Janaspandana Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡಲು ಜನಸ್ಪಂದನ ಆಯೋಜನೆ-ಸಚಿವ ಹೆಚ್ ಸಿ ಮಹದೇವಪ್ಪ
ಮೈಸೂರು,ಜುಲೈ,4,2025 (www.justkananda.in): ಮೂರು ತಿಂಗಳಿಗೆ ಒಂದು ಬಾರಿ ಕೆ.ಡಿ.ಪಿ ಸಭೆ ಹಾಗೂ 6 ತಿಂಗಳಿಗೆ ಒಂದು ಬಾರಿ ಜನತಾದರ್ಶನ ಕಾರ್ಯಕ್ರಮ ನಡೆಸಲಾಗುತ್ತಿದೆ. ಹಿಂದೆ ಮಾಡಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಬಂದಿದ್ದ ಮನವಿಗಳಲ್ಲಿ ಎಷ್ಟು ಪರಿಹಾರ ಮಾಡಲಾಗಿದೆ ಎಂಬುದನ್ನು ತಿಳಿಸಬೇಕು. ಕಾನೂನು ತೊಡಕು ಇರುವ ಅರ್ಜಿಗಳ ಬಗ್ಗೆಯೂ ಅರ್ಜಿದಾರರಿಗೆ ಮಾಹಿತಿ ನೀಡಬೇಕು. ಜನರಿಗೆ ಪಾರದರ್ಶಕ ಆಡಳಿತದ ಬಗ್ಗೆ ಮಾಹಿತಿ ನೀಡಬೇಕು. ಜನರ ಸಮಸ್ಯೆಗಳನ್ನು ಪರಿಹರಿಸಿ ಮಧ್ಯವರ್ತಿಗಳ ಹಾವಳಿ ತಪ್ಪಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ ಮಹದೇವಪ್ಪ ಅವರು ಹೇಳಿದರು.

ಇಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ‘ಜಿಲ್ಲಾ ಮಟ್ಟದ ಜನಸ್ಪಂದನ’ ಹಾಗೂ ಇ– ಪೌತಿ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 200 ಕ್ಕಿಂತ ಅಧಿಕ ಜನರ ಅಹವಾಲು ಸ್ವೀಕರಿಸಲಾಯಿತು. ಕಳೆದ ಬಾರಿ 113 ಅರ್ಜಿಗಳು ಬಂದಿದ್ದವು ಎಂದು ತಿಳಿಸಿದರು.

ಯಾವ ಯಾವ ಇಲಾಖೆಗಳಲ್ಲಿ ಏನೇನು ಸಮಸ್ಯೆಗಳಿವೆ ಎಷ್ಟು ಅರ್ಜಿಗಳು ಬಂದಿದೆ. ಎಷ್ಟು ಅರ್ಜಿಗಳಿಗೆ ಪರಿಹಾರ ಮಾಡಲಾಗಿದೆ, ಮಾಡದೆ ಇರುವಂತಹ ಅರ್ಜಿಗಳಿಗೆ ಏನು ಪರಿಹಾರ ಎಂಬ ಎಲ್ಲಾ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಅರ್ಜಿದಾರರು ತಿಳಿಸಿರುವ ಸಮಸ್ಯೆ ಪರಿಹರಿಸಲು ಆಡಳಿತ ಯಾವಾಗಲೂ ಜನರ ಜೊತೆಯೇ ಇರುತ್ತದೆ ಎಂದು ಹೇಳಿದರು.

ಕಾನೂನಾತ್ಮಕವಾಗಿ ಪರಿಹಾರ ಮಾಡಲು ಸಾಧ್ಯವಾಗಿದೆ ಇರುವಂತಹ ಕಾರ್ಯಗಳ ಬಗ್ಗೆ ಮನವರಿಕೆ ಮಾಡಲು ಆಡಳಿತ ಜನರ ಜೊತೆ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು ಹಾಗೂ ನಿಮ್ಮ ಜೊತೆಯಲ್ಲಿ ಕಚೇರಿಯ ಸಮಸ್ಯೆಯನ್ನು ಪರಿಹರಿಸಲು ಸಹಾಯವಾಗುತ್ತದೆ. ಜನರು ಮತ್ತು ಜಿಲ್ಲಾಡಳಿತ ನಡುವೆ ನೇರ ಸಂಪರ್ಕ ಇರುತ್ತದೆ. ಮಧ್ಯವರ್ತಿಗಳ ಹಾವಳಿಗಳನ್ನು ತಪ್ಪಿಸುವ ಸಲುವಾಗಿ ಪ್ರತಿ ಆರು ತಿಂಗಳಿಗೆ ಕಡ್ಡಾಯವಾಗಿ ಜನ ಸಂಪರ್ಕ ಸಭೆ ನಡೆಸಲಾಗುತ್ತದೆ ಎಂದು ತಿಳಿಸಿದರು.

ಜನಸ್ಪಂದನಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ನೂರಾರು ಜನರ ಸಮಸ್ಯೆ ಆಲಿಸಿದ ಸಚಿವರು ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸುವ ಭರವಸೆ ನೀಡಿದರು. ಕೆಲ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಹುಡುಕಿದ ಸಚಿವರು, ಇನ್ನುಳಿದ ಅಹವಾಲುಗಳನ್ನು ಪರಿಶೀಲಿಸಿ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು. ಪ್ರತಿಯೊಬ್ಬರಿಂದಲೂ ಮನವಿ ಸ್ವೀಕರಿಸಿ ಅದನ್ನು ದಾಖಲು ಮಾಡಿಕೊಳ್ಳಲಾಯಿತು ಹಾಗೂ ಸಮಸ್ಯೆಗೆ ಪರಿಹಾರ ಕಲ್ಪಿಸುವ ಭರವಸೆ ನೀಡಲಾಯಿತು.

ಬೀದಿ ಬದಿ ವ್ಯಾಪಾರಿಗಳು, ಅಂಗವಿಕಲರು, ಕೂಲಿ ಕಾರ್ಮಿಕರು ಮನೆ ನಿರ್ಮಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ. ಅವರೆಲ್ಲರ ಅರ್ಜಿಯನ್ನು ಸಂಗ್ರಹಿಸಿದ್ದು, ಬಹು ವಸತಿ ಸೌಲಭ್ಯ ಒದಗಿಸಲು ಕ್ರಮವಹಿಸಲಾಗುವುದು. ಎಲ್ಲರಿಗೂ ಸೂರು ಒದಗಿಸಲು ಯೋಜನೆ ರೂಪಿಸುತ್ತೇವೆ. ಆರ್ಥಿಕವಾಗಿ ಹಿಂದುಳಿದ ಹಲವರು ಸೌಲಭ್ಯ ದೊರಕುತ್ತಿಲ್ಲ ಎಂದು ತಿಳಿಸಿದ್ದಾರೆ. ಈ ರೀತಿ ಸಮಸ್ಯೆ ಇರುವವರನ್ನು ವಿಚಾರಿಸಿ ಅಧಿಕಾರಿಗಳು ಅವರಿಗೆ ಎಲ್ಲಾ ಸೌಲಭ್ಯ ಒದಗಿಸಿಕೊಡಬೇಕು ಎಂದು ಸೂಚಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಿ.ಎನ್. ಮಂಜೇಗೌಡ, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಹೆಚ್.ಎಂ ರೇವಣ್ಣ, ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಯುಕೇಶ್ ಕುಮಾರ್, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎನ್.ವಿಷ್ಣುವರ್ಧನ್, ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಶೇಖ್ ತನ್ವೀರ್ ಆಸಿಫ್, ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ.ಶಿವರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Organization, Janaspandana, people, problems, Minister, HC Mahadevappa

The post ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡಲು ಜನಸ್ಪಂದನ ಆಯೋಜನೆ-ಸಚಿವ ಹೆಚ್ ಸಿ ಮಹದೇವಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಇದು ಜನಸ್ಪಂದನ ಸಮಾವೇಶವಲ್ಲ, ಕಮಿಷನ್ ಸಮಾವೇಶ- ರಾಜ್ಯ ಕಾಂಗ್ರೆಸ್ ಟೀಕೆ.
ಬೆಂಗಳೂರು,ಸೆಪ್ಟಂಬರ್,10,2022(www.justkannada.in)  ಮೂರು ವರ್ಷದ ಸರ್ಕಾರದ ಸಾಧನೆ ಅನಾವರಣಗೊಳಿಸಲು ಇಂದು ರಾಜ್ಯ ಬಿಜೆಪಿ  ನಡೆಸುತ್ತಿರುವ ಜನಸ್ಪಂದನ ಕಾರ್ಯಕ್ರಮದ ಬಗ್ಗೆ ರಾಜ್ಯ ಕಾಂಗ್ರೆಸ್ ಘಟಕ ಟೀಕಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ,  ಬಿಜೆಪಿ ನಡೆಸುತ್ತಿರುವುದು ಜನಸ್ಪಂದನ ಸಮಾವೇಶವಲ್ಲ “ಕಮಿಷನ್ ಸಮಾವೇಶ” 40% ಕಮಿಷನ್ ಲೂಟಿಯ ಪಾಪದ ಹಣದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಯಾವ ಸಾಧನೆ ಹೇಳಿಕೊಳ್ಳುವಿರಿ ಬೊಮ್ಮಾಯಿ ಅವರೇ? ನಿಮ್ಮದೇ ಪಕ್ಷದ ಕಾರ್ಯಕರ್ತ & ಗುತ್ತಿಗೆದಾರ ಸಂತೋಷ್ ಪಾಟೀಲ್‌ ರನ್ನು ಕಮಿಷನ್ ಕಿರುಕುಳದಲ್ಲಿ ಕೊಂದಿದ್ದನ್ನು ಹೇಳಿಕೊಳ್ಳುವಿರಾ..? ಎಂದು ಕುಟುಕಿದೆ.

ಸರ್ಕಾರ ಪರ್ಸೆಂಟೇಜ್ ಮೇಲೆ ನಡೆಯುತ್ತಿದೆಯೇ? ಗುತ್ತಿಗೆದಾರರು, ಜನಸಾಮಾನ್ಯರ ನಂತರ ಹೈಕೋರ್ಟ್ ಕೂಡ 40% ಸರ್ಕಾರದ ಪರ್ಸೆಂಟೇಜ್ ಬಗ್ಗೆ ಮಾತಾಡುತ್ತಿದೆ.  ಬೊಮ್ಮಾಯಿ ಅವರೇ  ಬ್ರಷ್ಟೋತ್ಸವದ ಇಂತಹ ನಾಚಿಕೆಗೇಡಿನ ಸಂಗತಿ ಎದುರಿಟ್ಟುಕೊಂಡು ಯಾವ ಪುರುಷಾರ್ಥಕ್ಕೆ ಸಮಾವೇಶ ನಡೆಸುತ್ತಿದ್ದೀರಿ? ನಾಡಿನ ಎದುರು ತಲೆ ತಗ್ಗಿಸಬೇಕಾದ ಸಮಯವಿದು ಎಂದು ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ.

ಗುತ್ತಿಗೆದಾರರು ಸರ್ಕಾರದ ಕಮಿಷನ್ ಕಿರುಕುಳದ ಬಗ್ಗೆ ಪ್ರಧಾನಿಗೆ ಪತ್ರ ಬರೆದರೂ ಪ್ರಯೋಜನವಿಲ್ಲ, ಪತ್ರಿಕಾಗೋಷ್ಠಿ ನಡೆಸಿದರೂ ಉಪಯೋಗವಿಲ್ಲ, 40% ಕಮಿಷನ್ ಲೂಟಿ ನಿಂತೇ ಇಲ್ಲ. ಭ್ರಷ್ಟಾಚಾರವನ್ನೇ ಉಸಿರಾಡುತ್ತಿರುವ ನಿಮ್ಮ ಸರ್ಕಾರದ ಸಾಧನೆ ಏನು ಅಕ್ರಮಗಳನ್ನು ಮುಚ್ಚಿಕೊಳ್ಳುವುದೇ ಸಾಧನೆಯೇ? ಎಂದು ಚಾಟಿ ಬೀಸಿದೆ.

Key words: bjp-janaspandana-Criticise -Congress.

The post ಇದು ಜನಸ್ಪಂದನ ಸಮಾವೇಶವಲ್ಲ, ಕಮಿಷನ್ ಸಮಾವೇಶ- ರಾಜ್ಯ ಕಾಂಗ್ರೆಸ್ ಟೀಕೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜನಸ್ಪಂದನದಲ್ಲಿ ಸರ್ಕಾರದ 40 ಪರ್ಸೆಂಟ್ ಕಮಿಷನ್ ಕುರಿತು ಹೇಳಬೇಕಷ್ಟೆ- ಬಿಜೆಪಿ ಕುಟುಕಿದ ಸಿದ‍್ಧರಾಮಯ್ಯ.
ಬೆಂಗಳೂರು,ಸೆಪ್ಟಂಬರ್,10,2022(www.justkannada.in): ರಾಜ್ಯ ಬಿಜೆಪಿ ನಾಯಕರು ದೊಡ್ಡಬಳ್ಳಾಪುರದಲ್ಲಿ ಹಮ್ಮಿಕೊಂಡಿರುವ ಜನಸ್ಪಂದನ ಸಮಾವೇಶದ ಬಗ್ಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕಿಸಿದ್ದಾರೆ.

ಈ ಕುರಿತು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಬಿಜೆಪಿಯವರು ಏನು ಸಾಧನೆ ಮಾಡಿದ್ದಾರೆ ಹೇಳೋಕೆ ಭ್ರಷ್ಟಾಚಾರ ಬಿಟ್ಟರೆ ಬೇರೇನು ಸಾಧನೆ ಇದೆ. ಸರ್ಕಾರದ 40 ಪರ್ಸೆಂಟ್ ಕಮಿಷನ್ ಕುರಿತು ಹೇಳಬೇಕು ಅಷ್ಟೆ.  ಸರ್ಕಾರ ಕಷ್ಟಕ್ಕೊಳಗಾದವರಿಗೆ ಸ್ಪಂದಿಸಬೇಕಲ್ವಾ ಜನರ ಕಷ್ಟ ಸುಖ ಕೇಳದೆ ಜನಸ್ಪಂದನ ಕಾರ್ಯಕ್ರಮ ಮಾಡುತ್ತಿದ್ದಾರೆ. ಯಾವ ಸಚಿವರೂ ಜಿಲ್ಲೆಗಳಿಗೆ ಹೋಗಿ ಸಮಸ್ಯೆ ಕೇಳುತ್ತಿಲ್ಲ. ಜನರ ಕಷ್ಟ ಕೇಳದೆ ಜನಸ್ಪಂದನ ಮಾಡುತ್ತಿದ್ದಾರೆ ಎಂದು ಕುಟುಕಿದರು.

ಮಳೆ ಪ್ರವಾಹದಿಂದ ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ. ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಿದ್ದೀರಾ ದುಡ್ಡು ಖರ್ಚು ಮಾಡಿಕೊಂಡು ರಾಜಕೀಯ ಮಾಡುತ್ತಿದ್ದಾರೆ. ಜನಸ್ಪಂದನ ಇದು ರಾಜಕೀಯ ಪ್ರೇರಿತ ಕಾರ್ಯಕ್ರಮ. ಬರೀ ಹೆಸರು ಮಾತ್ರ ಜನಸ್ಪಂದನ ಅಂದ್ರೆ ಆಯ್ತಾ. ಬೆಂಗಳೂರಿನಲ್ಲಿ ಜನ ಬೋಟಲ್ಲಿ ಓಡಾಡು ಪರಿಸ್ಥಿತಿ ಇದೆ ಎಂದು ವಾಗ್ದಾಳಿ ನಡೆಸಿದರು.

Key words: 40 percent-commission -government –Janaspandana-BJP -Siddaramaiah.

The post ಜನಸ್ಪಂದನದಲ್ಲಿ ಸರ್ಕಾರದ 40 ಪರ್ಸೆಂಟ್ ಕಮಿಷನ್ ಕುರಿತು ಹೇಳಬೇಕಷ್ಟೆ- ಬಿಜೆಪಿ ಕುಟುಕಿದ ಸಿದ‍್ಧರಾಮಯ್ಯ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಇಂದು ಜನಸ್ಪಂದನ ಸಮಾವೇಶ: ಮೂರು ವರ್ಷದ ಸಾಧನೆ ಅನಾವರಣಕ್ಕೆ ಬಿಜೆಪಿ ಸಜ್ಜು.
ದೊಡ್ಡಬಳ್ಳಾಪುರ,ಸೆಪ್ಟಂಬರ್,10,2022(www.justkannada.in):  ಮೂರು ವರ್ಷದ ಸಾಧನೆ ಅನಾವರಣಗೊಳಿಸುವ ಸಲುವಾಗಿ ಇಂದು  ರಾಜ್ಯ ಬಿಜೆಪಿ ಜನಸ್ಪಂದನ ಕಾರ್ಯಕ್ರಮವನ್ನ ಆಯೋಜಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ಜನಸ್ಪಂದನ ಸಮಾವೇಶ ನಡೆಯುತ್ತಿದ್ದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ವೇದಿಕೆಯಲ್ಲಿ 30 ನಾಯಕರಿಗೆ ವ್ಯವಸ್ಥೆ ಮಾಡಲಾಗಿದ್ದು,  200 ಎಕರೆ ಜಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ದೊಡ್ಡಬಳ್ಳಾಪುರ ನಗರದ ಪ್ರಮುಖ ರಸ್ತೆಗಳು ಕೇಸರಿಮಯವಾಗಿವೆ .

ಬೆಂಗಳೂರು ಗ್ರಾಮಾಂತರ  ಎಸ್.ಪಿ ಬಾಲದಂಡಿ ನೇತೃತ್ವದಲ್ಲಿ ಭದ್ರತೆ ವಹಿಸಲಾಗಿದ್ದು ಇಬ್ಬರು ಎಎಸ್ ಪಿ, 11 ಡಿವೈಎಸ್ ಪಿ, 35 ಇನ್ಸ್ ಪೆಕ್ಟರ್, 100 ಪಿಎಸ್ ಐ 150 ಎಎಸ್ ಐ, 400 ಗೃಹ ರಕ್ಷಕ ದಳದ ಸಿಬ್ಬಂದಿಗಳು,  4 ಕೆಎಸ್ ಆರ್ ಪಿ ತುಕಡಿ, 6 ಡಿಎಆರ್ ತುಕಡಿಯನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ.

ಜುಲೈ 28 ರಂದು ನಡೆಯಬೇಕಿದ್ಧ ಜನೋತ್ಸವ ಕಾರ್ಯಕ್ರಮ ಸೆಪ್ಟಂಬರ್ 8ಕ್ಕೆ ಮುಂದೂಡಲಾಗಿತ್ತು. ಆದರೆ ಸಚಿವ ಉಮೇಶ್ ಕತ್ತಿ ನಿಧನರಾದ ಹಿನ್ನೆಲೆ ಮತ್ತೆ ಸಮಾವೇಶವನ್ನು ಮುಂದೂಡಿ ಜನಸ್ಪಂದನ ಹೆಸರಿನಲ್ಲಿ ಇಂದು ಕಾರ್ಯಕ್ರಮ ಮಾಡಲಾಗುತ್ತಿದೆ.

Key words:  Today – Janaspandana-BJP – three years -achievements.

The post ಇಂದು ಜನಸ್ಪಂದನ ಸಮಾವೇಶ: ಮೂರು ವರ್ಷದ ಸಾಧನೆ ಅನಾವರಣಕ್ಕೆ ಬಿಜೆಪಿ ಸಜ್ಜು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜನಸ್ಪಂದನ ಸಮಾವೇಶಕ್ಕೆ ಸಕಲ ಸಿದ್ಧತೆ: ನಮ್ಮಆಡಳಿತದ ರಿಪೋರ್ಟ್ ಕಾರ್ಡ್ ಜನರ ಮುಂದಿಡುತ್ತೇವೆ- ಸಚಿವ ಡಾ.ಕೆ.ಸುಧಾಕರ್
ದೊಡ್ಡಬಳ್ಳಾಪುರ,ಸೆಪ್ಟಂಬರ್,9,2022(www.justkannada.in):  ನಾಳೆ ದೊಡ್ಡಬಳ್ಳಾಪುರದಲ್ಲಿ ನಡೆಯಲಿರುವ ಜನಸ್ಪಂದನ ಸಮಾವೇಶಕ್ಕೆ ಅಗತ್ಯ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಈ ಕುರಿತು ಇಂದು ಸುದ‍್ಧಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಸುಧಾಕರ್, ಸಂಕಷ್ಟದ ಸಮಯದಲ್ಲೂ ಜನರಿಗೆ ನಮ್ಮ ಸರ್ಕಾರ ಸ್ಪಂದಿಸಿದೆ.  ಅದಕ್ಕಾಗಿಯೇ ಜನಸ್ಪಂದನ ಸಮಾವೇಶ ಎಂದು ಹೆಸರಿಟ್ಟಿದ್ದೇವೆ. ಜನರ ಉತ್ಸವ ಆಗಬೇಕೆಂದು ಜನೋತ್ಸವ ಎಂದು ಹೆಸರು ಇಟ್ಟಿದ್ಧವು.  ಅತಿವೃಷ್ಠಿ ಹಿನ್ನೆಲೆ ಉತ್ಸವ ಬೇಡ ಎಂದು ಜನಸ್ಪಂದನ ಹೆಸರಿಟ್ಟಿದ್ದೇವೆ.  ಆ ಭಾಗದಲ್ಲಿ 7 ರಿಂದ 8 ಸ್ಥಾನ ಗೆಲ್ಲುವ ನಿರೀಕ್ಷೆ ಇದೆ ಎಂದು ನುಡಿದರು.

10 ಎಕರೆ ಪ್ರದೇಶದಲ್ಲಿ ಜನಸ್ಪಂದನ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಲಾಗಿದೆ. 3 ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡಿದ್ದೇವೆ. ಪಲಾವ್, ಮೊಸರನ್ನ ಸ್ವೀಟ್ ಇರಲಿದೆ.  ತಾತ್ಕಾಲಿಕವಾಗಿ ಅಡುಗೆ ಮನೆ ನಿರ್ಮಾಣ ಮಾಡಲಾಗಿದೆ. ಪಾರ್ಕಿಂಗ್ ವ್ಯವಸ್ಥೆ, ಎಲ್ಲೂ ಕೂಡ ಟ್ರಾಫಿಕ್ ಜಾಮ್ ಆಗದಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

2ವರ್ಷ ಬಿಎಸ್ ವೈ 1 ವರ್ಷ  ಬೊಮ್ಮಾಯಿ ಆಡಳಿತ ಸೇರಿ ಮೂರು ವರ್ಷದ ನಮ್ಮ ಆಡಳಿತದ ಯೋಜನೆಗಳ ಮಾಹಿತಿ ಇಡ್ತೇವೆ.  ಒಟ್ಟು ಆರು ಕಡೆ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ. ದೊಡ್ಡಬಳ್ಳಾಪುರದಲ್ಲಿ ನಾಳೆ ಕಾರ್ಯಕ್ರಮ ನಡೆಯಲಿದ್ದು ಇಲ್ಲಿ ಕೂಡ ನಮ್ಮ ಆಡಳಿತದ ರಿಪೋರ್ಟ್ ಕಾರ್ಡ್ ಜನರ ಮುಂದೆ ಇಡುತ್ತೇವೆ. ದೊಡ್ಡಬಳ್ಳಾಪುರ ಕಾರ್ಯಕ್ರಮದ ಮೂಲಕ ಶಕ್ತಿ ಪ್ರದರ್ಶನ ಮಾಡುತ್ತೇವೆ ಎಂದರು.

Key words: bjp-janaspandana- administration – people-Minister -Dr. K. Sudhakar

The post ಜನಸ್ಪಂದನ ಸಮಾವೇಶಕ್ಕೆ ಸಕಲ ಸಿದ್ಧತೆ: ನಮ್ಮಆಡಳಿತದ ರಿಪೋರ್ಟ್ ಕಾರ್ಡ್ ಜನರ ಮುಂದಿಡುತ್ತೇವೆ- ಸಚಿವ ಡಾ.ಕೆ.ಸುಧಾಕರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸೆ.10 ರಂದು ನಿಗದಿಯಂತೆ ಜನಸ್ಪಂದನ : ಯಾವ ಕಾರಣಕ್ಕೂ ಕಾರ್ಯಕ್ರಮ ಮುಂದೆ ಹೋಗಲ್ಲ- ಸಚಿವ ಸುಧಾಕರ್.
ಬೆಂಗಳೂರು,ಸೆಪ್ಟಂಬರ್,8,2022(www.justkannada.in):  ಸೆಪ್ಟಂಬರ್ 10 ರಂದು ನಿಗದಿಯಂತೆ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ. ಈ ಬಾರಿ ಯಾವುದೇ ಕಾರಣಕ್ಕೂ ಕಾರ್ಯಕ್ರಮ ಮುಂದೆ ಹೋಗಲ್ಲ ಎಂದು ಆರೋಗ್ಯ ಸಚಿವ ಡಾಕೆ.ಸುಧಾಕರ್ ತಿಳಿಸಿದರು.

ಇಂದು ಮಾಧ್ಯಮಗಳ  ಜೊತೆ ಮಾತನಾಡಿದ ಸಚಿವ ಸುಧಾಕರ್, ಅನಿವಾರ್ಯ ಕಾರಣಗಳಿಂದ ಜನಸ್ಪಂದನ ಮುಂದೂಡಲಾಯಿತು. ಜುಲೈ 28 ರಂದು ನಮ್ಮ ಕಾರ್ಯಕರ್ತರ ಕೊಲೆಯಾಯಿತು. ಸೆಪ್ಟಂಬರ್ 6 ರಂದು  ಉಮೇಶ್ ಕತ್ತಿ ನಿಧನರಾದ್ದರು.  ಶೋಕದ ಕ್ಷಣದಲ್ಲಿ ಕಾರ್ಯಕ್ರಮ ಮಾಡುವುದು ಸರಿ ಅಲ್ಲ. ಸೆಪ್ಟಂಬರ್ 10ಕ್ಕೆ ನಿಗದಿಯಂತೆ ಕಾರ್ಯಕ್ರಮ ನಡೆಯಲಿದೆ ಎಂದರು.

ಜನಸಪ ಕಾಂಗ್ರಸ್ಜನಸ್ನೇಹಿ ಎಂಬ ಪದವೇ ಗೊತ್ತಿಲ್ಲ. ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ವ್ಯತ್ಯಸವಿದೆ. ನಮ್ಮ ಸಂಘಟನೆ ಎಲ್ಲಿ ಕಡಿಮೆ ಇದೆ ಅಲ್ಲಿ ಕಾರ್ಯಕ್ರಮ ಮಾಡುತ್ತೇವೆ. ನಾವು ಏನ್ಮಾಡಿದ್ದೇವೆ ಎಂದು ತೋರಿಸಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.  ಕಾಂಗ್ರೆಸ್ ನವರು ಕೂಡ ಆತ್ಮಾವಲೋಕನ ಮಾಡಿಕೊಳ್ಳಲಿ ಅವರ ಕಾರ್ಯಕ್ರಮ ಚೆನ್ನಾಗಿದ್ರೆ ಏಕೆ ಸೋಲುತ್ತಿದ್ದರು. ಯಾಕೆ ಕಾಂಗ್ರೆಸ್ ನ 50ಕ್ಕೂ ಹೆಚ್ಚು ಶಾಸಕರು ಸೋತರು.  ಸುಮ್ಮನೆ ಆರೋಪ ಮಾಡಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಮಳೆ ಬಂದಾಗ ನಾವು ಜನರ ಜತೆ ಇದ್ದೇವೆ. ಸ್ಥಳ ಪರಿಶೀಲನೆ  ಮಾಡಿದ್ದೇವೆ ಕಾಂಗ್ರೆಸ್ ನಿಂದ ಅನಗತ್ಯ ಆರೋಪ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

Key words: Janaspandana- 10th September -Minister -Sudhakar.

The post ಸೆ.10 ರಂದು ನಿಗದಿಯಂತೆ ಜನಸ್ಪಂದನ : ಯಾವ ಕಾರಣಕ್ಕೂ ಕಾರ್ಯಕ್ರಮ ಮುಂದೆ ಹೋಗಲ್ಲ- ಸಚಿವ ಸುಧಾಕರ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರಿನಲ್ಲಿ ಜನಸ್ಪಂದನಾ ಕಾರ್ಯಕ್ರಮಕ್ಕೆ ಸಚಿವ ಜಿಟಿ ದೇವೇಗೌಡ ಚಾಲನೆ: ಕಾಂಗ್ರೆಸ್ ನಾಯಕರೇ ಗೈರು…
ಮೈಸೂರು,ಜು,4,2019(www.justkannada.in): ಮೈಸೂರಿನ ಜೆ.ಕೆ ಮೈದಾನದಲ್ಲಿ ನಡೆಯುತ್ತಿರುವ ಜನಸ್ಪಂದನಾ ಕಾರ್ಯಕ್ರಮವನ್ನ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ ದೇವೇಗೌಡ ಉದ್ಘಾಟಿಸಿದರು.

ಸಚಿವರಾದ ಬಳಿಕ  ಮೊದಲ ಬಾರಿಗೆ ಜಿಟಿ ದೇವೇಗೌಡರಿಂದ  ಜನಸ್ಪಂದನಾ ಕಾರ್ಯಕ್ರಮ ನಡೆಯುತ್ತಿದ್ದು, ಕಾರ್ಯಕ್ರಮದಲ್ಲಿ ಸ್ಥಳೀಯ ಬಿಜೆಪಿ ಶಾಸಕರಾದ ಎಲ್ ನಾಗೇಂದ್ರ, ರಾಮದಾಸ್ ಹಾಗೂ ಪಾಲಿಕೆ ಮತ್ತು ಮುಡಾ ಸದಸ್ಯರು ಭಾಗಿಯಾಗಿದ್ದಾರೆ. ಆದರೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಗೈರಾಗಿದ್ದಾರೆ.

ಕೇವಲ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ನೇತೃತ್ವದಲ್ಲಿ ಜನ ಸ್ಪಂದನಾ ಕಾರ್ಯಕ್ರಮ ನಡೆಯುತ್ತಿದ್ದು, ಕಾಂಗ್ರೆಸ್ ನಾಯಕರೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿಲ್ಲ. ಇನ್ನು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಇಂದು ಮೈಸೂರಿನಲ್ಲೇ ಇರಲಿದ್ದು,  ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದಾರೆ. ಕಾಂಗ್ರೆಸ್ ಕಚೇರಿಯ ಎದುರೇ ಜೆ.ಕೆ. ಮೈದಾನವಿದೆ. ಆದರೂ ಸಹ ಜನಸ್ಪಂದನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರು ಆಗಮಿಸಿಲ್ಲ. ಕಾಂಗ್ರೆಸ್ ನ ಮೇಯರ್ ಹೊರತುಪಡಿಸಿದ್ರೆ ಕೆಲ ಮಂದಿ ಪಾಲಿಕೆ ಸದಸ್ಯರು ಕೂಡ ಗೈರಾಗಿದ್ದಾರೆ.

ಈ ನಡುವೆ ಜನಸ್ಪಂದನಾ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳ ಬಳಿ ತಮ್ಮ ಸಮಸ್ಯೆ ಹೇಳಿಕೊಳ್ಳಲು ಸಾರ್ವಜನಿಕರು ಆಗಮಿಸಿದ್ದಾರೆ. ನಗರಪಾಲಿಕೆ ಮತ್ತು ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಪ್ರದೇಶದ ಜನರು  ಆಗಮಿಸಿದ್ದಾರೆ.

Key words: Minister -GT Deve Gowda –Janaspandana-program – Mysore

The post ಮೈಸೂರಿನಲ್ಲಿ ಜನಸ್ಪಂದನಾ ಕಾರ್ಯಕ್ರಮಕ್ಕೆ ಸಚಿವ ಜಿಟಿ ದೇವೇಗೌಡ ಚಾಲನೆ: ಕಾಂಗ್ರೆಸ್ ನಾಯಕರೇ ಗೈರು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.