re-caste census Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಮರು ಜಾತಿಗಣತಿ: ಜಾತಿಗಳ ನಡುವೆ ಕಂದಕವನ್ನುಂಟು ಮಾಡಿ ಬೇಳೆ ಬೇಯಿಸಿಕೊಳ್ಳಲು ಹುನ್ನಾರ- ಆರ್.ಅಶೋಕ್
ಬೆಂಗಳೂರು,ಜುಲೈ,24,2025 (www.justkannada.in):  ರಾಜ್ಯ ಸರ್ಕಾರ ಮರು ಜಾತಿಗಣತಿ ಸಮೀಕ್ಷೆಗೆ ಮುಂದಾಗಿದ್ದು ಜಾತಿಗಳ ನಡುವೆ ಕಂದಕ ತಂದು ಬೇಳೆ ಬೇಯಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಈ ಹುನ್ನಾರ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ಜಾತಿಗಳ ನಡುವೆ ಕಂದಕ ತರಲು ಜಾತಿ ಗಣತಿ ಮಾಡಿಸಿದ್ದಾರೆ. ಈಗ ಹೊಸ ಜಾತಿ ಗಣತಿ ಸಮೀಕ್ಷೆ ಮಾಡಿಸಲು ಮುಂದಾಗಿದ್ದಾರೆ. ಇದರ ಅರ್ಥ ಈ ಹಿಂದಿನ ಗಣತಿ ಬೋಗಸ್ ಎಂದರ್ಥವಾಗುತ್ತದೆ. ಈ ಹಿಂದಿನ ಜಾತಿ ಗಣತಿ ಬಿಡುಗಡೆಗೆ ಹತ್ತು ವರ್ಷವಾಗಿದೆ. ಇನ್ನು ಸರ್ಕಾರ ಕಾಟಾಚಾರಕ್ಕೆ ಜಾತಿ ಒಳಮೀಸಲು ಸಮೀಕ್ಷೆ ಮಾಡಿದೆ. ಈಗ ಮಾಡಿದ ಒಳಮೀಸಲು ಸಮೀಕ್ಷೆ ಕೇವಲ 15 ದಿನಗಳಲ್ಲಿ ಮುಗಿದಿದೆ. ಕೇಂದ್ರ ಸರ್ಕಾರ ನಡೆಸುವ ಸಮೀಕ್ಷೆಗೆ ಎಲ್ಲ ಕಡೆ ಮಾನ್ಯತೆ ಇದೆ. ಆದರೆ ರಾಜ್ಯ ಸರ್ಕಾರ ಮಾಡುವ ಸಮೀಕ್ಷೆಗೆ ಬೆಲೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಲೋಕಸಭೆ ಕಲಾಪದಲ್ಲಿ ವಿಪಕ್ಷಗಳ ಗದ್ದಲ ಕುರಿತು ಪ್ರತಿಕ್ರಿಯಿಸಿದ ಆರ್.ಅಶೋಕ್, ನಮ್ಮ ಪಕ್ಷದ ಎಲ್ಲ ಸಂಸದರು ರಾಜ್ಯದ ನೆಲ, ಜಲ ವಿಚಾರವಾಗಿ ಮಾತಾಡುತ್ತಾರೆ.  ರಾಜ್ಯ ಸರ್ಕಾರ ಎಲ್ಲರಿಗೂ ಮಾರ್ಗದರ್ಶನ ನೀಡಬೇಕು. ಆದರೆ ಇದೇ ಸರ್ಕಾರದ ಪಕ್ಷದ ನಾಯಕರು ಸಂಸತ್ತಿನಲ್ಲಿ ಎಲ್ಲದಕ್ಕೂ ಸಭಾತ್ಯಾಗ ಮಾಡುತ್ತಾರೆ‌. ಸಂಸತ್ತಿನಲ್ಲಿ ರಾಜ್ಯದ ವಿಷಯವನ್ನು ಚರ್ಚೆ ಮಾಡಲು ಮುಂದಾಗಲ್ಲ ಎಂದು ಆಕ್ಷೇಪಿಸಿದರು.

Key words: Re-caste census, Government, R. Ashok

The post ಮರು ಜಾತಿಗಣತಿ: ಜಾತಿಗಳ ನಡುವೆ ಕಂದಕವನ್ನುಂಟು ಮಾಡಿ ಬೇಳೆ ಬೇಯಿಸಿಕೊಳ್ಳಲು ಹುನ್ನಾರ- ಆರ್.ಅಶೋಕ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಾಲ್ತುಳಿತ ಪ್ರಕರಣ ಮುಚ್ಚಿ ಹಾಕಲು ಮರು ಜಾತಿಗಣತಿಗೆ ಸರ್ಕಾರ ಪ್ಲಾನ್- ಸಂಸದ ಯದುವೀರ್ ಆರೋಪ
ಮೈಸೂರು,ಜೂನ್,11,2025 (www.justkannada.in): ಬೆಂಗಳೂರು ಕಾಲ್ತುಳಿತ ಘಟ‌ನೆಯಿಂದ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬಂದಿದೆ. ಹೀಗಾಗಿ ಪ್ರಕರಣವನ್ನ ಮುಚ್ಚಿ ಹಾಕಲು, ಜನರ ಗಮನವನ್ನು ಬೇರೆಡೆ ಸೆಳೆಯುವ ಸಲುವಾಗಿ, ಜನರ ದಿಕ್ಕು ತಪ್ಪಿಸಲು ಮರು ಜಾತಿಗಣತಿಗೆ ಸರ್ಕಾರ ಮುಂದಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆರೋಪಿಸಿದರು.

ರಾಜ್ಯದಲ್ಲಿ ಮತ್ತೆ ಜಾತಿಗಣತಿ ಮರು ಸಮೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸದ ಯದುವೀರ್, ಜನರನ್ನ ದಿಕ್ಕು ತಪ್ಪಿಸುವ ಕೆಲಸಕ್ಕೆ ಕಾಂಗ್ರೆಸ್ ನವರು ಮುಂದಾಗಿದ್ದಾರೆ. ಕಾಲ್ತುಳಿತ ಪ್ರಕರಣವನ್ನ ಮುಚ್ಚಿ ಹಾಕಲು ಮುಂದಾಗಿದ್ದಾರೆ. ಸರ್ಕಾರದವರು ಪೊಲೀಸ್ ಇಲಾಖೆಯ ಮೇಲೆ ಆರೋಪ ಮಾಡ್ತಿದ್ದಾರೆ. ಆ ಪ್ರಕರಣ ಮುಚ್ಚಿ ಹಾಕಲು ಕಾಂತರಾಜು ವರದಿ ತಂದಿದ್ದಾರೆ ಎಂದರು.

ನೂರಾರು ಕೋಟಿ ವ್ಯಯಿಸಿ ಕಾಂತರಾಜು ಆಯೋಗ ಸಿದ್ದಪಡಿಸಿದ್ದ ಜಾತಿಗಣತಿ ವರದಿಯನ್ನು ಇದುವರೆಗೂ ಬಹಿರಂಗ ಪಡಿಸಿಲ್ಲ. ಬೆಂಗಳೂರು ಕಾಲ್ತುಳಿತ ಘಟ‌ನೆಯಿಂದ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬಂದಿದೆ. ರಾಜ್ಯ ಸರ್ಕಾರದ ಬೇಜವಾಬ್ದಾರಿಯಿಂದ 11 ಯುವ ಜನರು ಸಾವನ್ನಪ್ಪಿದ್ದಾರೆ. ಇದರಿಂದ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ. ಜನರ ಗಮನವನ್ನು ಬೇರೆಡೆ ಸೆಳೆಯುವ ಸಲುವಾಗಿ, ಜನರ ದಿಕ್ಕು ತಪ್ಪಿಸಲು ಮರು ಜಾತಿಗಣತಿಗೆ ಮುಂದಾಗಿದೆ. 90 ದಿನದಲ್ಲಿ ಮರು ಜಾತಿಗಣತಿ ನಡೆಸಲು ಸಾಧ್ಯವೇ ಇಲ್ಲ. ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಅವರನ್ನು ಉಳಿಸಲು ಕಾಂಗ್ರೆಸ್ ಹೈಕಮಾಂಡ್ ಹಿಂದುಳಿದ ವರ್ಗಗಳ ಹಿತವನ್ನು ಬಲಿಕೊಟ್ಟಿದೆ. ಈಗಾಗಲೇ ಕೇಂದ್ರ ಸರ್ಕಾರ ಜನಗಣತಿಯ ಜೊತೆಗೆ ಜಾತಿಗಣತಿಯನ್ನು ಕೂಡ ನಡೆಸುವಂತೆ ಸೂಚಿಸಿದೆ. ಹಾಗಾಗಿ ರಾಜ್ಯದಲ್ಲಿ ಮರು ಜಾತಿಗಣತಿ ‌ನಡೆಸುವ ಅವಶ್ಯಕತೆ ಇಲ್ಲ. ರಾಜ್ಯದ ಜಾತಿಗಣತಿ ವಿಚಾರವನ್ನು ರಾಹುಲ್ ಗಾಂಧಿ, ವೇಣುಗೋಪಾಲ್ ನಿರ್ಧರಿಸಲು ಮುಂದಾಗಿದ್ದು ಸರಿಯಲ್ಲ. ಈ ಮರು ಜಾತಿಗಣತಿ ನಡೆಸುವ ಸಾಮರ್ಥ್ಯ ರಾಜ್ಯ ಸರ್ಕಾರಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದರು.

ಕಾಂತರಾಜು ವರದಿ ಬುಟ್ಟಿಗೆ: ಸಿಎಂಗೆ ಮುಖಭಂಗ- ರಘು ಕೌಟಿಲ್ಯ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ರಘುಕೌಟಿಲ್ಯ, ಕಾಂತರಾಜು ವರದಿಯನ್ನು ಕಾಂಗ್ರೆಸ್ ಹೈಕಮಾಂಡ್ ಕಸದ ಬುಟ್ಟಿಗೆ ಎಸೆದಿರುವುದರಿಂದ ಸಿಎಂ ಸಿದ್ದರಾಮಯ್ಯಗೆ ಮುಖಭಂಗವಾಗಿದೆ. ರಾಜ್ಯ ಸರ್ಕಾರದ ವಿವಾದಿತ ಕಾಂತರಾಜು ಆಯೋಗದ ಜಾತಿಗಣತಿ ವರದಿಯನ್ನು ಕಾಂಗ್ರೆಸ್ ಹೈಕಮಾಂಡ್ ಕೈ ಬಿಡಲು ನಿರ್ಧರಿಸಿದೆ. ಈ ನಿರ್ಧಾರವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಘೋಷಿಸಿದ್ದು ಹಲವು ಗೊಂದಲಗಳನ್ನು ಹುಟ್ಟುಹಾಕಿದೆ. ರಾಜ್ಯ ಸಚಿವ ಸಂಪುಟ ಕೈಗೊಳ್ಳಬೇಕಾದ ನಿರ್ಣಯವನ್ನು ವೇಣುಗೋಪಾಲ್ ಹೇಗೆ ಪ್ರಕಟಿಸಿದರು? ಎಂದು ಪ್ರಶ್ನಿಸಿದರು.

ಬೆಂಗಳೂರು ಕಾಲ್ತುಳಿತ ಪ್ರಕಣದಿಂದ ಕಾಂಗ್ರೆಸ್ ಪಕ್ಷದ ಮರ್ಯಾದೆ ರಾಷ್ಟ್ರಮಟ್ಟದಲ್ಲಿ ಹರಾಜಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಉಳಿಸಲು ವಿಷಯಾಂತರ ಮಾಡಲು ಹೈಕಮಾಂಡ್ ಮುಂದಾಗಿದೆ. ಮರು ಜಾತಿಗಣತಿ ಹೆಸರಿನಲ್ಲಿ ಹಿಂದುಳಿದ ಜಾತಿಗಳನ್ನು ಯಾಮಾರಿಸುತ್ತಿದ್ದಾರೆ ಎಂದು ರಘುಕೌಟಿಲ್ಯ ಕಿಡಿಕಾರಿದರು.

Key words: Government, re-caste census, stampede case, MP Yaduveer

The post ಕಾಲ್ತುಳಿತ ಪ್ರಕರಣ ಮುಚ್ಚಿ ಹಾಕಲು ಮರು ಜಾತಿಗಣತಿಗೆ ಸರ್ಕಾರ ಪ್ಲಾನ್- ಸಂಸದ ಯದುವೀರ್ ಆರೋಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.