protect Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್
ಕೊಪ್ಪಳ, ಜೂನ್,25,2026 (www.justkannada.in):  “ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಕರ್ನಾಟಕ, ಆಂಧ್ರ ಪ್ರದಶ ಹಾಗೂ ತೆಲಂಗಾಣ ಮೂರೂ ರಾಜ್ಯಗಳು ಸೇರಿ ಒಮ್ಮತದ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಕೊಪ್ಪಳ ಜಿಲ್ಲೆ ಮುನಿರಾಬಾದ್ ಸರಕಾರಿ ಹೈಸ್ಕೂಲ್ ಮೈದಾನದಲ್ಲಿ ತುಂಗಭದ್ರಾ ಅಣೆಕಟ್ಟೆಯ 33 ಸ್ಪಿಲ್ ವೇ ಗೇಟುಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ಡಿಕೆ  ಶಿವಕುಮಾರ್ ಅವರು ಮಾತನಾಡಿದರು.

“ಇದು ದಕ್ಷಿಣ ಭಾರತದ ಐತಿಹಾಸಿಕ ಕಾರ್ಯಕ್ರಮ. 19ನೇ ಗೇಟ್ ತುಂಡರಿಸಿದಾಗ ಈ ಜಿಲ್ಲೆಯ ಉಸ್ತುವಾರಿ ಮಂತ್ರಿಗಳಾದ ಶಿವರಾಜ್ ತಂಗಡಗಿ ಹಾಗೂ ಅಧಿಕಾರಿಗಳು ಮಧ್ಯರಾತ್ರಿ ನನಗೆ ಕರೆ ಮಾಡಿ, ಅಣೆಕಟ್ಟು ನಡುಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ನಾನು ಅಂದು ಬೆಳಗ್ಗೆ 8 ಗಂಟೆಗೆ ಸ್ಥಳಕ್ಕೆ ಭೇಟಿ ನೀಡಿದೆವು. ತಕ್ಷಣವೇ ಏನು ಮಾಡಬೇಕು ಎಂದು ತಜ್ಞರೊಂದಿಗೆ ಚರ್ಚಿಸಿ ಒಂದೇ ವಾರದಲ್ಲಿ ಗೇಟ್ ಬದಲಾವಣೆ ಮಾಡಲಾಯಿತು. ಆಮೂಲಕ ಈ ಭಾಗದ ರೈತರನ್ನು ರಕ್ಷಣೆ ಮಾಡಲಾಯಿತು” ಎಂದು ತಿಳಿಸಿದರು.

“ಗೇಟ್ ತುಂಡರಿಸಿದಾಗ ವಿರೋಧ ಪಕ್ಷಗಳು ಟೀಕೆಗಳನ್ನು ಮಾಡಿದರು. ಶಾರದ ದೇವಿ, ಹುಲಿಗೆಮ್ಮ ಹಾಗೂ ಹುಚ್ಚರಾಯಸ್ವಾಮಿಯ ಆಶೀರ್ವಾದ, ಅಜ್ಜಯ್ಯ ಅವರ ಪವಾಡ, ಹಂಪಿ ವಿರೂಪಾಕ್ಷನ ಕೃಪೆ, ರಾಘವೇಂದ್ರ ಸ್ವಾಮಿಯ ಶಕ್ತಿಯಿಂದಾಗಿ ಇಂತಹ ಮಹತ್ವದ ಕಾರ್ಯಕ್ರಮ ಮಾಡಲು ಸಾಧ್ಯವಾಯಿತು. ನಮ್ಮ ಸರ್ಕಾರ 33 ಗೇಟ್ ಬದಲಾಯಿಸಲು ತೀರ್ಮಾನಿಸಿ ಈ ಮೂರು ರಾಜ್ಯಗಳ ರೈತರ ರಕ್ಷಣೆಗೆ ಭಗವಂತ ನಮಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಅಂದು ನಾನು ನೀರಾವರಿ ಸಚಿವನಾಗಿದ್ದೆ. ಇಂದು ಮುಖ್ಯಮಂತ್ರಿಯಾಗಿದ್ದೇನೆ. ಆದರೂ ನಾನು ನಿಮ್ಮ ಸೇವಕ ಹಾಗೂ ನಿಮ್ಮ ಬಂಧು” ಎಂದರು.

ಮೂರು ರಾಜ್ಯಗಳು ಸೇರಿ ತುಂಗಭದ್ರಾ ಅಣೆಕಟ್ಟು ರಕ್ಷಣೆ

“ತುಂಗಭದ್ರಾ ಅಣೆಕಟ್ಟು ರಕ್ಷಣೆ ಮಾಡಲಾಗಿದೆ. ಇತಿಹಾಸ ಮರೆತವ ಇತಿಹಾಸ ಸೃಷ್ಟಿಸಲಾರ ಎಂಬ ಮಾತಿದೆ. ಇಂದು ಸಿ.ಆರ್ ಪಾಟೀಲ್ ಅವರ ನೇತೃತ್ವದಲ್ಲಿ ಚಂದ್ರಬಾಬು ನಾಯ್ಡು, ರೇವಂತ್ ರೆಡ್ಡಿ ಅವರು ಸೇರಿದಂತೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಇತಿಹಾಸ ನಿರ್ಮಿಸಿದ್ದೇವೆ. ನಾವು ಇತಿಹಾಸ ಓದುವುದು ಹಾಗೂ ಸ್ಮರಿಸುವುದಕ್ಕಿಂತ ಇತಿಹಾಸ ಸೃಷ್ಟಿಸುವುದು ನಮ್ಮ ಗುರಿ. ಜತೆಗೂಡುವುದು ಆರಂಭ, ಜತೆಗೂಡಿ ಚರ್ಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು ಎಂದು ನಾನು ಹೇಳುತ್ತಿರುತ್ತೇನೆ. ಸಿ.ಆರ್ ಪಾಟೀಲ್ ಅವರ ನೇತೃತ್ವದಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಒಟ್ಟಾಗಿ ಸೇರಿ ಮೂರು ರಾಜ್ಯಗಳ ರಕ್ಷಣೆ ಮಾಡಿದ್ದೇವೆ” ಎಂದು ತಿಳಿಸಿದರು.

ಒಂದು ತಾಸು ಚರ್ಚಿಸಿ, ಐತಿಹಾಸಿಕ ತೀರ್ಮಾನ

“ಈ ಅಣೆಕಟ್ಟಿನ 33 ಟಿಎಂಸಿ ನೀರನ್ನು ಉಳಿಸುವ ಬಗ್ಗೆ ರೈತ ಮುಖಂಡರು ಸಲ್ಲಿಸಿರುವ ಮನವಿ ಸೇರಿದಂತೆ ಯಾವ ರೀತಿ ರಕ್ಷಿಸಿ, ರೈತ ಕುಟುಂಬಗಳನ್ನು ಕಾಪಾಡಬೇಕು ಎಂದು ನಾವು ಚರ್ಚೆ ಮಾಡಿದ್ದೇವೆ. ನವಿಲಿ ಸಮನಾಂತರ ಜಲಾಶಯ, ಹೂಳೆತ್ತುವ ವಿಚಾರ ಸೇರಿದಂತೆ ಎಲ್ಲಾ ಅವಕಾಶಗಳ ಬಗ್ಗೆ ಸುದೀರ್ಘ ಚರ್ಚೆ ಮಾಡಿ ನಾವೆಲ್ಲರೂ ಒಮ್ಮತದ ಅಭಿಪ್ರಾಯಕ್ಕೆ ಬಂದಿದ್ದೇವೆ. ಈ ತೀರ್ಮಾನವನ್ನು ಕೇಂದ್ರ ಸಚಿವರೇ ಪ್ರಕಟಿಸಲಿದ್ದಾರೆ. ಇಂದು ನಾವು ಒಂದು ತಾಸುಗಳ ಕಾಲ ಮಾಡಿರುವ ಚರ್ಚೆ ದೇಶದ ನೀರಾವರಿ ಹಾಗೂ ಒಕ್ಕೂಟ ವ್ಯವಸ್ಥೆಯಲ್ಲಿ ಇತಿಹಾಸದ ಪುಟಕ್ಕೆ ಸೇರಲಿದೆ. ನಮ್ಮ ನೀರು, ನಮ್ಮ ಹಕ್ಕು ಆಶಯದ ಅಡಿ ಮೂರು ರಾಜ್ಯಗಳ ರೈತರ ರಕ್ಷಣೆಗೆ ನಾವು ಐತಿಹಾಸಿಕ ತೀರ್ಮಾನ ಕೈಗೊಂಡಿದ್ದೇವೆ.

ಅಣೆಕಟ್ಟು ಇತಿಹಾಸ ಸ್ಮರಣೆ

ತುಂಗಭದ್ರಾ ನದಿಗೆ ಜಲಾಶಯ ನಿರ್ಮಿಸುವ ಆಲೋಚನೆಗೆ 1860 ರಲ್ಲೇ ಬ್ರಿಟಿಷ್ ಇಂಜಿನಿಯರ್ ಸರ್ ಆರ್ಥರ್ ಕಾಟನ್ ಅವರು ನಾಂದಿ ಹಾಡಿದ್ದರು. ತದನಂತರ 1949 ರಲ್ಲಿ ಇದರ ಕಾಮಗಾರಿ ಆರಂಭಗೊಂಡು ಪೂರ್ಣಗೊಳ್ಳುವ ಹೊತ್ತಿಗೆ ಅನೇಕ ಮಹನೀಯರು ಇದಕ್ಕೆ ಸಾಕ್ಷಿಯಾಗಿದ್ದಾರೆ. ದೇವರು ನಮಗೆ ಎರಡು ಆಯ್ಕೆ ಕೊಟ್ಟಿದ್ದಾನೆ. ಒಂದು ಕೊಟ್ಟು ಹೋಗುವುದು, ಮತ್ತೊಂದು ಬಿಟ್ಟು ಹೋಗುವುದು. ದೇವರು ವರ ಹಾಗೂ ಶಾಪ ನೀಡುವುದಿಲ್ಲ. ನಮಗೆ ಸಿಕ್ಕ ಅವಕಾಶದಲ್ಲಿ ನಿಮ್ಮ ಸೇವೆ ಮಾಡುತ್ತಿದ್ದೇವೆ.

ನಾನು ಸಿಎಂ ಆದ ಬಳಿಕ ಇದು ಎರಡನೇ ಸಾರ್ವಜನಿಕ ಕಾರ್ಯಕ್ರಮ. ರೈತನಿಗೆ ಸಂಬಳವಿಲ್ಲ, ಬಡ್ತಿ ಇಲ್ಲ, ಪಿಂಚಣಿ ಇಲ್ಲ, ರಜೆಯೂ ಇಲ್ಲ ಹಾಗೂ ನಿವೃತ್ತಿಯೂ ಇಲ್ಲ. ಇಂತಹ ಕಷ್ಟದ ಪರಿಸ್ಥಿತಿಯಲ್ಲೂ ದೇಶಕ್ಕೆ ಅನ್ನ ನೀಡುವ ರೈತನ ಬದುಕನ್ನು ಉಳಿಸಬೇಕು ಮತ್ತು ಈ ಭಾಗದ ಭತ್ತದ ಕಣಜವನ್ನು ಕಾಪಾಡಬೇಕು ಎಂಬ ದೃಢ ತೀರ್ಮಾನವನ್ನು ನಿಮ್ಮೆಲ್ಲರ ಆಶೀರ್ವಾದದೊಂದಿಗೆ ನಾವು ತೆಗೆದುಕೊಂಡಿದ್ದೇವೆ” ಎಂದರು.

ENGLISH SUMMARY….

Historic Consensus Decision by 3 States to Protect Farmers’ Interests in Tungabhadra river basin: CM D K Shivakumar

Inauguration of 33 Spillway Gates of the Tungabhadra Reservoir

Three States Unite to Protect Tungabhadra Dam

Koppal, June 25: Chief Minister D K Shivakumar today said that the three states of Karnataka, Andhra Pradesh and Telangana have together taken a historic consensus decision to protect the interest of farmers in Tungabhadra river basin.

Speaking after inaugurating 33 spillway gates of the Tungabhadra dam at an event organized at the Munirabad Government High School grounds in Koppal district, the CM said, “This is a historic event for South India. When the 19th gate broke off, the district in-charge minister Shivaraj Tangadagi and officials called me at midnight, expressing alarm that the dam was shaking. I visited the site at 8 am the next morning. We immediately consulted experts on what needed to be done, and the gate was replaced within a week. Through this, the farmers of this region were protected,” he said.

“When the gate broke off, the Opposition parties leveled criticism. It was possible to carry out such an important task only through the blessings of Goddess Sharada, Huligemma, Huchcharayaswamy, Ajjayya, the grace of Hampi’s Virupaksha, and the power of Raghavendra Swamy. Our government decided to replace the 33 gates, and God has given us the opportunity to protect the farmers of these three states. Back then I was the Irrigation Minister. Today I am the Chief Minister. Even so, I remain your servant and your kinsman,” he said.

Three States Unite to Protect the Tungabhadra Dam

“The Tungabhadra dam has been protected. There is a saying that one who forgets history cannot create history. Today, under the leadership of C.R. Patil, the chief ministers of three states have made history. Our goal is to create history rather than merely read and recall it. I keep saying that coming together is a beginning, discussing together is progress, and working together is success. Under the leadership of C.R. Patil, the chief ministers of three states came together and protected all three states,” he stated.

A Historic Decision After an Hour of Discussion

“We discussed how to safeguard and protect farming families, including the appeal submitted by farmer leaders regarding saving the 33 TMC of water in this dam. After lengthy discussion on all the options—including the Navali parallel reservoir and the matter of de-silting—we have all arrived at a consensus opinion. This decision will be announced by the Union Jal Shakthi Minister himself. The discussion we held today over the course of an hour will go down in history in the country’s irrigation and federal systems. Under the spirit of ‘Our Water, Our Right,’ we have taken a historic decision to protect the farmers of three states.”

Recalling the Dam’s History

“The idea of building a reservoir on the Tungabhadra river was first set in motion back in 1860 by the British engineer Sir Arthur Cotton. Later, work began in 1949, and by the time it was completed, many eminent figures had witnessed it. God does not grant boons or curses. We are serving you with the opportunity we have been given,” he said.

This is my second public event since becoming CM. A farmer has no salary, no promotion, no pension, no leave, and no retirement. Even in such difficult circumstances, we have taken a firm decision—with all your blessings—that the life of the farmer who provides food to the nation must be saved, and that this region’s rice bowl must be protected,” he said.

Key words: Historic decision, three states, protect, farmers,  CM D.K. Shivakumar

The post ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅರಣ್ಯ, ವನ್ಯಜೀವಿ ರಕ್ಷಣೆಗೆ ಯೋಜನೆ ರೂಪಿಸಿ: ಲಕ್ಷ್ಮಣ್‌ ಸಲಹೆ
ಮೈಸೂರು,ಜನವರಿ,7,2026 (www.justkannada.in): ಅರಣ್ಯ ಹಾಗೂ ಪರಿಸರ ನಾಶದಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುವಂತಹ ಸನ್ನಿವೇಶ ನಿರ್ಮಾಣವಾಗುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಯೋಜನೆ ರೂಪಿಸಿ ಜಾರಿಗೊಳಿಸಬೇಕಾಗಿದೆ ಎಂದು ಅರಣ್ಯ ಇಲಾಖೆ ನಿವೃತ್ತ ಕಾರ್ಯದರ್ಶಿ ಎ.ಸಿ.ಲಕ್ಷ್ಮಣ ಹೇಳಿದರು.

ನಿವೃತ್ತ ಅರಣ್ಯಾಧಿಕಾರಿಗಳ ಸಂಘದಿಂದ ನಗರದ ರೇಸ್‌ಕ್ಲಬ್‌ನಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ದಕ್ಷತೆಯಿಂದ ಕೆಲಸ ಮಾಡುತ್ತಿರುವ ಇಬ್ಬರು ಮಹಿಳಾ ಐಎಫ್‌ಎಸ್ ಅಧಿಕಾರಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.

ಅರಣ್ಯ ನಾಶದ ಪರಿಣಾಮವನ್ನು ನಾವು ವನ್ಯಜೀವಿ ಹಾಗೂ ಮಾನವ ಸಂಘರ್ಷದ ರೂಪದಲ್ಲಿ ನೋಡುತ್ತಿದ್ದೇವೆ. ಅರಣ್ಯ ಹರಿದು ಹಂಚಿ ಹೋಗಿ ಸಂಘರ್ಷ ಪರಾಕಾಷ್ಠತೆಯನ್ನು ತಲುಪಿ ಜನ ತೊಂದರೆ ಅನುಭವಿಸುವಂತಾಗಿದೆ. ಇದಕ್ಕೆಲ್ಲಾ ಪರಿಹಾರ ಕಂಡುಕೊಂಡರೆ ಮಾತ್ರ ಅರಣ್ಯ, ವನ್ಯಜೀವಿಗಳು ಉಳಿದು ನಾಡು ರಕ್ಷಣೆಯಾಗಲಿದೆ. ಜನ ನೆಮ್ಮದಿಯಿಂದ ಇರಬೇಕೆಂದರೆ ಅರಣ್ಯ ಸಂರಕ್ಷಣೆ ಅತೀ ಮುಖ್ಯ. ವಿಜ್ಞಾನಿಗಳು, ಅರಣ್ಯ ಸಂರಕ್ಷಕರು, ಆಡಳಿಗಾರರು ಇದಕ್ಕಾಗಿ ಸಹಭಾಗಿತ್ವ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ನುಡಿದರು.

ಅರಣ್ಯ ಇಲಾಖೆಯಲ್ಲಿ ಹಲವು ಅಧಿಕಾರಿಗಳು ದಕ್ಷತೆಯಿಂದ ಕೆಲಸ ಮಾಡಿದ್ದಾರೆ. ಸಿಬ್ಬಂದಿಗಳೂ ಕೈಜೋಡಿಸಿ ಕೆಲಸ ಮಾಡಿದ್ದರಿಂದಲೇ ದೇಶದಲ್ಲಿ ಕರ್ನಾಟಕದ ಅರಣ್ಯಕ್ಕೆ ತನ್ನದೇ ಆದ ಮಹತ್ವವಿದೆ. ಈಗಿನ ತಲೆಮಾರಿನ ಹಲವು ಅಧಿಕಾರಿಗಳು ಅದೇ ರೀತಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಎಂತಹ ಒತ್ತಡ ಬಂದರೂ ಸಂಯಮ, ಸಮಚಿತ್ತತೆ, ಸ್ನೇಹಮಯವಾಗಿ ಕೆಲಸ ಮಾಡುವುದು. ಮುಂದಾಳತ್ವ ವಹಿಸುವುದು ಅತಿಮುಖ್ಯ. ಇದಕ್ಕೆ ಈ ಇಬ್ಬರನ್ನು ಆತ್ಮೀಯವಾಗಿ ಸನ್ಮಾನಿಸಲಾಗಿದೆ ಎಂದರು.

ಅರಣ್ಯ ಇಲಾಖೆಯಲ್ಲಿ ಹಲವು ವರ್ಷ ಕೆಲಸ ಮಾಡಿದ ಚಂಗಪ್ಪ ಅವರು ಈಗಲೂ ಸೇವಾಪರತೆಯನ್ನು ಮುಂದುವರೆಸಿದ್ದಾರೆ. ಮೈಸೂರು ರೇಸ್‌ಕ್ಲಬ್‌ನ ಸ್ಟೀವರ್ಡ್‌ ಆಗಿ ಆಯ್ಕೆಯಾಗಿರುವುದು ಸಂತಸದ ವಿಚಾರ ಎಂದು ಲಕ್ಷ್ಮಣ್‌ ಹೇಳಿದರು.

ಸದ್ಯ ಹಿಂದೆ ವಿಜಯಪುರ, ಬೆಂಗಳೂರು ನಂತರ ಈಗ ಕೋಲಾರದಲ್ಲಿ  ಡಿಸಿಎಫ್‌ ಆಗಿ ಅರಣ್ಯ ಒತ್ತುವರಿ ತೆರವು ಮಾಡಲು ಶ್ರಮ ಹಾಕುತ್ತಿರುವ ಸರೀನಾ ಸಿಕ್ಕಲಿಗಾರ,  ಕೊಡಗು, ಮಂಡ್ಯ, ಹುಣಸೂರು ನಂತರ ಈಗ ನಾಗರಹೊಳೆ ಹುಲಿ ಯೋಜನೆ ನಿರ್ದೇಶಕರಾಗಿ ಸಂರಕ್ಷಣೆ ಜತೆಗೆ ಗಿರಿಜನರ ಹಿತ ರಕ್ಷಣೆಗೆ ಒತ್ತು ನೀಡುತ್ತಿರುವ ಪಿ.ಎ.ಸೀಮಾ ಅವರನ್ನು ಸನ್ಮಾನಿಸಲಾಯಿತು.

ನಿವೃತ್ತ ಅರಣ್ಯಾಧಿಕಾರಿಗಳಾದ ಎಂ.ಕೆ.ಅಪ್ಪಯ್ಯ, ಟಿ..ಬಾಲಚಂದ್ರ, ಯಾಲಕ್ಕಿ, ಎಚ್.ಸಿ.ಕಾಂತರಾಜು, ಶ್ರೀಧರ್‌, ರಾಮಲಿಂಗೇಗೌಡ, ನಾಗರಾಜ ಆಚಾರ್‌ ಮತ್ತಿತರರು ಹಾಜರಿದ್ದರು.

Key words: Formulate, plan , protect, forests, Laxman

The post ಅರಣ್ಯ, ವನ್ಯಜೀವಿ ರಕ್ಷಣೆಗೆ ಯೋಜನೆ ರೂಪಿಸಿ: ಲಕ್ಷ್ಮಣ್‌ ಸಲಹೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

MDA ಆಸ್ತಿ ರಕ್ಷಣೆಗೆ ಪ್ರತ್ಯೇಕ ಪೊಲೀಸ್ ಭದ್ರತಾ ಪಡೆ..
ಮೈಸೂರು,ನವೆಂಬರ್,17,2025 (www.justkannada.in): ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಆಸ್ತಿ ರಕ್ಷಣೆಗೆ ಪ್ರತ್ಯೇಕ ಪೊಲೀಸ್ ಭದ್ರತಾ ಪಡೆ ರಚನೆಯಾಗಲಿದೆ.

ನಕಲಿ ದಾಖಲೆಗಳನ್ನು ಸೃಷ್ಟಿಸಿ ಎಂಡಿಎ ಆಸ್ತಿ ಒತ್ತುವರಿ ಮಾಡಿರುವ ಹಾಗೂ ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡಗಳ ತೆರವಿಗೆ ಭದ್ರತೆ ಒದಗಿಸುವುದರ ಜತೆಗೆ ಪ್ರಾಧಿಕಾರದ ಆಸ್ತಿ ಸಂರಕ್ಷಣೆಯನ್ನು ಈ ಪಡೆ ಮಾಡಲಿದೆ.

ಪ್ರಾಧಿಕಾರದ ಆಸ್ತಿ ರಕ್ಷಣೆಗೆ ಪ್ರತ್ಯೇಕ ಭದ್ರತಾ ಪಡೆ ಮಾಡಬೇಕೆಂಬ ಯೋಜನೆ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು, ಈಗ ಪ್ರಾಧಿಕಾರದ ಆಯುಕ್ತರಾಗಿ ನೇಮಕಗೊಂಡಿರುವ ಕೆ.ಆರ್.ರಕ್ಷಿತ್ ಅವರು ಈ ಪಡೆ ರಚನೆಯ ಯೋಜನೆಗೆ ಮರು ಜೀವ ನೀಡಿದ್ದಾರೆ.

ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಆಸ್ತಿಗೆ ಅತಿಕ್ರಮ ಪ್ರವೇಶ ಹಾಗೂ ಒತ್ತುವರಿ ಮಾಡಿಕೊಂಡು ಅನುಭೋಗದಲ್ಲಿರುವವರನ್ನು ತೆರವುಗೊಳಿಸಲು ಪೊಲೀಸ್ ಭದ್ರತೆ ಅಗತ್ಯವಿರುತ್ತದೆ. ಆದರೆ, ಸ್ಥಳೀಯ ಪೊಲೀಸರನ್ನು ಭದ್ರತೆಗೆ ಕೋರಿದಾಗ ತಮಗೆ ಬೇರೆ ಭದ್ರತಾ ಕರ್ತವ್ಯದ ಒತ್ತಡವಿದೆ ಎನ್ನುತ್ತಾರೆ. ಪ್ರಾಧಿಕಾರದ ಅಧಿಕಾರಿಗಳು ಕೋರಿದ ದಿನದಂದು ಭದ್ರತೆ ಒದಗಿಸಲು ಹಿಂದೇಟು ಹಾಕುತ್ತಾರೆ. ಅದರಿಂದಾಗಿ ಸರಿಯಾದ ಸಮಯದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದ ಒತ್ತುವರಿ ತೆರವು ಕಾರ್ಯಾಚರಣೆಗೆ ತಡೆಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಎಂಡಿಎ ಆಯುಕ್ತ ಕೆ.ಆರ್.ರಕ್ಷಿತ್ ಅವರು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರೊಂದಿಗೆ ಚರ್ಚೆ ನಡೆಸಿ, ಒತ್ತುವರಿ ತೆರವು ಕಾರ್ಯಾಚರಣೆಯ ಭದ್ರತೆಗೆ ಪ್ರತ್ಯೇಕ ಪೊಲೀಸ್ ಭದ್ರತೆ ಪಡೆ ರಚಿಸುವ ಸಂಬಂಧ ಮನವಿ ಸಲ್ಲಿಸಿದ್ದಾರೆ.

ಒತ್ತುವರಿ ತೆರವು ಕಾರ್ಯಾಚರಣೆಗೆ ಭದ್ರತೆ ಒದಗಿಸಲೆಂದೇ ಪ್ರತ್ಯೇಕವಾದ ಪೊಲೀಸ್ ಭದ್ರತಾ ಪಡೆ ಹೊಂದುವುದು ಅತ್ಯಗತ್ಯವಾಗಿರುವುದರಿಂದ ಈ ಕುರಿತು ಸವಿಸ್ತಾರವಾದ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ,’’ ಎನ್ನುತ್ತಾರೆ ಎಂಡಿಎ ಆಯುಕ್ತ ಕೆ.ಆರ್.ರಕ್ಷಿತ್.

ಪೊಲೀಸ್ ಪಡೆ: ಈ ಪಡೆಯಲ್ಲಿ ಒಬ್ಬರು ಸಹಾಯಕ ಪೊಲೀಸ್ ಆಯುಕ್ತ, ಇಬ್ಬರು ಪೊಲೀಸ್ ಇನ್ಸ್‌ ಪೆಕ್ಟರ್‌ಗಳು, ಮೂವರು ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ನಾಲ್ವರು ಸಹಾಯಕ ಸಬ್ ಇನ್ಸ್‌ಪೆಕ್ಟರ್ ಒಳಗೊಂಡಂತೆ 25 ಮಂದಿ ಪೊಲೀಸ್ ಸಿಬ್ಬಂದಿ ಇರುತ್ತಾರೆ.

Key words: Separate, police security force, protect, MDA, property

The post MDA ಆಸ್ತಿ ರಕ್ಷಣೆಗೆ ಪ್ರತ್ಯೇಕ ಪೊಲೀಸ್ ಭದ್ರತಾ ಪಡೆ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರಕೃತಿ ಸಂರಕ್ಷಣೆ ನಮ್ಮ ಕರ್ತವ್ಯ: ದೀಪಾವಳಿಯಲ್ಲಿ ಹಸಿರು ಪಟಾಕಿ ಬಳಸಿ- ಸಚಿವ ಈಶ್ವರ್ ಖಂಡ್ರೆ ಕರೆ
ಬೆಂಗಳೂರು,ಅಕ್ಟೊಬರ್,2,2025 (www.justkannada.in): ವನ್ಯಜೀವಿಗಳೊಂದಿಗೆ ಸಹಬಾಳ್ವೆ, ಪ್ರಕೃತಿ ಸಂರಕ್ಷಣೆ ನಮ್ಮ ಕರ್ತವ್ಯ. ದೀಪಾವಳಿಯಲ್ಲಿ ಪಟಾಕಿ ತ್ಯಜಿಸಿ ಅಥವಾ ಹಸಿರು ಪಟಾಕಿ ಬಳಸಿ, ಮಕ್ಕಳ ಆರೋಗ್ಯ ಮತ್ತು ಉತ್ತಮ ಪರಿಸರಕ್ಕಾಗಿ ಕೊಡುಗೆ ನೀಡೋಣ ಎಂದು ಅರಣ್ಯ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ್ ಖಂಡ್ರೆ ಕರೆ ನೀಡಿದರು.

ಅರಣ್ಯ ಇಲಾಖೆ ವತಿಯಿಂದ ಇಂದು ವಿಧಾನಸೌಧ ಮುಂಭಾಗ 71ನೇ ವನ್ಯಜೀವಿ ಸಪ್ತಾಹಕ್ಕೆ ಚಾಲನೆ ನೀಡಿ ಸಚಿವ ಈಶ್ವರ್ ಖಂಡ್ರೆ ಮಾತನಾಡಿದರು.

ಮಲೆ ಮಹದೇಶ್ವರ, ಮಧುಗಿರಿ, ಬಂಡೀಪುರದಲ್ಲಿ ವನ್ಯಜೀವಿಗಳ ದುರ್ಘಟನೆಯು ನಮ್ಮನ್ನು ನೋವಿನಿಂದ ತುಂಬಿಸಿದೆ. ವನ್ಯಜೀವಿಗಳೊಂದಿಗೆ ಸಹಬಾಳ್ವೆ, ಪ್ರಕೃತಿ ಸಂರಕ್ಷಣೆ ನಮ್ಮ ಕರ್ತವ್ಯ; ಜನರಲ್ಲಿ ಜಾಗೃತಿ ಮೂಡಿಸುವುದು ಸಪ್ತಾಹದ ಉದ್ದೇಶ. ಗಾಂಧೀ ಜಯಂತಿಯ ದಿನ, ಪ್ರಕೃತಿ, ಪರಿಸರ ಉಳಿಸುವ ಮಹತ್ವವನ್ನು ನೆನಪಿಸಿಕೊಳ್ಳೋಣ ಎಂದು ನುಡಿದರು.

ಈ ವೇಳೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವನ್ಯಜೀವಿ ರಾಯಭಾರಿ ಅನಿಲ್ ಕುಂಬ್ಳೆ, ಅರಣ್ಯಪಡೆ ಮುಖ್ಯಸ್ಥರು ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Key words: protect, nature, green crackers, Dipavali, Minister, Ishwar Khandre

The post ಪ್ರಕೃತಿ ಸಂರಕ್ಷಣೆ ನಮ್ಮ ಕರ್ತವ್ಯ: ದೀಪಾವಳಿಯಲ್ಲಿ ಹಸಿರು ಪಟಾಕಿ ಬಳಸಿ- ಸಚಿವ ಈಶ್ವರ್ ಖಂಡ್ರೆ ಕರೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಾರಣಾಂತಿಕ ಹಲ್ಲೆ ಪ್ರಕರಣ: ಪೇದೆ ಮನ್ಸೂರ್ ಸಂಬಂಧಿ ಕಳವಳ: ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹ
ಮೈಸೂರು,ಆಗಸ್ಟ್,5,2025 (www.justkannada.in): ರಾಮನಗರ ಡಿಸಿ ಗನ್ ಮ್ಯಾನ್ ಪೊಲೀಸ್ ಪೇದೆ ಮನ್ಸೂರ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ರಕ್ಷಣೆ ನೀಡಬೇಕಾದವರಿಗೆ ರಕ್ಷಣೆ ಇಲ್ಲದಿರುವುದು ದೊಡ್ಡ ದುರಂತ. ಪೊಲೀಸರು ನಮ್ಮ ರಕ್ಷಣೆ ಮುಂದಾಗಬೇಕು ಎಂದು ಸೈಯದ್ ಮನ್ಸೂರ್ ಸಂಬಂಧಿ ಪಾಷಾ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಇಂತಹ ಕಿಡಿಗೇಡಿಗಳಿಂದ ಮುಸ್ಲಿಂ ಸಮುದಾಯಕ್ಕೆ ಕೆಟ್ಟ ಹೆಸರು. ಪೊಲೀಸರು ನಮ್ಮ ರಕ್ಷಣೆ ಮುಂದಾಗಬೇಕು. ಸೈಯದ್ ಮನ್ಸೂರ್ ತುಂಬ ಒಳ್ಳೆಹುಡುಗ . ಆ ಕಾರಣಕ್ಕೆ ರಾಮನಗರದ ಡಿಸಿ ಅವರನ್ನು ಗನ್ ಮ್ಯಾನ್ ಆಗಿ ಇಟ್ಟುಕೊಂಡಿದ್ದಾರೆ. ಅನಾರೋಗ್ಯ ಕಾರಣಕ್ಕೆ ರಜೆ ಹಾಕಿ ಊರಿಗೆ ಹೋಗಿದ್ದ. ಸ್ನೇಹಿತರ ಜೊತೆ ಬೈಕ್ ರೇಸ್ ವೀಕ್ಷಣಗೆ ಹೋದ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿದ್ದಾರೆ. ಒಂದೇ ಕುಟುಂಬದವರಾಗಬೇಕಿದ್ದ ಪೊಲೀಸರು ನಮ್ಮ ಹುಡುಗನನ್ನು ಟಾರ್ಗೆಟ್ ಮಾಡಿದ್ದಾರೆ.

ಇದರ ಹಿಂದೆ ಯಾರ ಒತ್ತಡ ಇದೆಯೋ ನಮಗೆ ಗೊತ್ತಿಲ್ಲ ಯಾರೇ ಪ್ರಭಾವಿಗಳಿದ್ದರೂ  ನಮಗೆ ಇಲಾಖೆ ರಕ್ಷಣೆ ಕೊಡಬೇಕು. ತಪ್ಪಿಸ್ಥ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು. ಪೊಲೀಸರು ಆರೋಪಿಗಳನ್ನು ಶೀಘ್ರ ಬಂಧಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೈಯದ್ ಮನ್ಸೂರ್ ಪಾಷಾ ಸಂಬಂಧಿ ಪಾಷಾ  ಒತ್ತಾಯಿಸಿದ್ದಾರೆ.

Key words: deadly ,assault,  police, protect, Mysore

The post ಮಾರಣಾಂತಿಕ ಹಲ್ಲೆ ಪ್ರಕರಣ: ಪೇದೆ ಮನ್ಸೂರ್ ಸಂಬಂಧಿ ಕಳವಳ: ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬೀದಿಬದಿ ಆಹಾರ ಸೇವನೆ ಬಿಡಿ: ಸೊಳ್ಳೆಗಳಿಂದ ಆರೋಗ್ಯ ಕಾಪಾಡಿಕೊಳ್ಳಿ- ಪಾಲಿಕೆ ಆರೋಗ್ಯಧಿಕಾರಿ ಸಲಹೆ
ಮೈಸೂರು,ಮೇ,31,2025 (www.justkannada.in): ಮಳೆಗಾಲದಲ್ಲಿ ಸೊಳ್ಳೆಗಳಿಂದ ಆರೋಗ್ಯ ಕಾಪಾಡಿಕೊಳ್ಳಿ. ಆರೋಗ್ಯದ ದೃಷ್ಟಿಯಿಂದ ಬೀದಿಬದಿ ಆಹಾರ ಸೇವಿಸಬೇಡಿ ಎಂದು ಮೈಸೂರು ಮಹಾನಗರ ಪಾಲಿಕೆ ಆರೋಗ್ಯಧಿಕಾರಿ ಡಾ. ವೆಂಕಟೇಶ್ ಸಲಹೆ ನೀಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರೋಗ್ಯಧಿಕಾರಿ ಡಾ. ವೆಂಕಟೇಶ್, ಈ ಬಾರಿ ಮೈಸೂರಿಗೆ ಉತ್ತಮ ಮಳೆಯಾಗಿದೆ. ಮಳೆಯ ನೀರಿನಿಂದ ಸೊಳ್ಳೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಜೂನ್ ತಿಂಗಳಲ್ಲಿ ಮಾರಣಾಂತಿಕ ಕಾಯಿಲೆ ಬರುವ ಸಾಧ್ಯತೆಗಳಿವೆ. ನಿಂತ ನೀರಿನಿಂದ ಸೊಳ್ಳೆಗಳ ಸಂತಾನ ಹೆಚ್ಚಾಗಲಿವೆ. ಆದ್ದರಿಂದ ನಾಗರೀಕರು  ಸೊಳ್ಳೆ ಬಾರದ ಹಾಗೆ ಎಚ್ಚರವಹಿಸಿ , ಸ್ವಚ್ಛತೆ ಕಾಪಾಡಿಕೊಳ್ಳಬೇಕು.  ಸದ್ಯ ಕೋವಿಡ್ ಬಗ್ಗೆ ಭಯ ಪಡೋದು ಬೇಡ. ನಾಗರೀಕರು ಎಲ್ಲೆಂದರಲ್ಲಿ ಕಸ ಬೀದಿಗೆ ಹಾಕಬಾರದು. ರಾತ್ರಿ ವೇಳೆ ಬೀದಿಬದಿ ವ್ಯಾಪಾರಸ್ಥರು ಹೆಚ್ಚಾಗಿ ಕಸ ಹಾಕುತ್ತಿದ್ದಾರೆ. ಬಿಸಾಕಿದ ಕಸ ಮಳೆ ನೀರಿಗೆ ಸಿಲುಕಿ ಚರಂಡಿಗೆ ಸೇರಿಕೊಳ್ಳುತ್ತದೆ. ಇದರಿಂದ ಮಳೆಗಾಲದಲ್ಲಿ ನೀರು ಸರಾಗವಾಗಿ ತೆರಳಲು ಸಾಧ್ಯವಾಗೋದಿಲ್ಲ. ನಮ್ಮೊಂದಿಗೆ ನಗರದ ಜನರು ಸಹಕರಿಸಿ ಎಂದು ಮನವಿ ಮಾಡಿದರು.

ಕಸದ ಸಮಸ್ಯೆ ಇದ್ದರೆ ಪಾಲಿಕೆಗೆ ಒಂದೇ ಒಂದು ಕಾಲ್ ಮಾಡಿ. ಆರೋಗ್ಯದ ದೃಷ್ಟಿಯಿಂದ ಬೀದಿಬದಿ ಆಹಾರ ಸೇವಿಸಬೇಡಿ. ಕಸದ ಸಮಸ್ಯೆ ಎದುರಿಸಲು ನಮ್ಮ ತಂಡ ಸಜ್ಜಾಗಿದೆ. ಕಸ ಕಂಡಲ್ಲಿ ಒಂದೇ ಒಂದು ಫೋಟೋ ಅಥವಾ ಕಾಲ್ ಮಾಡಿ ಮಾಹಿತಿ ನೀಡಿ. ಕೇವಲ ಒಂದೇ ಗಂಟೆಯಲ್ಲೇ ಸಮಸ್ಯೆ ಸರಿಪಡಿಸುತ್ತೇವೆ. ಎಲ್ಲೆಂದರಲ್ಲಿ ಕಸ ಬಿಸಾಕುವವರಿಗೆ ದಂಡ ಹಾಕುತ್ತಿದ್ದೇವೆ. ಕೆಲವು ಗಂಭೀರ ಪ್ರಕರಣವಿದ್ದರೆ ಎಫ್ ಐಆರ್  ಅನ್ನು ದಾಖಲಿಸುತ್ತೇವೆ ಎಂದು ಪಾಲಿಕೆ ಅರೋಗ್ಯಧಿಕಾರಿ ಡಾ ವೆಂಕಟೇಶ್ ಹೇಳಿದರು.

Key words: Protect, health, from, mosquitoes, MCC, health officer

The post ಬೀದಿಬದಿ ಆಹಾರ ಸೇವನೆ ಬಿಡಿ: ಸೊಳ್ಳೆಗಳಿಂದ ಆರೋಗ್ಯ ಕಾಪಾಡಿಕೊಳ್ಳಿ- ಪಾಲಿಕೆ ಆರೋಗ್ಯಧಿಕಾರಿ ಸಲಹೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಡಿಕೆಶಿ ಅವರ ಭೇಟಿ ಪ್ರವಾಹ ವೀಕ್ಷಣೆಗೋ ಅಥವಾ ರಾಜಕಾಲುವೆ ರಕ್ಕಸರ ರಕ್ಷಣೆಗೋ..? ಹೆಚ್.ಡಿಕೆ ಪ್ರಶ್ನೆ
ನವದೆಹಲಿ,ಮೇ,30,2025 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿ ಭೇಟಿ ನೀಡಿದ್ದು ನೆರೆ ಮತ್ತು ಮಳೆ ಅನಾಹುತ ವೀಕ್ಷಿಸಲಿಕ್ಕಾ ಅಥವಾ ರಾಜಕಾಲುವೆ ಒತ್ತುವರಿದಾರನ್ನು ರಕ್ಷಣೆ ಮಾಡಲಿಕ್ಕಾ? ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ  ಕೇಂದ್ರ ಸಚಿವ  ಹೆಚ್.ಡಿ ಕುಮಾರಸ್ವಾಮಿ, ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿಗೆ ಭೇಟಿ ಕೊಟ್ಟು ಮಳೆ, ನೆರೆ ಪರಿಸ್ಥಿತಿ ವೀಕ್ಷಣೆ ಮಾಡಿರುವುದೇನೋ ಸರಿ. ಆದರೆ, ಅವರ ಭೇಟಿ ಪ್ರವಾಹ ವೀಕ್ಷಣೆಗೋ ಅಥವಾ ರಾಜಕಾಲುವೆ ರಕ್ಕಸರ ರಕ್ಷಣೆಗೋ..? ಈ ಬಗ್ಗೆ ಬೆಂಗಳೂರು ಮಹಾಜನತೆಗೆ ಬೆಂಗಳೂರು ಉಸ್ತುವಾರಿ ಸಚಿವರು ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಡಿಸಿಎಂ ಅವರು ಪಾದಸ್ಪರ್ಶ ಮಾಡಿದ್ದ ರಾಜಕಾಲುವೆ ಪುನೀತವಾಗಿರಬೇಕು!! ಪಾಪ.. ಅದೇ ರಾಜಕಾಲುವೆ ಮೇಲೆ ಬೃಹದಾಕಾರವಾಗಿ ಎದ್ದು ನಿಂತಿರುವ ‘ಭಾರೀ ಆಸಾಮಿ’ಯೊಬ್ಬರ ಕಟ್ಟಡ ಅವರ ಕಣ್ಣಿಗೆ ಕಾಣಲಿಲ್ಲವೆ? ರಾಜಾರೋಷವಾಗಿ ರಾಜಕಾಲುವೆಯನ್ನು ಮುಕ್ಕಿ ತಿಂದಿರುವ ಆಸಾಮಿಯ ಬಗ್ಗೆ ಅವರು ಚಕಾರವನ್ನೇ ಎತ್ತಲಿಲ್ಲ!! ಕೊನೆಪಕ್ಷ ಅವರ ಹೆಸರನ್ನೂ ಹೇಳಲಿಲ್ಲ!! ಎಂದು ಕುಮಾರಸ್ವಾಮಿ ಅವರು ಡಿಕೆಶಿ ಕಾಲೆಳೆದಿದ್ದಾರೆ.

ರಾಜಕಾಲುವೆಗಳ ಮೇಲೆ ಐಷಾರಾಮಿ ಸೌಧಗಳನ್ನು ಕಟ್ಟಿಕೊಂಡು ಕೋಟಿ ಕೋಟಿ ದುಡಿಯುತ್ತಿರುವ ರಾಜಕಾಲುವೆ ರಕ್ಕಸರ ವಿರುದ್ಧ ಕ್ರಮ ಜರುಗಿಸುವ ದಮ್ಮು ತಾಕತ್ತು ನಿಮಗೆ  ಇದೆಯಾ ಡಿ.ಕೆ. ಶಿವಕುಮಾರ್ ರವರೇ? ಹೋಗಲಿ, ಅಂಥವರ ವಿರುದ್ಧ ಕ್ರಮ ಜರುಗಿಸಲು ನಿಮ್ಮ ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ, ಅಧಿಕಾರ ನೀಡಿದ್ದೀರಾ? ಒಂದು ವೇಳೆ ನೀಡಿದ್ದರೆ ಆ ಅಕ್ರಮ ಕಟ್ಟಡಗಳು ಇನ್ನೂ ಯಾಕೆ ಹಾಗೆಯೇ ಇವೆ? ಎಂಬುದನ್ನು ನೀವು ಹೇಳಬೇಕಲ್ಲವೇ? ಎಂದು ಕೇಂದ್ರ ಸಚಿವ ಹೆಚ್.ಡಿಕೆ ಕೇಳಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ನೀವು ಕುರ್ಚಿ ಮೇಲೆ ಕೂತು ಎರಡು ವರ್ಷವೇ ಆಯಿತು. ಅದೆಷ್ಟೋ ಬಾರಿ ಸಾಯಿ ಬಡಾವಣೆ ಮುಳುಗಿದ್ದೂ ಆಯಿತು, ತೇಲಿದ್ದೂ ಆಯಿತು! ನಿಮ್ಮಿಂದ ಆಗಲಿ ಅಥವಾ ಕಾಂಗ್ರೆಸ್ ಸರಕಾರದಿಂದ ಆಗಲಿ ಯಾವುದೇ ಪರಿಹಾರ ಸಿಗಲಿಲ್ಲ! ಬಡಾವಣೆಯ ಜನರು ನರಳುತ್ತಿರುವುದು ಮಾತ್ರ ತಪ್ಪಿಲ್ಲ.ಈ ಅಸಡ್ಡೆ ಯಾಕೆ? ಇವರೆಲ್ಲ ತೆರಿಗೆ ಕಟ್ಟುತ್ತಿಲ್ಲವೇ? ಎಂದು ಕೇಂದ್ರ ಸಚಿವ ಹೆಚ್ ಡಿಕೆ ಪ್ರಶ್ನೆ ಮಾಡಿದ್ದಾರೆ.

Key words:  DCM, DK Shivakumar, flood, protect, Rajakaluve, HDK

The post ಡಿಕೆಶಿ ಅವರ ಭೇಟಿ ಪ್ರವಾಹ ವೀಕ್ಷಣೆಗೋ ಅಥವಾ ರಾಜಕಾಲುವೆ ರಕ್ಕಸರ ರಕ್ಷಣೆಗೋ..? ಹೆಚ್.ಡಿಕೆ  ಪ್ರಶ್ನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೋಟ್ಯಾಂತರ ರೂ. ಆಸ್ತಿ ರಕ್ಷಿಸಿಕೊಳ್ಳಲು MUDA ಮೀನಾಮೇಷ: ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಗಂಗರಾಜು ಆಗ್ರಹ
ಮೈಸೂರು,ಮೇ,21,2025 (www.justkannada.in): ಮುಡಾದ ಕೋಟ್ಯಾಂತರ ರೂ. ಆಸ್ತಿ  ರಕ್ಷಿಸಿಕೊಳ್ಳುವಲ್ಲಿ  ಅಧಿಕಾರಿಗಳು ವಿಫಲರಾಗಿದ್ದಾರೆ. ತಮ್ಮ ಆಸ್ತಿ ತಾವೇ ರಕ್ಷಣೆ ಮಾಡಿಕೊಳ್ಳಲು ಮೀನಾಮೇಷ ಎಣಿಸುತ್ತಿದ್ದಾರೆ. ಹೀಗಾಗಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಮುಡಾ‌ ಹೋರಾಟಗಾರ ಗಂಗರಾಜು ಆಗ್ರಹಿಸಿದ್ದಾರೆ.

ಅಬ್ದುಲ್ ವಾಹಿದ್ ಎಂಬುವವರ ವಿರುದ್ದ ಕೋಟ್ಯಾಂತರ ರೂ ಮೌಲ್ಯದ ಆಸ್ತಿ ಕಬಳಿಸಿದ್ದ ಆರೋಪ ಕೇಳಿ ಬಂದಿದೆ. ಮೈಸೂರು ತಾಲೂಕು ಕಸಬಾ ಹೋಬಳಿ ದೇವನೂರು ಬಡಾವಣೆಯ  ಸರ್ವೆ ನಂ.148,149,149/2,149/3 ಹಾಗು 150ರ ಜಮೀನು ಕಬಳಿಸಿದ್ದು  ಜಿಪಿಎ ಹೆಸರಿನಲ್ಲಿ 39 ಗುಂಟೆ ಭೂಮಿ ಅಕ್ರಮ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಮಧ್ಯೆ ಅಬ್ದುಲ್ ಗೆ ಮುಡಾ ಅಕ್ರಮವಾಗಿ 40 ಕ್ಕೂ ಹೆಚ್ಚು ಸೈಟ್ ನೀಡಿದ್ದು ಸರ್ಕಾರದಿಂದ ಆಸ್ತಿ ವಶಕ್ಕೆ ತೆಗೆದುಕೊಳ್ಳುವಂತೆ ಖಡಕ್ ಆದೇಶ ಬಂದಿದ್ದರೂ ಸಹ ಅಧಿಕಾರಿಗಳು ಆದೇಶವನ್ನ ಪದೇ ಪದೇ ಗಾಳಿಗೆ ತೂರುತ್ತಿದ್ದಾರೆ ಎನ್ನಲಾಗಿದೆ.

ಮುಡಾದ ಆಸ್ತಿ ರಕ್ಷಣೆಗೆ ಪದೇ- ಪದೇ ಸಮಯ ನಿಗದಿಪಡಿಸಿ ಮುಂದೂಡಿಕೆ ಮಾಡುತ್ತಿದ್ದು, ಉದಯಗಿರಿ ಠಾಣಾ ಪೊಲೀಸರು ಬಂದೋಬಸ್ತ್ ನೆಪ ಹೇಳಿ ನಾಲ್ಕು ಬಾರಿ ಮುಂದೂಡಿಕೆ ಮಾಡಿದ್ದಾರೆ. ಇಂದು ಬೆಳಗ್ಗೆ ತೆರವು ಮಾಡಲು ಬಂದೋಬಸ್ತ್ ಕಲ್ಪಿಸುವಂತೆ ಸೂಚನೆ ನೀಡಲಾಗಿತ್ತು. ನಿನ್ನೆವರೆಗೂ ಸಿದ್ಧತೆ ಮಾಡಿಕೊಂಡಿದ್ದ ಪೊಲೀಸರು ಬೆಳಗ್ಗೆ ಬಂದೋಬಸ್ತ್ ಕ್ಯಾನ್ಸಲ್‌ ಮಾಡಿದ್ದು, ಇದೀಗ ಮುಡಾದ ಅಧಿಕಾರಿಗಳು ಬಂದೋಬಸ್ತ್ ಇಲ್ಲದೆ ಆಸ್ತಿ ವಶಕ್ಕೆ ತೆಗೆದುಕೊಳ್ಳಲು‌ ಆಗಲ್ಲ ಎನ್ನುತ್ತಿದ್ದಾರೆ.

ಈ ಕುರಿತು ಮಾತನಾಡಿರುವ ಮುಡಾ‌ ಹೋರಾಟಗಾರ ಗಂಗರಾಜು, ಪೊಲೀಸರು- ಮುಡಾ ಅಧಿಕಾರಿಗಳು ಕಳ್ಳಾಟ ಆಡುತ್ತಿದ್ದಾರೆ. ಮುಡಾದ ಕೋಟ್ಯಾಂತರ ರೂ ಆಸ್ತಿ  ರಕ್ಷಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಪೊಲೀಸರು ಪದೇ ಪದೇ ನೆಪ ಹೇಳುತ್ತಿದ್ದಾರೆ. ಈ ಕೂಡಲೇ ಉದಯಗಿರಿ ಠಾಣಾ ಇನ್ಸ್ ಪೆಕ್ಟರ್ ಸುಧಾಕರ್ ಸಸ್ಪೆಂಡ್ ಆಗಬೇಕು. ಮುಡಾದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಆಗಬೇಕು ಎಂದು ಆಗ್ರಹಿಸಿದ್ದಾರೆ.

Key words: MUDA, protect, property, Gangaraju

The post ಕೋಟ್ಯಾಂತರ ರೂ. ಆಸ್ತಿ ರಕ್ಷಿಸಿಕೊಳ್ಳಲು MUDA ಮೀನಾಮೇಷ: ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಗಂಗರಾಜು ಆಗ್ರಹ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಭೂ ಕಬಳಿಕೆದಾರರಿಂದ ಶೀಬಿ ಅರಣ್ಯಭೂಮಿ ರಕ್ಷಣೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ
ತುಮಕೂರು, ಮೇ,3,2025 (www.justkannada.in): ಶೀಬಿ ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದು ಪಡಿಸಲು ಮತ್ತು ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಂಡು, ಅಮೂಲ್ಯವಾದ ಅರಣ್ಯ ಭೂಮಿಯನ್ನು  ಸಂರಕ್ಷಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ತುಮಕೂರು ಜಿಲ್ಲೆ ಕಳ್ಳಂಬೆಳ್ಳ ಹೋಬಳಿ ಶೀಬಿ ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಿದ ಸಚಿವ ಈಶ್ವರ್ ಖಂಡ್ರೆ,  ಬೆಂಗಳೂರು-ಪುಣೆ ಹೆದ್ದಾರಿಯ ಪಕ್ಕದಲ್ಲೇ ಇರುವ ಈ ಅರಣ್ಯಭೂಮಿಗೆ ಭಾರೀ ಮೌಲ್ಯವಿದ್ದು, ಕೆಲವರು ಇದನ್ನು ಕಬಳಿಸಲು ಮತ್ತು ಒತ್ತುವರಿ ಮಾಡಲು ಯತ್ನಿಸುತ್ತಿದ್ದಾರೆ ಹೀಗಾಗಿ ಅರಣ್ಯ ಸಿಬ್ಬಂದಿ ಕಟ್ಟೆಚ್ಚರದಿಂದ ಇರಬೇಕು ಎಂದರು.

ಕೆಲವರು ನ್ಯಾಯಾಲಯದಲ್ಲಿ ಭೂಮಿಯ ಮಾಲೀಕತ್ವದ ಹೋರಾಟ ನಡೆಸುತ್ತಿದ್ದಾರೆ.  ಸುಪ್ರೀಂಕೋರ್ಟ್ ಡಿನೋಟಿಫಿಕೇಷನ್ ಆಗದ ಹೊರತು, ಅರಣ್ಯ ಭೂಮಿ ಅರಣ್ಯವಾಗಿಯೇ ಉಳಿಯುತ್ತದೆ ಎಂದು ಹೇಳಿದ್ದು, ಡಿನೋಟಿಫಿಕೇಷನ್ ಆಗದ ಈ ಅರಣ್ಯದಲ್ಲಿನ ಅಕ್ರಮ ಮಂಜೂರಾತಿ ರದ್ದುಪಡಿಸುವಂತೆ ಎ.ಸಿ. ನ್ಯಾಯಾಲಯದಲ್ಲಿ ದಾವೆ ಹೂಡುವಂತೆ ಸೂಚಿಸಿದರು.

ಭೂ ಮಾಫಿಯಾದವರು ಬಡವರನ್ನು ಮುಂದಿಟ್ಟುಕೊಂಡು ಬೆಲೆಬಾಳುವ ಭೂಮಿ ಕಬಳಿಸಲು ಯತ್ನಿಸುತ್ತಾರೆ. ಅರಣ್ಯ ಭೂಮಿಯನ್ನು ಕಬಳಿಸಲು ಯತ್ನಿಸುವವರ ವಿರುದ್ಧ ಹಾಗೂ ಅದಕ್ಕೆ ಸಹಕಾರ ನೀಡುವ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಕ್ರಮ ಜರುಗಿಸಿ ಎಂದು ಸೂಚಿಸಿದರು.

ಪ್ರಕೃತಿ, ಪರಿಸರ, ಅರಣ್ಯ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ನಮ್ಮ ಸಂವಿಧಾನ ಸಾರುತ್ತದೆ, ಸರ್ವೋನ್ನತ ನ್ಯಾಯಾಲಯ ಕೂಡ ಹಲವು ಪ್ರಕರಣಗಳಲ್ಲಿ ಇದನ್ನೇ ಪುನರುಚ್ಚರಿಸಿದೆ. ಹೀಗಾಗಿ ಅರಣ್ಯ ಸಂರಕ್ಷಣೆಯ ಹೊಣೆ ಹೊತ್ತು ಅಧಿಕಾರಿಗಳು ಅರಣ್ಯ ಉಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಈಶ್ವರ್ ಖಂಡ್ರೆ ತಿಳಿಸಿದರು.

ಟಿ.ಬಿ. ಜಯಚಂದ್ರ ಅವರು ಕೂಡ ಈ ಅರಣ್ಯ ಸಂರಕ್ಷಿಸಲು ಬೇಲಿ ಹಾಕುವ ಪ್ರಸ್ತಾವನೆ ನೀಡಿದ್ದು, ಅರಣ್ಯ ಸಚಿವರಾಗಿ ಈ ಅರಣ್ಯವು ಭೂ ಮಾಫಿಯಾ ಪಾಲಾಗದಂತೆ ಉಳಿಸಲು ಎಲ್ಲ ಸಾಧ್ಯ ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆಯನ್ನು ಅರಣ್ಯ ಸಚಿವ ಈಶ್ವರ್ ಖಂಡ್ರೆ ನೀಡಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮಾ, ವಕೀಲರಾದ ಸೂರ್ಯ ಮುಕುಂದರಾಜ್ ಮತ್ತಿತರರು ಹಾಜರಿದ್ದರು.

Key words: Minister, Ishwar Khandre, protect, Sheebi, forest land, land grabbers

The post ಭೂ ಕಬಳಿಕೆದಾರರಿಂದ ಶೀಬಿ ಅರಣ್ಯಭೂಮಿ ರಕ್ಷಣೆಗೆ  ಸಚಿವ ಈಶ್ವರ್ ಖಂಡ್ರೆ ಸೂಚನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವಕ್ಫ್ ಆಸ್ತಿ ಕಾಪಾಡುತ್ತೇನೆ ಎಂದಿದ್ದ ಬೊಮ್ಮಾಯಿ ಈಗ ಉಲ್ಟಾ ಹೊಡೆದಿದ್ದೇಕೆ? ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಹುಬ್ಬಳ್ಳಿ, ನವೆಂಬರ್,4,2024 (www.justkannada.in): ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ  ಹೇಳಿದ್ದರು. ಈಗ ರಾಜಕೀಯ ಕಾರಣಕ್ಕಾಗಿ  ವಿರುದ್ಧವಾಗಿ ಮಾತನಾಡುತ್ತಾರೆ  ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಾಪಕವಾಗಿ ಟೀಕಿಸಿದರು.

ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಬಿಜೆಪಿ ರಾಜಕಾರಣಕ್ಕಾಗಿ ಈ ವಿಚಾರವನ್ನು ಇಟ್ಟುಕೊಂಡು ಹೋರಾಡುತ್ತಿದ್ದಾರೆ. ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಕಾಲದಲ್ಲೂ  ನೋಟಿಸ್ ಕೊಟ್ಟಿದ್ದಾರೆ.  ಎಲ್ಲಾ ಕಾಲದಲ್ಲಿಯೂ ನೋಟೀಸು ನೀಡಲಾಗಿದೆ ಎಂದು  ಜನರಿಗೆ ಅರ್ಥವಾಗಿದೆ. ನಾನು ಸಚಿವರಾದ   ಹೆಚ್.ಕೆ ಪಾಟೀಲ್, ಕೃಷ್ಣ ಬೈರೇಗೌಡ ಅವರೊಂದಿಗೆ ಸಭೆ ನಡೆಸಿ ಯಾವುದೇ ನೋಟೀಸ್ ನೀಡಿದ್ದಲ್ಲಿ ಅದನ್ನು ವಾಪಸ್ ಪಡೆಯಬೇಕು ಅಥವಾ ವಿಚಾರಣೆ ಇಲ್ಲದೆಯೇ ಯಾವುದಾದರೂ ಪಹಣಿ ದಾಖಲೆ ಬದಲಾವಣೆಯಾಗಿದ್ದರೆ ಅದನ್ನು ರದ್ದು ಮಾಡಬೇಕು ಹಾಗೂ ಯಾವುದೇ ಕಾರಣಕ್ಕೂ ರೈತರನ್ನು ಒಕ್ಕಲೆಬ್ಬಿಸಬಾರದು ಎಂದು ಸ್ಪಷ್ಟ ನಿರ್ದೇಶನ ನೀಡಿದ್ದಾಗಿದೆ. ಮುಸ್ಲಿಂ , ಹಿಂದೂ, ಕ್ರಿಶ್ಚಿಯನ್ ಆಗಿರಲಿ, ಒಕ್ಕಲೆಬ್ಬಿಸಬಾರದು ಎಂದು ಬಹಳ ಸ್ಪಷ್ಟವಾಗಿ ಹೇಳಿದ್ದೇನೆ ಎಂದರು.

ವಕ್ಫ್ ಆಸ್ತಿ  ವಿಚಾರ ನಮಗೆ ಗೊತ್ತಾದ ತಕ್ಷಣವೇ ನೋಟಿಸ್ ಹಿಂಪಡೆಯಲಾಗಿದೆ . ಬಿಜೆಪಿ ಅವಧಿಯಲ್ಲಿ 216 ಪ್ರಕರಣಗಳಲ್ಲಿ ನೋಟಿಸ್ ಕೊಟ್ಟಿದ್ದರು. ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಹೆಚ್.ಡಿ ಕುಮಾಸ್ವಾಮಿ ಇದ್ದಾಗ ಏಕೆ ನೋಟೀಸ್ ಕೊಟ್ಟಿದ್ದಾರೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಬಿಜೆಪಿಯ ಈ ಡಬ್ಬಲ್ ಗೇಮ್  ವಿಚಾರವನ್ನು ಜನರಿಗೆ ನಾವು ತಲುಪಿಸುತ್ತಿದ್ದೇವೆ ಎಂದು ತಿಳಿಸಿದರು.

ಕರ್ನಾಟಕಕ್ಕೆ  ಅನ್ಯಾಯವಾಗಿರುವ  ಬಗ್ಗೆ ಪ್ರಶ್ನಿಸಬೇಕು

ತೆರಿಗೆ ವಿಚಾರದಲ್ಲಿ ಕೇಂದ್ರದಿಂದ ಅನ್ಯಾಯವಾಗುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ 16 ನೇ ಹಣಕಾಸು ಆಯೋಗದವರು ಬೆಂಗಳೂರಿಗೆ ಭೇಟಿ ನೀಡಿದಾಗ 15 ನೇ ಹಣಕಾಸು ಆಯೋಗದಿಂದ  ಕರ್ನಾಟಕಕ್ಕೆ  ಅನ್ಯಾಯವಾಗಿರುವ  ಬಗ್ಗೆ ಗಮನ ಸೆಳೆದಿದ್ದೇವೆ. ಸುಮಾರು 4.50 ಲಕ್ಷ  ಕೋಟಿ ರೂ.ಗಳಿಗೂ ಹೆಚ್ಚು ಮೊತ್ತವನ್ನು ವರ್ಷಕ್ಕೆ ತೆರಿಗೆ  ನೀಡುತ್ತಿದ್ದೇವೆ. ಅದರಲ್ಲಿ ನಮಗೆ ವಾಪಸ್ಸು ಬರುವುದು 55 ರಿಂದ 60  ಸಾವಿರ ಕೋಟಿ ರೂಪಯಿಗಳಷ್ಟು ಮಾತ್ರ. ಇದು ನ್ಯಾಯವೇ? ಎಂದು ಪ್ರಶ್ನಿಸಿದರು. ಈ ಬಗ್ಗೆ ನಾವು ನ್ಯಾಯಕ್ಕಾಗಿ ಹೋರಾಡುತ್ತಿದ್ದೇವೆ. ಬಿಜೆಪಿಯ ಪ್ರಹ್ಲಾದ್ ಜೋಶಿ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರು ಈ ಬಗ್ಗೆ  ಮಾತನಾಡಿದ್ದಾರೆಯೇ?  ಎಂದು ಪ್ರಶ್ನಿಸಿದರು.

ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದರೆ ಅದು ರಾಜಕೀಯ  ಎಂದರು ಇದಕ್ಕೆ ಏನು ಹೇಳಬೇಕು? ನ್ಯಾಯಾಲಯಕ್ಕೆ ಹೋದರೆ ನ್ಯಾಯ ಸಿಗುತ್ತದೆ ಎಂದು ಭಾವಿಸಿಲ್ಲ,  ಏಕೆಂದರೆ 5 ವರ್ಷಕ್ಕೊಮ್ಮೆ ಸಂವಿಧಾನದ ಪ್ರಕಾರ ಹಣಕಾಸಿನ  ಆಯೋಗ ರಚನೆಯಾಗುತ್ತದೆ. ಅವರ ಶಿಫಾರಸ್ಸಿನ ಮೇಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಹೋಗಬೇಕಾದ ತೆರಿಗೆ ಬಗ್ಗೆ  ನಿರ್ಧಾರವಾಗುತ್ತದೆ. 15 ನೇ ಹಣಕಾಸು ಆಯೋಗ ಕೆಲವು ಶಿಫಾರಸ್ಸು ಮಾಡಿದ್ದಾರೆ. 5495 ಕೋಟಿ ರೂಪಾಯಿಗಳನ್ನು ವಿಶೇಷ ಅನುದಾನ ನೀಡಬೇಕೆಂದು ಹೇಳಿದರು. ಪೇರಿಫೆರಲ್ ರಿಂಗ್ ರೋಡ್  ಹಾಗೂ ಕೆರೆಗಳ ಅಭಿವೃದ್ಧಿಗೆ ತಲಾ 3000 ಕೋಟಿ ರೂಪಾಯಿ ನೀಡಲು ಶಿಫಾರಸು  ಮಾಡಿದ್ದರು. ಒಟ್ಟು 11495 ಕೋಟಿಗಳನ್ನು ಕೊಟ್ಟರೆ. ಇದನ್ನು ನಾವು ಕೇಳಬೇಕು. ಪ್ರಹ್ಲಾದ ಜೋಶಿಯವರು ಇದನ್ನು ಕೇಂದ್ರದಿಂದ ಕೇಳಬೇಕಲ್ಲವೇ ಎಂದು ಪ್ರಶ್ನಿಸಿದರು.

ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ  ಬರಬಾರದೆಂಬ ತತ್ವದಲ್ಲಿ ಬಿಜೆಪಿಗೆ ನಂಬಿಕೆ ಇದೆ

ಬಿಜೆಪಿಯವರು ಗ್ಯಾರಂಟಿಗೆ ವಿರುದ್ದವಾಗಿದ್ದಾರೆ. ಗ್ಯಾರಂಟಿ ಯೋಜನೆಗಳ ಮೂಲಕ ಎಲ್ಲಾ ಜಾತಿ ಧರ್ಮದವರಿಗೆ ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ತುಂಬುತ್ತಿದ್ದೇವೆ. ಅವರು ಮುಖ್ಯವಾಹಿನಿಗೆ ಬರಬೇಕೆಂದು ಈ ಕಾರ್ಯ ಮಾಡುತ್ತಿದ್ದೇವೆ. ಬಿಜೆಪಿಯವರಿಗೆ ಸಮಾನತೆ ಬರಬಾರದು. ಬಡವರು ಇರಬೇಕು. ಅದಕ್ಕೆ ಅವರನ್ನು ಬಡತನ ವಿರೋಧಿಗಳು ಎಂದು ಕರೆಯುವುದು. ಶಕ್ತಿ ಇಲ್ಲದಿದ್ದರೆ ತಾನೇ ದುರುಪಯೋಗ ಮಾಡಿಕೊಳ್ಳಲು ಸಾಧ್ಯವಾಗುವುದು. ಆರ್ಥಿಕ, ಸಾಮಾಜಿಕ ಶಕ್ತಿ ಬಡವರಿಗೆ ಬರಬಾರದೆಂಬ ತತ್ವದಲ್ಲಿ ಬಿಜೆಪಿಗೆ ನಂಬಿಕೆ ಇದೆ. ಬಿಜೆಪಿ ಪಕ್ಷ 600 ಭರವಸೆ ಗಳನ್ನು 2018 ರಲ್ಲಿ ನೀಡಿತ್ತು. ಅವುಗಳಲ್ಲಿ ಎಷ್ಟು ಈಡೇರಿಸಿದ್ದಾರೆ. ನಾವು 165 ಭರವಸೆ ಕೊಟ್ಟು 158 ಈಡೇರಿಸಿದ್ದಾಗಿ ಲೆಕ್ಕ ಕೊಡುತ್ತಿದ್ದೇವೆ.  ಅವರು ಎಷ್ಟು ಭರವಸೆ ನೀಡಿ ಎಷ್ಟನ್ನು ಈಡೇರಿಸಿದ್ದಾರೆ ಎನ್ನುವ‌ ಲೆಕ್ಕ ಕೊಡುತ್ತಾರೆಯೇ ? ಎಂದು ಸವಾಲು ಹಾಕಿದರು.

ವಕ್ಫ್ ವಿಚಾರದಲ್ಲಿ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ  ಎಂದು ಹೇಳಿದ ಮೇಲೂ ಬಿಜೆಪಿ ಹೋರಾಟ ಮಾಡುತ್ತಿದೆ ಎಂದರೆ ರಾಜಕೀಯ ಅಲ್ಲವೇ ಎಂದರು.

ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಯಲ್ಲವೇ?

ಅಭಿವೃದ್ಧಿ ಬಗ್ಗೆ ಚರ್ಚೆ ಯಾರೊಬ್ಬರೂ ಮಾಡುತ್ತಿಲ್ಲ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಯಲ್ಲವೇ? ಹಿಂದೆ  ಸಿಎಂ ಆಗಿದ್ದಾಗ 165 ಭರವಸೆ ಕೊಟ್ಟು 158 ಭರವಸೆಗಳನ್ನು ಈಡೇರಿಸಿದೆವು.ಅವು ಅಭಿವೃದ್ಧಿಯಲ್ಲವೆ ಎಂದು ಪ್ರಶ್ನಿಸಿದರು.

3 ಲಕ್ಷದ 71 ಸಾವಿರ ಕೋಟಿ ರೂಪಾಯಿಗಳಲ್ಲಿ 52 ಸಾವಿರ ಕೋಟಿ ಗ್ಯಾರಂಟಿಗಳಿಗೆ ವೆಚ್ಚ ಮಾಡುತ್ತಿದ್ದೇವೆ. ಸುಮಾರು 60 ಸಾವಿರ ಕೋಟಿ ಅಭಿವೃದ್ಧಿಗೆ ವೆಚ್ಚ ಮಾಡುತ್ತಿದ್ದೇವೆ. ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ರಸ್ತೆ, ಸೇತುವೆ, ನಿರ್ಮಾಣಕ್ಕಾಗಿ ವೆಚ್ಚವಾಗುತ್ತಿದೆ  ಇವೆಲ್ಲ ಅಭಿವೃದ್ದಿಯಲ್ಲವೇ ಎಂದರು.

Key words: Basavaraj Bommai, protect, Waqf property, CM Siddaramaiah

The post ವಕ್ಫ್ ಆಸ್ತಿ ಕಾಪಾಡುತ್ತೇನೆ ಎಂದಿದ್ದ  ಬೊಮ್ಮಾಯಿ ಈಗ ಉಲ್ಟಾ ಹೊಡೆದಿದ್ದೇಕೆ? ಸಿಎಂ ಸಿದ್ದರಾಮಯ್ಯ ವಾಗ್ದಾಳಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.