November Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಪ್ರತಿ ವರ್ಷದ ನವೆಂಬರ್ 3, 4, 5 ರಂದು ಹಂಪಿ ಉತ್ಸವ- ಸಿಎಂ ಸಿದ್ದರಾಮಯ್ಯ
ವಿಜಯನಗರ, ಫೆಬ್ರವರಿ,14,2026 (www.justkannada.in):  2026 ರಿಂದಲೇ ಪ್ರತಿ ವರ್ಷದ ನವೆಂಬರ್ 3, 4, 5 ರಂದು ಹಂಪಿ ಉತ್ಸವದ ಆಯೋಜಿಸುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಜಯನಗರ ಜಿಲ್ಲೆಯಲ್ಲಿ ಹಂಪಿ ಉತ್ಸವ 2026 ನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರ ಹಂಪಿ ಉತ್ಸವ 2026 ವನ್ನು ವಿಜೃಂಭಣೆಯಿಂದ ಆಚರಿಸುತ್ತಿದೆ. ಮಾಜಿ ಸಚಿವ ದಿವಂಗತ ಎಂ.ಪಿ ಪ್ರಕಾಶ್ ಅವರು ಹಿಂದೆ ಕನ್ನಡ ಮತ್ತು ಸಂಸ್ಕೃತಿಯ ಸಚಿವರಾಗಿದ್ದ ಸಂದರ್ಭದಲ್ಲಿ , ಮೈಸೂರು ದಸರಾ ಉತ್ಸವದ ವಿಜೃಂಭಣೆಯನ್ನು ಮನಗಂಡು, ಇದೇ ರೀತಿಯ ಉತ್ಸವವನ್ನು ಹಂಪಿಯಲ್ಲಿಯೂ ನೆರವೇರಿಸಬೇಕೆಂದು ಆಶಿಸಿದ್ದರು.  ಎಂ.ಪಿ ಪ್ರಕಾಶ್ ಅವರು, ಕನ್ನಡ ನಾಡು ನುಡಿ, ಸಾಹಿತ್ಯಗಳಲ್ಲಿ ಅಪಾರ ಆಸಕ್ತಿ ವಹಿಸಿದ್ದರು. ಈ ರೀತಿಯ ಅದ್ದೂರಿ ಹಂಪಿ ಉತ್ಸವದ ಆಚರಣೆಗೆ ಮೂಲಕಾರಣ ಎಂಪಿ ಪ್ರಕಾಶ್ ಅವರು. ಅವರೊಬ್ಬ ಅಪರೂಪದ ವ್ಯಕ್ತಿ  ಎಂದರು.

ಕನ್ನಡ ನಾಡು ನುಡಿಗೆ ಸರ್ಕಾರದ ಪ್ರೋತ್ಸಾಹ

ಇತಿಹಾಸ ತಿಳಿಯದವರು ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ. ವಿಜಯನಗರ ಸಾಮ್ರಾಜ್ಯದ ಅವಧಿಯಲ್ಲಿ ಸಂಪತ್ಭರಿತವಾಗಿತ್ತು. ನಮ್ಮ ಸರ್ಕಾರ ಕೂಡ ಸಾಹಿತ್ಯ ಸಂಸ್ಕೃತಿ ಕಲೆ ಗಳಿಗೆ ಹೆಚ್ಚಿನ ಒತ್ತು ನೀಡುತ್ತದೆ. ವಿಜಯನಗರ ಕಾಲದಲ್ಲಿ ಸಂಪ್ಭರಿತವಾದ ಹಂಪಿಯ ಹಿರಿಮೆಯನ್ನು ಹಂಪಿ ಉತ್ಸವದಿಂದ ತಿಳಿಯಬಹುದಾಗಿದೆ.  ವಿದೇಶಿ ಪ್ರವಾಸಿಗ ಅಬ್ದುಲ್ ರಜಾಕ್ , ವಿಜಯನಗರ ಶ್ರೀಮಂತವಾದ ಸ್ಥಳವಾಗಿತ್ತು ಎಂದು ಉಲ್ಲೇಖಿಸಿದ್ದನ್ನು ಸಿಎಂ ಸಿದ್ದರಾಮಯ್ಯ ವಿವರಿಸಿದರು.

ಅಸಮಾನತೆ ನಿವಾರಣೆಯಿಂದ ಸಮಸಮಾಜ ನಿರ್ಮಿಸಲು ಸಾಧ್ಯ

ಸಮಾಜದಲ್ಲಿ ಬಡವ ಶ್ರೀಮಂತ, ಉತ್ತಮ ಮತ್ತು ಕೆಳ ಜಾತಿಗಳೆಂಬ ಬೇಧವಿದೆ. ಡಾ.ಬಿ.ಆರ್. ಅಂಬೇಡ್ಕರ್ ರವರು ಸಂವಿಧಾನ ರಚಿಸದಿದ್ದರೆ, ಸಮಾನ ಅವಕಾಶಗಳು ದೊರೆಯಲು ಸಾಧ್ಯವಾಗುತ್ತಿರಲಿಲ್ಲ. ಸಮಾಜದ ಅಸಮಾನತೆಯನ್ನು ತೊಡೆದುಹಾಕಿದರೆ ಸಮಸಮಾಜ ನಿರ್ಮಾಣ ಸಾಧ್ಯ. 2013 ರಲ್ಲಿ ಮತ್ತು 2023 ರಲ್ಲಿ ಮುಖ್ಯಮಂತ್ರಿಯಾಗಿ ನಾನು ತಂದಿರುವ ಕಾರ್ಯಕ್ರಮಗಳು ಅಸಮಾನತೆಯ ನಿವಾರಣೆಗೆ ತಂದವುಗಳಾಗಿವೆ. ಸಮಸಮಾಜ ನಿರ್ಮಿಸಿದಾಗ ಮಾತ್ರ ದುರ್ಬಲವರ್ಗದವರೂ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ ಎಂದರು.

ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಆರ್ಥಿಕ ಶಕ್ತಿ

ನಮ್ಮ ಸರ್ಕಾರ ಅನೇಕ ಭಾಗ್ಯ ಯೋಜನೆಗಳನ್ನು ನೀಡಿದ್ದು, 2023 ರಿಂದಲೂ ಗ್ಯಾರಂಟಿ ಯೋಜನೆಗಳನ್ನು ನೀಡಿ, ಅಸಮಾನತೆಯನ್ನು ನಿವಾರಿಸುವ  ಉದ್ದೇಶ ಹೊಂದಿದೆ. ಜನರಿಗೆ ಆರ್ಥಿಕ , ಸಾಮಾಜಿಕ ಶಕ್ತಿಯನ್ನು ಸಾಧ್ಯವಾಗಿಸದೇ ಇದ್ದರೆ, ಜಾತಿ ವ್ಯವಸ್ಥೇ ಹೋಗಲಾಡಿಸಬಹುದು.  ಗ್ಯಾರಂಟಿ ಯೋಜನೆಗಳು ಜನರಿಗೆ ಕೊಂಡುಕೊಳ್ಳುವ ಶಕ್ತಿಯನ್ನು ಹೆಚ್ಚಿಸುತ್ತಿದೆ. ಜಾತಿವ್ಯವಸ್ಥೆ ಇಲ್ಲವಾಗಲು ಆರ್ಥಿಕ, ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಸ್ವಾತಂತ್ರ್ಯ ಬರಬೇಕು ಎಂದರು.

ನಾಡು ನುಡಿ ಸಂಸ್ಕೃತಿಗಳ ರಕ್ಷಣೆಗೆ ಸರ್ಕಾರ ಬದ್ಧ

ಸರ್ಕಾರ ಆಚರಿಸುವ ಚಾಲುಕ್ಯ ಉತ್ಸವ, ಹಂಪಿ ಉತ್ಸವ, ಕಿತ್ತೂರು ಉತ್ಸವ, ಆನೆಗುಂದಿ ಉತ್ಸವ, ಬನವಾಸಿ , ಮೈಸೂರು ದಸರಾ, ಕರಾವಳಿ ಉತ್ಸವ ಗಳ ಮೂಲಕ ನಾಡಿನ ಸಾಹಿತ್ಯ, ಕಲೆ, ಸಂಗೀತ ಪರಂಪರೆಗಳನ್ನು ಸಂರಕ್ಷಿಸುವ ದಿಸೆಯಲ್ಲಿ ಮುಖ್ಯವಾಗಿದೆ. ಮುಂದಿನ ಪೀಳಿಗೆಗೆ ಕನ್ನಡದ ಶ್ರೀಮಂತ ಪರಂಪರೆ ಕೊಂಡೊಯ್ಯವ ದಿಸೆಯಲ್ಲಿ ಸರ್ಕಾರ ಎಲ್ಲ ರೀತಿಯ ನೆರವು ನೀಡಲು ಬದ್ಧವಾಗಿದೆ ಎಂದರು.

Key words: Hampi festival, November, every year, CM Siddaramaiah

The post ಪ್ರತಿ ವರ್ಷದ ನವೆಂಬರ್ 3, 4, 5 ರಂದು ಹಂಪಿ ಉತ್ಸವ- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನವೆಂಬರ್ ನಲ್ಲಿ ಸಿಎಂ ಆಗಿ ಡಿಕೆಶಿ ಪದಗ್ರಹಣ ಎಂಬ ಪ್ರಶ್ನೆ: ಗರಂ ಆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಅಕ್ಟೋಬರ್,31,2025 (www.justkannada.in):  ರಾಜ್ಯದಲ್ಲಿ ಸಿಎಂ ಬದಲಾವಣೆ, ಸಚಿವ ಸಂಪುಟ ಪುನಾರಚನೆ ವಿಚಾರ ಚರ್ಚೆ ಹಿನ್ನೆಲೆಯಲ್ಲಿ  ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಗರಂ ಆಗಿ ಉತ್ತರಿಸಿದ ಪ್ರಸಂಗ ನಡೆದಿದೆ.

ನವೆಂಬರ್ ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುತ್ತಾರೆಯೇ..? ಎಂದು ಮಾಧ್ಯಮ ಪ್ರಶ್ನೆಗಳಿಗೆ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ, ನಿಮಗೆ ಅವರು ಹೇಳಿದ್ರಾ..?  ನನಗೆ ಗೊತ್ತಿಲ್ಲ ನಿಮಗೆ ಯಾರು ಹೇಳಿದ್ರು ಎಲ್ಲಿ ಹೇಳಿದ್ದಾರೆ ಎಂದು ಮರು ಪ್ರಶ್ನಿಸಿದರು.

ನಿಮಗೆ ಹೇಗೆ ಗೊತ್ತಾಯ್ತು? ಯಾವ ಪತ್ರಿಕೆಯಲ್ಲಿ ಬಂದಿದೆ?  ನಾನು ದಿನನಿತ್ಯ ಪತ್ರಿಕೆ ಓದುತ್ತೇನೆ ನಾನು ಎಲ್ಲಾ ಪತ್ರಿಕೆಗಳನ್ನ ಓದುತ್ತೇನೆ ಯಾವ ಪತ್ರಿಯೆಲ್ಲೂ ಬಂದಿಲ್ಲ. ನಾನು ಎಲ್ಲೂ ನೋಡಿಲ್ಲ ಎಂದು ಸಿಎಂ ಸಿದ್ದರಾಮಗ್ಗ ಗರಂ ಆಗಿ ಉತ್ತರಿಸಿದರು.

Key words: DK Shivakumar, CM, November, CM Siddaramaiah

The post ನವೆಂಬರ್ ನಲ್ಲಿ ಸಿಎಂ ಆಗಿ ಡಿಕೆಶಿ ಪದಗ್ರಹಣ ಎಂಬ ಪ್ರಶ್ನೆ:  ಗರಂ ಆದ ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನವೆಂಬರ್ ನಲ್ಲಿ ಸಂಪುಟಕ್ಕೆ ಮೇಜರ್ ಸರ್ಜರಿ- ಸುಳಿವು ನೀಡಿದ ಸಚಿವ ಬೋಸರಾಜು
ಬೆಂಗಳೂರು,ಅಕ್ಟೋಬರ್,9,2025 (www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೇರಿ 2.5 ವರ್ಷ ತುಂಬಲಿದ್ದು ಈ ಮಧ್ಯೆ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಸಚಿವ ಬೋಸರಾಜು ಸುಳಿವು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಎಸ್.ಎನ್ ಬೋಸರಾಜು, ನವೆಂಬರ್ ನಲ್ಲಿ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಯಲಿದೆ.  ಸರ್ಕಾರ ಬಂದು 2.5 ವರ್ಷವಾದ ಹಿನ್ನೆಲೆ  ಬದಲಾವಣೆ ಬಗ್ಗೆ ಚರ್ಚೆಯಾಗುತ್ತಿದೆ.  ಕೆಲವರಿಗೆ ಅವಕಾಶ ಕೊಡುತ್ತೇವೆಂದು ಚರ್ಚೆಯಾಗಿದೆ  ಸಂಪುಟ ವಿಸ್ತರಣೆ ಸಿಎಂ ಹೈಕಮಾಂಡದ ಗೆ ಬಿಟ್ಟಿದ್ದು ಎಂದರು.

ಹೈಕಮಾಂಡ ಮಾತಿಗೆ ಬದ್ದ. ಹೈಕಮಾಂಢ್ ಹೇಳಿದರೆ ತ್ಯಾಗಕ್ಕೆ ಸಿದ್ದರಿರಬೇಕು.  ವರಿಷ್ಠರು ಹೇಳಿದ್ರೆ ಚುನಾವಣೆಗೂ ತಯಾರಾಗಬೇಕು. ಕೆಲವೊಮ್ಮೆ ಒಳ್ಳೆ ಕೆಲಸ ಮಾಡಿದರೂ ಸ್ಥಾನ ಬಿಡಬೇಕಾಗುತ್ತದೆ ಎಂದು ಬೋಸರಾಜು ಹೇಳಿದ್ದಾರೆ.

Key words: Minister, Bosaraju, major surgery, cabinet, November

The post ನವೆಂಬರ್ ನಲ್ಲಿ ಸಂಪುಟಕ್ಕೆ ಮೇಜರ್ ಸರ್ಜರಿ- ಸುಳಿವು ನೀಡಿದ ಸಚಿವ ಬೋಸರಾಜು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನವಂಬರ್ ಗೆ ಸಿಎಂ ಬದಲಾವಣೆ: ಈ ಇಬ್ಬರಲ್ಲಿ ಒಬ್ಬರು ಸಿಎಂ ಆಗ್ತಾರೆ- ಹೆಚ್.ವಿಶ್ವನಾಥ್
ಮೈಸೂರು,ಜೂನ್,14,2025 (www.justkannada.in):  ನವಂಬರ್ ಗೆ ಸಿಎಂ ಬದಲಾವಣೆ ಆಗುತ್ತದೆ. ಡಿ.ಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಇಬ್ಬರಲ್ಲಿ ಒಬ್ಬರು ಸಿಎಂ ಆಗುತ್ತಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್  ಭವಿಷ್ಯ ನುಡಿದರು.

ಮೈಸೂರಿನಲ್ಲಿ ಇಂದು ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್,  ಸಿಎಂ ಸಿದ್ದರಾಮಯ್ಯ ಹತ್ತು ವರ್ಷದ ಹಿಂದೆಯೇ ಜಾತಿವಾರು ಜನಗಣತಿ ಮಾಡಿಸಿದ್ದರು. ಒಂದುವರೆ ಲಕ್ಷ ಶಿಕ್ಷಕರು 2 ವರ್ಷ ಗಣತಿ ಮಾಡಿದ್ದರು. ಅದಕ್ಕೆ 170 ಕೋಟಿಗೂ ಅಧಿಕ ಹಣ ಖರ್ಚಾಗಿತ್ತು. ಆಗಿನಿಂದಲೂ ವರದಿ ಬಹಿರಂಗ ಮಾಡದೇ ಹಾಗೆಯೇ ಇಟ್ಟುಕೊಂಡಿದ್ದರು. ಇದೀಗ ಹೈಕಮಾಂಡ್ ಗೆ ಹೆದರಿಕೊಂಡು ಮತ್ತೆ ಜಾತಿಗಣತಿ ಮಾಡಿರುವುದಾಗಿ ಹೇಳಿದ್ದಾರೆ. ಇದು ಹೇಗೆ ಸಾಧ್ಯ?  ಎಂದು ಪ್ರಶ್ನಿಸಿದರು.

ಜಾತಿಗಣತಿ ಮಾಡಲು ಶಿಕ್ಷಕರು ಬೇಕು. ಈಗ ತಾನೇ ಶಾಲೆಗಳು ಆರಂಭವಾಗಿರುವುದರಿಂದ ಶಿಕ್ಷಕರು ಲಭ್ಯವಾಗೋದಿಲ್ಲ. ಸಿದ್ದರಾಮಯ್ಯ ಹಾವಾಡಿಗನ ರೀತಿ ಈಗ ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳ್ತಿದ್ದಾರೆ. ಮುಂದಿನ ನವೆಂಬರ್ ಡಿಸೆಂಬರ್ ಗೆ ಸಿದ್ದರಾಮಯ್ಯ ಚೇಂಜ್ ಆಗ್ತಾರೆ. ಅದು ಹೇಗೆ ಜಾತಿಗಣತಿ ಮಾಡಿಸುತ್ತೀರಿ. ಮರುಜಾತಿಗಣತಿ ಮಾಡಿಸುವುದಿಲ್ಲ ಎಂದು ಹೈಕಮಾಂಡ್ ಗೆ ಹೇಳಿದ್ದರೇ ಸಿದ್ದರಾಮಯ್ಯ ಹೀರೋ‌ ಆಗುತ್ತಿದ್ದರು. ಸಿದ್ದರಾಮಯ್ಯ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದರು. ಮೂರು ತಿಂಗಳೊಳಗೆ ಜಾತಿಗಣತಿ ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಸುಮ್ಮನೇ ದೇವರಾಜ ಹೆಸರು ಹೇಳಬೇಡಿ. ಪ್ರಾಮಾಣಿಕತೆ ಇಲ್ಲದ ಸಿಎಂ ಸಿದ್ದರಾಮಯ್ಯ ಎಂದು ಚರಿತ್ರೆಯಲ್ಲಿ ದಾಖಲಾಗಿ ಹೋದರು. ಸುಳ್ಳು ಹೇಳಿಕೊಂಡು ಓಡಾಡುತ್ತಿರುವ ಸಿಎಂ ಸಿದ್ದರಾಮಯ್ಯ ಎಂದು ಚರಿತ್ರೆಯಲ್ಲಿ ದಾಖಲಾಗುತ್ತಾರೆ. 170 ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿ ಜಾತಿಗಣತಿ ಮಾಡಿಸಿದ‌ ವರದಿಯನ್ನು ತಿಪ್ಪೆಗೆ ಎಸೆದಿದ್ದಾರೆ ಎಂದು  ಎಚ್ ವಿಶ್ವನಾಥ್  ವಾಗ್ದಾಳಿ ನಡೆಸಿದರು.

ಆರ್ ಸಿಬಿ ವಿಜಯೋತ್ಸವ ವೇಳೆ ಡಿಕೆ ಶಿವಕುಮಾರ್ ಎಲ್ಲವನ್ನೂ ಕೆಡಿಸಿಬಿಟ್ಟರು

ಆರ್ ಸಿಬಿ ವಿಜಯೋತ್ಸವದ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್ ಎಲ್ಲವನ್ನೂ ಕೆಡಿಸಿ ಬಿಟ್ಟರು. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿ ಎಂದುಕೊಂಡಿದ್ದೆ. ಆದರೆ ಆರ್ ಸಿಬಿ ವಿಜಯೋತ್ಸವ ವೇಳೆ ಡಿಕೆ ಶಿವಕುಮಾರ್ ಎಲ್ಲವನ್ನೂ ಕೆಡಿಸಿಬಿಟ್ಟರು. ಆರ್ ಸಿ ಬಿ ಯಲ್ಲಿ ಕರ್ನಾಟಕದ ಆಟಗಾರರೇ ಇಲ್ಲ. ಆರ್ ಸಿಬಿ ಗೂ ಕರ್ನಾಟಕಕ್ಕೂ ಸಂಬಂಧವೇ ಇಲ್ಲ. ಕಾಲ್ತುಳಿತ ಘಟನೆ ಸಂಬಂಧ ಸಿಎಂ ಸಿದ್ದರಾಮಯ್ಯ ನೀಡಿದ ಹೇಳಿಕೆಗಳು ವೈರುಧ್ಯದಿಂದ ಕೂಡಿವೆ ಎಂದು ಕಿಡಿಕಾರಿದರು.

ಚಿನ್ನಸ್ವಾಮಿ ಸ್ಟೇಡಿಯಂ ಬಳಿ 3:30ಕ್ಕೆ ಕಾಲ್ತುಳಿತ ಆದರೂ ಸಂಜೆ 5:30 ಕ್ಕೆ ಗೊತ್ತಾಯಿತು. ವಿಧಾನಸೌಧ ಕಾರ್ಯಕ್ರಮಕ್ಕೂ, ಚಿನ್ನಸ್ವಾಮಿ ಕ್ರೀಡಾಂಗಣ ಕಾರ್ಯಕ್ರಮಕ್ಕೂ ಸಂಬಂಧವಿಲ್ಲ‌‌. ರಾಜ್ಯಪಾಲರನ್ನು ಆಹ್ವಾನಿಸಿರಲಿಲ್ಲ ಎಂದೆಲ್ಲ ಸಿದ್ದರಾಮಯ್ಯ ಹೇಳಿದ್ದರು. ಆ ಬಳಿಕ ರಾಜ್ಯಪಾಲರನ್ನು ಆಹ್ವಾನಿಸಿದ್ದು ನಾನೇ ಎಂದು ಹೇಳಿದ್ದಾರೆ.  ಇವರ ತಪ್ಪು ಇಲ್ಲದಿದ್ದರೇ ಗೋವಿಂದರಾಜು ಅವರನ್ನು ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಏಕೆ ತೆಗೆದರು ಎಂದು ಹೇಳಬೇಕು? ಎಂದು ಎಚ್ ವಿಶ್ವನಾಥ್ ಆಗ್ರಹಿಸಿದರು.

Key words: CM, change, November, MLC, H. Vishwanath

The post ನವಂಬರ್ ಗೆ ಸಿಎಂ ಬದಲಾವಣೆ: ಈ ಇಬ್ಬರಲ್ಲಿ ಒಬ್ಬರು ಸಿಎಂ ಆಗ್ತಾರೆ- ಹೆಚ್.ವಿಶ್ವನಾಥ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನವೆಂಬರ್, ಡಿಸೆಂಬರ್ ನಲ್ಲಿ ನಭಕ್ಕೆ ನೆಗೆಯಲಿರುವ ‘ಪುನೀತ್’ ಉಪಗ್ರಹ.
ಬೆಂಗಳೂರು,ಆಗಸ್ಟ್,26,2022(www.justkannada.in):  ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸುತ್ತಿರುವ `ಪುನೀತ್’ ಉಪಗ್ರಹವನ್ನು ನ.15ರಿಂದ ಡಿ.31ರ ನಡುವೆ ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಹೇಳಿದ್ದಾರೆ.

ಈ ಉಪಗ್ರಹ ಯೋಜನೆಯ ಪ್ರಗತಿ ಕುರಿತು ವಿಕಾಸಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ  ಅಶ್ವಥ್ ನಾರಾಯಣ್, “ಇದರ ಅಂಗವಾಗಿ ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಕುತೂಹಲ ಮತ್ತು ಆಸಕ್ತಿ ಬೆಳೆಸಲು ಪ್ರೌಢಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಜಿಲ್ಲೆ, ವಿಭಾಗೀಯ ಮತ್ತು ರಾಜ್ಯ ಮಟ್ಟದ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. ಇದರಲ್ಲಿ ಅಂತಿಮವಾಗಿ 1 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಉಪಗ್ರಹ ಉಡಾವಣೆ ಕಾರ್ಯಕ್ರಮಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾಕ್ಕೆ ಕರೆದುಕೊಂಡು ಹೋಗಲಾಗುವುದು” ಎಂದರು.

ಸ್ಪರ್ಧೆಯ ಭಾಗವಾಗಿ ಪ್ರೌಢಶಾಲಾ ಮಕ್ಕಳಿಗೆ ಆನ್‌ ಲೈನ್‌ ರಸಪ್ರಶ್ನೆ, ಸ್ಥಳದಲ್ಲೇ  ಚಿತ್ರ ಬಿಡಿಸುವ ಸ್ಪರ್ಧೆ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಬಂಧ ರಚನೆ, ಖಗೋಳ ವಿಜ್ಞಾನಕ್ಕೆ ಸಂಬಂಧಿಸಿದ ಪೋಸ್ಟರ್ ರಚನೆ ಏರ್ಪಡಿಸಲಾಗುತ್ತಿದೆ. ಈ ಸಂಬಂಧ ಎಲ್ಲಾ 31 ಜಿಲ್ಲೆಗಳ ಡಿಡಿಪಿಐಗಳಿಗೆ ಈಗಾಗಲೇ ಸೂಚನೆ ಕೊಡಲಾಗಿದೆ ಎಂದು ಅವರು ತಿಳಿಸಿದರು.

ಸ್ವಾತಂತ್ರದ 75ನೇ ವರ್ಷಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಶಾಲಾ ವಿದ್ಯಾರ್ಥಿಗಳಿಂದಲೇ 75 ಉಪಗ್ರಹಗಳನ್ನು ಅಭಿವೃದ್ಧಿ ಪಡಿಸುವ ಯೋಜನೆಯನ್ನು ಘೋಷಿಸಿದ್ದರು. ಈ ಪೈಕಿ, ಬೆಂಗಳೂರು ವಲಯದ ಸರಕಾರಿ ಶಾಲೆಗಳ ವಿದ್ಯಾರ್ಥಿಗಳು ‘ಕೆಜಿಎಸ್ 3ಸ್ಯಾಟ್’ ಉಪಗ್ರಹವನ್ನು 1.90 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸುತ್ತಿದ್ದು, ಮಲ್ಲೇಶ್ವರಂನಲ್ಲಿರುವ ಸರಕಾರಿ ಪ್ರೌಢಶಾಲೆಯಲ್ಲಿ ಇವರಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ದಿವಂಗತ ನಟ ಪುನೀತ್ ಅವರ ಸ್ಮರಣಾರ್ಥ ಈ ಉಪಗ್ರಹಕ್ಕೆ ಅವರ ಹೆಸರನ್ನಿಡಲಾಗಿದೆ. ಪ್ರಧಾನಿಯವರ ಕಾರ್ಯಕ್ರಮದಡಿ ಉಡಾವಣೆಗೊಳ್ಳುತ್ತಿರುವ ದೇಶದ ಪ್ರಥಮ ಉಪಗ್ರಹ ಇದಾಗಿದೆ” ಎಂದು ಅವರು ವಿವರಿಸಿದರು.

ವಿದ್ಯಾರ್ಥಿಗಳು ಕೇವಲ ಉಪಗ್ರಹ ಅಭಿವೃದ್ಧಿ ಯೋಜನೆಯಲ್ಲಿ ಪಾಲ್ಗೊಂಡರೆ ಸಾಲದು. ಬದಲಿಗೆ ಬಾಹ್ಯಾಕಾಶ, ಖಗೋಳ ವಿಜ್ಞಾನ, ಅಂತರಿಕ್ಷ ಇತ್ಯಾದಿಗಳ ಬಗ್ಗೆ ತಿಳಿದುಕೊಂಡು, ಸಂಭ್ರಮಿಸಬೇಕು ಎನ್ನುವುದು ಸರಕಾರದ ಆಶಯವಾಗಿದೆ. ಹೀಗಾಗಿ ಸ್ಪರ್ಧೆ ಮತ್ತು ವಿಜೇತರಿಗೆ ಪ್ರವಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಅವರು ನುಡಿದರು.

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ವ್ಯವಸ್ಥಾಪಕ ನಿರ್ದೇಶಕ ಬಸವರಾಜ ಸೇರಿದಂತೆ ಇತರ ಹಿರಿಯ ವಿಜ್ಞಾನಿಗಳು ಸಭೆಯಲ್ಲಿ ಹಾಜರಿದ್ದರು.

ಸ್ಪರ್ಧೆಯ ವಿವರ…

ನೋಂದಣಿಗೆ ಕೊನೆ ದಿನ: ಸೆ.10

ಜಿಲ್ಲಾ ಮಟ್ಟದ ಕ್ವಿಜ್ ಸ್ಪರ್ಧೆ: ಸೆ.19ರಿಂದ 23

ಪ್ರಬಂಧಗಳನ್ನು ಅಪ್‌ ಲೋಡ್‌ ಮಾಡಲು ಕೊನೆ ದಿನ: ಸೆ.20

ಜಿಲ್ಲಾ ಮಟ್ಟದ ವಿಜ್ಞಾನ ಚಿತ್ರಕಲೆ ಸ್ಪರ್ಧೆ: ಸೆ.26ರಿಂದ 30

ವಿಭಾಗ ಮಟ್ಟದ ಪೋಸ್ಟರ್ ಸ್ಪರ್ಧೆ: ಅಕ್ಟೋಬರ್ 3ರಿಂದ  7

ಜಿಲ್ಲಾ ಮಟ್ಟದ ಫಲಿತಾಂಶ ಪ್ರಕಟಣೆ: ಅಕ್ಟೋಬರ್ ಮಧ್ಯ ಭಾಗ

ರಾಜ್ಯ ಮಟ್ಟದ ಕ್ವಿಜ್‌: ಅ.17ರಿಂದ 19

ರಾಜ್ಯ ಮಟ್ಟದ ಪೋಸ್ಟರ್ ಸ್ಪರ್ಧೆ (ಆನ್‌ಲೈನ್‌): ಅ.18ರಿಂದ 20

ರಾಜ್ಯ ಮಟ್ಟದ ಫಲಿತಾಂಶ ಘೋಷಣೆ: ಅಕ್ಟೋಬರ್ ಕೊನೆಯ ವಾರ

Key words: Punith-satellite -launch –November-December

The post ನವೆಂಬರ್, ಡಿಸೆಂಬರ್  ನಲ್ಲಿ ನಭಕ್ಕೆ ನೆಗೆಯಲಿರುವ ‘ಪುನೀತ್’ ಉಪಗ್ರಹ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ನವೆಂಬರ್ ನಲ್ಲಿ ಟಿಇಟಿ ಪರೀಕ್ಷೆ..
ಬೆಂಗಳೂರು,ಆಗಸ್ಟ್,8,2022(www.justkannada.in):  ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಗುಡ್ ನ್ಯೂಸ್ ನೀಡಿದ್ದು,  ಇನ್ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ( ಶಿಕ್ಷಕರ ಅರ್ಹತಾ ಪರೀಕ್ಷೆ) ಪರೀಕ್ಷೆ ನಡೆಸುವುದಾಗಿ ತಿಳಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿ ಮಾಹಿತಿ ನೀಡಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಶಿಕ್ಷಕರ ನೇಮಕ ಪರೀಕ್ಷೆ ಫಲಿತಾಂಶ ಇದೇ ತಿಂಗಳಲ್ಲಿ ಪ್ರಕಟಿಸಲಾಗುತ್ತದೆ. ನವೆಂಬರ್ ತಿಂಗಳಲ್ಲಿ ಟಿಇಟಿ ಪರೀಕ್ಷೆ ನಡೆಸಲಾಗುತ್ತದೆ. ಮಾದರಿ ಶಾಲೆ, ಸ್ಪೋಕನ್ ಇಂಗ್ಲೀಷ್ ತರಗತಿ, ನೈತಿಕ ವಿಜ್ಞಾನ ತರಗತಿ ಸೇರಿದಂತೆ ಇನ್ನಿತರ ಶೈಕ್ಷಣಿಕ ಅಭಿವೃದ್ಧಿ ಉಪಕ್ರಮಗಳನ್ನು ಮುಂದಿನ ದಿನಗಳಲ್ಲಿ ಅನುಷ್ಠಾನಗೊಳಿಸುವ ಗುರಿ ಇದೆ ಎಂದು ತಿಳಿಸಿದ್ದಾರೆ.

ಹಾಗೆಯೇ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ, ಬದಲಾವಣೆ ತರಲಿರುವ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಅನುಷ್ಠಾನ, 15 ಸಾವಿರ ಶಿಕ್ಷಕರ ನೇಮಕ, ಶಾಲಾ- ಕಾಲೇಜುಗಳ 8,101 ಕೊಠಡಿಗಳ ನಿರ್ಮಾಣ, ಶಿಕ್ಷಕರ ಮುಂಬಡ್ತಿ ಹಾಗೂ ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರು ಹಾಗೂ ಬಿಸಿಯೂಟ ಕಾರ್ಯಕರ್ತರ ಗೌರವ ಸಂಭಾವನೆಯನ್ನು ಹೆಚ್ಚಳ ಮಾಡಲಾಗಿದೆ ಎಂದು ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ.

ಶಾಲಾ ಶಿಕ್ಷಣ‌ ಮತ್ತು ಸಾಕ್ಷರತೆ ಇಲಾಖೆಯ ಜವಾಬ್ದಾರಿ ವಹಿಸಿಕೊಂಡು ಒಂದು ವರ್ಷ ಪೂರ್ಣಗೊಂಡಿದೆ. ಈ ಅವಧಿಯಲ್ಲಿ ಸುಧಾರಣೆ, ಬದಲಾವಣೆ, ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಕಳೆದ ವರ್ಷ ಕೋವಿಡ್-19 ಸಂದರ್ಭದಲ್ಲಿ ಭೌತಿಕ ತರಗತಿಗಳ ಆರಂಭ ಹಾಗೂ ಕಲಿಕಾ ನಷ್ಟ ಸರಿದೂಗಿಸಲು ಈ ವರ್ಷ ಕಲಿಕಾ ಚೇತರಿಕೆ ಕಾರ್ಯಕ್ರಮ ರೂಪಿಸಲಾಯಿತು ಎಂದು ತಿಳಿಸಿದ್ದಾರೆ.

Key words: Good news – teacher –aspirants- TET- exam – November.

The post ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್:  ನವೆಂಬರ್ ನಲ್ಲಿ ಟಿಇಟಿ ಪರೀಕ್ಷೆ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಭಾರತ್ ಬಂದ್ ಯಶಸ್ವಿ: ನವೆಂಬರ್ ನಲ್ಲಿ ಮತ್ತೆ ಬೃಹತ್ ರ್ಯಾಲಿ- ಕೋಡಿಹಳ್ಳಿ ಚಂದ್ರಶೇಖರ್.
ಬೆಂಗಳೂರು, ಸೆಪ್ಟಂಬರ್,27,2021(www.justkannada.in): ಕೇಂದ್ರ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ರೈತರು ಬೀದಿಗಿಳಿದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ಈ ನಡುವೆ ರಾಜ್ಯದಲ್ಲೂ ಸಹ ರೈತರ ಪ್ರತಿಭಟನೆಯ ಕಿಚ್ಚು ಹೆಚ್ಚಾಗಿತ್ತು. ರಾಜ್ಯಾದ್ಯಂತ ಹಲವು ಸಂಘಟನೆಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿ ಭಾರತ್ ಬಂದ್ ಗೆ ಸಹಕರಿಸಿದವು.

ಬೆಂಗಳೂರಿನ ಟೌನ್ ಹಾಲ್ ನಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ಬೃಹತ್ ಪ್ರತಿಭಟನಾ ಜಾಥಾ  ಬಳಿಕ ಸಭೆ ನಡೆಸಿ ಮಾತನಾಡಿದ  ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ಕೇಂದ್ರ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ಮುಕ್ತಾಯವಾಗಿದ್ದು, ಭಾರತ್ ಬಂದ್ ಯಶಸ್ವಿಯಾಗಿದೆ. ಮತ್ತೆ ನವೆಂಬರ್ ನಲ್ಲಿ ಬೃಹತ್ ಹೋರಾಟ ಮಾಡಲಾಗುವುದು ಎಂದು ಘೋಷಣೆ ಮಾಡಿದರು.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅನ್ನದಾತರು ಪ್ರತಿಭಟನೆ ನಡೆಸಿ ಕೇಂದ್ರ ಕೃಷಿ ಕಾಯ್ದೆ ಹಾಗೂ ಬೆಲೆ ಏರಿಕೆ ನೀತಿ ಖಂಡಿಸಿದ್ದಾರೆ. ಹೆದ್ದಾರಿಗಳನ್ನು ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಹತ್ತು ತಿಂಗಳಿಂದ ರೈತರು ದೇಶಾದ್ಯಂತ ಕೃಷಿ ಕಾಯ್ದೆ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಆದರೂ ಕೇಂದ್ರ ಸರ್ಕಾರ ರೈತರ ಸಂಕಷ್ಟವನ್ನು ಆಲಿಸುತ್ತಿಲ್ಲ. ಕೋವಿಡ್ ಸಂಕಷ್ಟದ ನಡುವೆ ಇದೀಗ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ. ಇಂದು ಪ್ರತಿಭಟನೆ ಅಂತ್ಯವಾಗಲಿದೆ.  ಆದರೆ ಕೃಷಿ ತಿದ್ದುಪಡಿ ಕಾಯ್ದೆಯನ್ನ ಕೇಂದ್ರ ಸರ್ಕಾರ ವಾಪಸ್ ಪಡೆಯದಿದ್ದರೆ ನವೆಂಬರ್ ನಲ್ಲಿ ಮತ್ತೆ ಬೃಹತ್ ಪ್ರತಿಭಟನಾ  ಹೋರಾಟವನ್ನ ಹಮ್ಮಿಕೊಳ್ಳಲಾಗುತ್ತದೆ ಎಂದು ಹೇಳಿದರು.

Key words: Bharat Bandh – successful-Huge rally – November-farmer-Kodihalli Chandrasekhar.

The post ಭಾರತ್ ಬಂದ್ ಯಶಸ್ವಿ: ನವೆಂಬರ್ ನಲ್ಲಿ ಮತ್ತೆ ಬೃಹತ್ ರ್ಯಾಲಿ- ಕೋಡಿಹಳ್ಳಿ ಚಂದ್ರಶೇಖರ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕನ್ನಡ ಕೇವಲ ನವೆಂಬರ್ ಉತ್ಸವವಾಗದೇ ನಿತ್ಯೋತ್ಸವವಾಗಬೇಕು : ಸಚಿವ ಬಿ.ಸಿ.ಪಾಟೀಲ್
ಕೊಪ್ಪಳ,ನವೆಂಬರ್,01,2020(www.justkannada.in) : ಕನ್ನಡ ಕೇವಲ ನವೆಂಬರ್ ಉತ್ಸವವಾಗದೇ ನಿತ್ಯೋತ್ಸವವಾಗಬೇಕು. ಭಾಷಾ ಸ್ವಾಭಿಮಾನದ ಕೊರತೆಯಿಂದಾಗಿ ಕನ್ನಡ ನಶಿಸುವ ಸಾಧ್ಯತೆ ಎದುರಾಗಿದೆ. ಹೀಗಾಗಿ, ನವೆಂಬರ್ ತಿಂಗಳಿನಲ್ಲಿ ಮಾತ್ರ ಕನ್ನಡ ಭಾಷೆ ಬಗ್ಗೆ ಜಾಗೃತರಾಗದೇ ವರ್ಷಪೂರ್ತಿ ನಮ್ಮ ಭಾಷೆ ಎಂಬ ಅಭಿಮಾನವಿರಬೇಕು ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ರಾಜ್ಯೋತ್ಸವ ಪ್ರಯುಕ್ತ ಜಿಲ್ಲಾ ಕ್ರೀಡಾಂಗಣದಲ್ಲಿ  ವಿವಿಧ ಪೆರೆಡ್‌ಗಳಿಂದ ಧ್ವಜವಂದನೆ ಸ್ವೀಕರಿಸಿ ಬಳಿಕ ಕನ್ನಡ ಧ್ವಜಾರೋಹಣ ನೆರವೇರಿಸಿ ಸಚಿವರು ಮಾತನಾಡಿದರು.

ಕರ್ನಾಟಕವೆನ್ನುವುದು ಅಖಂಡ. ನಮ್ಮದು ಅಖಂಡ ಕರ್ನಾಟಕ. ಕೊಪ್ಪಳ ಐತಿಹಾಸಿಕ ಹಿರಿಮೆಯನ್ನು ಹೊಂದಿದ ನಾಡಾಗಿದ್ದು , ಇದು “ ತಿರುಳನ್ನಡದ ನಾಡು ” ಎಂದೇ ಪ್ರಸಿದ್ಧವಾಗಿದೆ . ಕೊಪ್ಪಳವು ಕರ್ನಾಟಕದ ಪ್ರಮುಖ ರಾಜಮನೆತನಗಳ ಆಳ್ವಿಕೆಗೊಳಪಟ್ಟ , ರಾಜಕೀಯ , ಧಾರ್ಮಿಕ , ಸಾಮರಸ್ಯಕ್ಕೆ ಹೆಸರಾದ ಬೀಡು ಎಂದರು.

ಇದು ಪರಧರ್ಮ ಸಹಿಷ್ಣುತೆಗೆ ಒಂದು ಮಾದರಿಯಾಗಿದೆ . ಈ ನಾಡನ್ನು ಸಾಂಸ್ಕೃತಿಕವಾಗಿ ಮತ್ತಷ್ಟು ಉನ್ನತ ಶಿಖರಕ್ಕೆ ತಲುಪಿಸಬೇಕಾದದ್ದು ಈ ನಾಡಿನ ಪ್ರತಿಯೊಬ್ಬರ ಕರ್ತವ್ಯವಾಗಿದೆ . ಕಲಾ ಕ್ಷೇತ್ರಕ್ಕೂ ಕೊಪ್ಪಳ ಜಿಲ್ಲೆಯ ಕೊಡುಗೆ ಗಣನೀಯವಾಗಿದೆ . ವೃತ್ತಿ ರಂಗಭೂಮಿ ಮಂಡಳಿಗಳು , ಪೌರಾಣಿಕ , ಸಾಮಾಜಿಕ , ಹವ್ಯಾಸಿ ನಾಟಕಗಳು , ಜಾನಪದ ಕಲೆಗಳು , ಬಯಲಾಟ , ಚಿತ್ರಕಲೆ , ಸಂಗೀತ – ಸಾಹಿತ್ಯ ಕ್ಷೇತ್ರಗಳಿಗೂ ಸಹ ಕೊಪ್ಪಳ ಜಿಲ್ಲೆ ಪ್ರಸಿದ್ಧಿಯಾಗಿದೆ ಎಂದು ಹೇಳಿದರು.

ಕಿನ್ನಾಳ ಕರಕುಶಲ ಕಲೆ , ಜಾನಪದ ಪ್ರದರ್ಶನ ಕಲೆಗಳು , ಶಿಲ್ಪಕಲೆಗಳಿಗೆ ಸಂಬಂಧಿಸಿದ ಕಲಾಪ್ರಕಾರಗಳು ಕೊಪ್ಪಳ ಜಿಲ್ಲೆಯಲ್ಲಿ ಇರುವುದು ಅಭಿಮಾನದ ಸಂಗತಿಯಾಗಿರುವುದರ ಜೊತೆಗೆ ಈ ಕನ್ನಡ ರಾಜ್ಯೋತ್ಸವ ಸುಸಂದರ್ಭದಲ್ಲಿ ಜಾನಪದ ತೊಗಲು ಗೊಂಬೆ ಆಟದಲ್ಲಿ ಕೊಪ್ಪಳ ಜಿಲ್ಲೆಯ ಕೇಶಪ್ಪ ಶಿಳ್ಳೆಕ್ಯಾತರ್ ಇವರಿಗೆ 2020 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಸಂದಿರುವುದು ಈ ಜಿಲ್ಲೆಯ ಹೆಮ್ಮೆಯಾಗಿದೆ ಎಂದು ಮೆಚ್ಚುಗೆವ್ಯಕ್ತಪಡಿಸಿದರು.

ಭಕ್ತಿ , ಸಾಹಿತ್ಯ ಹಾಗೂ ಸಾಮಾಜಿಕ ಕಲ್ಯಾಣವನ್ನು ಜತೆಯಾಗಿ ಬೆಸೆದ ಜಗತ್ತಿನ ಅತ್ಯಪೂರ್ವ ಚಳುವಳಿಯೊಂದು ರೂಪುಗೊಂಡು 12 ನೇ ಶತಮಾನದಲ್ಲಿ ಯಶಸ್ವಿಯಾಗಿ ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದ ನೆಲ ಇದು ಎಂದು ಬಿ.ಸಿ.ಪಾಟೀಲ್ ಹೇಳಿದರು.

key words : Kannada-not-just-November-festival-celebration-Minister B.C. Patil

The post ಕನ್ನಡ ಕೇವಲ ನವೆಂಬರ್ ಉತ್ಸವವಾಗದೇ ನಿತ್ಯೋತ್ಸವವಾಗಬೇಕು : ಸಚಿವ ಬಿ.ಸಿ.ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪದವಿ ತರಗತಿಗಳನ್ನು ಆಫ್‌ಲೈನ್‌ನಲ್ಲಿ ನವೆಂಬರ್‌ನಿಂದ ಆರಂಭಿಸಲು ತಯಾರಿ : ಡಿಸಿಎಂ ಡಾ.ಸಿ.ಎನ್.ಅಶ್ವತ್ಥ ನಾರಾಯಣ
ಮೈಸೂರು,ಅಕ್ಟೋಬರ್,19,2020(www.justkannda.in) : ಸರ್ಕಾರ ಆಫ್‌ಲೈನ್‌ನಲ್ಲಿ ನವೆಂಬರ್‌ನಿಂದ ಪದವಿ ತರಗತಿ ಆರಂಭಿಸಲು ತಯಾರಿ ಮಾಡಿಕೊಳ್ಳುತ್ತಿದೆ. ಈ ಸಂಬಂಧ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಸಂಬಂಧಪಟ್ಟವರ ಜತೆಗೆ ಚರ್ಚಿಸಿ ಅಂತಿಮವಾಗಿ ತೀರ್ಮಾನಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಕೋವಿಡ್‌ ಸಂಕಷ್ಟ ಕಾಲದಲ್ಲಿ ತರಗತಿ ನಡೆಯುವ ಕೋಣೆಗಳನ್ನು ನಿರಂತರವಾಗಿ ಸ್ಯಾನಿಟೈಸ್‌ ಹಾಗೂ ವಿದ್ಯಾರ್ಥಿಗಳ ಥರ್ಮಲ್‌ ಸ್ಕ್ರೀನಿಂಗ್‌ ಮಾಡತ್ತಿರಬೇಕು. ವಿದ್ಯಾರ್ಥಿಗಳು ಮತ್ತು ಬೋಧಕರು, ಸಿಬ್ಬಂದಿಯ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಸುಲಭವಲ್ಲ. ಮುಖ್ಯವಾಗಿ ವೈರಸ್‌ ನಮ್ಮ ನಡುವೆಯೇ ಜೀವಂತವಾಗಿ ಓಡಾಡಿಕೊಂಡಿದೆ. ಹೀಗಾಗಿ ಪರಿಸ್ಥಿತಿ ನೋಡಿಕೊಂಡು ಕಾಲೇಜು ಆರಂಭಿಸುತ್ತೇವೆ. ಶಾಲಾ-ಕಾಲೇಜುಗಳನ್ನು ಆರಂಭಿಸುವುದಕ್ಕೂ ಸಿನಿಮಾ ಟಾಕೀಸ್‌ಗಳನ್ನು ತೆರೆಯುವುದಕ್ಕೂ ಪರಸ್ಪರ ಹೋಲಿಸುವುದು ಸರಿಯಲ್ಲ. ಈ ವಿಷಯದಲ್ಲಿ ಆತುರ ಸಲ್ಲ ಎಂದು ತಿಳಿಸಿದರು.

ಯುಜಿಸಿಯ ಮಾರ್ಗಸೂಚಿ ಅನ್ವಯ ಕಾಲೇಜು ಆರಂಭಕ್ಕೆ ಸಿದ್ಧತೆ

ಈಗಾಗಲೇ ಯುಜಿಸಿಯಿಂದ ಕಾಲೇಜು ಆರಂಭಕ್ಕೆ ಸೂಕ್ತ ಮಾಹಿತಿ, ಮಾರ್ಗಸೂಚಿ ಬಂದಿದೆ. ಅದರನ್ವಯ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಶೀಘ್ರವೇ ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಕಾಲೇಜು ಆರಂಭದ ದಿನವನ್ನು ಪ್ರಕಟಿಸಲಾಗುವುದು. ಈಗಾಗಲೇ ಎಲ್ಲ ಕಾಲೇಜುಗಳಲ್ಲಿ ಆನ್‌ಲೈನ್‌ ತರಗತಿಗಳು ಉತ್ತಮವಾಗಿ ನಡೆಯುತ್ತಿವೆ. ಡಿಜಿಟಲ್‌ ಕಲಿಕೆ ಮತ್ತು ಬೋಧನೆ ನಿರೀಕ್ಷೆಗೂ ಮೀರಿ ಉತ್ತಮವಾಗಿ ನಡೆಯುತ್ತಿದೆ. ವಿದ್ಯಾರ್ಥಿಗಳು ಇದೇ ಅವಕಾಶವನ್ನು ಸದ್ಭಳಕೆ ಮಾಡಿಕೊಂಡು ತಯಾರಿ ಮಾಡಿಕೊಳ್ಳಬೇಕು ಎಂದರು.

2021ನೇ ಸಾಲಿನಿಂದ ನೂತನ ಶಿಕ್ಷಣ ನೀತಿ ಹಂತಹಂತವಾಗಿ ಜಾರಿ

ಈ ವರ್ಷ ಎಲ್ಲ ಸಿದ್ಧತೆಗಳನ್ನು ಪರಿಣಾಮಕಾರಿಯಾಗಿ ಮಾಡಿಕೊಂಡು 2021ನೇ ಸಾಲಿನಿಂದ ನೂತನ ಶಿಕ್ಷಣ ನೀತಿಯನ್ನು ಹಂತಹಂತವಾಗಿ ಜಾರಿ ಮಾಡಲಾಗುವುದು. ಕೇಂದ್ರ ಸರ್ಕಾರ ರೂಪಿಸಿರುವ ನೂತನ ಶಿಕ್ಷಣ ನೀತಿ ಜಾರಿಗೆ ಸರಕಾರ ಎಲ್ಲ ತಯಾರಿ ಮಾಡಿಕೊಳ್ಳುತ್ತಿದೆ. ಈಗಾಗಲೇ ನೀತಿಯ ಅನುಷ್ಟಾನಕ್ಕಾಗಿ ರೂಪಿಸಲಾಗಿರುವ ಕಾರ್ಯಪಡೆ ಮೊದಲ ವರದಿಯನ್ನು ನೀಡಿದೆ. ಘಟಿಕೋತ್ಸವ ಕಾರ್ಯಕ್ರದಲ್ಲಿ ದಿಲ್ಲಿಯಿಂದಲೇ ಆಲ್‌ಲೈನ್‌ ಭಾಷಣ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೂಡ ಶಿಕ್ಷಣ ನೀತಿಯ ಮಹತ್ವದ ಬಗ್ಗೆ ಒತ್ತಿ ಹೇಳಿದರು. ಹೀಗಾಗಿ, ಕಳೆದ ಎಂಟು ತಿಂಗಳಿಂದಲೇ ರಾಜ್ಯ ಸರಕಾರ ಈ ನಿಟ್ಟಿನಲ್ಲಿ ತಯಾರಿ ಮಾಡಿಕೊಂಡಿದೆ ಎಂದು ಮಾಹಿತಿ ನೀಡಿದರು.

ನೆರೆಯಂಥ ಸೂಕ್ಷ್ಮ ವಿಚಾರದಲ್ಲಿ ರಾಜಕೀಯ ಮಾಡೋದು ಬೇಡ

ಈ ವರ್ಷ ಎಲ್ಲ ರೀತಿಯಲ್ಲೂ ಸರ್ಕಾರ ಗಂಭೀರ ಸವಾಲುಗಳನ್ನೇ ಎದುರಿಸಿದೆ. ನೆರೆಯಂಥ ಸೂಕ್ಷ್ಮ ವಿಚಾರದಲ್ಲಿ ರಾಜಕೀಯ ಮಾಡೋದು ಬೇಡ ಎಂದು ನಾನು ಪ್ರತಿಪಕ್ಷಗಳನ್ನು ಮತ್ತೊಮ್ಮೆ ವಿನಂತಿ ಮಾಡಿಕೊಳ್ಳುತ್ತೇನೆ. ನಮ್ಮ ಸರಕಾರ ಬಂದ ಕೂಡಲೇ ಪ್ರವಾಹ ಬಂತು. ಅದು ಹತೋಟಿಗೆ ಬಂದ ಕೂಡಲೇ ಕೋವಿಡ್‌ ಬಂತು. ಮತ್ತೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನೆರೆ ಬಂತು. ಈಗ ಮತ್ತೆ ಉತ್ತರ ಕರ್ನಾಟಕದಲ್ಲಿ ನೆರೆ ಬಂದಿದೆ. ಬಿಕ್ಕಟ್ಟು ಬಂದಾಗ ಎಲ್ಲರೂ ಒಟ್ಟಾಗಿ ನೊಂದ ಜನರ ನೆರವಿಗೆ ಧಾವಿಸಬೇಕು. ರಾಜಕೀಯ ಮಾತನಾಡುವುದು ಅಕ್ಷಮ್ಯ ಎಂದು ಹೇಳಿದರು.

key words : Graduate-classes-start-offline-online-November- DCM-Dr. C.N. Ashwaththa Narayana

The post ಪದವಿ ತರಗತಿಗಳನ್ನು ಆಫ್‌ಲೈನ್‌ನಲ್ಲಿ ನವೆಂಬರ್‌ನಿಂದ ಆರಂಭಿಸಲು ತಯಾರಿ : ಡಿಸಿಎಂ ಡಾ.ಸಿ.ಎನ್.ಅಶ್ವತ್ಥ ನಾರಾಯಣ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನವೆಂಬರ್ ನಲ್ಲಿ ಗ್ರಾಪಂ ಚುನಾವಣೆ ಸಾಧ್ಯತೆ..? ಜಿಲ್ಲಾಡಳಿತದಿಂದ ಮೀಸಲಾತಿ ಪಟ್ಟಿ ಪ್ರಕಟ
ಮೈಸೂರು,ಆಗಸ್ಟ್,25,2020(www.justkannada.in) ; ನವೆಂಬರ್ ನಲ್ಲಿ ಗ್ರಾಪಂ ಚುನಾವಣೆ ನಡೆಯುವ ಸಾಧ್ಯತೆಯಿದ್ದು, ಮೀಸಲಾತಿ ಪಟ್ಟಿಯನ್ನು ಮೈಸೂರು ಜಿಲ್ಲಾಡಳಿತ ಪ್ರಕಟ ಮಾಡಿದೆ.

ಅಕ್ಟೋಬರ್ ನಲ್ಲಿ ಚುನಾವಣೆ ಘೋಷಣೆಯಾಗುವ ಸಾಧ್ಯತೆಯಿದ್ದು, ಒಂದು ತಿಂಗಳ ಕಾಲ ಜಿಲ್ಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರಲಿದೆ.

ಜಿಲ್ಲಾಡಳಿತವು ಚುನಾವಣೆಗೆ ಬೇಕಾದ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಗ್ರಾಪಂ ಮಟ್ಟದಲ್ಲಿ ಅಭಿವೃದ್ದಿ ಕಾರ್ಯ ಚುರುಕುಗೊಂಡಿದ್ದು, ಆಕಾಂಕ್ಷಿಗಳು ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಕಾರ್ಯಪ್ರವೃತರಾಗಿರುವುದು ತಿಳಿದು ಬಂದಿದೆ.

Key words  ;  Gram-panchayat-election-likely-November-Publication-Reservation-List-District administration

The post ನವೆಂಬರ್ ನಲ್ಲಿ ಗ್ರಾಪಂ ಚುನಾವಣೆ ಸಾಧ್ಯತೆ..? ಜಿಲ್ಲಾಡಳಿತದಿಂದ ಮೀಸಲಾತಿ ಪಟ್ಟಿ ಪ್ರಕಟ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.