Narayana Guru Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ವೈವಿದ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಭಾರತ ನಿರ್ಮಾಣ ನಾರಾಯಣಗುರುಗಳ ಗುರಿಯಾಗಿತ್ತು- ಸಿ.ಎಂ ಸಿದ್ದರಾಮಯ್ಯ
ತಿರುವನಂತಪುರ,ಡಿಸೆಂಬರ್,31,2025 (www.justkannada.in): ವೈವಿದ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಸಹೃದಯಿ ಭಾರತ ನಿರ್ಮಾಣ ನಾರಾಯಣಗುರುಗಳ ಗುರಿಯಾಗಿತ್ತು. ನೈತಿಕತೆ ಇಲ್ಲದ ಅಹಂಕಾರದ ಭಾಷೆಯಲ್ಲಿ ಕೋಮುವಾದ ಮಾತಾಡುವ ಬಗ್ಗೆ ನಾರಾಯಣಗುರುಗಳು ಎಚ್ಚರಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.

ಕೇರಳ ತಿರುವನಂತಪುರದ 93ನೇ ಶಿವಗಿರಿ ತೀರ್ಥಯಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾರಾಯಣ ಗುರುಗಳು ಕೇವಲ‌ ಒಬ್ಬ ಸಂತ ಮಾತ್ರ ಆಗಿರಲಿಲ್ಲ. ಸಮಾನತೆ ಮತ್ತು ನೈತಿಕತೆಯ ಚಳವಳಿಯಾಗಿದ್ದರು. ಹೀಗಾಗಿ ಶಿವಗಿರಿ ತೀರ್ಥಯಾತ್ರೆ ಕೂಡ ಚಳವಳಿಯ ಸ್ವರೂಪ ಪಡೆದು ಜಾತಿ ದೌರ್ಜನ್ಯವನ್ನು ಅಳಿಸಿ ಸಮಾಜವನ್ನು ಸಾಮಾಜಿಕ ನ್ಯಾಯದ ಕಡೆ ಮುನ್ನಡೆಸಬೇಕು ಎಂದರು.

ಇದೇ ನಾರಾಯಣ ಗುರುಗಳು ಕಂಡ ಭಾರತ. ಇದೇ ಶಿವಗಿರಿ ಪ್ರತಿಪಾದಿಸುವ ಭಾರತ. ಇಂಥಾ ಭಾರತವನ್ನು ನಾವು ಒಟ್ಟಾಗಿ ಗಟ್ಟಿಗೊಳಿಸಬೇಕಿದೆ ಎಂದರು.

ಶಿವಗಿರಿ ಮಠವು ಕೇವಲ ಒಂದು ಯಾತ್ರಾ ಕೇಂದ್ರವಾಗಿರದೇ, ಭಾರತದ ಆತ್ಮಸಾಕ್ಷಿಯ ನೈತಿಕ ವಿಶ್ವವಿದ್ಯಾಲಯವಾಗಿದೆ. ಈ ಪವಿತ್ರ ಕ್ಷೇತ್ರದಲ್ಲಿ ನಿಮ್ಮ ಮುಂದೆ ನಿಂತಿರುವುದು ನನ್ನ ಸೌಭಾಗ್ಯ. ಇದು ಬೌದ್ಧಿಕ ಮತ್ತು ವಿಶ್ವದ ಮಾನವಕುಲದ ಚಳವಳಿಯಾಗಿದೆ. ಇದು ಭೌಗೋಳಿಕವಲ್ಲ, ನೈತಿಕತೆಯ ಪ್ರವಾಸ ಎಂದು ಮೆಚ್ಚುಗೆ ಸೂಚಿಸಿದರು.‌

ರಾಜಕಾರಣ ನೈತಿಕತೆಯಿಂದ ದೂರವಾಗುತ್ತಾ,  ಧರ್ಮವು ನೈತಿಕತೆಗಿಂತ ಹೆಚ್ಚಾಗಿ ಅಧಿಕಾರಕ್ಕಾಗಿ ಆಯುಧವಾಗುತ್ತಿರುವ ಅಪಾಯದ ದಿನಗಳಲ್ಲಿ ಶಿವಗಿರಿ ಒಂದು ನೈತಿಕ ಚಳವಳಿಯಾಗಿ ನಮಗೆ ಆದರ್ಶವಾಗಬೇಕು. ಶಿವಗಿರಿ ಮಠ ‘ಜೀವಂತ ಸಂವಿಧಾನ’ದಂತೆ ಕಾರ್ಯನಿರ್ವಹಿಸುತ್ತಿದೆ ಎಂದರು.

ಶಿವಗಿರಿ ತೀರ್ಥಯಾತ್ರೆಯು ಭಾರತದ ಮೂಲ ‘ಕೋಮು-ವಿರೋಧಿ’ ಯೋಜನೆಯಾಗಿದೆ. ಸಮಾಜವು ಕೃತಕವಾಗಿ ಸೃಷ್ಟಿಸಲ್ಪಟ್ಟ ದ್ವೇಷದಿಂದ ಧ್ರುವೀಕರಣಗೊಳ್ಳುತ್ತಿರುವಾಗ, ಶಿವಗಿರಿಯು ಪ್ರಾಬಲ್ಯಕ್ಕಿಂತ ‘ಸಂವಾದ’ವನ್ನು, ಶ್ರೇಣೀಕೃತ ವ್ಯವಸ್ಥೆಗಿಂತ ‘ಸಮಾನತೆ’ಯನ್ನು ಮತ್ತು ಸಾಂಕೇತಿಕತೆಗಿಂತ ‘ನೈತಿಕತೆ’ಯನ್ನು ಎತ್ತಿ ಹಿಡಿಯುತ್ತದೆ ಎಂದರು.

“ಆಧುನಿಕ ರಾಷ್ಟ್ರ ನಿರ್ಮಾಣದಲ್ಲಿ ಶಿವಗಿರಿ ತೀರ್ಥಯಾತ್ರೆಯ ಪಾತ್ರ” ಎನ್ನುವುದು ಕೇವಲ ಸಾಂಕೇತಿಕವಲ್ಲ. ಇದು ಇಂದಿನ ತುರ್ತು ಅಗತ್ಯ ಮತ್ತು ನಮ್ಮ ಕಾಲದ ಬಿಕ್ಕಟ್ಟುಗಳಿಗೆ ನೇರ ಉತ್ತರ. ಇದರ ಹಿಂದಿರುವ ಶಕ್ತಿ ಶ್ರೀ ನಾರಾಯಣ ಗುರುಗಳು ಕೇವಲ ಒಬ್ಬ ಸಂತನಲ್ಲ, ಬದಲಾಗಿ ಭಾರತದ ಶ್ರೇಷ್ಠ ಸಾಮಾಜಿಕ ದಾರ್ಶನಿಕರಲ್ಲಿ ಒಬ್ಬರು. ನಾರಾಯಣ ಗುರುಗಳು ಅನ್ಯಾಯದ ಚೌಕಟ್ಟಿನೊಳಗೆ ಸುಧಾರಣೆಯನ್ನು ಬಯಸಲಿಲ್ಲ. ಅವರು ಅನ್ಯಾಯದ ಬೇರುಗಳನ್ನೇ ಕಿತ್ತೆಸೆದರು.

ಕೇರಳವು ಜಾತಿ ತಾರತಮ್ಯ, ಮೌಢ್ಯಾಚರಣೆ ಮತ್ತು ಅಸಮಾನತೆಯಿಂದ ಉಸಿರುಗಟ್ಟುತ್ತಿದ್ದಾಗ, “ಮಾನವಕುಲಕ್ಕೆ ಒಂದೇ ಜಾತಿ, ಒಂದೇ ಧರ್ಮ, ಒಬ್ಬನೇ ದೇವರು” ಎಂಬ ಸತ್ಯವನ್ನು ಘೋಷಿಸಿದರು.

ಇದು ಕೇವಲ ಕಾವ್ಯಾತ್ಮಕ ಹೇಳಿಕೆಯಲ್ಲ. ಇದು ಜಾತಿ ತಾರತಮ್ಯ ಸೋಂಕಿನ ಮನುಸ್ಮೃತಿ ಆಧಾರಿತ ಶ್ರೇಣೀಕೃತ ವ್ಯವಸ್ಥೆ, ಧಾರ್ಮಿಕ ಏಕಸ್ವಾಮ್ಯತೆ ಮತ್ತು ಸಾಮಾಜಿಕ ಬಹಿಷ್ಕಾರಕ್ಕೆ ನೀಡಿದ ನೇರ ಸವಾಲಾಗಿತ್ತು‌ ಎಂದರು.

ನಾರಾಯಣ ಗುರುಗಳ ತತ್ವಜ್ಞಾನವು ಕನ್ನಡದ ರಾಷ್ಟ್ರಕವಿ ಕುವೆಂಪು ಅವರು ನಂತರ ಪ್ರತಿಪಾದಿಸಿದ ‘ವಿಶ್ವಮಾನವ’ ಪರಿಕಲ್ಪನೆಯನ್ನು ಒಳಗೊಂಡಿತ್ತು. ಇದು ಜಾತಿರಹಿತ, ಭಯರಹಿತ ಮತ್ತು ಮಾನವೀಯ ಸಮಾಜ ನಿರ್ಮಾಣದ ದೂರದೃಷ್ಟಿಯಾಗಿತ್ತು. ಹಿಂದುಳಿದ ಸಮುದಾಯಗಳು ತಮ್ಮದೇ ಆದ ದೇವಾಲಯಗಳನ್ನು ಸ್ಥಾಪಿಸಬೇಕೆಂದು ಕರೆ ನೀಡಿ, ದೇವಾಲಯಗಳಲ್ಲಿ ವಿಗ್ರಹದ ಬದಲು ಕನ್ನಡಿಯನ್ನು ಪ್ರತಿಷ್ಠಾಪಿಸಿದರು. ದೈವತ್ವವು ಪ್ರತಿ ಮನುಷ್ಯನೊಳಗೆ ನೆಲೆಸಿದ್ದು, ಆತ್ಮಸಾಕ್ಷಾತ್ಕಾರ, ಸಮಾನತೆ ಹಾಗೂ ಯಾರಿಗೂ ಕೇಡು ಬಯಸದಿರುವುದೇ ನಿಜವಾದ ಆರಾಧನೆ ಎಂದು ತಿಳಿಸುವುದು ಇದರ ಉದ್ದೇಶವಾಗಿತ್ತು. ಶಾಲೆಗಳು, ದೇವಾಲಯಗಳು ಮತ್ತು ಸಾಮಾಜಿಕ ಸಂಘಟನೆಗಳನ್ನು ಸ್ಥಾಪಿಸುವ ಮೂಲಕ, ನಾರಾಯಣ ಗುರುಗಳು ಶೋಷಿತರಿಗೆ ಸ್ವಾಭಿಮಾನ, ಜ್ಞಾನ ಮತ್ತು ನಾಯಕತ್ವದ ಗುಣವನ್ನು ಮರುಸ್ಥಾಪಿಸುವ ವೇದಿಕೆಯನ್ನು ಸೃಷ್ಟಿಸಿದರು.

ಜಾತಿ ಎನ್ನುವುದು ಕೇವಲ ಆಚರಣೆಗಳಿಂದಲ್ಲ, ಜ್ಞಾನದ ವ್ಯವಸ್ಥಿತ ನಿರಾಕರಣೆಯಿಂದ ಜೀವಂತವಾಗಿರುವುದನ್ನು ಅವರು ಅರ್ಥಮಾಡಿಕೊಂಡಿದ್ದರು. ಅವರ ಪ್ರಕಾರ, ಅಜ್ಞಾನವು ಆಕಸ್ಮಿಕವಲ್ಲ, ಅದು ಸಮಾಜದ ಶ್ರೇಣೀಕೃತ ವ್ಯವಸ್ಥೆಯ ಉಳಿವಿಗಾಗಿ ಮಾಡಿದ ರಾಜಕೀಯ ಉದ್ದೇಶದ ಸೃಷ್ಠಿಯಾಗಿತ್ತು ಎಂದರು.

“ಶಿಕ್ಷಣದ ಮೂಲಕ ವಿಮೋಚನೆ, ಸಂಘಟನೆಯ ಮೂಲಕ ಸಬಲೀಕರಣ” ಎಂಬ ಅವರ ಮೂಲ ನಂಬಿಕೆಯು ಕೇವಲ ಘೋಷಣೆಯಾಗಿರದೆ, ಸಾಮಾಜಿಕ ಪರಿವರ್ತನೆಯ ಸಿದ್ಧಾಂತವಾಗಿತ್ತು. ಆಧುನಿಕ ರಾಷ್ಟ್ರಗಳು ‘ಮಾನವ ಶಕ್ತಿ’ಯ ಬಗ್ಗೆ ಮಾತನಾಡುವ ಮೊದಲೇ, ಉದ್ದೇಶಪೂರ್ವಕ ಅಸಮಾನತೆಯನ್ನು ಹೋಗಲಾಡಿಸಲು ಶಿಕ್ಷಣವೇ ಪ್ರಬಲ ಅಸ್ತ್ರ ಎಂದು ನಾರಾಯಣ ಗುರುಗಳು ವಾದಿಸಿದ್ದರು.

ನಾರಾಯಣ ಗುರುಗಳು ಐಟಿಐ (ITI)ಗಳನ್ನು ಸ್ಥಾಪಿಸಿದರು, ಕೈಗಾರಿಕಾ ಪ್ರದರ್ಶನಗಳನ್ನು ಆಯೋಜಿಸಿದರು ಮತ್ತು ಹಿಂದುಳಿದ ಸಮುದಾಯಗಳು ಅವಲಂಬಿತರಾಗದೆ ಉತ್ಪಾದಕರಾಗಬೇಕು ಎಂದು ಪ್ರೇರೇಪಿಸಿದರು. ಸ್ವಾಭಿಮಾನದ ಉದ್ಯೋಗಕ್ಕಾಗಿ ಕೈಗಾರಿಕಾ ತರಬೇತಿ, ಕೌಶಲ ಅಭಿವೃದ್ಧಿ ಮತ್ತು ಆಧುನಿಕ ಕೃಷಿ ಕಾರ್ಯಾಗಾರಗಳನ್ನು ಗುರುಗಳು ಉತ್ತೇಜಿಸಿದರು. ಅವರ ಈ ಚಳವಳಿಯು ಕೇರಳ, ತಮಿಳುನಾಡು ಮತ್ತು ಕರ್ನಾಟಕದ ಕರಾವಳಿಯಾದ್ಯಂತ ಕೈಗಾರಿಕಾ ಮತ್ತು ಉದ್ಯಮಶೀಲ ಸಮುದಾಯಗಳ ಉದಯಕ್ಕೆ ನೇರವಾಗಿ ಕಾರಣವಾಯಿತು. ನಾರಾಯಣ ಗುರುಗಳು ಉದ್ಯೋಗ ಮತ್ತು ಕೈಗಾರಿಕೆಯನ್ನು ಸಂಸ್ಕೃತಿ ಅಥವಾ ಆಧ್ಯಾತ್ಮಿಕತೆಗೆ ಅಪಾಯವೆಂದು ಪರಿಗಣಿಸಲಿಲ್ಲ. ಬದಲಾಗಿ ಅವುಗಳನ್ನು ಸಾಮಾಜಿಕ ವಿಮೋಚನೆಯ ಸಾಧನಗಳಾಗಿ ಕಂಡರು.ಉತ್ಪಾದನಾ ಶ್ರಮದ ಬಗೆಗಿನ ಅವರ ಆಸ್ಥೆಯು ಪ್ರಗತಿ ವಿರೋಧಿ ಮತ್ತು ಸಂಕುಚಿತ ಆರ್ಥಿಕ ಚಿಂತನೆಗಳಿಗೆ ನೇರ ವಿರೋಧ ಒಡ್ಡಿತ್ತು.

ನಾರಾಯಣ ಗುರುಗಳು ಶಿಕ್ಷಣವನ್ನು ಉತ್ತೇಜಿಸುವ ಮೂಲಕ, ಅನಿಷ್ಟ ಪದ್ಧತಿಗಳನ್ನು ವಿರೋಧಿಸುವ ಮೂಲಕ ಮತ್ತು ಲಿಂಗ ಸಮಾನತೆಯನ್ನು ಪ್ರತಿಪಾದಿಸುವ ಮೂಲಕ ಮಹಿಳಾ ಸಬಲೀಕರಣಕ್ಕೆ ಶ್ರಮಿಸಿದರು. ಮಹಿಳೆಯರ ಘನತೆ ಮತ್ತು ಸಮಾನ ಅವಕಾಶವಿಲ್ಲದೆ ಸಾಮಾಜಿಕ ನ್ಯಾಯ ಅಸಾಧ್ಯ ಎಂದು ಸಾರಿದರು. ಶಾಲೆಗಳು, ಗ್ರಂಥಾಲಯಗಳು, ಸಾಮಾಜಿಕ ಸುಧಾರಣಾ ಅಭಿಯಾನಗಳು ಮತ್ತು ಕೃಷಿ-ಕೈಗಾರಿಕಾ ಕಾರ್ಯಾಗಾರಗಳನ್ನು ಸಾಂಸ್ಥಿಕಗೊಳಿಸಿದರು ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಇದು ಆಧುನಿಕ ಸಮಾಜಶಾಸ್ತ್ರವು ಯಾವುದನ್ನು ‘ಸಾಮಾಜಿಕ ಬಂಡವಾಳ’ ಎಂದು ಕರೆಯುತ್ತದೆಯೋ, ಅದನ್ನು ಗುರುಗಳು, ಪರಸ್ಪರ ನಂಬಿಕೆಯ ಹಾಗೂ ಸಂಘಟಿತ ಹೋರಾಟದ ಮೂಲಕ ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರೂ ಭಾಗವಹಿಸುವುದು ಅಗತ್ಯವೆಂದು ತಿಳಿಸಿದರು.

ನಾರಾಯಣ ಗುರುಗಳ ಪ್ರಭಾವ ಕೇರಳಕ್ಕೆ ಮಾತ್ರ ಸೀಮಿತವಾಗಿರಲಿಲ್ಲ. 1925ರಲ್ಲಿ ಮಹಾತ್ಮಾ ಗಾಂಧಿಯವರೊಂದಿಗೆ ಅವರು ನಡೆಸಿದ ಐತಿಹಾಸಿಕ ಸಂವಾದವು ಸ್ವಾತಂತ್ರ್ಯ ಚಳವಳಿಯ ದಿಕ್ಕನ್ನೇ ಬದಲಿಸಿತು. “ಜಾತಿ ಎನ್ನುವುದು ಸಾಂಸ್ಕೃತಿಕ ವೈವಿಧ್ಯತೆಯಲ್ಲ, ಅದು ಸಾಂಸ್ಥಿಕ ಅನ್ಯಾಯ” ಎಂಬ ಮೂಲಭೂತ ಸತ್ಯವನ್ನು ಗಾಂಧೀಜಿಯವರು ಅರಿತುಕೊಳ್ಳುವಂತೆ ಮಾಡಿತು.

ಮಾವಿನ ಮರದ ಎಲೆಗಳು ಬೇರೆ ಬೇರೆಯಾಗಿದ್ದರೂ ಅವುಗಳ ಸಾರ ಒಂದೇ ಎಂಬ ಉದಾಹರಣೆಯ ಮೂಲಕ, ಜಾತಿ ಮತ್ತು ಧರ್ಮಗಳು ಜಗತ್ತಿನ ಆಳವಾದ ಸಾಮಾಜಿಕ ಸಮಸ್ಯೆಗಳೇ ಹೊರತು ವೈವಿಧ್ಯತೆಯಲ್ಲ ಎಂದು ಗಾಂಧೀಜಿಯವರಿಗೆ ಮನವರಿಕೆ ಮಾಡಿಕೊಟ್ಟರು.

ನಾರಾಯಣ ಗುರುಗಳನ್ನು ಭೇಟಿಯಾದ ನಂತರವೇ ಗಾಂಧೀಜಿಯವರು ಅಸ್ಪೃಶ್ಯತೆ, ಸರಳತೆ ಮತ್ತು ಅಂತರ್ಜಾತಿ ವಿವಾಹಗಳ ಬಗ್ಗೆ ತಮ್ಮ ನಿಲುವನ್ನು ಗಟ್ಟಿಗೊಳಿಸಿದರು. ಅಂತರ್ಜಾತಿ ವಿವಾಹವಲ್ಲದ ಮದುವೆಗಳಿಗೆ ತಾವು ಹಾಜರಾಗುವುದಿಲ್ಲ ಎಂದು ಗಾಂಧೀಜಿಯವರು ನಿರ್ಧರಿಸಿದ್ದು ಕಾಕತಾಳೀಯವಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.

Key words: Narayana Guru, goal, harmony, amidst diversity, CM Siddaramaiah

The post ವೈವಿದ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಭಾರತ ನಿರ್ಮಾಣ ನಾರಾಯಣಗುರುಗಳ ಗುರಿಯಾಗಿತ್ತು- ಸಿ.ಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.