inspect Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಫೆ.14ರಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ಜಾತ್ರೆ ಹಿನ್ನೆಲೆ: DC ಮತ್ತು SP ಭೇಟಿ, ಪರಿಶೀಲನೆ
ಚಾಮರಾಜನಗರ,ಫೆಬ್ರವರಿ,9,2026 (www.justkannada.in): ಫೆಬ್ರವರಿ 14ರಿಂದ 18ರವರೆಗೆ ಐದು ದಿನಗಳ ಕಾಲ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ, ಕಾವೇರಿ ನದಿ ದಾಟಿ ಪಾದಯಾತ್ರೆ ಬರುವ ಬಸವನಕಡ ಪ್ರದೇಶಕ್ಕೆ ಜಿಲ್ಲಾಧಿಕಾರಿ ರೂಪ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕರ್ನಾಟಕ ಮತ್ತು ತಮಿಳುನಾಡಿನಿಂದ ಲಕ್ಷಾಂತರ ಭಕ್ತರು ಪಾದಯಾತ್ರೆಯ ಮೂಲಕ ಆಗಮಿಸುವುದರಿಂದ, ಕನಕಪುರ–ರಾಮನಗರ–ಚನ್ನಪಟ್ಟಣ–ಮಾಗಡಿ ಪ್ರದೇಶಗಳಿಂದ ಕಾವೇರಿ ನದಿ ಸಂಗಮದ ಮೂಲಕ ಬಸವನಕಡ ತಲುಪಿ ಅರಣ್ಯ ಮಾರ್ಗವಾಗಿ ಎಲ್ಲೇಮಾಳ–ಶಾಗ್ಯ–ಹಲಗಾಪುರ–ತೋಮಿಯಾರ್ ಪಾಳ್ಯ–ಡಿ.ಎಮ್. ಸಮುದ್ರ ಮಾರ್ಗವಾಗಿ ಶ್ರೀ ಕ್ಷೇತ್ರಕ್ಕೆ ತೆರಳುವ ಈ ಸಾಂಪ್ರದಾಯಿಕ ಮಾರ್ಗದ ಸುರಕ್ಷತೆ ಮತ್ತು ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಯಿತು.

ಕೆ.ಆರ್.ಎಸ್ ಜಲಾಶಯದಿಂದ ನೀರಿನ ಪ್ರಮಾಣ ಕಡಿತಗೊಂಡಿರುವ ಹಿನ್ನೆಲೆಯಲ್ಲಿ, ಕಾವೇರಿ ನದಿಯನ್ನು ದಾಟುವ ಸ್ಥಳದಲ್ಲಿ ಭಕ್ತರ ಸುರಕ್ಷತೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಬೇಕು. ಅರಣ್ಯ ಪ್ರದೇಶದಲ್ಲಿ ಪಾದಯಾತ್ರೆ ಮಾಡುವ ಭಕ್ತರಿಗಾಗಿ ಅರಣ್ಯ ಇಲಾಖೆ ಹೆಚ್ಚಿನ ಪೆಟ್ರೋಲಿಂಗ್ ತಂಡ ನಿಯೋಜನೆ ಮಾಡಬೇಕು. ಗ್ರಾಮ ಪಂಚಾಯಿತಿ ವತಿಯಿಂದ ಶುದ್ಧ ಕುಡಿಯುವ ನೀರು, ಬೆಳಕು ಮತ್ತು ಮೂಲಭೂತ ಸೌಲಭ್ಯಗಳ ವ್ಯವಸ್ಥೆ. ಎಸ್‌ಟಿಆರ್‌ಎಫ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳನ್ನು ಮುಂಜಾಗ್ರತ ಕ್ರಮವಾಗಿ ನಿಯೋಜಿಸುವಂತೆ ಸೂಚನೆ ನೀಡಿದರು.

ಪಾದಯಾತ್ರೆಯ ಮಾರ್ಗದಲ್ಲಿ ಆರೋಗ್ಯ ಇಲಾಖೆಯ ತುರ್ತು ಚಿಕಿತ್ಸಾ ಕೇಂದ್ರಗಳು, ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳ ನಿಯೋಜನೆ ಮಾಡುವಂತೆ ಸೂಚನೆ ನೀಡಲಾಯಿತು. ಪಾದಯಾತ್ರಿಕರು ಬೆಳಕು ಇರುವ ಸಮಯದಲ್ಲಷ್ಟೇ ಅರಣ್ಯ ಪ್ರದೇಶದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ರೂಪ ಅವರು ಮನವಿ ಮಾಡಿದರು.

ಲಕ್ಷಾಂತರ ಭಕ್ತರು ನಿರೀಕ್ಷೆಗೂ ಮೀರಿ ಆಗಮಿಸುವ ಸಾಧ್ಯತೆ ಇದೆ. ಪಾದಯಾತ್ರಿಕರ ಆಚಾರ–ವಿಚಾರಗಳಿಗೆ ಧಕ್ಕೆಯಾಗದಂತೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಭಕ್ತಾದಿಗಳು ಕೂಡ ಜಿಲ್ಲಾಡಳಿತ, ಪೋಲಿಸ್ ಇಲಾಖೆ ಹಾಗೂ ಅರಣ್ಯ ಇಲಾಖೆಗೆ ಸಹಕರಿಸಿ ತಮ್ಮ ಪಾದಯಾತ್ರೆಯನ್ನು ಯಶಸ್ವಿಗೊಳಿಸಬೇಕು, ಎಂದು  ಜಿಲ್ಲಾಧಿಕಾರಿ ರೂಪ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು, ಕೊಳ್ಳೇಗಾಲ ಉಪ ವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್, ಸುರೇಂದ್ರ, ಪ್ರಾಧಿಕಾರದ ಕಾರ್ಯದರ್ಶಿ ರಘು, ತಹಸೀಲ್ದಾರ್ ಚೈತ್ರ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Male Mahadeshwara Hill, fair, Feb. 14, DC, SP visit, inspect

The post ಫೆ.14ರಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ಜಾತ್ರೆ ಹಿನ್ನೆಲೆ:  DC ಮತ್ತು SP ಭೇಟಿ, ಪರಿಶೀಲನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರವಾಹ ಪೀಡಿತ ಪ್ರದೇಶಗಳಿಗೆ ಬಿಜೆಪಿ ನಾಯಕರ ಭೇಟಿ, ಪರಿಶೀಲನೆ
ಬೀದರ್‌,ಸೆಪ್ಟಂಬರ್,29,2025 (www.justkannada.in):  ಭಾರಿ ಮಳೆಯಿಂದಾಗಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಿದ್ದು ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ  ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಇಂದು ಬೀದರ್‌ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೀದರ್‌ ತಾಲ್ಲೂಕಿನ ಪಾನ್‌ ಕಾಶೆಂಪುರ್‌ ಗ್ರಾಮಕ್ಕೆ ಭೇಟಿ ನೀಡಿದ ಬಿಜೆಪಿ ನಾಯಕರು, ಇತ್ತೀಚೆಗೆ ಸಾಲದ ಹೊರೆಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ರೈತ ಮಹಿಳೆ ಗಂಗಮ್ಮ ಮಚಕೂರೆ ಎಂಬುವರ ಮನೆಗೆ ತೆರಳಿ ವೈಯಕ್ತಿಕ ನೆರವು ನೀಡಿದರು. ಬಳಿಕ ಬೀದರ್‌ ತಾಲ್ಲೂಕಿನ ಬರೀದಾಬಾದ್‌, ಬುಧೇರಾ ಹಾಗೂ ಇಸ್ಲಾಂಪುರ ಗ್ರಾಮದಲ್ಲಿ ಭಾರಿ ಮಳೆಗೆ ಬೆಳೆ ಹಾನಿಯಾದ ರೈತರ ಜಮೀನುಗಳನ್ನು ವೀಕ್ಷಿಸಿ, ರೈತರಿಗೆ ಸಾಂತ್ವನ ಹೇಳಿದರು.

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ರಾಜಕೀಯ ಮಾಡಲು ನಾವು ಇಲ್ಲಿಗೆ ಬಂದಿಲ್ಲ. ಸಂಕಷ್ಟದಲ್ಲಿರುವ ರೈತರ ಜೊತೆ ಇರಬೇಕು. ಸಂಕಷ್ಟಕ್ಕೆ ಸ್ಪಂದಿಸಬೇಕು. ರಾಜ್ಯ ಸರ್ಕಾರವನ್ನು ಎಚ್ಚರಿಸಲು ಬಂದಿದ್ದೇವೆ. ಎರಡು ದಿನ ಬೀದರ್‌, ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದೇವೆ. ರೈತರ ಸಂಕಷ್ಟ ಅರಿತು ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ಎನ್‌ಡಿಆರ್‌ಎಫ್‌ ಪರಿಹಾರ ಎಷ್ಟು ಬರಬೇಕೋ ಅಷ್ಟು ಬಂದೇ ಬರುತ್ತದೆ. ರಾಜ್ಯ ಸರ್ಕಾರ ಕೂಡ ಮುಂದೆ ಬಂದು ಪರಿಹಾರ ವಿತರಿಸಬೇಕು. ಅಧಿಕಾರಿಗಳನ್ನು ಬಂದು ಭೇಟಿ ಮಾಡಿ ಹೋಗುವುದರಲ್ಲಿ ಅರ್ಥವಿಲ್ಲ. ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣವೇ ಸ್ಪಂದಿಸುವ ಕೆಲಸವಾಗಬೇಕು. ಸರ್ಕಾರ ಆ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

Key words: BJP leaders, visit flood-affected areas, inspect

The post ಪ್ರವಾಹ ಪೀಡಿತ ಪ್ರದೇಶಗಳಿಗೆ ಬಿಜೆಪಿ ನಾಯಕರ ಭೇಟಿ, ಪರಿಶೀಲನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ಖಾಸಗಿ ಬಸ್ ಗಳ ವ್ಯವಸ್ಥೆ: ಬಸ್ ನಿಲ್ಧಾಣಕ್ಕೆ ಅಧಿಕಾರಿಗಳ ಭೇಟಿ, ಪರಿಶೀಲನೆ…
ಮೈಸೂರು,ಏಪ್ರಿಲ್,7,2021(www.justkannada.in):  ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ ಬಸ್ ಸಂಚಾರ ಬಂದ್ ಆಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಸರ್ಕಾರದಿಂದ ಖಾಸಗಿ ಬಸ್ ಗಳ ವ್ಯವಸ್ಥೆ ಮಾಡಲಾಗುತ್ತಿದೆ.

ಈ ನಡುವೆ ಮೈಸೂರಿನಲ್ಲೂ ಸಾರಿಗೆ ಬಸ್ ಗಳ ಸಂಚಾರ ಸ್ಥಗಿತಗೊಂಡಿದ್ದು, ಈ ಹಿನ್ನೆಲೆಯಲ್ಲಿ ಖಾಸಗಿ ಬಸ್ ಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.  ಸರ್ಕಾರಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಗಳು ಸಂಚರಿಸುತ್ತಿವೆ. ಬಸ್ ನಿಲ್ದಾಣಕ್ಕೆ  ಆರ್.ಟಿ.ಓ ಅಧಿಕಾರಿ ದೀಪಕ್  ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಖಾಸಗಿ ಬಸ್ ಗಳ ಪರ್ಮಿಟ್ ಪರಿಶೀಲನೆ  ನಡೆಸಿ ಬಳಿಕ ಮಾತನಾಡಿದ ಆರ್.ಟಿ.ಓ ಅಧಿಕಾರಿ ದೀಪಕ್, ತುರ್ತು ಪರಿಸ್ಥಿತಿ ಹಿನ್ನಲೆ ಖಾಸಗಿ ಬಸ್ ಗಳ ಕಾರ್ಯಾಚರಣೆಗೆ ಅನುವು ಮಾಡಿಕೊಡಲಾಗಿದೆ. ದರದಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಸರ್ಕಾರಿ ದರವನ್ನೇ ನಿಗಧಿ ಮಾಡಲಾಗಿದೆ. ಹೆಚ್ಚು ಹಣ ವಸೂಲಿ ಮಾಡೊದು ಗಮನಕ್ಕೆ ಸೂಕ್ತ ಕ್ರಮ  ಕೈಗೊಳ್ಳಲಾಗುತ್ತದೆ. ಇಂದಿನಿಂದ ಮುಷ್ಕರ ಮುಗಿಯುವವರೆಗೂ ಖಾಸಗಿ ಬಸ್ ಗಳಿಗೆ ತುರ್ತು ಪರ್ಮಿಟ್ ನೀಡಲಾಗಿದೆ. ಅವಶ್ಯಕತೆವಿದ್ದರೆ ಬಸ್ ಗಳ ದಾಖಲಾತಿ ಪರಿಶೀಲಿಸಿ ಸಂಖ್ಯೆ ಹೆಚ್ಚಿಸುತ್ತೇವೆ ಎಂದು ಹೇಳಿದರು.

ಅಗತ್ಯ ಇರುವ ಕಡೆಗಳಿಗೆ ಖಾಸಗಿ ಬಸ್ ಸಂಚಾರ ಮಾಡ್ತಿವೆ- ಮೈಸೂರಿನ ಗ್ರಾಮಾಂತರ ಡಿಟಿಓ ಹೇಮಂತ್ ಕುಮಾರ್…

ಇನ್ನೊಂದೆಡೆ ಮೈಸೂರಿನ ಗ್ರಾಮಾಂತರ ಡಿಟಿಓ ಹೇಮಂತ್ ಕುಮಾರ್ ಮಾತನಾಡಿ,  ಕೊನೆ ಕ್ಷಣದವರೆಗೆ ನಮ್ಮ ಸಿಬ್ಬಂದಿ ಮನವೊಲಿಸಲು ಪ್ರಯತ್ನಿಸಿದವು. ಅವರು ಒಪ್ಪದ ಕಾರಣ ಖಾಸಗಿ ಬಸ್ ಮೂಲಕ ಜನರಿಗೆ ಸೇವೆ ನೀಡುತ್ತಿದ್ದೇವೆ. ಸರ್ಕಾರಿ ದರದಲ್ಲೆ ಸೇವೆ ನೀಡುತ್ತಿದ್ದೇವೆ. ಪ್ರಮುಖ ಮಾರ್ಗಗಳಿಗೆ ಸಂಚಾರಕ್ಕಾಗಿ ಖಾಸಗಿ ಬಸ್ ಓಡಲಾಗುತ್ತಿದೆ.ಮುಷ್ಕರದ ಬಗ್ಗೆ ಹಿರಿಯ ಅಧಿಕಾರಿಗಳು ಏನ್ ಹೇಳ್ತಾರೆ ಅದನ್ನ ಫಾಲೋ ಮಾಡುತ್ತೀವಿ. ಅಗತ್ಯ ಇರುವ ಕಡೆಗಳಿಗೆ ಖಾಸಗಿ ಬಸ್ ಸಂಚಾರ ಮಾಡುತ್ತೇವೆ. ಹೊರರಾಜ್ಯದ ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆ ಆಗಿಲ್ಲ ಎಂದು ತಿಳಿಸಿದರು.

Key words: strike -transport workers-mysore- Private buses-Visit -inspect -officers.

The post ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ಖಾಸಗಿ ಬಸ್ ಗಳ ವ್ಯವಸ್ಥೆ: ಬಸ್ ನಿಲ್ಧಾಣಕ್ಕೆ  ಅಧಿಕಾರಿಗಳ ಭೇಟಿ, ಪರಿಶೀಲನೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬೆಂಗಳೂರು ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ಪರಿಶೀಲನೆ: ಶಾಶ್ವತ ಪರಿಹಾರದ ಭರವಸೆ…
ಬೆಂಗಳೂರು,ಅಕ್ಟೋಬರ್,24,2020(www.justkannada.in):  ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ನೀಡಿ ಪರಿಶೀಲಿನೆ ನಡೆಸಿದರು.

ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರಿ ಮಳೆಗೆ ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದ್ದು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಸಿಎಂ ಬಿಎಸ್ ಯಡಿಯೂರಪ್ಪ ಪರಿಸ್ಥಿತಿ ಅವಲೋಕಿಸಲು ಸಿಟಿ ರೌಡ್ಸ್ ಕೈಗೊಂಡಿದ್ದು ಮೊದಲು ನಗರದ ಹೊಸಕೆರೆಹಳ್ಳಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಸಿಎಂ ಬಿಎಸ್ ಯಡಿಯೂರಪ್ಪಗೆ ಕಂದಾಯ ಸಚಿವ ಆರ್.ಅಶೋಕ್ ಸಾಥ್ ನೀಡಿದರು.

ಮಳೆಹಾನಿ ಬಗ್ಗೆ  ಅಧಿಕಾರಿಗಳು ಮತ್ತು ಸಂತ್ರಸ್ತರಿಂದಲೂ ಮಾಹಿತಿ ಪಡೆದ ಸಿಎಂ ಬಿಎಸ್ ಯಡಿಯೂರಪ್ಪ, ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಲಾ 25 ಸಾವಿರ ಪರಿಹಾರ ಘೋಷಿಸಿದ್ದೇವೆ.  ಮನೆ ಮನೆಗೂ ತೆರಳಿ ಪರಿಹಾರ ನೀಡ್ತೇವೆ. ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿಕೊಡುವ ಭರವಸೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.

ಸಚಿವ ಆರ್ ಅಶೋಕ್ ಅಧಿಕಾರಿಗಳ ಜತೆ ಚರ್ಚಿಸಿದ್ದಾರೆ. ರಾಜಕಾಲುವೆ ಒತ್ತುವರಿ ಎರಡು ಮೂರು ದಿನಗಳಲ್ಲಿ ತೆರವುಗೊಳಿಸುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

Key words: CM BS Yeddyurappa- visit-inspect-Bangalore- rain -areas

The post ಬೆಂಗಳೂರು ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ಪರಿಶೀಲನೆ: ಶಾಶ್ವತ ಪರಿಹಾರದ ಭರವಸೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.