Former CM –H D Kumaraswamy- former minister Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಆರ್ ಎಸ್ ಎಸ್ ಶಾಖೆಗೆ ಬನ್ನಿ ಎಂದ ಮಾಜಿ ಸಚಿವ ಸಿ.ಟಿ ರವಿಗೆ ಮಾಜಿ ಸಿಎಂ ಹೆಚ್.ಡಿಕೆ ತಿರುಗೇಟು ನೀಡಿದ್ದು ಹೀಗೆ.
ಬೆಂಗಳೂರು,ಅಕ್ಟೋಬರ್,6,2021(www.justkannada.in): RSS ಬಗ್ಗೆ ಜ್ಞಾನಾರ್ಜನೆ, ಅಧ್ಯಯನ, ಸಂಶೋಧನೆ ಮಾಡಲು ಸಂಘದ ಶಾಖೆಗೆ ಬರುವಂತೆ ಆಹ್ವಾನ ನೀಡಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, RSS ಬಗ್ಗೆ ಜ್ಞಾನಾರ್ಜನೆ, ಅಧ್ಯಯನ, ಸಂಶೋಧನೆ ಮಾಡಲು ಸಂಘದ ಶಾಖೆಗೆ ಬರುವಂತೆ ಆಹ್ವಾನಿಸಿ  ಲೇವಡಿ ಮಾಡಿದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರಿಗೆ ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿರುವ ಹೆಚ್.ಡಿಕೆ, @CTRavi_BJP ಅವರೇ, ಮನೆಯಲ್ಲಿ ಕೂತು ಪುಸ್ತಕ ಓದಿದರೆ ಸಾಲದು ಎಂದಿದ್ದೀರಿ. RSS ಬಗ್ಗೆ ಜ್ಞಾನಾರ್ಜನೆ, ಅಧ್ಯಯನ, ಸಂಶೋಧನೆ ಮಾಡಲು ಸಂಘದ ಶಾಖೆಗೆ ಬನ್ನಿ ಎಂದು ನನಗೆ ಆಹ್ವಾನ ಕೊಟ್ಟಿದ್ದೀರಿ.

ನಿಮ್ಮ ಸಂಘದೊಳಗಿನ ವಾಸ್ತಾವಾಂಶಗಳನ್ನು ಪ್ರತ್ಯಕ್ಷವಾಗಿ ನೋಡಿದವರೇ ಬರೆದ ಪುಸ್ತಕ ಓದಿ ನನಗೆ ಅಲ್ಲಿನ ವ್ಯವಹಾರಗಳ ವಿರಾಟ್ ದರ್ಶನ ಆಗಿದೆ. ಇನ್ನು ಶಾಖೆಯನ್ನೇ ಸೇರಿಕೊಂಡರೆ ಇನ್ನೆಷ್ಟು ಸತ್ಯ ಸಂಗತಿಗಳು ಗೊತ್ತಾಗಬಹುದು. ನೀವೇ ಒಮ್ಮೆ ಊಹಿಸಿ ಎಂದು ಲೇವಡಿ ಮಾಡಿದ್ದಾರೆ.

ಸ್ವಜನ ಪಕ್ಷಪಾತ, ಭ್ರಷ್ಟಾಚಾರ, ಕುಟುಂಬ ರಾಜಕಾರಣದ ಬಗ್ಗೆ ಮಾತನಾಡಿದ್ದೀರಿ. ನಿಮ್ಮ ಪಕ್ಷ ಮತ್ತು ನಿಮ್ಮ ಸರಕಾರದಲ್ಲಿ ತಾಂಡವವಾಡುತ್ತಿರುವ ಅಪರಿಮಿತ ಭ್ರಷ್ಟಾಚಾರ, ಕುಟುಂಬ ರಾಜಕಾರಣ, ಸ್ವಜನ ಪಕ್ಷಪಾತದ ಬಗ್ಗೆಯೂ ನೀವು ಹೇಳಬೇಕು. ಅದಕ್ಕೂ RSS ಶಾಖೆಯಲ್ಲೇ ತರಬೇತಿ ನೀಡಲಾಯಿತಾ?  ಎಂದು ಪ್ರಶ್ನಿಸಿ ಮಾಜಿ ಸಚಿವ ಸಿ.ಟಿ ರವಿ ಅವರಿಗೆ ತಿರುಗೇಟು ನೀಡಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವಂಥ ʼಆಪರೇಷನ್ ಕಮಲʼದಂಥ ʼಅನೈತಿಕʼ, ʼನಿರ್ಲಜ್ಜʼ, ʼನೀಚʼ ರಾಜಕಾರಣವನ್ನು RSS ಶಾಖೆಯಲ್ಲೇ ಕಲಿಸಲಾಯಿತಾ ಎಂಬುದನ್ನೂ ನೀವು ಜನರಿಗೆ ಹೇಳಬೇಕು ಸಿ.ಟಿ.ರವಿಯವರೇ?

ಜನರು ಕಣ್ಣೀರಿನಲ್ಲಿ ಕೈತೊಳೆಯುತ್ತಿದಾರೆ. ಇವತ್ತಿನ ಪ್ರಜಾವಾಣಿ ಪತ್ರಿಕೆ ಓದಿ. ಅದರಲ್ಲಿ “ಬದುಕು ಸಾಕೆನಿದೆ-ಭಗವಂತನಿಗೂ ಕರುಣೆ ಇಲ್ಲ” ಎನ್ನುವ ವರದಿ ಇದೆ. ಬೆಂಗಳೂರಿನ ಶ್ರೀನಿವಾಸನಗರದ ಬಿ.ಆರ್.ವಾಸುದೇವ ಎಂಬ ಬೀದಿಬದಿ ವ್ಯಾಪಾರಿ ಹೇಳಿರುವ ಮಾತುಗಳನ್ನು ಒಮ್ಮೆ ಓದಿ. ಆಗಲಾದರೂ ನಿಮ್ಮ ಕಲ್ಲು ಹೃದಯ ಕರಗಬಹುದು.

ಶಿವಮೊಗ್ಗದಲ್ಲಿ 2,000 ರೂ. ಪರಿಹಾರ ಪಡೆಯಲು 100 ರೂ. ಲಂಚ ಕೇಳಿದ ವರದಿಗಳು ಬಂದಿವೆ. ಇದಾ ನಿಮ್ಮ ಸಮಾಜ ಸೇವೆ?  ಛಿದ್ರವಾದ ಬದುಕುಗಳನ್ನೊಮ್ಮೆ ನೋಡಿ. ಜನರ ಬವಣೆಗಳ ಬಗ್ಗೆ RSS ಶಾಖೆಗಳಲ್ಲಿ ನಿಮಗೆಲ್ಲರಿಗೂ ಏನನ್ನೂ ಹೇಳಿಕೊಡುವುದಿಲ್ಲವಾ ಸಿ.ಟಿ.ರವಿಯವರೇ?  ಎಂದು ಹೆಚ್.ಡಿಕೆ ಹರಿಹಾಯ್ದಿದ್ದಾರೆ.

ಸೇವೆಯ ಸೋಗಿನಲ್ಲಿ ಸಂಸ್ಥೆಗಳು ರಾಜಕೀಯ ಮಾಡಬಾರದು. ಜನರ ಬವಣೆಗಳ ನಿವಾರಣೆ ನಿಟ್ಟಿನಲ್ಲಿ ದುಡಿಯಬೇಕೆ ಹೊರತು ಬದುಕಿಗೇ ಬೆಂಕಿ ಇಡಬಾರದು. ಸಮಾಜದ ಶಾಂತಿಯನ್ನು ಕಾಪಾಡಬೇಕೇ ಹೊರತು, ಅದಕ್ಕೆ ಕೊಳ್ಳಿ ಇಡಬಾರದು. RSS ಹುಟ್ಟಿದಾಗಿನಿಂದಲೂ ಏನೆಲ್ಲ ಮಾಡಿಕೊಂಡು ಬಂದಿದೆ ಎನ್ನುವುದು ಜಗತ್ತಿಗೇ ಗೊತ್ತಿರುವ ಸಂಗತಿ.

ಜನ ಪ್ರತಿನಿಧಿಗಳನ್ನು, ಸರಕಾರಗಳನ್ನು, ಆಡಳಿತ ಯಂತ್ರಾಂಗವನ್ನು ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳುವ ಪರಿಪಾಠ ದೇಶಕ್ಕೆ ಒಳ್ಳೆಯದಲ್ಲ. ಅರ್ಥ ಮಾಡಿಕೊಳ್ಳಿ ಸಿ.ಟಿರವಿಯರೇ. ನಾನು ಸತ್ಯದ ಪರ ಎಂದು ಹೆಚ್.ಡಿಕೆ ನುಡಿದಿದ್ದಾರೆ.

Key words: Former CM –H D Kumaraswamy- former minister -CT Ravi -Come – RSS- branch.

The post ಆರ್ ಎಸ್ ಎಸ್ ಶಾಖೆಗೆ ಬನ್ನಿ ಎಂದ ಮಾಜಿ ಸಚಿವ ಸಿ.ಟಿ ರವಿಗೆ ಮಾಜಿ ಸಿಎಂ ಹೆಚ್.ಡಿಕೆ ತಿರುಗೇಟು ನೀಡಿದ್ದು ಹೀಗೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.