Mudukuthore Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಮುಡುಕುತೊರೆ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ಸಚಿವ ಡಾ.ಹೆಚ್.ಸಿ.ಮಹದೇವಪ್ಪ
ಮೈಸೂರು,ಡಿಸೆಂಬರ್,29,2025 (www.justkannada.in): ಮುಡುಕುತೊರೆಯು ಪ್ರಸಿದ್ಧ ಧಾರ್ಮಿಕ ಸ್ಥಳವಾಗಿದ್ದು, ಪ್ರವಾಸೋದ್ಯಮ ಕೇಂದ್ರವೂ ಆಗಿದೆ. ಈ ಹಿನ್ನೆಲೆಯಲ್ಲಿ ಈ ಭಾಗವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು.

ತಾಲ್ಲೂಕಿನ ಮುಡುಕುತೊರೆಯ ಜೆ.ಎಸ್.ಎಸ್ ಕಲ್ಯಾಣ ಮಂಟಪದಲ್ಲಿ ಮುಡುಕುತೊರೆ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ ಅವರು, ಈಗಾಗಲೇ ವಸತಿ ಶಾಲೆ ನಿರ್ಮಾಣ, ಏತ ನೀರಾವರಿ ಯೋಜನೆ, ರಸ್ತೆಗಳ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳು ಮಾಡಲಾಗಿದೆ ಎಂದರು.

ನನ್ನ ಮತಕ್ಷೇತ್ರದ ಪ್ರತಿಯೊಂದು ಗ್ರಾಮವೂ ಸಂಪೂರ್ಣವಾಗಿ ಅಭಿವೃದ್ಧಿಯಾಗಬೇಕು. ಈ ಗ್ರಾಮಕ್ಕೆ ಡಿಪ್ಲೋಮಾ ಕಾಲೇಜು, ಬಸ್ ನಿಲ್ದಾಣ, ಆಸ್ಪತ್ರೆ, ನೀರಾವರಿ ಯೋಜನೆ ಕಾಮಗಾರಿ ಸೇರಿದಂತೆ ಹಲವಾರು ಅಭಿವೃದ್ಧಿ ಕೆಲಸಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಗ್ರಾಮಸ್ಥರು ಸಚಿವರ ಗಮನಕ್ಕೆ ತಂದರು. ಈ ಕುರಿತು ಸಚಿವ ಹೆಚ್.ಸಿ ಮಹದೇವಪ್ಪ, ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ಸ್ಥಳದಲ್ಲೇ ಕರೆ ಮಾಡಿ, ಗ್ರಾಮಕ್ಕೆ ಖುದ್ದಾಗ ಭೇಟಿ ನೀಡಿ ಪರಿಶೀಲನೆ ನಡೆಸಿ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸುವಂತೆ ತಿಳಿಸಿದರು.

ಇದೇ ಸಂದರ್ಭದಲ್ಲಿ ಮುಡುಕುತೊರೆ ಏತನೀರಾವರಿ ಯೋಜನೆಯ ನವೀಕರಣ ಕಾಮಗಾರಿಗೆ ಹಾಗೂ ಟಿ.ಬೆಟ್ಟಹಳ್ಳಿ ಗ್ರಾಮದ ಆಯುಷ್ಮಾನ್ ಆಸ್ಪತ್ರೆ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿ, ಸರ್ಕಾರಿ ಪ್ರಾಥಮಿಕ ಶಾಲೆಗೂ ಭೇಟಿ ನೀಡಿದರು.

ಮುಡುಕುತೊರೆ ಜಾತ್ರೆಯನ್ನು ವಿಜೃಂಭಣೆಯಿಂದ ಆಚರಿಸಿ

ಮುಡುಕತೊರೆ ಜಾತ್ರೆಯು ಈ ಭಾಗದ ಸುತ್ತಮುತ್ತಲ ಹಳ್ಳಿಗಳ ಪ್ರಸಿದ್ಧ ಆಚರಣೆಯಾಗಿದ್ದು, ಜ.21 ರಿಂದ 28 ರವರೆಗೆ ಜಾತ್ರೆಯು ನಡೆಯಲಿದೆ. ಧಾರ್ಮಿಕ ಕಾರ್ಯಗಳ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸುವ ಮೂಲಕ ಜಾತ್ರೆಯನ್ನು ವಿಜೃಂಭಣೆಯಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಆಯಾ ಇಲಾಖೆಗೆ ವಹಿಸಿದ ಜವಬ್ದಾರಿಯನ್ನು ತಪ್ಪದೆ ನಿಭಾಯಿಸಿಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ನದಿಯ ತೀರದ ಸ್ನಾನಘಟ್ಟದಲ್ಲಿ ಮುನ್ನೆಚ್ಚರಿಕೆ ಕ್ರಮ ಅನುಸರಿಸಬೇಕು. ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವ ಮುಖೇನ ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಯಾವುದೇ ತೊಂದರೆ ಉಂಟಾಗಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ರಾಸುಗಳಿಗೆ ಸಾಂಕ್ರಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಿ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅರ್ಥಪೂರ್ಣವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಿ. ಕೃಷಿ, ತೋಟಗಾರಿಕೆ, ಮೀನುಗಾರಿಕೆ ಇಲಾಖೆಯಿಂದ ಜನರಿಗೆ ಜಾಗೃತಿ ಮೂಡಿಸುವಂತಹ ವಸ್ತುಪ್ರದರ್ಶನ ಆಯೋಜಿಸಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಲಕಾಡು ವೈಧ್ಯನಾಥೇಶ್ವರ ಸಮೂಹ ದೇವಾಯಲ ಸಮಿತಿ ಅಧ್ಯಕ್ಷ ನಾಗರಾಜು, ಬಿ.ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಟ್ಟಮ್ಮ, ಉಪಾಧ್ಯಕ್ಷ ದಕ್ಷಿಣಾಮೂರ್ತಿ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಗೋಪಾಲ್, ರವಿಕುಮಾರ್, ಆಪ್ತಸಹಾಯಕ ಬಸವರಾಜು, ಶ್ರೀನಿವಾಸ್, ತಹಶೀಲ್ದಾರ್ ಸುರೇಶ್ ಆಚಾರ್, ಮುಖಂಡರಾದ ಕುಕ್ಕೂರು ಗಣೇಶ್, ನರಸಿಂಹ ಮಾದನಾಯಕ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words: development, Mudukuthore, Minister, Dr. H.C. Mahadevappa

The post ಮುಡುಕುತೊರೆ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ಸಚಿವ ಡಾ.ಹೆಚ್.ಸಿ.ಮಹದೇವಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮುಡುಕುತೊರೆ ಜಾತ್ರಾ ಮಹೋತ್ಸವ: ಅಗತ್ಯ ಸಿದ್ಧತೆಗೆ ಡಿಸಿ ಲಕ್ಷ್ಮೀಕಾಂತ ರೆಡ್ಡಿ ಸೂಚನೆ
ಮೈಸೂರು ಜನವರಿ,29,2025 (www.justkannada.in): ಐತಿಹಾಸಿಕ ಮುಡುಕುತೊರೆ ಜಾತ್ರಾ ಮಹೋತ್ಸವ ಜನವರಿ 31ರಿಂದ ಫೆಬ್ರವರಿ 16ರವರೆಗೆ  ನಡೆಯಲಿದ್ದು ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಮೈಸೂರು ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ ಅವರು ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಡುಕುತೊರೆ ಜಾತ್ರಾ ಮಹೋತ್ಸವ ಕುರಿತು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ಮೈಸೂರು ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ  ಸಭೆ ನಡೆಸಿ ಮಾತನಾಡಿದರು.

ಜನವರಿ 31 ರಿಂದ ಫೆಬ್ರವರಿ 16ರವರೆಗೆ ಮುಡುಕುತೊರೆ ಜಾತ್ರಾ ಮಹೋತ್ಸವ ನಡೆಯಲಿದೆ, ಫೆಬ್ರವರಿ 7 ರಂದು ರಥೋತ್ಸವ, ಫೆಬ್ರವರಿ 10ಕ್ಕೆ ತೆಪ್ಪೋತ್ಸವ ಸಮಾರಂಭ,  17 ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದೆ‌. ಈ ಸಂಬಂಧ ಅಧಿಕಾರಿಗಳು ಯಾವುದೇ ತೊಂದರೆ ಆಗದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಆರೋಗ್ಯ ಇಲಾಖೆಯಿಂದ ಆಂಬುಲೆನ್ಸ್ ಹಾಗೂ ವೈದ್ಯರು ತಂಡ ಜಾತ್ರಾ ಮಹೋತ್ಸವದಲ್ಲಿ ಇರಬೇಕು. ಚೆಸ್ಕಾಂ ಇಲಾಖೆಯಿಂದ ವಿದ್ಯುತ್ ದೀಪಾಲಂಕಾರ ಮಾಡಬೇಕು. ತಾತ್ಕಾಲಿಕ ಶೌಚಾಲಯ, ಮೊಬೈಲ್ ಶೌಚಾಲಯ ಹಾಗೂ ಬಟ್ಟೆ ಬದಲಿಸುವ ಕೊಠಡಿ ನಿರ್ಮಿಸಿ ಸ್ವಚ್ಚತೆಗೆ ಆದ್ಯತೆ ನೀಡಬೇಕು ಎಂದು ಅವರು ತಿಳಿಸಿದರು.

ಪೊಲೀಸ್ ಇಲಾಖೆಯಿಂದ ಬ್ಯಾರಿಕೇಡ್, ಧ್ವನಿ ವರ್ಧಕ , ಸಿಸಿ ಕ್ಯಾಮೆರಾ ಅಳವಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ಜಾತ್ರಾ ಮಾಳದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಜಾತ್ರಾ ಪ್ರದೇಶದಲ್ಲಿ ಸ್ವಚ್ಚತೆ ಹಾಗೂ ನೈರ್ಮಲೀಕರಣಕ್ಕೆ ಹೆಚ್ಚು ಒತ್ತು ನೀಡಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಡಿಸಿ ಜಿ. ಲಕ್ಷ್ಮೀ ಕಾಂತರೆಡ್ಡಿ ತಿಳಿಸಿದರು.

ಸಭೆಯಲ್ಲಿ ಪಶುಪಾಲನಾ ಇಲಾಖೆಯ ಸಹಾಯ ನಿರ್ದೇಶಕರಾದ ಡಾ ಲಿಂಗರಾಜು ಅವರು ಮಾತನಾಡಿ, ಉತ್ತಮ ರಾಸುಗಳಿಗೆ ಆಯ್ಕೆ ಸಂಬಂಧ ಜನವರಿ 31 ರಿಂದ ಫೆಬ್ರವರಿ 3 ವರೆಗೆ ರಾಸುಗಳ ರೈತರು ಸ್ಥಳದಲ್ಲಿದ್ದು ಆಯ್ಕೆ ಸಂಬಂಧ ನೊಂದಣಿ ಮಾಡಿಕೊಳ್ಳಬೇಕು. ಫೆಬ್ರವರಿ 5 ರಂದು ಉತ್ತಮ ರಾಸುಗಳ ಆಯ್ಕೆ ನಡೆಯುತ್ತದೆ. ಆದರೆ ಕೊನೆಯ ಎರಡು ದಿನ ಅಥವಾ ಆಯ್ಕೆಯ ದಿನ ನೇರವಾಗಿ ಭಾಗವಹಿಸಲು ಅವಕಾಶ ಇರುವುದಿಲ್ಲ ಎಂದು  ತಿಳಿಸಿದರು.

ಸಭೆಯಲ್ಲಿ ಟಿ ನರಸೀಪುರ ತಹಶೀಲ್ದಾರ್ ಸುರೇಶ್ ಆಚಾರ್, ಮುಜರಾಯಿ ಇಲಾಖೆಯ ತಹಶೀಲ್ದಾರ್  ಲತಾ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Mudukuthore, Jatra Mahotsav, DC, LakshmiKantha Reddy, meeting

The post ಮುಡುಕುತೊರೆ ಜಾತ್ರಾ ಮಹೋತ್ಸವ: ಅಗತ್ಯ ಸಿದ್ಧತೆಗೆ ಡಿಸಿ ಲಕ್ಷ್ಮೀಕಾಂತ ರೆಡ್ಡಿ ಸೂಚನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಮುಡುಕುತೊರೆ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ದಕ್ಷಿಣ ಭಾರತದ ಶ್ರೀಶೈಲ” : ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು,ಫೆಬ್ರವರಿ,15,2021(www.justkannada.in) : ಪಂಚಲಿಂಗಗಳಲ್ಲಿ ಒಂದಾದ ಮುಡುಕುತೊರೆ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ವಿಶೇಷ ಇತಿಹಾಸವಿದೆ. ಇದನ್ನು ದಕ್ಷಿಣ ಭಾರತದ ಶ್ರೀಶೈಲ ಎಂದೂ ಕರೆಯುತ್ತಾರೆ. ಅಂದರೆ ಸ್ವಾಮಿ ಮಲ್ಲಿಕಾರ್ಜುನ ದೇವರ ಶಕ್ತಿ ಎಷ್ಟಿದೆ ಎಂಬುದು ತಿಳಿಯುತ್ತದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್  ಹೇಳಿದರು.ಮುಡುಕುತೊರೆ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಅವರು ಮಾತನಾಡಿ, ಶ್ರೀ ಮಲ್ಲಿಕಾರ್ಜುನ ಬೆಟ್ಟದಲ್ಲಿ ಪ್ರತಿ ಮಾಘ ಮಾಸದಲ್ಲಿ ಈ ಜಾತ್ರಾ ಮಹೋತ್ಸವ ನಡೆಯುತ್ತಾ ಬಂದಿದೆ. ಇದಕ್ಕೆ ಭಕ್ತಾದಿಗಳೂ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಸೇವೆ ಸಲ್ಲಿಸುವ ಸಂಪ್ರದಾಯವನ್ನು ಪಾಲಿಸುತ್ತಾ ಬಂದಿದ್ದಾರೆ. ತೆಪ್ಪೋತ್ಸವ, ಮಂಟಪೋತ್ಸವಗಳೂ ಸಹ ಈ ಜಾತ್ರೆಯ ಆಕರ್ಷಣೆಯಲ್ಲೊಂದಾಗಿದೆ. ಇಂಥ ಒಂದು ಐತಿಹಾಸಿಕ, ಧಾರ್ಮಿಕ ಹಿನ್ನೆಲೆಯುಳ್ಳ ಜಾತ್ರಾ ಮಹೋತ್ಸವದಲ್ಲಿ  ಪಾಲ್ಗೊಳ್ಳುತ್ತಿರುವುದು ನನ್ನ ಸೌಭಾಗ್ಯ ಎಂದರು.

ಈ ಜಾತ್ರಾ ಮಹೋತ್ಸವಕ್ಕೆ ಸುಮಾರು 300 ವರ್ಷಗಳ ಇತಿಹಾಸವಿದೆ. ಇಲ್ಲಿ ನಡೆಯುವ “ದನಗಳ ಜಾತ್ರೆ” ಬಹಳ ಪ್ರಸಿದ್ಧಿ ಪಡೆದುಕೊಂಡಿದೆ. ನಮ್ಮ ರಾಜ್ಯದ ಮೂಲೆ ಮೂಲೆಗಳಿಂದ ವಿವಿಧ ತಳಿಗಳ 1500 ಜೋಡಿಗಳಿಗೂ ಹೆಚ್ಚು ರಾಸುಗಳು ಈ ಜಾತ್ರೆಗೆ ಆಗಮಿಸುತ್ತವೆ. ಇಲ್ಲಿ ಒಂದು ಜೋಡಿ ಎತ್ತುಗಳು ಸುಮಾರು 5 ಲಕ್ಷ ರೂಪಾಯಿ ವರೆಗೂ ಮಾರಾಟವಾಗಿರುವ ನಿದರ್ಶನಗಳಿವೆ ಎಂದು ಹೇಳಿದರು.

ಇದಲ್ಲದೆ, ಉತ್ತಮ ರಾಸುಗಳಿಗೆ ಪಶುಸಂಗೋಪನಾ ಇಲಾಖೆ ವತಿಯಿಂದ ಬಹುಮಾನ ನೀಡುವ ಪರಿಪಾಠವೂ ಬೆಳೆದುಕೊಂಡು ಬಂದಿದ್ದು, ಸರ್ಕಾರದ ಮುಖಾಂತರೂ ಪ್ರೋತ್ಸಾಹ ಕೊಡುತ್ತಾ ಬರಲಾಗುತ್ತಿದೆ. ಇದರಿಂದ ರೈತಾಪಿ ವರ್ಗಕ್ಕೆ ಸ್ಪೂರ್ತಿ ದೊರೆತಂತಾಗುತ್ತದೆ. ಇದೇ ಫೆಬ್ರವರಿ 28ರಂದು “ಬಸವನಮಾಲೆ” ಎಂಬ ಬಸವಗಳ  ಓಟ ಸ್ಪರ್ಧೆ ಇದ್ದು, ಇದರಲ್ಲಿ ವಿಜೇತವಾಗುವ “ಬಸವ”ಕ್ಕೆ ದೇವರ ಮಾಲೆ ಧರಿಸಿ ಶ್ರೀಶೈಲದಲ್ಲಿ ನಡೆಯುವ ಜಾತ್ರೆಗೆ ಕಳುಹಿಸಿಕೊಡುವ ಪರಿಪಾಠವಿದೆ ಎಂದರು.

ಧಾರ್ಮಿಕ  ಆಚರಣೆ ಹಾಗೂ ನಂಬಿಕೆಗಳಿಗೆ ಗೌರವ ಕೊಡಬೇಕಿರುವುದು ನಮ್ಮ ಕರ್ತವ್ಯ

ಈಚೆಗಷ್ಟೇ ಪಂಚಲಿಂಗ ದರ್ಶನ ಮಹೋತ್ಸವವನ್ನು ಕೋವಿಡ್ ಆತಂಕದ ನಡುವೆಯೂ ನಿರ್ವಿಘ್ನವಾಗಿ ಭಕ್ತರ ಆಶಯಕ್ಕೆ ಧಕ್ಕೆ ಬರದಂತೆ ನೆರವೇರಿಸಿದ್ದೇವೆ. ಅದರ ಸಾರ್ಥಕ ಹಾಗೂ ಧನ್ಯಭಾವ ನನ್ನಲ್ಲಿ ಮೂಡಿದೆ. ಇಂತಹ ಒಂದು ಕ್ಷೇತ್ರದಲ್ಲಿ ಪುನಃ ಜಾತ್ರಾ ಮಹೋತ್ಸವ ನಡೆಯುತ್ತಿರುವುದು ಸಂತಸದ ವಿಚಾರವಾಗಿದೆ. ಧಾರ್ಮಿಕ  ಆಚರಣೆ ಹಾಗೂ ನಂಬಿಕೆಗಳಿಗೆ ಗೌರವ ಕೊಡಬೇಕಿರುವುದು ನಮ್ಮ ಕರ್ತವ್ಯ ಎಂದು ಹೇಳಿದರು.

ಕೋವಿಡ್ ಕುರಿತು ಜವಾಬ್ದಾರಿ ಅಗತ್ಯ

ಹಾಗಾಗಿ, ಆಚರಣೆಗಳು ಕೋವಿಡ್ ನಿಯಮಗಳಿಗೆ ಒಳಪಟ್ಟು ನಡೆಯುಂತಾಗಲಿ ಎಂಬುದು ನನ್ನ ಆಶಯವಾಗಿದೆ. ಕೋವಿಡ್ ಮಹಾಮಾರಿ ಬಗ್ಗೆ ಈಗ ನಾಗರಿಕರಿಗೂ ಅರಿವುಂಟಾಗಿದೆ. ಅವರೂ ಸಹ ತಮ್ಮ ಜವಾಬ್ದಾರಿಯನ್ನು ಪ್ರದರ್ಶಿಸಬೇಕಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್ ಬಳಸಬೇಕು. ಈ ಮೂಲಕ ನಮ್ಮ ನಾಡನ್ನು ಕೊರೋನಾ ಮುಕ್ತ ಮಾಡಲು ಸಹಕರಿಸಬೇಕು ಎಂದಿದ್ದಾರೆ.

ಇನ್ನು ಕೊನೆಯದಾಗಿ ಮುಡುಕುತೊರೆ ಮಲ್ಲಿಕಾರ್ಜುನ ಸ್ವಾಮಿ ದೇವರು ನಾಡಿನ ಸಮಸ್ತ ಜನತೆಗೆ ಆಯುರಾರೋಗ್ಯವನ್ನು ಕರುಣಿಸಲಿ, ಕೊರೋನಾ ಮುಕ್ತವಾಗಲಿ, ಅನ್ನದಾತರಾದ ರೈತರಿಗೆ ಉತ್ತಮ ಮಳೆ-ಬೆಳೆ ಸಿಗುವಂತಾಗಲಿ, ನಾಡನ್ನು ಸುಭಿಕ್ಷವಾಗಿಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

key words : Mudukuthore-Sri Mallikarjuna Swamy-Temple-South India-Srisailam-Minister-S.T.Somashekhar

The post “ಮುಡುಕುತೊರೆ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ದಕ್ಷಿಣ ಭಾರತದ ಶ್ರೀಶೈಲ” : ಸಚಿವ ಎಸ್.ಟಿ.ಸೋಮಶೇಖರ್    appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.