Kannada Development Authority | Just Kannada - Daily News Updates
ಕಲಾವಿದ ಜೆ.ಎಂ.ಎಸ್.‌ ಮಣಿ ನಿಧನ: ಸಂತಾಪ ಸೂಚಿಸಿದ ಟಿ.ಎಸ್ ನಾಗಾಭರಣ.
ಬೆಂಗಳೂರು,ಜೂನ್,3,2021(www.justkannada.in):  ಕೆನ್ ಕಲಾಶಾಲೆ ಮೂಲಕ ನೂರಾರು ಕಲಾವಿದರನ್ನು ಸೃಜಿಸಿದ ಹಿರಿಯ ಕಲಾಚೇತನ ಶಿಕ್ಷಕ ಜೆ.ಎಂ.ಎಸ್.‌ ಮಣಿಯವರು ನಿಧನರಾಗಿದ್ದು, ಅವರಿಗೆ ಭಾವಪೂರ್ಣ ನಮನಗಳು ಎಂದು ರಂಗಕರ್ಮಿ,  ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ ಎಸ್ ನಾಗಾಭರಣ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ದೇಶ-ವಿದೇಶಗಳಲ್ಲಿ ದೇಶದ ರಾಜ್ಯದ ಪ್ರತಿನಿಧಿಯಾಗಿ ಕಲಾಪ್ರದರ್ಶನ ಮಾಡಿ ಮೆಚ್ಚುಗೆ ಗಳಿಸಿದ್ದ ಮಣಿಯವರು ಅವರ ಕಲಾಕೃತಿಗಳ ಮೂಲಕ ಜನಮನದಲ್ಲಿ ಚಿರಸ್ಥಾಯಿಯಾಗಿದ್ದಾರೆ ಎಂದು ಟಿ.ಎಸ್ ನಾಗಾಭರಣ ಸ್ಮರಿಸಿದ್ದಾರೆ.
ಕರುನಾಡಿನ ಕಲಾ ಕಣ್ಮಣಿ ಜೆ.ಎಂ.ಎಸ್.‌ ಮಣಿಯವರು, ಅತ್ಯಂತ ತಾಳ್ಮೆ-ಸಹನೆಯಿಂದ ಮಕ್ಕಳಿಗೆ ಕಲಾರಂಗದ ಬಗ್ಗೆ ತಿಳಿಸಿ ಕೊಡುತ್ತಿದ್ದರು. ಇಂತಹ ವೃದ್ಧರಿಗೆ ಸಹನಾಮಯಿ ಮಣಿಯವರು ಇಂದು ನಮ್ಮನ್ನಗಲಿರುವುದು ನೋವಿನ ಸಂಗತಿ. ಅವರಿಗೆ ಸದ್ಗತಿ ದೊರೆಯಲಿ. ಭಾವಪೂರ್ಣ ನಮನಗಳು ಎಂದು ಟಿ.ಎಸ್ ನಾಗಾಭರಣ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Key words: Artist- J.M.S. Mani- died- Kannada Development Authority-president-TS Nagabarana- Condolences
ಏ. 24ರಂದು ಗ್ರಾಹಕ ಸೇವೆಯಲ್ಲಿ ಕನ್ನಡ ಅಭಿಯಾನಕ್ಕೆ ಚಾಲನೆ…
ಬೆಂಗಳೂರು,ಏಪ್ರಿಲ್,22,2021(www.justkannada.in):  ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕನ್ನಡ ಕಾಯಕ ವರ್ಷಾಚರಣೆಯ ಹಿನ್ನೆಲೆಯಲ್ಲಿ ಏಪ್ರಿಲ್ 24ರಿಂದ 26ವರೆಗೆ 3 ದಿನಗಳು ಕನ್ನಡ ಕಂಠೀರವ ಡಾ.ರಾಜಕುಮಾರ ಅವರ ಹುಟ್ಟು ಹಬ್ಬದ ಪ್ರಯುಕ್ತ “ಕನ್ನಡ ಅಭಿಮಾನಿ ದಿನ’’ “ಗ್ರಾಹಕ ಸೇವೆಯಲ್ಲಿ ಕನ್ನಡ ಬಳಕೆ’’ ಅಭಿಯಾನವನ್ನು ಹಮ್ಮಿಕೊಳ್ಳಲು ಉದ್ದೇಶಿಸಿರುವುದಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ತಿಳಿಸಿದ್ದಾರೆ.
ಡಾ.ರಾಜಕುಮಾರ್ ಅವರು ಕನ್ನಡಿಗರನ್ನು ‘ಅಭಿಮಾನಿ ದೇವರುಗಳು’ ಎಂಬ ಪರಿಭಾಷೆಯಲ್ಲಿ ಗೌರವಿಸಿದವರು. ಗೋಕಾಕ್ ಚಳುವಳಿಯ ಮುನ್ನೆಲೆಯಲ್ಲಿ ಕನ್ನಡಕ್ಕಾಗಿ ಹೋರಾಡಿದವರು. ಅಂತಹ ಮೇರು ನಟರ ಜನ್ಮದಿನದ ಪ್ರಯುಕ್ತ ಪ್ರಾಧಿಕಾರವು ಕನ್ನಡ ಕಟ್ಟುವ ಕೆಲಸವನ್ನು ಹಮ್ಮಿಕೊಂಡಿದ್ದು, ಗ್ರಾಹಕರಿಗೆ ಸ್ಥಳಿಯ ಭಾಷೆಯಲ್ಲಿ ಎಲ್ಲಾ ಸೇವೆಗಳು ದೊರೆಯಬೇಕೆಂಬ ಮಹಾತ್ಮಕಾಂಕ್ಷೆ ಪ್ರಾಧಿಕಾರದ್ದಾಗಿದೆ. ಜೊತೆಗೆ ಕನ್ನಡದಲ್ಲಿ ಗ್ರಾಹಕ ಸೇವೆ ಪಡೆಯುವ ಹಕ್ಕಿನ ಕುರಿತು ಕನ್ನಡಿಗರಲ್ಲಿ ಜಾಗೃತಿ ಮೂಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದು ಹೇಳಿದ್ದಾರೆ. ಗ್ರಾಹಕ ಸೇವೆಯಲ್ಲಿ ಕನ್ನಡ ಅಭಿಯಾನವನ್ನು ಕೇವಲ ಭಾಷೆಯ ಬಳಕೆ ದೃಷ್ಟಿಯಿಂದ ಮಾತ್ರ ನೋಡದೆ, ಎಲ್ಲೆಡೆ ಕನ್ನಡದ ಬಳಕೆ ಎಂದರೆ ‘ಕನ್ನಡಿಗರಿಗೆ ಹೊಸ ಉದ್ಯೋಗಗಳ ಸೃಷ್ಠಿ’ಯ ಹಿನ್ನೆಲೆಯಲ್ಲೂ ಕೂಡ ಗಮನಿಸಬೇಕಿದೆ.
ಕೋವಿಡ್ ಸಾಂಕ್ರಾಮಿಕ ರೋಗವು ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸದರಿ ಅಭಿಯಾನವನ್ನು ಈ ಹಿಂದಿನ ಅಭಿಯಾನಗಳಂತೆ ಖುದ್ದು ಭೇಟಿಯ ಹಕ್ಕೊತ್ತಾಯವನ್ನು ಮಾಡದೆ, ಜಾಲಸಂಪರ್ಕದ ಮೂಲಕ ಹ್ಯಾಷ್ ಟ್ಯಾಗ್ ಬಳಸಿ ಅಭಿಯಾನವನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಈ ಅಭಿಯಾನದಲ್ಲಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರುಗಳು, ಜಿಲ್ಲಾ ಜಾಗೃತಿ ಸಮಿತಿ ಸದಸ್ಯರುಗಳು, ಮಹಾನಗರ ಪಾಲಿಕೆ ಕನ್ನಡ ಜಾಗೃತಿ ಸಮಿತಿ ಸದಸ್ಯರುಗಳು, ಮತಕ್ಷೇತ್ರ ಕನ್ನಡ ಜಾಗೃತಿ ಸಮಿತಿ ಸದಸ್ಯರುಗಳು, ಕನ್ನಡ ಕಾಯಕಪಡೆ ಸದಸ್ಯರುಗಳು ಮತ್ತಿತರರು ರಾಜ್ಯಾದ್ಯಂತ ಪಾಲ್ಗೊಳ್ಳಲಿದ್ದಾರೆ ಹಾಗೂ ನಿರಂತರ ಅಭಿಯಾನವನ್ನು ಮುಂದುವರಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
Key words: Kannada campaign-kannada kayaka varsha-Kannada Development Authority-TS Nagabarana
ಪ್ರಸಾರ ಭಾರತಿ ಹೊಸ ನಿಯಮ ಹಿಂಪಡೆಯಬೇಕು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ ಒತ್ತಾಯ…
ಬೆಂಗಳೂರು,ಏಪ್ರಿಲ್,17,2021(www.justkannada.in):  ಕೇವಲ ನಿರ್ವಹಣಾ ವೆಚ್ಚದ ಕಾರಣ ನೀಡಿ ಪ್ರಾದೇಶಿಕತೆಯ ಆಸ್ಮಿತೆಗೆ ಧಕ್ಕೆ ಉಂಟುಮಾಡುವ ಕ್ರಮ ಖಂಡನೀಯ.  ಹಾಗಾಗಿ ಪ್ರಸಾರ ಭಾರತಿ ಹೊಸ ನಿಯಮವನ್ನು ಹಿಂಪಡೆಯಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ  ಟಿ.ಎಸ್.ನಾಗಾಭರಣ ಅವರು ಒತ್ತಾಯಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಟಿ.ಎಸ್ ನಾಗಾಭರಣ, ಪ್ರಸಾರ ಭಾರತಿ ಜಾರಿಗೆ ತಂದಿರುವ ಹೊಸನೀತಿ, ನಿಯಮಗಳಿಂದಾಗಿ ಇದುವರೆವಿಗೂ ನಿರಂತರವಾಗಿ ಬಿತ್ತರವಾಗುತ್ತಿದ್ದ ಪ್ರಾದೇಶಿಕ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸುವುದು ಸರಿಯಾದ ಕ್ರಮವಲ್ಲ. ಇದರಿಂದಾಗಿ ಸ್ಥಳೀಯ ಕಲಾವಿದರಿಗೆ, ಜಿಲ್ಲಾ ಕಚೇರಿಗಳಲ್ಲಿ ಕೆಲಸ ನಿರ್ವಹಿಸುವ ಸ್ಥಳೀಯ ಉದ್ಯೋಗಿಗಳ ಬದುಕು ಡೋಲಾಯಮಾನವಾಗುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಪ್ರಾದೇಶಿಕತೆಯ ಅಸ್ಮಿತೆಯನ್ನು ಪ್ರಶ್ನಿಸಿದಂತಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಆಕಾಶವಾಣಿ ನಿಲಯ ನಿರ್ದೇಶಕರಿಗೆ ಪತ್ರ ಬರೆದಿರುವ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ, ದಕ್ಷಿಣದ ಕೇರಳ, ತಮಿಳುನಾಡು, ಆಂಧ್ರಪ್ರದೇಶಕ್ಕೆ ಇಲ್ಲದ ನಿಯಮಗಳನ್ನು ಕರ್ನಾಟಕದ ಮೇಲೆ ಹೇರಿ ಏಪ್ರಿಲ್ 13ರಿಂದ ಹೊಸ ನೀತಿಯನ್ನು ಜಾರಿ ಮಾಡಿರುವುದು ನಿಯಮಬಾಹಿರವಾಗಿದ್ದು, ಕೂಡಲೇ ಈ ನೀತಿಯನ್ನು ಪರಿಷ್ಕರಿಸಿ ಈ ಮೊದಲಿನಂತೆ ಆಕಾಶವಾಣಿಯಲ್ಲಿ ಹೆಚ್ಚಿನ ಸಮಯವನ್ನು ಕನ್ನಡದ ಕಾರ್ಯಕ್ರಮಗಳು ಪ್ರಸಾರವಾಗುವಂತೆ ಕ್ರಮವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಈಗಾಗಲೇ ಪತ್ರಿಕೆಗಳಲ್ಲಿ ಬಂದಿರುವ ವರದಿಗಳನ್ನು ಪ್ರಾಧಿಕಾರ ಗಮನಿಸಿದೆ. ಪ್ರಸಾರ ಭಾರತಿ ನಿಯಮಗಳನ್ನು ರೂಪಿಸಿಕೊಳ್ಳುವುದರಲ್ಲಿ ಯಾವುದೇ ಅಭ್ಯಂತರವಿಲ್ಲ. ಆದರೆ ಪ್ರಾದೇಶಿಕತೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರದಂತೆ ಕ್ರಮವಹಿಸುವುದು ಬಹಳ ಮುಖ್ಯವಾದ ಅಂಶವಾಗಿದೆ. ನಾಡುನುಡಿಯ ಬಗ್ಗೆ ಆಕಾಶವಾಣಿಯ ಕೊಡುಗೆ ಬಹುಮುಖ್ಯವಾಗಿದ್ದು, ಈ ನೀತಿಯನ್ನು ಹಿಂಪಡೆಯುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.
Key words: Prasar Bharati- withdraw – new rule- Kannada Development Authority- TS Nagabharana
ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮ: ಅತಿ ಹೆಚ್ಚು ಅಂಕಗಳಿಸಿದ ಎಸ್ ಎಸ್ ಎಲ್ ಸಿ ಮತ್ತು ಪಿಯು ವಿದ್ಯಾರ್ಥಿಗಳಿಗೆ ಪುರಸ್ಕಾರ…
ಬೆಂಗಳೂರು,ಜನವರಿ,12,2021(www.justkannada.in):  ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿ, ಕನ್ನಡ ಮಾಧ್ಯಮ ಶಿಕ್ಷಣವನ್ನು ಉತ್ತೇಜಿಸುವ ಉದ್ದೇಶದ ಹಿನ್ನೆಲೆಯಲ್ಲಿ ಬೆಂಗಳೂರು ವಿಭಾಗದ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಇಂದು ಬೆಳಗ್ಗೆ 10.30 ಗಂಟೆಗೆ ಆನ್ ಲೈನ್(ವರ್ಚುವಲ್)ಮೂಲಕ ಆಯೋಜಿಸಿ ಯಶಸ್ವಿಗೊಳಿಸಲಾಯಿತು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಟಿ.ಎಸ್. ನಾಗಾಭರಣ  ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳನ್ನು ಗೌರವಿಸಿ ಪುರಸ್ಕರಿಸಲಾಯಿತು.
2020-21ರ ಕನ್ನಡ ಮಾಧ್ಯಮ ಪ್ರಶಸ್ತಿ ಕಾರ್ಯಕ್ರಮದಲ್ಲಿ ತಾಲ್ಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕಗಳಿಸಿದ ಎಸ್.ಎಸ್.ಎಲ್.ಸಿ.ಯ  695 ವಿದ್ಯಾರ್ಥಿಗಳು ಮತ್ತು ಪಿ.ಯು.ಸಿ.ಯ 570 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 1265 ವಿದ್ಯಾರ್ಥಿಗಳನ್ನು ಗೌರವಿಸಿ, ಪುರಸ್ಕರಿಸಲಾಯಿತು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪ್ರತಿಷ್ಠಿತ ಕಾರ್ಯಕ್ರಮಗಳಲ್ಲಿ ಕನ್ನಡ ಮಾಧ್ಯಮ ಪ್ರಶಸ್ತಿ ಕಾರ್ಯಕ್ರಮವೂ ಒಂದು. ರಾಜ್ಯದಲ್ಲಿ ಕನ್ನಡ ಮಾಧ್ಯಮದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಯನ್ನು ವ್ಯಾಸಂಗ ಮಾಡಿ, ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ದೃಷ್ಠಿಯಿಂದ ಈ ಕಾರ್ಯಕ್ರಮವನ್ನು ಕಳೆದ ಹತ್ತು ವರ್ಷಗಳಿಂದ ನಡೆಸುತ್ತಾ ಬಂದಿದೆ.
ಇನ್ನು ಬೆಂಗಳೂರು ವಿಭಾಗದ ಪ್ರತಿ ತಾಲೂಕಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮೂರು ವಿದ್ಯಾಥಿಗಳಂತೆ ಎಸ್.ಎಸ್.ಎಲ್.ಸಿ.ಯ 195 ಹಾಗೂ ಪಿ.ಯು.ಸಿ.ಯ 158 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 353 ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, 300 ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಪುರಸ್ಕಾರದ ಮೊತ್ತವನ್ನು ನೇರ ನಗದು ವರ್ಗಾವಣೆ (ಡಿ.ಬಿ.ಟಿ) ಯ ಮೂಲಕ ವಿದ್ಯಾರ್ಥಿಯ ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗುವುದು. ಪುರಸ್ಕಾರದ ಮೊತ್ತಗಳು ಹೀಗಿವೆ,
ಪ್ರಥಮ ನಗದು ಬಹುಮಾನ 12,000/-,  ದ್ವಿತೀಯ ಬಹುಮಾನ 11,000/-,  ತೃತೀಯ ಬಹುಮಾನ 10,000/-ಗಳು. ಎಲ್ಲಾ ವಿಜೇತ ವಿದ್ಯಾರ್ಥಿಗಳ ಪ್ರಾಧಿಕಾರದ ವತಿಯಿಂದ ನೀಡುವ ಇ- ಪ್ರಶಸ್ತಿ ಪ್ರಮಾಣ ಪತ್ರಗಳು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧಿಕೃತ ಜಾಲತಾಣದಲ್ಲಿ (ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧಿಕೃತ ಜಾಲತಾಣ https://kannadapraadhikaara.karnataka.gov.in/ ) ಲಭ್ಯವಿರುತ್ತವೆ. ಇಂದಿನ ಸಂಪೂರ್ಣ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು  ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧಿಕೃತ ಫೇಸ್‌ಬುಕ್‌  ಪುಟದ ಲೈವ್‌ನಲ್ಲಿ ವೀಕ್ಷಿಸಬಹುದಿದೆ. (https://www.facebook.com/kannadadevelopmentauthority),
ಈ ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಡಾ: ಕೆ ಮುರಳೀಧರ ಅವರು  ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರೊ..ಅಬ್ದುಲ್ ರೆಹಮಾನ್ ಪಾಷ, ರೋಹಿತ್ ಚಕ್ರತೀರ್ಥ,ಡಾ.ಸಿ.ಎ ಕಿಶೋರ್ ರವರುಗಳು ಮುಖ್ಯ ಅಥಿತಿಗಳಾಗಿ ಭಾಗವಹಿಸಿದ್ದರು.
Key words: Kannada media award- presentation- program-SSLC – PU students- Kannada Development Authority
ಹೊರನಾಡು, ಗಡಿನಾಡು ಮಕ್ಕಳಿಗೂ ವಿದ್ಯಾರ್ಥಿ ವೇತನ ಸಿಗಲಿ- ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ. ಎಸ್.ನಾಗಾಭರಣ ಆಗ್ರಹ…
ಬೆಂಗಳೂರು, ಸೆಪ್ಟಂಬರ್,11,2020(www.justkannada.in):  ರಾಜ್ಯದೊಳಗೆ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ನೀಡಲಾಗುವ ಎಲ್ಲಾ ಸೌಲಭ್ಯಗಳನ್ನು ಗಡಿಭಾಗದಲ್ಲಿ ಮತ್ತು ಹೊರರಾಜ್ಯಗಳಲ್ಲಿ ಕನ್ನಡ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡಿರುವ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಒತ್ತಾಯಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಆನ್ಲೈನ್ (ಜಾಲ ಸಂಪರ್ಕ ಸಭೆ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಟಿ.ಎಸ್ ನಾಗಾಭರಣ, ಆಂಧ್ರ, ತೆಲಂಗಾಣ, ಕೇರಳ, ತಮಿಳುನಾಡು, ದೆಹಲಿ, ಮಹಾರಾಷ್ಟ್ರ ಇತ್ಯಾದಿ ರಾಜ್ಯದ ಗಡಿ ಭಾಗಗಳಲ್ಲಿ 1 ರಿಂದ 10ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳಿಗೆ ರಾಜ್ಯದೊಳಗೆ ಉನ್ನತ ಶಿಕ್ಷಣ ಪ್ರವೇಶಾತಿಯನ್ನು ಹಾಗೂ ವಿದ್ಯಾರ್ಥಿವೇತನ ನೀಡಲು ನಿರಾಕರಿಸಲಾಗುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಬಗ್ಗೆ ಅಗತ್ಯ ಕ್ರಮವಹಿಸಬೇಕು ಮತ್ತು ಹೊರರಾಜ್ಯಗಳಲ್ಲಿ ಶಿಕ್ಷಣ ಪಡೆಯುತ್ತಿರುವ ಕನ್ನಡದ ಸಂಶೋಧನಾ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಸಹಾಯಧನ ನೀಡಲು ಇಲಾಖೆ ಮುಂದಾಗಬೇಕು ಎಂದು ಆಯುಕ್ತರಿಗೆ ಸೂಚಿಸಿದರು.
ಐಟಿಬಿಟಿ ಸೇರಿದಂತೆ ಶೇ.95ರಷ್ಟು ಉದ್ಯೋಗಗಳು ಖಾಸಗಿ ವಲಯದಲ್ಲಿದ್ದು, ಆ ಕ್ಷೇತ್ರಕ್ಕೆ ಗ್ರಾಮೀಣ ಮಕ್ಕಳು ಆಯ್ಕೆಯಾಗುವ ನಿಟ್ಟಿನಲ್ಲಿ ತರಬೇತಿ ಕಾರ್ಯಾಗಾರಗಳನ್ನು ನಡೆಸಿ ಆ ಕ್ಷೇತ್ರಕ್ಕೆ ಬೇಕಾದ ಜ್ಞಾನ, ಕೌಶಲಗಳ ಬಗ್ಗೆ ಮಕ್ಕಳಿಗೆ ತಿಳಿಸಿದರೆ ತಳಸಮುದಾಯದ ವಿದ್ಯಾರ್ಥಿಗಳು ಉನ್ನತಿ ಹೊಂದಲು ಸಹಕಾರಿಯಾಲಿದೆ ಎಂದು ಟಿ.ಎಸ್ ನಾಗಾಭರಣ ತಿಳಿಸಿದರು.
ಇಲಾಖೆಯ ಜಾಲತಾಣದಲ್ಲಿ  ಇ-ಪಾಸ್ ಇಂಗ್ಲಿಷ್ ನಲ್ಲಿದೆ ಹಾಗೂ ಕೆಲವು ಅಂತರ್ಜಾಲತಾಣದಲ್ಲಿ ತುಂಬುವ ಅರ್ಜಿಗಳು ಇಂಗ್ಲಿಷ್ ನಲ್ಲಿರುವುದನ್ನು ಗಮನಿಸಲಾಗಿದೆ. ಇವೆಲ್ಲ ಎಸ್.ಎಸ್.ಎಲ್.ಸಿ. ಓದಿದ ಗ್ರಾಮೀಣ ಭಾಗದ ಮಕ್ಕಳಿಗೆ ಅರ್ಥ ಆಗುವುದಿಲ್ಲ. ಆಗ ಅವಕಾಶದಿಂದ ವಂಚಿತರಾಗುವ ಸಾಧ್ಯಗಳಿರುವುದರಿಂದ ಕನ್ನಡದಲ್ಲೇ ಅರ್ಜಿ ತುಂಬಲು ಅವಕಾಶ ಮಾಡಿಕೊಡಬೇಕು. ಮತ್ತು ಗ್ರಾಮೀಣ ಭಾಗದ ಮತ್ತು ಕನ್ನಡಿಗರು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೆಚ್ಚು ಉದ್ಯೋಗ ಪಡೆದುಕೊಳ್ಳಲು ಬೇಕಾಗಿರುವ ಕೌಶಲ ತರಬೇತಿಯನ್ನು ನೀಡಬೇಕಿರುವುದು ಇಲಾಖೆಯ ಜವಾಬ್ದಾರಿಯಾಗಿದೆ ಎಂದು ಹೇಳಿದ ಅಧ್ಯಕ್ಷರು, ಇಲಾಖೆಯ ಜಾಲತಾಣದಲ್ಲಿ ಸಣ್ಣ-ಪುಟ್ಟ ದೋಷಗಳನ್ನು ಹೊರತುಪಡಿಸಿ,  ಕನ್ನಡದಲ್ಲಿ ಆಡಳಿತ ನಡೆಸುತ್ತಿರುವುದಕ್ಕೆ ಅಭಿನಂದಿನೆ ಸಲ್ಲಿಸಿದರು.
ಹೊರನಾಡು, ಗಡಿನಾಡಿನಲ್ಲಿ ಕನ್ನಡ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅಲ್ಲಿನ ಸರ್ಕಾರಗಳು ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ಕಾರಣಕ್ಕಾಗಿ ಯಾವುದೇ  ವಿದ್ಯಾರ್ಥಿ ವೇತನ ನೀಡುತ್ತಿಲ್ಲ. ಕರ್ನಾಟದಲ್ಲಿ ಅರ್ಜಿ ಸಲ್ಲಿಸಿದರೆ ಇಲ್ಲಿಯೂ ಅವರಿಗೆ ಹೊರ ರಾಜ್ಯದಲ್ಲಿ ವ್ಯಾಸಾಂಗ ಮಾಡುತ್ತಿರುವ ಕಾರಣಕ್ಕೆ ವಿದ್ಯಾರ್ಥಿವೇತನ ಸಿಗುತ್ತಿಲ್ಲ. ಈ ಬಗ್ಗೆ  ಪ್ರಾಧಿಕಾರದ ಸೂಚನೆಯನ್ವಯ ಹಿಂದುಳಿದ ವರ್ಗಗಳ ಇಲಾಖೆ ಸಲ್ಲಿಸಿದ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆ ತಿರಸ್ಕರಿಸಿದ್ದು, ಮಕ್ಕಳಿಗೆ ಎರಡು ಕಡೆಯಿಂದಲೂ ಯಾವುದೇ ವಿದ್ಯಾರ್ಥಿವೇತನ ಸಿಗದೆ ಅನ್ಯಾಯವಾಗುತ್ತಿದೆ. ಹಾಗಾಗಿ ಅವರಿಗೆ ರಾಜ್ಯ ಸರ್ಕಾರದಿಂದಲೇ ವಿದ್ಯಾರ್ಥಿವೇತನ ನೀಡಲು ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ಆಯುಕ್ತರಿಗೆ ಸೂಚಿಸಿದರು.
ಅಲ್ಲದೆ ಹೊರ ರಾಜ್ಯದಲ್ಲಿ 9 ಕನ್ನಡ ಅಧ್ಯಯನ ಪೀಠಗಳಿವೆ. ಅಲ್ಲಿ ವಿದ್ಯಾಭ್ಯಾಸ ಮಾಡಲು ಕರ್ನಾಟಕದ ವಿದ್ಯಾರ್ಥಿಗಳು ಹೋಗುತ್ತಾರೆ. ಅವರಿಗೂ ವಿದ್ಯಾರ್ಥಿವೇತನ ಸಿಗುತ್ತಿಲ್ಲ. ಹೀಗಾದರೆ ಒಂದು ಕಣ್ಣಿಗೆ ಬೆಣ್ಣೆ; ಒಂದು ಕಣ್ಣಿಗೆ ಸುಣ್ಣ ಮಾಡಿದಂತಾಗುತ್ತದೆ. ಅವರು ನಮ್ಮ ಕನ್ನಡದ ಮಕ್ಕಳು ಎಂಬ ಸತ್ಯ ಅರಿತು ಅವರಿಗೆ ನಾವು ನ್ಯಾಯ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಟಿ.ಎಸ್ ನಾಗಾಭರಣ ಹೇಳಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರಾದ ಟಿ.ಎಚ್.ಎಂ. ಕುಮಾರ್ ಅವರು ಮಾತನಾಡಿ, ಗಡಿಭಾಗದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವ ಸಂಬಂಧ ಆರ್ಥಿಕ ಇಲಾಖೆ ಸಲ್ಲಿಸಲಾದ ಪ್ರಸ್ತಾವನೆ ತಿರಸ್ಕೃತಗೊಂಡಿದ್ದು, ತಮ ಸಲಹೆ-ಸೂಚನೆ ಮೇರೆಗೆ ಮತ್ತೊಮ್ಮೆ ವಿಸ್ತೃತವಾದ ಪ್ರಸ್ತಾವನೆ ಸಲ್ಲಿಸಲಾಗುವುದು. ಪ್ರಾಧಿಕಾರದ ಸಲಹೆ-ಸೂಚನೆಗಳನ್ನು ಪಾಲಿಸಲಾಗುವುದು ಹಾಗೂ ಪ್ರಾಧಿಕಾರ ಪ್ರಸ್ತಾಪಿಸಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುವ ಭರವಸೆ ನೀಡಿದರು.
ಮಾನ್ಯ ಮುಖ್ಯಮಂತ್ರಿಗಳ ಇ-ಆಡಳಿತ ಸಲಹೆಗಾರರಾದ ಬೇಳೂರು ಸುದರ್ಶನ,  ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಕೆ.ಮುರಳಿಧರ, ಅಧ್ಯಕ್ಷರ ಅಪ್ತ ಕಾರ್ಯದರ್ಶಿ ಡಾ.ವೀರಶೆಟ್ಟಿ, ಪ್ರಾಧಿಕಾರದ ಸದಸ್ಯರಾದ ರೋಹಿತ್ ಚಕ್ರತೀರ್ಥ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರಾದ ಟಿ.ಎಚ್.ಎಂ. ಕುಮಾರ್, ಜಂಟಿ ನಿರ್ದೆಶಕರಾದ (ವಸತಿ ನಿಲಯ) ಜಿ. ಜಗದೀಶ್, ಜಂಟಿ ನಿರ್ದೇಶಕರಾದ (ಆಡಳಿತ) ಬಿ.ಎಸ್. ಪ್ರದೀಪ್, ಸಾಮಾಜಿಕ ಕಾರ್ಯಕರ್ತರಾದ ಅಶೋಕ್ ಹೆಗಡೆ ಮತ್ತಿತರೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
Key words: Scholarships – Frontier -Children-Kannada Development Authority –president-TS Nagabarana
ತಮ್ಮ ಲೋಪ ಸರಿಪಡಿಸಿಕೊಳ್ಳಿ: ಅರಣ್ಯ ಇಲಾಖೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ತಾಕೀತು…
ಬೆಂಗಳೂರು,ಆ,6,2020(www.justkannada.in): ರೈತ ಸಮುದಾಯ ಆರ್ಥಿಕವಾಗಿ ಸಬಲರಾಗುವಲ್ಲಿ ಪ್ರಮುಖಪಾತ್ರ ನಿರ್ವಹಿಸಬೇಕಾದ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮವು ಜನಸ್ನೇಹಿಯಾಗಿ ಕೆಲಸ ನಿರ್ವಸದಿರುವ ಬಗ್ಗೆ ದೂರುಗಳು ಕೇಳಿಬಂದಿದ್ದು, ತಮ್ಮ ಲೋಪದೋಷಗಳನ್ನು ಸರಿಪಡಿಸಿಕೊಳ್ಳುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಧು ಶರ್ಮಾ ಅವರಿಗೆ ತಾಕೀತು ಮಾಡಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಇಂದು ನಡೆದ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಕನ್ನಡ ಪ್ರಗತಿ ಪರಿಶೀಲನಾ ಜಾಲತಾಣ ಸಭೆ (ಆನ್ಲೈನ್ ಸಭೆ) ನಡಸಿದರು.  ನೇರ ಜನಸಂಪರ್ಕದೊಂದಿಗೆ ವ್ಯವಹರಿಸುವ ಅರಣ್ಯ ಇಲಾಖೆಯು ಈ ನೆಲದ ಭಾಷೆಯನ್ನು ತನ್ನ ಆಡಳಿತದ ಭಾಷೆಯನ್ನಾಗಿ ಸಂಪೂರ್ಣವಾಗಿ ಜಾರಿಗೆ ತರುವ ಜವಾಬ್ದಾರಿ ಹೊಂದಿದೆ ಎಂದರು.
ತಮ್ಮ ಇಲಾಖೆಯಿಂದ ರಬ್ಬರ್ ಬೋರ್ಡ್ ಗೆ ಸಂಬಂಧಿಸಿದ ಅಧಿಸೂಚನೆಗಳು ಇಂಗ್ಲೀಷಿನಲ್ಲಿರುವುದನ್ನು ಗಮನಿಸಲಾಗಿದೆ. ಈ ಸಂಬಂಧ ಕಾರಣ ಕೇಳಿ ನೋಟೀಸನ್ನು ತಮಗೆ ನೀಡಲಾಗಿದೆ. ಇದನ್ನು ಕೂಡಲೇ ಸರಿಪಡಿಸಿಕೊಂಡು ಪ್ರಾಧಿಕಾರಕ್ಕೆ ವರದಿ ನೀಡುವಂತೆ ಟಿ.ಎಸ್ ನಾಗಾಭರಣ ಸೂಚಿಸಿದರು.
ಅರಣ್ಯ ನಿಗಮಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆಯನ್ನು ತಾವು ಒಂದು ಬಿಳಿ ಹಾಳೆಯಲ್ಲಿ ಆಂಗ್ಲಭಾಷೆಯಲ್ಲಿ ಬರೆದು ಸಹಿ ಮಾಡಿ ಕೊಟ್ಟಿರುವುದು ಕ್ರಮವಲ್ಲ. ನೀವೇ ನೋಡಿ ಇದು ನಿಮ್ಮದೇ ಸಹಿ ತಾನೆ ಎಂದು ಸಭೆಯಲ್ಲಿ ಪ್ರದರ್ಶಿಸಿದರು.
ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಸಂಬಂಧಿಸಿದ ಜಾಲತಾಣಗಳು ಆಂಗ್ಲಭಾಷೆಯಲ್ಲಿವೆ. ಅದರ ಎಲ್ಲ ಕೊಂಡಿಗಳೂ ಸಹ ಇಂಗ್ಲಿಷಿನಲ್ಲಿದ್ದು, ಇದು ರಾಜ್ಯ ಸರ್ಕಾರದ ಭಾಷಾನೀತಿಯ ಉಲ್ಲಂಘನೆಯಾಗುತ್ತದೆ. ಆದ್ದರಿಂದ ಕೂಡಲೇ ಮಾದರಿ ಜಾಲತಾಣವನ್ನಾಗಿ ಒಂದು ತಿಂಗಳೊಳಗೆ ಪರಿವರ್ತಿಸದಿದ್ದಲ್ಲಿ ಕ್ರಮಕೈಗೊಳ್ಳುವುದಾಗಿ ಹೇಳಿದರು.
ಮಾನ್ಯ ಮುಖ್ಯಮಂತ್ರಿಗಳ ಇ-ಆಡಳಿತ ಸಲಹೆಗಾರರಾದ ಬೇಳೂರು ಸುದರ್ಶನ, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಧು ಶರ್ಮಾ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಕೆ.ಮುರಳಿಧರ, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಡಾ.ವೀರಶೆಟ್ಟಿ ಮತ್ತು ಡಾ.ಎ. ಸತ್ಯನಾರಾಯಣ ಮತ್ತಿತರೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
Key words: kannada Development Authority- Chairman– TS Nagabharana -Forest Department.
ಜಾಲತಾಣವೇ ಅಲ್ಲ ಯು.ಆರ್.ಎಲ್ ಮತ್ತು ಇ-ಮೇಲ್ ಕೂಡ ಕನ್ನಡದಲ್ಲಿ-ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ…
ಬೆಂಗಳೂರು,ಜು,23,2020(www.justkannada.in): ತಂತ್ರಜ್ಞಾನದಲ್ಲಿ ಕನ್ನಡ ಬಳಕೆ ಮಾಡಿಕೊಂಡರೆ ಕನ್ನಡದ ಅಸ್ಮಿತೆಯು ವಿಶ್ವಮಟ್ಟದಲ್ಲಿ ಪಸರಿಸಲಿದೆ. ಈ ಕೆಲಸಗಳು ಮೊದಲು ಸರ್ಕಾರಿ ಜಾಲತಾಣಗಳಿಂದ ಪ್ರಾರಂಭಿಸಬೇಕಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಅಭಿಪ್ರಾಯ ಪಟ್ಟರು.
ಸರ್ಕಾರಿ ಜಾಲತಾಣಗಳಲ್ಲಿ ಯುಆರ್ಎಲ್ ಬಳಸುವ ಸಂಬಂಧ ಭಾಷಾತಜ್ಞರು ಮತ್ತು ತಂತ್ರಜ್ಞರೊಂದಿಗೆ ವಿಧಾನಸೌಧದ ತಮ್ಮ ಕಛೇರಿಯಲ್ಲಿ ಜಾಲ ಸಂಪರ್ಕ ಸಭೆ ನಡೆಸಿದ  ಟಿ.,ಎಸ್ ನಾಗಾಭರಣ,  ಎಲ್ಲರಿಗೂ ಲಭ್ಯವಿರುವ ಕನ್ನಡ ಜಾಲತಾಣವನ್ನು ಸರ್ಕಾರಿ ಇಲಾಖೆಗಳಲ್ಲಿ ಮೊದಲು ಅನುಷ್ಠಾನಗೊಳ್ಳಬೇಕಿದೆ. ಸರ್ಕಾರಿ ಜಾಲತಾಣಗಳಲ್ಲಿ ಯುಆರ್ಎಲ್ ಬಳಸುವ ಸಂಬಂಧ ಶೀಘ್ರದಲ್ಲಿಯೇ ನಿಯೋಗವೊಂದು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಜಾಲತಾಣವೇ ಅಲ್ಲ ಯು.ಆರ್.ಎಲ್ ಮತ್ತು ಇ-ಮೇಲ್ ಕೂಡ ಕನ್ನಡದಲ್ಲಿ ಇರಬೇಕು ಎಂದು ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು.
ಈಗಾಗಲೇ ಡಾಟ್ ಭಾರತ ಎಂಬ ಹೆಸರಿನಲ್ಲಿ ಕನ್ನಡ ಜಾಲತಾಣವನ್ನು ನಿರ್ವಹಿಸಬಹುದಾದ ಅವಕಾಶವಿದ್ದು, ಅದನ್ನು ಡಾಟ್ ಕರ್ನಾಟಕ ಎಂದು ಸಹ ನೋಂದಣಿ ಮಾಡಬಹುದಾದ ಪೂರ್ವ ಸಿದ್ಧತೆಗಳು, ನೀತಿ-ನಿರೂಪಣೆಗಳು ಮತ್ತು ಸಾಧಕ ಬಾಧಕಗಳ ಹಾಗೂ ತಾಂತ್ರಿಕ ದೋಷಗಳ ಬಗ್ಗೆ ತಜ್ಞರೊಂದಿಗೆ ಚರ್ಚೆ ನಡೆಸಿ ಸರ್ಕಾರದ ಎಲ್ಲ ಇಲಾಖೆಗಳಲ್ಲೂ ಅನುಷ್ಠಾನಗೊಳಿಸುವ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡುವುದಾಗಿ ಟಿ.ಎಸ್ ನಾಗಾಭರಣ ಹೇಳಿದರು.
ತಂತ್ರಜ್ಞಾನ ಬೆಳೆದಂತೆ ಸರ್ಕಾರದ ಆಡಳಿತ ಕೂಡ ಹೆಚ್ಚು ಹೆಚ್ಚು ಅದನ್ನು ಆಗು ಮಾಡಿಕೊಳ್ಳುವ ಮೂಲಕ ಸರಳೀಕರಣದ ಕಡೆಗೆ ಹೊರಳುತ್ತದೆ. ಪ್ರಾದೇಶಿಕ ಭಾಷೆಗಳು ತಂತ್ರಜ್ಞಾನಕ್ಕೆ ಒಗ್ಗಿಕೊಳ್ಳುವಂತಾಗಬೇಕು. ಆಗಲೇ ಜನಾಡಳಿತ ಎಂಬುದು ನಿಜವಾಗಿಯೂ ಜನಭಾಷೆಯಲ್ಲಿ ಅಂದರೆ ಕನ್ನಡದಲ್ಲಿ ನಡೆಯಲು ಸಾಧ್ಯವಾಗಲಿದೆ ಎಂದು ತಿಳಿಸಿದರು.
ಮಾನ್ಯ ಮುಖ್ಯಮಂತ್ರಿಗಳ ಇ-ಆಡಳಿತ ಸಲಹೆಗಾರರಾದ ಬೇಳೂರು ಸುದರ್ಶನ, ಭಾಷಾಂತರ ಇಲಾಖೆ ನಿರ್ದೇಶಕರಾದ ಡಾ.ಡಿ.ಸ್ಮಿತಾ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಕೆ.ಮುರಳಿಧರ, ಇ-ಆಡಳಿತದ ಯೋಜನಾ ನಿರ್ದೇಶಕರಾದ ಕೆ.ಎಸ್.ಶಿವರಾಮ್, ವೆಬ್ ಪೋರ್ಟಲ್ ಯೋಜನಾಧಿಕಾರಿ ಸತೀಶ್,  ಇ-ಆಡಳಿತದ ಯೋಜನಾ ವ್ಯವಸ್ಥಾಪಕರಾದ ಪುಷ್ಪ, ಹಲ್ಮಿಡಿ ಕನ್ನಡ ಕೂಟದ ಜ್ಞಾನೇಶ್ವರ್, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಡಾ.ವೀರಶೆಟ್ಟಿ, ತಜ್ಞರಾದ ಡಾ.ಯು.ಬಿ.ಪವನಜ, ಶಂಕರ್ ಪ್ರಸಾದ್ ಮತ್ತಿತರರು ಉಪಸ್ಥತರಿದ್ದರು.
Key words: URL – E-mail – Kannada – Chairman – Kannada Development Authority- TS Nagabharana
ಎಲ್ಲಾ ಕಾರ್ಖಾನೆಗಳು ಕರ್ನಾಟಕದ ಉದ್ಯೋಗ ನೀತಿ ಪಾಲಿಸಬೇಕಿದೆ- ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿಎಸ್ ನಾಗಾಭರಣ….
ಬೆಂಗಳೂರು,ಜೂ,19,2020(www.justkannada.in): ಉದ್ದಿಮೆಗಳ ಸ್ಥಾಪನೆಯ ಹಿಂದೆ ಸರ್ಕಾರ ಕನ್ನಡಿಗರಿಗೆ ಉದ್ಯೋಗ ದೊರಕಿಸಿದರೆ ಅವರ ಬದುಕು ಹಸನಾಗುತ್ತದೆ ಎಂಬ ಕನಸನ್ನು ಕಂಡಿರುತ್ತದೆ. ಹಾಗಾಗಿ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ ನೀಡಿದಲ್ಲಿ ಉದ್ಯೋಗಗಳು ಸಂಪೂರ್ಣವಾಗಿ ಕನ್ನಡಿಗರಿಗೆ ದೊರೆಯಲು ಸಹಕಾರಿಯಾಗಲಿದ್ದು, ಸರ್ಕಾರ ಈ ಬಗ್ಗೆ ನೀತಿ-ನಿರೂಪಣೆಯನ್ನು ರೂಪಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್ ನಾಗಾಭರಣ ಅವರು ಸಲಹೆ ನೀಡಿದರು.
ಕೋವಿಡ್-19 ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೈಗಾರಿಕೆ ಮತ್ತು ವಾಣಿಜ್ಯ  ನಿರ್ದೇಶನಾಲಯದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಇಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್ ನಾಗಾಭರಣ ಕನ್ನಡ ಅನುಷ್ಠಾನ ಪರಿಶೀಲನೆ ನಡೆಸಿದರು. ಕೈಗಾರಿಕೆಗಳಲ್ಲಿ ಕನ್ನಡಿಗರನ್ನು ಕಡೆಗಣಿಸುತ್ತಿರುವ ಮತ್ತು ಸರೋಜಿನಿ ಮಹಿಷಿ ವರದಿಯನ್ನು ಉಲ್ಲಂಘನೆ ಮಾಡುತ್ತಿರುವವರ ವಿರುದ್ಧ ಕ್ರಮಕೈಗೊಳ್ಳುವ ಸಂಬಂಧ ಕೈಗಾರಿಕಾ ಸಚಿವರಿಗೆ ಶಿಫಾರಸ್ಸು ಮಾಡುವುದಾಗಿ ಹೇಳಿದರು.
ಐಟಿ-ಬಿಟಿಯಂತಹ ದೊಡ್ಡ ಮಟ್ಟದ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಸಿಗುವಂತಾದರೆ ಲಕ್ಷಾಂತರ ವಿದ್ಯಾವಂತ ನಿರುದ್ಯೋಗಿ ಕನ್ನಡಿಗರಿಗೆ ಕೆಲಸ ದೊರೆಯಲಿದ್ದು, ಇದರಿಂದ ಅವರ ಬದುಕು ಹಸನಾಗಲಿದೆ. ಡಿಪ್ಲಮೋ, ಐಟಿಐ ನಂತಹ ಕೋರ್ಸ್ ಗಳ ಪಠ್ಯಪುಸ್ತಕಗಳು ಕನ್ನಡಕ್ಕೆ ತರ್ಜುಮೆಗೊಳಿಸುವ ಪ್ರಕ್ರಿಯೆಗಳು ನಡೆಯಬೇಕಿದೆ. ಆಗ ಮಾತ್ರ ಎಲ್ಲ ತಂತ್ರಜ್ಞಾನದ ಜ್ಞಾನ ದೇಸೀಯವಾಗಿ ಸಿಗುವಂತಾಗುತ್ತದೆ. ಇದು ಪರಿಣಾಮಕಾರಿಯಾಗಿದ್ದು, ಖಾಸಗಿ ಕಾಲೇಜುಗಳು ಇಂತಹ ನಿಯಮವನ್ನು ಅನುಷ್ಠಾನಗೊಳಿಸಬೇಕಿದೆ ಎಂದು ದು ಟಿಎಸ್ ನಾಗಾಭರಣ ತಾಕೀತು ಮಾಡಿದರು.
ವಾಣಿಜ್ಯ ಮತ್ತು ಕೈಗಾರಿಕಾ ನಿರ್ದೇಶನಾಲಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ನಾಗಾಭರಣ ಅವರು, ನಿರ್ದೇಶನಾಲಯದ ಜಾಲತಾಣಗಳು ಕನ್ನಡದಲ್ಲಿಲ್ಲ. ಇದನ್ನು ಕೂಡಲೇ ಕನ್ನಡಕ್ಕೆ ಭಾಷಾಂತರಿಸಬೇಕು ಮತ್ತು ಕರ್ನಾಟಕ.ಗೋ.ಇನ್ ಗೆ ಮೈಗ್ರೇಡ್ ಆಗಬೇಕಿದೆ, ನಿರ್ದೇಶನಾಲಯದ ವ್ಯಾಪ್ತಿಯ ಇಲಾಖೆಗಳಲ್ಲಿ ಸರ್ಕಾರ ಕನ್ನಡ ಅನುಷ್ಠಾನವನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಆಯುಕ್ತರಿಗೆ ಸೂಚಿಸಿದರು.
ಸರ್ಕಾರ ಅಭಿವೃದ್ಧಿ ಪಡಿಸಿದ ನೂರಾರು ಎಕರೆ ಜಮೀನನ್ನು ಕಾರ್ಖಾನೆಗಳ ಸ್ಥಾಪನೆಗಾಗಿ ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ. ಆದರೆ ಉದ್ದಿಮೆ ಸ್ಥಾಪಿಸಿದ ಉದ್ದಿಮೆದಾರರು ಕನ್ನಡಿಗರನ್ನೇ ಕಡೆಗಣಿಸುವುದಲ್ಲದೆ, ಉದ್ಯೋಗದಲ್ಲಿರುವ ಕನ್ನಡಿಗರನ್ನು ಶೋಷಣೆ ಮಾಡುತ್ತಿವೆ. ಇದಕ್ಕೆ ಬಳ್ಳಾರಿಯ ಜಿಂದಾಲ್ ಮತ್ತು ಆಡುಗೋಡಿಯ ಬಾಷ್ ಕಂಪನಿಗಳು ತಕ್ಕ ಉದಾಹರಣೆ ಎಂದು ನಾಗಾಭರಣ ಬೇಸರ ವ್ಯಕ್ತಪಡಿಸಿದರು.
ಮುಖ್ಯಮಂತ್ರಿಗಳ ಇ-ಆಡಳಿತ ಸಲಹೆಗಾರರಾದ ಬೇಳೂರು ಸುದರ್ಶನ, ಕೈಗಾರಿಕೆ ಮತ್ತು ವಾಣಿಜ್ಯ  ನಿರ್ದೇಶನಾಲಯದ ಆಯುಕ್ತರಾದ ಶ್ರೀಮತಿ ಗುಂಜನ್ ಕೃಷ್ಣ,  ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಕೆ.ಮುರಳಿಧರ,  ಜಂಟಿ ನಿರ್ದೇಶಕರಾದ ಹೊಸಮನಿ, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಡಾ.ವೀರಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Key words: factories -employment -policy –Karnataka-Kannada Development Authority- Chairman -T.S Nagabarana
ಕರ್ನಾಟಕ ಭವನದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಯೋಗದಿಂದ ಪ್ರಗತಿ ಪರಿಶೀಲನಾ ಸಭೆ…
ನವದೆಹಲಿ  ಮಾ 5,2020(www.justkannada.in):  ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ  ಟಿ.ಎಸ್.ನಾಗಾಭರಣ ಅವರ ನೇತೃತ್ವದ ನಿಯೋಗದಿಂದ ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ನವದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತ ನಿಲಯ ಮಿತಾಶ್ ಅವರು ನಿಯೋಗವನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಬಳಿಕ ಕನ್ನಡ ಅನುಷ್ಠಾನದ ಕುರಿತು ಅಗತ್ಯ ಸಲಹೆ ಸೂಚನೆಗಳನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಯೋಗವು ನೀಡಿತು.
ಈ ಸಂದರ್ಭ ವಿಶೇಷ ನಿವಾಸಿ ಆಯುಕ್ತರಾದ ಮೀರಾ ಶ್ರೀವಾತ್ಸವ, ಕರ್ನಾಟಕ ಭವನದ   ಉಪ ನಿವಾಸಿ ಆಯುಕ್ತ ಹೆಚ್. ಪ್ರಸನ್ , ಉಪ ನಿವಾಸಿ ಆಯುಕ್ತ   ಬಿ.ವಿ.ವಿಠ್ಠಲ, ಕರ್ನಾಟಕ ಭವನದ ಅಧಿಕಾರಿ; ಸಿಬ್ಬಂದಿಯವರು ಉಪಸ್ಥಿತರಿದ್ದರು.
Key words: Progress- review- meeting -Kannada Development Authority- delegation – Karnataka Bhavan.