grateful Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಪುನೀತ್ ರಾಜಕುಮಾರ್ ಅವರ ಅಂತಿಮ ದರ್ಶನ ಹಾಗೂ ವಿದಾಯ ಸಮಯದಲ್ಲಿ ಯಶಸ್ವಿಯಾಗಿ ರಕ್ಷಣಾ ವ್ಯವಸ್ಥೆ ನಿರ್ವಹಿಸಿದ ಪೊಲೀಸ್ ಸಿಬ್ಬಂದಿ ವರ್ಗಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಕೃತಜ್ಞತೆ
ಬೆಂಗಳೂರು, ನವೆಂಬರ್ 2.2021(www.justkannada.in):  ನಟ ಪುನೀತ್ ರಾಜಕುಮಾರ್ ಅವರ ಅಂತಿಮ ದರ್ಶನ ಹಾಗೂ  ವಿದಾಯ ಸಂದರ್ಭದಲ್ಲಿ ಹರಿದು ಬಂದ ಜನಸಾಗರವನ್ನು ಅತ್ಯುತ್ತಮವಾಗಿ ನಿರ್ವಹಿಸಿ, ಸಾರ್ವಜನಿಕರ  ಮೆಚ್ಚುಗೆಗೆ ಪಾತ್ರರಾದ ಪೊಲೀಸ್ ಸಿಬ್ಬಂದಿಯನ್ನು ಗೃಹ ಸಚಿವ  ಆರಗ ಜ್ಞಾನೇಂದ್ರ ಅವರು ಹೃತ್ಪೂರ್ವಕವಾಗಿ, ಅಭಿನಂದಿಸಿದ್ದಾರೆ.

ಗೃಹ ಸಚಿವ ಅರಗ ಜ್ಞಾನೇಂದ್ರ ಅವರು  ಇಂದು ರಾಜ್ಯ  ಪೊಲೀಸ್ ಮುಖ್ಯ ಕಚೇರಿಯಲ್ಲಿ, ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ, ಪುನೀತ್ ರಾಜಕುಮಾರ್ ರವರ ಅನಿರೀಕ್ಷಿತ ನಿಧನ ಹಾಗೂ ಅಂತಿಮ ಕಾರ್ಯದ ವೇಳೆ ಯೋಜನಾಬದ್ಧವಾಗಿ ರಕ್ಷಣಾ ವ್ಯವಸ್ಥೆ  ನಿರ್ವಹಿಸಿದ ಎಲ್ಲಾ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿ ವರ್ಗಕ್ಕೆ ಧನ್ಯವಾದ ಅರ್ಪಿಸಿದರು.

ಇದೇ ಸಂದರ್ಭದಲ್ಲಿ  ತಮ್ಮ ವಿಶೇಷ ಕರ್ತವ್ಯ ನಿರ್ವಹಣೆಗೆ ನೀಡಲಾಗುವ ಭತ್ಯೆ ಹಾಗೂ ಇನ್ನಿತರ ಸವಲತ್ತುಗಳನ್ನು, ಕಾನ್ಸ್ಟೇಬಲ್ ಗಳಿಗೆ,  ಇನ್ನು ಹತ್ತು ದಿನಗಳ ಒಳಗೆ ಪಾವತಿಸಲು ಕ್ರಮ ತೆಗೆದುಕೊಳ್ಳುವಂತೆಯೂ, ಸಚಿವ ಅರಗ ಜ್ಞಾನೇಂದ್ರ ಸೂಚಿಸಿದರು.

ಇದೇ ಸಂದರ್ಭದಲ್ಲಿ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಅವರು ಮಾತನಾಡಿ, ಪುನೀತ್ ರಾಜಕುಮಾರ್ ಅವರ ಅಕಾಲಿಕ ನಿಧನ ಹಾಗೂ ಅಂತಹ ಕ್ಲಿಷ್ಟರವಾದ ಸನ್ನಿವೇಶವನ್ನು, ವಿವರಿಸಿದ್ದಲ್ಲದೆ,  ಎಲ್ಲಾ ಪೊಲೀಸ್ ಅಧಿಕಾರಿಗಳು ಒಂದು ತಂಡವಾಗಿ ಕರ್ತವ್ಯ ನಿರ್ವಹಿಸಿ, ಯಶಸ್ವಿಯಾಗಿ ನಿಭಾಯಿಸಲು ಸಾಧ್ಯವಾಯಿತು, ಎಂದು ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸಹ ನಮ್ಮ ಜೊತೆಗೆ ಪ್ರೇರಕ ಶಕ್ತಿಯಾಗಿ ನಿಂತಿದ್ದರು. ಅನಿರೀಕ್ಷಿತ ಹಾಗೂ ಸವಾಲಿನ ಸಂದರ್ಭವನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿ, ಗಳಿಸಿದ ಅನುಭವವನ್ನು ಒಂದು ‘ ಮಾದರಿ ಕೇಸ್ ಸ್ಟಡಿ’ ಆಗಿ ದಾಖಲಿಸಬೇಕು ಎಂದೂ ಅವರು, ತಿಳಿಸಿದರು. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸಹ ತಮ್ಮ ಅನುಭವವನ್ನು ಹಂಚಿಕೊಂಡರು.

Key words: Home Minister -Aaraga Jnanendra – grateful – police

The post ಪುನೀತ್ ರಾಜಕುಮಾರ್ ಅವರ ಅಂತಿಮ ದರ್ಶನ ಹಾಗೂ ವಿದಾಯ ಸಮಯದಲ್ಲಿ ಯಶಸ್ವಿಯಾಗಿ ರಕ್ಷಣಾ ವ್ಯವಸ್ಥೆ ನಿರ್ವಹಿಸಿದ ಪೊಲೀಸ್ ಸಿಬ್ಬಂದಿ ವರ್ಗಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಕೃತಜ್ಞತೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜೆಡಿಎಸ್‌ ಪಕ್ಷ ಕುರಿತು ಕೃತಜ್ಞತೆ ಇರಲಿ : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು,ಮಾರ್ಚ್,31,2021(www.justkannada.in) : ಸನ್ಮಿತ್ರರು ನಮ್ಮಲ್ಲಿದ್ದಾಗ ಅವರನ್ನು ಬೆಂಗಳೂರು ಕೇಂದ್ರ ಲೋಕಸಭೆಗೆ ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಅವರ ಸೋದರನನ್ನು ಚಿಕ್ಕಪೇಟೆ ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಇದೆಲ್ಲ ಮಾಡಿದ್ದೇಕೆ? ಬಿಜೆಪಿಯನ್ನು ಗೆಲ್ಲಿಸಲೇ? ಜೆಡಿಎಸ್‌ ಪಕ್ಷ ಮತ್ತು ಇದರ ಕಾರ್ಯಕರ್ತರು ಎಲ್ಲರನ್ನೂ ಬೆಳೆಸಿದೆ. ಹೊರಗೆ ಹೋದವರನ್ನು ಹರಸಿದೆ. ಕೃತಜ್ಞತೆ ಇರಲಿ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬಸವಕಲ್ಯಾಣದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಹಾಕಲು ನಾನು ಬಿಜೆಪಿಯಿಂದ ಹಣ ಪಡೆದಿರುವುದಾಗಿ ಮಿತ್ರರೊಬ್ಬರು ಹೇಳಿದ್ದಾರೆ. ಆಗಲಿ, 2005ರಲ್ಲಿ ಎಸ್.ಎಂ. ಕೃಷ್ಣ ಅವರಿಂದ ತೆರವಾಗಿದ್ದ ಚಾಮರಾಜಪೇಟೆ ಉಪಚುನಾವಣೆಗೆ ಜೆಡಿಎಸ್‌ ಮುಸ್ಲಿಂ ಅಭ್ಯರ್ಥಿಯನ್ನು ಆಯ್ಕೆ ಮಾಡಿತ್ತು. ಅವರ ಖರ್ಚು ವೆಚ್ಚಗಳಿಗೆ ಜೆಡಿಎಸ್‌ ಬಿಜೆಪಿಯಿಂದ ದುಡ್ಡು ತಂದಿತ್ತೇ?  ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶವ್ಯಕ್ತಪಡಿಸಿದ್ದಾರೆ.

2005ರ ಚಾಮರಾಜಪೇಟೆ ಉಪಚುನಾವಣೆಯ ಆ ‘ಮುಸ್ಲಿಂ ಅಭ್ಯರ್ಥಿ’ಗಾಗಿ ಮಾಜಿ ಪ್ರಧಾನಿ ದೇವೇಗೌಡರು ಗಲ್ಲಿಗಲ್ಲಿಗಳಲ್ಲಿ ಸುತ್ತಿದ್ದರು. ಬೆವರು ಹರಿಸಿದ್ದರು. ದೇವೇಗೌಡರಂಥವರು ಅಂದು ಅಷ್ಟು ಕಷ್ಟಪಟ್ಟು ಉಪಚುನಾವಣೆ ನಡೆಸಿದ್ದೇಕೆ? ಬಿಜೆಪಿಯನ್ನು ಗೆಲ್ಲಿಸಲೇ? ಇದಕ್ಕೆ ಸನ್ಮಿತ್ರರು ಆತ್ಮಸಾಕ್ಷಿಯಿಂದ, ಮನದಾಳದಿಂದ, ಪ್ರಾಮಾಣಿಕ ಉತ್ತರ ಕೊಡಬಹುದೇ? ಎಂದು ಪ್ರಶ್ನಿಸಿದ್ದಾರೆ.

ಚಾಮರಾಜಪೇಟೆ ಉಪಚುನಾವಣೆಯ ಮತದಾನಕ್ಕೆ ಇನ್ನು 2 ದಿನಗಳು ಬಾಕಿ ಉಳಿದಿವೆ ಎನ್ನುವಾಗ ನಮ್ಮ ‘ಮುಸ್ಲಿಂ ಅಭ್ಯರ್ಥಿ’ ಏಕಾಏಕಿ ಕಾಣೆಯಾಗಿದ್ದರು. ಕಾರಣ ಹುಡುಕಿದಾಗ ಹಣದ ಕೊರತೆ ಎಂಬ ಅಂಶ ಗೊತ್ತಾಯಿತು. ಅಂದು ಶಿವಮೊಗ್ಗ ಪ್ರವಾಸದಲ್ಲಿದ್ದ ನಾನು ಓಡೋಡಿ ಬಂದು ಸಾಲ ಮಾಡಿ ಹಣ ಹೊಂದಿಸಿಕೊಟ್ಟಿದ್ದೆ. ಅಂದು ನಾನು ತಂದ ಸಾಲ ಬಿಜೆಪಿಯ ಹಣವಾಗಿತ್ತೇ? ಎಂದು ಕಿಡಿಕಾರಿದ್ದಾರೆ.

ಅಂದು ಚಾಮರಾಜಪೇಟೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಜೆಡಿಎಸ್‌ ‘ಮುಸ್ಲಿಂ ಅಭ್ಯರ್ಥಿ’ಯನ್ನು ಗುರುತಿಸಿತ್ತೇ? ಅಂದು ಬಿಜೆಪಿಯನ್ನು ಗೆಲ್ಲಿಸಲೆಂದು ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದಿದ್ದರೆ ಇಂದು ನನ್ನ ವಿರುದ್ಧ ಆರೋಪ ಮಾಡಲು ಆ ನಾಯಕರೇ ಇರುತ್ತಿರಲಿಲ್ಲ. ಜೆಡಿಎಸ್‌ ಪಕ್ಷದ ತ್ಯಾಗಕ್ಕಾಗಿ ಕಿಂಚಿತ್ತು ಕೃತಜ್ಞತೆ ಉಳಿಯದಿದ್ದರೆ ಹೇಗೆ? ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ಸನ್ಮಿತ್ರರು ನಮ್ಮಲ್ಲಿದ್ದಾಗ ಅವರನ್ನು ಬೆಂಗಳೂರು ಕೇಂದ್ರ ಲೋಕಸಭೆಗೆ ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಅವರ ಸೋದರನನ್ನು ಚಿಕ್ಕಪೇಟೆ ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಇದೆಲ್ಲ ಮಾಡಿದ್ದೇಕೆ? ಬಿಜೆಪಿಯನ್ನು ಗೆಲ್ಲಿಸಲೇ? ಜೆಡಿಎಸ್‌ ಪಕ್ಷ ಮತ್ತು ಇದರ ಕಾರ್ಯಕರ್ತರು ಎಲ್ಲರನ್ನೂ ಬೆಳೆಸಿದೆ. ಹೊರಗೆ ಹೋದವರನ್ನು ಹರಸಿದೆ. ಕೃತಜ್ಞತೆ ಇರಲಿ ಎಂದಿದ್ದಾರೆ.

2008ರ ಆಪರೇಷನ್‌ ಕಮಲದ ನಂತರ ನಡೆದ 20ಕ್ಕೂ ಹೆಚ್ಚು ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ ಒಂದು ಸ್ಥಾನ ಗೆಲ್ಲದೇ ಮುಖಭಂಗ ಅನುಭವಿಸಿತ್ತು. ಅದರ ಹಿಂದೆ ಯಾವ ನಾಯಕರು ಇದ್ದರು? ಎಷ್ಟು ಹಣ ಪಡೆದಿದ್ದರು? ಯಾರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎಂಬುದನ್ನು ಸನ್ಮಿತ್ರರು ತಿಳಿಯಲಿ. ಹೇಗೂ ಅವರ ಅಕ್ಕಪಕ್ಕದಲ್ಲೆ ಇದ್ದೀರಲ್ಲ… ಕೇಳಿ ನೋಡಿ ಎಂದು ಅಸಮಾಧಾನವ್ಯಕ್ತಪಡಿಸಿದ್ದಾರೆ.

key words : grateful-JDS party-Former CM-H.D.Kumaraswamy

The post ಜೆಡಿಎಸ್‌ ಪಕ್ಷ ಕುರಿತು ಕೃತಜ್ಞತೆ ಇರಲಿ : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ  appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.