Invest Karnataka | Just Kannada - Daily News Updates

ಇನ್ವೆಸ್ಟ್ ಕರ್ನಾಟಕ -25: 98 ಕಂಪನಿಗಳ ಜತೆ ಹೂಡಿಕೆ ಒಡಂಬಡಿಕೆ- ಸಚಿವ ಎಂ.ಬಿ ಪಾಟೀಲ್
ಬೆಂಗಳೂರು,ಮಾರ್ಚ್,4,2025 (www.justkannada.in):  ಇತ್ತೀಚೆಗೆ ನಡೆಸಲಾದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 98 ಕಂಪನಿಗಳು ಸರಕಾರದೊಂದಿಗೆ ಹೂಡಿಕೆ ಒಪ್ಪಂದ ಮಾಡಿಕೊಂಡಿವೆ. ಈ ಒಪ್ಪಂದಗಳ ಮೂಲಕ 6,23,970 ಕೋಟಿ ರೂ. ಬಂಡವಾಳ ಹರಿದು ಬರಲಿದೆ. ಉಳಿದಂತೆ, 1,101 ಕಂಪನಿಗಳಿಂದ 4,03,533 ಕೋಟಿ ರೂ. ಹೂಡಿಕೆ ಆಗಲಿದ್ದು, ಸಂಬಂಧಿಸಿದ ಸಮಿತಿಗಳು ಇದಕ್ಕೆ ಅನುಮೋದನೆ ನೀಡಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಎಸ್ ವಿ ಸುಂಕನೂರ ಕೇಳಿದ ಪ್ರಶ್ನೆಗೆ ಅವರು ಮಂಗಳವಾದ ಉತ್ತರ ನೀಡಿದರು.

`ಇನ್ವೆಸ್ಟ್ ಕರ್ನಾಟಕ-2025’ರಲ್ಲಿ ರಾಜ್ಯದ 2,892, ಹೊರರಾಜ್ಯಗಳ 286 ಮತ್ತು ವಿದೇಶಗಳ 72 ಹೂಡಿಕೆದಾರ ಉದ್ಯಮಿಗಳು ಪಾಲ್ಗೊಂಡಿದ್ದರು. ಈಗಾಗಲೇ ಒಡಂಬಡಿಕೆಗೆ ಅಂಕಿತ ಹಾಕಿರುವ 98 ಕಂಪನಿಗಳು ಏರೋಸ್ಪೇಸ್, ಆಟೋ ಮತ್ತು ಇ.ವಿ, ಸಿಮೆಂಟ್ ಮತ್ತು ಉಕ್ಕು, ಇಎಸ್ಡಿಎಂ, ಆಹಾರ ಸಂಸ್ಕರಣೆ ಮತ್ತು ಕೃಷಿ, ಮೂಲಸೌಕರ್ಯ ಮತ್ತು ಲಾಜಿಸ್ಟಿಕ್ಸ್, ಆರ್ &ಡಿ ಮತ್ತು ಜಿಸಿಸಿ, ಮರುಬಳಕೆ ಇಂಧನ ಹಾಗೂ ಔಷಧ ತಯಾರಿಕೆ ವಲಯಗಳಿಗೆ ಸೇರಿವೆ ಎಂದು ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ.

ಈ ಹೂಡಿಕೆಗಳು ರಾಜ್ಯದ 21 ಜಿಲ್ಲೆಗಳಲ್ಲಿ ಆಗಲಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅತ್ಯಧಿಕ ಎಂದರೆ 30 ಕಂಪನಿಗಳು 26,331 ಕೋಟಿ ರೂ. ಹೂಡಿಕೆ ಮಾಡಲಿದ್ದರೆ, ಬೆಂಗಳೂರು ನಗರ ಜಿಲ್ಲೆಯಲ್ಲಿ 14 ಕಂಪನಿಗಳು 35,297 ಕೋಟಿ ರೂ. ಬಂಡವಾಳ ತೊಡಗಿಸಲಿವೆ. ಉಳಿದ ಜಿಲ್ಲೆಗಳಲ್ಲಿ 54 ಯೋಜನೆಗಳಿಗೆ ವಿವಿಧ ಕಂಪನಿಗಳು ಹಣ ಹಾಕಲಿವೆ. ವಲಯಗಳ ಪೈಕಿ ಸಾಮಾನ್ಯ ಉತ್ಪಾದನಾ ವಲಯದಲ್ಲಿ ಗರಿಷ್ಠ 23 ಒಡಂಬಡಿಕೆಗಳಾಗಿವೆ ಎಂದು ಅವರು ಅಂಕಿ ಅಂಶಗಳನ್ನು ಒದಗಿಸಿದ್ದಾರೆ.

2022ರಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ 57 ಹೂಡಿಕೆ ಒಡಂಬಡಿಕೆಗಳ ಮೂಲಕ 5.41 ಲಕ್ಷ ಕೋಟಿ ರೂ. ಹೂಡಿಕೆ ಬರುವುದೆಂದು ಹೇಳಲಾಗಿತ್ತು. ಈ ಪೈಕಿ ಏಕಗವಾಕ್ಷಿ ಸಮಿತಿ ಸಭೆಗಳಲ್ಲಿ 20 ಕಂಪನಿಗಳ ಯೋಜನೆಗಳಿಗೆ ಅನುಮೋದನೆ ಕೊಡಲಾಗಿದೆ. ಇದರಿಂದ 2.01 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಆಗಲಿದೆ. ಹೆಚ್ಚಿನವು ಬೃಹತ್ ಯೋಜನೆಗಳಾಗಿದ್ದು, ಇವುಗಳ ನೈಜ ಅನುಷ್ಠಾನಕ್ಕೆ 3ರಿಂದ 5 ವರ್ಷ ಹಿಡಿಯುತ್ತದೆ ಎಂದು ಪಾಟೀಲ ನುಡಿದಿದ್ದಾರೆ.

ಒಪ್ಪಂದಕ್ಕೆ ಸಹಿ‌ ಮಾಡಿದರೂ ಅನುಷ್ಠಾನ ಆಗುತ್ತಿಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಚಿವ ಎಂ.ಬಿ ಪಾಟೀಲ್, ಈ ಬಾರಿ ಆಗಿರುವ ಒಪ್ಪಂದಗಳಲ್ಲಿ ಕನಿಷ್ಠ ಶೇ 70ರಷ್ಟು ಹೂಡಿಕೆ ಆಗುವ ವಿಶ್ವಾಸ ಇದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಹುಬ್ಬಳ್ಳಿಯಲ್ಲಿನ‌ ಇನ್ಫೋಸಿಸ್ ಕ್ಯಾಂಪಸ್ ಇನ್ನೂ ಕಾರ್ಯಾಚರಣೆ ಆರಂಭಿಸಿಲ್ಲ ಎಂಬುದನ್ನು ಸಭಾಪತಿ ಬಸವರಾಜ‌ ಹೊರಟ್ಟಿ ಸೇರಿ ಎಲ್ಲ ಸದಸ್ಯರು ಸಚಿವರ ಗಮನಕ್ಕೆ ತಂದರು. ಈ ಸಂಬಂಧ ಮತ್ತೊಮ್ಮೆ ಸಭೆ ಮಾಡಿ, ಕ್ಯಾಂಪಸ್ ಕಾರ್ಯಾರಂಭ ಮಾಡುವಂತೆ ಸೂಚಿಸಲಾಗುವುದು ಎಂದು ಸಚಿವ ಎಂ.ಬಿ ಪಾಟೀಲ್ ಭರವಸೆ‌ ನೀಡಿದರು.

Key words: Invest Karnataka, agreements, 98 companies, Minister, M.B. Patil

ಇನ್ವೆಸ್ಟ್‌ ಕರ್ನಾಟಕ: ರಾಜ್ಯ ಸರ್ಕಾರದ ಜೊತೆ ಸುಜ್ಲಾನ್‌ ಒಪ್ಪಂದ ; ವಿಜಯಪುರ ಜಿಲ್ಲೆಯಲ್ಲಿ ಗಮನಾರ್ಹ ಹೂಡಿಕೆ.
ಬೆಂಗಳೂರು, ಫೆಬ್ರುವರಿ 12, 2025: ಇಲ್ಲಿ ನಡೆಯುತ್ತಿರುವ ಇನ್ವೆಸ್ಟ್‌ ಕರ್ನಾಟಕ 2025- ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಆಕರ್ಷಿಸುವಲ್ಲಿ ವಿಜಯಪುರ ಜಿಲ್ಲೆಯು ಯಶಸ್ವಿಯಾಗಿದೆ.

ʼನವೀಕರಿಸಬಹುದಾದ ಇಂಧನ ಹಾಗೂ ಕೃಷಿ ಉತ್ಪನ್ನಗಳ ಸಂಸ್ಕರಣೆ ವಲಯದಲ್ಲಿನ ಎರಡು ಪ್ರಮುಖ ಯೋಜನೆಗಳು ವಿಜಯಪುರ ಜಿಲ್ಲೆಯಲ್ಲಿ ಕಾರ್ಯಗತಗೊಳ್ಳಲಿವೆ.  ಇದರಿಂದ  ಈ ಪ್ರದೇಶದಲ್ಲಿ ಆರ್ಥಿಕ ಪ್ರಗತಿಗೆ ಹೊಸ ಮಾರ್ಗಗಳು ತೆರೆದುಕೊಳ್ಳಲಿದ್ದು, ಗಮನಾರ್ಹ ಪ್ರಮಾಣದಲ್ಲಿ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆʼ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ತಿಳಿಸಿದ್ದಾರೆ.

ವಿಜಯಪುರದಲ್ಲಿ 3000 ಮೆಗಾವಾಟ್‌ ಸಾಮರ್ಥ್ಯದ ಗಾಳಿ ವಿದ್ಯುತ್‌ ಉತ್ಪಾದನೆ ಅಭಿವೃದ್ಧಿಪಡಿಸಲು ಮತ್ತು ಅತ್ಯಾಧುನಿಕ ವಿಂಡ್‌ ಟರ್ಬೈನ್‌ ಬ್ಲೇಡ್‌ ತಯಾರಿಕಾ ಘಟಕ ಸ್ಥಾಪಿಸಲು ಸುಜ್ಲಾನ್‌ ಕಂಪನಿಯು ರಾಜ್ಯ ಸರ್ಕಾರದ ಜೊತೆ ಒಪ್ಪಂದ ಮಾಡಿಕೊಂಡಿದೆ.

ಈ ಉಪಕ್ರಮವು,   ಗಾಳಿ ವಿದ್ಯುತ್‌ ಉತ್ಪಾದನೆಯ ಜಾಗತಿಕ ಕೇಂದ್ರವಾಗಿ ಭಾರತವನ್ನು ಅಭಿವೃದ್ಧಿಪಡಿಸಲು, ಇಂಧನ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸಲು ಮತ್ತು ಸುಸ್ಥಿರತೆ ಸಾಧಿಸಲು ನೆರವಾಗಲಿದೆ.

ವಿಜಯಪುರ ಅಥವಾ ಕಲಬುರಗಿಯಲ್ಲಿ  ಪ್ರತಿ ದಿನ 800 ಟನ್‌ ಸಾಮರ್ಥ್ಯದ ಬಹುಬಗೆಯ ಬೇಳೆಕಾಳು ಸಂಸ್ಕರಣಾ ಘಟಕ ಸ್ಥಾಪಿಸಲು ವಿಂಗ್ಸ್‌- ವಿಟೆರಾ ಕಂಪನಿಯು   ₹ 250 ಕೋಟಿ ಬಂಡವಾಳ ತೊಡಗಿಸಲಿದೆ. ಈ ಘಟಕವು ಕಾರ್ಯಾರಂಭ ಮಾಡಿದ 2ನೇ ವರ್ಷದಿಂದ ₹ 800 ಕೋಟಿ ವಾರ್ಷಿಕ ವಹಿವಾಟು ನಡೆಸಲಿದೆ. ದಕ್ಷಿಣ ಭಾರತದಲ್ಲಿನ ಬೇಳೆಕಾಳುಗಳ ಅತಿದೊಡ್ಡ ಸಂಸ್ಕರಣಾ ಘಟಕ ಇದಾಗಿರಲಿದೆ.

ಈ ಉದ್ದೇಶಿತ ಘಟಕವು ಸ್ಥಳೀಯ ಉದ್ಯೋಗ ಅವಕಾಶ ಹೆಚ್ಚಳ, ಮಹಿಳೆಯರ ಸಬಲೀಕರಣ ಮತ್ತು ಗ್ರಾಮೀಣ ಆರ್ಥಿಕ ಪ್ರಗತಿಗೆ ಗಣನೀಯ ಕೊಡುಗೆ ನೀಡಲಿದೆ. ಕಂಪನಿಯು ಪ್ರತ್ಯೇಕ ಸಂಗ್ರಹಣಾ ಕೇಂದ್ರ ತೆರೆಯಲಿರುವುದರಿಂದ ಬೆಳೆಗಾರರಿಗೆ ಉತ್ಪನ್ನಗಳ ಮಾರಾಟ ಸುಗಮಗೊಳಿಸಿ ಹೆಚ್ಚಿನ ಆದಾಯ ಪಡೆಯಲು ನೆರವಾಗಲಿದೆ.

ಇದರಿಂದ ಆಯ್ದ ಬೆಳೆಗಳ ಸಾಗುವಳಿ ಹೆಚ್ಚಿಸಲು  ರೈತರಿಗೆ ಉತ್ತೇಜನ ದೊರೆಯಲಿದೆ. ಬೇಳೆಕಾಳುಗಳ ಆಮದು ಮೇಲಿನ  ದೇಶದ ಅವಲಂಬನೆ ತಪ್ಪಿಸಲಿದೆ. ಕೃಷಿ ಸ್ವಾವಲಂಬನೆಗೆ  ಉತ್ತೇಜನ ಸಿಗಲಿದೆ.

ಕಾರ್ಮಿಕರ ಕುಶಲತೆ ಹೆಚ್ಚಿಸಲು ಮತ್ತು ಉದ್ಯೋಗ ಅವಕಾಶ ಹೆಚ್ಚಿಸುವ ತನ್ನ ಬದ್ಧತೆಯ ಭಾಗವಾಗಿ ಸುಜ್ಲಾನ್‌, ಶೇ 90ರಷ್ಟು ಉದ್ಯೋಗಿಗಳಲ್ಲಿ ಐಟಿಐ ಪದವೀಧರರನ್ನು ನೇಮಿಸಿಕೊಳ್ಳಲಿದೆ.  ವೃತ್ತಿ ಪರಿಣತಿ ಹೆಚ್ಚಿಸಲು  ರಾಜ್ಯದ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಪರಿಣತಿ ಅಭಿವೃದ್ಧಿಪಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ.

ಈ ಹೂಡಿಕೆ ಉಪಕ್ರಮಗಳ ಫಲವಾಗಿ ವಿಜಯಪುರ ಜಿಲ್ಲೆಯು ರಾಜ್ಯದ ಕೈಗಾರಿಕಾ ಹಾಗೂ ಕೃಷಿ ಪ್ರಗತಿಯನ್ನು ಮುನ್ನಡೆಸಲಿದೆ. ಪ್ರಾದೇಶಿಕ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಗೆ ರಾಜ್ಯದ ಬದ್ಧತೆಯನ್ನೂ ಈ ಒಪ್ಪಂದಗಳು  ಪುನರುಚ್ಚರಿಸಿವೆ.

key words: Invest Karnataka, Suzlon, MOU, state government, Vijayapura district.

SUMMARY:

Invest Karnataka: Suzlon signs MOU with state government; Significant investment in Vijayapura district.

ಇನ್ವೆಸ್ಟ್‌ ಕರ್ನಾಟಕದಲ್ಲಿ 21 ಪ್ರಮುಖ ಹೂಡಿಕೆ ಯೋಜನೆಗಳು ಪ್ರಕಟ: ವಿವರ ಇಲ್ಲಿದೆ..
ಬೆಂಗಳೂರು, ಫೆಬ್ರುವರಿ 12, 2025 (www.justkannada.in):   ನಿನ್ನೆಯಿಂದ ಆರಂಭವಾಗಿರುವ ಇನ್ವೆಸ್ಟ್‌ ಕರ್ನಾಟಕ 2025ರಲ್ಲಿ 21 ಪ್ರಮುಖ ಹೂಡಿಕೆ ಯೋಜನೆಗಳನ್ನು ಪ್ರಕಟಿಸಲಾಗಿದೆ.

ನಿನ್ನೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಚಾಲನೆ ನೀಡಿದ್ದು ಫೆಬ್ರವರಿ 14ರವರೆಗೆ ಸಮಾವೇಶ ನಡೆಯಲಿದೆ. ಈ ನಡುವೆ ಇನ್ವೆಸ್ಟ್‌ ಕರ್ನಾಟಕ 2025- ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಪ್ರಕಟಿಸಲಾಗಿರುವ 20 ಪ್ರಮುಖ ಹೂಡಿಕೆ ಯೋಜನೆಗಳ ವಿವರ ಹೀಗಿದೆ.

1.ಜೆಎಸ್‌ಡಬ್ಲ್ಯು ನಿಯೊ ಎನರ್ಜಿ ಲಿಮಿಟೆಡ್ – ಸೌರ ಯೋಜನೆ , ಗಾಳಿ ಶಕ್ತಿ  ಯೋಜನೆಗಳು, ಬ್ಯಾಟರಿ ಶಕ್ತಿ ಸಂಗ್ರಹಣೆ, ಬ್ಲೇಡ್ ತಯಾರಿಕೆ ಮತ್ತು ವಿಂಡ್ ಟರ್ಬೈನ್ ಜನರೇಟರ್ ಸ್ಥಾವರ ಸ್ಥಾಪನೆಗೆ ₹ 56,000 ಕೋಟಿ   ಹೂಡಿಕೆ.

ಬಲ್ಡೋಟಾ ಸ್ಟೀಲ್ ಆ್ಯಂಡ್‌ ಪವರ್ ಲಿಮಿಟೆಡ್ – ಸಮಗ್ರ ಉಕ್ಕು  ತಯಾರಿಕಾ ಸ್ಥಾವರಕ್ಕೆ ರೂ ₹ 54,000 ಕೋಟಿ   ಹೂಡಿಕೆ. 3. ಟಾಟಾ ಪವರ್ ರಿನ್ಯೂವೇಬಲ್‌ ಎನರ್ಜಿ ಲಿಮಿಟೆಡ್ – ರಾಜ್ಯದಾದ್ಯಂತ ನವೀಕರಿಸಬಹುದಾದ ಇಂಧನ ವಿದ್ಯುತ್ ಯೋಜನೆಗಳು ಮತ್ತು ಮೇಲ್ಚಾವಣಿ ವಿದ್ಯುತ್‌ ಪರಿಹಾರಗಳ ಅಭಿವೃದ್ಧಿಗೆ ₹ 50,000 ಕೋಟಿ   ಹೂಡಿಕೆ.

ರೆನ್ಯೂ ಪ್ರೈವೇಟ್‌ ಲಿಮಿಟೆಡ್ – 4ಗಿಗಾವಾಟ್‌ ನವೀಕರಿಸಬಹುದಾದ ಇಂಧನ ಯೋಜನೆಗಳನ್ನು ಸ್ಥಾಪಿಸಲು ₹ 50,000 ಕೋಟಿ ಹೂಡಿಕೆ.

ಸೆರೆಂಟಿಕಾ ರಿನ್ಯೂವೇಬಲ್ಸ್ ಇಂಡಿಯಾ ಪ್ರೈವೇಟ್‌ ಲಿಮಿಟೆಡ್ – ನವೀಕರಿಸಬಹುದಾದ ಇಂಧನ ಯೋಜನೆಗಳ ಅಭಿವೃದ್ಧಿಗಾಗಿ ₹43,975 ಕೋಟಿ ಹೂಡಿಕೆ.

ಜೆಎಸ್‌ಡಬ್ಲ್ಯು ಗ್ರೂಪ್ – ಜೆಎಸ್‌ ಡಬ್ಲ್ಯು ಸಿಮೆಂಟ್ ಆ್ಯಂಡ್‌ ಸ್ಟೀಲ್ ಮತ್ತು ಅದರ ಅಂಗಸಂಸ್ಥೆಗಳಿಗೆ ₹ 43,900 ಕೋಟಿ ಹೂಡಿಕೆ.

ಮಹೀಂದ್ರಾ ಸಸ್ಟೆನ್ ಪ್ರೈವೇಟ್ ಲಿಮಿಟೆಡ್ – ನವೀಕರಿಸಬಹುದಾದ ಇಂಧನ ಯೋಜನೆಗಳನ್ನು ಸ್ಥಾಪಿಸಲು ₹ 35,000 ಕೋಟಿ ಹೂಡಿಕೆ

ಹೀರೋ ಫ್ಯೂಚರ್ ಎನರ್ಜಿಸ್ – ನವೀಕರಿಸಬಹುದಾದ ಇಂಧನ, ಪರಿಶುದ್ಧ ಜಲಜನಕ ಮತ್ತು ಅದರ ಉತ್ಪನ್ನಗಳ ಯೋಜನೆಗಳಿಗೆ ₹ 22,200 ಕೋಟಿ ಹೂಡಿಕೆ

ಸುಜ್ಲಾನ್ ಎನರ್ಜಿ ಲಿಮಿಟೆಡ್ – ಪವನ ವಿದ್ಯುತ್ ಯೋಜನೆಗಳಿಗೆ ₹ 21,950 ಕೋಟಿ ಹೂಡಿಕೆ.

ಎಸ್ಸಾರ್ ರಿನ್ಯೂವೇಬಲ್ಸ್‌ ಲಿಮಿಟೆಡ್‌- ₹ 20,000 ಕೋಟಿ ಹೂಡಿಕೆ.

ಅವಾಡಾ ಎನರ್ಜಿ ಪ್ರೈವೇಟ್ ಲಿಮಿಟೆಡ್ – ₹ 18,000 ಕೋಟಿ ಹೂಡಿಕೆ.

ಎಪ್ಸಿಲಾನ್ ಗ್ರೂಪ್ – ಆನೋಡ್ ಮತ್ತು ಕ್ಯಾಥೋಡ್ ಪದಾರ್ಥಗಳ ತಯಾರಿಕೆಗೆ ₹ 15,350 ಕೋಟಿ ಹೂಡಿಕೆ.

ಎಂವೀ ಎನರ್ಜಿ ಪ್ರೈವೇಟ್ ಲಿಮಿಟೆಡ್ – ಸೋಲಾರ ಫೊಟೊವೊಲ್ಟ್ಯಾಕ್‌ ಸೆಲ್ಸ್‌ ಮತ್ತು ಮಾಡ್ಯೂಲ್‌ ಗಳ ತಯಾರಿಕೆಗೆ ₹ 15,000 ಕೋಟಿ ಹೂಡಿಕೆ.

ಲ್ಯಾಮ್ ರಿಸರ್ಚ್ – ಸೆಮಿಕಂಡಕ್ಟರ್‌ ಉಪಕರಣಗಳ ತಯಾರಿಕೆಗೆ ₹ 10,000 ಕೋಟಿ ಹೂಡಿಕೆ

ಆಂಪಿನ್‌ ಎನರ್ಜಿ ಟ್ರಾನ್ಸಿಷನ್ ಪ್ರೈವೇಟ್ ಲಿಮಿಟೆಡ್ – ₹10,000 ಕೋಟಿ ಹೂಡಿಕೆ.

ಎಸಿಎಂಇ ಸೋಲಾರ್ ಹೋಲ್ಡಿಂಗ್ಸ್ ಲಿಮಿಟೆಡ್ – ₹ 10,000 ಕೋಟಿ ಹೂಡಿಕೆ

ಔ2 ಪವರ್ ಪ್ರೈವೇಟ್‌ ಲಿಮಿಟೆಡ್ – ನವೀಕರಿಸಬಹುದಾದ ಇಂಧನ ಸೌರ ಮತ್ತು ಪವನ ಯೋಜನೆಗಳ ಸ್ಥಾಪನೆಗೆ ₹ 10,000 ಕೋಟಿ ಹೂಡಿಕೆ

ಕಾಂಟಿನುಮ್‌ ಗ್ರೀನ್ ಎನರ್ಜಿ ಜಿಪಿ – ನವೀಕರಿಸಬಹುದಾದ ಇಂಧನ ಯೋಜನೆಗಳನ್ನು ಅಭಿವೃದ್ಧಿಪಡಿಸಲು ₹ 10,000 ಕೋಟಿ ಹೂಡಿಕೆ

ಸೋಟೆಫಿನ್ ಭಾರತ್ – ಸಂಪೂರ್ಣ ಸ್ವಯಂಚಾಲಿತ ರೊಬೊಟಿಕ್ ಬಹುಮಹಡಿ ಕಾರ್ ಮತ್ತು ಬಸ್ ಪಾರ್ಕಿಂಗ್ ವ್ಯವಸ್ಥೆಗಳ ನಿರ್ಮಾಣ ಮತ್ತು ಸ್ಥಾಪನೆಗೆ ₹ 8,500 ಕೋಟಿ ಹೂಡಿಕೆ

ಶ್ರೀ ಸಿಮೆಂಟ್ ಲಿಮಿಟೆಡ್ – ಇಂಟೆಗ್ರೇಟೆಡ್‌ ಸ್ಥಾವರ ಮತ್ತು ಕ್ಲಿಂಕರ್ ಗ್ರೈಂಡಿಂಗ್ ಘಟಕಕ್ಕೆ ₹ 8,350 ಕೋಟಿ ಹೂಡಿಕೆ

ಹೆಕ್ಸಾ ಕ್ಲೈಮೇಟ್ ಸೊಲ್ಯೂಷನ್ಸ್ ಪ್ರೈ. ಲಿಮಿಟೆಡ್ – ₹ 8,000 ಕೋಟಿ ಹೂಡಿಕೆ

Key words: 21 investment projects, announced, Invest Karnataka

ಇನ್ವೆಸ್ಟ್‌ ಕರ್ನಾಟಕದಲ್ಲಿ 19 ದೇಶಗಳು ಭಾಗಿ: ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್
ಬೆಂಗಳೂರು,ಫೆಬ್ರವರಿ,6,2025 (www.justkannada.in): ‘ಇದೇ 11ರಿಂದ 14ರವರೆಗೆ ನಗರದಲ್ಲಿ ನಡೆಯಲಿರುವ ಇನ್ವೆಸ್ಟ್‌ ಕರ್ನಾಟಕ 2025 – ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 19 ದೇಶಗಳು ಭಾಗವಹಿಸಲಿವೆʼ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್  ಅವರು ತಿಳಿಸಿದ್ದಾರೆ.

‘ಸಮಾವೇಶದಲ್ಲಿರುವ 9 ಪ್ರತ್ಯೇಕ ಕಂಟ್ರಿ ಪೆವಿಲಿಯನ್‌ಗಳು ಹೂಡಿಕೆ ಅವಕಾಶಗಳು ಮತ್ತು ವಾಣಿಜ್ಯ ಬಾಂಧವ್ಯ ಸಹಯೋಗದ ಅವಕಾಶಗಳನ್ನು ಪ್ರದರ್ಶಿಸಲಿವೆ. ಫ್ರಾನ್ಸ್, ನೆದರ್‌ಲ್ಯಾಂಡ್ಸ್, ಜಪಾನ್, ಥಾಯ್ಲೆಂಡ್‌, ಮಲೇಷ್ಯಾ, ದಕ್ಷಿಣ ಕೊರಿಯಾ, ಇಸ್ರೇಲ್, ನಾರ್ವೆ, ಸ್ವಿಟ್ಜರ್‌ಲ್ಯಾಂಡ್, ತೈವಾನ್, ಜರ್ಮನಿ, ಆಸ್ಟ್ರೇಲಿಯಾ, ಡೆನ್ಮಾರ್ಕ್, ಪೋಲಂಡ್, ಇಟಲಿ, ಬ್ರಿಟನ್‌, ಸ್ಲೊವೆನಿಯಾ, ಬಹ್ರೇನ್ ಮತ್ತು ಸಿಂಗಪುರ ಭಾಗವಿಸಲಿವೆʼ ಎಂದು  ಸಚಿವರು ಮಾಹಿತಿ ನೀಡಿದ್ದಾರೆ.

ʼಏರೊಸ್ಪೇಸ್‌, ನವೀಕರಿಸಬಹುದಾದ ಇಂಧನ, ಎಲೆಕ್ಟ್ರಾನಿಕ್ಸ್‌, ಸೆಮಿಕಂಡಕ್ಟರ್‌ ಮತ್ತು ಅತ್ಯಾಧುನಿಕ ತಯಾರಿಕೆ ವಲಯಗಳಲ್ಲಿ  ಕರ್ನಾಟಕವು  ಬಂಡವಾಳ ಹೂಡಿಕೆಗೆ ಮುಂಚೂಣಿಯಲ್ಲಿ ಇರುವುದನ್ನು ಜಾಗತಿಕ ಉದ್ಯಮ  ಜಗತ್ತಿಗೆ ಸಮಾವೇಶದ ಮೂಲಕ  ಪರಿಚಯಿಸಲು ಸರ್ವ ಪ್ರಯತ್ನಗಳನ್ನು ಮಾಡಲಾಗುತ್ತಿದʼ ಎಂದು ಹೇಳಿದ್ದಾರೆ.

ʼಪರಿಸರ ಸ್ನೇಹಿ ವಿದ್ಯುತ್‌ ಚಾಲಿತ  ವಾಹನಗಳು, ಡಿಫೆನ್ಸ್‌, ಜೈವಿಕ ತಂತ್ರಜ್ಞಾನ, ಸಂಶೋಧನೆ ಹಾಗೂ ಅಭಿವೃದ್ಧಿ ಮತ್ತು ಗರಿಷ್ಠ ನಿಖರತೆಯ ಬಿಡಿಭಾಗ   ತಯಾರಿಕಾ ವಲಯಗಳಲ್ಲಿನ ಇತ್ತೀಚಿನ ಬೆಳವಣಿಗೆಯ ಮೇಲೆ   ಫ್ಯೂಚರ್‌ ಆಫ್‌ ಇನ್ನೊವೇಷನ್‌ ಎಕ್ಸ್‌ ಪೊ ಬೆಳಕು ಚೆಲ್ಲಲಿದೆ.

ʼರಾಜ್ಯದಲ್ಲಿನ ಎಸ್‌ಎಂಇ ಹಾಗೂ ನವೋದ್ಯಮಗಳ ಬೆಳವಣಿಗೆಗೆ ಸಮಾವೇಶವು ವೇಗ ನೀಡಲಿದೆ. ಡಿಜಿಟಲೀಕರಣ ಅಳವಡಿಸಿಕೊಳ್ಳಲು 2,000ಕ್ಕೂ ಹೆಚ್ಚು ಎಸ್‌ ಎಂಇಗಳಿಗೆ ಸೂಕ್ತ ತರಬೇತಿ ನೀಡಲಾಗಿದೆ. ಡಿಜಿಟಲ್‌  ಪರಿವರ್ತನೆಗೆ  100 ಎಸ್‌ಎಂಇಗಳಿಗೆ ಅಗತ್ಯ ನೆರವು ನೀಡಲಾಗಿದೆʼ ಎಂದು ತಿಳಿಸಿದ್ದಾರೆ.

ʼತಯಾರಿಕೆ ಹಾಗೂ ಪರಿಸರ ಸ್ನೇಹಿ ನವೋದ್ಯಮಗಳಿಗೆ ಉತ್ತೇಜನ ನೀಡಲು, ಜಾಗತಿಕ ನವೋದ್ಯಮ ಸವಾಲಿನ – ವೆಂಚುರೈಸ್‌ನ 2ನೇ ಆವೃತ್ತಿಯು ಸಮಾವೇಶದ ಇನ್ನೊಂದು ಆಕರ್ಷಣೆ ಆಗಿರಲಿದೆ. ʼಮೂಲ ಸಲಕರಣೆ ತಯಾರಿಸುವ  (ಒಇಎಂ) ದೊಡ್ಡ  ಕಂಪನಿಗಳ ಜೊತೆಗೆ ವಹಿವಾಟು ಕುದುರಿಸಿಕೊಳ್ಳುವುದಕ್ಕೆ ಎಸ್‌ಎಂಇ-ಗಳಿಗೆ  ನೆರವಾಗಲು ಕೃತಕ ಬುದ್ಧಿಮತ್ತೆ ಆಧಾರಿತ ಎಸ್‌ಎಂಇ ಕನೆಕ್ಟ್‌ ಅಂತರ್ಜಾಲ ತಾಣ ಅಭಿವೃದ್ಧಿಪಡಿಸಲಾಗಿದೆ.

ʼರಾಜ್ಯದ ಕೈಗಾರಿಕಾ ಮುನ್ನೋಟ ಕಾರ್ಯಗತಗೊಳಿಸಲು ಹೊಸ ಕೈಗಾರಿಕಾ ನೀತಿ (2024-29) ಜಾರಿಗೊಳಿಸಲಾಗುತ್ತಿದೆ.  ಹಣಕಾಸು ಹಾಗೂ ಹಣಕಾಸೇತರ ಉತ್ತೇಜನಾ ಕ್ರಮಗಳ ಮೂಲಕ ರಾಜ್ಯಕ್ಕೆ ಕಂಪನಿಗಳನ್ನು ಆಹ್ವಾನಿಸಲು ಇದು ನೆರವಾಗಲಿದೆʼ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ʼಬಂಡವಾಳ ಹೂಡಿಕೆ ಸುಲಲಿತಗೊಳಿಸಲು ಕೃತಕ ಬುದ್ಧಿಮತ್ತೆ ನೆರವಿನ ಏಕಗವಾಕ್ಷಿ ವ್ಯವಸ್ಥೆ ಅಭಿವೃದ್ಧಿಪಡಿಸಲಾಗಿದೆ.  ಇದು ಭೂಮಿ ಹಂಚಿಕೆ, ಹೂಡಿಕೆದಾರರ ಕುಂದುಕೊರತೆ ನಿವಾರಣೆಗೆ ನೆರವಾಗಲಿದ್ದು, ಬಹುಭಾಷಾ ಚಾಟ್‌ಬೋಟ್‌ ಸೌಲಭ್ಯ ಒಳಗೊಂಡಿರಲಿದೆ. ʼಆನಂದ ಮಹೀಂದ್ರಾ, ಕುಮಾರ್‌ ಮಂಗಳಂ ಬಿರ್ಲಾ, ಕಿರಣ್‌ ಮಜುಂದಾರ್‌ ಶಾ, ಮಾರ್ಟಿನ್‌ ಲುಂಡ್‌ಸ್ಟೆಡ್ಟ್‌, ಜಾರ್ಜ್‌ ಪಪಂಡ್ರೆವು, ಆನ್‌ ಡಂಕಿನ್‌ ಮತ್ತು ಒಡೆ  ಅಬೊಷ್‌ ಅವರು ಉದ್ದಿಮೆ, ತಂತ್ರಜ್ಞಾನ ಮತ್ತು ಕೈಗಾರಿಕಾ ಪರಿವರ್ತನೆ ಬಗ್ಗೆ ಒಳನೋಟಗಳನ್ನು ಹಂಚಿಕೊಳ್ಳಲಿದ್ದಾರೆ.

ʼಜಾಗತಿಕ ಪ್ರಮುಖ ಉದ್ದಿಮೆಗಳು ಮತ್ತು ವಿದೇಶಿ ಸರ್ಕಾರಗಳ ಪಾಲ್ಗೊಳ್ಳುವಿಕೆಯ ಫಲವಾಗಿ ರಾಜ್ಯದಲ್ಲಿ ವಿಪುಲ ಉದ್ಯೋಗ ಅವಕಾಶಗಳಿಗೆ ಉತ್ತೇಜನ ದೊರೆಯಲಿದೆ. ದುಡಿಯುವ ವರ್ಗದ ಕೌಶಲ ಅಭಿವೃದ್ಧಿಯಾಗಲಿದೆ. ತಂತ್ರಜ್ಞಾನವು ಸುಲಭವಾಗಿ ವರ್ಗಾವಣೆಯಾಗಲಿದೆ. ಇವೆಲ್ಲವುಗಳ ಫಲವಾಗಿ ಜಾಗತಿಕ ನಾವೀನ್ಯತಾ ಕ್ಷೇತ್ರದ ಜೊತೆಗಿನ ಕರ್ನಾಟಕದ ಬಾಂಧವ್ಯ ಗಮನಾರ್ಹವಾಗಿ ವೃದ್ಧಿಯಾಗಲಿದೆʼ ಎಂದೂ ಸಚಿವ ಪಾಟೀಲ್  ಅವರು ವಿವರಿಸಿದ್ದಾರೆ.

ಸಮಾವೇಶದ ಬಗ್ಗೆ ಮಾಹಿತಿ ಹಾಗೂ ಹೆಸರು ನೋಂದಾಯಿಸಲು https://investkarnataka.co.in/gim2025/ ಅಂತರ್ಜಾಲ ತಾಣಕ್ಕೆ ಭೇಟಿ ನೀಡಿ.

Key words: 19 countries, participating ,Invest Karnataka, Minister ,M. B. Patil

ಉದ್ಯಮಿಗಳಿಂದ 1ಲಕ್ಷಕೋಟಿ ಬಂಡವಾಳ ಹೂಡಿಕೆಗೆ ನಿರ್ಧಾರ – ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ…
ಹುಬ್ಬಳ್ಳಿ,ಫೆ,14,2020(www.justkannada.in): ಕಲ್ಯಾಣ ಕರ್ನಾಟಕ, ಈ ಭಾಗದಲ್ಲಿ  ಬಂಡವಾಳ ಹೂಡಿಕೆ ಮಾಡಲು ಉದ್ಯಮಿಗಳು ನಿರ್ಧರಿಸಿದ್ದಾರೆ. ನಾವು ಎಲ್ಲಾ ರೀತಿಯ ಸಹಕಾರ ನೀಡುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಉತ್ತರ ಕರ್ನಾಟಕದ ಬೆಳಗಾವಿ ಮತ್ತು ಕಲಬುರ್ಗಿ ವಿಭಾಗಗಳಲ್ಲಿ ಬಂಡವಾಳ ಹೂಡಿಕೆ ಹಾಗೂ ಉದ್ದಿಮೆಗಳ ಸ್ಥಾಪನೆಯ ಬಹುನಿರೀಕ್ಷಿತ ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶಕ್ಕೆ ನಗರದ ಡೆನಿಸನ್ಸ್ ಹೋಟೆಲ್ ಸಭಾಂಗಣದಲ್ಲಿ ಚಾಲನೆ ಸಿಕ್ಕಿತ್ತು. ಸಿಎಂ ಬಿಎಸ್ ಯಡಿಯೂರಪ್ಪ ಇನ್ವೆಸ್ಟ್ ಕರ್ನಾಟಕ ಸಮಾವೇಶಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.  ಈ ವೇಳೆ ಕೇಂದ್ರ ಸಚಿವರಾದ ಡಿ.ವಿ ಸದಾನಂದಗೌಡ, ಪ್ರಹ್ಲಾದ್ ಜೋಶಿ, ಬೃಹತ್ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್  ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ 700ಕ್ಕೂ ಹೆಚ್ಚು ಉದ್ಯಮಿಗಳು ಪಾಲ್ಗೊಂಡಿದ್ದು, ಸಚಿವರಾದ‌ ಪ್ರಹ್ಲಾದ್‌ ಜೋಶಿ, ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಗಣ್ಯ ಉದ್ಯಮಿಗಳನ್ನು ಖುದ್ದಾಗಿ ಸಮಾವೇಶಕ್ಕೆ ಬರಮಾಡಿಕೊಂಡರು.

ಚಾಲನೆ ಬಳಿಕ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ನಿರೀಕ್ಷೆಗೂ ಮೀರಿ ಉದ್ಯಮಿಗಳು ಹೂಡಿಕೆ ಮಾಡಲು ನಿರ್ಧರಿಸಿದ್ದಾರೆ. ಸುಮಾರು 1 ಲಕ್ಷಕೋಟಿ ಬಂಡವಾಳ ಹೂಡಿಕೆಗೆ ನಿರ್ಧಾರ ಮಾಡಿದ್ದಾರೆ. ಕಲ್ಯಾಣ ಕರ್ನಾಟಕ, ಈ ಭಾಗದಲ್ಲಿ ಹೂಡಿಕೆಗೆ ಈಗಷ್ಟೆ ಒಡಂಬಡಿಕೆ ಮಾಡಿಕೊಂಡಿದ್ದಾರೆ. ಅವರಿಗೆ ಎಲ್ಲಾರೀತಿಯ ಸಹಕಾರ ನೀಡುತ್ತೇವೆ ಎಂದರು.

ರಾಜ್ಯದ ಮೇಲ ನಂಬಿಕೆಯಿಡಿ. ಸಹಕಾರ ನೀಡುತ್ತೇವೆ ಎಂದು ಉದ್ಯಮಿಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದರು.

Key words: Decision – invest- 1 trillion -CM BS Yeddyurappa -Invest Karnataka -Conference