invited Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ
ಸೆಸ್ಕ್‌ ನಲ್ಲಿ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮೈಸೂರು, ಮೇ ,11, 2026 (www.justkannada.in):  ಚಾಮುಂಡೇಶ್ವರಿ ವಿದ್ಯುತ್​​ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)ದಿಂದ 2026-27ನೇ ಸಾಲಿನ ಇಂಜಿನಿಯರಿಂಗ್‌ ಪದವೀಧರರು, ತಾಂತ್ರಿಕ ಪದವಿ, ಡಿಪ್ಲೊಮಾ ಮತ್ತು ಇತರೆ ಪದವೀಧರರಿಗೆ ಅಪ್ರೆಂಟಿಸ್ ತರಬೇತಿಗೆ​ ಅರ್ಜಿ ಆಹ್ವಾನಿಸಲಾಗಿದೆ.
ಅಪ್ರೆಂಟಿಸ್‌ ತರಬೇತಿಯ ಒಟ್ಟು 200 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಇಂಜಿನಿಯರಿಂಗ್‌ ​ಪದವಿ ಹೊಂದಿರುವ 80 ಹುದ್ದೆಗಳು, ಡಿಪ್ಲೊಮಾ ಪದವೀಧರರು 55 ಹಾಗೂ ಇತರೆ ಪದವಿ ಹೊಂದಿರುವ 65 ಅಪ್ರೆಂಟಿಸ್‌ ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಲಾಗುವುದು. ಈ ಅವಧಿಯಲ್ಲಿ ಗೌರವಧನ ನೀಡಲಾಗುತ್ತದೆ.
ತರಬೇತಿಯಲ್ಲಿ ಇಂಜಿನಿಯರಿಂಗ್ ಅಪ್ರೆಂಟಿಸ್​ ಹುದ್ದೆಗೆ ಅಭ್ಯರ್ಥಿಗಳು ಎಲೆಕ್ಟ್ರಿಕಲ್​ ಮತ್ತು ಎಲೆಕ್ಟ್ರಾನಿಕ್ಸ್ ಹಾಗೂ ಸಿವಿಲ್​ ಇಂಜಿನಿಯರಿಂಗ್​ ವಿಷಯದಲ್ಲಿ ಪದವಿ ಹೊಂದಿರಬೇಕು. ಡಿಪ್ಲೊಮಾ ಅಪ್ರೆಂಟಿಸ್​ ಹುದ್ದೆಗೆ ಎಲೆಕ್ಟ್ರಿಕಲ್​ ಮತ್ತು ಎಲೆಕ್ಟ್ರಾನಿಕ್ಸ್​ ಹಾಗೂ ಸಿವಿಲ್​ ಇಂಜಿನಿಯರಿಂಗ್​ ಡಿಪ್ಲೊಮಾ ಪದವಿ ಪಡೆದಿರಬೇಕು. ಪದವೀಧರ ಅಪ್ರೆಂಟಿಸ್​ ಹುದ್ದೆಗೆ ಬಿಕಾಂ, ಬಿಬಿಎ, ಬಿಸಿಎ, ಬಿಎ, ಬಿಎಸ್ಸಿ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2022, 2023, 2024, 2025 ಮತ್ತು 2026ನೇ ಸಾಲಿನಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಕೆಗೆ ಅರ್ಹರಾಗಿದ್ದಾರೆ.
ಅಭ್ಯರ್ಥಿಗಳು ಆನ್‌ ಲೈನ್‌ ಅಪ್ಲಿಕೇಷನ್‌ ಸಲ್ಲಿಸಲು ಮೇ 8ರಿಂದ  ಪ್ರಕ್ರಿಯೆ ಆರಂಭವಾಗಿದ್ದು, ಮೇ 29 ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಚಾವಿಸನಿನಿಯ ಅಧಿಕೃತ ವೆಬ್‌ಸೈಟ್‌ https://cescmysore.karnataka.gov.in (ಪ್ರಕಟಣೆಗಳು/ಪ್ರಕಟಣೆಗಳು 2026-27/ನಲ್ಲಿ ಕ್ಲಿಕ್‌ ಮಾಡಿ) ಮಾಹಿತಿ ಪಡೆಯಬಹುದಾಗಿದೆ.
Key words: Applications, invited, apprentice, CESC
The post ಸೆಸ್ಕ್‌ ನಲ್ಲಿ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.
ಜಿಟಿಟಿಸಿ ಕೇಂದ್ರದಲ್ಲಿ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
ಬೆಂಗಳೂರು ಗ್ರಾಮಾಂತರ, ಏಪ್ರಿಲ್, 28,2026 (www.justkannada.in):  ದೇವನಹಳ್ಳಿ ತಾಲ್ಲೂಕು ಚನ್ನರಾಯಪ್ಪಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ) ದಲ್ಲಿ ಅತ್ಯುನ್ನತ ಡಿಪ್ಲೊಮಾ ಕೋರ್ಸ್ ಗಳ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ & ಡೈಮೇಕಿಂಗ್ (DTDM), ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ (DMCH), ಡಿಪ್ಲೋಮಾ ಇನ್ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ (DEEE), ಡಿಪ್ಲೋಮಾ ಇನ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ & ಮಷೀನ್ ಲರ್ನಿಂಗ್ (DAI & ML) ಈ 04 ವಿಭಾಗದ ಡಿಪ್ಲೋಮಾ ಕೋರ್ಸ್ ಗಳು ಲಭ್ಯವಿದೆ.
ಡಿಪ್ಲೊಮಾ ಕೋರ್ಸ್ ಗಳಿಗೆ ಅರ್ಜಿ ಸಲ್ಲಿಸಲು ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆ  ಪಾಸಾಗಿರಬೇಕು. ಪಿಯುಸಿ ಮತ್ತು ಐಟಿಐ ಪಾಸಾದ ವಿದ್ಯಾರ್ಥಿಗಳಿಗೆ ಎರಡನೇಯ ವರ್ಷಕ್ಕೆ ನೇರ ಪ್ರವೇಶವಿರುತ್ತದೆ. ಈ ಡಿಪ್ಲೋಮಾ ಕೋರ್ಸ್ ಗಳ ಅವಧಿ 3+1 ವರ್ಷ. ಅರ್ಜಿ ಸಲ್ಲಿಸಲು ಮೇ 10 ಕೊನೆಯ ದಿನವಾಗಿದ್ದು ಅರ್ಜಿಯನ್ನು https://gttc.karnataka.gov.in ವೆಬ್ಸೈಟ್ ಮೂಲಕ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ 9036144417, 9686268737, 9980956422 ಅಥವಾ ಜಿಟಿಟಿಸಿ, ದೇವನಹಳ್ಳಿ ಕಾಲೇಜಿಗೆ ಖುದ್ದಾಗಿ ಭೇಟಿ ನೀಡಬಹುದು ಎಂದು ಜಿಟಿಟಿಸಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Key words: Applications, invited, Diploma, admission , GTTC center
The post ಜಿಟಿಟಿಸಿ ಕೇಂದ್ರದಲ್ಲಿ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.
KSOU ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ.
ಬೆಂಗಳೂರು, ಏಪ್ರಿಲ್,2,2026 (www.justkannada.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU), ಮೈಸೂರು ಕುಲಪತಿ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ, ಆಡಳಿತ ಅನುಭವ ಮತ್ತು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವವರಾಗಿರಬೇಕು. ವಿಶ್ವವಿದ್ಯಾಲಯದ ಧ್ಯೇಯ ಸಾಧನೆಗೆ ಕೊಡುಗೆ ನೀಡುವ ಶೈಕ್ಷಣಿಕ ನಾಯಕತ್ವ ಹೊಂದಿರುವವರಿಂದ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ.
ಅಭ್ಯರ್ಥಿಗಳು 1992ರ ನಿಯಮಾವಳಿ ಪ್ರಕಾರ ನಿಗದಿಪಡಿಸಿದ ಅರ್ಹತೆಗಳನ್ನು ಹೊಂದಿರಬೇಕು. ಅಧ್ಯಾಪನ, ಸಂಶೋಧನೆ ಹಾಗೂ ಆಡಳಿತ ಕ್ಷೇತ್ರಗಳಲ್ಲಿ ಅನುಭವ ಇರಬೇಕೆಂದು ಸೂಚಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳು www.ksoumysuru.ac.in ವೆಬ್‌ ಸೈಟ್‌ ನಲ್ಲಿ ಲಭ್ಯವಿವೆ. ಭರ್ತಿಯಾದ ಅರ್ಜಿಗಳನ್ನು “ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಪಿ.ಬಿ. ನಂ. 5033, ರಾಜಭವನ, ಬೆಂಗಳೂರು–560001” ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 10, 2026 ಸಂಜೆ 5.30ರವರೆಗೆ ನಿಗದಿಪಡಿಸಲಾಗಿದೆ. ಜೊತೆಗೆ ಅರ್ಜಿಯ soft copy ಅನ್ನು us.university.rb@karnataka.gov.in ಇಮೇಲ್‌ಗೆ ಕಳುಹಿಸುವಂತೆ ಸೂಚಿಸಲಾಗಿದೆ.
ENGLISH SUMMARY..
Applications Invited for Vice-Chancellor Post at KSOU
Bengaluru, April 2: Applications have been invited for the post of Vice-Chancellor at Karnataka State Open University (KSOU), Mysuru.
Eligible candidates with distinguished academic achievements, administrative experience, and contributions to the higher education sector are encouraged to apply. The university is seeking academic leaders capable of contributing to its vision and growth.
Applicants must meet the qualifications prescribed under the 1992 regulations, with experience in teaching, research, and administration.
Application forms and detailed information are available on the official website: www.ksoumysuru.ac.in. Completed applications should be sent to: “Special Secretary to the Governor, P.B. No. 5033, Raj Bhavan, Bengaluru – 560001.”
The last date to submit applications is May 10, 2026, by 5:30 PM. Candidates are also required to send a soft copy of the application via email to us.university.rb@karnataka.gov.in.
Key words: Applications, Invited, VC Post, KSOU
The post KSOU ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.
ಅಪರ ಸರ್ಕಾರಿ ವಕೀಲರ ಹುದ್ದೆ ಭರ್ತಿಗೆ ಅರ್ಜಿ ಅಹ್ವಾನ..
ಮಂಡ್ಯ,ಮಾರ್ಚ್,17,2026 (www.justkannada.in):  ಮಂಡ್ಯ ಜಿಲೆಯ ಮದ್ದೂರು ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 5 ಮತ್ತು 26(2) ಹಾಗೂ 12 (ಎ) (ಬಿ) ಮತ್ತು (ಸಿ)ರನ್ವಯ ಆಸಕ್ತಿಯುಳ್ಳ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಮಂಡ್ಯ ಜಿಲ್ಲಾಧಿಕಾರಿಗಳು, ಮದ್ದೂರು ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ಸಂಬಂಧಿಸಿದಂತೆ ಸರ್ಕಾರದ ಅಧಿಸೂಚನೆ ಸಂ: ಲಾ-ಎಲ್ ಎ ಡಿ/504/2023, ದಿನಾಂಕ: 31/07/2024ರ ರೀತ್ಯಾ ಮದ್ದೂರು ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯ ನೇಮಕಾತಿ ಅವಧಿಯು ದಿನಾಂಕ: 30/07/2025ಕ್ಕೆ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಹೊಸದಾಗಿ 03 ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಮದ್ದೂರು ತಾಲ್ಲೂಕಿನ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿಗೊಳಿಸಲು ಉಲೆಖದನ್ವಯ ಉದ್ದೇಶಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು  ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಮಾರ್ಚ್ 06  ರಿಂದ ಮಾರ್ಚ್ 20 ರ ಸಂಜೆ 05.00 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು 1977ರ ನಿಯಮ 5ರನ್ವಯ ಕನಿಷ್ಠ 07 ವರ್ಷಗಳ ಕಾಲ ವಕೀಲಿ ವೃತ್ತಿಯನ್ನು ಪೂರೈಸಿರಬೇಕು.
ಹಾಗೂ ಸರ್ಕಾರಿ ಅಥವಾ ಅರೆ ಸರ್ಕಾರಿ/ ನಿಗಮ ಮಂಡಳಿಗಳಲ್ಲಿ ಯಾವುದೇ ಹುದ್ದೆಯನ್ನು ಪಡೆದಿರಬಾರದು.ಸ್ಥಳೀಯ ಸಂಸ್ಥೆಗಳ ಅಧಿಕಾರ ವ್ಯಾಪ್ತಿಯಲ್ಲಿ ಕಾನೂನು ಸಲಹೆಗಾರರಾಗಿ ನೇಮಕವಾಗಿರಬಾರದು.
ಆಸಕ್ತ ಅಭ್ಯರ್ಥಿಗಳು ಜನ್ಮ ದಿನಾಂಕ, ವಿದ್ಯಾರ್ಹತೆ, ವಿಳಾಸ, ದೂರವಾಣಿ ಸಂಖ್ಯೆ ಹಾಗೂ ವಕೀಲಿ ವೃತ್ತಿ ಸಂಬಂಧಿಸಿದಂತೆ ದೃಢೀಕರಿಸಿದ ಪ್ರತಿಗಳೊಂದಿಗೆ ಹಾಗೂ ಅರ್ಜಿ ಸಲ್ಲಿಸುವ ಅರ್ಹತೆಗಳ ಕ್ರಮ ಸಂಖ್ಯೆ 2 ಮತ್ತು 3ಕ್ಕೆ ಸಂಬಂಧಿಸಿದಂತೆ ನೋಟರಿಯವರಿಂದ ಅಫಿಡವಿಟ್ ಒಳಗೊಂಡ ಬಯೋಡೇಟಾಗಳನ್ನು ಜಿಲ್ಲಾಧಿಕಾರಿಗಳ ಕಚೇರಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Key words: Applications, invited, Additional Government Advocate, post, Maddur
The post ಅಪರ ಸರ್ಕಾರಿ ವಕೀಲರ ಹುದ್ದೆ ಭರ್ತಿಗೆ ಅರ್ಜಿ ಅಹ್ವಾನ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.
ಪರಿಶಿಷ್ಟ ಜಾತಿ ಯುವಜನರಿಗೆ ಜಿಮ್ ಫಿಟ್ನೆಸ್ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ
ಬೆಂಗಳೂರು ಗ್ರಾಮಾಂತರ ಜನವರಿ,22,2026 (www.justkannada.in): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಯುವಕ/ಯುವತಿಯರಿಗೆ ಜಿಮ್ ಫಿಟ್ನೆಸ್ ತರಬೇತಿ ಶಿಬಿರ ಅರ್ಜಿ ಆಹ್ವಾನಿಸಿದೆ.
ಯುವಜನರನ್ನು ಸ್ವಾವಲಂಭಿಯಾಗಲು ಉತ್ತೇಜಿಸುವ ದೃಷ್ಟಿಯಿಂದ ಯುವಜನರಿಗೆ ತರಬೇತಿ ಶಿಬಿರವನ್ನು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ವಿದ್ಯಾರ್ಹತೆಯು  ಎಸ್.ಎಸ್.ಎಲ್.ಸಿ ಪಾಸಾಗಿರುವ 18 ರಿಂದ 40ವರ್ಷ ವಯೋಮಿತಿ  ಹೊಂದಿರುವವರಿಗೆ ದಿನಾಂಕ 01-02-2026 ರಿಂದ 17-03-2026ರವರೆಗೆ  45 ದಿನಗಳ ಕಾಲ ತರಬೇತಿ ಆಯೋಜಿಸಲಾಗಿದೆ.
ದಿನಾಂಕ 28.01.2026 ರ ಒಳಗಾಗಿ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಸಹಾಯಕ ನಿರ್ದೇಶಕ ಕಛೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಭವನ, 1ನೇ ಮಹಡಿ, ಕೊಠಡಿ ಸಂ: 112 ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ಇಲ್ಲಿಗೆ ಸಲ್ಲಿಸಬೇಕು.
ತರಬೇತಿಯನ್ನು ಕರ್ನಾಟಕದ ಯುವಕ/ ಯುವತಿಯರಿಗೆ ಮಾತ್ರ ನೀಡಲಾಗುವುದು. ಯುವಕರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಅರ್ಜಿದಾರರು ಕಡ್ಡಾಯವಾಗಿ ಆರ್.ಡಿ. ಸಂಖ್ಯೆಯಿರುವ ಜಾತಿ ಪ್ರಮಾಣ ಪತ್ರ ಲಗತ್ತಿಸಿರಬೇಕು. ಅರ್ಜಿದಾರರ ಹೆಸರು ಹಾಗೂ ಭಾವಚಿತ್ರವುಳ್ಳ ಆಧಾರ್ ಪತ್ರವನ್ನು ಲಗತ್ತಿಸುವುದು. ಕನಿಷ್ಠ ವಿದ್ಯಾರ್ಹತೆ ಎಸ್.ಎಸ್. ಎಲ್.ಸಿ (ಪಾಸ್) ಶಿಕ್ಷಣ ಹೊಂದಿರಬೇಕು. ಈ ತರಬೇತಿ ಶಿಬಿರವು 45 ದಿನಗಳ ಕಾಲ ನಡೆಯುತ್ತದೆ.. ತರಬೇತಿಯು ಬೆಳಿಗ್ಗೆ 10-00 ರಿಂದ ಸಂಜೆ 5-30 ಗಂಟೆಯುವರೆಗೆ ನಡೆಯುತ್ತದೆ. ಅರ್ಜಿದಾರರು 18 ರಿಂದ 40 ವರ್ಷದೊಳಗಿನ ಯುವಕ/ಯುವತಿಯರು ಮಾತ್ರ ಭಾಗವಹಿಸಲು ಅರ್ಹರು. ಶಿಬಿರದಲ್ಲಿ ಭಾಗವಹಿಸುವ ಶಿಬಿರಾರ್ಥಿಗಳು ಶಿಸ್ತು ಹಾಗೂ ಸಂಯಮದಿಂದ ಇರಬೇಕು.
ಅನುಚಿತವಾಗಿ ವರ್ತಿಸಿದಲ್ಲಿ ಇಲಾಖೆಯ ನಿಯಾಮಾನುಸಾರಕ್ಕೆ ಕ್ರಮ ಕೈಗೊಳ್ಳಲಾಗುವುದು. ಅರ್ಜಿದಾರರ ಪ್ರಮಾಣ ಪತ್ರಗಳನ್ನು ಸಂಬಂಧಿಸಿದ ಉಪ/ಸಹಾಯಕ ನಿರ್ದೇಶಕರಿಂದ ದೃಢೀಕರಿಸಿ ಸಲ್ಲಿಸಬೇಕು. ತರಬೇತಿ ಶಿಬಿರದಲ್ಲಿ ಭಾಗವಹಿಸುವ ಯುವ ಜನರಿಗೆ ಲಘು ಉಪಹಾರ ಒದಗಿಸಲಾಗುವುದು. ಹೊರ ಜಿಲ್ಲೆಗಳಿಂದ ಆಗಮಿಸುವ ಶಿಬಿರಾರ್ಥಿಗಳಿಗೆ ಸಾಮಾನ್ಯ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು.. ಅರ್ಜಿದಾರರು ದೈಹಿಕವಾಗಿ ಸದೃಢರಾಗಿರಬೇಕು.
Key words: Applications, invited, gym fitness training camp
The post ಪರಿಶಿಷ್ಟ ಜಾತಿ ಯುವಜನರಿಗೆ ಜಿಮ್ ಫಿಟ್ನೆಸ್ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.
ಅಕ್ಕ ಕೆಫೆ ನಡೆಸಲು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನ
ಬೆಂಗಳೂರು, ಜನವರಿ,1,2026 (www.justkannada.in): ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಕಟ್ಟಡದ ಆವರಣದಲ್ಲಿ ಸ್ಥಾಪಿಸಲಾಗಿರುವ ಅಕ್ಕ ಕೆಫೆ ನಿರ್ವಹಣೆ ಮಾಡಲು ಜಿಲ್ಲೆಯ ಆಸಕ್ತ ಸಂಜೀವಿನಿ ಸ್ವಸಹಾಯ ಗುಂಪುಗಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಗಳು ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯಿತಿಗಳ ಸಂಜೀವಿನಿ ಶಾಖೆ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ಸಂಜೀವಿನಿ ಒಕ್ಕೂಟಗಳಲ್ಲಿ ಲಭ್ಯವಿದ್ದು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಸಂಜೀವಿನಿ ಜಿಲ್ಲಾ ಅಭಿಯಾನ ನಿರ್ವಹಣಾ ಘಟಕಕ್ಕೆ ದಿನಾಂಕ 08.01.2026 ರ ಸಂಜೆ:5.30 ರೊಳಗೆ ಸಲ್ಲಿಸಬೇಕು. ದಿನಾಂಕ ಮುಗಿದ ನಂತರ ಸ್ವೀಕೃತವಾಗುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಜೀವಿನಿ ಜಿಲ್ಲಾ, ತಾಲ್ಲೂಕು ಅಭಿಯಾನ ನಿರ್ವಹಣಾ ಘಟಕಗಳನ್ನು ಸಂಪರ್ಕಿಸಿ ಎಂದು ಜಿಪಂ ಸಿಇಒ ಡಾ.ಕೆ ಎನ್ ಅನುರಾಧ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಕ್ಕ ಕೆಫೆ ನಿರ್ವಹಿಸಲು ಮಹಿಳಾ ಸ್ವಸಹಾಯ ಗುಂಪುಗಳ ಆಯ್ಕೆ ಮಾನದಂಡಗಳು ನಿಗದಿ ಪಡಿಸಿದ್ದು ಅಕ್ಕ ಕಥೆಯಲ್ಲಿ ತೊಡಗಿಸಿಕೊಳ್ಳುವವರು ಕಡ್ಡಾಯವಾಗಿ ಜಿಲ್ಲೆಯ ಎನ್.ಆರ್.ಎಲ್.ಎಂ ಸ್ವಸಹಾಯ ಗುಂಪಿನವರಾಗಿರಬೇಕು. ವಾಕ್ ಪರಿಣಿತಿಯಲ್ಲಿ ಆಸಕ್ತಿವುಳ್ಳವರಿಗೆ ಮೊದಲ ಆದ್ಯತೆ ನೀಡಿ ಆಯ್ಕೆ ಮಾಡಲಾಗುವುದು. ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳು/ಪ್ರದೇಶ ಮಟ್ಟದ ಒಕ್ಕೂಟಗಳಡಿ ಅರ್ಹ ಮತ್ತು ಬಂಡವಾಳವನ್ನು ಹೂಡುವ ಸ್ವಸಹಾಯ ಗುಂಪುಗಳಿಗೆ ಆದ್ಯತೆ ನೀಡಿ ಆಯ್ಕೆ ಮಾಡಲಾಗುವುದು. ಯಾವುದೇ ಒಕ್ಕೂಟ/ಹಣಕಾಸು ಸಂಸ್ಥೆಯ ಸಾಲ ಬಾಕಿದಾರರಾಗಿರಬಾರದು. ಅಕ್ಕ ಕೆಫೆ ಸಂಬಂಧಿಸಿದಂತೆ ಸರ್ಕಾರದಿಂದ ಕಾಲ ಕಾಲಕ್ಕೆ ಹೊರಡಿಸುವ ಆದೇಶ ಸುತ್ತೋಲೆಗಳನ್ನು ಪಾಲನೆ ಮಾಡಲು ಬದ್ಧರಾಗಿರಬೇಕು. ರಾಜ್ಯ/ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ತರಬೇತಿ ಮತ್ತು ಕಾರ್ಯಾಗಾರಗಳಲ್ಲಿ ಭಾಗವಹಿಸಲು ಸಿದ್ಧರಿರಬೇಕು. ಅಕ್ಕ ಕೆಫೆಯಲ್ಲಿ ತೊಡಗಿಸಿಕೊಳ್ಳುವ ಸ್ವಸಹಾಯ ಗುಂಪಿನಲ್ಲಿ ಕನಿಷ್ಠ 5 ರಿಂದ ಗರಿಷ್ಠ 10 ಮಹಿಳೆಯರಿರುವ ಸ್ವಸಹಾಯ ಗುಂಪನ್ನು ಆಯ್ಕೆ ಮಾಡಲಾಗುವುದು. ಅಕ್ಕ ಕೆಫೆ ಶ್ರೇಣಿಕರಣ ಪ್ರಕ್ರಿಯೆಗೆ ಬದ್ಧರಾಗಿರಬೇಕು.
ಅರ್ಜಿಯೊಂದಿಗೆ ಸ್ವಸಹಾಯ ಗುಂಪು ಮತ್ತು ಸದಸ್ಯರು ಎನ್.ಆರ್.ಎಲ್.ಎಂ ನ ಎಂಐಎಸ್‌ ನಲ್ಲಿ ದಾಖಲಾಗಿರುವ ಬಗ್ಗೆ ಎಂಐಎಸ್ ಕೋಡ್ ಮಾಹಿತಿ. ಪಾಕ ಪರಿಣಿತಿಯಲ್ಲಿ ತರಬೇತಿ ಪಡೆದ ಪ್ರಮಾಣ ಪತ್ರ. ದುಡಿಯುವ ಬಂಡವಾಳವನ್ನು ಸದಸ್ಯರು ಹೂಡುವ ಬಗ್ಗೆ, ದೃಢೀಕರಣ ಪತ್ರ. ಒಕ್ಕೂಟ/ಹಣಕಾಸು ಸಂಸ್ಥೆಯ ಸಾಲ ಬಾಕಿದಾರರಾಗಿರದ ಬಗ್ಗೆ ದೃಢೀಕರಣ. ಅಕ್ಕ ಕೆಫೆಯ ನಿರ್ವಹಣೆಯನ್ನು ಗುಂಪಾಗಿ 5 ರಿಂದ 10 ಜನ ಮಹಿಳೆಯರು ನಿರ್ವಹಿಸುವ ಬಗ್ಗೆ ದೃಢೀಕರಣ. ರಾಜ್ಯ/ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ತರಬೇತಿ ಮತ್ತು ಕಾರ್ಯಾಗಾರಗಳಲ್ಲಿ ಭಾಗವಹಿಸಲು ಸಿದ್ಧರಿರುವ ಬಗ್ಗೆ ದೃಢೀಕರಣ. ಅಕ್ಕ ಕೆಫೆ ಸಂಬಂಧಿಸಿದಂತೆ ಸರ್ಕಾರದಿಂದ ಕಾಲ ಕಾಲಕ್ಕೆ ಹೊರಡಿಸುವ ಆದೇಶ ಸುತ್ತೋಲೆಗಳನ್ನು ಪಾಲನೆ ಮಾಡಲು ಬದ್ಧರಾಗಿರುವ ಬಗ್ಗೆ ದೃಢೀಕರಣ ದಾಖಲೆಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು ಎಂದು ಜಿಪಂ ಸಿಇಒ ಡಾ.ಕೆ ಎನ್ ಅನುರಾಧ ತಿಳಿಸಿದ್ದಾರೆ.
Key words: akka café, Applications, invited, Bangalore
The post ಅಕ್ಕ ಕೆಫೆ ನಡೆಸಲು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.
2ನೇ ವಿಮಾನ ನಿಲ್ದಾಣ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ-ಸಚಿವ ಎಂ.ಬಿ ಪಾಟೀಲ್
ಬೆಂಗಳೂರು,ಡಿಸೆಂಬರ್,13,2025 (www.justkannada.in):  ರಾಜಧಾನಿಯ ಸಮೀಪ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಸ್ಥಳದ ಅನುಕೂಲ ಮತ್ತು ತಾಂತ್ರಿಕ ಹಾಗೂ ಆರ್ಥಿಕ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಪರಿಣತ ಸಲಹಾ ಸಂಸ್ಥೆಯ ಆಯ್ಕೆಗಾಗಿ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮವು (ಕೆಎಸ್ಐಐಡಿಸಿ) ಟೆಂಡರ್ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು 2026ರ ಜನವರಿ 12 ಕೊನೆಯ ದಿನವಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಅವರು ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಎಂ.ಬಿ ಪಾಟೀಲ್ ಅವರು, 2ನೇ ವಿಮಾನ ನಿಲ್ದಾಣಕ್ಕಾಗಿ ರಾಜ್ಯ ಸರಕಾರವು ಕನಕಪುರ ರಸ್ತೆಯಲ್ಲಿರುವ ಚೂಡಹಳ್ಳಿ, ಸೋಮನಹಳ್ಳಿ ಮತ್ತು ನೆಲಮಂಗಲದ ಬಳಿ ಸ್ಥಳಗಳನ್ನು ಗುರುತಿಸಿದೆ. ಭಾರತೀಯ ವಿಮಾನನಿಲ್ದಾಣ ಪ್ರಾಧಿಕಾರದ ಉನ್ನತ ಮಟ್ಟದ ತಂಡವು ಇವುಗಳ ಪರಿಶೀಲನೆ ನಡೆಸಿ ಪ್ರಾಥಮಿಕ ವರದಿ ನೀಡಿದೆ. ಈಗ ಟೆಂಡರಿನಲ್ಲಿ ಆಯ್ಕೆಯಾಗುವ ಸಲಹಾ ಸಂಸ್ಥೆಯು 5 ತಿಂಗಳಲ್ಲಿ ಸರಕಾರಕ್ಕೆ ತನ್ನ ಸಮಗ್ರ ತಾಂತ್ರಿಕ ಮತ್ತು ಆರ್ಥಿಕ ಕಾರ್ಯಸಾಧ್ಯತಾ ವರದಿ ಕೊಡಬೇಕಾಗುತ್ತದೆ ಎಂದಿದ್ದಾರೆ.
ಕಳೆದ 5 ವರ್ಷಗಳಲ್ಲಿ ವಾರ್ಷಿಕವಾಗಿ 250 ಕೋಟಿ ರೂ. ಮೊತ್ತದ ಕೆಲಸಗಳನ್ನು ನಿರ್ವಹಿಸಿರುವಂಥ ಮತ್ತು ಸದರಿ ಕ್ಷೇತ್ರದಲ್ಲಿ ಕನಿಷ್ಠ ಪಕ್ಷ ಐದು  ಯೋಜನೆಗಳನ್ನಾದರೂ ನಿರ್ವಹಿಸಿರುವ/ಸಲಹಾ ವರದಿ ನೀಡಿರುವಂತಹ ಸಂಸ್ಥೆಗಳು ಟೆಂಡರ್ ನಲ್ಲಿ ಭಾಗವಹಿಸಬಹುದು. ಟೆಂಡರ್ ನಲ್ಲಿ ಆಯ್ಕೆಯಾಗುವ ಸಂಸ್ಥೆಯು ನಾವು ಸೂಚಿಸುತ್ತಿರುವ ಮೂರೂ ಸ್ಥಳಗಳ ಮಳೆ ಪ್ರಮಾಣ, ಭೂಲಕ್ಷಣ, ವಿದ್ಯುತ್, ನೀರು, ಒಳಚರಂಡಿ, ತ್ಯಾಜ್ಯ ನಿರ್ವಹಣೆಯಂಥ ಮೂಲಸೌಕರ್ಯಗಳು, ಸುತ್ತಮುತ್ತಲಿನ ಜನಸಂಖ್ಯೆ, ಅಭಿವೃದ್ಧಿ, ಶಬ್ದ ಮತ್ತು ವಿಮಾನ ನಿಲ್ದಾಣದಿಂದ ಉಂಟಾಗುವ ಮಾಲಿನ್ಯ ಇತ್ಯಾದಿಗಳತ್ತ ಗಮನ ಹರಿಸಲಿದೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು ಹೇಳಿದ್ದಾರೆ.
ಇದಲ್ಲದೆ ಉದ್ದೇಶಿತ 2ನೇ ವಿಮಾನ ನಿಲ್ದಾಣ ಅಭಿವೃದ್ಧಿಗೆ ತಗುಲುವ ವೆಚ್ಚ, ಅಗತ್ಯ ಇರುವ ಭೂಮಿ, ರಕ್ಷಣಾ ಸಚಿವಾಲಯ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಸೇರಿದಂತೆ ಹಲವು ಕಡೆಗಳಿಂದ ಪಡೆಯಬೇಕಾಗುವ ಅನುಮೋದನೆಗಳ ವಿವರಗಳು ಮುಂತಾದವನ್ನೂ ಈ ಕಾರ್ಯಸಾಧ್ಯತಾ ವರದಿಯಲ್ಲಿ ನೀಡಬೇಕಾಗುತ್ತದೆ. ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣದಿಂದ ಇಲ್ಲಿನ ಕೈಗಾರಿಕೆ, ಪ್ರವಾಸೋದ್ಯಮ, ಜನರ ಓಡಾಟ ಇತ್ಯಾದಿ ಅಂಶಗಳನ್ನೂ ಅದು ವಿವರಿಸಲಿದೆ ಎಂದು ಎಂ.ಬಿ ಪಾಟೀಲ್ ಅವರು ನುಡಿದಿದ್ದಾರೆ.
ಉದ್ದೇಶಿತ ವಿಮಾನ ನಿಲ್ದಾಣಕ್ಕೆ ಹಾಲಿ ಇರುವ ವಿವಿಧ ರೀತಿಯ ಸಂಪರ್ಕ, ವಿಮಾನ ನಿಲ್ದಾಣ ನಿರ್ಮಾಣ ನಂತರ ಏನೆಲ್ಲ ಮೂಲಸೌಕರ್ಯ ಅಭಿವೃದ್ಧಿಪಡಿಸಬೇಕು ಎಂಬುದರ ಬಗ್ಗೆಯೂ ಸಲಹಾ ಸಂಸ್ಥೆ ಅಧ್ಯಯನ ನಡೆಸಲಿದೆ. ಇದಲ್ಲದೆ, ಸರಕು ಸಾಗಣೆ ಮತ್ತು ಪ್ರಯಾಣಿಕ ಸೇವೆಗಳು ಹಾಗೂ ಅದರಿಂದಾಗುವ ಆರ್ಥಿಕ ಕಾರ್ಯಸಾಧ್ಯತೆ ಬಗ್ಗೆಯೂ ಅಧ್ಯಯನ ನಡೆಸಬೇಕಾಗಿದೆ. ಒಟ್ಟಿನಲ್ಲಿ ಮೂರೂ ಸ್ಥಳಗಳ ಬಗ್ಗೆ ಅಧ್ಯಯನ ನಡೆಸಿ, ಯಾವುದು ಹೆಚ್ಚು ಸೂಕ್ತ‌ ಎನ್ನುವ ಅಭಿಪ್ರಾಯ ಕೂಡ ಸಲಹಾ ಸಂಸ್ಥೆ ನೀಡಲಿದೆ ಎಂದು ಅವರು ಹೇಳಿದರು.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಈಗ ದಟ್ಟಣೆಯಲ್ಲಿ ದೇಶದಲ್ಲೇ 2ನೇ ಸ್ಥಾನದಲ್ಲಿದೆ. 2033ರ ಹೊತ್ತಿಗೆ ನಾವು ಮತ್ತೊಂದು ವಿಮಾನ ನಿಲ್ದಾಣ ಹೊಂದಬೇಕಾಗಿದೆ. ಮುಂದಾಲೋಚನೆಯನ್ನು ಇಟ್ಟುಕೊಂಡು ಈಗಿನಿಂದಲೇ ಪ್ರಯತ್ನಗಳನ್ನು ಆರಂಭಿಸಲಾಗಿದೆ. ಈಗಾಗಲೇ ಹೊಸ ದೆಹಲಿ ಮತ್ತು ಮುಂಬೈ ನಗರಗಳು ಎರಡೆರಡು ವಿಮಾನ ನಿಲ್ದಾಣ ಹೊಂದಿವೆ. ಕಾರ್ಯಸಾಧ್ಯತಾ ವರದಿ ಬಂದ ನಂತರ ಮುಂದಿನ ಹೆಜ್ಜೆ ಏನಿರಬೇಕೆಂದು ನಿರ್ಧರಿಸಲಾಗುವುದು ಎಂದು ಸಚಿವ ಎಂ.ಬಿ ಪಾಟೀಲ್ ವಿವರಿಸಿದರು.
Key words: 2nd Airport, Tender, invited, feasibility report, Minister, M.B. Patil
The post 2ನೇ ವಿಮಾನ ನಿಲ್ದಾಣ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ-ಸಚಿವ ಎಂ.ಬಿ ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.
ಹಾಸನಾಂಬ ಜಾತ್ರಾ ಮಹೋತ್ಸವ: ಸಿಎಂ ಸಿದ್ದರಾಮಯ್ಯಗೆ ಆಹ್ವಾನ
ಬೆಂಗಳೂರು,ಸೆಪ್ಟಂಬರ್,16,2025 (www.justkannada.in): ಅಕ್ಟೋಬರ್ 9ರಿಂದ ಪ್ರಾರಂಭವಾಗುವ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಹಾಸನ ಜಿಲ್ಲಾಡಳಿತ ವತಿಯಿಂದ ಸಿಎಂ ಸಿದ್ದರಾಮಯ್ಯಗೆ ಆಹ್ವಾನ ನೀಡಲಾಯಿತು.
ಇಂದು ಶಾಸಕ ಶಿವಲಿಂಗೇಗೌಡ, ಹಾಸನ ಜಿಲ್ಲಾಧಿಕಾರಿ ಕೆ.ಎಸ್ ಲತಾಕುಮಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಅವರು ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿಯಾಗಿ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಆಹ್ವಾನ ನೀಡಿದರು.
ಹಾಸನಾಂಬೆ ಜಾತ್ರಾ ಮಹೋತ್ಸವವು ಅಕ್ಟೋಬರ್ 9ರಿಂದ 23ರವರೆಗೆ ನಡೆಯಲಿದೆ.
Key words: Hassanamba Jatra Festival, CM, Siddaramaiah, invited
The post ಹಾಸನಾಂಬ ಜಾತ್ರಾ ಮಹೋತ್ಸವ: ಸಿಎಂ ಸಿದ್ದರಾಮಯ್ಯಗೆ ಆಹ್ವಾನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.
ಮೈಸೂರು ದಸರಾ2025: ಜನಪ್ರಿಯ ಆಹಾರ ಮೇಳಕ್ಕೆ ಅರ್ಜಿ ಆಹ್ವಾನ
ಮೈಸೂರು,ಆಗಸ್ಟ್, 25,2025 (www.justkannada.in): ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2025ರ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವು” ಜನಪ್ರಿಯ ಆಹಾರ ಮೇಳವನ್ನು” ಸೆಪ್ಟೆಂಬರ್ 22 ರಿಂದ ಆಕ್ಟೋಬರ್ 02 ವರೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನ/ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಆಹಾರ ಮೇಳಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಆಹಾರ ಮೇಳದಲ್ಲಿ ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕ, ಹೊರ ರಾಜ್ಯದ ಆಹಾರ ಪದ್ಧತಿಯಡಿಯಲ್ಲಿ ಕಾಶ್ಮೀರಿ, ಪಂಜಾಬಿ, ರಾಜಸ್ಥಾನಿ, ಈಶಾನ್ಯ ಭಾರತ ಆಹಾರ ಪದ್ಧತಿ, ಆಂಧ್ರ ಶೈಲಿ, ಕೇರಳ ಶೈಲಿ, ತಮಿಳುನಾಡು ಶೈಲಿ, ಮರಾಠಿ ಶೈಲಿಯಲ್ಲಿನ ಸಸ್ಯಾಹಾರಿ ಮತ್ತು ಶಾಖಾಹಾರಿ ಆಹಾರ ಪದ್ಧತಿ ಶೈಲಿಯ ಜೊತೆಗೆ ಅಂತರ್ ರಾಷ್ಟ್ರೀಯ ಚೈನೀಸ್, ಟಿಬೆಟಿಯನ್, ಇಟಾಲಿಯನ್, ಫ್ರೆಂಚ್ ಹಾಗೂ ಆಫ್ರಿಕನ್ ಆಹಾರ ಪದ್ಧತಿಯಡಿಯಲ್ಲಿ ಆಹಾರ ತಯಾರಿಸುವ ಅಡುಗೆಗಳು ಮತ್ತು ಸಿರಿಧಾನ್ಯ ಮತ್ತು ಸಹಜ ಹಾಗೂ ಸಾವಯವ ಧಾನ್ಯಗಳು ಮತ್ತು ತರಕಾರಿಗಳಲ್ಲಿ ಅಡುಗೆಗಳನ್ನು ಮಾಡುವ ವ್ಯಕ್ತಿಗಳು, ಗೃಹಿಣಿಯರು, ಹೋಟೇಲ್ಗಳು, ಸಂಘ ಸಂಸ್ಥೆಗಳು, ರೆಸ್ಟೋರೆಂಟ್ಗಳು ಮತ್ತು ಇತರರು ಭಾಗವಹಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಆಗಸ್ಟ್ 25 ರಿಂದ ಸೆಪ್ಟೆಂಬರ್ 09 ರವರೆಗೆ ನಗರಸಭಾ ಕಾರ್ಯಾಲಯ ಎಸ್.ಆರ್.ಎಸ್. ಎದುರು, ಹೈಟೆನ್ಷನ್ ಜೋಡಿರಸ್ತೆ, ಹೂಟಗಳ್ಳಿ, ಮೈಸೂರು ಇಲ್ಲಿ ನೀಡಲಾಗುವುದು. ಸೆಪ್ಟೆಂಬರ್ 09 ರಂದು ಪಡೆದ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಮಂಟೇಸ್ವಾಮಿ, ಉಪ ವಿಶೇಷಾಧಿಕಾರಿಗಳು. ಆಹಾರ ಮೇಳ ಉಪಸಮಿತಿ ಹಾಗೂ ಜಂಟಿ ನಿರ್ದೇಶಕರು, ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾಧಿಕಾರಿಗಳ ಕಛೇರಿ, ಮೈಸೂರು..ಬಿ.ಎನ್.ಚಂದ್ರಶೇಖರ್ ಕಾರ್ಯಾಧ್ಯಕ್ಷರು ಆಹಾರ ಮೇಳ ಉಪಸಮಿತಿ ಹಾಗೂ ಪೌರಾಯುಕ್ತರು ನಗರಸಭೆ ಹೂಟಗಳ್ಳಿ ಮತ್ತು ಮಹೇಶ್, ಕಾರ್ಯದರ್ಶಿಗಳು. ಆಹಾರ ಮೇಳ ಉಪಸಮಿತಿ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು ಮೈಸೂರು ಅಭಿವೃದ್ಧಿ ಪ್ರಾಧಿಕಾರ ಮೈಸೂರು, ಜಮುನಾ.ಡಿ. ಕಛೇರಿ ವ್ಯವಸ್ಥಾಪಕರು, ಹೂಟಗಳ್ಳಿ ನಗರಸಭೆ ದೂ.ಸಂ: 9844464011, ಪ್ರಕಾಶ್ ದೂ.ಸಂ: 9964328792, ನಾಗೇಂದ್ರ ದೂ.ಸಂ: 8310846464 ನ್ನು ಸಂಪರ್ಕಿಸಬಹುದಾಗಿದೆ ಎಂದು ಹೂಟಗಳ್ಳಿ ನಗರಸಭೆ, ಪೌರಾಯುಕ್ತರು ಹಾಗೂ ದಸರಾ ಮಹೋತ್ಸವ-2025ರ ಆಹಾರ ಮೇಳ ಉಪಸಮಿತಿಯ ಕಾರ್ಯಾಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Key words: Mysore Dasara 2025,  Applications, invited, food fair
The post ಮೈಸೂರು ದಸರಾ2025: ಜನಪ್ರಿಯ ಆಹಾರ ಮೇಳಕ್ಕೆ ಅರ್ಜಿ ಆಹ್ವಾನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.
ಮೈಸೂರು ದಸರಾ: ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನ
ಮೈಸೂರು,ಆಗಸ್ಟ್,19,2025 (www.justkannada.in): ಸೆಪ್ಟಂಬರ್ 22 ರಿಂದ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ನೀಡಲು ಕಲಾವಿದರಿಂದ/ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಮೈಸೂರು ದಸರಾ ಮಹೋತ್ಸವ 2025 ಸಾಂಸ್ಕೃತಿಕ ಉಪಸಮಿತಿಯ ಕಾರ್ಯರ್ಶಿ ಡಾ.ಎಂ.ಡಿ ಸುದರ್ಶನ್,  2025-26ನೇ ಸಾಲಿನಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ದಿನಾಂಕ: 22-09-2025 ರಿಂದ 02-10-2025ರ ವರೆಗೆ ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಗಿದೆ. ಈ ಸಂಬಂಧ ಸಾಂಸ್ಕೃತಿಕ ಉಪಸಮಿತಿಯಿಂದ ನವರಾತ್ರಿ ದಿನಾಂಕ: 22-09-2025 ರಿಂದ 30-09-2025ರ ವರೆಗೆ ವಿವಿಧ ಕಲಾಪ್ರಕಾರಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅರಮನೆ ಹಾಗೂ ಇತರೆ ವೇದಿಕೆಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ.
ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಕಲಾವಿದರಿಂದ/ಕಲಾತಂಡಗಳಿಂದ ದಿನಾಂಕ: 20-08-2025 ರಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-09-2025 ಆಗಿರುತ್ತದೆ. ಸದರಿ ಅರ್ಜಿಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕಲಾಮಂದಿರ, ವಿನೋಬಾ ರಸ್ತೆ, ಮೈಸೂರು-570005 ಇಲ್ಲಿಗೆ ನೇರವಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಮಿಂಚಂಚೆ ಮೂಲಕವು ccdasara23@gamail.com ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0821-2513225ಗೆ ಸಂಪರ್ಕಿಸಲು ತಿಳಿಸಿದೆ. ಹಾಗೂ ಕಲಾವಿದರಿಗೆ ಕಾರ್ಯಕ್ರಮ ಕೊಡಿಸುವುದಾಗಿ ಯಾವುದೇ ಮಧ್ಯವರ್ತಿಗಳು ಸಂಪರ್ಕಿಸಿ ಹಣದ ಬೇಡಿಕೆ ಇಟ್ಟಲ್ಲಿ ತಕ್ಷಣ ಮಾಹಿತಿ ಸಮೇತ ಮೇಲ್ಕಾಣಿಸಿದ ಸಹಾಯಕ ನಿರ್ದೇಶಕರ ಕಚೇರಿಗೆ ದೂರು ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.
Key words: Mysore Dasara,  Applications, invited, cultural programs
The post ಮೈಸೂರು ದಸರಾ: ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.