K.M. Munigopal Raju Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಸೆಸ್ಕ್‌ ಎಂಡಿ ಕೆ.ಎಂ. ಮುನಿಗೋಪಾಲ್‌ ರಾಜು ನಿವೃತ್ತಿ: ಸಾಧನೆ, ಕಾರ್ಯವೈಖರಿಗೆ ಶ್ಲಾಘನೆ
ಮೈಸೂರು, ಮಾರ್ಚ್, 24, 2026 (www.justkannada.in): ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಚಾವಿಸನಿನಿ/ಸೆಸ್ಕ್‌)ಯ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಕೆ.ಎಂ. ಮುನಿಗೋಪಾಲ್‌ ರಾಜು ಅವರು ಮಾರ್ಚ್ 31ರಂದು ವಯೋ ನಿವೃತ್ತಿ ಹೊಂದುತ್ತಿದ್ದಾರೆ.

ನಿಗಮದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿರುವ ಅವರು ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ, ತಾಂತ್ರಿಕ ನಿರ್ದೇಶಕರಾಗಿ ಹಾಗೂ ನಂತರ ವ್ಯವಸ್ಥಾಪಕ ನಿರ್ದೇಶಕರಾಗಿ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ತಮ್ಮ ಕಾರ್ಯಾವಧಿಯಲ್ಲಿ ನಿಗಮದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ ಅವರು, ವಿದ್ಯುತ್‌ ಸರಬರಾಜಿನ ಗುಣಮಟ್ಟವನ್ನು ಹೆಚ್ಚಿಸುವುದು, ತಾಂತ್ರಿಕ ವ್ಯವಸ್ಥೆಗಳ ಆಧುನೀಕರಣ, ಹಾಗೂ ಗ್ರಾಹಕ ಸ್ನೇಹಿ ಸೇವೆಗಳ ಜಾರಿಗೆ ಮಹತ್ವದ ಆದ್ಯತೆ ನೀಡಿದರು.

ಇವರ ನೇತೃತ್ವದಲ್ಲಿ ಸೆಸ್ಕ್‌ ವ್ಯಾಪ್ತಿಯಲ್ಲಿ ಹಲವು ಮಹತ್ವದ ಯೋಜನೆಗಳು ರೂಪುಗೊಂಡು, ಯಶಸ್ವಿಯಾಗಿ ಅನುಷ್ಠಾನಗೊಂಡಿವೆ. ವಿದ್ಯುತ್‌ ಪೂರೈಕೆಯ ಸ್ಥಿರತೆ ಮತ್ತು ವಿಶ್ವಾಸಾರ್ಹತೆ ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳು ಗಮನಾರ್ಹ ಫಲಿತಾಂಶಗಳನ್ನು ತಂದಿವೆ. ನಿಗಮದ ಕಾರ್ಯಪದ್ಧತಿಯಲ್ಲಿ ಪಾರದರ್ಶಕತೆ ಹಾಗೂ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಅವರು ನೀಡಿದ ಒತ್ತು ವಿಶೇಷವಾಗಿ ಪ್ರಶಂಸನೀಯವಾಗಿದೆ.

ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು, ಹಿರಿಯ ಅಧಿಕಾರಿಗಳು, ಸೆಸ್ಕ್‌ನ ಅಧಿಕಾರಿಗಳು ಮತ್ತು ಸಿಬ್ಬಂದಿ, ವಿವಿಧ ಇಲಾಖೆಗಳ ಪ್ರಮುಖರು, ನಿವೃತ್ತ ಇಂಜಿನಿಯರ್‌ಗಳು ಹಾಗೂ ಪತ್ರಕರ್ತರು ಸೇರಿದಂತೆ ಅನೇಕರು ಕೆ.ಎಂ. ಮುನಿಗೋಪಾಲ್‌ ರಾಜು, ಅವರ ಸೇವೆ ಹಾಗೂ ಕಾರ್ಯಪರತೆಯನ್ನು ಶ್ಲಾಘಿಸಿ, ನಿವೃತ್ತಿ ಜೀವನ ಸುಖಕರವಾಗಿರಲೆಂದು ಹಾರೈಸಿದ್ದಾರೆ.

ಸೇವಾ ಅವಧಿಯ ಪ್ರಮುಖ ಸಾಧನೆಗಳು:

ಕೆ.ಎಂ. ಮುನಿಗೋಪಾಲ್‌ ರಾಜು ಅವರ ನೇತೃತ್ವದಲ್ಲಿ ಸೆಸ್ಕ್‌ ಹಲವು ಪ್ರಮುಖ ಸಾಧನೆಗಳನ್ನು ಮಾಡುವ ಮೂಲಕ ಗಮನ ಸೆಳೆದಿದೆ.

– 2025ರ ನಾಡಹಬ್ಬ ದಸರಾ ಮಹೋತ್ಸವದಲ್ಲಿ ಅತ್ಯಾಕರ್ಷಕ ವಿದ್ಯುತ್‌ ದೀಪಾಲಂಕಾರ ವ್ಯವಸ್ಥೆ

– 3000 ಡ್ರೋನ್‌ ಗಳ ಪ್ರದರ್ಶನದ ಮೂಲಕ ಗಿನ್ನಿಸ್‌ ದಾಖಲೆ ನಿರ್ಮಾಣಕ್ಕೆ ಸಹಕಾರ

– ವಿದ್ಯುತ್‌ ಪೂರೈಕೆಯ ಅಡಚಣೆ, ನಷ್ಟವನ್ನು ಹಾಗೂ ಅಪಘಾತಗಳನ್ನು ಕಡಿಮೆ ಮಾಡಲು ಫೀಡರ್‌ಗಳು ಮತ್ತು ಟ್ರಾನ್ಸ್‌ ಫಾರ್ಮರ್‌ ಗಳ ಸಮರ್ಪಕ ನಿರ್ವಹಣೆ.

– ಮೈಸೂರು ನಗರದಲ್ಲಿ ಸುಮಾರು 1,100 ಕಿ.ಮೀ ವ್ಯಾಪ್ತಿಯಲ್ಲಿ ಅಂಡರ್‌ ಗ್ರೌಂಡ್‌ ಕೇಬಲ್‌ ಅಳವಡಿಕೆ ಕಾಮಗಾರಿ.

– ಕೊಡಗು ಜಿಲ್ಲೆಯಲ್ಲಿ ವಿದ್ಯುತ್‌ ಮಾರ್ಗಗಳ ಗುಣಮಟ್ಟ ಬಲಪಡಿಸುವ ಕಾಮಗಾರಿಗಳು

– ಸೆಸ್ಕ್‌ ವ್ಯಾಪ್ತಿಯಲ್ಲಿ ಹೊಸ ಫೀಡರ್‌ ಗಳು ಹಾಗೂ ಉಪಕೇಂದ್ರಗಳ ನಿರ್ಮಾಣ

– ನಿಗಮದ ಆಡಳಿತಾತ್ಮಕ ಮೂಲಸೌಕರ್ಯ ವೃದ್ಧಿಗಾಗಿ 4ನೇ ಮಹಡಿ ಕಾರ್ಯಾಲಯ ಹಾಗೂ ಎಂಡಿ ಗೃಹ ಕಚೇರಿ ನಿರ್ಮಾಣ, ಇತರ ವಿವಿಧ ಹೊಸ ಕಚೇರಿಗಳ ನಿರ್ಮಾಣ ಕಾರ್ಯಗಳನ್ನು ಪ್ರಾರಂಭಿಸಿರುವುದು.

– ಎನರ್ಜಿ ಆಡಿಟಿಂಗ್‌ ವ್ಯವಸ್ಥೆಯ ಅನುಷ್ಠಾನ ಮೂಲಕ ಕಾರ್ಯಕ್ಷಮತೆ ಹೆಚ್ಚಿಸಲಾಗಿದೆ.

– ವಿವಿಧ ಮೂಲಗಳಿಂದ ಸೆಸ್ಕ್‌ಗೆ ಸುಮಾರು 200 ಕೋಟಿ ರೂ.ಗಳಿಗೂ ಹೆಚ್ಚು ಹಣ ಉಳಿತಾಯ ಮಾಡಿರುವುದು.

– ಸೆಸ್ಕ್‌ ಹಾಗೂ ಕೆಪಿಟಿಸಿಎಲ್‌ ನ ಹಲವು ಕಟ್ಟಡಗಳ ನಿರ್ಮಾಣಕ್ಕೆ ಎಂಡಿಎ ವತಿಯಿಂದ 32 ಸಿಎ ನಿವೇಶನಗಳನ್ನು ಪಡೆದಿರುವುದು.

– PFC ರೇಟಿಂಗ್‌ನಲ್ಲಿ ಸೆಸ್ಕ್‌ಗೆ “ಎ”ಮತ್ತು “ಬಿ” ಗ್ರೇಡ್‌ ಸ್ಥಾನಗಳು.

– ಬಹು ಉಪಯುಕ್ತ ಸುಮಾರು 950 ಮೆಗಾ ವ್ಯಾಟ್‌ ನಷ್ಟು ಫೀಡರ್‌ ಸೋಲಾರೈಸೇಷನ್‌ ಕಾಮಗಾರಿಗಳಿಗೆ ಕಾರ್ಯಾದೇಶ ನೀಡಿರುವುದು.

– ಸೆಸ್ಕ್‌ ಸಿಬ್ಬಂದಿಗೆ ಕ್ಯಾಶ್‌ ಲೆಸ್‌ ಹೆಲ್ತ್‌ ಕಾರ್ಡ್‌ ಸೌಲಭ್ಯ ತಂದಿರುವುದು ಹಾಗೂ ವಿದ್ಯುತ್‌ ಅಪಘಾತಗಳಿಂದ ಮೃತಪಟ್ಟ ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ.ಗಳ ಪರಿಹಾರ ಕಲ್ಪಿಸಿರುವುದು.

ತಮ್ಮ ನಿವೃತ್ತ ಬಗ್ಗೆ ಮಾತನಾಡಿರುವ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್‌ ರಾಜು, “ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕನಾಗಿ ಕೆಲಸ ಮಾಡಲು ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಇಂಧನ ಸಚಿವರು, ಸೆಸ್ಕ್‌ ಅಧ್ಯಕ್ಷರು ಹಾಗೂ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಇವರುಗಳೊಂದಿಗೆ ನನ್ನ ಸೇವಾ ಅವಧಿಯಲ್ಲಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಹಾಗೂ ಸಹೋದ್ಯೋಗಿಗಳ ಸಹಕಾರದಿಂದ ಉತ್ತಮ ಕಾರ್ಯ ನಿರ್ವಹಿಸಲು ಸಾಧ್ಯವಾಯಿತು. ಈ ಪ್ರಯಾಣದಲ್ಲಿ ಬೆಂಬಲ ನೀಡಿದ ಇಂಧನ ಇಲಾಖೆ, ಚಾವಿಸನಿನಿ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಯೊಂದಿಗೆ ವಿದ್ಯುತ್‌ ಗುತ್ತಿಗೆದಾರರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದಾರೆ.

Key words: CESC, MD, K.M. Munigopal Raju, retires

The post ಸೆಸ್ಕ್‌ ಎಂಡಿ ಕೆ.ಎಂ. ಮುನಿಗೋಪಾಲ್‌ ರಾಜು ನಿವೃತ್ತಿ: ಸಾಧನೆ, ಕಾರ್ಯವೈಖರಿಗೆ ಶ್ಲಾಘನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸೆಸ್ಕ್‌ ಅಭಿವೃದ್ಧಿಗೆ ಎಲ್ಲರೂ ಒಗ್ಗೂಡಿ ಶ್ರಮಿಸೋಣ- ಕೆ.ಎಂ.ಮುನಿಗೋಪಾಲ್‌ ರಾಜು ಕರೆ
ಮೈಸೂರು, ಜನವರಿ,26, 2026 (www.justkannada.in): ಕುಸುಮ್-ಸಿ ಹಾಗೂ ಕುಸುಮ್‌-ಬಿ ಯೋಜನೆಗಳ ಸಮರ್ಪಕ ಅನುಷ್ಠಾನ ಸೇರಿದಂತೆ ಸಿಬ್ಬಂದಿಗೆ ಆರೋಗ್ಯ ಸೇವೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌)ವು ಕಡಿಮೆ ಸಮಯ, ಕಡಿಮೆ ವೆಚ್ಚದಲ್ಲಿ ಹಲವು ಪ್ರಗತಿ ಸಾಧಿಸಿದೆ. ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಎಲ್ಲರೂ ಒಗ್ಗೂಡಿ ಸಂಸ್ಥೆಯ ಪ್ರಗತಿಗೆ ಮತ್ತಷ್ಟು ಶ್ರಮಿಸೋಣ ಎಂದು ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ.ಮುನಿಗೋಪಾಲ್‌ ರಾಜು ಕರೆ ನೀಡಿದರು.

ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ) ಪ್ರಧಾನ ಕಚೇರಿಯಲ್ಲಿ ಸೋಮವಾರ ನಡೆದ 77ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೆರಿಸಿ ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ.ಮುನಿಗೋಪಾಲ್‌ ರಾಜು ಅವರು ಮಾತನಾಡಿದರು.

ಗಣರಾಜ್ಯೋತ್ಸವ ದಿನವನ್ನು ಸಂತೋಷ ಭರಿತವಾಗಿ ಆಚರಣೆ ಮಾಡುತ್ತಿರುವ ಈ ಸಂದರ್ಭದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್,‌ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರನ್ನು ನೆನೆಯುತ್ತಾ, ಅವರ ಆದರ್ಶಗಳನ್ನು ನಾವೆಲ್ಲಾ ಪಾಲಿಸಬೇಕಿದೆ. ಜತೆಗೆ ನಮ್ಮ ದೇಶ ಹಾಗೂ ರಾಜ್ಯವನ್ನು ಪ್ರಗತಿಯತ್ತ ಮುನ್ನಡೆಸಲು ನಾವೆಲ್ಲರೂ ಪಣತೊಡಬೇಕಿದೆ. ಇಂದು ಕರ್ನಾಟಕ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು, ದೇಶದ ಪ್ರಮುಖ ರಾಜ್ಯಗಳಲ್ಲಿ ಒಂದಾಗಿದ್ದರೆ. ಭಾರತ ಕೂಡ ವಿಶ್ವದ ನಾಲ್ಕನೇ ಬಲಿಷ್ಠ ರಾಷ್ಟ್ರವಾಗಿ ಗುರುತಿಸಿಕೊಂಡಿದೆ ಎಂದರು.

ಅಂತೆಯೇ ಇಂಧನ ಇಲಾಖೆ ಕೂಡ ಸಚಿವ ಕೆ.ಜೆ. ಜಾರ್ಜ್‌ ಅವರ ನೇತೃತ್ವದಲ್ಲಿ ಸಾಕಷ್ಟು ಅಭಿವೃದ್ಧಿ ಕಂಡಿದ್ದು, ಐದು ಸಾವಿರ ಮೆ.ವ್ಯಾ ವಿದ್ಯುತ್‌ ಉತ್ಪಾದಿಸಿ, ಗ್ರಿಡ್‌ ಗೆ ಸೇರ್ಪಡೆ ಮಾಡಲು ಕ್ರಮವಹಿಸಲಾಗಿದೆ. ಅಲ್ಲದೇ ಟ್ರ್ಯಾನ್ಸ್‌ ಮಿಷನ್‌ ವಿಭಾಗದಲ್ಲೂ ಸೆಸ್ಕ್‌ ವ್ಯಾಪ್ತಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಂಡಿದ್ದು, ಕಳೆದ ಎರಡು ವರ್ಷಗಳಲ್ಲಿ ಈ ನಿಟ್ಟಿನಲ್ಲಿ ಅನೇಕ ಕೆಲಸಗಳನ್ನು ಮಾಡಲಾಗಿದೆ. 90 ವಿತರಣಾ ಕೇಂದ್ರಗಳು ಹಾಗೂ ಪ್ರಸರಣ ಕೇಂದ್ರಗಳನ್ನು ಬಲಪಡಿಸುವ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.

900 ಮೆ.ವ್ಯಾ. ವಿದ್ಯುತ್‌:

ಕುಸುಮ್-ಸಿ ಯೋಜನೆ ಅಡಿಯಲ್ಲಿ ಚಾವಿಸಾನಿನಿ ವ್ಯಾಪ್ತಿಯಲ್ಲಿ 900 ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದನೆಗೆ ಕ್ರಮವಹಿಸಲಾಗಿದೆ. ಬೇಸಿಗೆ ವೇಳೆಯಲ್ಲಿ ವಿದ್ಯುತ್‌ ಪೂರೈಕೆಗೆ ಒತ್ತಡ ಎದುರಾಗಲಿದ್ದು, ಈ ನಿಟ್ಟಿನಲ್ಲಿ 900 ಮೆ.ವ್ಯಾ. ವಿದ್ಯುತ್ ಉತ್ಪಾದನೆಯಾದರೆ ಮಾರ್ಚ್ ವೇಳೆಗೆ 600 ಮೆ.ವ್ಯಾ. ಸೆಸ್ಕ್ ವ್ಯಾಪ್ತಿಗೆ ಸೇರಲಿದೆ. ಅದೇ ರೀತಿ ಕುಸುಮ್-ಬಿ ಯೋಜನೆಯಲ್ಲಿ 6000 ರೈತರು ಲಾಭ ಪಡೆದಿದ್ದು, 60 ಮೆ.ವ್ಯಾ. ವಿದ್ಯುತ್‌ ಗ್ರಿಡ್‌ನಿಂದ ರೈತರಿಗೆ ಲಭ್ಯವಾಗಲಿದೆ. ಹೀಗಾಗಿ ಈ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಒಗ್ಗೂಡಿ ಪ್ರಯತ್ನಿಸಬೇಕಿದೆ ಎಂದು ಹೇಳಿದರು.

ಹಲವು ಅಭಿವೃದ್ಧಿ ಕಾರ್ಯ:

ಮುಡಾದಿಂದ 22 ಸೈಟ್‌ ಗಳನ್ನು ಸೆಸ್ಕ್ ವ್ಯಾಪ್ತಿಗೆ ಪಡೆಯಲಾಗಿದೆ. ಕಚೇರಿ ಹಾಗೂ ಸ್ಟೋರ್‌ ಗಳನ್ನು ನಿರ್ಮಿಸಲಾಗುವುದು, ಸ್ಟೇಷನ್ ನಿರ್ಮಾಣಕ್ಕೆ 10 ನಿವೇಶನ ಪಡೆಯಲಾಗಿದೆ. ಹೊಸದಾಗಿ 11 ಕೆವಿ ಮಾರ್ಗಗಳನ್ನು ನಿರ್ಮಾಣಕ್ಕೆ ಸುಮಾರು 100-120 ಹೊಸ ಕೇಂದ್ರಗಳನ್ನು ನಿರ್ಮಿಸಲು ಕ್ರಮವಹಿಸಲಾಗಿದ್ದು, ಇದರಿಂದ ವಿದ್ಯುತ್‌ ಸೋರಿಕೆ, ವಿದ್ಯುತ್‌ ಅಡಚಣೆ ಹಾಗೂ ನಷ್ಟ ಕಡಿಮೆ ಆಗಲಿದೆ‌. ಜತೆಗೆ ಕೊಡಗು ಜಿಲ್ಲೆ ವಿದ್ಯುತ್ ಸಮಸ್ಯೆ ಬಗೆಹರಿಸಲು ಹಾಗೂ ವಿದ್ಯುತ್ ಪೂರೈಕೆ ವ್ಯವಸ್ಥೆ ಬಲಪಡಿಸುವ ನಿಟ್ಟಿನಲ್ಲಿ 10-15 ವರ್ಷಗಳಿಂದ ಆಗದ ಕೆಲಸವನ್ನು ಕಡಿಮೆ ಅವಧಿಯಲ್ಲಿ 200 ಕೋಟಿ ವೆಚ್ಚದಲ್ಲಿ ಮಾಡಲಾಗಿದೆ. ಪಾರಂಪರಿಕ ಹಾಗೂ ಅರಮನೆಗಳ ನಗರಿ ಮೈಸೂರು ನಗರದಲ್ಲಿ ‌ವಿದ್ಯುತ್ ಯುಜಿ ಕೇಬಲ್ ಅಳವಡಿಕೆ, ಹಾಡಿಗಳಲ್ಲಿ ವಿದ್ಯುತೀಕರಣಕ್ಕೆ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.

ಆರ್‌ ಡಿಎಸ್‌ಎಸ್‌ ಅನುದಾನ:

ಪ್ರಸ್ತುತ ಕೇಂದ್ರ ಸರ್ಕಾರದಲ್ಲಿ ಸೆಸ್ಕ್ ಡಿಪಿಆರ್ ಇದ್ದು, ಆರ್‌ ಡಿಎಸ್‌ಎಸ್‌  ಅನುದಾನ ತರುವ ಪ್ರಯತ್ನ ಮಾಡಲಾಗಿದೆ.  ಇದರಿಂದ 60% ಅನುದಾನ ನೇರವಾಗಿ ಕೇಂದ್ರ ಸರ್ಕಾರದ ಮೂಲಕ ಸೆಸ್ಕ್ ವ್ಯಾಪ್ತಿಗೆ ದೊರೆಯಲಿದೆ. 150 ಕೋಟಿ‌ ಡಿಪಿಆರ್ ಮಾಡಿ, ಇದರಲ್ಲಿ ಮೈಸೂರು ನಗರಕ್ಕೆ ಸ್ಕಾಡಾ(SCADA) ಆಟೋ ಚೇಂಜ್‌ ಓವರ್‌ ವ್ಯವಸ್ಥೆ ಅಳವಡಿಸಲು ಕ್ರಮವಹಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸೆಸ್ಕ್‌ ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್‌, ಮುಖ್ಯ ಪ್ರಧಾನ ವ್ಯವಸ್ಥಾಪಕರು(ತಾಂತ್ರಿಕ) ಶರಣಮ್ಮ ಎಸ್‌. ಜಂಗಿನ, ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕಾ, ಪ್ರಧಾನ ವ್ಯವಸ್ಥಾಪಕಿ(ಆ ಮತ್ತು ಮಾ.ಸಂ) ಡಾ.ಬಿ.ಆರ್.‌ ರೂಪಾ, ಸೆಸ್ಕ್‌ ಜಾಗೃತ ದಳದ ಎಸ್ಪಿ ಸವಿತಾ ಹೂಗಾರ್‌, ಕೆನರಾ ಬ್ಯಾಂಕ್‌ ವಯಲ ವ್ಯವಸ್ಥಾಪಕ ಉಮೇಶ್‌ ಸೇರಿದಂತೆ ಇತರರಿದ್ದರು.

1.06 ಕೋಟಿ ಪರಿಹಾರ ವಿತರಣೆ:

ಇತ್ತೀಚೆಗೆ ಹನೂರು ಉಪ ವಿಭಾಗ ವ್ಯಾಪ್ತಿಯ ಸೆಸ್ಕ್‌ ಸಿಬ್ಬಂದಿ ಟಿ. ರಾಹುಲ್‌ ಅವರು ಕರ್ತವ್ಯ ನಿರ್ವಹಣೆ ವೇಳೆ ವಿದ್ಯುತ್‌ ಅವಘಡದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಅವರ ಕುಟುಂಬದವರಿಗೆ 1.06 ಕೋಟಿ ರೂ. ಪರಿಹಾರದ ಚೆಕ್‌ ಗಳನ್ನು ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕರು ವಿತರಿಸಿದರು.

Key words: work, together, development, CESC, K.M. Munigopal Raju

The post ಸೆಸ್ಕ್‌ ಅಭಿವೃದ್ಧಿಗೆ ಎಲ್ಲರೂ ಒಗ್ಗೂಡಿ ಶ್ರಮಿಸೋಣ- ಕೆ.ಎಂ.ಮುನಿಗೋಪಾಲ್‌ ರಾಜು ಕರೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಇಂಧನ ಸೋರಿಕೆ, ನಷ್ಟ ತಗ್ಗಿಸಲು ತಾಂತ್ರಿಕ ಪರಿಣತಿ ಅವಶ್ಯ- ಕೆ.ಎಂ. ಮುನಿಗೋಪಾಲ್‌ ರಾಜು
ಮೈಸೂರು, ಜನವರಿ,3, 2026 (www.justkannada.in):  ಇಂಧನ ಸೋರಿಕೆ, ವಿದ್ಯುತ್‌ ಅಡಚಣೆ ಹಾಗೂ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ತಾಂತ್ರಿಕ ನಿರ್ವಹಣೆ ಅವಶ್ಯಕವಾಗಿದ್ದು, ಅಧಿಕಾರಿಗಳು ಸಮರ್ಪಕವಾಗಿ ತಾಂತ್ರಿಕ ನಿರ್ವಹಣೆಗೆ ಮುಂದಾಗಬೇಕು ಎಂದು ಸೆಸ್ಕ್‌ ನ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್‌ ರಾಜು ಹೇಳಿದರು.

ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಅಧಿಕಾರಿಗಳಿಗೆ ಕೆಇಬಿಇಎ ಮೈಸೂರು ವಲಯ ಕೇಂದ್ರದ ವತಿಯಿಂದ ಕಡಕೊಳದಲ್ಲಿರುವ ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ ಇಂಜಿನಿಯರುಗಳ ಸಂಘ(ಕೆಇಬಿಇಎ)ದ ಸಭಾಂಗಣದಲ್ಲಿ ಆಯೋಜಿಸಿದ್ದ “ಇಂಧನ(ವಿದ್ಯುತ್) ಲೆಕ್ಕ ಪರಿಶೀಲನೆ ಮತ್ತು ಐಪಿ ಫೀಡರ್ ನಲ್ಲಿ ನಷ್ಟಗಳ ಕಡಿತ” ವಿಷಯದ ಕುರಿತ ಒಂದು ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಕೆ.ಎಂ. ಮುನಿಗೋಪಾಲ್‌ ರಾಜು ಅವರು ಮಾತನಾಡಿದರು.

ಇಂಧನ ಸೋರಿಕೆ ತಡೆಯುವಲ್ಲಿ ತಾಂತ್ರಿಕ ಪರಿಣತಿ ಮುಖ್ಯವಾಗಿದೆ. ಈ ಹಿಂದೆ ಸಕಲೇಶಪುರದ ಬಾಳುಪೇಟೆ ಫೀಡರ್‌ ನಲ್ಲಿ ಎನರ್ಜಿ ಆಡಿಟಿಂಗ್‌ ನಡೆಸಿದ ಸಂದರ್ಭ ಶೇ.40 ರಿಂದ 43% ಇಂಧನ ಸೋರಿಕೆ ಕಂಡುಬಂದಿತ್ತು. ಆನಂತರದಲ್ಲಿ ಸಮರ್ಪಕ ತಾಂತ್ರಿಕ ನಿರ್ವಹಣೆ ಮಾಡಿದ್ದರ ಪರಿಣಾಮವಾಗಿ ಇಂಧನ ಸೋರಿಕೆಯ ಶೇ.12ಕ್ಕೆ ಇಳಿಕೆ ಮಾಡುವಲ್ಲಿ ಯಶಸ್ವಿಯಾದೆವು. ಇದರಿಂದ ನಿಗಮಕ್ಕೆ ಆದಾಯ ಹೆಚ್ಚಿತು, ವಿದ್ಯುತ್‌ ಅಡಚಣೆ ಕಡಿಮೆಯಾಗಿ, ಫೀಡರ್‌ ಗಳು, ಟ್ರಾನ್ಸ್ ಫಾರ್ಮರ್‌ ಗಳು ಮತ್ತು ಮೀಟರ್‌ ಗಳ ನಿರ್ವಹಣೆ ಸುಲಭಗೊಂಡಿತು ಎಂದರು.

ಪ್ರಸ್ತುತ ಇಂಧನ ಇಲಾಖೆ ಹೊಸತನಕ್ಕೆ ಆದ್ಯತೆ ನೀಡಿ, 5000 ಮೆಗಾ ವ್ಯಾಟ್‌ ವಿದ್ಯುತ್ ಉತ್ಪಾದಿಸಲು ಕಾರ್ಯಯೋಜನೆ ರೂಪಿಸಿದ್ದು, ಮುಂದಿನ ಒಂದು ವರ್ಷದಲ್ಲಿ ಇದನ್ನು ಸಾಧಿಸುವ ಗುರಿ ಹೊಂದಲಾಗಿದೆ. ಇದರ ನಡುವೆ ಸೆಸ್ಕ್‌ ವ್ಯಾಪ್ತಿಯಲ್ಲಿ 90 ಸ್ಟೇಷನ್‌ ಗಳನ್ನು ಪ್ರಸಕ್ತ ವರ್ಷದಲ್ಲಿ ಹಾಕಲು ಮುಂದಾಗಿದೆ. ಪ್ರಮುಖವಾಗಿ ನಿಗಮ ವ್ಯಾಪ್ತಿಯಲ್ಲಿ ವಿದ್ಯುತ್‌ ವಿತರಣೆಯನ್ನು ಬಲಪಡಿಸಿ, ಪ್ರಸಕ್ತ ವರ್ಷದ ಮಾರ್ಚ್ ವೇಳೆಗೆ ಹೊಸದಾಗಿ 100 ಫೀಡರ್‌ ಗಳನ್ನು ಹೊಸದಾಗಿ ಗ್ರಿಡ್‌ ಗಳಿಗೆ ಸೇರ್ಪಡೆ ಮಾಡಬೇಕಿದೆ ಎಂದು ತಿಳಿಸಿದರು.

ಈ ಹಿನ್ನೆಲೆಯಲ್ಲಿ ತರಬೇತಿಯಲ್ಲಿ ನೀಡುವ ಸಲಹೆಗಳನ್ನು ಪಡೆದು, ಅವುಗಳನ್ನು ಪ್ರಾಯೋಗಿಕವಾಗಿ ಕಾರ್ಯರೂಪಕ್ಕೆ ತರುವುದರೊಂದಿಗೆ ಯಾವ ಫೀಡರ್‌ ಗಳಲ್ಲಿ ಇಂಧನ ಸೋರಿಕೆ ಇದೆ ಅಂತಹ ಫೀಡರ್‌ಗಳಲ್ಲಿ ತಾಂತ್ರಿಕ ಪರಿಣತಿಯನ್ನು ಅಳವಡಿಸಿ, ಇಂಧನ ಸೋರಿಕೆ ಪ್ರಮಾಣವನ್ನು ತಗ್ಗಿಸಬೇಕಾಗಿದೆ. ಇದರೊಂದಿಗೆ ನಮ್ಮಲ್ಲಿರುವ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು, ನಿರ್ದಿಷ್ಟ ಗುರಿ ಸಾಧಿಸಲು ಕಾರ್ಯಯೋಜನೆ ರೂಪಿಸಬೇಕಿದೆ ಎಂದು ಮುನಿಗೋಪಾಲ್ ರಾಜು ತಿಳಿಸಿದರು.

ನಂತರ ನಡೆದ ತಾಂತ್ರಿಕ ಕಾರ್ಯಾಗಾರದಲ್ಲಿ ನಿವೃತ್ತ ತಾಂತ್ರಿಕ ನಿರ್ದೇಶಕ ಎಸ್‌. ಮಹೇಶ್‌ ಅವರು, ಇಂಧನ(ವಿದ್ಯುತ್) ಲೆಕ್ಕಪರಿಶೀಲನೆಯ ತಂತ್ರಗಳು, ಇಂಧನ ಸೋರಿಕೆ ಹಾಗೂ ಆರ್ಥಿಕ ನಷ್ಟವನ್ನು ಕಡಿತಗೊಳಿಸುವ ಪ್ರಾಯೋಗಿಕ ಅಂಶಗಳ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಸಮರ್ಪಕ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಸೆಸ್ಕ್‌ ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್‌, ಅಧೀಕ್ಷಕ ಇಂಜಿನಿಯರ್‌ ಸುನೀಲ್‌, ಮುಖ್ಯ ಇಂಜಿನಿಯರ್‌ ಗಳಾದ ಮೃತ್ಯುಂಜಯ, ಸೋಮಶೇಖರ್‌, ಮುಖ್ಯ ಪ್ರಧಾನ ವ್ಯವಸ್ಥಾಪಕರು(ತಾಂತ್ರಿಕ) ಶರಣಮ್ಮ ಎಸ್‌. ಜಂಗಿನ, ಕೆಇಬಿಇಎ ಉಪಾಧ್ಯಕ್ಷ ಪೂರ್ಣಚಂದ್ರ ತೇಜಸ್ವಿ, ರಾಜ್ಯ ಕಾರ್ಯದರ್ಶಿ ಆರ್. ಸುಧೀರ್ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.

Key  words: Technical, expertise, reduce, fuel leakage, CESC, K.M. Munigopal Raju

The post ಇಂಧನ ಸೋರಿಕೆ, ನಷ್ಟ ತಗ್ಗಿಸಲು ತಾಂತ್ರಿಕ ಪರಿಣತಿ ಅವಶ್ಯ- ಕೆ.ಎಂ. ಮುನಿಗೋಪಾಲ್‌ ರಾಜು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದೀಪಾವಳಿ ಸಂಭ್ರಮದ ನಡುವೆ ಎಚ್ಚರಿಕೆಯೂ ಇರಲಿ: ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಪಾಲಿಸಿ- ಕೆ.ಎಂ. ಮುನಿಗೋಪಾಲ್‌ ರಾಜು
ಮೈಸೂರು, ಅಕ್ಟೋಬರ್‌ ,19, 2025 (www.justkannada.in): ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದ ನಡುವೆ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಮನವಿ ಮಾಡಿದೆ.

ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಅನೇಕರು ತಮ್ಮ ಮನೆ ಹಾಗೂ ಅಂಗಡಿಗಳಿಗೆ ವಿದ್ಯುತ್‌ ದೀಪಗಳಿಂದ ಅಲಂಕೃತಗೊಳಿಸುತ್ತಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸೀರಿಯಲ್ ಲೈಟ್‌ ಗಳನ್ನು ಮತ್ತು ವಿದ್ಯುತ್ ತಂತಿಗಳನ್ನು ನೀರಿನಿಂದ ದೂರವಿರಿಸಬೇಕು. ಪ್ಲಗ್ ಪಾಯಿಂಟ್‌ ಗಳಲ್ಲಿ ಅತಿಯಾದ ಲೋಡ್‌ ಹಾಕಬೇಡಿ, ಇದು ಶಾರ್ಟ್ ಸರ್ಕ್ಯೂಟ್‌ ಉಂಟಾಗುವ ಸಾಧ್ಯತೆ ಇರಲಿದೆ. ಹಣತೆ, ದೀಪಗಳನ್ನು ಕೇಬಲ್‌ ಗಳು, ವಿದ್ಯುತ್‌ ತಂತಿಗಳು ಹಾಗೂ ಪ್ಲಗ್‌ ಗಳಿಂದ ದೂರವಿರಿಸಿ.

ಮುಖ್ಯವಾಗಿ ಪಟಾಕಿ ಹಚ್ಚುವ ಸಂದರ್ಭದಲ್ಲಿ ವಿದ್ಯುತ್‌ ಕಂಬಗಳು ಅಥವಾ ಟ್ರಾನ್ಸ್‌ ಫಾರ್ಮರ್‌ ಗಳು ಇರುವ ಸ್ಥಳಗಳ ಬಗ್ಗೆ ನಿಗಾವಹಿಸಿ ಮತ್ತು ಇಂತಹ ಸ್ಥಳಗಳಲ್ಲಿ ಪಟಾಕಿ ಹಚ್ಚುವುದನ್ನು ತಪ್ಪಿಸಿ. ವಿದ್ಯುತ್ ಉಪಕರಣಗಳಿಂದ ಮಕ್ಕಳನ್ನು ದೂರವಿರಿಸಿ ಹಾಗೂ ಹಿರಿಯ ಸಮ್ಮುಖದಲ್ಲಿ ಪಟಾಕಿ ಹಚ್ಚುವ ಹಾಗೂ ದೀಪಗಳನ್ನು ಇರಿಸುವಂತೆ ಗಮನವಹಿಸಿ. ವಿದ್ಯುತ್‌ ಸಮಸ್ಯೆಗಳು  ಅಥವಾ ಅವಘಡಗಳು ಸಂಭವಿಸಿದಲ್ಲಿ ಗ್ರಾಹಕ ಸಹಾಯವಾಣಿ 1912ಗೆ ಮಾಹಿತಿ ನೀಡಬೇಕಿದೆ. ಸೆಸ್ಕ್‌ ವತಿಯಿಂದ ನೀಡಿರುವ ಸುರಕ್ಷತಾ ಕ್ರಮಗಳನ್ನು ತಪ್ಪದೇ ಅನುಸರಿಸುವಂತೆ ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್‌ ರಾಜು ಅವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

Key words: Deepavali, celebrations, electrical, safety , CESC, K.M. Munigopal Raju

The post ದೀಪಾವಳಿ ಸಂಭ್ರಮದ ನಡುವೆ ಎಚ್ಚರಿಕೆಯೂ ಇರಲಿ: ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಪಾಲಿಸಿ- ಕೆ.ಎಂ. ಮುನಿಗೋಪಾಲ್‌ ರಾಜು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ದಸರಾ: ದೀಪಾಲಂಕಾರ ಹೊಸ ವಿನ್ಯಾಸಗಳ ಜತೆ ಆಕರ್ಷಕ, ವಿನೂತನವಾಗಿರಲಿ- ಕೆ.ಎಂ. ಮುನಿಗೋಪಾಲ್‌ ರಾಜು
ಮೈಸೂರು, ಆಗಸ್ಟ್‌, 8, 2025 (www.justkannada.in):  ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿದ್ಯುತ್‌ ದೀಪಾಲಂಕಾರವನ್ನು ಈ ಬಾರಿ ಹೊಸ ವಿನ್ಯಾಸಗಳ ಜತೆಗೆ ಸುರಕ್ಷತೆಗೆ ಆದ್ಯತೆ ನೀಡುವ ಮೂಲಕ ಆಕರ್ಷಣೀಯವಾಗಿಸಲು ಆಸಕ್ತಿವಹಿಸಿ ಕೆಲಸ ಮಾಡಿ ಎಂದು ಅಧಿಕಾರಿಗಳು ಹಾಗೂ ದೀಪಾಲಂಕಾರ ಮಾಡುವ ವಿದ್ಯುತ್‌ ಗುತ್ತಿಗೆದಾರರಿಗೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್‌ ಅವರು ಸಲಹೆ ನೀಡಿದರು.

ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿರುವ ನಿಗಮದ ಪ್ರಧಾನ ಕಚೇರಿಯಲ್ಲಿ ಈ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, “ದಸರಾ ಮಹೋತ್ಸವದ ಸಂದರ್ಭದಲ್ಲಿ ಮಾಡಲಾಗುವ ವಿದ್ಯುತ್‌ ದೀಪಾಲಂಕಾರ ಎಲ್ಲರ ಗಮನ ಸೆಳೆಯಲಿದೆ. ಹೀಗಾಗಿ ಈ ಬಾರಿಯ ವಿದ್ಯುತ್‌ ದೀಪಾಲಂಕಾರವನ್ನು ಕಳೆದ ವರ್ಷಕ್ಕಿಂತ ಹೆಚ್ಚು ಆಕರ್ಷಕವಾಗಿ ಮಾಡಲು ದಸರಾ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ನಿಗಮದ ವತಿಯಿಂದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ” ಎಂದರು.

“ದಸರಾ ದೀಪಾಲಂಕಾರ ವಿಶ್ವಮಟ್ಟದಲ್ಲಿ ಆಕರ್ಷಣೀಯಗೊಳಿಸಲು ಸೆಸ್ಕ್‌ ಜತೆಗೆ ವಿದ್ಯುತ್‌ ಗುತ್ತಿಗೆದಾರರು ಪ್ರಮುಖ ಕಾರಣರಾಗಿದ್ದಾರೆ. ಪ್ರತಿ ವರ್ಷದ ರೀತಿಯಲ್ಲಿ ಈ ಬಾರಿಯೂ ಸಹ ವಿದ್ಯುತ್‌ ದೀಪಾಲಂಕಾರದ ಬಗ್ಗೆ ನಿರೀಕ್ಷೆ ಕೂಡ ಹೆಚ್ಚಾಗಿದೆ. ದಸರಾ ಆರಂಭದಲ್ಲಿ ಹಾಗೂ ದಸರಾ ಮುಗಿದ ಬಳಿಕವೂ ಎಲ್ಲರನ್ನೂ ಆಕರ್ಷಿಸುವ ದೀಪಾಲಂಕಾರವನ್ನು ಹೊಸತನದ ಜತೆಗೆ ಹೆಚ್ಚು ಆಕರ್ಷಕವಾಗಿ ಮಾಡುವ ಬಗ್ಗೆ ಈಗಿನಿಂದಲೇ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಿದೆ. ದೀಪಾಲಂಕಾರವನ್ನು ಹೆಚ್ಚಿನ ಆಕರ್ಷಣೀಯವಾಗಿ ಮಾಡುವುದು ಮಾತ್ರವಲ್ಲದೇ ಆರ್ಥಿಕವಾಗಿ ಹೊರೆಯಾಗದ ರೀತಿಯಲ್ಲಿ ದೀಪಾಲಂಕಾರ ಮಾಡುವುದು ಮುಖ್ಯ” ಎಂದು ಸಲಹೆ ನೀಡಿದರು.

ಸುರಕ್ಷತೆಗೆ ಆದ್ಯತೆ ನೀಡಿ:

“ದಸರಾ ದೀಪಾಲಂಕಾರದ ಸೌಂದರ್ಯ ಕಣ್ತುಂಬಿಕೊಳ್ಳಲು ಸಾಕಷ್ಟು ಜನರು ಆಗಮಿಸುತ್ತಾರೆ. ಆದ್ದರಿಂದ ದೀಪಾಲಂಕಾರದ ಅಂದವನ್ನು ಹೆಚ್ಚಿಸುವುದರ ಜತೆಗೆ ಸುರಕ್ಷತೆಗೂ ಆದ್ಯತೆ ನೀಡುವುದು ಮುಖ್ಯವಾಗಿದೆ. ದಸರಾ ವೇಳೆಯಲ್ಲಿ ಮಳೆಯಾಗುವ ಸಂಭವ ಹೆಚ್ಚಾಗಿರಲಿದೆ. ಆದ್ದರಿಂದ ಮಳೆ ಹಾಗೂ ಇನ್ನಿತರ ಸಂದರ್ಭಗಳಲ್ಲಿ ಯಾವುದೇ ತೊಂದರೆಗಳು ಉಂಟಾಗದಂತೆ ಎಚ್ಚರವಹಿಸಿ, ದೀಪಾಲಂಕಾರ ಮಾಡುವಲ್ಲಿ ಹೆಚ್ಚಿನ ಗಮನವಹಿಸಬೇಕೆಂದು” ವಿದ್ಯುತ್‌ ಗುತ್ತಿಗೆದಾರರಿಗೆ ಕೆ.ಎಂ. ಮುನಿಗೋಪಾಲ್‌ ರಾಜು ಸೂಚನೆ ನೀಡಿದರು.

ರೂಪುರೇಷೆಗಳು ಸಿದ್ಧ:

“ದಸರಾ ಜಂಬೂಸವಾರಿ ಮೆರವಣಿಗೆ ಸಾಗುವ ರಾಜಮಾರ್ಗದಲ್ಲಿ ಈ ಬಾರಿ ಆಕರ್ಷಕ ರೀತಿಯಲ್ಲಿ ದೀಪಾಲಂಕಾರ ಮಾಡಲು ಚಿಂತನೆ ನಡೆಸಲಾಗಿದೆ. ಜತೆಗೆ ನಗರದಲ್ಲಿರುವ ವೃತ್ತಗಳಲ್ಲಿ ವಿನೂತನ ರೀತಿಯಲ್ಲಿ ದೀಪಾಲಂಕಾರ ಮಾಡಬೇಕೆಂದು ನಿರ್ಧರಿಸಿದ್ದು, ಇದಕ್ಕಾಗಿ ಅಗತ್ಯವಿರುವ ರೂಪುರೇಷೆಗಳು, ಕೆಲವೊಂದು ಡಿಸೈನ್‌ ಗಳನ್ನು ಈಗಾಗಲೇ ಸಿದ್ಧಪಡಿಸಲಾಗುತ್ತಿದೆ” ಎಂದರು.

ಪೂರ್ವಸಿದ್ಧತೆ ಇರಲಿ:

“ದಸರಾ ಮಹೋತ್ಸವದ ಆರಂಭದಿಂದಲೇ ವಿದ್ಯುತ್‌ ದೀಪಾಲಂಕಾರಕ್ಕೂ ಚಾಲನೆ ದೊರೆಯಲಿದೆ. ಹೀಗಾಗಿ ದೀಪಾಲಂಕಾರ ಮಾಡುವ ಜವಾಬ್ದಾರಿ ಹೊತ್ತವರು ಕೊನೆಯ ಹಂತದವರೆಗೂ ಕೆಲಸ ಮಾಡದೆ, ಪೂರ್ವಸಿದ್ಧತೆ ಮಾಡಿಕೊಳ್ಳಬೇಕಿದೆ. ಕಳೆದ ಬಾರಿ ಕೆಲವೊಂದು ರಸ್ತೆಗಳಲ್ಲಿ ಮಾಡಲಾಗಿದ್ದ ದೀಪಾಲಂಕಾರ ನಿರೀಕ್ಷಿತ ಮಟ್ಟದಲ್ಲಿ ಇರಲಿಲ್ಲ. ಹೀಗಾಗಿ ಈ ಬಾರಿ ಇಂತಹ ಸಮಸ್ಯೆಗಳು ಆಗದಂತೆ ನಿಗಾವಹಿಸಿ, ನಿಗದಿತ ಸಮಯಕ್ಕೆ ದೀಪಾಲಂಕಾರದ ಕೆಲಸಗಳನ್ನು ಪೂರ್ಣಗೊಳಿಸಿ” ಎಂದು ಮುನಿಗೋಪಾಲ್‌ ರಾಜು ಸೂಚಿಸಿದರು.

“ಯುವ ಸಂಭ್ರಮ ಹಾಗೂ ಯುವ ದಸರಾ ಕಾರ್ಯಕ್ರಮಗಳು ನಡೆಯುವ ಸ್ಥಳಗಳ ಸುತ್ತಲಿನ ರಸ್ತೆಗಳು ಹಾಗೂ ವೃತ್ತಗಳಲ್ಲಿ ದೀಪಾಲಂಕಾರ ಹೆಚ್ಚಿನ ಆಕರ್ಷಣೆಯಿಂದ ಕೂಡಿರಬೇಕಿದೆ. ಯುವ ಸಂಭ್ರಮ ಕಾರ್ಯಕ್ರಮ ದಸರಾ ಆರಂಭಕ್ಕೂ ಮೊದಲೇ ನಡೆಯುವುದರಿಂದ ಈ ಸ್ಥಳದಲ್ಲಿ ಮಾಡಲಾಗುವ ದೀಪಾಲಂಕಾರ ಎಲ್ಲರ ಆಕರ್ಷಣೆ ಮತ್ತು ಕುತೂಹಲವನ್ನು ಹೆಚ್ಚುವಂತೆ ಮಾಡುತ್ತದೆ. ಆದ್ದರಿಂದ ಈ ಭಾಗಗಳಲ್ಲಿ ದೀಪಾಲಂಕಾರ ಮಾಡುವವರು ಇದನ್ನು ಗಮನದಲ್ಲಿಟ್ಟುಕೊಂಡು ದೀಪಾಲಂಕಾರ ಮಾಡಬೇಕಿದೆ” ಎಂದು ಸಲಹೆ ನೀಡಿದರು.

ಡ್ರೋನ್‌ ಶೋಗೆ ಇನ್ನಷ್ಟು ಮೆರಗು:

“ಕಳೆದ ವರ್ಷದ ದಸರಾ ಸಂದರ್ಭದಲ್ಲಿ ನಡೆದ ಡ್ರೋನ್‌ ಪ್ರದರ್ಶನ ಎಲ್ಲರ ಆಕರ್ಷಣೆ ಮತ್ತು ಮೆಚ್ಚುಗೆ ಪಡೆದಿತ್ತು. ಹೀಗಾಗಿ ಡ್ರೋನ್‌ ಶೋ ಕುರಿತಂತೆ ಜನರ ನಿರೀಕ್ಷೆಗಳು ಹೆಚ್ಚಾಗಿರಲಿದೆ. ಆದ್ದರಿಂದ ಈ ಬಾರಿಯ ಡ್ರೋನ್‌ ಶೋ ಕಾರ್ಯಕ್ರಮದ ಮೆರಗು ಹೆಚ್ಚಿಸುವ ನಿಟ್ಟಿನಲ್ಲಿ ಕಳೆದ ಬಾರಿಗಿಂತ ಹೆಚ್ಚಿನ ಡ್ರೋನ್‌ ಬಳಸಿ ಹೆಚ್ಚು ಆಕರ್ಷಣೀಯವಾಗಿಸಲು ಚಿಂತನೆ ನಡೆಸಲಾಗುತ್ತಿದೆ” ಎಂದು ಕೆ.ಎಂ. ಮುನಿಗೋಪಾಲ್‌ ರಾಜು ಅವರು ಸಭೆಯಲ್ಲಿ ತಿಳಿಸಿದರು.

ಪ್ರತಿವರ್ಷದಂತೆ ಈ ಬಾರಿಯೂ ದಸರಾ ದೀಪಾಲಂಕಾರದ ಬಗ್ಗೆ ಎಲ್ಲರ ನಿರೀಕ್ಷೆಗಳು ಹೆಚ್ಚಾಗಿದೆ. ಇದಕ್ಕಾಗಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಅಧಿಕಾರಿಗಳು ಹಾಗೂ ವಿದ್ಯುತ್‌ ಗುತ್ತಿಗೆದಾರರಿಗೆ ಸಲಹೆ ಹಾಗೂ ಸೂಚನೆಗಳನ್ನು ನೀಡಲಾಗಿದೆ. ದೀಪಾಲಂಕಾರವನ್ನು ಆಕರ್ಷಕ ಮತ್ತು ಹೊಸತನದೊಂದಿಗೆ ಸುರಕ್ಷಿತ ರೀತಿಯಲ್ಲಿ ಮಾಡಲಾಗುವುದು ಎಂದು ಕೆ.ಎಂ. ಮುನಿಗೋಪಾಲ್‌ ರಾಜು ತಿಳಿಸಿದರು.

ಸಭೆಯಲ್ಲಿ ನಿಗಮದ ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್‌, ಮೈಸೂರು ವಲಯ ಕಚೇರಿಯ ಮುಖ್ಯ ಇಂಜಿನಿಯರ್‌ ಮೃತ್ಯುಂಜಯ, ಮೈಸೂರು ವೃತ್ತದ ಅಧೀಕ್ಷಕ ಇಂಜಿನಿಯರ್ ಸುನೀಲ್, ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್‌ ಗುತ್ತಿಗೆದಾರರ ಸಂಘದ ಅಧ್ಯಕ್ಷ ರಮೇಶ್‌ ಸೇರಿದಂತೆ ಸೆಸ್ಕ್‌ನ ಪ್ರಮುಖ ಅಧಿಕಾರಿಗಳು ಹಾಗೂ ವಿದ್ಯುತ್‌ ಗುತ್ತಿಗೆದಾರರು ಇದ್ದರು.

Key words: Mysore Dasara, Lighting, attractive, K.M. Munigopal Raju

The post ಮೈಸೂರು ದಸರಾ: ದೀಪಾಲಂಕಾರ ಹೊಸ ವಿನ್ಯಾಸಗಳ ಜತೆ ಆಕರ್ಷಕ, ವಿನೂತನವಾಗಿರಲಿ- ಕೆ.ಎಂ. ಮುನಿಗೋಪಾಲ್‌ ರಾಜು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕುಸುಮ್-ಸಿ ಕೆಲಸ ಆರಂಭಿಸದಿದ್ದರೆ ಟೆಂಡರ್ ರದ್ದು- ಕೆ.ಎಂ.ಮುನಿಗೋಪಾಲ್ ರಾಜು
ಮೈಸೂರು, ಆಗಸ್ಟ್,1, 2025 (www.justkannada.in):  ಪಿಎಂ ಕುಸುಮ್ – ಸಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಕಾಳಜಿಯಿಂದ ಕೆಲಸ ಮಾಡಬೇಕಿದ್ದು, ಈಗಾಗಲೇ ಪಿಪಿಎ ಪಡೆದು ಕೆಲಸ ಆರಂಭಿಸದ ಕಂಪನಿಗಳಿಗೆ ನೀಡಲಾಗಿರುವ ಟೆಂಡರ್ ರದ್ದುಪಡಿಸಿ ಮರು ಟೆಂಡರ್ ಕರೆಯುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ನಿಗಮದ ಪ್ರಧಾನ ಕಚೇರಿಯಲ್ಲಿ ನಡೆದ ಕುಸುಮ್-ಸಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಸೆಸ್ಕ್ ವ್ಯಾಪ್ತಿಯ ಐದು ಜಿಲ್ಲೆಗಳಲ್ಲಿ ಕುಸುಮ್-ಸಿ ಯೋಜನೆ ಅನುಷ್ಠಾನ ಮಾಡಲು ಗುತ್ತಿಗೆ ಪಡೆದಿರುವ ಪ್ರತಿಯೊಂದು ಏಜೆನ್ಸಿಗಳ ಕಾರ್ಯವೈಖರಿ ಹಾಗೂ ಪ್ರಗತಿಯ ಕುರಿತು ಪರಿಶೀಲನೆ ನಡೆಸಿ ಕೆ.ಎಂ. ಮುನಿಗೋಪಾಲ್ ರಾಜು ಅವರು ಮಾತನಾಡಿದರು.

“ಇಂಧನ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕುಸುಮ್-ಸಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಗಂಭೀರವಾಗಿ ಚರ್ಚಿಸಲಾಗಿದ್ದು, ಕೆಲಸ ಆರಂಭಿಸಲು ಆಗಸ್ಟ್ 20ರೊಳಗೆ ಕಾಲಮಿತಿ ನಿಗದಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಇಂಧನ ಖರೀದಿ ಕರಾರು(ಪಿಪಿಎ) ನೀಡಿದ್ದರೂ ಈವರೆಗೆ ಕೆಲಸ ಆರಂಭಿಸದ ಏಜೆನ್ಸಿಗಳಿಗೆ ನೋಟಿಸ್ ನೀಡಿ, ಟೆಂಡರ್ ರದ್ದುಪಡಿಸಿ ಮರು ಟೆಂಡರ್ ಕರೆಯುವಂತೆ ಇಂಧನ ಸಚಿವರು ಸೂಚನೆ ನೀಡಿದ್ದಾರೆ. ಆದ್ದರಿಂದ ಕುಸುಮ್-ಸಿ ಯೋಜನೆ ಅನುಷ್ಠಾನಕ್ಕೆ ಅಗತ್ಯ ಇರುವ ಜಾಗವನ್ನು ಗುರುತಿಸಿ, ಶೀಘ್ರವಾಗಿ ಕೆಲಸ ಆರಂಭಿಸಲು ಟೆಂಡರ್ ಪಡೆದ‌ ಏಜೆನ್ಸಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಿದೆ. ಈ ವಿಷಯದಲ್ಲಿ ನಿಗಮದ ಅಧಿಕಾರಿಗಳು ಸಹ ಹೆಚ್ಚಿನ ಮುತುವರ್ಜಿಯಿಂದ ಕೆಲಸ ಮಾಡಬೇಕು,” ಎಂದು ಸೂಚನೆ ನೀಡಿದರು.

“ಕುಸುಮ್-ಸಿ ಮೂಲಕ ಸೆಸ್ಕ್ ವತಿಯಿಂದ 3 ತಿಂಗಳಲ್ಲಿ ಕನಿಷ್ಠ 5 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿ ನೀಡಲಾಗಿದೆ. ಹೀಗಿದ್ದರೂ ಏಜೆನ್ಸಿಗಳು ಪಿಪಿಎ ಪಡೆದು ಹಲವು ತಿಂಗಳಾದರೂ ಕೆಲಸ ಆರಂಭಿಸದಿರುವುದು ಬೇಸರದ ಸಂಗತಿ ಆಗಿದೆ. ಟೆಂಡರ್ ಪಡೆದಿರುವ ಏಜೆನ್ಸಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಯೋಜನೆ ಅನುಷ್ಠಾನಕ್ಕೆ ಕ್ರಮ ವಹಿಸಬೇಕಿದೆ. ಜಾಗದ ಸಮಸ್ಯೆ ಸೇರಿದಂತೆ ಇನ್ನಿತರ ಸಮಸ್ಯೆ ಇತ್ಯರ್ಥಪಡಿಸಿ, ಕೆಲಸ ಆರಂಭಿಸಲು ಆಗದಿದ್ದರೆ ಅಂತಹ ಏಜನ್ಸಿಗಳಿಗೆ ನೀಡಿ ಟೆಂಡರ್ ಕೈಬಿಡಬೇಕಾಗುತ್ತದೆ,” ಎಂದು ಎಚ್ಚರಿಸಿದರು.

ಜಾಗ ಸಿಗುವ ಜಾಗದಲ್ಲೇ ಕೆಲಸ ಆರಂಭಿಸಿ:

“ಕುಸುಮ್-ಸಿ ಯೋಜನೆಗೆ ಎಲ್ಲ ಕಡೆಗಳಲ್ಲೂ ಸರ್ಕಾರಿ ಜಾಗ ದೊರೆಯುವುದಿಲ್ಲ. ಅತಹ ಕಡೆಗಳಲ್ಲಿ ಖಾಸಗಿ ಜಾಗ ಪಡೆದು ಕೆಲಸ ಆರಂಭಿಸಬೇಕು. ಇನ್ನೂ ಕೆಲವು ಕಡೆಗಳಲ್ಲಿ ಅಗತ್ಯವಿರುವಷ್ಟು ಪ್ರಮಾಣದ ಜಾಗ ಸಿಗುವುದು ಕಷ್ಟಸಾಧ್ಯವಿದ್ದು, ಇಂತಹ ಕಡೆಗಳಲ್ಲಿ ಎಷ್ಟು ಪ್ರಮಾಣದಲ್ಲಿ ಜಾಗ ಲಭ್ಯವಿರುತ್ತದೆಯೋ ಆ ಸ್ಥಳದಲ್ಲೇ ಕೆಲಸ ಆರಂಭಿಸಲು ಮುಂದಾಗಬೇಕು. ನಿಗಮದ ಕಾರ್ಯಪಾಲಕ ಅಭಿಯಂತರರು ಈ ನಿಟ್ಟಿನಲ್ಲಿ ಕಿರಿಯ ಇಂಜಿನಿಯರ್‌ ಗಳ ಮೂಲಕ ಸ್ಥಳೀಯವಾಗಿ ಲಭ್ಯವಿರುವ ಜಾಗಗಳನ್ನು ಗುರುತಿಸಿ, ಯೋಜನೆ ಅನುಷ್ಠಾನಗೊಳಿಸಲು  ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು,” ಎಂದು ಸೂಚನೆ ನೀಡಿದರು.

ಸಭೆಯಲ್ಲಿ ನಿಗಮದ ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್, ಮೈಸೂರು ವಲಯ ಕಚೇರಿಯ ಮುಖ್ಯ ಇಂಜಿನಿಯರ್‌ ಮೃತ್ಯುಂಜಯ, ಹಾಸನ ವಲಯ ಕಚೇರಿಯ ಮುಖ್ಯ ಇಂಜಿನಿಯರ್ ಹರೀಶ್, ಸೆಸ್ಕ್ ಐಟಿ ಮತ್ತು ಎಂಐಎಸ್ ವಿಭಾಗದ ಪ್ರಧಾನ ವ್ಯವಸ್ಥಾಪಕ ರಾಮಸ್ವಾಮಿ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

Key words: Tender, cancelled, Kusum-C, K.M. Munigopal Raju, Mysore

The post ಕುಸುಮ್-ಸಿ ಕೆಲಸ ಆರಂಭಿಸದಿದ್ದರೆ ಟೆಂಡರ್ ರದ್ದು- ಕೆ.ಎಂ.ಮುನಿಗೋಪಾಲ್ ರಾಜು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.