Khelo India University Games -2022 Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ -2022 : ರಾಷ್ಟ್ರಮಟ್ಟದಲ್ಲಿಯೇ ಅತ್ಯುತ್ತಮ ಸಂಘಟನಾ ಕ್ರೀಡಾಕೂಟ ಆಗಬೇಕು- ಡಾ. ಶಾಲಿನಿ ರಜನೀಶ್….
ಬೆಂಗಳೂರು ಏಪ್ರಿಲ್,5,2021(www.justkannada.in):  ದೇಶಕ್ಕೆ ಮಾದರಿ ಆಗುವ ರೀತಿಯಲ್ಲಿ ಕ್ರೀಡಾಕೂಟ ನಡೆಯಬೇಕು. ಅದಕ್ಕೆ ಬೇಕಾದ ಸಿದ್ಧತೆ ಈಗಿನಿಂದಲೆ ಶುರುವಾಗಬೇಕು. ಸಂಪೂರ್ಣ ಕ್ರಿಯಾಯೊಜನೆ ಸಿದ್ದಪಡಿಸಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಅವರು ನೀಡಿದ ಸೂಚನೆ ಹಿನ್ನೆಲೆಯಲ್ಲಿ ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ ನ ಪೂರ್ವ ಸಿದ್ದತಾ ಸಭೆ ಇಂದು ನಡೆಸಲಾಯಿತು.

ಕೇಂದ್ರ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಕಳೆದ ತಿಂಗಳು ಬೆಂಗಳೂರಿಗೆ ಆಗಮಿಸಿದ್ದ ವೇಳೆ ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ ನ ಎರಡನೇ ಆವೃತ್ತಿ ಬೆಂಗಳೂರಿನಲ್ಲಿ ನಡೆಸುವುದಾಗಿ ಘೋಷಿಸಿದ್ದರು. ಅಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಯುವಸಬಲೀಕರಣ ಮತ್ತು ಕ್ರೀಡೆ ಸಚಿವ ಡಾ. ನಾರಾಯಣಗೌಡ ಅವರೊಂದಿಗೂ ಚರ್ಚೆ ನಡೆಸಿದ್ದರು. ಆ ಹಿನ್ನೆಲೆಯಲ್ಲಿ ಇಂದು ಪೂರ್ವ ಸಿದ್ಧತೆ ಸಭೆ ನಡೆಸಲಾಯಿತು.

ಬೆಂಗಳೂರಿನ ಹಾರೋಹಳ್ಳಿಯಲ್ಲಿರುವ ಜೈನ್ ವಿಶ್ವವಿದ್ಯಾನಿಲಯದಲ್ಲಿ ಸರ್ಕಾರದ ಅಪರಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರ ನೇತೃತ್ವದಲ್ಲಿ ಪೂರ್ವ ಸಿದ್ದತಾ ನಡೆಯಿತು. 2022 ರಲ್ಲಿ ಬೆಂಗಳೂರಿನಲ್ಲಿ ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ ನಡೆಯಲಿದೆ. ರಾಷ್ಟ್ರಮಟ್ಟದಲ್ಲಿಯೇ ಅತ್ಯುತ್ತಮವಾದ ಸಂಘಟನಾ ಕ್ರೀಡಾಕೂಟ ಇದಾಗಬೇಕು. ಕ್ರೀಡೆ, ವಸತಿ, ಸಾರಿಗೆ ಸೇರಿದಂತೆ ಎಲ್ಲ ವಿಭಾಗದಲ್ಲೂ ಉತ್ಕೃಷ್ಟ ಮಟ್ಟದ ಸೇವೆ ನೀಡಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ಜೈನ್ ವಿವಿಯಲ್ಲಿಯೆ ವಿವಿಧ ಕ್ರೀಡೆಗೆ ಅವಕಾಶ ಇದೆ. ರಾಷ್ಟ್ರಮಟ್ಟದ ಕ್ರೀಡಾಕೂಟವಾಗಿರುವ ಕಾರಣ ಕೆಲವು ಕ್ರೀಡಾಂಗಣವನ್ನು ಉನ್ನತಮಟ್ಟಕ್ಕೆ ಏರಿಸಬೇಕು. ಕಂಠೀರವ ಕ್ರೀಡಾಂಗಣ ಸೇರಿದಂತೆ, ಬೇರೆ ಬೇರೆ ಕಡೆಗಳಲ್ಲಿ ಕ್ರೀಡಾಕೂಟ ಆಯೋಜನೆ ಬಗ್ಗೆ ಚರ್ಚಿಸಲಾಗಿದೆ. ಜೈನ್ ವಿವಿ ಉಪಕುಲಪತಿ ಡಾ. ಚೆನರಾಜ್ ರಾಯ್ಚಂದ್, ರಾಜ್ಯ ಸರ್ಕಾರದ ಸಹಕಾರದೊಂದಿಗೆ ಕ್ರೀಡಾಕೂಟ ಯಶಸ್ಸುಗೊಳಿಸುತ್ತೇವೆ. 8 ತಿಂಗಳ ಸಮಯಾವಕಾಶ ಮಾತ್ರ ಇದ್ದು, ಅಷ್ಟರೊಳಗೆ ಎಲ್ಲ ಸಿದ್ಧತೆ ಆಗಲಿದೆ ಎಂದು ಸಭೆಗೆ ಭರವಸೆ ನೀಡಿದರು. ಮೈದಾನವನ್ನು ಉನ್ನತೀಕರಣಗೊಳಸುವ ಕಾರ್ಯ ಸೇರಿದಂತೆ ಇನ್ನಿತರ ಕಾರ್ಯಗಳಿಗೆ ರಾಜ್ಯ ಸರ್ಕಾರದ ನೆರವನ್ನು ಜೈನ್ ವಿವಿ ಕೋರಿದ್ದು, ಪರಿಶೀಲಿಸಿ ಕ್ರಮ ತೆಗೆದುಕೊಳ್ಳುವುದಾಗಿ ಡಾ. ಶಾಲಿನಿ ರಜನೀಶ್ ಅವರು ತಿಳಿಸಿದರು.

ಯಾವುದೇ ಕುಂದು ಕೊರತೆ ಇರದಂತೆ ಅಂತಾರಾಷ್ಟ್ರೀಯ ಗುಣಮಟ್ಟದ ವ್ಯವಸ್ಥೆ ಆಗಬೇಕು. ಸುಮಾರು ಎರಡು ವಾರಗಳ ಕಾಲ ಕ್ರೀಡಾಕೂಟ ನಡೆಯಲಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನೇತೃತ್ವದಲ್ಲಿ ಜೈನ್ ಯುನಿವರ್ಸಿಟಿ ಸಹಭಾಗಿತ್ವದೊಂದಿಗೆ ಕ್ರೀಡಾಕೂಟ ನಡೆಯಲಿದೆ. ರಾಜ್ಯದಲ್ಲಿರುವ ಎಲ್ಲ ಕ್ರೀಡಾ ಸಂಸ್ಥೆಗಳ ಜೊತೆ ಸಭೆ ನಡೆಸಿ ಅಭೂತಪೂರ್ವವಾಗಿ ಕ್ರೀಡಾಕೂಟ ಆಯೋಜನೆ ಮಾಡಲು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಪ್ರಮುಖವಾಗಿ ಕ್ರೀಡಾಕೂಟದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗುತ್ತಿದೆ.  4 ಸಾವಿರಕ್ಕು ಹೆಚ್ಚು ಕ್ರೀಡಾಪಟುಗಳು ಆಗಮಿಸುತ್ತಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಕ್ರೀಡಾಕೂಟದ ವೀಕ್ಷಣೆಗೆ ಆಗಮಿಸುತ್ತಾರೆ. ಆದ್ದರಿಂದ ಊಟ, ವಸತಿ ಜೊತೆಗೆ ಮೂಲಭೂತ ಸೌಕರ್ಯ,  ವಾಹನ ಪಾರ್ಕಿಂಗ್ ವ್ಯವಸ್ಥೆ ಎಲ್ಲವು ಸಮರೋಪಾದಿಯಲ್ಲಿ ಆಗಬೇಕು ಎಂದು ಡಾ ಶಾಲಿನಿ ರಜನೀಶ್ ಹೇಳಿದರು.

ರಾಜ್ಯದ ಕ್ರೀಡಾಪ್ರತಿಭೆಗಳಿಗೆ ಇದೊಂದು ಉತ್ತಮ ವೇದಿಕೆಯಾಗಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಕ್ರೀಡಾಕೂಟದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಹೆಸರು ತರಬೇಕು. ಆ ನಿಟ್ಟಿನಲ್ಲಿ ಕ್ರೀಡಾಪಟುಗಳು ಈಗಿನಿಂದಲೆ ಸಿದ್ದತೆ ನಡೆಸಬೇಕು. ಅಲ್ಲದೆ ಉನ್ನತ ಶಿಕ್ಷಣ ಇಲಾಖೆ ಜೊತೆಯೂ ಚರ್ಚಿಸಲಾಗುವುದು ಎಂದು ಡಾ. ಶಾಲಿನಿ ರಜನೀಶ್ ಹೇಳಿದರು. ಸಭೆ ಬಳಿಕ  ವಿವಿ ಆವರಣದಲ್ಲಿರುವ ವಿವಿಧ ಕ್ರೀಡಾಂಗಣಗಳನ್ನು ವೀಕ್ಷಿಸಲಾಯಿತು.

Key words: Khelo India University Games -2022-best organizational -sport – national level- Dr. Shalini Rajneesh.

The post ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ -2022 : ರಾಷ್ಟ್ರಮಟ್ಟದಲ್ಲಿಯೇ ಅತ್ಯುತ್ತಮ ಸಂಘಟನಾ ಕ್ರೀಡಾಕೂಟ ಆಗಬೇಕು- ಡಾ. ಶಾಲಿನಿ ರಜನೀಶ್…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.