Medical Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಆರೋಗ್ಯ ಸಮಸ್ಯೆಯಿರುವ ಅಂಗನವಾಡಿ, ಶಾಲಾ ಮಕ್ಕಳಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಕಲ್ಪಿಸಿ-ಎಸ್.ಯುಕೇಶ್ ಕುಮಾರ್
ಮೈಸೂರು,ಜುಲೈ,15,2025 (www.justkannada.in): ಆರ್.ಬಿ.ಎಸ್.ಕೆ. ಕಾರ್ಯಕ್ರಮದ ಪ್ರಗತಿ ಉತ್ತಮಗೊಳಿಸಲು ಮತ್ತು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಅಂಗನವಾಡಿ ಹಾಗೂ ಶಾಲಾ ಮಕ್ಕಳಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಹಲವು ಕ್ರಮಗಳನ್ನು ಕೈಗೊಳ್ಳಬೇಕು, ಹೆಚ್ಚಿನ ಚಿಕಿತ್ಸೆಗೆ ರೆಫರ್ ಮಾಡಲಾದ ಮಕ್ಕಳನ್ನು ಸೂಕ್ತ ಫಾಲೋ ಅಪ್ ಮಾಡುವುದು ಮತ್ತು ಚಿಕಿತ್ಸೆಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಲು ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್.ಯುಕೇಶ್ ಕುಮಾರ್ ಅವರು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಅನುಭವ ಮಂಟಪ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಎಸ್.ಯುಕೇಶ್ ಕುಮಾರ್ ಮಾತನಾಡಿದರು.

ಹೃದಯ ಸಂಬಂಧ ಖಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉತ್ತಮ ವೈದ್ಯಕೀಯ ಸೇವೆ ಮತ್ತು ಶಸ್ತ್ರ ಚಿಕಿತ್ಸೆ ನಡೆಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಶಾಲಾ ಮತ್ತು ಅಂಗನವಾಡಿ ಕೇಂದ್ರಗಳಲ್ಲಿನ ಮಕ್ಕಳಲ್ಲಿ ಆರೋಗ್ಯ ತಪಾಸಣೆ ನಡೆಸಿ ಶೀಘ್ರ ಪತ್ತೆ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಮಕ್ಕಳಲ್ಲಿ ಕಂಡು ಬರುವ ನ್ಯೂನತೆ ಮತ್ತು ಖಾಯಿಲೆಗಳನ್ನು(Early Detection and Management of 4D’s)ವೈದ್ಯಕೀಯ ಹಾಗೂ ಶಸ್ತ್ರಚಿಕಿತ್ಸೆಯನ್ನು ನೀಡಿ ಗುಣಪಡಿಸುವುದು ಈ ಮೂಲಕ ಶಿಶು ಮರಣ ಪ್ರಮಾಣವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ತಿಳಿಸಿದರು.

ಶಿಶು ಮರಣ ಪ್ರಕರಣಗಳಲ್ಲಿ ತಡೆಗಟ್ಟಬಹುದಾದ (preventable ) ಪ್ರಕರಣಗಳನ್ನು ಕಡಿಮೆ ಪ್ರಮಾಣಕ್ಕೆ ಇಳಿಸಲು ಪರಿಸ್ಥಿತಿ ಅನುಗುಣವಾಗಿ ಅಗತ್ಯ ತುರ್ತು ಕ್ರಮ ಕೈಗೊಳ್ಳಬೇಕಾಗಿದೆ. ಶಿಶು ಮರಣ ಪ್ರಕರಣಗಳ ತಾಲ್ಲೂಕುವಾರು ಸಂಪೂರ್ಣ ಮಾಹಿತಿಯನ್ನು ತಾಲ್ಲೂಕು ಆರೋಗ್ಯಾಧಿಕಾರಿಗಳಿಂದ Facility & community levelDrmï ನಡೆಸಿ ಸ್ಪಷ್ಟ ಅಭಿಪ್ರಾಯದೊಂದಿಗೆ ವರದಿಯನ್ನು ಸಲ್ಲಿಸಲು ಸೂಚಿಸಿದರು.

ತಾಯಿ ಮರಣ ಪ್ರಕರಣಗಳಲ್ಲಿ ಜಿಲ್ಲಾ ಮಟ್ಟದ ಟೆಕ್ನಿಕಲ್ ಎಕ್ಸಫರ್ಟ್ ಕಮಿಟಿಯ ಸ್ಪಷ್ಟ ಅಭಿಪ್ರಾಯದ ವರದಿ ಪಡೆದು ಆ ವರದಿಯ ಆಧಾರದ ಮೇಲೆ ತಪ್ಪಿತಸ್ಥರ ವಿರುದ್ದ ಕ್ರಮಕೈಗೊಳ್ಳಲು ಇಲಾಖಾ ಅಧಿಕಾರಿಗಳಿಗೆ ತಿಳಿಸಿದರು. ಕಾಯಕಲ್ಪ ಕಾರ್ಯಕ್ರಮದ ಪ್ರಗತಿಯಲ್ಲಿ 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಶೇ 100% ಗುರಿ ಸಾಧಿಸಲು ಸೂಚಿಸಿದರು.

ಎಲ್ಲಾ ಆರೋಗ್ಯ ಕೇಂದ್ರಗಳು ಯಾವ ತಾಲ್ಲೂಕು ಮತ್ತು ಯಾವ ಸಂಸ್ಥೆಗಳಲ್ಲಿ ಬಾಕಿ ಇದೆ ಎಂದು ಪರಿಶೀಲಿಸಿ ಮುಂದಿನ ಮೂರು ತಿಂಗಳ ಅವಧಿಯಲ್ಲಿ ಅಂತರಿಕ, ರಾಜ್ಯ ಮತ್ತು ರಾಷ್ಟ್ರೀಯ ಮೌಲ್ಯಮಾಪನದಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಲು ಕ್ರಮವಹಿಸುವಂತೆ ಎಲ್ಲಾ ತಾಲ್ಲೂಕು ಆರೋಗ್ಯಾಧಿಕಾರಿಗಳು ಮತ್ತು ಸಂಬoಧಪಟ್ಟ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ಸೂಚಿಸುವಂತೆ ನಿರ್ದೇಶನ ನೀಡಿದರು.

ಗ್ರಾಮ ಪಂಚಾಯತ್ ನಲ್ಲಿ ನಡೆಯುವ ಪಿ.ಡಿ.ಒಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಕುರಿತು ಚರ್ಚಿಸಿ ಮತ್ತು ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಕಂದಾಯ ಅಧಿಕಾರಿಗಳ ಮಾಸಿಕ ಸಭೆಯಲ್ಲಿ ಜಿಲ್ಲಾ ಸರ್ವೆಕ್ಷಣಾಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ಸಂಬಂಧಪಟ್ಟ ವೈದ್ಯಾಧಿಕಾರಿಗಳು ಭಾಗವಹಿಸಲು ಸೂಚಿಸಿದರು. ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ವೈದ್ಯಕೀಯ ಘನ ಬಯೋ ಮೆಡಿಕಲ್ ತ್ಯಾಜ್ಯ ವಸ್ತುಗಳ ವಿಲೇವಾರಿ ನಿರ್ವಹಣೆ ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿ ಅನುಸಾರ ಕ್ರಮವಹಿಸಲು ಸೂಚಿಸಿದರು.

ಸಮಗ್ರ ರೋಗಗಳ ಸರ್ವೇಕ್ಷಣಾ ಕಾರ್ಯಕ್ರಮ (IDSP)ದಡಿ ಕೋವಿಡ್, Influenza H1N1,, ನಾಯಿ ಕಡಿತ ಮತ್ತು ಹಾವು ಕಡಿತ ಪ್ರಕರಣಗಳ ವದರಿಯಾದ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಕೊಳ್ಳಲು ಸೂಚಿಸಿದರು.

ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ (NTEP):- NTEP ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯಲ್ಲಿನ ಟಿ.ಬಿ ಘಟಕಗಳ 2025ರ ಜನವರಿ ಮಾಹೆಯಿಂದ ಜೂನ್ ಅಂತ್ಯದವರೆಗಿನ ಪ್ರಗತಿ ಪರಿಶೀಲನೆ ನಡೆಸಿ ಜಿಲ್ಲೆಯಲ್ಲಿ ಈವರೆಗೂ 75, ಮರಣ ಹೊಂದಿದ್ದು ಶೇ.7 ರಷ್ಟು ಪ್ರಮಾಣದಲ್ಲಿದ್ದು ಇದು ಹೆಚ್ಚಾಗಿರುತ್ತದೆ. ಶೇ. 5 ರೊಳಗಿರಬೇಕು. 75 ಟಿಬಿ ಸಾವಿನ ಪ್ರಕರಣಗಳ  ಡೆತ್ ಅಡಿಟ್ ವರದಿಯನ್ನು ವೈದ್ಯಾಧಿಕಾರಿಗಳ ದೃಢೀಕರಣದೊಂದಿಗೆ ಎಸ್.ಟಿ,ಎಸ್ ಸಿಬ್ಬಂದಿಗಳು ಕಛೇರಿಗೆ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ತಿಳಿಸಿದರು.

ರಾಷ್ಟ್ರೀಯ ಕುಷ್ಠರೋಗ ನಿಯಂತ್ರಣ ಕಾರ್ಯಕ್ರಮದಡಿ ಸರ್ವೇಕ್ಷಣಾ ಕಾರ್ಯ ಚಟುವಟಿಕೆಯು ಪ್ರತಿ ಬುಧವಾರದಂದು ಕ್ಷೇತ್ರ ಮಟ್ಟದಲ್ಲಿ ಕಾರ್ಯ ಪ್ರವೃತ್ತವಾಗಿದ್ದು ಅದರಂತೆ ಮೈಸೂರು ಜಿಲ್ಲೆಯಲ್ಲಿ ಪ್ರಸ್ತುತ ಒಟ್ಟು 78 ಪ್ರಕರಣಗಳು ದೃಢಪಟ್ಟಿರುತ್ತವೆ. ಈ ಪೈಕಿ ತಿ. ನರಸೀಪುರ ಹಾಗೂ ನಂಜನಗೂಡು ಮತ್ತು ಮೈಸೂರಿನ ಕೆಲವು ಕ್ಷೇತ್ರಗಳಲ್ಲಿ ಹೆಚ್ಚಿನ ಪ್ರಕರಣಗಳು ಕಂಡು ಬರುತ್ತಿದ್ದು ಈ ಹಿನ್ನೆಲೆಯಲ್ಲಿ ಸಂಬoಧಪಟ್ಟ ವೈದ್ಯಾಧಿಕಾರಿಗಳು ಆದ್ಯತೆಯ ಮೇರೆಗೆ ಸರ್ವೇಕ್ಷಣಾ ಕಾರ್ಯ ಚಟುವಟಿಕೆಯನ್ನು ತ್ವರಿತಗೊಳಿಸಿ ಸಂಶಯಾತ್ಮಕ ಪ್ರಕರಣಗಳನ್ನು ಜಿಲ್ಲಾ ಮಟ್ಟಕ್ಕೆ ತುರ್ತಾಗಿ ವರದಿ ಮಾಡಲು ಎಂದು ಹೇಳಿದರು.

ಮಾನಸಿಕ ಆರೋಗ್ಯ ಕಾರ್ಯಕ್ರಮಮದಡಿಯಲ್ಲಿ ಅನುಷ್ಠಾನವಾಗುತ್ತಿರುವ ಮನೋಚೈತನ್ಯ ಸಲಹಾ ಕೇಂದ್ರವನ್ನು ಪ್ರತಿ ಮಂಗಳವಾರದಂದು ಕಡ್ಡಾಯವಾಗಿ ನಿರ್ವಹಿಸುವುದು ಹಾಗೂ ಸಂಬಂಧಪಟ್ಟ ಪೋಟೊ ಪ್ರತಿಗಳನ್ನು ವಾಟ್ಸ್ ಆಪ್ ಮೂಲಕ ಹಂಚಿಕೊಳ್ಳಬೇಕು. ಎಲ್ಲಾ ವೃಂದದ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಸಿಬ್ಬಂದಿಗಳು ಕಡ್ಡಾಯವಾಗಿ KAMS ಮೂಲಕ ಶೇ.100 ಹಾಜರಾತಿಯನ್ನು ನಿರ್ವಹಿಸಲು ಸೂಚಿಸಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳು, ಮೈಸೂರು. ಜಿಲ್ಲಾ ಕ್ಷಯರೋಗ ನಿವಾರಣಾಧಿಕಾರಿಗಳು, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳು, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳು, ಜಿಲ್ಲಾ ಕಾಲರ ನಿಯಂತ್ರಣಾಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು, ಸೇರಿದಂತೆ ಜಿಲ್ಲಾ ಆರೋಗ್ಯ ಮೇಲ್ವಿಚಾರಣಾಧಿಕಾರಿಗಳು, ಜಿಲ್ಲಾ ಶುಶ್ರೂಷಣಾಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Key words:  medical, facilities, Anganwadi, school, children, Mysore, S. Yukesh Kumar

The post ಆರೋಗ್ಯ ಸಮಸ್ಯೆಯಿರುವ ಅಂಗನವಾಡಿ, ಶಾಲಾ ಮಕ್ಕಳಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಕಲ್ಪಿಸಿ-ಎಸ್.ಯುಕೇಶ್ ಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೆಡಿಕಲ್ ಕಾಲೇಜು ಹಾಸ್ಟೆಲ್ ಮೇಲೆಯೇ ಬಿದ್ದ ವಿಮಾನ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವು ಶಂಕೆ
ಅಹಮದಾಬಾದ್ ,ಜೂನ್,12,2025 (www.justkannada.in):  ಇಂದು ಗುಜರಾತಿನ ಅಹಮದಾಬಾದ್ ನಲ್ಲಿ ಏರ್ ಪೋರ್ಟ್  ಬಳಿ ಮೇಘನಿ ನಗರದಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡ ದುರಂತದಲ್ಲಿ ಇದೀಗ 20ಕ್ಕೂ ಹೆಚ್ಚು ಮೆಡಿಕಲ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಹೌದು ಪತನಗೊಂಡ ಏರ್ ಇಂಡಿಯಾ ವಿಮಾನ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ನಲ್ಲಿ ಬಿದ್ದಿದೆ. ಈ ಘಟನೆಯಲ್ಲಿ 20 ಮೆಡಿಕಲ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ  ವ್ಯಕ್ತವಾಗಿದೆ. ಮೇಘನಿ ನಗರದಲ್ಲಿರುವ ಬಿಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಮೇಲೆ ಏರ್ ಇಂಡಿಯಾ ವಿಮಾನ ಅಪ್ಪಳಿಸಿದೆ.

ಹಾಸ್ಟೆಲ್ ನಲ್ಲಿದ್ದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತಪಟ್ಟ ಶಂಕೆ ವ್ಯಕ್ತವಾಗಿದೆ.  ಇನ್ನು ಬೆಂಕಿಯ ಕೆನ್ನಾಲಿಗೆ ಹಾಸ್ಟೆಲ್ ನ ಎರಡು ಕಟ್ಟಡ  ಹೊತ್ತಿ ಉರಿದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳು ಊಟಕ್ಕೆಂದು ಬಂದಾಗ ಈ ದುರಂತ ಸಂಭವಿಸಿದೆ.

Key words: Plane, crashes, medical,  college hostel, Ahmedabad

The post ಮೆಡಿಕಲ್ ಕಾಲೇಜು ಹಾಸ್ಟೆಲ್ ಮೇಲೆಯೇ ಬಿದ್ದ ವಿಮಾನ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವು ಶಂಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವೈದ್ಯಕೀಯ, ದಂತ ವೈದ್ಯಕೀಯ ಶಿಕ್ಷಣ ಶುಲ್ಕ ಹೆಚ್ಚಳವಿಲ್ಲ- ಸಚಿವ ಶರಣ ಪ್ರಕಾಶ್ ಪಾಟೀಲ್
ಬೆಂಗಳೂರು, ಮೇ, 17,2025 (www.justkannada.in): ಖಾಸಗಿ ವೈದ್ಯಕೀಯ ಕಾಲೇಜುಗಳ ಒತ್ತಡದ ಹೊರತಾಗಿಯೂ, ಮುಂದಿನ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ ಗಳ ಶುಲ್ಕ ವಿಚಾರದಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ.

ಈ ವಿಷಯವನ್ನು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಖಾಸಗಿ ವೈದ್ಯಕೀಯ ಕಾಲೇಜು ಹಾಗೂ ದಂತ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಈ ವಿಷಯವನ್ನು ಶನಿವಾರ ಸ್ಪಷ್ಟಪಡಿಸಿದರು.

ಖಾಸಗಿ ಕಾಲೇಜುಗಳು 10% ರಿಂದ 15% ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ದವು. ಆದರೆ ರಾಜ್ಯ ಸರ್ಕಾರದ ಕಳೆದ ವರ್ಷ 10% ಹೆಚ್ಚಳಕ್ಕೆ ಅನುಮತಿ ನೀಡಿತ್ತು. ಆದರೆ ಈ ವರ್ಷ ಯಾವುದೇ ಹೆಚ್ಚಳಕ್ಕೆ ಅವಕಾಶವಿಲ್ಲ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಈ ವಿಷಯವನ್ನು ಸಭೆಯಲ್ಲಿ ಪ್ರಸ್ತಾಪಿಸಿದಾಗ ಕೂಡಲೇ ಪ್ರತಿಕ್ರಿಯೆ ನೀಡಿದ ಸಚಿವ ಶರಣ ಪ್ರಕಾಶ್‌ ಪಾಟೀಲ್‌, ಕಳೆದ ವರ್ಷ 10% ಶುಲ್ಕ ಹೆಚ್ಚಳವಾಗಿತ್ತು. ಈ ವರ್ಷದಲ್ಲಿ ಯಾವುದೇ ಹೆಚ್ಚಳವಿಲ್ಲ. ಈ ಕುರಿತು ಒಪ್ಪಂದಕ್ಕೆ ಅತಿ ಶೀಘ್ರದಲ್ಲೇ ಸಹಿ ಹಾಕಲಾಗುವುದು ಎಂದು ತಿಳಿಸಿದ್ದಾರೆ.

ENGLISH SUMMARY…

No Hike in Medical, Dental Education Fees: Dr. Sharan Prakash Patil

Government Stands Firm Against Pressure from Private Institutions, Maintains Status Quo

Bengaluru, May 17: In a significant announcement, the Karnataka state government has declared that there will be no increase in fee structure for medical and dental courses in the upcoming academic year, despite pressure from private medical colleges.

After holding a meeting with office bearers of private medical and dental college managements, minister for medical education, skill development, livelihood and the district in-charge minister for Raichur Dr. Sharan Prakash Patil made this clarification on Saturday.

Private colleges had appealed for a 10% to 15% hike in fees. However, the minister stated that although the government had allowed a 10% increase last year, no fee hike will be permitted this year.

Responding promptly to the matter raised during the meeting, minister Patil reiterated that last year’s 10% hike was sufficient and emphasized that there will be no fee hike this year. He added that an agreement formalizing this decision will be signed soon.

Key words: No Hike, Medical, Dental Education, Fees, Dr. Sharan Prakash Patil

The post ವೈದ್ಯಕೀಯ, ದಂತ ವೈದ್ಯಕೀಯ ಶಿಕ್ಷಣ ಶುಲ್ಕ ಹೆಚ್ಚಳವಿಲ್ಲ- ಸಚಿವ ಶರಣ ಪ್ರಕಾಶ್ ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪಿಜಿ ವೈದ್ಯಕೀಯ: ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ: ತಮ್ಮ ಆಯ್ಕೆ ದಾಖಲಿಸಲು ಫೆ.24 ಕೊನೆ ದಿನ
ಬೆಂಗಳೂರು,ಫೆಬ್ರವರಿ,21,2025 (www.justkannada.in): 2024ನೇ ಸಾಲಿನ  ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭವಾಗಿದ್ದು, ಇಚ್ಛೆ/ಆಯ್ಕೆಗಳನ್ನು (ಆಪ್ಷನ್‌) ದಾಖಲಿಸಲು ಫೆ.24ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ತಿಳಿಸಿದ್ದಾರೆ.

ಮಾಪ್‌ ಅಪ್‌ ಸುತ್ತಿನ  ಸೀಟು ಹಂಚಿಕೆ ನಂತರ ರದ್ದುಪಡಿಸಿಕೊಂಡ ಸೀಟು ಹಾಗೂ ಹಂಚಿಕೆಯಾಗದೆ ಉಳಿದಿರುವ ಸೀಟುಗಳನ್ನು ಸ್ಟ್ರೇ ವೇಕೆನ್ಸಿ ಸುತ್ತಿನಲ್ಲಿ ಹಂಚಿಕೆ ಮಾಡಲಾಗುತ್ತಿದೆ. ಈ ಸುತ್ತಿನಲ್ಲಿ ಭಾಗವಹಿಸಲು ಇಚ್ಛಿಸುವವರು ಮುಂಗಡವಾಗಿ 5 ಲಕ್ಷ ರೂಪಾಯಿ (ಕಾಷನ್‌ ಡೆಪಾಸಿಟ್‌) ಪಾವತಿಸಬೇಕು ಎಂದು ಅವರು ವಿವರಿಸಿದ್ದಾರೆ.

ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಫೆ.24ರ ರಾತ್ರಿ  8ಕ್ಕೆ ಪ್ರಕಟಿಸಲಾಗುತ್ತದೆ. ಫೆ.25ರಂದು ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಶುಲ್ಕ ಪಾವತಿಸಿ, ಕಾಲೇಜಿಗೆ ವರದಿ ಮಾಡಿಕೊಳ್ಳಲು ಫೆ.28 ಕೊನೆ ದಿನ. ಎಂಸಿಸಿ ಸೂಚನೆ ಅನ್ವಯ  ಈ ದಿನಾಂಕ‌ ವಿಸ್ತರಣೆ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಸೀಟು ಹಂಚಿಕೆ  ನಂತರ ಮುಂಗಡ ಹಣವನ್ನು ಶುಲ್ಕದ ಜತೆ ಹೊಂದಾಣಿಕೆ ಮಾಡಲಾಗುತ್ತದೆ. ಸೀಟು ಹಂಚಿಕೆ ನಂತರ ಶುಲ್ಕ ಪಾವತಿಸಿ, ಕಾಲೇಜಿಗೆ ಪ್ರವೇಶ ಪಡೆಯದಿದ್ದಲ್ಲಿ ಮುಂಗಡ ಹಣ ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ. ಅಲ್ಲದೆ, ದಂಡ ಕೂಡ ವಿಧಿಸಲಾಗುತ್ತದೆ. ಅಂತಹವರನ್ನು ಮುಂದಿನ ವರ್ಷದ ಎಂಸಿಸಿ ಕೌನ್ಸೆಲಿಂಗ್‌ ಸೇರಿದಂತೆ ಪಿಜಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನಿರ್ಬಂಧಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಕೆಇಎ ಅಥವಾ ಎಂಸಿಸಿಯಿಂದ ಅಥವಾ ಇತರೆ ರಾಜ್ಯಗಳಲ್ಲಿ ಮೊದಲ ಅಥವಾ ಎರಡನೇ ಸುತ್ತಿನಲ್ಲಿ ಹಂಚಿಕೆಯಾದ ಸೀಟನ್ನು ಇಟ್ಟುಕೊಳ್ಳದೇ ಇರುವವರು ಮತ್ತು ಎಂಸಿಸಿಯ ಮೂರನೇ ಅಥವಾ ಸ್ಟ್ರೇ ವೇಕೆನ್ಸಿ ಸುತ್ತಿನಲ್ಲಿ ಸೀಟು ಹಂಚಿಕೆಯಾಗದಿರುವವರು ಮಾತ್ರ ಈ ಸುತ್ತಿನಲ್ಲಿ ಭಾಗವಹಿಸಬಹುದು. ಕೆಇಎ ಮೂಲಕ ಪ್ರೀ ಕ್ಲಿನಿಕಲ್‌/ ಪ್ಯಾರಾ ಕ್ಲಿನಿಕಲ್‌ ಸೀಟು ಪಡೆದವರೂ ಭಾಗವಹಿಸಬಹುದು ಎಂದು ಅವರು ವಿವರಿಸಿದ್ದಾರೆ.

ಮಾಪ್‌ ಅಪ್‌ ಸುತ್ತಿನಲ್ಲಿ ಹಂಚಿಕೆಯಾದ ಸೀಟಿಗೆ ಶುಲ್ಕ ಪಾವತಿಸಿ, ಕಾಲೇಜಿನಲ್ಲಿ ಪ್ರವೇಶ ಪಡೆದಿರುವ ಮತ್ತು ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಸುತ್ತಿನಲ್ಲಿ ಇನ್ನೂ ಉತ್ತಮ ಸೀಟಿಗೆ ಸೇರಲು ಆಸಕ್ತಿ ಇರುವವರು ತಮ್ಮ ಭಾಗವಹಿಸುವಿಕೆಯನ್ನು ದೃಢೀಕರಿಸಲು ಫೆ.23ರೊಳಗೆ ಮತ್ತೊಮ್ಮೆ 500 ರೂಪಾಯಿ ಪಾವತಿಸಿ ಹೊಸದಾಗಿ ನೋಂದಣಿ ಮಾಡಿಕೊಳ್ಳಬೇಕು. ಹೈಕೋರ್ಟ್ ಆದೇಶದಂತೆ ಈ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಮಾಪ್‌ ಅಪ್‌ ಸುತ್ತಿನಲ್ಲಿ ಹಂಚಿಕೆಯಾಗಿರುವ ಸೀಟು ಕೊನೆಯ ಇಚ್ಛೆ/ಆಯ್ಕೆ ಆಗಿರುತ್ತದೆ. ಅಭ್ಯರ್ಥಿಗಳು ಹೊಸದಾಗಿ ದಾಖಲಿಸುವ ಮೇಲ್ಪಟ್ಟ ಆದ್ಯತೆಗಳಲ್ಲಿ ಯಾವುದೇ ಸೀಟುಗಳು ಹಂಚಿಕೆಯಾದಲ್ಲಿ, ಹಂಚಿಕೆಯಾಗುವ ಸೀಟಿಗೆ ಪ್ರವೇಶ ಪಡೆಯಬೇಕು ಮತ್ತು ಮಾಪ್‌ ಅಪ್‌ ಸುತ್ತಿನ ಪ್ರಸ್ತುತ ಹೊಂದಿರುವ ಸೀಟು ತಂತಾನೆ ರದ್ದಾಗುತ್ತದೆ. ಒಂದು ವೇಳೆ ಯಾವುದೇ ಸೀಟು ಹಂಚಿಕೆಯಾಗದೆ ಇದ್ದಲ್ಲಿ, ಮಾಪ್‌ ಅಪ್‌ ಸುತ್ತಿನಲ್ಲಿ ಹಂಚಿಕೆಯಾದ ಸೀಟೇ ಉಳಿಯುತ್ತದೆ ಎಂದು ಅವರು ವಿವರಿಸಿದ್ದಾರೆ.

ಅಭ್ಯರ್ಥಿಗಳು ಇಚ್ಛೆ/ಆಯ್ಕೆಗಳನ್ನು ಹೊಸದಾಗಿ ಆದ್ಯತಾ ಕ್ರಮದಲ್ಲಿ ದಾಖಲಿಸಬೇಕು. ಈ ಸಂದರ್ಭದಲ್ಲಿ ಶುಲ್ಕದ ವಿನ್ಯಾಸವನ್ನು ಕಡ್ಡಾಯವಾಗಿ ನೋಡಬೇಕು. ಸೀಟು ಹಂಚಿಕೆ ಫಲಿತಾಂಶದ ನಂತರ ಸೀಟು ರದ್ದುಪಡಿಸಿಕೊಂಡರೆ ವಿಧಿಸುವ ದಂಡದ ವಿವರಗಳನ್ನು ಗಮನದಲ್ಲಿ ಇಟ್ಟುಕೊಂಡೇ ಇಚ್ಛೆ/ಆಯ್ಕೆಗಳನ್ನು ನಮೂದಿಸಬೇಕು ಎಂದೂ ಅವರು ಸಲಹೆ ನೀಡಿದ್ದಾರೆ.

Key words: PG, Medical,  Seat allocation, stray vacancy round

The post ಪಿಜಿ ವೈದ್ಯಕೀಯ: ಸ್ಟ್ರೇ ವೇಕೆನ್ಸಿ ಸುತ್ತಿನ  ಸೀಟು ಹಂಚಿಕೆ: ತಮ್ಮ ಆಯ್ಕೆ ದಾಖಲಿಸಲು  ಫೆ.24 ಕೊನೆ ದಿನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಎಲ್ಲಾ ಎಸ್ಕಾಂ ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ: ಸಚಿವ ಕೆ.ಜೆ.ಜಾರ್ಜ್
ಬೆಂಗಳೂರು, ಜನವರಿ, 7, 2025 (www.justkannada.in):  ಇಂಧನ ಇಲಾಖೆ ಸಿಬ್ಬಂದಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಕಲ್ಪಿಸುವ ಸೌಲಭ್ಯವನ್ನು ಎಲ್ಲಾ ವಿದ್ಯುತ್ ಸರಬರಾಜು ಕಂಪನಿ (ಎಸ್ಕಾಂ) ಗಳಲ್ಲಿ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚಿಸಿದ್ದಾರೆ.

ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ ಇಂಜಿನಿಯರ್‌ ಗಳ ಸಂಘದ ವಜ್ರಮಹೋತ್ಸವ ಸಂವಹನ ಉಪನ್ಯಾಸ ಹಾಗೂ ಸಂಘದ 2025ನೇ ಸಾಲಿನ ತಾಂತ್ರಿಕ ದಿನಚರಿ ಬಿಡುಗಡೆ ಸಮಾರಂಭ ಉದ್ಘಾಟಿಸಿ, ತಾಂತ್ರಿಕ ದಿನಚರಿ ಮತ್ತು ಕ್ಯಾಲೆಂಡರ್ ಬಿಡುಗಡೆ ಮಾಡಿ ಸಚಿವ ಕೆ.ಜೆ ಜಾರ್ಜ್  ಅವರು ಮಾತನಾಡಿದರು.

ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಕಂಪನಿ (ಸೆಸ್ಕ್) ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಕಲ್ಪಿಸಲಾಗಿದೆ. ಇತರೆ ಎಸ್ಕಾಂಗಳಲ್ಲೂ ಶೀಘ್ರವೇ ಈ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಕಾರ್ಯಕ್ರಮದಲ್ಲಿ ಹಾಜರಿದ್ದ ಎಸ್ಕಾಂಗಳ ಅಧ್ಯಕ್ಷರೂ ಆಗಿರುವ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ ಅವರಿಗೆ ಸೂಚನೆ ನೀಡಿದರು.

“ಇಲಾಖೆಯಲ್ಲಿ ಹಿರಿತನದ ಆಧಾರದ ಮೇಲೆ ಬಡ್ತಿ, ಹುದ್ದೆಗಳ ಭರ್ತಿ, ಹಳೇ ಪಿಂಚಣಿ ವ್ಯವಸ್ಥೆ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅದೇ ರೀತಿ ಇಲಾಖೆ ಪ್ರಗತಿ ಜತೆಗೆ ಜನರಿಗೆ ಸಮರ್ಪಕ ವಿದ್ಯುತ್ ಪೂರೈಸಲು ಶ್ರಮಿಸುತ್ತಿರುವ ಇಂಧನ ಇಲಾಖೆಯ ಅಧಿಕಾರಿಗಳು, ನೌಕರರ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ತಮ್ಮ ಸರ್ಕಾರ ಬದ್ಧವಾಗಿದೆ” ಎಂದು ಹೇಳಿದರು.

ಕುಸುಮ್ ಯೋಜನೆ ತ್ವರಿತಗೊಳಿಸಿ:

“ರೈತರಿಗೆ ಸೌರ ಪಂಪ್ ಸೆಟ್ ಗಳನ್ನು ಒದಗಿಸುವ ಕುಸುಮ್-ಬಿ ಯೋಜನೆ ಜತೆಗೆ ಫೀಡರ್ ಮಟ್ಟದ ಸೌರೀಕರಣ ಮೂಲಕ ರೈತರ ಪಂಪ್‍ ಸೆಟ್‍ಗಳಿಗೆ ಸೌರ ಶಕ್ತಿಯಿಂದ ವಿದ್ಯುತ್ ಸರಬರಾಜು ಮಾಡುವ ಕುಸುಮ್- ಸಿ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಮೊದಲ ಹಂತದ ಯೋಜನೆ ಪ್ರಗತಿಯಲ್ಲಿದ್ದು, 2ನೇ ಹಂತದಲ್ಲಿ ಫೀಡರ್ ಮಟ್ಟದ ಸೌರೀಕರಣ ಮೂಲಕ 1200 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಿ ರೈತರಿಗೆ ನೀಡಲು ನಿರ್ಧರಿಸಲಾಗಿದೆ. ಈ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಿದರೆ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಬಹುತೇಕ ಬಗೆಹರಿಯುತ್ತದೆ. ಆದ್ದರಿಂದ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಹೆಚ್ಚು ಆದ್ಯತೆ ನೀಡಬೇಕು”, ಎಂದು ಅಧಿಕಾರಿಗಳು ಮತ್ತು ಸಿಬ್ಬಂದಿಯಲ್ಲಿ ಮನವಿ ಮಾಡಿದರು.

ಇಂಧನ ಶೇಖರಣೆಗೆ ಆದ್ಯತೆ:

“ವಿದ್ಯುತ್ ಉತ್ಪಾದನೆ ಜತೆಗೆ ಅದನ್ನು ಶೇಖರಣೆ ಮಾಡಿ ಅಗತ್ಯ ಸಂದರ್ಭದಲ್ಲಿ ಜನರಿಗೆ ಒದಗಿಸಲು ನಮ್ಮ ಸರ್ಕಾರ ಯೋಜನೆ ರೂಪಿಸಿದೆ. ಅದರಂತೆ ಶರಾವತಿಯಲ್ಲಿ 2000 ಮೆಗಾವ್ಯಾಟ್ ಮತ್ತು ವಾರಾಹಿಯಲ್ಲಿ 1500 ಮೆಗಾವ್ಯಾಟ್ ಸಾಮರ್ಥ್ಯದ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಸೋಲಾರ್ ವಿದ್ಯುತ್ ಉತ್ಪಾದನೆ ಹೆಚ್ಚಿದಂತೆ ಶೇಖರಣಾ ವ್ಯವಸ್ಥೆಯ ಅಗತ್ಯವಿದ್ದು, ಇದಕ್ಕೆ ನಮ್ಮ ಸರ್ಕಾರ ಆದ್ಯತೆ ನೀಡಲಿದೆ”, ಎಂದು ತಿಳಿಸಿದರು.

ಸೆಸ್ಕ್ ಅಧ್ಯಕ್ಷ ಎ.ರಮೇಶ್ ಬಂಡಿಸಿದ್ದೇಗೌಡ, ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಮಪೀರ್ ಎಸ್. ಖಾದ್ರಿ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಪಿಸಿಕೆಎಲ್ ವ್ಯವಸ್ಥಾಪಕ ನಿರ್ದೇಶಕ ಲೋಖಂಡೆ ಸ್ನೇಹಲ್ ಸುಧಾಕರ್, ಸzಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಶೀಲಾ ಸಿ., ಕೆಇಬಿ ಎಂಜಿನಿಯರ್ ಗಳ ಸಂಘದ ಪದಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Key words: Cashless,  medical,treatment, facility, Eskom staff, Minister, K.J. George

The post ಎಲ್ಲಾ ಎಸ್ಕಾಂ ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ: ಸಚಿವ ಕೆ.ಜೆ.ಜಾರ್ಜ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವೈದ್ಯಕೀಯ ವಿದ್ಯಾರ್ಥಿಗಳಿಂದ ಪ್ರತಿಭಟನೆ: ಸರ್ಕಾರಿ ಆಸ್ಪತ್ರೆ, ಒಪಿಡಿ ಸೇವೆಯಲ್ಲಿ ವ್ಯತ್ಯಯ
ಬೆಂಗಳೂರು,ಆಗಸ್ಟ್,12,2024 (www.justkannada.in):  ವಿದ್ಯಾರ್ಥಿ ವೇತನ ಪರಿಷ್ಕರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆ, ಒಪಿಡಿ ಸೇವೆಯಲ್ಲಿ ಭಾರಿ ವ್ಯತ್ಯಯವಾಗಿವೆ.

ಬೆಂಗಳೂರಿನ ಫ್ರೀಂಡಂ ಪಾರ್ಕ್ ನಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಧರಣಿ ನಡೆಸುತ್ತಿದ್ದು, ಸ್ಟೈಫಂಡ್ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ  ಆಗ್ರಹಿಸಿದ್ದಾರೆ.

ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆಯಿಂದಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ, ಬೌರಿಂಗ್ ಆಸ್ಪತ್ರೆ, ಕೆ.ಸಿ.ಜನರಲ್ ಆಸ್ಪತ್ರೆ ಸೇರಿದಂತೆ ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆಯಲ್ಲಿ ವ್ಯತ್ಯಯವಾಗಿದ್ದು, ಒಳ ರೋಗಿಗಳಿಗೆ ಮಾತ್ರ ಚಿಕಿತ್ಸೆ, ತುರ್ತುಸೇವೆ ಲಭ್ಯವಿದೆ.

Key words: Protest, medical, students, Bangalore

The post ವೈದ್ಯಕೀಯ ವಿದ್ಯಾರ್ಥಿಗಳಿಂದ ಪ್ರತಿಭಟನೆ: ಸರ್ಕಾರಿ ಆಸ್ಪತ್ರೆ, ಒಪಿಡಿ ಸೇವೆಯಲ್ಲಿ ವ್ಯತ್ಯಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮುಂದುವರೆದ ಮಂಗಳೂರು ಪೊಲೀಸರ ಕಾರ್ಯಾಚರಣೆ: ಮತ್ತೊಬ್ಬ ವೈದ್ಯಕೀಯ ವಿದ್ಯಾರ್ಥಿಯ ಬಂಧನ.
ಮಂಗಳೂರು,ಜನವರಿ,12,2023(www.justkannada.in): ಮಂಗಳೂರು ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು ಡ್ರಗ್ಸ್ ದಂಧೆಗೆ ಸಂಬಂಧಿಸಿದಂತೆ ಇಂದು ಮತ್ತೊಬ್ಬ ವೈದ್ಯಕೀಯ ವಿದ್ಯಾರ್ಥಿಯನ್ನ ಬಂಧಿಸಿದ್ದಾರೆ.

ನಿನ್ನೆ ಬೃಹತ್ ಡ್ರಗ್ಸ್ ದಂಧೆ ಭೇದಿಸಿದ್ದ ಮಂಗಳೂರು ಪೊಲೀಸರು ಇಬ್ಬರು ವೈದ್ಯರು, ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ 10 ಮಂದಿಯನ್ನ ಬಂಧಿಸಿದ್ದರು. ಡ್ರಗ್ಸ್ ಪೆಡ್ಲರ್ ನೀಲ್ ಕಿಶೋರಿ ಮಾಹಿತಿ ಮೇರೆಗೆ ಪೊಲೀಸರು ತನಿಖೆ ನಡೆಸುತ್ತಿದ್ದು ಇಂದು ಮತ್ತೊಬ್ಬ ವೈದ್ಯಕೀಯ ವಿದ್ಯಾರ್ಥಿ ವಿಎಸ್ ಹರ್ಷಕುಮಾರ್ ಎಂಬುವವನನ್ನ ಪೊಲೀಸರು ಬಂಧಿಸಿದ್ದಾರೆ.

ಈತ ಕೆಎಂಸಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಯಾಗಿದ್ದು ತುಮಕೂರು ಮೂಲದವನು ಎನ್ನಲಾಗಿದೆ. ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಚುರುಕುಗೊಂಡಿದೆ.

Key words: Mangalore- police -operation – Another –medical- student -arrested.

The post ಮುಂದುವರೆದ ಮಂಗಳೂರು ಪೊಲೀಸರ ಕಾರ್ಯಾಚರಣೆ:  ಮತ್ತೊಬ್ಬ ವೈದ್ಯಕೀಯ ವಿದ್ಯಾರ್ಥಿಯ ಬಂಧನ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬೃಹತ್ ಗಾಂಜಾ ದಂಧೆ ಭೇದಿಸಿದ ಪೊಲೀಸರು: ಇಬ್ಬರು ವೈದ್ಯರು, ವೈದ್ಯ ವಿದ್ಯಾರ್ಥಿನಿಯರು ಸೇರಿ 10 ಮಂದಿಯ ಬಂಧನ.
ಮಂಗಳೂರು,ಜನವರಿ,11,2023(www.justkannada.in):  ಮಂಗಳೂರು ಪೊಲೀಸರು ಭಾರೀ ಹೈಪ್ರೊಫೈಲ್ ಗಾಂಜಾ ದಂಧೆಯನ್ನು ಭೇದಿಸಿದ್ದು, ಇಬ್ಬರು ವೈದ್ಯರು, ನಾಲ್ವರು ವೈದ್ಯ ವಿದ್ಯಾರ್ಥಿನಿಯರು  ಸೇರಿ 10 ಮಂದಿಯನ್ನ ಬಂಧಿಸಿದ್ದಾರೆ.

ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವೈದ್ಯರು‌ ಹಾಗೂ ವೈದ್ಯಕೀಯ ವಿದ್ಯಾರ್ಥಿನಿಯರು ಈ ದಂಧೆಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಮಂಗಳೂರಿನ ಪ್ರತಿಷ್ಠಿತ ಕೆ.ಎಂ.ಸಿ. ಅತ್ತಾವರ, ಕೆ.ಎಂ.ಸಿ ಮಣಿಪಾಲ, ದೇರಳಕಟ್ಟೆಯ ಯೆನೇಪೋಯಾ ಮೆಡಿಕಲ್ ಕಾಲೇಜಿನ ವೈದ್ಯರು ಹಾಗೂ ವಿದ್ಯಾರ್ಥಿಗಳು ಈ ಗಾಂಜಾ ದಂಧೆಯಲ್ಲಿ ಭಾಗಿಯಾಗಿದ್ದಾರೆ.

ಯು.ಕೆ ಮೂಲದ ಗಾಂಜಾ ಪೆಡ್ಲರ್ ನೀಲ್ ಕಿಶೋರಿಲಾಲ್ ರಾಮ್ ಜೀ (38) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದು ಈ ವೇಳೆ  ಮತ್ತಷ್ಟು ವಿಚಾರ ಬೆಳಕಿಗೆ ಬಂದಿತ್ತು. ನೀಲ್ ಕಿಶೋರಿಲಾಲ್ ರಾಮ್‌ನ ಮಾಹಿತಿ ಆಧಾರದಲ್ಲಿ ಮೆಡಿಕಲ್ ವಿದ್ಯಾರ್ಥಿನಿಯರು, ವಿದ್ಯಾರ್ಥಿಗಳು ಹಾಗೂ ವೈದ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವೈದ್ಯರಾದ ಡಾ. ಸಮೀರ್(32), ಮಣಿ‌ಮಾರನ್ ಮುತ್ತು(28)ರನ್ನು ವಿದ್ಯಾರ್ಥಿನಿಯರಾದ ಡಾ. ನದಿಯಾ ಸಿರಾಜ್(24), ಡಾ.ವರ್ಷಿಣಿ ಪ್ರತಿ (26), ಡಾ.ರಿಯಾ ಚಡ್ಡ(22), ಡಾ. ಹೀರಾ ಬಸಿನ್(23), ವಿದ್ಯಾರ್ಥಿಗಳಾದ ಡಾ. ಭಾನು ದಹಿಯಾ (27), ಡಾ.ಕ್ಷಿತಿಜ್ ಗುಪ್ತ (23), ಸ್ಥಳೀಯ ಮಹಮ್ಮದ್ ರೌಫ್ ನನ್ನು ಬಂಧಿಸಲಾಗಿದೆ. ಆರೋಪಿಗಳ ಬಳಿಯಿದ್ದ 2 ಕೆ.ಜಿ‌ ಗಾಂಜಾ, ಒಂದು ನಕಲಿ ಪಿಸ್ತೂಲ್, ಡ್ರಾಗರ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: mangalore -Police – ganja -two -doctors – medical- student -arrest

The post ಬೃಹತ್ ಗಾಂಜಾ ದಂಧೆ ಭೇದಿಸಿದ ಪೊಲೀಸರು: ಇಬ್ಬರು ವೈದ್ಯರು, ವೈದ್ಯ ವಿದ್ಯಾರ್ಥಿನಿಯರು ಸೇರಿ 10 ಮಂದಿಯ ಬಂಧನ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪುರುಷರಿಗೆ ಪ್ರತ್ಯೇಕ ವೈದ್ಯಕೀಯ ಸೇವೆ: ಸದ್ಯದಲ್ಲೇ ಪ್ರಾಯೋಗಿಕ ಚಾಲನೆ.
ಬೆಂಗಳೂರು,ಜುಲೈ.9,2022(www.justkannada.in): ಹಲವು ಬಗೆಯ ಸಂಕೀರ್ಣ ಅನಾರೋಗ್ಯಗಳಿಂದ ನರಳುತ್ತಿರುವ ಪುರುಷರಿಗೆ ಪ್ರತ್ಯೇಕವಾಗಿ ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವ ಸೌಲಭ್ಯವನ್ನು ಸದ್ಯದಲ್ಲೇ ಮಲ್ಲೇಶ್ವರಂ ಕ್ಷೇತ್ರದ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗುವುದು ಎಂದು ಸಚಿವ ಡಾ.ಸಿ.ಎನ್. ಅಶ್ವತ್ ನಾರಾಯಣ್ ಹೇಳಿದ್ದಾರೆ.

ದೇಶದಲ್ಲೇ ಅನನ್ಯವಾದ ಪುರುಷರಿಗೆ ಪ್ರತ್ಯೇಕವಾದ ವೈದ್ಯಕೀಯ ಪರೀಕ್ಷಾ ಸೇವಾ ಸೌಲಭ್ಯವನ್ನು ಆರಂಭಿಸುವ ಕುರಿತು ಅಂಕುರ ಹೆಲ್ತ್ ಕೇರ್ ನ ಡಾ.ವಾಸನ್ ಅವರ ಜತೆ ಸಚಿವ ಅಶ್ವಥ್ ನಾರಾಯಣ್ ಮಾತುಕತೆ ನಡೆಸಿದರು.

ಈ ಬಗ್ಗೆ ಮಾತನಾಡಿದ  ಅವರು, `ಪುರುಷರೂ ಹಲವು ಅನಾರೋಗ್ಯ ಸಮಸ್ಯೆಗನ್ನು ಎದುರಿಸುತ್ತಿರುತ್ತಾರೆ. ಆದರೆ ಇವರಲ್ಲಿ ಹೆಚ್ಚಿನವರು ಆಸ್ಪತ್ರೆಗೇ ಬರುವುದಿಲ್ಲ. ಹೀಗಾಗಿ ಖಾಸಗಿ ಮತ್ತು ಸರಕಾರಿ ಸಹಭಾಗಿತ್ವದಡಿಯಲ್ಲಿ ಈ ವಿನೂತನ ಯೋಜನೆಯನ್ನು ಎರಡೂ ಕಡೆಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗುತ್ತಿದೆ. ಇದಕ್ಕೆ ಸಿಕ್ಕುವ ಸ್ಪಂದನವನ್ನು ಆಧರಿಸಿ ಮುಂಬರುವ ದಿನಗಳಲ್ಲಿ ಇದನ್ನು ಎಲ್ಲೆಡೆಗೂ ವಿಸ್ತರಿಸಲಾಗುವುದು. ಈ ಯೋಜನೆಯಡಿ ಅಂಕುರ ಹೆಲ್ತ್ ಕೇರ್ ನ ಡಾ.ವಾಸನ್ ಅವರು ವೈದ್ಯಕೀಯ ಪರೀಕ್ಷೆಗಳ ಸೌಲಭ್ಯ ಕಲ್ಪಿಸುತ್ತಾರೆ’ ಎಂದಿದ್ದಾರೆ.

ಮಧುಮೇಹ, ಕ್ಯಾನ್ಸರ್, ನರಕ್ಕೆ ಸಂಬಂಧಿಸಿದ ಕಾಯಿಲೆಗಳು, ಮೂಳೆಗೆ ಸಂಬಂಧಿಸಿದ ಸಮಸ್ಯೆಗಳು ಪುರುಷರನ್ನು ಹೆಚ್ಚಾಗಿ ಕಾಡುತ್ತಿವೆ. ಇದರ ಜತೆಗೆ ಒತ್ತಡದ ಜೀವನ, ಧೂಮಪಾನ, ಮದ್ಯಪಾನ, ಅವೈಜ್ಞಾನಿಕ ಆಹಾರ ಸೇವನೆಯ ಕ್ರಮ ಇತ್ಯಾದಿಗಳೂ ಪುರುಷರ ಅನಾರೋಗ್ಯಕ್ಕೆ ಕಾರಣಗಳಾಗಿವೆ. ಈಗ ಕೈಗೆತ್ತಿಕೊಂಡಿರುವ ಯೋಜನೆಯಲ್ಲಿ ಜೀವನಶೈಲಿ ಮತ್ತು ಆಹಾರ ಸೇವನೆಗೆ ಸಂಬಂಧಿಸಿದ ದೋಷಗಳನ್ನು ಪರಿಹರಿಸಲು ಗಮನ ಹರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಹೆಚ್ಚಿನ ಕುಟುಂಬಗಳಿಗೆ ಪುರುಷರೇ ಆಧಾರಸ್ತಂಭದಂತೆ ಇರುತ್ತಾರೆ. ಆದ್ದರಿಂದ ಇಂತಹ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಇದರಿಂದಾಗಿ ಸಂಭವನೀಯ ಅನಾರೋಗ್ಯವು ಸೃಷ್ಟಿಸುವ ಆರ್ಥಿಕ ಹೊರೆ ಮತ್ತಿತರ ಸಮಸ್ಯೆಗಳಿಂದ ಪಾರಾಗಬಹುದು ಎಂದು ಸಚಿವ ಅಶ್ವಥ್ ನಾರಾಯಣ್ ವಿವರಿಸಿದ್ದಾರೆ. ಕಾರ್ಯಕ್ರಮದಲ್ಲಿ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

Key words: Separate-medical-service-men-minister-ashwath narayan

The post ಪುರುಷರಿಗೆ ಪ್ರತ್ಯೇಕ ವೈದ್ಯಕೀಯ ಸೇವೆ: ಸದ್ಯದಲ್ಲೇ ಪ್ರಾಯೋಗಿಕ ಚಾಲನೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಶುಲ್ಕ ಇಳಿಕೆ ಬಗ್ಗೆ ಸುಳಿವು ನೀಡಿದ ಸಿಎಂ ಬೊಮ್ಮಾಯಿ.
ಹಾವೇರಿ,ಮಾರ್ಚ್,21,2022(www.justkannada.in): ಕರ್ನಾಟಕದಲ್ಲಿ ವೈದ್ಯಕೀಯ ಶುಲ್ಕ ಇಳಿಕೆ  ಮಾಡುವ ಬಗ್ಗೆ ಚಿಂತನೆ ನಡೆಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದು ಈ ಮೂಲಕ ವೈದ್ಯಕೀಯ ಶಿಕ್ಷಣ ಶುಲ್ಕ ಇಳಿಕೆ ಬಗ್ಗೆ ಸುಳಿವು ನೀಡಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಇಂದು ಹಾವೇರಿಯ ಚಳಗೇರಿ ಗ್ರಾಮಕ್ಕೆ ಭೇಟಿ ನೀಡಿ ಮೃತ ನವೀನ್ ಪಾರ್ಥಿವ ಶರೀರ ಅಂತಿಮ ದರ್ಶನ ಪಡೆದರು. ಶುಲ್ಕ ಇಳಿಕೆ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ದುಬಾರಿಯಾಗುತ್ತಿದೆ. ಮೆಡಿಕಲ್ ಶಿಕ್ಷಣ  ಶುಲ್ಕ ಇಳಿಕೆ ಬಗ್ಗೆ ಚಿಂತನೆ ಮಾಡಲಾಗುತ್ತದೆ . ಎಬಿಸಿ ಕ್ಯಾಟಗರಿ ಮಾಡಿ ಶುಲ್ಕ ಇಳಿಕೆಗೆ ತೀರ್ಮಾನಿಸುತ್ತೇವೆ ಎಂದರು.

ನಮ್ಮಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ಶುಲ್ಕ‌ ಕಡಿಮೆ ಇದೆ. ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ಶುಲ್ಕ ಹೆಚ್ಚಾಗಿದೆ. ಇದನ್ನು ಕಡಿಮೆ ಮಾಡುವ ಬಗ್ಗೆ ಚಿಂತನೆ ಮಾಡಲಾಗುವುದು. ಶೇ.95 ರಷ್ಟು ಅಂಕ ಪಡೆದವರಿಗೂ ಸೀಟ್ ಸಿಗುತ್ತಿಲ್ಲ. ಈ ಬಗ್ಗೆ ಗಂಭೀರ ಚಿಂತನೆ ಆಗಬೇಕು ಎಂದರು.

Key words: CM Bommai-reduction- medical – fees – state

ENGLISH SUMMARY…

CM Bommai gives hint on reducing Medical education fee in State

Haveri, March 21, 2022 (www.justkannada.in): Chief Minister Basavaraj Bommai has informed that the State Government is contemplating on reducing the medical education fee in the State.

He visited Haveri today and paid his last respects to Naveen, who died in the Russian war attack on Ukraine. The body of Naveen has been brought to his native. Speaking to the media persons after paying his last respects, the Chief Minister informed that the medical education has become very costly in the state and hence the government is planning to reduce the fee by classifying as A, B, C category.

“The fee in our government colleges are less, compared to private colleges. We are discussing about reducing the fee. Students who have scored 95 per cent marks are also not getting medical seat. There is a need to seriously think about this,” he added.

Keywords: Chief Minister Basavaraj Bommai/ Medical education/ fee reduction

The post ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಶುಲ್ಕ ಇಳಿಕೆ ಬಗ್ಗೆ ಸುಳಿವು ನೀಡಿದ ಸಿಎಂ ಬೊಮ್ಮಾಯಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.