Heavy rains Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ
ಬೆಂಗಳೂರು,ಏಪ್ರಿಲ್,29,2026 (www.justkannada.in):  ಬಿಸಿಲಿನ ತಾಪದಿಂದ ಬಸವಳಿದಿದ್ದ ರಾಜ್ಯ ರಾಜಧಾನಿ ಬೆಂಗಳೂರಿನ ಜನತೆಗೆ ವರುಣ ತನ್ನ ಕೃಪೆ ತೋರಿದ್ದಾನೆ. ನಗರದಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು  ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಪ್ರಮುಖ ರಸ್ತೆಗಳು ನದಿಗಳಂತಾಗಿ ಮಾರ್ಪಟ್ಟಿವೆ. ನಗರದ ವಿಧಾನಸೌಧ, ಮೆಜೆಸ್ಟಿಕ್  ಶಾಂತಿನಗರ,  ಕೋರಮಂಗಲ ರಾಜಾಜಿನಗರ, ಜೆಪಿ ನಗರ,ಮಲ್ಲೇಶ್ವರಂ, ಜಯನಗರ ಸೇರಿ ಹಲವು ಕಡೆಗಳಲ್ಲಿ ವರುಣನ ಆರ್ಭಟ ಜೋರಾಗಿದೆ.

ಭಾರಿ ಮಳೆಯಿಂದಾಗಿ ಮರಬಿದ್ದು ಶೇಷಾದ್ರಿಪುರಂನ ನಾಗಪ್ಪ ರಸ್ತೆ ಬಂದ್ ಆಗಿದೆ.  ಸತತವಾಗಿ ಸುರಿಯುತ್ತಿರುವ  ಮಳೆಯಂದಾಗಿ ವಿಧಾನಸೌಧದ ಆವರಣಕ್ಕೂ ನೀರು ನುಗ್ಗಿದೆ. ಆಲಿಕಲ್ಲುಗಳು ಸಹ ವಿಧಾನಸೌಧದ ಗೋಡೆಗಳಿಗೆ ಅಪ್ಪಳಿಸಿದೆ.  ಭದ್ರತಾ ಸಿಬ್ಬಂದಿ ಹಾಗೂ ಅಲ್ಲಿಗೆ ಆಗಮಿಸುವ ಜನಪ್ರತಿನಿಧಿಗಳು, ಅಧಿಕಾರಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ವೈಟ್‌ ಫೀಲ್ಡ್‌, ಸಿಲ್ಕ್ ಬೋರ್ಡ್, ಟಿನ್ ಫ್ಯಾಕ್ಟರಿ, ಕೋರಮಂಗಲ, ಇಂದಿರಾನಗರ, ಮೆಜೆಸ್ಟಿಕ್, ಶಾಂತಿ ನಗರ ಮತ್ತು ಕೆ.ಆರ್. ವೃತ್ತದಂತಹ ಪ್ರದೇಶಗಳಲ್ಲಿ ಮಳೆ ನೀರು ರಸ್ತೆಯಲ್ಲೇ ನಿಂತು ವಾಹನ ಸವಾರರು ಪರದಾಡುವಂತಾಗಿದೆ.

Key words: Heavy rains, Bengaluru, traffic

The post ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಭಾರೀ ಮಳೆಗೆ ಬೆಳೆ ಹಾನಿ: ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸಿ- ಕೇಂದ್ರ ಸಚಿವ ಹೆಚ್‌ ಡಿಕೆ ಒತ್ತಾಯ
ಬೆಂಗಳೂರು, ಸೆಪ್ಟೆಂಬರ್‌, 29,2025 (www.justkannada.in):  ಕಲ್ಯಾಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನೆರೆ ಹಾವಳಿ ಉಂಟಾಗಿ ಸಾಕಷ್ಟು ಜನರು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ತಕ್ಷಣವೇ ಸಂಕಷ್ಟಕ್ಕೀಡಾಗಿರುವ ಜನರ ನೆರವಿಗೆ ತಕ್ಷಣವೇ ಧಾವಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಕಲ್ಯಾಣ ಕರ್ನಾಟಕದ ಕಲಬುರಗಿ, ವಿಜಯಪುರ, ಬೀದರ್, ರಾಯಚೂರು ಮತ್ತು ಕೊಪ್ಪಳ ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರೀ ಪ್ರವಾಹ ಉಂಟಾಗಿ ಜನರು ಅತೀವ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಕ್ಷೇಮಕ್ಕಾಗಿ ನಾನು ಹೃದಯಪೂರ್ವಕವಾಗಿ ಪ್ರಾರ್ಥಿಸುತ್ತೇನೆ. ಈ ಸಂಕಷ್ಟದ ಸಮಯದಲ್ಲಿ ಪ್ರತಿಯೊಬ್ಬರ ಜೀವ ರಕ್ಷಣೆ, ಅವರಿಗೆ ಅಗತ್ಯ ಸೌಕರ್ಯ ಕಲ್ಪಿಸುವುದು ರಾಜ್ಯ ಸರ್ಕಾರದ ಆದ್ಯ ಕರ್ತವ್ಯ ಎಂದಿದ್ದಾರೆ.

ಜನರ ಪ್ರಾಣ ನಷ್ಟದ ಜೊತೆಗೆ ಈ ಜಿಲ್ಲೆಗಳಲ್ಲಿ ತೀವ್ರ ಬೆಳೆನಷ್ಟ ಮತ್ತು ಹಾನಿ ಸಂಭವಿಸಿದೆ. ರೈತರ ಸ್ಥಿತಿ ಹೃದಯವಿದ್ರಾವಕವಾಗಿದ್ದು, ಅವರಿಗೆ ಸೂಕ್ತ-ಸಕಾಲಿಕ ಪರಿಹಾರ ಒದಗಿಸಬೇಕು. ಇದರಿಂದ ಅವರು ತಮ್ಮ ಜೀವನೋಪಾಯವನ್ನು ಮರಳಿ ಪಡೆಯಲು ಸಾಧ್ಯವಾಗುತ್ತದೆ ಎಂದು ಹೆಚ್ ಡಿಕೆ ತಿಳಿಸಿದ್ದಾರೆ.

ನೆರೆ ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಪರಿಹಾರ ಕ್ರಮಗಳ ತ್ವರಿತ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು ನಾನು ಖುದ್ದಾಗಿ ಕಲಬುರಗಿ, ಯಾದಗಿರಿ, ವಿಜಯಪುರ, ಬೀದರ್ ಮತ್ತು ರಾಯಚೂರು ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿ ಪರಿಹಾರ ಕಾರ್ಯ, ಆಗಿರುವ ನಷ್ಟದ ಬಗ್ಗೆ ಮಾಹಿತಿ ಪಡೆದು ತುರ್ತು ಕ್ರಮ ವಹಿಸುವಂತೆ ಸೂಚಿಸಿದ್ದೇನೆ ಎಂದು ಹೆಚ್ ಡಿಕೆ ತಿಳಿಸಿದ್ದಾರೆ.

Key words: Heavy rains, damage crops, Union Minister, HDK , farmers

The post ಭಾರೀ ಮಳೆಗೆ ಬೆಳೆ ಹಾನಿ: ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸಿ- ಕೇಂದ್ರ ಸಚಿವ ಹೆಚ್‌ ಡಿಕೆ ಒತ್ತಾಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಭಾರೀ ಮಳೆ ನೆರ ಹಾವಳಿ: ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ಸಚಿವ ಪ್ರಿಯಾಂಕ್ ಖರ್ಗೆ
ಕಲ್ಬುರ್ಗಿ,ಸೆಪ್ಟಂಬರ್,27,2025 (www.justkannada.in): ಕಲ್ಬುರ್ಗಿ ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕಿಸಿದರು.

ಬೆಣ್ಣತೊರಾ ನದಿಯ ನೀರಿನಿಂದ ಪ್ರವಾವಕ್ಕೀಡಾಗಿರುವ ಕಾಳಗಿ ತಾಲ್ಲೂಕಿನ ಕಣಸೂರು ಗ್ರಾಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಹಾಗೆಯೇ  ಹಳೆ ಹೆಬ್ಬಾಳ ಗ್ರಾಮದಲ್ಲಿ ಮಳೆಯಿಂದ ಬಿದ್ದ ಮನೆಯನ್ನು ಪರಿಶೀಲಿಸಿ ಹಾನಿಗೊಳಗಾದ ಮನೆಗಳ ಸರ್ವೆ ನಡೆಸಿ ತಕ್ಷಣ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದರು.

ಹಳೆ ಹೆಬ್ಬಾಳ ಗ್ರಾಮವನ್ನು ಸ್ಥಳಾಂತರಿಸುವ ಬಗ್ಗೆ ಗ್ರಾಮಸ್ಥರು  ಇಟ್ಟು ಬೇಡಿಕೆಗೆ ಸ್ಪಂದಿಸಿದ ಸಚಿವ ಪ್ರಿಯಾಂಕ್ ಖರ್ಗೆ ಮಳೆ ತುಸು ಕಡಿಮೆಯಾದ ನಂತರ ಗ್ರಾಮಕ್ಕೆ ಭೇಟಿ ನೀಡಿ ಬೇಡಿಕೆ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದರು. ಗ್ರಾಮಸ್ಥರೊಂದಿಗೆ ಗ್ರಾಮಸಭೆ ನಡೆಸುವಂತೆ ಸ್ಥಳದಲ್ಲಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಹಾಗೂ ಉಪವಿಭಾಗಾಧಿಕಾರಿ ಸಾಹಿತ್ಯ ಆಲದಕಟ್ಟಿ ಅವರಿಗೆ ಸೂಚಿಸಿದರು.

Key words: Heavy rains, Minister, Priyank Kharge, visits, flood area

The post ಭಾರೀ ಮಳೆ ನೆರ ಹಾವಳಿ: ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯದಲ್ಲಿ ಆ.15ರವರೆಗೆ ಭಾರಿ ಮಳೆ ಮುನ್ಸೂಚನೆ.
ಬೆಂಗಳೂರು,ಆಗಸ್ಟ್,12,2025 (www.justkannada.in):  ರಾಜ್ಯದಲ್ಲಿ ಆಗಸ್ಟ್ 15ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯ ವಾಯುವ್ಯ ಭಾಗದಲ್ಲಿ ಆಗಸ್ಟ್ 13 ರಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ಮುಂದಿನ ವಾರ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡು ದಕ್ಷಿಣ ಒಳನಾಡಿನಲ್ಲಿ  ಆಗಸ್ಟ್ 15ರವರೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 16 ರಂದು ಕರಾವಳಿ ಜಿಲ್ಲೆಗಳು ಸೇರಿ ರಾಜ್ಯದಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಆಗಸ್ಟ್ 13 ರಿಂದ 17ರ ವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ ಜಿಲ್ಲೆಗಳ ಹಲವು ಕಡೆ ಭಾರಿ ಮಳೆ ಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಆಗಸ್ಟ್ 12 ರಿಂದ 18ರವರೆಗೆ ಬೆಂಗಳೂರಿನ ಕೆಲವೆಡೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ.

Key words: Heavy rains, forecast , state

The post ರಾಜ್ಯದಲ್ಲಿ ಆ.15ರವರೆಗೆ ಭಾರಿ ಮಳೆ ಮುನ್ಸೂಚನೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಭಾರೀ ಮಳೆ: ಕೆಆರ್ ಎಸ್ ಜಲಾಶಯ ಭರ್ತಿಗೆ ಇನ್ನು 4 ಅಡಿ ಮಾತ್ರ ಬಾಕಿ
ಮಂಡ್ಯ,ಜೂನ್,23,2025 (www.justkannada.in): ರಾಜ್ಯದಲ್ಲಿ ಮುಂಗಾರು ಮಳೆ ಉತ್ತಮವಾಗಿ ಆಗುತ್ತಿದ್ದು ಜಲಾಶಯಗಳಿಗೆ ನೀರು ಹರಿದು ಬರುತ್ತಿದೆ. ಈ ಮಧ್ಯೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ ಎಸ್ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ.

ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ 124 ಅಡಿಯಿರವ ಕೆಆರ್ ಎಸ್ ಜಲಾಶಯ ಈಗಾಗಲೇ 120 ಅಡಿ ಭರ್ತಿಯಾಗಿದೆ. ಪೂರ್ತಿ ಭರ್ತಿಯಾಗಲು ಇನ್ನು ನಾಲ್ಕು ಅಡಿ ಮಾತ್ರ ಬಾಕಿ ಇದೆ. ಇದು ಕೂಡ ಒಂದು ವಾರದಲ್ಲಿ ಭರ್ತಿಯಾಗುವ ಸಾಧ್ಯತೆ ಇದ್ದು ಈ ಮೂಲಕ ಇದೇ ಮೊದಲ ಬಾರಿಗೆ ಕೆಆರ್ ಎಸ್ ಜಲಾಶಯ ಜೂನ್ ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಭರ್ತಿಯಾದಂತಾಗುತ್ತದೆ. ಕೆಆರ್ ಎಸ್ ಜಲಾಶಯದ ನೀರಿನ ಸಂಗ್ರಹ ಮಟ್ಟ 43 ಟಿಎಂಸಿ ಆಗಿದೆ.

ಇನ್ನು ಇಂದು 4 ಜಿಲ್ಲಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ  ಕೊಡಗು, ಕೋಲಾರ, ಬಳ್ಳಾರಿ, ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

Key words: Heavy rains,  4 feet, fill,  KRS reservoir

The post ಭಾರೀ ಮಳೆ: ಕೆಆರ್ ಎಸ್ ಜಲಾಶಯ ಭರ್ತಿಗೆ ಇನ್ನು 4 ಅಡಿ ಮಾತ್ರ ಬಾಕಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನೈರುತ್ಯ ಮಾನ್ಸೂನ್ ಅಬ್ಬರಕ್ಕೆ ಜನ ಜೀವನ ತತ್ತರ : ಇನ್ನೂ ಒಂದು ವಾರ ಭಾರಿ ಮಳೆ ಸಾಧ್ಯತೆ
ಮೈಸೂರು,ಮೇ,26,2025 (www.justkannada.in): ಈ ಬಾರಿ ವಾಡಿಕೆಗಿಂತ ಮೊದಲೇ ನೈರುತ್ಯ ಮಾನ್ಸೂನ್  ಪ್ರವೇಶಿಸಿದ್ದು. ಆರಂಭವಾದ ದಿನದಿಂದಲೇ ಮಾನ್ಸೂನ್ ಮಳೆ ಅಬ್ಬರಿಸುತ್ತಿದೆ. ವರುಣಾರ್ಭಟಕ್ಕೆ ಜನ ಜೀವನ ತತ್ತರವಾಗಿದ್ದು ಇನ್ನೂ ಒಂದು ವಾರಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ.

ಅರಬ್ಬೀ ಸಮಯದಲ್ಲಿ ವಾಯು ಭಾರ ಕುಸಿತ ಹಿನ್ನೆಲೆ, ರಾಜ್ಯಾದ್ಯಂತ ಇನ್ನು ಕೆಲ ದಿನಗಳ ಕಾಲ ಭಾರಿ ಮಳೆಯಾಗುವ ಬಗ್ಗೆ ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ, ದಕ್ಷಿಣ ಒಳನಾಡು,ಉಡುಪಿ,ಮಂಗಳೂರು,ಕೊಡುಗು, ಶಿವಮೊಗ್ಗ ಚಿಕ್ಕಮಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.

ಈಗಾಗಲೇ ಕಳೆದ ಒಂದು ವಾರದಿಂದ ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರಿ ಮಳೆಯಾಗಿದ್ದು, ಕರಾವಳಿ, ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರಿ ಮಳೆಗೆ ಅಲ್ಲಲ್ಲಿ ಅವಾಂತರ ಉಂಟಾಗಿದ್ದು  ಮರಗಳು,ವಿದ್ಯುತ್ ಕಂಬಗಳು, ಧರೆಗುರುಳಿದ್ದು, ಕೆಲವೆಡೆ ಪ್ರಾಣಹಾನಿ ಉಂಟಾಗಿದೆ.

ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ನದಿ ಮೂಲಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದ್ದು, ಇನ್ನೂ ಒಂದು ವಾರಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಮೈಸೂರು ಮಂಡ್ಯ ಹಾಸನದಲ್ಲೂ ದಿನವಿಡಿ  ಮಳೆರಾಯ ಅಬ್ಬರಿಸಿದ್ದು ಇಂದೂ ಕೂಡ ಮುಂದುವರಿದ ಜಿಟಿ ಜಿಟಿ ಮಳೆಯಾಗುತ್ತಿದೆ.

ದೈನಂದಿನ ಚಟುವಟಿಕೆಗಳಿಗೆ ಮಳೆರಾಯ ಅಡ್ಡಿಪಡಿಸಿದ್ದು  ಕೆಲಸಕ್ಕೆ ತೆರಳುವವರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಮೈಸೂರಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇಂದಿನಿಂದ ಆರಂಭವಾಗಬೇಕಿದ್ದ ಶಾಲೆಗಳಿಗೂ ರಜೆ ನೀಡಲಾಗಿದೆ. ಮಳೆ ಹಿನ್ನಲೆಯಲ್ಲಿ ಕೊಡಗು ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Key words: monsoon, Heavy rains, another, week

The post ನೈರುತ್ಯ ಮಾನ್ಸೂನ್ ಅಬ್ಬರಕ್ಕೆ ಜನ ಜೀವನ ತತ್ತರ :  ಇನ್ನೂ ಒಂದು ವಾರ ಭಾರಿ ಮಳೆ ಸಾಧ್ಯತೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ
ಬೆಂಗಳೂರು,ಮೇ,24,2025 (www.justkannada.in): ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ನಾಳೆಯಿಂದ ಮೇ 27ರವರೆಗೆ ಭಾರೀ ಮಳೆಯಾಗಲಿದ್ದು,  ರೆಡ್ ಅಲರ್ಟ್ ಘೋಷಿಸಲಾಗಿದೆ.

ಇದಲ್ಲದೇ ರಾಜ್ಯದ ವಿವಿಧೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಈ ಬಗ್ಗೆ ಹವಾಮಾನ ಇಲಾಖೆಯ ತಜ್ಞ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದು, ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಮೇ.24ರಿಂದ ಮೇ.27ರವರೆಗೆ ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ರೆಡ್ ಅಲರ್ಟ್  ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

Key words: Heavy rains, state, three days, Red Alert

The post ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯಾದ್ಯಂತ ಮುಂದಿನ ಮೂರ್ನಾಲ್ಕು ದಿನ ಭಾರಿ ಮಳೆ: ಆರೇಂಜ್, ಯೆಲ್ಲೋ ಅಲರ್ಟ್ ಘೋಷಣೆ.!
ಬೆಂಗಳೂರು,ಮೇ,19,2025 (www.justkannada.in):   ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮೂರ್ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾವೇರಿ, ಬಳ್ಳಾರಿ , ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ಗದಗ ಕೊಪ್ಪಳ ವಿಜಯಪುರದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೇ 21 ಮತ್ತು 22ರಂದು ಅತೀ ಹೆಚ್ಚು ಮಳೆ ಅಂದರೆ ಗರಿಷ್ಠ 200 ಮಿಲಿ ಮೀಟರ್ ಗೂ ಹೆಚ್ಚು ಮಳೆ ಬರುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನೂ ಮೇ 21ರವರೆಗೆ ಕರಾವಳಿ ಈ ಜಿಲ್ಲೆಗಳು ಸೇರಿದಂತೆ ಬೆಳಗಾವಿ, ಬಾಗಲಕೋಟ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಆಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ನೀಡಿದೆ.

Key words: Heavy rains,  across, state: Orange, yellow alert

The post ರಾಜ್ಯಾದ್ಯಂತ ಮುಂದಿನ ಮೂರ್ನಾಲ್ಕು ದಿನ ಭಾರಿ ಮಳೆ:  ಆರೇಂಜ್, ಯೆಲ್ಲೋ ಅಲರ್ಟ್ ಘೋಷಣೆ.! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಭಾರಿ ಮಳೆ ಹಿನ್ನೆಲೆ: ಬೆಂ.ನಗರ ಜಿಲ್ಲೆಯಾದ್ಯಂತ ಇಂದು ಶಾಲೆಗಳಿಗೆ ರಜೆ ಘೋಷಣೆ
ಬೆಂಗಳೂರು ನಗರ , ಅಕ್ಟೋಬರ್ 21,2024 (www.justkannada.in): ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ  ಮಳೆಯಾಗುತ್ತಿದ್ದು,  21.10.2024  ರಂದು ಅಂದರೆ ಇಂದು  ಮುಂಜಾಗೃತ ಕ್ರಮವಾಗಿ  ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ  ಬೆಂಗಳೂರು ನಗರ ಜಿಲ್ಲೆಯ  ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ  ಹಾಗೂ ಖಾಸಗಿ / ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ  ಜಿಲ್ಲಾ  ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ ಜಿ ಅವರು, ಮೌಖಿಕವಾಗಿ ಆದೇಶಿಸಿದ್ದಾರೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ  ಘೋಷಿಸಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಇನ್ನೇನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸಬೇಕೆಂದು ತಿಳಿಸಿದ್ದಾರೆ.

ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ.  ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು  ಜಿಲ್ಲಾಧಿಕಾರಿ ಜಗದೀಶ ಜಿ ತಿಳಿಸಿದ್ದಾರೆ.

Key words: heavy rains, Holiday, Bangalore, today

The post ಭಾರಿ ಮಳೆ ಹಿನ್ನೆಲೆ: ಬೆಂ.ನಗರ ಜಿಲ್ಲೆಯಾದ್ಯಂತ ಇಂದು ಶಾಲೆಗಳಿಗೆ ರಜೆ ಘೋಷಣೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯದ 7 ಜಿಲ್ಲೆಗಳಲ್ಲಿ ಭಾರಿ ಮಳೆ: ಅರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು,ಜುಲೈ, 26,2024 (www.justkannada.in): ರಾಜ್ಯದ ಕರಾವಳಿ ಸೇರಿದಂತೆ 7 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ  ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇನ್ನು ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್ ​ಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

Key words: Heavy rains, 7 districts, state

The post ರಾಜ್ಯದ 7 ಜಿಲ್ಲೆಗಳಲ್ಲಿ ಭಾರಿ ಮಳೆ:  ಅರೆಂಜ್ ಅಲರ್ಟ್ ಘೋಷಣೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.