possible | Just Kannada - Daily News Updates

ಪರಿಶ್ರಮದಿಂದ ವೃತ್ತಿಯಲ್ಲಿ ಯಶಸ್ಸು ಸಾಧ್ಯ – ಟಿ‌ಎಸ್ ನಾಗಾಭರಣ
ಬೆಂಗಳೂರು,ಮಾರ್ಚ್ 26,2025 (www.justkannada.in): ಯಾವ ವೃತ್ತಿಯು ಕನಿಷ್ಠವಲ್ಲ, ಬದ್ಧತೆ, ಪರಿಶ್ರಮಗಳು ಕೈಗೊಳ್ಳುವ ವೃತ್ತಿಯ ಯಶಸ್ಸಿಗೆ ಕಾರಣವಾಗುತ್ತವೆ ಎಂದು ಖ್ಯಾನ ಚಲನಚಿತ್ರ ನಿರ್ದೇಶಕ ಟಿ‌ಎಸ್ ನಾಗಾಭರಣ ಹೇಳಿದರು.

37ನೇ ಕರ್ನಾಟಕ ರಾಜ್ಯ ಸನ್ನದ್ದು ಲೆಕ್ಕಪತ್ರಗಾರರ ಸಮಾರೋಪ ‌ಸಮಾರಂಭದಲ್ಲಿ ಅವರು ಮಾತನಾಡಿದರು. ತೊಡಗಿಸಿ ಕೊಳ್ಳಬಹುದಾದ ಕೆಲಸಗಳನ್ನು ಇಷ್ಟ ಪಟ್ಟು ಮಾಡುವುದರಿಂದ ಅನಗತ್ಯ ಒತ್ತಡವನ್ನು ಕಡಿಮೆ ಮಾಡಿಕೊಳ್ಳಬಹುದು. ಹಾಗೆಯೇ ವೃತ್ತಿಯ ಯಶಸ್ಸಿಗೆ ಹೊಸ ಅವಿಷ್ಕಾರಗಳನ್ನು ಬಳಸುವುದನ್ನು ರೂಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.‌

ಸಂಘದ ಅಧ್ಯಕ್ಷ ಸಿ.ಎ ವಿಜಯಕುಮಾರ್ ಎಂ‌ ಪಟೇಲ್ ಮಾತನಾಡಿ ವೃತ್ತಿಯಲ್ಲಿ ಎಐ ಬಳಕೆ ಕುರಿತ ಮಾರ್ಗದರ್ಶನ, ಟೂಲ್ ಲಭ್ಯತೆ, ಬಳಕೆ ಕುರಿತ ಮಾಹಿತಿಗಳು ಇನ್ನೂ ಹೆಚ್ಚು ಉತ್ಸಾಹದಿಂದ ಕೆಲಸ‌ ಮಾಡಲು ಪ್ರೇರೇಪಣೆಯಾಗಲಿ ಎಂದರು. ‌

ಸಮಾವೇಶದಲ್ಲಿ ಗಣ್ಯರಾದ ಪ್ರೊ ಡಾ ನಿಗಮ್ ಎಸ್‌ ನುಗ್ಗೇಹಳ್ಳಿ, ಸಂಘದ ಚೇರ್ಮನ್ ಸಿಎ ವಿಜಯಕುಮಾರ್ ಎಂ ಪಟೇಲ್, ವೈಸ್ ಚೇರ್ಮನ್ ಸಿಎ ಶಿವಪ್ರಕಾಶ್ ವಿರಕ್ತ ಮಠ, ಕಾರ್ಯದರ್ಶಿ ಸಿಎ ಪ್ರವೀಣ್ ಎಸ್ ಶೆಟ್ಟರ್ ಮತ್ತು ಗಣ್ಯರು ಉಪಸ್ಥಿತರಿದ್ದರು.

Key words: Success, career, possible, hard work , TS Nagabharana

ಅಭಿವೃದ್ಧಿ ಇಲ್ಲದೆ ಜಿಡಿಪಿ, ಆಯವ್ಯಯ ಗಾತ್ರ ಹೆಚ್ಚಳವಾಗಲು ಸಾಧ್ಯವೇ?- ಅಂಕಿ ಅಂಶಗಳ ಸಮೇತ ವಿವರಿಸಿದ ಸಿಎಂ ಸಿದ್ದರಾಮಯ್ಯ.
ಬೆಂಗಳೂರು, ಫೆಬ್ರುವರಿ 29,2024(www.justkannada.in): ಗ್ಯಾರಂಟಿ ಯೋಜನೆಗಳ ಹೊರತಾದ ಅಭಿವೃದ್ಧಿಯ ವಿವರಗಳನ್ನು ಅಂಕಿ ಅಂಶಗಳ ಸಮೇತ ಬಿಚ್ಚಿಟ್ಟು ಬಿಜೆಪಿಗೆ ತಿರುಗೇಟು ಕೊಟ್ಟ  ಸಿಎಂ ಸಿದ್ದರಾಮಯ್ಯ, ಅಭಿವೃದ್ಧಿ ಇಲ್ಲದೆ ಜಿಡಿಪಿ, ಆಯವ್ಯಯ ಗಾತ್ರ ಹೆಚ್ಚಳವಾಗಲು ಸಾಧ್ಯವೇ? ಎಂದು ಪ್ರಶ್ನಿಸಿದರು.

ಇಂದು ವಿಧಾನಸಭೆಯಲ್ಲಿ ಆಯವ್ಯಯ ಭಾಷಣ ಕುರಿತ ಚರ್ಚೆಗೆ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ, ಹಿಂದಿನ ಬಿಜೆಪಿ  ಸರ್ಕಾರದವರು ಏನೂ ಅಭಿವೃದ್ಧಿ ಮಾಡಿರಲಿಲ್ಲ. ಬರೀ ಲೂಟಿ ಹೊಡೆದರು. ನಾವು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಯನ್ನೂ ಮಾಡಿದ್ದೇವೆ. ಇದು ಕಾಂಗ್ರೆಸ್‌ ಮತ್ತು ಬಿಜೆಪಿ ಸರ್ಕಾರಕ್ಕೆ ಇರುವ ವ್ಯತ್ಯಾಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಬಸವರಾಜ ಬೊಮ್ಮಾಯಿ ಅವರು 2023ರ ಫೆಬ್ರುವರಿಯಲ್ಲಿ 3.09 ಲಕ್ಷ ಕೋಟಿ ರೂ. ಗಾತ್ರದ ಆಯವ್ಯಯ ಮಂಡಿಸಿದರು. 2024-25ನೇ ಸಾಲಿಗೆ ನಾನು ಮಂಡಿಸಿದ ಆಯವ್ಯಯದ ಗಾತ್ರ 3,71,343 ಕೋಟಿ ರೂ. ನಷ್ಟಿದ್ದು, ಬೊಮ್ಮಾಯಿ ಅವರು ಮಂಡಿಸಿದ ಬಜೆಟ್‌ ಗಿಂತ 62,200 ಕೋಟಿ ರೂ. ನಷ್ಟು ಗಾತ್ರ ಹೆಚ್ಚಳವಾಗಿದೆ. ನಾನು ಜುಲೈ 2023 ರಲ್ಲಿ ಮಂಡಿಸಿದ ಬಜೆಟ್‌ಗಿಂತ ಇದು 43,601 ಕೋಟಿ ರೂ. ಹೆಚ್ಚಳವಾಗಿದೆ.

ಅಂತೆಯೇ ರಾಜ್ಯದ ಜಿಡಿಪಿ 25,63,247 ಕೋಟಿ ರೂ. ಇತ್ತು. 2024- 25 ಕ್ಕೆ 28,09,063 ಕೋಟಿ ರೂ. ಆಗುವ ನಿರೀಕ್ಷೆ ಇದೆ. ಅಂದರೆ 2,41,723 ಕೋಟಿ ರೂ. ಹೆಚ್ಚು. ಅಭಿವೃದ್ಧಿ ಇಲ್ಲದೆ ಆಯವ್ಯಯ ಗಾತ್ರ ಹಾಗೂ ಜಿಡಿಪಿ ಹೆಚ್ಚಳವಾಗಲು ಸಾಧ್ಯವೇ? ಎಂದು ಪ್ರಶ್ನಿಸಿದರು.

ಬಜೆಟ್ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರದ ಇತರೆ ಅಂಶಗಳು ಈ ಕೆಳಕಂಡಂತಿವೆ.

ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿ ಬಜೆಟ್‌ ಓದುವಾಗ ವಿರೋಧ ಪಕ್ಷದವರು ಗೈರು ಹಾಜರಾದದ್ದು. ಇವರಿಗೆ ರಾಜ್ಯದ ಆರ್ಥಿಕತೆ ಬಗ್ಗೆ ಕಾಳಜಿ ಇಲ್ಲ. ಕಾಂಗ್ರೆಸ್‌ ನವರು 9 ಜನ , ಬಿಜೆಪಿ 13 ಜನ ಹಾಗೂ ಜೆಡಿಎಸ್‌ 3 ಜನ ಭಾಗವಹಿಸಿದ್ದಾರೆ. ಇಷ್ಟೂ ಸದಸ್ಯರು ಬಜೆಟ್‌ ಬಗ್ಗೆ ಅನೇಕ ಸಲಹೆ ಸೂಚನೆ ನೀಡಿದ್ದಾರೆ. ಬಜೆಟ್‌ನ್ನು ಟೀಕಿಸಿದ್ದಾರೆ. ಕೇಂದ್ರ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ. ಇದೆಲ್ಲವನ್ನೂ ಸ್ವಾಗತ ಮಾಡುತ್ತೇನೆ. ಅವರ ಸಲಹೆ- ಸೂಚನೆಗಳನ್ನು ಸರ್ಕಾರ ಮುಂದಿನ ವರ್ಷದಲ್ಲಿ ಆರ್ಥಿಕ ವರ್ಷದಲ್ಲಿ ಏನೇನು ಮಾಡಬೇಕು ಅದೆಲ್ಲವನ್ನೂ ಮಾಡುತ್ತೇವೆಂದು ಹೇಳಬಯಸುತ್ತೇನೆ ಎಂದರು.

2024-25ನೇ ಆಯವ್ಯಯದಲ್ಲಿ ಒಟ್ಟು ಬಜೆಟ್‌ ಗಾತ್ರ 3,71,343 ಕೋಟಿ ರೂ. ಗಳಾಗಿದ್ದು, ಇದರಲ್ಲಿ ರಾಜಸ್ವ ವೆಚ್ಚ 2,90,531 ಕೋಟಿ, ಬಂಡವಾಳ ವೆಚ್ಚ ಕೋಟಿ ರೂ.ಗಳಾಗಿದ್ದು, ನಾವು ಅಭಿವೃದ್ಧಿಗೂ ಆದ್ಯತೆ ನೀಡಿರುವುದಕ್ಕೆ ಇದು ಸಾಕ್ಷಿ. ವಿರೋಧ ಪಕ್ಷದವರು ಅಭಿವೃದ್ಧಿ ಶೂನ್ಯ ಎಂದಿದ್ದಾರೆ. ಒಟ್ಟು ಅಭಿವೃದ್ಧಿ ಕಾರ್ಯಕ್ರಮಗಳಿಗೆ 1,20,000  ಕೋಟಿ ರೂ. ವೆಚ್ಚದ ಹಂಚಿಕೆ ಮಾಡಿದ್ದೇವೆ. 52,009 ಕೋಟಿ ರೂ. ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಮೀಸಲಿರಿಸಿದ್ದು, ಉಳಿದ ಮೊತ್ತ ಅಭಿವೃದ್ಧಿ ಕಾರ್ಯಗಳಿಗೆ ಹಂಚಿಕೆ ಮಾಡಲಾಗಿದೆ. ವಿರೋಧ ಪಕ್ಷದವರು ಮಾಡಿರುವ ಆಪಾದನೆ ಸತ್ಯಕ್ಕೆ ದೂರವಾದದ್ದು ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

ಮತದಾರರು ಬಿಜೆಪಿಯವರನ್ನು ತಿರಸ್ಕಾರ ಮಾಡಿದರು. ನಮಗೆ 136 ಸೀಟು ಕೊಟ್ಟರು ಹಾಗೂ 43% ಮತ ನೀಡಿದರು. ಇವರು ಭ್ರಷ್ಟಾಚಾರ ಮಾಡಿದ್ದರಿಂದ ಕೇವಲ 66 ಜನ ಗೆಲ್ಲಲು ಸಾಧ್ಯವಾಯಿತು. ಇವರು ಜನರ ಸಂಪೂರ್ಣ ಆಶೀರ್ವಾದದೊಂದಿಗೆ ಅಧಿಕಾರ ಮಾಡಲಿಲ್ಲ. ಇವರು ಆಪರೇಷನ್‌ ಕಮಲದ ಮೂಲಕ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರು. ಇದಕ್ಕೆ ಕಾರಣ ಮಿ. ಯಡಿಯೂರಪ್ಪ ಮತ್ತು ಇತರರು.  ಇವರು ಯಾವತ್ತೂ ಮುಂಬಾಗಿಲಿನಿಂದ ಅಧಿಕಾರಕ್ಕೆ ಬರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.

ಜಿಡಿಪಿ- 2023- 24 ರಲ್ಲಿ 25,63,247 ಕೋಟಿ ರೂ. ಇತ್ತು. 2024- 25 ಕ್ಕೆ 28,09,063 ಕೋಟಿ ರೂ. ಆಗುವ ನಿರೀಕ್ಷೆ ಇದೆ. ಅಂರೆ 2,41,723 ಕೋಟಿ ರೂ. ಹೆಚ್ಚು. ಆದ್ದರಿಂದ ಜಿಡಿಪಿಯೂ ಹೆಚ್ಚಾಗಿದೆ, ಬಜೆಟ್‌ ಗಾತ್ರವೂ ಹೆಚ್ಚಾಗಿದೆ. ಇದರಿಂದ ರಾಜ್ಯದಲ್ಲಿ ಏನೂ ಅಭಿವೃದ್ಧಿ ಮಾಡಿಲ್ಲ ಎಂದು ವಿರೋಧ ಪಕ್ಷದವರು ಮಾಡಿರುವ ಆಪಾದನೆಯಲ್ಲಿ ಯಾವುದೇ ತಿರುಳಿಲ್ಲ ಎಂಬುದು ಸಾಬೀತಾಗುತ್ತದೆ.

ಗ್ಯಾರಂಟಿ ಯೋಜನೆಗಳಿಗೆ ಈ ವರ್ಷ 36,000 ಕೋಟಿ ರೂ. ವೆಚ್ಚ ಮಾಡಿದ್ದೇವೆ. ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ, ಯುವನಿಧಿ – ಈ ಕಾರ್ಯಕ್ರಮಗಳಿಗೆ 36,000 ಕೋಟಿ ರೂ. ಬಳಸಲಾಗಿದೆ. ಮುಂದಿನ ಬಜೆಟ್‌ ನಲ್ಲಿ 52,009 ಕೋಟಿ ಒದಗಿಸಿದ್ದು, ಇದರೊಂದಿಗೆ ಶಿಕ್ಷಣ, ಆರೋಗ್ಯ, ರಸ್ತೆಗಳು, ಶಾಂತಿ ಸುವ್ಯವಸ್ಥೆ ಎಲ್ಲದಕ್ಕೂ ಆದ್ಯತೆ ನೀಡಲಾಗಿದೆ.

ಹಿಂದಿನ ಬಿಜೆಪಿ  ಸರ್ಕಾರದವರು ಏನೂ ಅಭಿವೃದ್ಧಿ ಮಾಡಿರಲಿಲ್ಲ. ಬರೀ ಲೂಟಿ ಹೊಡೆದರು. ನಾವು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಯನ್ನೂ ಮಾಡಿದ್ದೇವೆ. ಇದು ಕಾಂಗ್ರೆಸ್‌ ಮತ್ತು ಬಿಜೆಪಿ ಸರ್ಕಾರಕ್ಕೆ ಇರುವ ವ್ಯತ್ಯಾಸ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಿಜೆಪಿಯವರಿಗೆ ಜನರ ಆಶೀರ್ವಾದ ಪಡೆಯುವ ಯೋಗ್ಯತೆ ಇಲ್ಲ. ಇವರು ನಮಗೆ ದೇಶಭಕ್ತಿ ಪಾಠ ಹೇಳಿ ಕೊಡಲು ಬರುತ್ತಾರೆ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟದ್ದು ಕಾಂಗ್ರೆಸ್.‌ ಹಿಂಬಾಗಿಲಿನಿಂದ ಅಧಿಕಾರ ಅನುಭವಿಸಲು ಬಂದವರು ಇವರು.

ಆರ್. ಎಸ್.‌ ಎಸ್‌ 1925ರಲ್ಲೇ ಅಸ್ತಿತ್ವಕ್ಕೆ ಬಂತು. ಆದರೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ. ಅನಂತಕುಮಾರ್‌ ಹೆಗಡೆ ಕೇಂದ್ರ ಸಚಿವರಾಗಿದ್ದಾಗ, ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಿಸಲು ಎಂದು ಹೇಳಿಕೆ ನೀಡಿದ್ದರು. ಇದರ ಬಗ್ಗೆ ಮೋದಿ ಅವರಾಗಲಿ, ಪಕ್ಷದ ಹಿರಿಯರಾಗಲಿ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಕೇಂದ್ರದ ವಿರುದ್ದ ಗುಡುಗಿದರು.

Key words: possible – increase- GDP – budget–without- development- CM Siddaramaiah

ಅತ್ಯುತ್ತಮ ಆಸ್ಪತ್ರೆಗಳಿಂದ ಜನರಲ್ಲಿ ಸುರಕ್ಷತೆಯ ಭಾವನೆ ಸಾಧ್ಯ- ಸಚಿವ ಅಶ್ವಥ್ ನಾರಾಯಣ್.
ಬೆಂಗಳೂರು,ಡಿಸೆಂಬರ್,11,2021(www.justkannada.in):  ಅತ್ಯುತ್ತಮ ಚಿಕಿತ್ಸೆ ಕೊಡುವ ಗುಣಮಟ್ಟದ ಆಸ್ಪತ್ರೆಗಳು ಒಂದು ಸಮಾಜದ ಜನರಿಗೆ ಆರೋಗ್ಯ ಮತ್ತು ಸುರಕ್ಷತೆಯ ಸಂದೇಶವನ್ನು ಕೊಡುತ್ತವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ್ ಹೇಳಿದರು.

ನಗರದ ದೇವರಬೀಸನಹಳ್ಳಿಯಲ್ಲಿ ಇರುವ ಸಕ್ರಾ ವರ್ಲ್ಡ್ ಆಸ್ಪತ್ರೆಯಲ್ಲಿ `ರೋಬೋಟಿಕ್ ಪುನಶ್ಚೇತನ ಚಿಕಿತ್ಸಾ ವಿಭಾಗ’ವನ್ನು  ಸಚಿವ ಅಶ್ವತ್ ನಾರಾಯಣ್ ಶನಿವಾರದಂದು ಉದ್ಘಾಟಿಸಿ ಮಾತನಾಡಿದರು. ಸಕ್ರಾ ಆಸ್ಪತ್ರೆಯು ರಾಜ್ಯದ ಉಳಿದ ಭಾಗಗಳಲ್ಲಿ ತಮ್ಮ ಶಾಖೆಗಳನ್ನು ತೆರೆಯಲು ಮುಂದೆ ಬಂದರೆ ಎಲ್ಲ ಸಹಕಾರ ನೀಡಲಾಗುವುದು ಎಂದರು.

ದೇಶದಲ್ಲಿ ಇಂದು ಅಪಘಾತ, ಒತ್ತಡ, ಮಾನಸಿಕ ಸಮಸ್ಯೆಗಳು, ವೃತ್ತಿ ಬದುಕಿನ ಸಂಕೀರ್ಣತೆಗಳು ಮತ್ತು ಜೀವನಶೈಲಿಯಿಂದ ಉಂಟಾಗುತ್ತಿರುವ ಅನಾರೋಗ್ಯದ ಸಮಸ್ಯೆಗಳು ಜನರನ್ನು ಕಾಡುತ್ತಿವೆ. ಇಂತಹ ಸಂದರ್ಭದಲ್ಲಿ ಸಕ್ರಾ ಆಸ್ಪತ್ರೆಯು ರೋಬೋಟಿಕ್ ಪುನಶ್ಚೇತನ ಚಿಕಿತ್ಸಾ ಕೇಂದ್ರ ಸ್ಥಾಪಿಸಿರುವುದು ಸ್ವಾಗತಾರ್ಹವಾಗಿದ್ದು, ಇದಕ್ಕೆ ಜಪಾನ್ ಸರಕಾರವು ಕೊಡುತ್ತಿರುವ ಸಹಕಾರ ಶ್ಲಾಘನೀಯ ಎಂದು ಅವರು ಹೇಳಿದರು.

ಬೆಂಗಳೂರು ದೇಶದಲ್ಲಿ ಆರೋಗ್ಯ ಸೇವೆ ಮತ್ತು ಚಿಕಿತ್ಸೆಗಳ ತಾಣವಾಗಿ ಬೆಳೆಯಬೇಕು. ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆಯು ಜನರಿಗೆ ಕೈಗೆಟುಕುವ ದರದಲ್ಲಿ ಸಿಕ್ಕಬೇಕು. ಇದು ಜನರ ಪ್ರಾಥಮಿಕ ಅಗತ್ಯಗಳಲ್ಲಿ ಒಂದಾಗಬೇಕು. ಸಮಾಜದಲ್ಲಿರುವ ಜನರು ಆರೋಗ್ಯದಿಂದಿದ್ದರೆ ಮಾತ್ರ ಆರ್ಥಿಕ ಪ್ರಗತಿ ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಜಪಾನ್ ಕಾನ್ಸುಲ್ ಜನರಲ್ ಸುಜಿತಾ ಅಕಿಕೋ, ನಟ ರಾಘವೇಂದ್ರ ರಾಜಕುಮಾರ್, ಸಕ್ರಾ ಆಸ್ಪತ್ರೆಯ ಡಾ.ಮಹೇಶ್ವರಪ್ಪ ಮುಂತಾದವರು ಉಪಸ್ಥಿತರಿದ್ದರು.

Key words:  feeling -security – possible- among – best hospitals-Minister -Ashwath Narayan

ಬಿಟಿಎಸ್-2021ರಲ್ಲಿ ಯಶಸ್ವಿ ಸಾಧಕಿಯರ ಪ್ರತಿಪಾದನೆ: ಮಹಿಳಾ ಉದ್ಯಮಶೀಲತೆ: 15 ಕೋಟಿ ಉದ್ಯೋಗ ಸೃಷ್ಟಿ ಸಾಧ್ಯ.
ಬೆಂಗಳೂರು,ನವೆಂಬರ್17,2021(www.justkannada.in):  ಮಹಿಳೆಯರು ಪ್ರತಿಭೆ ಮತ್ತು ಸಾಮರ್ಥ್ಯಗಳಲ್ಲಿ ಪುರುಷರಿಗೆ ಸರಿಸಮನಾಗಿದ್ದು, 2 ಮತ್ತು 3ನೇ ಹಂತದ ನಗರಗಳಲ್ಲಿ ಉದ್ಯಮಶೀಲತೆಗೆ ಅಪಾರ ಅವಕಾಶಗಳಿವೆ. ಮಹಿಳಾ ಸಮೂಹವನ್ನು ಸಕಾರಾತ್ಮಕವಾಗಿ ಬಿಂಬಿಸಿದರೆ ದೇಶದಲ್ಲಿ 15 ಕೋಟಿ ಉದ್ಯೋಗಗಳನ್ನು ಸೃಷ್ಟಿಸಬಹುದು ಎಂದು ಪೋರ್ಟಿಯಾ ಮೆಡಿಕಲ್ ಕಂಪನಿಯ ಸಹ-ಸಂಸ್ಥಾಪಕಿ ಮತ್ತು ವ್ಯವಸ್ಥಾಪಕ ನಿರ್ದೇಶಕಿ ಮೀನಾ ಗಣೇಶ್ ಹೇಳಿದ್ದಾರೆ.

ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯ ಮೊದಲ ದಿನವಾದ ಬುಧವಾರ ನಡೆದ `ಮಹಿಳಾ ಉದ್ಯಮಶೀಲತೆ: ಸವಾಲುಗಳು ಮತ್ತು ಪರಿಹಾರಗಳು’ ವಿಚಾರಗೋಷ್ಠಿಯಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.

ಮಹಿಳೆಯರ ದೃಷ್ಟಿಯಿಂದ ಹೇಳುವುದಾದರೆ ಕಳೆದ 20 ವರ್ಷಗಳಲ್ಲಿ ಪರಿಸ್ಥಿತಿ ಸಾಕಷ್ಟು ಸಕಾರಾತ್ಮಕವಾಗಿ ಬದಲಾಗಿದೆ. ಆದ್ದರಿಂದ ಹೆಣ್ಣು ಮಕ್ಕಳನ್ನು ಕೆಲವೇ ಉದ್ಯೋಗಗಳಿಗೆ ಸೀಮಿತಗೊಳಿಸಬಾರದು. ಕರ್ನಾಟಕದಲ್ಲಂತೂ ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಹೇರಳ ಅವಕಾಶಗಳಿದ್ದು, ಮಹಿಳಾ ಸಾಹಸಿಗಳಿಗೆ ಅಗತ್ಯ ಬಂಡವಾಳ ವ್ಯವಸ್ಥೆ ಮಾಡಬೇಕು ಎಂದು ಅಭಿಪ್ರಾಯಪಟ್ಟರು.

ಉದ್ಯಮಶೀಲತೆ ಬೆಳೆಯಬೇಕಾದರೆ ನಾವು ಹೆಚ್ಚು ರೋಲ್ ಮಾಡೆಲ್ ಗಳನ್ನು ಬಿಂಬಿಸಬೇಕು. ಜೊತೆಗೆ ಶಿಕ್ಷಣ ಕ್ರಮದಲ್ಲಿ ಪದವಿ ಮಟ್ಟದಲ್ಲಾದರೂ ಉದ್ಯಮಶೀಲತೆಯ ಬಗ್ಗೆ ಅರಿವು ಮೂಡಿಸಬೇಕು. ಇದರಿಂದ ದೇಶದ ಆರ್ಥಿಕ ವ್ಯವಸ್ಥೆಗೆ ಬಲು ದೊಡ್ಡ ಶಕ್ತಿ ಬರುತ್ತದೆ ಎಂದು ಮೀನಾ ಸಲಹೆ ನೀಡಿದರು.

ಷುಗರ್ ಕಾಸ್ಮೆಟಿಕ್ಸ್ ಕಂಪನಿಯ ಸಹಸಂಸ್ಥಾಪಕಿ ಮತ್ತು ಸಿಇಒ ಸಾಕ್ಷಿ ಚೋಪ್ರಾ ಮಾತನಾಡಿ, ಕಂಪನಿಗಳಲ್ಲಿ ಮಹಿಳೆಯರಿಗೆ ಉನ್ನತ ಮಟ್ಟದಲ್ಲಿ ಅಧಿಕಾರ ಮತ್ತು ನಿರ್ಧಾರವನ್ನು ತೆಗೆದುಕೊಳ್ಳುವ ಅವಕಾಶಗಳು ಹೆಚ್ಚುಹೆಚ್ಚು ಸಿಗಬೇಕು. ಹೀಗಾದರೆ, ಬಂಡವಾಳ ಕ್ರೋಡೀಕರಿಸಲು ಸುಲಭವಾಗುತ್ತದೆ ಎಂದರು.

ಉದ್ಯಮಶೀಲತೆ ಎಂದರೆ ಕೇವಲ ದೊಡ್ಡ ನಗರಗಳತ್ತ ನೋಡುವುದೆಂದು ಅರ್ಥವಲ್ಲ. ಇಲ್ಲಿನ ಸಣ್ಣಪುಟ್ಟ ಪೇಟೆ-ಪಟ್ಟಣಗಳು ನಿಜಕ್ಕೂ ಭಾರತದ ಹೃದಯದಂತಿವೆ. ಇಲ್ಲಿರುವ ಉಜ್ವಲ ಅವಕಾಶಗಳನ್ನು ಉದ್ಯಮಶೀಲ ಮಹಿಳೆಯರು ಬಳಸಿಕೊಳ್ಳಬೇಕು. ಇದರಿಂದ ನಷ್ಟದ ಸಂಭವನೀಯತೆ ತಾನಾಗಿಯೇ ನಗಣ್ಯವಾಗುತ್ತದೆ ಎಂದು ಅವರು ಕಿವಿಮಾತು ನುಡಿದರು.

ಗೋಷ್ಠಿಯಲ್ಲಿ ಪಾಲ್ಗೊಂಡಿದ್ದ ಸಿಕೋಯಿಯಾ ಕ್ಯಾಪಿಟಲ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕಿ ವಿನೀತಾ ಸಿಂಗ್, ಮಹಿಳೆಯರು ಎಲ್ಲ ಸಮಸ್ಯೆಗಳನ್ನೂ ಲಿಂಗ ತಾರತಮ್ಯಕ್ಕೆ ತಳುಕು ಹಾಕಬಾರದು. ದೇಶದಲ್ಲಿ ಈಗ ಲಿಂಗ ಸಮಾನತೆ ವ್ಯಾಪಕವಾಗಿ ಕಂಡುಬರುತ್ತಿದೆ. ಕಳೆದ 5-6 ವರ್ಷಗಳಿಂದ ಮಹಿಳೆಯರು ದೊಡ್ಡ ಗ್ರಾಹಕ ಶಕ್ತಿಯಾಗಿ ಹೊರಹೊಮ್ಮಿದ್ದು, ಇದು ಸ್ತ್ರೀ ಸಮೂಹಕ್ಕೆ ವರದಾನವಾಗಿದೆ. ಕೋವಿಡ್ ನಂತರದ ಸಂದರ್ಭವಂತೂ ಮಹಿಳೆಯರಿಗೆ ಸದವಕಾಶ ಸೃಷ್ಟಿಸಿದೆ ಎನ್ನುವ ಮೂಲಕ ಗಮನ ಸೆಳೆದರು.

ಮಹಿಳಾ ಉದ್ಯಮಿಗಳು ಒಳ್ಳೆಯ ತಂಡ ಕಟ್ಟುವುದಕ್ಕೆ ಮತ್ತು ಪ್ರತಿಭಾವಂತ ಅನುಭವಿಗಳ ನೇಮಕಕ್ಕೆ ಒತ್ತು ಕೊಡಬೇಕು. ಇದರ ಜತೆಗೆ ಬಂಡವಾಳ ಕ್ರೋಡೀಕರಣವನ್ನು ಸರಕಾರ ಮತ್ತು ಖಾಸಗಿ ವಲಯದ ಉದ್ದಿಮೆಗಳು ಸುಲಭಗೊಳಿಸಬೇಕು ಎಂದು ನುಡಿದರು. ಹಿರಿಯ ಪತ್ರಕರ್ತೆ ಅರ್ಚನಾ ರಾಯ್ ಸಂವಾದವನ್ನು ನಡೆಸಿಕೊಟ್ಟರು.

Key words: Proponents -Success – BTS-2021-Women –Entrepreneurship- 15 crore- job creation – possible.

“ಜನರ ಸಹಕಾರದಿಂದ ಮಾತ್ರ ಲಾಕ್ಡೌನ್ ಇಲ್ಲದೇ ಕೋವಿಡ್ ನಿಯಂತ್ರಣ ಸಾಧ್ಯ” : ಸಚಿವ ಬಸವರಾಜ ಬೊಮ್ಮಾಯಿ
ಬೆಂಗಳೂರು,ಏಪ್ರಿಲ್,09,2021(www.justkannada.in) : ಜನರ ಸಹಕಾರ ಇದ್ದರೆ ಮಾತ್ರ ಯಾವುದೇ ಲಾಕ್ಡೌನ್ ಮತ್ತು ಆರ್ಥಿಕ ನಿರ್ಬಂಧ ಇಲ್ಲದೆ ಕೋವಿಡ್ ನಿಯಂತ್ರಣ ಸಾಧ್ಯ. ಇಲ್ಲದಿದ್ದರೆ ಎಲ್ಲರೂ ಕಠಿಣ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ನಿಯಂತ್ರಣ ಕೇವಲ ಸರ್ಕಾರದ ಹೊಣೆಯಲ್ಲ. ಸಾರ್ವಜನಿಕರ ಜವಾಬ್ದಾರಿ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈಗಾಗಲೇ, ಕೆಲ ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ನೈಟ್ ಕರ್ಪ್ಯೂ ಜಾರಿಗೊಳಿಸಿದ್ದಾರೆ. ಕೋವಿಡ್ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ, ರಾತ್ರಿ ಕರ್ಫ್ಯೂ ಜಾರಿ ಅನಿವಾರ್ಯವಾಗಿದೆ ಎಂದರು.

ನೈಟ್ ಕರ್ಫ್ಯೂ ಜಾರಿ ಮಾಡಲಾಗಿರುವ ಜಿಲ್ಲೆಗಳಲ್ಲಿ ನಿಯಂತ್ರಣ ಕ್ರಮಗಳನ್ನ ಕಟ್ಟುನಿಟ್ಟಾಗಿ  ಅನುಷ್ಠಾಕ್ಕೆ ತರುವಂತೆ ಈಗಾಗಲೇ ನಾನು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಜನರಿಗೆ ಈಗ ಕೋವಿಡ್ ಬಗ್ಗೆ ಹೆಚ್ಚಿಗೆ ಹೇಳಬೇಕಾದ ಅವಶ್ಯಕತೆ ಇಲ್ಲ. ಕೋವಿಡ್ ನಿಯಂತ್ರಣ ತಪ್ಪಿದರೆ ಕಠಿಣ ಪರಿಸ್ಥಿತಿ ಎದುರಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಅದಕ್ಕೆ, ಅವಕಾಶ ಮಾಡಿಕೊಡಬೇಡಿ ಎಂದು ಹೇಳಿದರು.

ಸದ್ಯಕ್ಕೆ ನಾವೇ ಪರಿಸ್ಥಿತಿಯನ್ನು ನಿಭಾಯಿಸುವ ಸ್ಥಿತಿಯಲ್ಲಿದ್ದೇವೆ. ಆದರೆ, ಇದಕ್ಕೆ ಜನರ ಸಹಕಾರ ಅತಿಮುಖ್ಯ. ಜನರ ಸಹಕಾರ ಸಿಕ್ಕಿದ್ದೇ ಆದರೆ, ಇದನ್ನು ನಾವು ಯಾವುದೇ ಲಾಕ್ಡೌನ್ ಇಲ್ಲದೆ,  ಆರ್ಥಿಕ ನಿರ್ಬಂಧ ಎದುರಿಸದೇ ನಿಯಂತ್ರಿಸಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ, ಮತ್ತೊಮ್ಮೆ ಕಠಿಣ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆಯಲ್ಲಿ ನಾವಿರಬೇಕು ಎಂದು ಬೊಮ್ಮಾಯಿ ಎಚ್ವರಿಸಿದರು.

ರಾತ್ರಿ ವೇಳೆ ಬಾರ್ ಮತ್ತು ಪಬ್  ಗಳನ್ನು ಬಂದ್ ಮಾಡಲಾಗುವುದು. ಆದರೆ, ಬಸ್ ಸಂಚಾರಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ. ಖಾಸಗಿ ಕಾರ್ಯಕ್ರಮಗಳನ್ನು ಆಯೋಜಿಸುವವರು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಲ್ಲದಿದ್ದರೆ ಕಾರ್ಯಕ್ರಮಗಳ ಆಯೋಜಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಬಸವರಾಜ ಎಚ್ಚರಿಕೆ ನೀಡಿದರು

ರಾತ್ರಿ ವೇಳೆ ಕೋವಿಡ್ ಹರಡದಂತೆ ತಡೆಯುವ ದೃಷ್ಟಿಯಿಂದ ರಾತ್ರಿ ಕರ್ಫೂ ಜಾರಿಗೊಳಿಸಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಜನರ ಸಹಕಾರ ಅತಿಮುಖ್ಯ.  ಇಲ್ಲದಿದ್ದರೆ ಎಲ್ಲರೂ ಕಠಿಣ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

key words : People-cooperation-Only-Lockdown-Not without-Covid-Control-Possible-Minister-Basavaraja Bommai

ಹಳೇ ಮೈಸೂರಿನಲ್ಲಿ ಆದಷ್ಟು ರಸ್ತೆಗಳು ನಮ್ಮಲ್ಲಿ ಆಗಿಲ್ಲ : ಸಚಿವ ಬಿ.ಸಿ.ಪಾಟೀಲ್
ಬೆಂಗಳೂರು,ಫೆಬ್ರವರಿ,28,2021(www.justkannada.in) : ಹಳೇ ಮೈಸೂರಿನಲ್ಲಿ ಆದಷ್ಟು ರಸ್ತೆಗಳು ನಮ್ಮಲ್ಲಿ ಆಗಿಲ್ಲ. ಆ ಭಾಗಕ್ಕೆ ಹೋಲಿಸಿದರೆ ನಾವು ಹಿಂದೆ ಉಳಿದಿದ್ದೇವೆ. ಉತ್ತರ ಕರ್ನಾಟಕಕ್ಕೆ ಸರಕಾರ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಜಾವೂರ್ ನಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕಕ್ಕೆ ಸರಕಾರ ಹೆಚ್ಚಿನ ಅನುದಾನ ನೀಡಬೇಕು.

ಈಗ ಮಾತ್ರ ಅಲ್ಲ ಯಾವಾಗಲೂ ಉತ್ತರ ಕರ್ನಾಟಕ ಹೀಗೆ ಅನಿಸುತ್ತದೆ. ಉತ್ತರ ಕರ್ನಾಟಕಕ್ಕೆ ಒತ್ತು ಕೊಡಬೇಕು. ಉತ್ತರ ಕರ್ನಾಟಕದ ಬಗ್ಗೆ ಈ ನಿರ್ಲಕ್ಷ್ಯ ಯಾಕೆ ಎಂದು ಹಿಂದಿನವರನ್ನೇ ಕೇಳಬೇಕು ಎಂದು ತಿಳಿಸಿದರು.

key words : Old Mysore-possible-Roads-We’re not-Minister-B.C. Patil

ರಾಜಕೀಯ ಮೀಸಲಾತಿಯಿಂದ ಸಾಮಾಜಿಕ, ಆರ್ಥಿಕ ಸಮಾನತೆ ಸಾಧ್ಯವಾಗಿದೆ : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು,ಸೆಪ್ಟೆಂಬರ್,24,2020(www.justkannada.in) : ಪೂನಾ ಒಪ್ಪಂದದಿಂದಾಗಿ ರಾಜಕೀಯದಲ್ಲಿ ದಲಿತ ರಾಜಕಾರಣದ ಶಕ್ತಿ ಹೆಚ್ಚಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಪ್ರತಿಪಾದಿಸಿದ ಸಾಮಾಜಿಕ, ಆರ್ಥಿಕ ಸಮಾನತೆ ರಾಜಕೀಯ ಮೀಸಲಾತಿಯಿಂದ ಸಾಧ್ಯವಾಗಿದೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಹೇಳಿದರು.ಮೈಸೂರು ವಿವಿ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಮತ್ತು ವಿಸ್ತರಣಾ ಕೇಂದ್ರದ ವತಿಯಿಂದ ಗುರುವಾರ ಆಯೋಜಿಸಿದ್ದ ”ಪೂನಾ ಒಪ್ಪಂದದ ದಿನ’’ ರಾಷ್ಟ್ರೀಯ ವೆಬಿನಾರ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಜಕೀಯ ಮೀಸಲಾತಿಯ ಇತಿಹಾಸವು 9 ದಶಕಗಳ ಸಮೀಪದಲ್ಲಿದೆ

ಇಂದು ಕಾಯ್ದಿರಿಸಿದ ಕ್ಷೇತ್ರಗಳಿಂದ ಲೋಕಸಭೆಯಲ್ಲಿ ಪರಿಶಿಷ್ಟ ಜಾತಿಯಿಂದ 84 ಮಂದಿ ಮತ್ತು ಪರಿಶಿಷ್ಟ ಪಂಗಡದಿಂದ 47 ಮಂದಿ ಸಂಸದರು ಆಯ್ಕೆಯಾಗಿದ್ದಾರೆ. ಪ್ರತಿ ರಾಜ್ಯದ ಶಾಸಕಾಂಗ ಸಭೆಗಳಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಕ್ಷೇತ್ರಗಳನ್ನು ಕಾಯ್ದಿರಿಸಲಾಗಿದೆ. ರಾಜಕೀಯ ಮೀಸಲಾತಿಯ ಇತಿಹಾಸವು 9 ದಶಕಗಳ ಸಮೀಪದಲ್ಲಿದೆ ಎಂದರು.

ಪೂನಾ ಒಪ್ಪಂದ ಸಂಬಂಧ ಅಂಬೇಡ್ಕರ್ ಅವರು ಅಸಮಾಧಾನ ಹೊಂದಿದ್ದರು. ಈ ಒಪ್ಪಂದವು ಅಸ್ಪೃಶ್ಯರನ್ನು ಹಿಂದೂಗಳ ನಿಯಂತ್ರಣದಲ್ಲಿಡುವುದು. ಅಸ್ಪೃಶ್ಯರು ರಾಜಕೀಯದಲ್ಲಿ ಬದುಕುಳಿಯಲು ಯಾವಾಗಲೂ ಸ್ಪೃಶ್ಯರ ಕರುಣೆಯಡಿಯಲ್ಲಿ ಉಳಿಯುವ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗುವುದು ಎಂಬ ಅಕ್ರೋಶವಿತ್ತು. ಕಳೆದ ಎರಡು ಸಾವಿರ ವರ್ಷಗಳಲ್ಲಿ ಕಣ್ಮರೆಯಾಗದ ಅಸ್ಪೃಶ್ಯತೆಯು 20 ವರ್ಷಗಳಲ್ಲಿ ಮಾಯವಾಗುತ್ತದೆಯೇ ಎಂದು ಅವರು ಅನುಮಾನಿಸಿದರು ಎಂದು ವಿವರಿಸಿದರು.

ಮಹಾತ್ಮಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಮಾನವಕುಲದ ಒಳಿತಿಗೆ ಶ್ರಮಿಸಿದ್ದಾರೆ

ರಾಜಕೀಯ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರಲ್ಲಿ ಮಹಾತ್ಮಗಾಂಧಿ ಮತ್ತು ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಪ್ರಮುಖರಾಗಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ,ಸಮಾನತೆಯಂತ ಉತ್ತಮ ಮೌಲ್ಯಗಳನ್ನು ನೀಡಿದ್ದಾರೆ. ರಾಷ್ಟ್ರ ಮತ್ತು ಸಮಾಜದ ಬಗ್ಗೆ ತಮ್ಮದೇ ಆಲೋಚನೆ, ತಿಳುವಳಿಕೆಯಿಂದ ಮಾನವಕುಲದ ಒಳಿತಿಗಾಗಿ ಶ್ರಮಿಸಿದ್ದಾರೆ ಎಂದರು.

ಅಂಬೇಡ್ಕರ್ ಸಂಶೋಧನ ಮತ್ತು ವಿಸ್ತರಣಾ ಕೇಂದ್ರದಿಂದ ಉತ್ತಮ ಕಾರ್ಯ

ಅಂಬೇಡ್ಕರ್ ಸಂಶೋಧನ ಮತ್ತು ವಿಸ್ತರಣಾ ಕೇಂದ್ರವು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಸಮಾಜಕ್ಕೆ ತಿಳಿಸುವ ನಿಟ್ಟಿನಲ್ಲಿ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅಂಬೇಡ್ಕರ್ ಅವರ ಸಿದ್ಧಾಂತ, ಹೋರಾಟ ಮತ್ತು ಬರಹಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೇಗೆ ರೂಪಿಸಿದವು ಎಂಬಿತ್ಯಾದಿಯಾಗಿ ಮಾಹಿತಿಯನ್ನು ಒದಗಿಸುವ ಕಾರ್ಯ ಮಾಡುತ್ತಿದ್ದಾರೆ ಎಂದು ಮೆಚ್ಚುಗೆವ್ಯಕ್ತಪಡಿಸಿದರು.

ಬಳಿಕ ರಾಜಕೀಯ ಮೀಸಲಾತಿ ವಿಮರ್ಶಾತ್ಮಕ ಮೌಲ್ಯಮಾಪನ ವಿಷಯ ಕುರಿತು ಜೆಎನ್ ಯು ರಾಜಕೀಯ ಅಧ್ಯಯನ ಕೇಂದ್ರ ನಿವೃತ್ತ ಪ್ರಾಧ್ಯಾಪಕ ಡಾ.ಗೋಪಾಲ್ ಗುರು ಉಪನ್ಯಾಸ ನೀಡಿದರು.

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಡಿ.ಜೀವನ್ ಕುಮಾರ್ ವೆಬಿನಾರ್ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಮತ್ತು ವಿಸ್ತರಣಾ ಕೇಂದ್ರದ ನಿರ್ದೇಶಕ ಪ್ರೊ.ಜೆ.ಸೋಮಶೇಖರ್, ವಿಜ್ಞಾನ ಭವನ ಕಾರ್ಯಕ್ರಮ ಸಂಯೋಜನಾಧಿಕಾರಿ ಚಂದ್ರನಾಯಕ್ ಸೇರಿದಂತೆ ಅನೇಕರು ವೆಬಿನಾರ್ ನಲ್ಲಿ ಭಾಗವಹಿಸಿದ್ದರು.

key words : Social-economic-equality-made-possible-political-reservation-Chancellor-Prof G.Hemant Kumar