proposals Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಸಾರ್ವಜನಿಕರಿಗೆ ಯೋಜನೆಗಳ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಹೆಚ್.ಸಿ ಮಹದೇವಪ್ಪ
ಮೈಸೂರು,ಜನವರಿ,12,2026 (www.justkannada.in): ಸಾರ್ವಜನಿಕರಿಗೆ ಅವಶ್ಯಕವಿರುವ ಯೋಜನೆಗಳ ಪ್ರಸ್ತಾವನೆಗಳನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಿ. ಯೋಜನೆಗಳ ಪ್ರಾಮುಖ್ಯತೆಯ ಬಗ್ಗೆ ವಿವರಿಸಿದರೆ ಆಯವ್ಯಯದಲ್ಲಿ ಯೋಜನೆ ಸೇರಿಸುವುದರ ಜೊತೆಗೆ ಜಿಲ್ಲೆಯು ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರು ತಿಳಿಸಿದರು.

ಇಂದು ಜಿಲ್ಲಾ ಪಂಚಾಯತ್ ಡಿ.ದೇವರಾಜ್ ಅರಸು ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದು ನಂತರ ಸಚಿವ ಹೆಚ್.ಸಿ ಮಹದೇವಪ್ಪ ಮಾತನಾಡಿದರು.

ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಅವಶ್ಯಕವಿರುವ ಹೊಸ ಹಾಸ್ಟಲ್‌ ಗಳು ಹಾಗೂ ಹಾಸ್ಟೆಲ್‌ ಗಳಿಗೆ ಸ್ವಂತ ಕಟ್ಟಡಗಳ ವಿವರವನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ದೊರಕಿಸಬೇಕು ಎಂಬುದು ಮುಖ್ಯ ಆಶಯ ಎಂದರು.

ಆಶ್ರಮ ಶಾಲೆಗಳಲ್ಲಿ ಬಹುತೇಕ ಹೊರಗುತ್ತಿಗೆ ನೌಕರರು ಕೆಲಸ ನಿರ್ವಹಿಸುತ್ತಿದ್ದು, ನೇಮಕಾತಿ ಪ್ರಕ್ರಿಯೆ ಬಗ್ಗೆ ಹಾಗೂ ಹಾಡಿ ಜನರಿಗೆ ಹೆಚ್.ಡಿ.ಕೋಟೆ, ಪಿರಿಯಾಪಟ್ಟಣ ಹಾಗೂ ಹುಣಸೂರು ತಾಲ್ಲೂಕಿನಲ್ಲಿ ಕೌಶಲ್ಯಾಧಾರಿತ ತರಬೇತಿ ಕೇಂದ್ರಗಳನ್ನು ತೆರೆಯಬೇಕು ಎಂದು ಸಭೆಯಲ್ಲಿ ಚರ್ಚಿಸಲಾಯಿತು.

ಮೈಸೂರು ನಗರದಲ್ಲಿ 390 ಕೆ.ಎಸ್.ಆರ್.ಟಿ‌ಸಿ ಬಸ್ ಗಳು ಮಾತ್ರ ಕಳೆದ 15 ವರ್ಷದಿಂದ ಸಂಚಾರಕ್ಕೆ ಲಭ್ಯವಿದೆ. ಜನಸಂಖ್ಯೆ ಹೆಚ್ಚಳವಾಗಿದ್ದು, ಹೆಚ್ಚಿನ ಬಸ್ ಹಾಗೂ ಡಿಪೋನ ಅವಶ್ಯಕತೆ ಇರುತ್ತದೆ. ಈ ಬಗ್ಗೆ ಮಾಹಿತಿ ಸಲ್ಲಿಸುವಂತೆ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದರು‌.

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ವಿದ್ಯಾಭ್ಯಾಸದಿಂದ ವಂಚಿತರಾಗಬಾರದು. ಅವರಿಗೆ ಬೇಕಿರುವ ವಸತಿ ಶಾಲೆಗಳು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಹಾಗೂ ಇನ್ನಿತರೆ ಯೋಜನೆಗಳ ಬಗ್ಗೆ ವರದಿ ಸಿದ್ಧಪಡಿಸುವಂತೆ ತಿಳಿಸಿದರು.

ಅಧಿಕಾರಿಗಳು ಸಭೆಯಲ್ಲಿ ಚರ್ಚಿಸುವ ಕೆಲವು ವಿಷಯಗಳನ್ನು ಇಲಾಖಾ ಮಂತ್ರಿಗಳ ವ್ಯಾಪ್ತಿಯಲ್ಲಿ ಚರ್ಚಿಸಿ ಸರಿಪಡಿಸಬಹುದು. ಅಂತಹ ವಿಷಯಗಳನ್ನು ಅವರ ಗಮನಕ್ಕೆ ಆಯವ್ಯಯದಲ್ಲಿ ಸೇರಿಸಬೇಕಿರುವ ವಿಷಯಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದರು.

ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು ಮಾತನಾಡಿ, ಅಧಿಕಾರಿಗಳು ಜಿಲ್ಲೆಯಲ್ಲಿ ಅವಶ್ಯಕವಿರುವ ಯೋಜನೆಗಳ ಕುರಿತು ಕ್ರೂಢೀಕೃತ ವರದಿಯನ್ನು ಶೀಘ್ರವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ತಿಳಿಸಿದರು.

ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಅವರು ಮಾತನಾಡಿ, ಮುಂದಿನ ದಿನಗಳಲ್ಲಿ ಕಸ ವಿಲೇವಾರಿ ಹಾಗೂ ಯುಜಿಡಿ ವ್ಯವಸ್ಥೆ, ಸಾರ್ವಜನಿಕ ಈಜು ಕೊಳ, ರಸ್ತೆಗಳಲ್ಲಿ ಪಾದಚಾರಿ ಸ್ಥಳಗಳನ್ನು ಹೆಚ್ಚಿಸುವ ಬಗ್ಗೆ ಚರ್ಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಯುಕೇಶ್ ಕುಮಾರ್, ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಕ್ಷಿತ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Prepare, submit,  proposals, CM, Minister, H.C. Mahadevappa

The post ಸಾರ್ವಜನಿಕರಿಗೆ ಯೋಜನೆಗಳ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಹೆಚ್.ಸಿ ಮಹದೇವಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸ್ವದೇಶ ದರ್ಶನ 2.0 ಯೋಜನೆಯಡಿ ಶ್ರೀರಂಗಪಟ್ಟಣ ಸ್ಮಾರಕಗಳ ಅಭಿವೃದ್ಧಿಗೆ ಪ್ರಸ್ತಾವನೆ- ಕೇಂದ್ರ ಸಚಿವ ಹೆಚ್.ಡಿ‌. ಕುಮಾರಸ್ವಾಮಿ
ಮಂಡ್ಯ,ಜುಲೈ,4,2025 (www.justkannad.in): ಕೇಂದ್ರ ಸರ್ಕಾರದ ಸ್ವದೇಶ ದರ್ಶನ 2.0 ಯೋಜನೆಯಡಿ 100 ಕೋಟಿ ರೂ  ವೆಚ್ಚದಲ್ಲಿ  ಶ್ರೀರಂಗಪಟ್ಟಣ ಸ್ಮಾರಕಗಳ ಅಭಿವೃದ್ಧಿ ಪಡಿಸುವಂತೆ ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.

ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ದಿಶಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ ಇರುವ ಸ್ಮಾರಕಗಳನ್ನು ಅಭಿವೃದ್ಧಿ ಪಡಿಸುವುದರ ಜೊತೆಗೆ ಪ್ರವಾಸೋದ್ಯಮಕ್ಕೆ ಹೆಚ್ಚು ಒತ್ತು‌ ನೀಡಲಾಗುವುದು. ಇದರಿಂದ ಸ್ಥಳೀಯವಾಗಿ‌ ಹೆಚ್ಚಿನ ಉದ್ಯೋಗ ಸೃಷ್ಠಿಯಾಗಲಿದೆ ಎಂದರು.

ಕೆರೆಗಳಿಗೆ ನೀರು ತುಂಬಿಸಿ ಕೆ‌.ಆರ್.ಎಸ್ ಜಲಾಶಯ ಜೂನ್ ಮಾಹೆಯಲ್ಲೇ ತುಂಬಿರುವುದು ಸಂತೋಷದ ವಿಷಯವಾಗಿದೆ. ಜಿಲ್ಲೆಯಲ್ಲಿರುವ ಎಲ್ಲಾ ಕೆರೆಗಳನ್ನು ತುಂಬಿಸಲು ಕ್ರಮವಹಿಸಿ. ಮುಖ್ಯವಾಗಿ ಕೊನೆಯ ಭಾಗದಲ್ಲಿರುವ ಕೆರೆಗಳನ್ನು‌ ತುಂಬಿಸಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಹೆಣ್ಣು ಭ್ರೂಣ ಹತ್ಯೆ ಶಿಕ್ಷಾರ್ಹ ಅಪರಾಧವಾಗಿದ್ದು, ಹೆಣ್ಣು ಭ್ರೂಣ ಹತ್ಯೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ. ಜಿಲ್ಲೆಯಲ್ಲಿ ಅಗತ್ಯ ಅಂಬೂಲೆನ್ಸ್ ವ್ಯವಸ್ಥೆ ಇರುವ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಗಳು ಖಾತ್ರಿ ಪಡಿಸಿಕೊಳ್ಳಬೇಕು. ಹೃದಾಯಾಘಾತದಿಂದ ಮರಣ ಹೊಂದುತ್ತಿರುವವರ ಸಂಖ್ಯೆ ಬೇರೆ ಜಿಲ್ಲೆಗಳಲ್ಲಿ ಹೆಚ್ಚಿದ್ದು, ಮಂಡ್ಯ ಜಿಲ್ಲೆಯಲ್ಲೂ ಹೃದಯಾಘಾತ ಕುರಿತು ಅಧ್ಯಯನ ನಡೆಸಿ ಎಂದರು.

ಈ ಬಾರಿ ಉತ್ತಮ ಮಳೆಯಾಗಿದ್ದು, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅವರು ರೈತರಿಗೆ ಬೇಕಿರುವ ಸಲಹೆಗಳನ್ನು ಕಾಲಕಾಲಕ್ಕೆ ನೀಡಿ. ಆಶ್ರಯ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ವಸತಿ ಒದಗಿಸಿ ಎಂದರು.

ಮಾಜಿ ಶಾಸಕರಾದ ಅನ್ನದಾನಿ ಅವರು ಮಾತನಾಡಿ ಜಿಲ್ಲೆಯಲ್ಲಿ ನಡೆಯುತ್ತಿರುವ ವೃದ್ಧಾಶ್ರಮಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡುತ್ತಿರುವ ಅನುದಾನವನ್ನು ಹೆಚ್ಚುವರಿ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಮನವಿ ಮಾಡಿದರು.

ಜಿಲ್ಲಾಧಿಕಾರಿ ಡಾ. ಕುಮಾರ ಅವರು ಮಾತನಾಡಿ ಜಿಲ್ಲೆಯಲ್ಲಿ ಬಾಲ್ಯವಿವಾಹವನ್ನು ತಡೆಗಟ್ಟಲು ಎಲ್ಲಾ ಶಾಲಾ, ಕಾಲೇಜುಗಳಲ್ಲಿ ಬಾಲ್ಯ ವಿವಾಹದಿಂದ ಉಂಟಾಗುವ ದುಷ್ಪರಿಣಾಮ, ಪೋಕ್ಸೋ ಕಾಯ್ದೆ ಹಾಗೂ ಕಾನೂನಿನ ಕಠಿಣ ಕ್ರಮ ಕುರಿತು ಜಾಗೃತಿ ಕಾರ್ಯಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಮೈಸೂರು ಮತ್ತು ಬೆಂಗಳೂರು ಹೆದ್ದಾರಿಯಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಹಾಗೂ  ವೇಗ ನಿಯಂತ್ರಿಸಲು ಎ.ಐ ಕ್ಯಾಮರಾಗಳನ್ನು ಅಳವಡಿಕೆ ಮಾಡಿದ್ದು, ಹೆಚ್ಚು ವೇಗವಾಗಿ ಸಂಚರಿಸುವವರಿಗೆ ದಂಡವನ್ನು ವಿಧಿಸಲಾಗುತ್ತಿದೆ‌ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ‌ ಅವರು ಮಾತನಾಡಿ ಜಿಲ್ಲೆಯಲ್ಲಿ ‌ಬಾಲ್ಯ ವಿವಾಹ‌ ತಡೆಗಟ್ಟಲು ಮುಖ್ಯವಾಗಿ ಜಾತ್ರೆ ಹಾಗೂ ಸಾಮೂಹಿಕ ವಿವಾಹ ನಡೆಯುವ ಸ್ಥಳಗಳಲ್ಲಿ ವಿವಾಹ ನಡೆಯುವ ವರ‌ ಹಾಗೂ ವಧುಗಳ ವಯೋಮಿತಿ ಕುರಿತು ದಾಖಲೆ ಪಡೆದುಕೊಳ್ಳುವಂತೆ ಹಾಗೂ ವಿಶೇಷ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಎಂ.ಹೆಚ್  ರಾಮಯ್ಯ ಗ್ರೂಪ್ ಆಫ್ ಇನ್ಸ್ ಟೂಷನ್ ವತಿಯಿಂದ ಸಿ.ಎಸ್.ಆರ್. ಯೋಜನೆಯಡಿ  6 ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಹಾಗೂ ಶ್ರವಣ ದೋಷವುಳ್ಳ 6 ಮಕ್ಕಳಿಗೆ ಶ್ರವಣ ಸಾಧನವನ್ನು

ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ವಿತರಿಸಿದರು.

ಸಭೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್, ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ಟಿ.ಮಂಜು, ವಿಧಾನಪರಿಷತ್ ಶಾಸಕ ವಿವೇಕನಂದ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Proposals, Development, Srirangapatna, Monuments, HD Kumaraswamy

The post ಸ್ವದೇಶ ದರ್ಶನ 2.0 ಯೋಜನೆಯಡಿ ಶ್ರೀರಂಗಪಟ್ಟಣ ಸ್ಮಾರಕಗಳ ಅಭಿವೃದ್ಧಿಗೆ ಪ್ರಸ್ತಾವನೆ- ಕೇಂದ್ರ ಸಚಿವ ಹೆಚ್.ಡಿ‌. ಕುಮಾರಸ್ವಾಮಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ವಿವಿ ಅಧ್ಯಾಪಕರುಗಳಿಗೆ ಪದೋನ್ನತಿ ಹೊಂದಿದ ದಿನಾಂಕದಿಂದಲೇ ಆರ್ಥಿಕ ಸೌಲಭ್ಯ ವಿಸ್ತರಿಸುವ ಪ್ರಸ್ತಾವನೆಗೆ ಸಿಂಡಿಕೇಟ್ ಅನುಮೋದನೆ….
ಮೈಸೂರು,ಜನವರಿ,21,2021(www.justkannada.in): ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪದೋನ್ನತಿ ಹೊಂದಿದ ಅಧ್ಯಾಪಕರುಗಳಿಗೆ ಅವರವರ ಆರ್ಹತಾ ದಿನಾಂಕದಿಂದಲೇ ಆರ್ಥಿಕ ಸೌಲಭ್ಯವನ್ನು ನೀಡದೆ ಕೇವಲ ಸಿಂಡಿಕೇಟ್ ದಿನಾಂಕದಿಂದ ನೀಡುತ್ತಿದ್ದ ಆದೇಶಕ್ಕೆ ತಡೆಹಿಡಿಸುವಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾದ ಡಾ. ಚೈತ್ರ ನಾರಾಯಣ್ ಯಶಸ್ವಿಯಾಗಿದ್ದಾರೆ.

ಯು.ಜಿ.ಸಿ ನಿಯಮಾವಳಿಗಳ ಪ್ರಕಾರ ಯಾವುದೇ ಸಹಾಯಕ ಪ್ರಾಧ್ಯಾಪಕ ಎಜಿಪಿ 7,000/-, ಎಜಿಪಿ 8,000/-, ಸಹ ಪ್ರಾಧ್ಯಾಪಕ ಎಜಿಪಿ 9,000/- ಹಾಗೂ ಪ್ರಾಧ್ಯಾಪಕ ಎಜಿಪಿ 10,000/- ರೂಪಾಯಿಗಳ ದರ್ಜೆಗೆ ಪದೋನ್ನತಿ ಹೊಂದಿದಾಗ ಅವರವರ ಅರ್ಹತಾ ದಿನಾಂಕದಿಂದಲೇ ಆರ್ಥಿಕ ಸೌಲಭ್ಯವನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ತಮ್ಮ ಪ್ರಸ್ತಾವನೆಯಲ್ಲಿ ಡಾ. ಚೈತ್ರ ನಾರಾಯಣ್  ‘ಕಳೆದ ಸಿಂಡಿಕೇಟ್ ಸಭೆಯಲ್ಲಿ ಮಂಡಿಸಿ, ಹಿಂದಿನ ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸಭೆಯ ಆದೇಶವನ್ನು ರದ್ದುಪಡಿಸಿ ಯು.ಜಿ.ಸಿ ನಿಯಮಾವಳಿಗಳ ಪ್ರಕಾರ ಅಧ್ಯಾಪಕರ ಹಕ್ಕನ್ನು ರಕ್ಷಿಸಬೇಕೆಂದು ಕುಲಪತಿಗಳಿಗೆ ಮನವಿ ಮಾಡಿದ್ದರು.

ಕುಲಪತಿಗಳು ಇದಕ್ಕೆ ಸಕಾರಾತ್ಮಕವಾಗಿ ಒಪ್ಪಿ ಹಿಂದಿನ ಆದೇಶವನ್ನು ಮಾರ್ಪಡಿಸಿ ಪದೋನ್ನತಿ ಹೊಂದಿದ ದಿನಾಂಕದಿಂದಲೇ ಅಧ್ಯಾಪಕರುಗಳಿಗೆ ಆರ್ಥಿಕ ಸೌಲಭ್ಯವನ್ನು ವಿಸ್ತರಿಸಲು ಅನುಮೋದನೆ ನೀಡಿದರು. ಈ ಅನುಮೋದನೆಗೆ ಇತರ ಎಲ್ಲಾ ಸಿಂಡಿಕೇಟ್ ಸದಸ್ಯರು ಒಮ್ಮತದಿಂದ ಸಕಾರಾತ್ಮಕವಾಗಿ ಒಪ್ಪಿಗೆ ನೀಡಿ ಅನುಮೋದನೆ ನೀಡಿದರು.

ಈ ನಿರ್ಣಯದಿಂದ ಮೈಸೂರು ವಿಶ್ವವಿದ್ಯಾನಿಲಯದ ಎಲ್ಲಾ ಅಧ್ಯಾಪಕರುಗಳು ಹರ್ಷಗೊಂಡಿದ್ದು ಇದರ ನಿಮಿತ್ತ ಈ ಸಂಘದ ಅಧ್ಯಕ್ಷರಾದ ಪ್ರೊ. ಜಿ. ವೆಂಕಟೇಶ್ ಕುಮಾರ್  ಅವರು ಡಾ. ಚೈತ್ರ ನಾರಾಯಣ್ ರವರನ್ನು ಖುದ್ದಾಗಿ ಭೇಟಿ ಮಾಡಿ ಸಂಘದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Key words: Syndicate –Approves- Proposals -Increase Economic Facilitation -Mysore university- Dr. Chaitra Narayan

The post ಮೈಸೂರು ವಿವಿ ಅಧ್ಯಾಪಕರುಗಳಿಗೆ ಪದೋನ್ನತಿ ಹೊಂದಿದ ದಿನಾಂಕದಿಂದಲೇ ಆರ್ಥಿಕ ಸೌಲಭ್ಯ ವಿಸ್ತರಿಸುವ ಪ್ರಸ್ತಾವನೆಗೆ ಸಿಂಡಿಕೇಟ್ ಅನುಮೋದನೆ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೊರೋನಾ ಸಂಕಷ್ಟದ ನಡುವೆಯೂ ಬಂಡವಾಳ ಹೂಡಿಕೆ ಪ್ರಸ್ತಾವನೆಯಲ್ಲಿ ಕರ್ನಾಟಕ ಪ್ರಥಮ ಸ್ಥಾನ….
ಬೆಂಗಳೂರು ಡಿಸೆಂಬರ್‌ 29,2020(www.justkannada.in): ಕೊರೊನಾ ಸಂಕಷ್ಟದ ನಡುವೆಯೂ ಬಂಡವಾಳ ಹೂಡಿಕೆ ಪ್ರಸ್ತಾವದಲ್ಲಿ ದೇಶದಲ್ಲಿ ನಮ್ಮ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆಯ ಮಾಹಿತಿ ಅನ್ವಯ, ನಮ್ಮ ರಾಜ್ಯದಲ್ಲಿ 1,54,937 ಕೋಟಿ ಮೊತ್ತದ 95 ಹೂಡಿಕೆಯ ಪ್ರಸ್ತಾವನೆಗಳು ನೋಂದಣಿಯಾಗಿವೆ. ಈ ಮೂಲಕ ನಮ್ಮ ರಾಜ್ಯವು ಹೂಡಿಕೆ ಪ್ರಸ್ತಾವದ ವಿಚಾರದಲ್ಲಿ ದೇಶದಲ್ಲಿಯೇ ಮೊದಲ ಸ್ಥಾನವನ್ನು ತನ್ನದಾಗಿಸಿಕೊಂಡಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಅವರು ತಿಳಿಸಿದರು.

ಇಂದು ನಗರದ ಕರ್ನಾಟಕ ಉದ್ಯೋಗ ಮಿತ್ರ ಸಭಾಂಗಣದಲ್ಲಿ “ಮುಕ್ತ ಅವಕಾಶದ ಮೂಲಕ ಕೈಗಾರಿಕೆಗಳಿಗೆ ಕಡಿಮೆ ದರದಲ್ಲಿ ವಿದ್ಯುತ್‌ ಶಕ್ತಿಯನ್ನು ಪೂರೈಸುವ (Procurement of Cheaper Electricity for industries through open access in the state of Karnataka) ಬಗ್ಗೆ ಅಸೋಚಾಮ್‌ (ASSOCHAM) ಆಯೋಜಿಸಿದ್ದ ವೆಬಿನಾರನ್ನು ಉದ್ಘಾಟಿಸಿ ಮಾತನಾಡಿದರು.

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆಯ ಮಾಹಿತಿ ಅನ್ವಯ ನಮ್ಮ ರಾಜ್ಯದಲ್ಲಿ 1,54,937 ಕೋಟಿ ಮೊತ್ತದ 95 ಹೂಡಿಕೆಯ ಪ್ರಸ್ತಾವನೆಗಳು ನೋಂದಣಿಯಾಗಿವೆ. ಈ ಮೂಲಕ ನಮ್ಮ ರಾಜ್ಯವು ಹೂಡಿಕೆ ಪ್ರಸ್ತಾವದ ವಿಚಾರದಲ್ಲಿ ದೇಶದಲ್ಲಿಯೇ ಮೊದಲ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ರಾಜ್ಯವನ್ನು ದೇಶದಲ್ಲಿ ಕೈಗಾರಿಕಾ ಸ್ನೇಹಿ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ನಮ್ಮ ಪ್ರಯತ್ನಗಳು ಸಫಲವಾಗುತ್ತಿರುವುದು ಈ ಮೂಲಕ ಗೋಚರವಾಗುತ್ತಿವೆ. ಅಲ್ಲದೆ, ಆಗಸ್ಟ್‌ 2019 ರಿಂದ ಡಿಸೆಂಬರ್‌ 2020 ರ ನಡುವೆ ರಾಜ್ಯ ಉನ್ನತ ಮಟ್ಟದ ಸಮಿತಿ ಹಾಗೂ ರಾಜ್ಯ ಉನ್ನತ ಮಟ್ಟದ ಏಕಗವಾಕ್ಷಿ ಸಮಿತಿಯ ಮೂಲ 410 ನೂತನ ಯೋಜನೆಗಳಿಗೆ ಅನುಮತಿ ನೀಡಲಾಗಿದೆ. ಈ ಅನುಮತಿಗಳ ಮೂಲಕ ರಾಜ್ಯದಲ್ಲಿ 82,015 ಕೋಟಿ ರೂಪಾಯಿಗಳ ಬಂಡವಾಳ ಹೂಡಿಕೆಯ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, 2,27,147 ಉದ್ಯೋಗಾವಕಶಗಳ ನಿರ್ಮಾಣವಾಗಿದೆ ಎಂದು ಹೇಳಿದರು.

ಕರ್ನಾಟಕ ರಾಜ್ಯವು ವಿದ್ಯುತ್‌ ಸ್ವಾವಲಂಬಿ ರಾಜ್ಯವಾಗಿದ್ದು, ಇವಿ ಹಾಗೂ ಡಾಟಾ ಸೆಂಟರ್‌ಗಳಂತಹ ಕ್ಷೇತ್ರಗಳಿಗೆ ವಿದ್ಯುತ್‌ ನ ಬೇಡಿಕೆ ಹೆಚ್ಚಾಗುತ್ತಿದೆ. ರಾಜ್ಯದ ಇಂಧನ ಕ್ಷೇತ್ರದಲ್ಲಿ ಸುಧಾರಣೆಗೆ ವಿಫುಲ ಅವಕಾಶಗಳಿವೆ. ನಾವು ಕೈಗಾರಿಕೆಗಳ ವಿದ್ಯುತ್‌ ಉಪಯೋಗದ ಖರ್ಚು ವೆಚ್ಚಗಳ ಬಗ್ಗೆ ಅಧ್ಯಯನ ಮಾಡುತ್ತಿದ್ದೇವೆ. ನಾವು ಎಸ್ಕಾಂಗಳ ಜೊತೆ ಕಾರ್ಯನಿರ್ವಹಿಸುತ್ತಿದ್ದು, ಕ್ರಾಸ್‌ ಸಬ್ಸಿಡಿ ಸರ್‌ಚಾರ್ಜ್‌, ವ್ಹೀಲಿಂಗ್‌ ಚಾರ್ಜಸ್‌ ನಂತಹ ವಿಷಯಗಳನ್ನು ಗುರುತಿಸಿದ್ದೇವೆ.

ಪ್ರಸ್ತುತ ನಾವು ನಿರಂತರ ವಿದ್ಯುತ್‌ ಪೂರೈಕೆಗೆ ಗ್ರಿಡ್‌ಗಳ ಮೇಲೆ ಅವಲಂಬಿತರಾಗಿದ್ದು ತಾಂತ್ರಿಕ ಸಮಸ್ಯೆಗಳಿಂದ ಇದನ್ನು ಸಾಧಿಸಲು ಸಾಧ್ಯವಾಗುತ್ತಿಲ್ಲ. ನೂತನ ಬ್ಯಾಟರಿ ಸ್ಟೋರೇಜ್‌ ಸೌಕರ್ಯವನ್ನು ಗ್ರಿಡ್‌ಗಳ ಬಳಿ ನಿರ್ಮಾಣ ಮಾಡುವ ಮೂಲಕ ಈ ಸಮಸ್ಯೆಯಿಂದ ಹೊರಬರಬಹುದಾಗಿದ್ದು, ಇದರ ಬಗ್ಗೆ ಚಿಂತನೆ ನಡೆದಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್‌ ಗುಪ್ತಾ, ಕೈಗಾರಿಕಾಭಿವೃದ್ದಿ ಆಯುಕ್ತೆ ಶ್ರೀಮತಿ ಗುಂಜನ್‌ ಕೃಷ್ಣ, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ ಭಾಗವಹಿಸಿದ್ದರು.

English summary…

Karnataka emerges first in attracting investments amidst Corona pandemic

Bengaluru, Dec. 29, 2020 (www.justkannada.in): “Our state is in the first place in attracting investment proposals even amidst the Corona pandemic. According to the Department for Promotion of Industry and Internal Trade of the Ministry of Commerce and Industries, Govt. of India, as many as 95 investment proposals valued at Rs.1,54,937 crores are registered in our State and has gained first place in the country,” opined Jagadish Shettar, Minister for Large and Medium Industries.

He inaugurated a webinar on the topic, “Procurement of Cheaper Electricity for Industries through Open Access in the State of Karnataka,” held at the Karnataka Udyoga Mitra auditorium in Bengaluru today, organised by ASSOCHAM. “Our efforts in making Karnataka the most industrial-friendly State in the country is evident through this. Between August 2019 and December 2020, through the State High-level Committee and Single-window committees, 410 new projects have been approved. With this investment proposals worth Rs.82,015 crore have been submitted in the state and it will create 2,27,147 job opportunities,” he explained.

Sri Gourav Gupta, Principal Secretary, Industries and Commerce Department, Smt. Gunjan Krishna, Commissioner, Industrial Development Department, Revanna Gowda, MD, Karnataka Udyoga Mitra were present in the programme.

Keywords: Large and Medium Industries Minister/ Jagadish Shettar/ investments/ Karnataka emerges first

Key words: Karnataka -top – list -investment -proposals – corona hardship-minister –jagadish shettar

The post ಕೊರೋನಾ ಸಂಕಷ್ಟದ ನಡುವೆಯೂ ಬಂಡವಾಳ ಹೂಡಿಕೆ ಪ್ರಸ್ತಾವನೆಯಲ್ಲಿ ಕರ್ನಾಟಕ ಪ್ರಥಮ ಸ್ಥಾನ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.