರೆ.

Key words: Mysore dasara- exhibition –sep 26

ENGLISH SUMMARY…

Mysuru Dasara exhibition from Sept. 26: What are this year’s specialities?

Mysuru, August 24, 2022 (www.justkannada.in): Preparations for the historic Mysuru Dasara have already begun. The popular Mysuru Dasara exhibition will begin from September 26 this year.

Addressing a press meet in Mysuru today, Karnataka Exhibition Authority Chairman Mirle Srinivasamurthy informed that the dasara exhibition will be held for 90 days along with several special programs. A sand museum in memory of Sandalwood’s power star Puneeth Rajkumar will be organized at the Dasara exhibition, with Yoga 3D video mapping.

Vegetarian and non vegetarian food stalls will be there. The sand museum will include replicas of 6 freedom fighters in sand. However, the six freedom fighters names are yet to be finalized. Kaveri Multimedia Art Gallery will be inaugurated.

The Dasara Exhibition grounds has been announced as plastic free zone and hence plastic usage has been prohibited. The Authority will make arrangements to provide an RO plant for drinking water purpose, and to prevent plastic usage. Plans have been made to conduct the Dasara exhibition this year in a grand manner, as it was not possible to run the exhibition for the last two years due to Covid. Srinivasgowda has also urged the people to come and see the exhibition in large numbers.

Keywords: Mysuru Dasara Exhibition/ September 26/specialities

The post ಸೆ. 26ರಿಂದ ಮೈಸೂರು ದಸರಾ ವಸ್ತು ಪ್ರದರ್ಶನ ಪ್ರಾರಂಭ: ಈ ಬಾರಿ ವಿಶೇಷತೆ ಏನು..? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸೈನ್ಸ್ ಎಕ್ಸ್‌ ಪೊನಲ್ಲಿ ಗಮನ ಸೆಳೆದ ಮೈಸೂರು ವಿವಿ ಜೆನಿಟಿಕ್ಸ್ ವಿಭಾಗದ ವಸ್ತುಪ್ರದರ್ಶನ.
ಮೈಸೂರು,ಜುಲೈ,9,2022(www.justkannada.in): ಸೈನ್ಸ್ ಫೌಂಡೇಶನ್ ವತಿಯಿಂದ ನಗರದ ವಿಜಯನಗರ 2ನೇ ಹಂತದಲ್ಲಿರುವ ಸದ್ವಿದ್ಯಾ ಸೆಮಿ ರೆಸಿಡೆನ್ಷಿಯಲ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಸೈನ್ಸ್ ಎಕ್ಸ್‌ ಪೊ-2022ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಜೆನೆಟಿಕ್ಸ್ ಹಾಗೂ ಜೆನೊಮಿಕ್ಸ್ ವಿಭಾಗದ ವಸ್ತು ಪ್ರದರ್ಶನ ಗಮನ ಸೆಳೆಯುತ್ತಿದೆ.

‘‘ಅನುವಂಶಿಯ ಕಾಯಿಲೆಗಳು ಯಾಕೆ ಬರುತ್ತದೆ. ಅದರಲ್ಲಿ ಎಷ್ಟು ವಿಧಗಳಿವೆ? ಕಾಯಿಲೆ ಲಕ್ಷಣ ಏನು? ಅನುವಂಶಿಕ ಕಾಯಿಲೆಗೆ ಮದ್ದಿಲ್ಲ. ವಾಸಿ ಮಾಡಲು ಆಗುವುದಿಲ್ಲ. ಆದರೆ, ಕಾಯಿಲೆ ಬರದಂತೆ ನಿರ್ವಹಣೆ ಮಾಡಬಹುದು. ಸಂಬಂಧದಲ್ಲಿ ಯಾಕೆ ಮದುವೆ ಆಗಬಾರದು. ಮದುವೆಯಾದರೆ ಅನುವಂಶಿಯ ಕಾಯಿಲೆ ಹೇಗೆ ಬರುತ್ತದೆ? ಎಂಬಿತ್ಯಾದಿ ಅಂಶಗಳನ್ನು ಸೈನ್ಸ್ ಎಕ್ಸ್‌ ಪೊ ನಲ್ಲಿ ನಮ್ಮ ವಿದ್ಯಾರ್ಥಿಗಳು ಮಕ್ಕಳಿಗೆ ವಿವರಿಸುತ್ತಿದ್ದಾರೆ. ಅಲ್ಲದೆ, ಪ್ರತಿಯೊಂದು ಜೀವಿಯಲ್ಲೂ ನಿರ್ದಿಷ್ಟ ಸಂಖ್ಯೆಯ ವರ್ಣತಂತು ಇರುತ್ತದೆ. ಒಂದು ವೇಳೆ ಈ ವರ್ಣತಂತು ಸಂಖ್ಯೆಯಲ್ಲಿ ವ್ಯತ್ಯಾಸವಾದರೆ ಹಲವು ರೀತಿಯ ಕಾಯಿಲೆ ಬರುತ್ತದೆ. ಬುದ್ಧಿಮಾಂಧ್ಯತೆ ಕೂಡ ಕಾಡಬಹುದು,’’ ಎಂದು ಜೆನೆಟಿಕ್ಸ್ ಹಾಗೂ ಜೆನೊಮಿಕ್ಸ್ ವಿಭಾಗದ ಅಧ್ಯಕ್ಷರಾದ ಡಾ.ಸುತ್ತೂರು ಮಾಲಿನಿ ತಿಳಿಸಿದ್ದಾರೆ.

ಕೆಲವು ಹೆಣ್ಣುಮಕ್ಕಳು ಹೆಣ್ತನದ ಲಕ್ಷಣಗಳು ಇರುವುದಿಲ್ಲ. ಗಂಡು ಮಕ್ಕಳಲ್ಲೂ ಇದೆ ಸಮಸ್ಯೆ ಇರುತ್ತದೆ. ಎಕ್ಸ್‌ ವೈ ಜೊತೆಗೆ ಮತ್ತೊಂದು ಎಕ್ಸ್ ಇದ್ದರೆ ಈ ಸಮಸ್ಯೆ ಕಾಡುತ್ತದೆ. ಇದನ್ನು ಗೊಂಬೆಗಳ ಮೂಲಕ ವಿವರಿಸುವ ಪ್ರಯತ್ನ ಮಾಡಲಾಗಿದೆ. ವರ್ಣತಂತುವಿನ ವ್ಯತ್ಯಾಸ ಬಗ್ಗೆ ಸಾಕಷ್ಟು ಮಾಹಿತಿ ಇದೆ. ವಯಸ್ಸಾದ ತಾಯಿ ಮಗುವನ್ನು ಹೆತ್ತರೆ ಹಾಗೂ ಕೆಲವೊಂದು ಆಹಾರ ಪದಾರ್ಥ ಸೇವಿಸಿದರೆ ಮಕ್ಕಳಿಗೆ ಈ ರೀತಿಯ ಸಮಸ್ಯೆ ಕಾಡುತ್ತದೆ,’’ ಎಂದು ತಿಳಿಸಿದ್ದಾರೆ.

ಇದೇ ಎಕ್ಸ್‌ ಪೊನಲ್ಲಿ ಇಸ್ರೋ ಸಂಸ್ಥೆಯ ಗಾಲಿಗಳ ಮೇಲೆ ಬಾಹ್ಯಾಕಾಶ ಸಂಚಾರಿ ಬಸ್, ಆರ್ಯಭಟ ಸಂಸ್ಥೆಯಿಂದ ಸಂಚಾರಿ ತಾರಾಲಯ-3ಡಿ ವಿಡಿಯೊ ಪ್ರದರ್ಶನ ಗಮನ ಸೆಳೆಯುತ್ತಿದೆ.

Key words: Mysore University – Genetics –department- exhibition – Science Expo- attracted

The post ಸೈನ್ಸ್ ಎಕ್ಸ್‌ ಪೊನಲ್ಲಿ ಗಮನ ಸೆಳೆದ ಮೈಸೂರು ವಿವಿ ಜೆನಿಟಿಕ್ಸ್ ವಿಭಾಗದ ವಸ್ತುಪ್ರದರ್ಶನ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು: ಆಯುಷ್ ಡಿಜಿಟಲ್ ವಸ್ತುಪ್ರದರ್ಶನ ಅವಧಿ ವಿಸ್ತರಣೆ.
ಮೈಸೂರು,ಜೂನ್,23,2022(www.justkannada.in): ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಗರದ ದಸರಾ ವಸ್ತುಪ್ರದರ್ಶನ ಆವರಣದಲ್ಲಿ ನಡೆಯುತ್ತಿರುವ ಆಯುಷ್ ವಸ್ತುಪ್ರದರ್ಶನ ಅವಧಿಯನ್ನು ವಿಸ್ತರಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಶಾಸಕ ಎಸ್.ಎ.ರಾಮದಾಸ್, ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ವತಿಯಿಂದ ವಸ್ತುಪ್ರದರ್ಶನದಲ್ಲಿ ಯೋಗಕ್ಕೆ ಸಂಬಂಧಪಟ್ಟ ಮಾಹಿತಿಯ ಪ್ರಾತ್ಯಕ್ಷಿಕೆ ಒಳಗೊಂಡ ಡಿಜಿಟಲ್ ವಸ್ತುಪ್ರದರ್ಶನಕ್ಕೆ ಸಾರ್ವಜನಿಕರಿಂದ ಹೆಚ್ಚು ಸ್ಪಂದನೆ ಬಂದಿದೆ. ಈ ಹಿನ್ನೆಲೆಯಲ್ಲಿ ಜೂನ್ 26 ಭಾನುವಾರದವರೆಗೆ ಸಾರ್ವಜನಿಕ ವೀಕ್ಷಣೆಗೆ ವಸ್ತುಪ್ರದರ್ಶನಕ್ಕೆ ಅವಕಾಶ ನೀಡಲಾಗಿದೆ. ಸದರಿ ವಿಷಯವಾಗಿ ಜನರ ಬೇಡಿಕೆಗೆ ಸ್ಪಂದಿಸಿ ಆಯುಸ್ ಡಿಜಿಟಲ್ ವಸ್ತುಪ್ರದರ್ಶನದ ಅವಧಿ ವಿಸ್ತರಣೆ ಮಾಡಿರುವುದಕ್ಕೆ ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತೇವೆ.

ಅವಧಿ ವಿಸ್ತರಣೆಯಾಗಿರುವುದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು, ಯೋಗ ಅಭಿಮಾನಿಗಳು ಪ್ರತಿನಿತ್ಯ ಸಹಸ್ರ ಸಂಖ್ಯೆಯಲ್ಲಿ ಆಗಮಿಸಿ ಜ್ಞಾನಾರ್ಜನೆಗೊಳ್ಳುವುದರೊಂದಿಗೆ ವಸ್ತುಪ್ರದರ್ಶನದ ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಎಸ್.ಎ ರಾಮದಾಸ್ ಮನವಿ ಮಾಡಿದ್ದಾರೆ.

Key words: Mysore-Aayush -Digital –Exhibition-Period-Extension.

The post ಮೈಸೂರು: ಆಯುಷ್ ಡಿಜಿಟಲ್ ವಸ್ತುಪ್ರದರ್ಶನ ಅವಧಿ ವಿಸ್ತರಣೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.