modern media Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಪ್ರತಿಭೆಯ ವಿಕಾಸಕ್ಕೆ ಆಧುನಿಕ ಮಾಧ್ಯಮಗಳು ಪೂರಕವಾಗಬೇಕು- ನಾಡೋಜ ಹಂಪ ನಾಗರಾಜಯ್ಯ
ಬೆಂಗಳೂರು ,ಜನವರಿ 7,2022(www.justkannada.in): ಜಾಗತೀಕರಣದ ಈ ಸಂದರ್ಭದಲ್ಲಿ ನಮಗೆ ಲಭ್ಯವಿರುವ ಇಂದಿನ ಆಧುನಿಕ ಮಾಧ್ಯಮಗಳನ್ನು ಯುವ ಲೇಖಕರು ತಮ್ಮ ಪ್ರತಿಭೆಯ ವಿಕಾಸಕ್ಕೆ ಬಳಸಿಕೊಳ್ಳಬೇಕು ಎಂದು ಕನ್ನಡದ ಹಿರಿಯ ಸಾಹಿತಿ ನಾಡೋಜ ಹಂಪ ನಾಗರಾಜಯ್ಯ ಹೇಳಿದ್ದಾರೆ.

ಅವರು ಇಂದು ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರಿನ ನಯನ ರಂಗಮಂದಿರದಲ್ಲಿ ಆಯೋಜಿಸಿದ್ದ 55 ಯುವ ಬರಹಗಾರರ ಚೊಚ್ಚಲ ಕೃತಿಗಳ ಲೋಕಾರ್ಪಣೆ ಮತ್ತು ಶಾಲಾ-ಕಾಲೇಜುಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು.

ಹಿಂದೆ ಇಂತಹ ಅನುಕೂಲಗಳು ಇರಲಿಲ್ಲ ಈ ರೀತಿಯ ಅದ್ದೂರಿಯ ಪುಸ್ತಕ ಬಿಡುಗಡೆ ಸಮಾರಂಭಗಳು ನಡೆಯುತ್ತಿರಲಿಲ್ಲ. ಆದರೆ ಇಂದು ಸರ್ಕಾರ ಪುಸ್ತಕ ಪ್ರಾಧಿಕಾರದ ಮೂಲಕ ಯುವ ಬರಹಗಾರರಿಗೆ ಪ್ರೋತ್ಸಾಹ ನೀಡಲು ಮುಂದಾಗಿರುವುದು ಅತ್ಯಂತ ಪ್ರಶಂಸನೀಯ, ರಾಜಾಶ್ರಯಗಳು ತಮ್ಮ ಆಸ್ಥಾನ ಕವಿಗಳನ್ನು ತಮ್ಮ ಸಿಂಹಾಸನದ ಆಸನಕ್ಕೆ ತಕ್ಕುದಾದ ಆಸನವನ್ನು ನೀಡುವ ಮೂಲಕ ಗೌರವಿಸುತ್ತಿದ್ದರು, ಹಾಗೆಯೇ ,ಇಂದು ಸರ್ಕಾರ ಹಾಗೂ ಪುಸ್ತಕ ಪ್ರಾಧಿಕಾರ ದಂತಹ ಸಂಸ್ಥೆಗಳು ಲೇಖಕರನ್ನು ಗುರುತಿಸಿ ,ಗೌರವಿಸುವ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು.

ಯಾವುದೇ ಒಂದು ಕೃತಿಯ ಬಿಡುಗಡೆ ಚೊಚ್ಚಲ ಹೆರಿಗೆಗೆ ಸಮಾನ, ಏಕೆಂದರೆ ಆ  ಕೃತಿಯ ಬರಹಗಾರ ತನ್ನ ಪುಸ್ತಕದ ಬಿಡುಗಡೆಯ ಸಂದರ್ಭದಲ್ಲಿ ಅಂತಹುದೇ ಉದ್ವೇಗ, ತವಕ ಅನುಭವಿಸುತ್ತಾನೆ ಎಂದ ಅವರು ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಕನ್ನಡದ ಹೆಸರಾಂತ ಸಾಹಿತಿ ಸಾ .ಶಿ ಮರುಳಯ್ಯ ಅವರ ಮೊದಲ ಕೃತಿ ‘ಸಂಗನಕಲ್ಲು’ ಬಿಡುಗಡೆಯಾದ ಸಂದರ್ಭವನ್ನು ಸ್ಮರಿಸಿದರು.

ಹಾಗೆಯೇ ,ಉಚಿತವಾಗಿ ಶಾಲಾ-ಕಾಲೇಜುಗಳಿಗೆ ಪುಸ್ತಕ ಹಂಚುವ ಯೋಜನೆ ಅತ್ಯಂತ ಪ್ರಶಂಸನೀಯ. ಇದು ಮಕ್ಕಳಲ್ಲಿ ಓದುವ ಪ್ರಕ್ರಿಯೆಯನ್ನು ಹೆಚ್ಚಿಸುತ್ತದೆ , ಪುಸ್ತಕ ದಾನದ ಮೂಲಕ ಜ್ಞಾನದಾನ ಮಾಡುವುದು ನಿಜಕ್ಕೂ ಬಹುದೊಡ್ಡ ಸಂಗತಿ. ಅದರ ಮೂಲಕ ನಾವು ಪುಸ್ತಕ ಸಂಸ್ಕೃತಿಯನ್ನು ಬೆಳೆಸಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದ ಖ್ಯಾತ ಬರಹಗಾರ ಜಯಂತ ಕಾಯ್ಕಿಣಿ ಬರಹಗಾರ ಬದುಕಿನ ಕಟ್ಟಳೆಗಳಿಂದ ಹೊರಗೆ ಬಂದು ಬರೆಯಬೇಕು ಎಂದು ಹೇಳಿದರು.

ಬದುಕಿನ ಕಟ್ಟಳೆಗಳನ್ನು ಮುರಿದು ಬರೆದರೆ ಮಾತ್ರ ಅದು ಅನುಭವದ್ರವ್ಯ ವಾಗುತ್ತದೆ , ಕಟ್ಟಲೆಗಳು ಸೃಜನಶೀಲತೆಯನ್ನು ಕಟ್ಟಿಹಾಕುತ್ತದೆ ಎಂದರು.

ಯುವ ಬರಹಗಾರರ ಚೊಚ್ಚಲ ಕೃತಿಯ ಬಿಡುಗಡೆ ಆಯಾ ಬರಹಗಾರರಿಗೆ ಎಂದೂ ಅವಿಸ್ಮರಣೀಯ, ಏಕೆಂದರೆ ,ಬದುಕಿನಲ್ಲಿ ಮೊದಲ ಮುತ್ತು, ಮೊದಲ ಅನುಭವ, ಮೊದಲ ಪುಸ್ತಕ ಕೊಡುವ ಸುಖ ಬೇರೆ ಯಾವುದೂ ನೀಡಲು ಸಾಧ್ಯವಿಲ್ಲ .ಹಾಗಾಗಿ ಪ್ರತಿ ಲೇಖಕನಿಗೆ ಅವರ ಮೊದಲ ಪುಸ್ತಕದ ಬಿಡುಗಡೆ ಬದುಕಿನ ಅವಿಸ್ಮರಣೀಯ ಸಂದರ್ಭವಾಗಿರುತ್ತದೆ ಎಂದು ಅವರು ತಿಳಿಸಿದರು.

ಬರೆಯುವುದಕ್ಕಾಗಿ ಬದುಕಬೇಡಿ, ಬದುಕಿದ್ದನ್ನು ಬರೆಯಿರಿ ಎಂದ ಅವರು ಸಹಬಾಳ್ವೆ ಮತ್ತು ಸಮಾನ ಮನಸ್ಸು ಇದ್ದಾಗ ಮಾತ್ರ ಒಳ್ಳೆಯ ಸಾಹಿತ್ಯ ಸೃಷ್ಟಿಯಾಗುತ್ತದೆ ಎಂದು ಹೇಳಿದರು.

ಯಾವುದೇ ಕವಿಗೆ ಆತ್ಮವಿಮರ್ಶೆ ಇದ್ದಾಗ ಮಾತ್ರ ಆತ ಬೆಳೆಯಲು ಸಾಧ್ಯ, ಅನಾಮಿಕತೆಯ ಕಡೆಗಿನ ಪಯಣ ಹಾಗೂ ಜೀವನದೆಡೆಗಿನ ಪ್ರೀತಿ ಕಾವ್ಯಕ್ಕೆ ಮೂಲ, ಚಡಪಡಿಕೆಯೇ ಸೃಜನಶೀಲ ಸಾಹಿತ್ಯದ ಮೂಲದ್ರವ್ಯ ಎಂದ ಅವರು ,

ತಾವು ಬರೆದದ್ದನ್ನು ತಾವೇ ವಿಮರ್ಶಿಸಿಕೊಂಡು ಕಾವ್ಯ ಗುಣದೋಷಗಳನ್ನು ಗುರುತಿಸಿದಾಗ ಮಾತ್ರ ಲೇಖಕ ಬೆಳೆಯಲು ಸಾಧ್ಯ, ದ.ರಾ ಬೇಂದ್ರೆ ಅವರು ಆ ರೀತಿ ತಮ್ಮ ಕಾವ್ಯವನ್ನು ತಾವೇ ಸ್ವತಃ ವಿಮರ್ಶಿಸಿ ಕೊಂಡು ತಮ್ಮ ಕಾವ್ಯದ ಗುಣ ದೋಷಗಳನ್ನು ಕುರಿತು ಬರೆದುಕೊಂಡಿದ್ದಾರೆ ಎಂದು ತಿಳಿಸಿದರು .

ಎಲ್ಲದಕ್ಕೂ ಬೇಕಾದ್ದು ಓದು, ಬರಹಗಾರರು ಎಷ್ಟು ಓದುತ್ತಾರೋ ಅಷ್ಟು ಅವರ ಬರವಣಿಗೆ ಬೆಳೆಯುತ್ತದೆ ಎಂದು ಯುವ ಬರಹಗಾರರಿಗೆ ಕಾಯ್ಕಿಣಿ ಕಿವಿಮಾತು ಹೇಳಿದರು.

ಕಾವ್ಯದಲ್ಲಿ ಮೌನವು ಇರಬೇಕು ಎಂದು ಪ್ರತಿಪಾದಿಸಿದ ಜಯಂತಕಾಯ್ಕಿಣಿ ಮೌನ ಎಂಬುದು ಕಾವ್ಯದಲ್ಲಿನ ಅವ್ಯಕ್ತ ಭಾವ ಅದು ಹೇಳಲಾಗದ್ದನ್ನು ಹೇಳಲು ಕಾವ್ಯದಲ್ಲಿ ಬಳಸಬೇಕು, ಆದರೆ ಇತ್ತೀಚಿನ ಕವಿಗಳು ಅದನ್ನು ವಾಕ್ಯವಾಗಿಸಿದ್ದಾರೆ ಎಂದು ಹೇಳಿದರು.

ಪ್ರಾಸ್ತಾವಿಕ ಮಾತುಗಳನ್ನಾಡಿದ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಎಂ.ಎನ್. ನಂದೀಶ್ ಹಂಚೆ ಅವರು ಕನ್ನಡ ಪುಸ್ತಕ ಪ್ರಾಧಿಕಾರ ಯುವ ಬರಹಗಾರರನ್ನು ಬೆಳೆಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ.

ಈ ಕೆಲಸವನ್ನು ಅತ್ಯಂತ ಪಾರದರ್ಶಕವಾಗಿ ಮಾಡಬೇಕು ಎಂದು ಆಯ್ಕೆ ಸಮಿತಿಯನ್ನು ರಚಿಸಿ ,ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಿಂದ ಬರಹಗಾರರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.

2020 ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗೆ ಬಂದ ಅರ್ಜಿಗಳು 221, ಅವುಗಳಲ್ಲಿ 135 ಕವನಸಂಕಲನಗಳು.ಇದು  ಇಂದಿನ ಯುವಜನರು ಹೆಚ್ಚಾಗಿ ಕಾವ್ಯದ ಕಡೆ ಆಕರ್ಷಿತರಾಗುತ್ತಿದ್ದಾರೆ ಎಂಬುದನ್ನು ತೋರಿಸುತ್ತದೆ, ಬೇರೆ ಬೇರೆ ಸಾಹಿತ್ಯ ಪ್ರಕಾರಗಳ ಕಡೆ ಕೂಡ ಇಂದಿನ ಯುವಜನತೆ ಆಸಕ್ತಿ ವಹಿಸಬೇಕಾದ ಅಗತ್ಯವಿದೆ ಎಂದು ಅವರು ಹೇಳಿದರು. ಸ್ವೀಕರಿಸಿದ 221 ಹಸ್ತಪ್ರತಿಗಳಲ್ಲಿ ಪ್ರಾಧಿಕಾರದ ಆಯ್ಕೆಸಮಿತಿ 55 ಹಸ್ತಪ್ರತಿಗಳನ್ನು  ಆರಿಸಿತು .ಅವುಗಳಿಗೆ ತಲಾ ರೂ.15000 ಧನಸಹಾಯವನ್ನು ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಸಮಾರಂಭದಲ್ಲಿ ಬೆಂಗಳೂರು ಕಂದಾಯ ವಿಭಾಗ ವ್ಯಾಪ್ತಿಯ ಸುಮಾರು 250 ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ ಮಾಡಲಾಯಿತು. ಯುವ ಬರಹಗಾರರಿಗೆ ಕಾರ್ಯಕ್ರಮದ ಸ್ಮರಣಾರ್ಥ ಸ್ಮರಣ ಫಲಕ ನೀಡಲಾಯಿತು. ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ ಕಿರಣ್ ಸಿಂಗ್ ಸ್ವಾಗತಿಸಿದರು.ಸಹಾಯಕ ನಿರ್ದೇಶಕಿ ಸೌಭಾಗ್ಯ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Key words: Modern -media -must -complement – talent-Hampa Nagarajayya

The post ಪ್ರತಿಭೆಯ ವಿಕಾಸಕ್ಕೆ ಆಧುನಿಕ ಮಾಧ್ಯಮಗಳು ಪೂರಕವಾಗಬೇಕು- ನಾಡೋಜ ಹಂಪ ನಾಗರಾಜಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕನ್ನಡ ಪುಸ್ತಕ ಲೋಕ ಆಧುನಿಕ ಮಾಧ್ಯಮಗಳನ್ನು ಬಳಸಿಕೊಂಡು ಬೆಳೆಯಬೇಕು -ಸಚಿವ ಅರವಿಂದ ಲಿಂಬಾವಳಿ…
ಬೆಂಗಳೂರು ಫೆಬ್ರವರಿ 17,2021(www.justkannada.in): ಕನ್ನಡದಲ್ಲಿ ಓದುವವರ ಸಂಖ್ಯೆ ಕಡಿಮೆಯಾಗುತ್ತಿದೆ, ಕನ್ನಡ ಪುಸ್ತಕ ಲೋಕ ಆಧುನಿಕ ಮಾಧ್ಯಮಗಳನ್ನು ಬಳಸಿಕೊಂಡು ಬೆಳೆಯಬೇಕಾದ ಅಗತ್ಯವಿದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಆಯೋಜನೆ ಮಾಡಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಲೋಕಾರ್ಪಣೆ ಮಾಡುವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಇಂದಿನ ಸಾಹಿತ್ಯ ಪರಿಸ್ಥಿತಿ ಸೋಷಿಯಲ್  ಮೀಡಿಯಾಗಳ ಭರಾಟೆಯಲ್ಲಿ ಕಳೆದು ಹೋಗಿದೆ, ಇ-ಬುಕ್, ಆಡಿಯೋ ಬುಕ್ ಗಳು ಹೆಚ್ಚು ಜನಪ್ರಿಯವಾಗುತ್ತಿವೆ. ಕನ್ನಡ ಪುಸ್ತಕ ಪ್ರಾಧಿಕಾರವು ಸಹ ಪುಸ್ತಕ ಪ್ರಕಟಣೆಯ ಜೊತೆಗೆ ಈ ಮಾಧ್ಯಮಗಳನ್ನು ಕೂಡ ಸಮರ್ಥವಾಗಿ ಬಳಸಿಕೊಂಡು ಬೆಳೆಯಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು. ಅದಕ್ಕೆ ಅಗತ್ಯವಾದ ಅನುದಾನವನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಯುವ ಬರಹಗಾರರು ತಮ್ಮ ಸುತ್ತಲಿನ ಪರಿಸರವನ್ನು ಗ್ರಹಿಸಿ ಬರೆಯಬೇಕು, ಸಾಹಿತ್ಯ ಪರಂಪರೆಯನ್ನು ಅರಿತು ಬರೆಯಬೇಕು, ಓದುವ ಅಭ್ಯಾಸ ಮಾಡಿಕೊಳ್ಳಬೇಕು ಎಂದು ಅವರು ಯುವ ಲೇಖಕರಿಗೆ ಕಿವಿಮಾತು ಹೇಳಿದರು.

ಪುಸ್ತಕಗಳನ್ನುಲೋಕಾರ್ಪಣೆ ಮಾಡಿ ಮಾತನಾಡಿದ ಖ್ಯಾತ ಕವಿ ಡಾ. ಸಿದ್ದಲಿಂಗಯ್ಯ ಅವರು, ಜಾತಿ, ವರ್ಗಗಳನ್ನು ಮೀರಿದ ಸಾಹಿತ್ಯ ಸೃಷ್ಟಿ ನಮ್ಮ ಧ್ಯೇಯ ಆಗಬೇಕು, ಶೋಷಿತರು ಎಲ್ಲಾ ಜಾತಿಯ ಎಲ್ಲಾ ವರ್ಗಗಳಲ್ಲಿಯೂ ಇರುತ್ತಾರೆ, ಬರಹಗಾರರು ಜಾತಿ ವರ್ಗಗಳನ್ನು ಮೀರಿ ಶೋಷಣೆಯ ವಿರುದ್ಧ ದನಿ ಎತ್ತಬೇಕು ಎಂದು ಅವರು ಹೇಳಿದರು. ಇಂದಿನ ಯುವ ಬರಹಗಾರರು ಓದುವ ಅಭ್ಯಾಸ ಮಾಡಿಕೊಳ್ಳಬೇಕು. ಕನ್ನಡ ಸಾಹಿತ್ಯ ಪರಂಪರೆ ಪ್ರವಾಹ ಇದ್ದ ಹಾಗೆ. ಅದನ್ನು ಅರಿತು,ಗ್ರಹಿಸಿ,ಅಧ್ಯಯನ ಮಾಡಿ ಬರೆದರೆ ಶಕ್ತಿಯುತ ಸಾಹಿತ್ಯ ಸೃಷ್ಟಿಯಾಗುತ್ತದೆ ಎಂದು ತಿಳಿಸಿದರು. ತಮ್ಮ ಸುತ್ತಲ ಪರಿಸರ ಪರಿಸರದ ಸಂವೇದನೆಗಳು ಸಾಹಿತ್ಯದ ಶಕ್ತಿಯಾಗಿದೆ ಕವಿ ಸಿದ್ದಲಿಂಗಯ್ಯ ಹೇಳಿದರು.

ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಮಾತನಾಡಿ ಕನ್ನಡ ಪುಸ್ತಕ ಪ್ರಾಧಿಕಾರ ಕನ್ನಡ ಸಾಹಿತ್ಯದ ಡಿಜಿಟಲೀಕರಣ ಕಾರ್ಯ ಕೈಗೆತ್ತಿಕೊಂಡಿದೆ ಅದನ್ನು ಒಂದು ವರ್ಷದೊಳಗೆ ಮುಗಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು,  ಕನ್ನಡ ಪುಸ್ತಕ ಪ್ರಾಧಿಕಾರ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸುವ ಜೊತೆಗೆ ಅವುಗಳನ್ನು ಇ ಬುಕ್ ಆಗಿ ಕೂಡ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎಸ್ ರಂಗಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಆರಂಭದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಸ್ವಾಗತಿಸಿದರು. ಸಹಾಯಕ ನಿರ್ದೇಶಕರಾದ ಸೌಭಾಗ್ಯ ವಂದಿಸಿದರು.

Key words: Kannada -book world -should be- developed -using -modern media-Minister -Arvind Limbavali.

The post ಕನ್ನಡ ಪುಸ್ತಕ ಲೋಕ ಆಧುನಿಕ ಮಾಧ್ಯಮಗಳನ್ನು ಬಳಸಿಕೊಂಡು ಬೆಳೆಯಬೇಕು -ಸಚಿವ ಅರವಿಂದ ಲಿಂಬಾವಳಿ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.