Flood Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಮೊದಲ ಬೆಳೆಗೆ ನೀರು ಹರಿಸುವ ಮುನ್ನ ಅಗತ್ಯ ದುರಸ್ತಿ ಕಾರ್ಯಗಳನ್ನ ಪೂರ್ಣಗೊಳಿಸಿ- ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಸೆಪ್ಟಂಬರ್,8,2025 (www.justkannada.in): ತುಂಗಭದ್ರ ಅಣ್ಣೆಕಟ್ಟೆಯಿಂದ ಮೊದಲ ಬೆಳೆಗೆ ನೀರು ಹರಿಸುವ ಮುನ್ನ ಅಗತ್ಯ ದುರಸ್ತಿ ಕಾರ್ಯಗಳನ್ನ ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ  ಸೂಚನೆ ನೀಡಿದರು.

ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಚರ್ಚಿಸಿದರು.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಕ್ರೆಸ್ಟ್ ಗೇಟ್ ಗಳ ಬದಲಾವಣೆ, ನಿರ್ವಹಣೆ  ಸೇರಿದಂತೆ ಅಣೆಕಟ್ಟಿನ ಮೂಲಸೌಕರ್ಯಗಳ ಅಭಿವೃದ್ಧಿಪಡಿಸುವ ಕಾರ್ಯ ಕೇಂದ್ರ ಸರ್ಕಾರದ ಅಧೀನದ ತುಂಗಾಭದ್ರಾ ಮಂಡಳಿಯ ವ್ಯಾಪ್ತಿಗೆ ಬರುತ್ತದೆ.  ಹೀಗಾಗಿ ಮಂಡಳಿಯ ಜವಾಬ್ದಾರಿ ಹೆಚ್ಚು

ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಜೂನ್ 1ರಿಂದ ಸೆಪ್ಟಂಬರ್ ಮೊದಲ ವಾರದವರೆಗೆ ವಾಡಿಕೆಗಿಂತ ಶೇ.4ರಷ್ಟು ಹೆಚ್ಚು ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆ ಮಳೆ 721ಮಿ.ಮೀ ಇದ್ದು, 753 ಮಿ.ಮೀ ಮಳೆ ದಾಖಲಾಗಿದೆ. ಕಳೆದ ವರ್ಷ ಶೇ.23ರಷ್ಟು ಹೆಚ್ಚುವರಿ ಮಳೆ ದಾಖಲಾಗಿತ್ತು. ಈ ಅವಧಿಯಲ್ಲಿ ಚಾಮರಾಜನಗರದಲ್ಲಿ ಶೇ.24ರಷ್ಟು ಕಡಿಮೆ ಮಳೆಯಾಗಿದೆ. ವಿಜಯಪುರ, ಗದಗ, ಬಾಗಲಕೋಟೆ, ದಾವಣಗೆರೆ, ತುಮಕೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಶೇ.20ಕ್ಕಿಂತ ಹೆಚ್ಚು ಮಳೆ ದಾಖಲಾಗಿದೆ. ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಕಳೆದ ವರ್ಷಕ್ಕೆ ಹೋಲಿಸಿದರೆ ಈಗ ಸ್ವಲ್ಪ  ಕಡಿಮೆಯಿದೆ. ಪ್ರಮುಖ ಜಲಾಶಯಗಳ ಗರಿಷ್ಟ ಸಾಮರ್ಥ್ಯ 895.62 ಟಿಎಂಸಿ ಇದ್ದು, ಪ್ರಸ್ತುತ 840.52 ಟಿಎಂಸಿ ಸಂಗ್ರಹವಿದೆ. ಕಳೆದ ವರ್ಷ ಈ ಅವಧಿಯಲ್ಲಿ 856.17 ಟಿಎಂಸಿ ಸಂಗ್ರಹ ಇತ್ತು ಎಂದು ಸಿದ್ದರಾಮಯ್ಯ ತಿಳಿಸಿದರು.

ತುಂಗಾಭದ್ರಾ ಅಣೆಕಟ್ಟಿನ 32 ಕ್ರೆಸ್ಟ್ ಗೇಟ್ ಬದಲಾವಣೆಗೆ ಟೆಂಡರ್ ಆಗಿದ್ದು, 8ಕ್ರೆಸ್ಟ್ ಗೇಟ್ಗಳು ಅಳವಡಿಕೆಗೆ ಸಿದ್ಧವಿದೆ. ಕ್ರೆಸ್ಟ್ಗೇಟು ಬದಲಾವಣೆ ಸೇರಿದಂತೆ ಅಣೆಕಟ್ಟಿನ ಮೂಲಸೌಕರ್ಯಗಳ ಅಭಿವೃದ್ಧಿಪಡಿಸುವ ಕಾರ್ಯ ತುಂಗಾಭದ್ರಾ ಮಂಡಳಿಯ ವ್ಯಾಪ್ತಿಗೆ ಬರುತ್ತದೆ.  ತುಂಗಾ ಭದ್ರಾ ಅಣೆಕಟ್ಟಿನಲ್ಲಿ ಪ್ರಥಮ ಬೆಳೆಗೆ ಮಾತ್ರ ನೀರು ಲಭ್ಯವಿದ್ದು, ಎರಡನೇ ಬೆಳೆಗೆ ನೀರು ಹರಿಸಲು ಪ್ರಸ್ತುತ ಸನ್ನಿವೇಶದಲ್ಲಿ ಸಾಧ್ಯವಿಲ್ಲ. ನೀರು ಹರಿಸುವ ಪೂರ್ವದಲ್ಲೇ ಎಲ್ಲಾ ಸಣ್ಣಪುಟ್ಟ ದುರಸ್ತಿ ಕಾರ್ಯಗಳನ್ನು  ಪೂರ್ಣಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.

ಮಳೆಯಿಂದಾಗಿ 111 ಮಂದಿ ಸಾವು : 5.55ಕೋಟಿ ಪರಿಹಾರ

ಮಳೆ ಹಾನಿಯಿಂದ ಹಾನಿಗೀಡಾಗಿರುವ ಬೆಳೆ, ಮನೆಗಳಿಗೆ ಸೂಕ್ತ ಪರಿಹಾರವನ್ನು ತಕ್ಷಣ ಒದಗಿಸಲು ಕ್ರಮ ಕೈಗೊಳ್ಳಬೇಕು. ಮುಂಗಾರು ಹಂಗಾಮಿನಲ್ಲಿ ಶೇ.98 ಬಿತ್ತನೆ ಪೂರ್ಣಗೊಂಡಿದೆ. ಬಿತ್ತನೆ ಗುರಿ 82.50 ಲಕ್ಷ ಹೆಕ್ಟೇರ್ ಇದ್ದು, 80.76 ಲಕ್ಷ ಹೆಕ್ಟೇರ್ ವಾಸ್ತವಿಕ ಬಿತ್ತನೆಯಾಗಿದೆ.  ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ಹಾನಿ ಬಗ್ಗೆ ಪ್ರಾಥಮಿಕ ಸಮೀಕ್ಷೆ ನಡೆಸಲಾಗಿದ್ದು, 480256  ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 40407 ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದ್ದು, ಒಟ್ಟು 520663 ಹೆಕ್ಟೇರ್ ಬೆಳೆ ಹಾನಿಯಾಗಿದೆ.  ಮಳೆಗೆ ಸಂಬಂಧಿಸಿದಂತೆ ಎಪ್ರಿಲ್ ತಿಂಗಳಿನಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 111ಮಂದಿ ಸಾವನ್ನಪ್ಪಿದ್ದು ಎಲ್ಲಾ ಪ್ರಕರಣಗಳಲ್ಲಿ ಪರಿಹಾರ ವಿತರಿಸಲಾಗಿದ್ದು, ಒಟ್ಟು 5.55ಕೋಟಿ ಪರಿಹಾರ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಮಳೆಯಿಂದಾಗಿ 651ಮನೆಗಳು ಸಂಪೂರ್ಣ ಹಾನಿಯಾಗಿದ್ದು, 9087 ಮನೆಗಳು ಭಾಗಶಃ ಹಾನಿಯಾಗಿವೆ. ಸಂಪೂರ್ಣ ಹಾನಿಯಾದ 649 ಮನೆಗಳಿಗೆ ಹಾಗೂ ಭಾಗಶಃ ಹಾನಿಯಾದ 8608 ಮನೆಗಳಿಗೆ ಪರಿಹಾರ ಪಾವತಿಸಲಾಗಿದೆ. ಮನೆ ಹಾನಿಯಾದವರಿಗೆ ಪರಿಹಾರ ಹಾಗೂ ವಿವಿಧ ವಸತಿ ಯೋಜನೆಗಳಡಿ ಮನೆಯನ್ನು ಸಹ ಒದಗಿಸಲು ಕ್ರಮ ಕೈಗೊಳ್ಳಬೇಕು. ಈ ಅವಧಿಯಲ್ಲಿ ಒಟ್ಟು 766 ಜಾನುವಾರುಗಳು ಸಾವಿಗೀಡಾಗಿದ್ದು, ಒಟ್ಟು 1.52 ಕೋಟಿ ಪರಿಹಾರ ವಿತರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: CM Siddaramaiah, Meeting, Officers, Flood, crop

The post ಮೊದಲ ಬೆಳೆಗೆ ನೀರು ಹರಿಸುವ ಮುನ್ನ ಅಗತ್ಯ ದುರಸ್ತಿ ಕಾರ್ಯಗಳನ್ನ ಪೂರ್ಣಗೊಳಿಸಿ- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಡಿಕೆಶಿ ಅವರ ಭೇಟಿ ಪ್ರವಾಹ ವೀಕ್ಷಣೆಗೋ ಅಥವಾ ರಾಜಕಾಲುವೆ ರಕ್ಕಸರ ರಕ್ಷಣೆಗೋ..? ಹೆಚ್.ಡಿಕೆ ಪ್ರಶ್ನೆ
ನವದೆಹಲಿ,ಮೇ,30,2025 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿ ಭೇಟಿ ನೀಡಿದ್ದು ನೆರೆ ಮತ್ತು ಮಳೆ ಅನಾಹುತ ವೀಕ್ಷಿಸಲಿಕ್ಕಾ ಅಥವಾ ರಾಜಕಾಲುವೆ ಒತ್ತುವರಿದಾರನ್ನು ರಕ್ಷಣೆ ಮಾಡಲಿಕ್ಕಾ? ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ  ಕೇಂದ್ರ ಸಚಿವ  ಹೆಚ್.ಡಿ ಕುಮಾರಸ್ವಾಮಿ, ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿಗೆ ಭೇಟಿ ಕೊಟ್ಟು ಮಳೆ, ನೆರೆ ಪರಿಸ್ಥಿತಿ ವೀಕ್ಷಣೆ ಮಾಡಿರುವುದೇನೋ ಸರಿ. ಆದರೆ, ಅವರ ಭೇಟಿ ಪ್ರವಾಹ ವೀಕ್ಷಣೆಗೋ ಅಥವಾ ರಾಜಕಾಲುವೆ ರಕ್ಕಸರ ರಕ್ಷಣೆಗೋ..? ಈ ಬಗ್ಗೆ ಬೆಂಗಳೂರು ಮಹಾಜನತೆಗೆ ಬೆಂಗಳೂರು ಉಸ್ತುವಾರಿ ಸಚಿವರು ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಡಿಸಿಎಂ ಅವರು ಪಾದಸ್ಪರ್ಶ ಮಾಡಿದ್ದ ರಾಜಕಾಲುವೆ ಪುನೀತವಾಗಿರಬೇಕು!! ಪಾಪ.. ಅದೇ ರಾಜಕಾಲುವೆ ಮೇಲೆ ಬೃಹದಾಕಾರವಾಗಿ ಎದ್ದು ನಿಂತಿರುವ ‘ಭಾರೀ ಆಸಾಮಿ’ಯೊಬ್ಬರ ಕಟ್ಟಡ ಅವರ ಕಣ್ಣಿಗೆ ಕಾಣಲಿಲ್ಲವೆ? ರಾಜಾರೋಷವಾಗಿ ರಾಜಕಾಲುವೆಯನ್ನು ಮುಕ್ಕಿ ತಿಂದಿರುವ ಆಸಾಮಿಯ ಬಗ್ಗೆ ಅವರು ಚಕಾರವನ್ನೇ ಎತ್ತಲಿಲ್ಲ!! ಕೊನೆಪಕ್ಷ ಅವರ ಹೆಸರನ್ನೂ ಹೇಳಲಿಲ್ಲ!! ಎಂದು ಕುಮಾರಸ್ವಾಮಿ ಅವರು ಡಿಕೆಶಿ ಕಾಲೆಳೆದಿದ್ದಾರೆ.

ರಾಜಕಾಲುವೆಗಳ ಮೇಲೆ ಐಷಾರಾಮಿ ಸೌಧಗಳನ್ನು ಕಟ್ಟಿಕೊಂಡು ಕೋಟಿ ಕೋಟಿ ದುಡಿಯುತ್ತಿರುವ ರಾಜಕಾಲುವೆ ರಕ್ಕಸರ ವಿರುದ್ಧ ಕ್ರಮ ಜರುಗಿಸುವ ದಮ್ಮು ತಾಕತ್ತು ನಿಮಗೆ  ಇದೆಯಾ ಡಿ.ಕೆ. ಶಿವಕುಮಾರ್ ರವರೇ? ಹೋಗಲಿ, ಅಂಥವರ ವಿರುದ್ಧ ಕ್ರಮ ಜರುಗಿಸಲು ನಿಮ್ಮ ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ, ಅಧಿಕಾರ ನೀಡಿದ್ದೀರಾ? ಒಂದು ವೇಳೆ ನೀಡಿದ್ದರೆ ಆ ಅಕ್ರಮ ಕಟ್ಟಡಗಳು ಇನ್ನೂ ಯಾಕೆ ಹಾಗೆಯೇ ಇವೆ? ಎಂಬುದನ್ನು ನೀವು ಹೇಳಬೇಕಲ್ಲವೇ? ಎಂದು ಕೇಂದ್ರ ಸಚಿವ ಹೆಚ್.ಡಿಕೆ ಕೇಳಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ನೀವು ಕುರ್ಚಿ ಮೇಲೆ ಕೂತು ಎರಡು ವರ್ಷವೇ ಆಯಿತು. ಅದೆಷ್ಟೋ ಬಾರಿ ಸಾಯಿ ಬಡಾವಣೆ ಮುಳುಗಿದ್ದೂ ಆಯಿತು, ತೇಲಿದ್ದೂ ಆಯಿತು! ನಿಮ್ಮಿಂದ ಆಗಲಿ ಅಥವಾ ಕಾಂಗ್ರೆಸ್ ಸರಕಾರದಿಂದ ಆಗಲಿ ಯಾವುದೇ ಪರಿಹಾರ ಸಿಗಲಿಲ್ಲ! ಬಡಾವಣೆಯ ಜನರು ನರಳುತ್ತಿರುವುದು ಮಾತ್ರ ತಪ್ಪಿಲ್ಲ.ಈ ಅಸಡ್ಡೆ ಯಾಕೆ? ಇವರೆಲ್ಲ ತೆರಿಗೆ ಕಟ್ಟುತ್ತಿಲ್ಲವೇ? ಎಂದು ಕೇಂದ್ರ ಸಚಿವ ಹೆಚ್ ಡಿಕೆ ಪ್ರಶ್ನೆ ಮಾಡಿದ್ದಾರೆ.

Key words:  DCM, DK Shivakumar, flood, protect, Rajakaluve, HDK

The post ಡಿಕೆಶಿ ಅವರ ಭೇಟಿ ಪ್ರವಾಹ ವೀಕ್ಷಣೆಗೋ ಅಥವಾ ರಾಜಕಾಲುವೆ ರಕ್ಕಸರ ರಕ್ಷಣೆಗೋ..? ಹೆಚ್.ಡಿಕೆ  ಪ್ರಶ್ನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರವಾಹ‌ಪೀಡಿತ ಸ್ಥಳಗಳಿಗೆ ಭೇಟಿ, ಪರಿಶೀಲನೆ: ಸಂತ್ರಸ್ತರ ಅಹವಾಲು ಆಲಿಸಿದ ಸಿಎಂ ಸಿದ್ದರಾಮಯ್ಯ
ಬೆಳಗಾವಿ, ಆಗಸ್ಟ್ 5, 2024(www.justkannada.in):  ಅತಿವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತಗೊಂಡಿರುವ ಗೋಕಾಕ ನಗರದ ವಿವಿಧ ಪ್ರದೇಶಗಳು ಮತ್ತು ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಭೇಟಿ ನೀಡಿ ಪರಿಶೀಲಿಸಿದರು.

ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ‌ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ರಸ್ತೆ ಮಾರ್ಗವಾಗಿ ಗೋಕಾಕ ನಗರಕ್ಕೆ ಆಗಮಿಸಿದರು. ಅತಿವೃಷ್ಟಿಯಿಂದ ತುಂಬಿ ಹರಿಯುತ್ತಿದ್ದ ಘಟಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರು, ಹೊಸ ಸೇತುವೆ ನಿರ್ಮಾಣಕ್ಕೆ ಮನವಿ ಮಾಡಿದರು. ಸಂಸದ ಪ್ರಿಯಾಂಕಾ ಜಾರಕಿಹೊಳಿ, ವಿಧಾನಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಮತ್ತಿತರರು ಉಪಸ್ಥಿತರಿದ್ದರು.

ಇದಾದ‌ ಬಳಿಕ ಲೋಳಸೂರ ಸೇತುವೆಯ ಬಳಿ ಹಿನ್ನೀರಿನಿಂದ ಒಂದು ವಾರದಿಂದ ಮುಳುಗಡೆಯಾಗಿದ್ದ ಗೋಕಾಕ‌ನಗರದ ಹಳೆ ದನಗಳ ಪೇಟೆ, ಮಟನ್ ಮಾರ್ಕೆಟ್, ಕುಂಬಾರಗಲ್ಲಿ, ಉಪ್ಪಾರಗಲ್ಲಿ, ಭೋಜಗಾರ ಗಲ್ಲಿ ಮತ್ತಿತರ‌ ಪ್ರದೇಶಗಳಿಗೆ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು, ಮಳೆಯಿಂದ‌ ಉಂಟಾಗಿರುವ ಹಾನಿಯನ್ನು ವಿವರಿಸಿದರು. ಸಂಕೇಶ್ವರ-ಯರಗಟ್ಟಿ ರಾಜ್ಯ ಹೆದ್ದಾರಿಯಲ್ಲಿರುವ ಲೋಳಸೂರ ಸೇತುವೆ ತುಂಬಾ ಹಳೆಯದಾಗಿದ್ದು, ಪ್ರತಿವರ್ಷ ಮಳೆಗಾಲದಲ್ಲಿ ಮುಳುಗಡೆಯಾಗುತ್ತಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಆದ್ದರಿಂದ ಎತ್ತರದ ಲೋಳಸೂರ ಸೇತುವೆಯ ನಿರ್ಮಿಸುವ ಅಗತ್ಯವಿದೆ ಎಂದು‌ ಸಚಿವ ಸತೀಶ್ ಜಾರಕಿಹೊಳಿ‌ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ವಿವರಿಸಿದರು.

ಕಾಳಜಿ ಕೇಂದ್ರಕ್ಕೆ‌ ಭೇಟಿ

ಮುಳಗಡೆಯಿಂದ ಸಂತ್ರಸ್ತರಗೊಂಡಿರುವ ಕುಟುಂಬಗಳಿಗೆ ವಸತಿ ಕಲ್ಪಿಸಲು ಗೋಕಾಕ‌ ನಗರದ ಸರಕಾರಿ ಮುನ್ಸಿಪಲ್‌ ಕಾಲೇಜಿನಲ್ಲಿ ಆರಂಭಿಸಲಾಗಿರುವ ಕಾಳಜಿ ಕೇಂದ್ರಕ್ಕೆ‌ ಮುಖ್ಯಮಂತ್ರಿ‌ ಸಿದ್ದರಾಮಯ್ಯನವರು ಭೇಟಿ ನೀಡಿ, ಸಂತ್ರಸ್ತರ‌ ಜತೆ‌ ಚರ್ಚಿಸಿದರು.

ಮನೆಗಳಿಗೆ ನೀರು ನುಗ್ಗಿದ ತಕ್ಷಣವೇ ಅಧಿಕಾರಿಗಳು ಕಾಳಜಿ ಕೇಂದ್ರಕ್ಕೆ ನಮ್ಮನ್ನು ಸ್ಥಳಾಂತರಿಸಿ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದು ಸಂತ್ರಸ್ತ ಕುಟುಂಬದವರು ಸಮಾಧಾನ ವ್ಯಕ್ತಪಡಿಸಿದರು.

ಸಂತ್ರಸ್ತರಿಗೆ ಊಟೋಪಹಾರ ಹಾಗೂ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ENGLISH SUMMARY..

Gokaka: CM visits flood affected areas

Chief Minister Siddaramaiah heard the statement of the victims at the care center

Belgaum, Aug. 5 (Karnataka News): Chief Minister Siddaramaiah on Monday visited and inspected the various areas of Gokak affected by heavy rains and floods and the care center.

He arrived at Sambra airport in Belgaum by special flight and reached Gokak city by road.

He watched the Lolasur bridge which was submerged by the flood in Ghatprabha river which was overflowing due to heavy rains.

On this occasion, MLA Balachandra Jarakiholi appealed for the construction of a new bridge.

MP Priyanka Jarakiholi, Legislative Council member Lakhan Jarakiholi and others were present.

After this, he visited the old cattle town, Mutton Market, Kumbargalli, Upparagalli, Bhojagara Galli and other areas of Gokak, which had been inundated by backwater for a week, near Lolasura Bridge and inspected the damage.

Satish Jarakiholi, the district in-charge minister, explained the damage caused by the rain.

The Lolasura Bridge on the Sankeshwar-Yaragatti State Highway is very old and is causing serious trouble to the public as it gets submerged every year during the rainy season. Therefore, Minister Satish Jarakiholi explained to the Chief Minister that there is a need to build a higher Lolasur Bridge.

Visit to the care center

Chief Minister Siddaramaiah visited the care center that has been started at Government Municipal College in Gokak to provide shelter to the families whose houses were submerged due to flood and interacted with the victims

The affected families expressed relief that immediately after the water entered the houses, the authorities shifted us to the care center and made all kinds of arrangements.

The Chief Minister instructed the officials to provide food and necessary medical facilities to the victims.

Belagavi District In-charge Minister Satish Jarakiholi, Minister of Public Works Department, Women and Child Development Department Lakshmi Hebbalkar, Chief Secretary Shalini Rajneesh and other senior officials were present.

Key words: CM Siddaramaiah, Visit, flood, affected, places

The post ಪ್ರವಾಹ‌ಪೀಡಿತ ಸ್ಥಳಗಳಿಗೆ ಭೇಟಿ, ಪರಿಶೀಲನೆ: ಸಂತ್ರಸ್ತರ ಅಹವಾಲು ಆಲಿಸಿದ ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸರ್ಕಾರಿ ಜಾಗ ಸಿಕ್ಕರೆ ಬೊಕ್ಕಹಳ್ಳಿ ಗ್ರಾಮ ಸ್ಥಳಾಂತರಕ್ಕೆ ಚಿಂತನೆ – ಸಚಿವ ಡಾ.ಹೆಚ್.ಸಿ. ಮಹದೇವಪ್ಪ
ಮೈಸೂರು, ಆಗಸ್ಟ್,3 ,2024 (www.justkannada.in): ವಾಡಿಕೆಗಿಂತ ಈ ಬಾರಿ ಶೇಕಡ 75 ರಷ್ಟು ಹೆಚ್ಚು ಮಳೆ ಸುರಿದಿದ್ದು ಬೊಕ್ಕಹಳ್ಳಿ ಗ್ರಾಮಕ್ಕೆ ಹೆಚ್ಚು ನೀರು ನುಗ್ಗಿದೆ, ಗ್ರಾಮಸ್ಥರು ಗ್ರಾಮದ ಸ್ಥಳಾಂತರಕ್ಕೆ ಒತ್ತಾಯಿಸುತಿದ್ದು ಅಂತಹ ಸಂದರ್ಭ ಸೃಷ್ಟಿಯಾಗಿಲ್ಲ. ಅದರೂ ಗ್ರಾಮಸ್ಥರ ಮನವಿ ಮೇರೆಗೆ ಸರ್ಕಾರಿ ಜಾಗದ ಲಭ್ಯತೆಯ ಆಧಾರದಂತೆ ಗ್ರಾಮ ಸ್ಥಳಾಂತರಿಸಲು ಪರಿಶೀಲಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಅಭಿಪ್ರಾಯಿಸಿದರು.

ನಂಜನಗೂಡು ತಾಲ್ಲೂಕು ಬೊಕ್ಕಹಳ್ಳಿ ಗ್ರಾಮದಲ್ಲಿ ವಿಧಾನ ಪರಿಷತ್ ಸದಸ್ಯಡಾ.ಯತೀಂದ್ರ ಅವರ ಜತೆಗೂಡಿ  ಪ್ರವಾಹ ಪರಿಸ್ಥಿತಿ ವೀಕ್ಷಿಸಿ ಕಾಳಜಿ ಕೇಂದ್ರದಲ್ಲಿನ ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಈ ಬಾರಿ ಹೊಳೆಯಿಂದ 80 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ಬಂದುದರಿಂದ ಗ್ರಾಮದ ಕೆಲ ಜಮೀನುಗಳು ಮುಳುಗಡೆಯಾಗಿ, ಕೆಲ ಮನೆಗಳಿಗೆ ಭಾಗಶಃ ಹಾನಿಯಾಗಿದೆ. 80 ಮನೆಗಳಿಗೆ ನೀರು ನುಗ್ಗಿದ್ದು, 215 ಜನರನ್ನು ಸ್ಥಳಾಂತರಿಸಲಾಗಿದೆ. 78 ಜನ ಕಾಳಜಿ ಕೇಂದ್ರದಲ್ಲಿ ಉಳಿದಿದ್ದಾರೆ. ಜಿಲ್ಲಾಡಳಿತ ತಗ್ಗಿನ ಪ್ರದೇಶದ ಮನೆಗಳವರಿಗೆ ಜಾಗೃತಿ ಮೂಡಿಸುವುದರೊಂದಿಗೆ ಊಟ,ವಸತಿಗಳೊಂದಿಗೆ  ಸಮರ್ಪಕ ವ್ಯವಸ್ಥೆಗಳನ್ನು ಕಲ್ಪಿಸಿದೆ ಎಂದರು.

ಒಟ್ಟಾರೆ ಜಿಲ್ಲೆಯಲ್ಲಿ 345 ಮನೆಗಳಿಗೆ ಹಾನಿಯಾಗಿದ್ದು, 256 ಮನೆಗಳಿಗೆ ಪರಿಹಾರ ನೀಡಲಾಗಿದೆ, 268 ಮನೆಗಳು  ಭಾಗಶಃ ಹಾನಿಯಾಗಿವೆ ಇವುಗಳಿಗೆ ಎನ್.ಡಿ.ಆರ್.ಎಫ್ ನಿಯಮಾವಳಿಯಂತೆ ಪರಿಹಾರ ನೀಡಲಾಗಿದೆ. ಜಿಲ್ಲೆಯಲ್ಲಿ 220 ಶಾಲೆಗಳು,60 ಅಂಗನವಾಡಿ‌ ಕೇಂದ್ರಗಳು, 40 ರಿಂದ 50 ಕಿಮೀ ಗ್ರಾಮೀಣ ರಸ್ತೆ, 25 ಕಿಮೀ ಪಿಡ್ಲೂಡಿ ರಸ್ತೆ ಹಾಳಾಗಿದೆ ಎಂದರು.

ವಿಧಾನ ಪರಿಷತ್ ಸದಸ್ಯರಾದ ಯತೀಂದ್ರ, ಜಿಲ್ಲಾಧಿಕಾರಿ ಲಕ್ಷೀಕಾಂತ ರೆಡ್ಡಿ, ಜಿ.ಪಂ.ಸಿಇಒ ಕೆ.ಎಂ.ಗಾಯತ್ರಿ,ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

Key words: flood, Bokkahalli, government land, Minister, H.C. Mahadevappa

The post ಸರ್ಕಾರಿ ಜಾಗ ಸಿಕ್ಕರೆ ಬೊಕ್ಕಹಳ್ಳಿ ಗ್ರಾಮ ಸ್ಥಳಾಂತರಕ್ಕೆ ಚಿಂತನೆ – ಸಚಿವ ಡಾ.ಹೆಚ್.ಸಿ. ಮಹದೇವಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ಜಿಲ್ಲೆ: ನೆರೆ ಹಾನಿ, ಪರಿಹಾರ ಕುರಿತು ವಿವರ ನೀಡಿದ ಸಚಿವ ಹೆಚ್.ಸಿ ಮಹದೇವಪ್ಪ
ಮೈಸೂರು,ಆಗಸ್ಟ್,3,2024 (www.justkannada.in):  ಭಾರಿ ಮಳೆಯಿಂದಾಗಿ ನೆರೆ ಹಾವಳಿಯಿಂದ ಮೈಸೂರು ಜಿಲ್ಲೆಯಲ್ಲಿ 345 ಮನೆಗಳಿಗೆ ಹಾನಿಯಾಗಿದೆ. ಜಿಲ್ಲೆಯಲ್ಲಿ ಮೂರು ಹಸುಗಳು ಸತ್ತಿದ್ದು, ಒಬ್ಬ ವ್ಯಕ್ತಿ ಕೂಡ ಸಾವನ್ನಪ್ಪಿದ್ದಾನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಮಾಹಿತಿ ನೀಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿ ವಿವರ ನೀಡಿದ ಸಚಿವ ಹೆಚ್.ಸಿ ಮಹದೇವಪ್ಪ, ಕಳೆದ ತಿಂಗಳು ವಾಡಿಕೆಗಿಂತ 54% ಹೆಚ್ಚು ಮಳೆ ಆಗಿದೆ. ಈ ತಿಂಗಳು 75% ಹೆಚ್ಚು ಮಳೆ ಆಗಿದೆ. ವಯನಾಡಲ್ಲಿ ಹೆಚ್ಚು ಮಳೆ ಆದ್ದರಿಂದ ಕಬಿನಿಗೆ 80 ಸಾವಿರ ಕ್ಯೂಸೆಕ್ ನೀರು ಬಂದಿದೆ.  ನಾವು ಜಿಲ್ಲಾಡಳಿತಕ್ಕೆ ಸೂಚನೆ ಕೊಟ್ಟಿದ್ದೆವು. ಹೀಗಾಗಿ ತಗ್ಗು ಪ್ರದೇಶದಲ್ಲಿ ಇರುವ ಜನರ ರಕ್ಷಣೆ ಮಾಡುವ ಕೆಲಸ ಜಿಲ್ಲಾಡಳಿತ ಮಾಡಿದೆ. ಬೊಕ್ಕಹಳ್ಳಿಯಲ್ಲಿ ಮನೆಗೆ ನೀರು ನುಗ್ಗಿದ್ದರಿಂದ 215 ಜನರನ್ನು ಕಾಳಜಿ ಕೇಂದ್ರಕ್ಕೆ ಶಿಫ್ಟ್ ಮಾಡಿದ್ದೇವೆ. ಈಗ ಕಾಳಜಿ ಕೇಂದ್ರದಲ್ಲಿ  ಆಶ್ರಯ ಪಡೆದಿದ್ದಾರೆ. ಇಲ್ಲಿಗೆ ಮುಖ್ಯಮಂತ್ರಿಗಳೇ ಬರಬೇಕಿತ್ತು. ಆದರೆ ಶಿರಾಡಿ ಘಾಟ್ ಗೆ ಹೋಗಬೇಕಾದ್ದರಿಂದ ಇಲ್ಲಿಗೆ ಬರಲು ಸಾಧ್ಯವಾಗಲಿಲ್ಲ ಎಂದರು.

ಪ್ರವಾಹ ಬಂದಾಗ ಹಲವು ಗ್ರಾಮಗಳಿಗೆ ನೀರು ನುಗ್ಗುತ್ತದೆ. ನಾವೂ ಹಿಂದೆಯೆ ಇವುಗಳನ್ನ ಗುರುತು ಮಾಡಿಕೊಂಡಿದ್ದೇವೆ. ಈ ಪ್ರವಾಹದಿಂದ ಜಿಲ್ಲೆಯಲ್ಲಿ 345 ಮನೆಗಳು ಹಾನಿ ಆಗಿವೆ. ಮನೆಗಳಿಗೆ ಸಣ್ಣ ಡ್ಯಾಮೇಜ್ ಆಗಿದ್ರೆ 6 ಸಾವಿರ ಕೊಡ್ತುತ್ತಿದ್ದೇವೆ. ಪೂರ್ತಿ ಹಾನಿ ಆಗಿದ್ರೆ 1.25 ಲಕ್ಷ ಕೊಡ್ತಾ ಇದ್ದವು.  ಎನ್ ಡಿಆರ್ ಎಫ್ ಮಾರ್ಗಸೂಚಿ ಪ್ರಕಾರ ಪರಿಹಾರ ನೀಡಲಾಗುತ್ತಿದೆ.  ಈಗ ಕ್ಯಾಬಿನೆಟ್ ನಲ್ಲಿ ಬೇರೆ ತೀರ್ಮಾನ ಮಾಡಿದ್ದೇವೆ. ಮನೆ ಡ್ಯಾಮೇಜ್ ಗೆ 6500 ಕೊಟ್ಟರೆ ಸಾಲಲ್ಲ. ಪೂರ್ತಿ ಹಾಳಾದರೆ 1.20 ಲಕ್ಷ ಕೂಡ ಸಾಲಲ್ಲ. ಹಾಗಾಗಿ ಹಣ ಜನರಿಗೆ ರಾಜೀವ್ ಗಾಂಧಿ ವಸತಿ ಯೋಜನೆ ಮುಖಾಂತರ ಮನೆ ಕೊಡೋಣ ಅಂತ ತೀರ್ಮಾನ ಮಾಡಿದ್ದೇವೆ. ಜಿಲ್ಲೆಯಲ್ಲಿ ಮೂರು ಹಸುಗಳು ಸತ್ತಿವೆ. ಒಬ್ಬ ವ್ಯಕ್ತಿ ಕೂಡ ಸಾವನ್ನಪ್ಪಿದ್ದಾನೆ. ಉಳಿದಂತೆ ಎಲ್ಲ ರಕ್ಷಣೆ ಹಾಗೂ ಪುನರ್ವಸತಿ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.

ಜಿಲ್ಲೆಯಲ್ಲಿ ಮಳೆಯಿಂದ ‌ 220 ಶಾಲೆಗಳು ಡ್ಯಾಮೇಜ್ ಆಗಿವೆ. 60ರಿಂದ 70 ಅಂಗನವಾಡಿ ಹಾಳಾಗಿವೆ. 50 ಕಿ.ಗ್ರಾಮೀಣ ರಸ್ತೆ, 25 ಕಿಮೀ  ಮುಖ್ಯ ರಸ್ತೆ ಹಾಳಾಗಿವೆ. ಬೊಕ್ಕಹಳ್ಳಿ ಗ್ರಾಮಸ್ಥರು ಊರನ್ನು ಶಿಫ್ಟ್ ಮಾಡಿ ಕೊಡಿ ಅಂತ ಕೇಳಿದ್ದಾರೆ. ಆದರೇ ಊರನ್ನೆ ಶಿಫ್ಟ್ ಮಾಡುವಂತ ಪ್ರವಾಹ ಏನು ಆಗಲ್ಲ. 80 ಮನೆಗಳಿಗಷ್ಟೆ ಸಮಸ್ಯೆ ಆಗ್ತಾ ಇದೆ. ಜನರ ಮನವಿಗೆ ಜಾಗ ಸಿಗುತ್ತಾ ಎಂದು ಪರಿಶೀಲನೆ ಮಾಡಿ ಎಂದು ಅಧಿಕಾರಿಗಳಿಗೆ ಹೇಳಿದ್ದೇವೆ. ಅದನ್ನ ಗಮನದಲ್ಲಿಟ್ಟುಕೊಂಡು  ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವ ಎಚ್ ಸಿ ಮಹದೇವಪ್ಪ ಹೇಳಿದರು.

ಬಿಜೆಪಿ ಜೆಡಿಎಸ್ ಪಾದಯಾತ್ರೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಹೆಚ್.ಸಿ ಮಹದೇವಪ್ಪ, ಜನ ಸಂಕಷ್ಟದಲ್ಲಿ ಇದ್ದಾರೆ. ಜನ ಜಾನವಾರುಗಳಿಗೆ ನಷ್ಟ ಆಗುತ್ತಾ ಇದೆ. ಪ್ರಜ್ಞೆ ಇರುವವರು ಜನರ ಕಷ್ಟದಲ್ಲಿ ಭಾಗಿ ಆಗಬೇಕು.ಅಲ್ಲಿ ವಿಷಯವೇ ಇಲ್ಲದೆ ಇರುವುದಕ್ಕೆ ರಾಜಕೀಯ ಮಾಡುತ್ತಿದ್ದಾರೆ. ಇದರಲ್ಲಿ ಸರ್ಕಾರದ ಪಾತ್ರವೆ ಇಲ್ಲ. ಇದಕ್ಕೆ ಪಾದಯಾತ್ರೆ ಮಾಡುತ್ತಿದ್ದಾರೆ. ಇದಕ್ಕೆ ಜವಾಬ್ದಾರಿಯುತ್ತ ವಿರೋಧ ಪಕ್ಷ ಎನ್ನಬೇಕೋ ಬೇಜವಾಬ್ದಾರಿ ಎನ್ನಬೇಕೊ ಎಂದು ಕಿಡಿಕಾರಿದರು.

ಇಂದು ಬೆಳಿಗ್ಗೆ ಸಿಎಂ ಮನೆಯಲ್ಲಿ ದಿಢೀರ್ ಸಭೆ ನಡೆಸಿದ ವಿಚಾರ ಕುರಿತು ಮಾತನಾಡಿದ ಹೆಚ್.ಸಿ ಮಹದೇವಪ್ಪ, ಸಿಎಂ ಹಾಗೂ ಈ ಭಾಗದವರು ಭೇಟಿ ಆಗಿ ಬಹಳ ದಿನ ಆಗಿತ್ತು. ನೆರೆ ಇರುವುದರಿಂದ ಜನರ ನೆರವಿಗೆ ಹೋಗಿ ಜನರ ಸಂಕಷ್ಟದಲ್ಲಿ ಭಾಗಿಯಾಗಬೇಕು ಅಂತ ಹೇಳಿದ್ದಾರೆ. ಸಭೆ ಸೇರಿದ ಮೇಲೆ ರಾಜಕೀಯ ಚರ್ಚೆ ಆಗೆ ಆಗುತ್ತೆ. ನೆರೆ, ಅಭಿವೃದ್ಧಿ, ರಾಜಕೀಯ, ವ್ಯಕ್ತಿಗತ ಚಾರಿತ್ರ ಹರಣ, ಒಬ್ಬರ ಮೇಲೆ ಕಪ್ಪು ಮಸಿ ಬಳಿಯೋದೆ ಹೀಗೆ ಎಲ್ಲ ವಿಚಾರಗಳೂ ಚರ್ಚೆ ಆಗಿವೆ ಎಂದರು.

ಸಿಎಂ ಸಿದ್ದರಾಮಯ್ಯ ಗುಂಡು ಕಲ್ಲು ಇದ್ದಾಗೆ ಇದಾರೆ.

ಸಿಎಂ ಸಿದ್ದರಾಮಯ್ಯ ಡಿಸ್ಟರ್ಬ್ ಆಗಿದ್ದಾರೆ ಎಂಬ ವಿಚಾರ ಕುರಿತು ಮಾತನಾಡಿದ ಹೆಚ್.ಸಿ ಮಹದೇವಪ್ಪ, ಸಿಎಂ ಗುಂಡು ಕಲ್ಲು ಇದ್ದಾಗೆ ಇದಾರೆ. ಸಿದ್ದರಾಮಯ್ಯ ಹೇಗೆ ಇದ್ರೋ ಹಾಗೆ ಇದ್ದಾರೆ ಎಂದರು.

Key words: Mysore,  Minister, HC Mahadevappa, flood, damage

The post ಮೈಸೂರು ಜಿಲ್ಲೆ: ನೆರೆ ಹಾನಿ, ಪರಿಹಾರ ಕುರಿತು ವಿವರ ನೀಡಿದ ಸಚಿವ ಹೆಚ್.ಸಿ ಮಹದೇವಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನೆರೆ ಹಾವಳಿ ಪ್ರದೇಶಗಳಿಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ, ಪರಿಶೀಲನೆ: ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರ ಆಗ್ರಹ
ದಕ್ಷಿಣ ಕನ್ನಡ,ಆಗಸ್ಟ್,2,2024 (www.justkannada.in):   ಭಾರಿ ಮಳೆಯಿಂದಾಗಿ ತತ್ತರಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ನೆರೆ ಹಾವಳಿ ಪ್ರದೇಶಗಳಿಗೆ ಆರೋಗ್ಯ  ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಭಾರೀ ಮಳೆಯಿಂದಾಗಿ ಮಂಗಳೂರಿನ ಮುಳುಗಡೆ ಸ್ಥಳಗಳಿಗೆ ಭೇಟಿ ನೀಡಿದ ಸಚಿವ ದಿನೇಶ್ ಗುಂಡೂರವ್ ಪರಿಶೀಲಿಸಿದರು. ಅದ್ಯಪಾಡಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಅವಲೋಕಿಸಿದ ಸಚಿವ ದಿನೇಶ್ ಗುಂಡೂರಾವ್ ಜೊತೆ ಸ್ಥಳೀಯ ನಿವಾಗಿಗಳು ಅಕ್ಕ ಪಕ್ಕದ ಗ್ರಾಮಗಳು ಜಲಾವೃತವಾಗಿರುವ ಬಗ್ಗೆ ಚರ್ಚೆ ನಡೆಸಿದರು. ಪ್ರತಿ ವರ್ಷ ಅದ್ಯಪಾಡಿಯಲ್ಲಿ ಪಾಲ್ಗುಣಿ ನದಿಯ ನೆರೆ ಪ್ರವಾಹದ ಬಗ್ಗೆ ಮಾಹಿತಿ ನೀಡಿದರು.

ತೋಟ ಗದ್ದೆಗಳು ಮುಳುಗಿರುವ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ  ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು.   ಅದ್ಯಪಾಡಿಯ ಅಕ್ಕ ಪಕ್ಕದ ಹಳ್ಳಿಗಳಿಗೆ ಪಲ್ಗುಣಿ ನದಿ ನೆರೆ ಹಾವಳಿ ತಡೆಯಲು,  ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಜ್ಞರಿಂದ ವರಿದಿ ಪಡೆದು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.  ಪ್ರವಾಹ ಬಂದಿರುವ ಈ ಸಂದರ್ಭದಲ್ಲಿಯೇ ತಂತ್ರಜ್ಞರನ್ನ ಸ್ಥಳಕ್ಕೆ ಕರೆತಂದು ಸಲಹೆ ಪಡೆಯಿರಿ ಎಂದು ಸಚಿವರು ಸಲಹೆ ನೀಡಿದರು.

ನೆರೆ ಪರಿಹಾರ ಪಡೆಯಲು ನಿರಾಕರಿಸಿದ ಅದ್ಯಪಾಡಿ ರೈತರ ಮನವೊಲಿಸಿದ ಸಚಿವ ದಿನೇಶ್ ಗುಂಡೂರಾವ್

ಇನ್ನು ನೆರೆ ಹಾವಳಿ ತಡೆಗೆ ಶಾಶ್ವತ ಪರಿಹಾರ ನೀಡುವಂತೆ ಆಗ್ರಹಿಸಿ ಅದ್ಯಪಾಡಿ ಗ್ರಾಮದ ನಿವಾಸಿಗಳು ಪರಿಹಾರವನ್ನ ನಿರಾಕರಿಸಿದರು. ಈ ವೇಳೆ ನೆರೆ ಪರಿಹಾರ ಪಡೆಯಲು ನಿರಾಕರಿಸಿದ ಅದ್ಯಪಾಡಿ ರೈತರನ್ನ ಸಚಿವ ದಿನೇಶ್ ಗುಂಡೂರಾವ್ ಮನವೊಲಿಸಿದರು.

ನೆರೆ ಪರಿಹಾರ ತೆಗೆದುಕೊಳ್ಳುವಂತೆ ನಿವಾಸಿಗರಿಗೆ ಮನವಿ ಮಾಡಿದ ಸಚಿವ ದಿನೇಶ್ ಗುಂಡೂರಾವ್, ನೆರೆ ಪರಿಹಾರಕ್ಕೂ ಶಾಶ್ವತ ಪರಿಹಾರಕ್ಕೂ ಸಂಬಂಧವಿಲ್ಲ. ನೆರೆ ಪರಿಹಾರ ಪಡೆದರೆ ಶಾಶ್ವತ ಪರಿಹಾರ ಆಗಲ್ಲ ಎಂಬ ಭಾವನೆ ಬೇಡ.‌. ಒಂದಕ್ಕೂಂದು ಲಿಂಕ್ ಮಾಡುವ ಅಗತ್ಯವಿಲ್ಲ. ಭತ್ತದ ಗದ್ದೆ ತೋಟ ಮುಳುಗಡೆಯಿಂದ ನಷ್ಟ ಅನುಭವಿಸಿದ್ದೀರಾ.. ಅದಕ್ಕೆ  ಸರ್ಕಾರದಿಂದ ಸಿಗುವ ನೆರೆ ಪರಿಹಾರವನ್ನ ಪಡೆಯಿರಿ. ಪಲ್ಗಣಿ ನದಿಯಿಂದಾಗುವ ನೆರೆ ಹಾವಳಿ ತಡೆಯುವ ಶಾಶ್ವತ ಪರಿಹಾರ ಒದಗಿಸುವ ಜವಾಬ್ದಾರಿ ನಮಗೆ ಬಿಡಿ ಎಂದು ರೈತರಲ್ಲಿ ಮನವಿ ಮಾಡಿದರು. ಸಚಿವರ ಮನವಿಗೆ ಒಪ್ಪಿಗೆ ಸೂಚಿಸಿ ಪರಿಹಾರ ಪಡೆಯುವುದಾಗಿ ಸ್ಥಳೀಯ ನಿವಾಸಿಗರು ತಿಳಿಸಿದರು.

ಅದ್ಯಪಾಡಿ ನಿವಾಸಿಗರು ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಕಳೆದ 11 ವರ್ಷದಿಂದ ನೆರೆ ಪರಿಹಾರವನ್ನ ತಿರಸ್ಕರಿಸಿದ್ದರು.

Key words: Minister, Dinesh Gundurao, flood, affected areas

The post ನೆರೆ ಹಾವಳಿ ಪ್ರದೇಶಗಳಿಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ, ಪರಿಶೀಲನೆ: ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರ ಆಗ್ರಹ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಬಿನಿ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು: ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ
ಮೈಸೂರು,ಆಗಸ್ಟ್,1,2024 (www.justkannada.in):  ಕೇರಳದ ವಯನಾಡಿನಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು, ಈ ಹಿನ್ನೆಲೆಯಲ್ಲಿ ಹೆಚ್ ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ.

ಜಲಾಶಯದ ಒಳ ಹರಿವು ಹೆಚ್ಚಳವಾಗಿದ್ದು,  ಹೊರ ಹರಿವಿನಲ್ಲೂ ಏರಿಕೆಯಾಗಿದೆ. ಜಲಾಶಯದ ಗರಿಷ್ಟ ನೀರಿನ ಮಟ್ಟ  2284 ಅಡಿಯಾಗಿದ್ದು, ಇಂದಿನ ನೀರಿನ ಮಟ್ಟ 2281.59 ಅಡಿ ಇದೆ.

49,206 ಕ್ಯೂಸೆಕ್ಸ್  ನೀರು ಹರಿದು ಬರುತ್ತಿದ್ದು , 50,000 ಕ್ಯೂಸೆಕ್ ನೀರನ್ನ ಜಲಾಶಯದಿಂದ ಹೊರ ಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಉಂಟಾಗಿದ್ದು, ನದಿ ಪಾತ್ರದ ಜನತೆ ಎಚ್ಚರಿಕೆ ವಹಿಸುವಂತೆ ಮೈಸೂರು ಜಿಲ್ಲಾಡಳಿತ ಸೂಚನೆ ನೀಡಿದೆ.

Key words: water, Kabini Reservoir, Flood, Kapila river

The post ಕಬಿನಿ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು: ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಯಾದಗಿರಿಗೆ ಕೇಂದ್ರ ಅಧ್ಯಯನ ತಂಡ ಭೇಟಿ: ನೆರೆಹಾನಿ ಪ್ರದೇಶಗಳ ಪರಿಶೀಲನೆ.
ಯಾದಗಿರಿ,ಸೆಪ್ಟಂಬರ್,9,2022(www.justkannada.in): ರಾಜ್ಯದಲ್ಲಿ ಸುರಿದ ನಿರಂತರ ಮಳೆಯಿಂದಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯುಂಟಾಗಿದ್ದು ಈ ಹಿನ್ನೆಲೆಯಲ್ಲಿ ಕೇಂದ್ರ ಅಧ್ಯಯನ ತಂಡ ನೆರೆಹಾನಿ ವೀಕ್ಷಣೆ ಮಾಡುತ್ತಿದೆ.

ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಮೂರು ತಂಡಗಳಾಗಿ ಪರಿಶೀಲನೆ ನಡೆಸುತ್ತಿದ್ದು ಇಂದು ಯಾದಗಿರಿಗೆ ಕೇಂದ್ರ ಅಧ್ಯಯನ ತಂಡ ಭೇಟಿ ನೀಡಿದೆ. ಯಾದಗಿರಿ ಜಿಲ್ಲೆ ವಡಗೇರ ತಾಲ್ಲೂಕಿನ  ಗುರುಸಣಗಿಯಲ್ಲಿ ಪರಿಶೀಲನೆ ನಡೆಸಿದ್ದು, ಪರಿಶೀಲನೆ ವೇಳೆ ಅಧಿಕಾರಿಗಳ ಮುಂದೆ ರೈತರು ಅಳಲು ತೋಡಿಕೊಂಡಿದ್ದಾರೆ.

ನಿನ್ನೆ ಕಲ್ಬುರ್ಗಿಯಲ್ಲಿ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ನಿರ್ದೇಶಕ ಡಿ.ಕೆ. ಮನೋಹರನ್ ನೇತೃತ್ವದಲ್ಲಿನ ಕೇಂದ್ರ ಅಧ್ಯಯನ ತಂಡ ಪರಿಶೀಲನೆ ನಡೆಸಿತ್ತು. ಹುಬ್ಬಳ್ಳಿಯಲ್ಲೂ  ನೆರೆಹಾನಿ ವೀಕ್ಷಣೆ ಮಾಡಲಾಗಿತ್ತು.

Key words:  Central –Study-Team- Visit – Yadgiri-flood

The post ಯಾದಗಿರಿಗೆ ಕೇಂದ್ರ ಅಧ್ಯಯನ ತಂಡ ಭೇಟಿ: ನೆರೆಹಾನಿ ಪ್ರದೇಶಗಳ ಪರಿಶೀಲನೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರವಾಹದಲ್ಲಿ ಸಿಲುಕಿದ್ಧ ಜನರನ್ನ ರಕ್ಷಿಸಲು ಹೋದ ಅಗ್ನಿಶಾಮಕ ಸಿಬ್ಬಂದಿ ಬೋಟ್ ಪಲ್ಟಿ.
ಬಳ್ಳಾರಿ, ಸೆಪ್ಟಂಬರ್,8,2022(www.justkannada.in):  ಪ್ರವಾಹದಲ್ಲಿ ಸಿಲುಕಿದ್ದ ಜನರನ್ನು ರಕ್ಷಿಸಲು ಹೋದ ಅಗ್ನಿಶಾಮಕ ದಳದ ಸಿಬ್ಬಂದಿಯ ಬೋಟ್ ಪಲ್ಟಿಯಾದ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಮುದೇನೂರು ಗ್ರಾಮದಲ್ಲಿ ನಡೆದಿದೆ.

ಮುದೇನೂರು ಗ್ರಾಮದ ಶನೀಶ್ವರ ದೇವಸ್ಥಾನ ಮುಳುಗಡೆ ಆಗಿತ್ತು. ದೇವಸ್ಥಾನದಲ್ಲಿ ಸಿಲುಕಿದವರನ್ನು ರಕ್ಷಣೆ ಮಾಡಲು ತೆರಳಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಇದ್ದ ಬೋಟ್ ಪಲ್ಟಿಯಾಗಿದೆ.  ಬೋಟ್ ಪಲ್ಟಿ ಆದರೂ ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿ ಈಜಿ ದಡ ಸೇರಿದ್ದಾರೆ ಎನ್ನಲಾಗಿದೆ.

ಬೆಳಗ್ಗೆ ದೇವಸ್ಥಾನಕ್ಕೆ ಪೂಜಾರಿ ಹಾಗೂ ಭಕ್ತರು ಪೂಜೆಗೆ ತೆರಳಿದ್ದರು. ಈ ವೇಳೆ ಸಿಲುಕಿದ್ದು ಇದೀಘ ದೇವಸ್ಥಾನದಲ್ಲಿ ಸಿಲುಕಿದ್ದವರನ್ನ ರಕ್ಷಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: ballari- boat – rescue – people – flood

The post ಪ್ರವಾಹದಲ್ಲಿ ಸಿಲುಕಿದ್ಧ ಜನರನ್ನ ರಕ್ಷಿಸಲು ಹೋದ ಅಗ್ನಿಶಾಮಕ ಸಿಬ್ಬಂದಿ ಬೋಟ್ ಪಲ್ಟಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬೆಂಗಳೂರು ಮಳೆ ಪ್ರವಾಹ ಪರಿಸ್ಥಿತಿಗೆ ಹೈಕೋರ್ಟ್ ಕಳವಳ.
ಬೆಂಗಳೂರು,ಸೆಪ್ಟಂಬರ್,7,2022(www.justkannada.in):  ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಬಗ್ಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ.

ಮಳೆ ನೀರು ತ್ಯಾಜ್ಯದಿಂದ ಚರಂಡಿಗಳು ತುಂಬಿ ಹೋಗಿವೆ.  ಅವನ್ನು ಸರಿಪಡಿಸಲು ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಬಿಬಿಎಂಪಿಗೆ ಹೈಕೋರ್ಟ್ ಪ್ರಶ್ನಿಸಿದೆ. ಹಾಗೆಯೇ  ರಸ್ತೆಗಳಲ್ಲಿ ಮಳೆ ನೀರು ತುಂಬಿ ಮನೆಗಳಿಗೆ ನುಗ್ಗುತ್ತಿದೆ.  ಜನರ ಕುಂದು ಕೊರತೆ ನಿವಾರಣೆಗೆ ಘಟಕ ಆರಂಭಿಸಲಾಗಿದೆಯೇ. ಸಮಸ್ಯೆ ಬಗೆಹರಿಸಲು ಮಾರ್ಗ ಹುಡುಕಿ.  ವಾರ್ಡ್ ವಾರು ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಿ ಎಂದು ಹೈಕೋರ್ಟ್  ಸೂಚನೆ ನೀಡಿದೆ.

ಮುಂಗಾರಿಗೆ ಮುನ್ನ ಕೆರೆಗಳ ನೀರು ಹೊರ ಬಿಡಲು ಚಿಂತಿಸಲಾಗಿದೆ.  ಇದಕ್ಕಾಗಿ ಕೆರೆಗಳಲ್ಲಿ ಗೇಟ್ ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಇದೇ ವೇಳೆ ಹೈಕೋರ್ಟ್ ಗೆ ಬಿಬಿಎಂಪಿ ಪರ ವಕೀಲರು  ಮಾಹಿತಿ ನೀಡಿದರು.  ವಾರ್ಡ್ ವಾರು ಕುಂದುಕೊರತೆ ನಿವಾರಣೆಗೆ ಘಟಕ ಆರಂಭಿಸಿ ಎಂದು ಸೂಚಿಸಿದ ಹೈ ಕೋರ್ಟ್ ಜುಲೈ 26ರೊಳಗೆ  ಗುಂಡಿ ಮುಚ್ಚಲು ಕೈಗೊಂಡ ಕ್ರಮಗಳೇನು..?  ಒಂದು ವಾರದಲ್ಲಿ ಈ ಬಗ್ಗೆ ಮಾಹಿತಿ ನೀಡುವಂತೆ ಹೇಳಿತು.

Key words: High Court – Bengaluru -rain – flood -situation.

The post ಬೆಂಗಳೂರು ಮಳೆ ಪ್ರವಾಹ ಪರಿಸ್ಥಿತಿಗೆ ಹೈಕೋರ್ಟ್ ಕಳವಳ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.