Higher education should be available to all Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಎಲ್ಲರಿಗೂ, ಎಲ್ಲಾ ಕಡೆಯೂ ಉನ್ನತ ಶಿಕ್ಷಣ ದೊರೆಯಬೇಕು: ಥಾವರ್ ಚಂದ್ ಗೆಹ್ಲೋಟ್
ಮೈಸೂರು, ಜುಲೈ ೦2, 2023 (www.justkannada.in): ಉನ್ನತ ಶಿಕ್ಷಣವು ಎಲ್ಲರಿಗೂ ಹಾಗೂ ಎಲ್ಲಾ ಕಡೆಯೂ ಸಿಗಬೇಕೆಂಬ ಉದ್ದೇಶದಿಂದ ಮುಕ್ತ ವಿಶ್ವವಿದ್ಯಾನಿಲಯಗಳನ್ನು ಸ್ಥಾಪಿಸಲಾಯಿತು ಎಂದು ಕರ್ನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯಗಳ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅವರು ತಿಳಿಸಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಹಮ್ಮಿಕೊಂಡಿದ್ದ ಕರಾಮುವಿ 18ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಕ್ತ ವಿಶ್ವವಿದ್ಯಾನಿಲಯಗಳು ದೂರ ಶಿಕ್ಷಣ ನೀಡುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಕಳೆದ ಎರಡೂವರೆ ದಶಕಗಳಲ್ಲಿ ದೂರ ಶಿಕ್ಷಣದ ಮೂಲಕ ದೇಶದಾದ್ಯಂತ ಉನ್ನತ ಶಿಕ್ಷಣಕ್ಕೆ ಅಪಾರ ಕೊಡುಗೆ ನೀಡುವ ಮೂಲಕ ಸಂಸ್ಥೆಯಿಂದ ಎ ಪ್ಲಸ್ ಮಾನ್ಯತೆ ಪಡೆದಿದೆ ಎಂದರು.

ಸಮಾಜದಲ್ಲಿ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳಿಂದ ಬಂದ ಅನೇಕ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಮುಕ್ತ ವಿಶ್ವವಿದ್ಯಾನಿಲಯಗಳು ಕಾರಣವಾಗಿವೆ. ದೂರ ಶಿಕ್ಷಣವು ಪ್ರಸ್ತುತ ಭಾರತೀಯ ಶೈಕ್ಷಣಿಕ ವ್ಯವಸ್ಥೆಯ ಮೇಲೆ ಉತ್ತಮ ಪರಿಣಾಮ ಬೀರಿದೆ. ಇಂದು ಮಹಿಳೆಯರು ಹೆಚ್ಚು ಪದಕಗಳನ್ನು ಪಡೆದಿರುವುದು ಮಹಿಳಾ ಸಬಲೀಕರಣದ ಪ್ರತೀಕವಾಗಿದೆ. ವಿವೇಕಾನಂದರ ಯುವಕರಿಗೆ ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂದು ನೀಡಿದ ಕರೆಯಂತೆ ಎಲ್ಲರೂ ದೇಶದ ಸರ್ವತೋಮುಖ ಪ್ರಗತಿಗೆ ಶ್ರಮಿಸಬೇಕು ಎಂದು ತಿಳಿಸಿದರು.

ಗುಣಮಟ್ಟದ ಶಿಕ್ಷಣ, ಮಾರ್ಗದರ್ಶನ, ಕೌಶಲ್ಯ, ಗುಣಾತ್ಮಕ ಚಿಂತನೆ ಮತ್ತು ಭವಿಷ್ಯ ನಿರ್ಮಾಣ ಇವೆಲ್ಲವೂ ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಕಾರಣವಾಗುತ್ತವೆ. ರಾಷ್ಟ್ರದ ಪ್ರಗತಿಯಲ್ಲಿ ಪ್ರತಿಯೊಬ್ಬ ಸಾರ್ವಜನಿಕರ ಕೊಡುಗೆ ಅಗತ್ಯ. ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಸಾರ್ವಭೌಮ ರಾಷ್ಟ್ರ. ವಿಶ್ವಕಲ್ಯಾಣ ಮತ್ತು ವಿಶ್ವಶಾಂತಿಯನ್ನು ಭಾರತ ದೇಶ ಸಾರುತ್ತಿದೆ. ಆದರೆ

ಇಂದು ಇಡೀ ವಿಶ್ವವೇ ಪರಿಸರದ ಸಮಸ್ಯೆಗಳನ್ನು ಎದುರಿಸುತ್ತಿದೆ. ಪರಿಸರವನ್ನು ಸಂರಕ್ಷಣೆ ಮಾಡುವ ಜವಾಬ್ದಾರಿ ಎಲ್ಲರ ಮೇಲಿದೆ. ಪ್ಲಾಸ್ಟಿಕ್ ಮುಕ್ತ ವಲಯಗಳನ್ನಾಗಿ ಮಾಡುವುದು, ಮಳೆ ನೀರು ಕೊಯ್ಲುಗಳನ್ನು ಅಳವಡಿಸಿಕೊಳ್ಳುವುದು ಹಾಗೂ ಇನ್ನಿತರ ಕ್ರಮಗಳನ್ನು ಕೈಗೊಳ್ಳುವ ಮೂಲಕ ಪರಿಸರ ಸಂರಕ್ಷಣೆಯ ಆದ್ಯ ಕರ್ತವ್ಯ ನಿಮ್ಮ ಮೇಲಿದೆ ಎಂದರು.

ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಅಶೋಕ್ ಎಸ್ ಕಿಣಗಿ ಮಾತನಾಡಿ, ವಿವಿಧ ಶೈಕ್ಷಣಿಕ ಅಧ್ಯಯನ ವ್ಯಾಸಂಗ ಕ್ರಮಗಳಲ್ಲಿ ಯಶಸ್ವಿಯಾಗಿ ಪ್ರಶಸ್ತಿಗಳನ್ನು ಮತ್ತು ಪದವಿಗಳನ್ನು ಸ್ವೀಕರಿಸುವ ಎಲ್ಲಾ ಪದವೀಧರರಿಗೆ ಹೃತ್ಪೂರ್ವಕ ಅಭಿನಂದನೆ. ಮುಂದಿನ ದಿನಗಳಲ್ಲಿ ಯಾವುದೇ ಕಾರ್ಯಕ್ಷೇತ್ರದಲ್ಲಿ ಕಾರ್ಯನಿರ್ವಹಣೆ ಮಾಡಿ ಉನ್ನತ ಸ್ಥಾನವನ್ನು ಅಂಗೀಕರಿಸಿ ಜಾಗತಿಕ ವ್ಯಕ್ತಿಗಳಾಗಿ ಪ್ರಸಿದ್ಧಿ ಪಡೆಯಿರಿ ಎಂದು ತಮ್ಮ ಅಭಿಲಾಷೆಯನ್ನು ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ ಚಿಂತನಶೀಲ ಸಂಪ್ರದಾಯವನ್ನು ಮುಂದುವರಿಸಿಕೊಂಡು ತಮ್ಮದೇ ಸೇವಾ ಕ್ಷೇತ್ರದಲ್ಲಿ ಸಮಾಜಕ್ಕೆ ಉನ್ನತ ಮಟ್ಟದ ಹಾಗೂ ಗಮನಾರ್ಹ ಸೇವೆ ಸಲ್ಲಿಸಿರುವುದನ್ನು ಗುರುತಿಸಿ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು, ಧನ್ವಂತ್ರಿ ಎಜುಕೇಶನಲ್ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷರು ಹಾಗೂ ಶ್ರೀ ಲಕ್ಷ್ಮಿ ಶಿಕ್ಷಣ ಸಂಸ್ಥೆಗಳ ಸಮೂಹದ ಮುಖ್ಯಸ್ಥರೂ ಆದ ಎನ್ ರಾಮಚಂದ್ರಯ್ಯ ಹಾಗೂ ಚಿಲ್ಡ್ರನ್ಸ್ ಎಜುಕೇಶನ್ ಸೊಸೈಟಿ ಅಧ್ಯಕ್ಷರು ಹಾಗೂ ಆಕ್ಸ್ಫರ್ಡ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಎಸ್ ಎನ್ ವೆಂಕಟಲಕ್ಷ್ಮಿ ನರಸಿಂಹರಾಜು ಅವರಿಗೆ ಗೌರವ ಡಾಕ್ಟರೇಟ್ ಪದವಿಗಳನ್ನು ನೀಡಿರುವುದು ಅತ್ಯಂತ ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲ ಸಚಿವರಾದ ಪ್ರೊ. ಕೆ.ಎಲ್.ಎನ್ ಮೂರ್ತಿ,ಮೌಲ್ಯಮಾಪನ ವಿಭಾಗದ ಕುಲಸಚಿವರಾದ ಪ್ರೊ. ಕೆ ಬಿ ಪ್ರವೀಣ, ಪ್ರೊ. ಲಕ್ಷ್ಮಿ ಸೇರಿದಂತೆ ಕರಾಮುವಿ ಅಧ್ಯಾಪಕ ಹಾಗೂ ಅಧ್ಯಾಪಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

The post ಎಲ್ಲರಿಗೂ, ಎಲ್ಲಾ ಕಡೆಯೂ ಉನ್ನತ ಶಿಕ್ಷಣ ದೊರೆಯಬೇಕು: ಥಾವರ್ ಚಂದ್ ಗೆಹ್ಲೋಟ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.