Register | Just Kannada - Daily News Updates

ಮತದಾರರ ಪಟ್ಟಿಯಿಂದ ಅಳಿಸುವ ಷಡ್ಯಂತ್ರ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಲಿ- ಸಿಎಂ ಡಿಕೆಶಿ ಆಗ್ರಹ
ಬೆಂಗಳೂರು, ಅಕ್ಟೋಬರ್‌,1,2026 (www.justkannada.in):  “ಪೂರ್ವಮುದ್ರಿತ ಮತದಾರರ ವಿವರಗಳನ್ನು ಒಳಗೊಂಡ ಫಾರಂ -7 ಮೂಲಕ ರಾಜ್ಯದ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ (ಡಿಲೀಟ್) ಷ್ಯಡ್ಯಂತ್ರ ಮಾಡಿರುವವರ ವಿರುದ್ದ ಚುನಾವಣಾ ಆಯೋಗ ಪ್ರಕರಣ ದಾಖಲಿಸಬೇಕು” ಎಂದು ಸಿಎಂ ಡಿ.ಕೆ ಶಿವಕುಮಾರ್ ಆಗ್ರಹಿಸಿದರು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್ ಅವರು, “ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಬಿಜೆಪಿ ಹಾಗೂ ಜನತಾದಳ ಕ್ರಿಮಿನಲ್ ಸಂಚು ರೂಪಿಸಿ ವ್ಯಾಪಕ ಅಕ್ರಮದಲ್ಲಿ ತೊಡಗಿರುವುದು ಬಯಲಿಗೆ ಬಂದಿದ್ದು, ಇದರ ವಿರುದ್ಧ ಸರ್ಕಾರ  ಕಾನೂನು ಕ್ರಮ ಸೇರಿದಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ” ಎಂದು ತಿಳಿಸಿದರು.

“ರಾಜ್ಯದ ಹಲವು ಜಿಲ್ಲೆಗಳ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಪೂರ್ವ ಮುದ್ರಿತ ಮಾಹಿತಿಗಳನ್ನು ಒಳಗೊಂಡ ಫಾರಂ 7 ಅನ್ನು ಬಿಜೆಪಿ ಕಾರ್ಯಕರ್ತರು ಬಿಎಲ್ ಒಗಳಿಗೆ ಸಲ್ಲಿಸಿ, ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಲು ಪ್ರಯತ್ನಿಸುತ್ತಿರುವುದು ಪತ್ತೆಯಾಗಿದೆ. ಇದು ಕ್ರಿಮಿನಲ್ ಸಂಚಾಗಿದ್ದು, ಕೋಮು ದ್ವೇಷ ಮೂಡಿಸಿ, ಕೋಮು ಸಾಮರಸ್ಯ ಕದಡಲು ನಡೆಸಿದ ವ್ಯವಸ್ಥಿತ ಷಡ್ಯಂತ್ರವಾಗಿದೆ” ಎಂದು ಕಿಡಿಕಾರಿದರು.

ಸಚಿವರ ಕ್ಷೇತ್ರಗಳಲ್ಲೇ ಸಾವಿರಾರು ಮತಗಳ ಡಿಲೀಟ್ ಗೆ ಪಿತೂರಿ

“ಬಬಲೇಶ್ವರದಲ್ಲಿ 1634 ಸಾವಿರಕ್ಕೂ ಅಧಿಕ ಇಂತಹ ಅರ್ಜಿಗಳನ್ನು ಸಲ್ಲಿಸಲಾಗಿದೆ. ಬಿಜಾಪುರದಲ್ಲಿ 14 ಸಾವಿರ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಭಾಲ್ಕಿಯಲ್ಲಿ 3244 ಇಂತಹ ಅರ್ಜಿಗಳನ್ನು ಬಿಜೆಪಿ ಕಾರ್ಯಕರ್ತರು ನೀಡಿದ್ದಾರೆ.  ಭಾಲ್ಕಿ, ನರಸಿಂಹರಾಜಪುರ, ಬೆಳಗಾವಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಫಾರಂ 7 ನೀಡಿರುವುದು ಕಂಡು ಬಂದಿದೆ. ಮತ್ತೆ ಕೆಲವು ಕ್ಷೇತ್ರಗಳಲ್ಲಿ 5-10 ಸಾವಿರ ಮತಗಳನ್ನು ಡಿಲೀಟ್ ಮಾಡುವ ಷಡ್ಯಂತ್ರ ನಡೆದಿದೆ. ಪ್ರಕಾಶ್ ರಾಜ್ ಅವರ ನೇತೃತ್ವದ ಸಿವಿಲ್ ಸೊಸೈಟಿ ಸದಸ್ಯರು ಮತಗಟ್ಟೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ” ಎಂದು ಮಾಹಿತಿ ನೀಡಿದರು.

“ಬಿಜೆಪಿಯ ಅಧಿಕೃತ ಕಾರ್ಯಕರ್ತರು ತಮ್ಮ ಹೆಸರಿನಲ್ಲಿ ನೂರಾರು ಇಂತಹ ಫಾರಂ 7 ಅರ್ಜಿಗಳನ್ನು ಸಲ್ಲಿಸಿರುವುದನ್ನು ನಾವು ಪತ್ತೆ ಹಚ್ಚಿದ್ದೇವೆ. ಕೆಲವು ಕಡೆ ಬಿಜೆಪಿ ಕಾರ್ಯಕರ್ತರು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಬಿಜೆಪಿ ಹಾಗೂ ಜನತಾದಳದ ಷಡ್ಯಂತ್ರ ಇದೀಗ ಬಯಲಾಗಿದೆ. ಫಾರಂ 7 ರಲ್ಲಿ ಮಾಹಿತಿಯನ್ನು ಮುದ್ರಿಸಿ ಬಿಜೆಪಿ ಕಾರ್ಯಕರ್ತರು ಈ ಕಾರ್ಯದಲ್ಲಿ ತೊಡಗಿದ್ದಾರೆ. ಕೆಲವು ಕಡೆ ಈ ಅರ್ಜಿ ನೀಡಿದ್ದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಎಲ್ಲಿ ಈ ಫಾರಂ ಮುದ್ರಿತವಾಗುತ್ತಿದೆ? ಇದರ ಹಿಂದೆ ಯಾವ ಪಕ್ಷದ ನಾಯಕರು ಇದ್ದಾರೆ? ಚುನಾವಣಾ ಆಯೋಗ ಇದರ ಹಿಂದೆ ಇರುವ ಪ್ರತಿಯೊಬ್ಬರನ್ನೂ ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮಗಳನ್ನು ಜರುಗಿಸಬೇಕು” ಎಂದು ಸಿಎಂ ಡಿಕೆ ಶಿವಕುಮಾರ್ ಒತ್ತಾಯಿಸಿದರು.‌

ಕರ್ನಾಟಕದಲ್ಲಿ ಸುಮಾರು 50 ಲಕ್ಷ ಮತದಾರರನ್ನು ಮತಪಟ್ಟಿಯಿಂದ ಡಿಲೀಟ್ ಮಾಡುವ ಷಡ್ಯಂತ್ರ

“ಕರ್ನಾಟಕ ರಾಜ್ಯದಲ್ಲಿ ಈಗಾಗಲೇ ಎಸ್ಐಆರ್ ಪ್ರಕ್ರಿಯೆಯಲ್ಲಿ 1.07 ಕೋಟಿ ಮತದಾರರ ಹೆಸರುಗಳು ಕೈಬಿಡಲಾಗಿದ್ದು, 45 ಲಕ್ಷ ಮತದಾರರಿಗೆ ನೋಟೀಸ್ ನೀಡಿದ್ದಾರೆ. ಇಷ್ಟಾದ ಬಳಿಕವು ಈಗ ಬಿಜೆಪಿ ಕಾರ್ಯಕರ್ತರು ಸುಮಾರು 50 ಲಕ್ಷ ಮತದಾರರನ್ನು ಮತಪಟ್ಟಿಯಿಂದ ಡಿಲೀಟ್ ಮಾಡಿಸಲು ಷಡ್ಯಂತ್ರ ನಡೆದಿದೆ” ಎಂದು ವಿವರಿಸಿದರು.

“ರಾಜ್ಯ ಚುನಾವಣಾ ಆಯೋಗ, ತಕ್ಷಣ ಈ ಎಲ್ಲಾ ಪ್ರಕರಣಗಳ ಬಗ್ಗೆ ಎಫ್ಐಆರ್ ದಾಖಲಿಸಿ, ಈ ಎಲ್ಲಾ ಕಡೆಗಳಲ್ಲಿ ಸಮಗ್ರ ತನಿಖೆ ಆರಂಭಿಸಿ, ಯಾರು ಇದರಲ್ಲಿ ಒಳಗೊಂಡಿದ್ದಾರೆ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಬಿಜೆಪಿ ಹಾಗೂ ಜನತಾದಳ ನಾಯಕರ ಈ ಕ್ರಿಮಿನಲ್ ಷಡ್ಯಂತ್ರದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು” ಎಂದು ಅವರು ಒತ್ತಾಯಿಸಿದರು.

“ರಾಜ್ಯದ ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕನ್ನು ರಕ್ಷಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ನಡೆಯುತ್ತಿರುವ ಈ ಕ್ರಿಮಿನಲ್ ಷಡ್ಯಂತ್ರದ ಬಗ್ಗೆ ಪೊಲೀಸರು ಮೊಕದ್ದಮೆ ದಾಖಲಿಸಿ ತನಿಖೆ ನಡೆಸಲಾಗುವುದು” ಎಂದರು.

“ರಾಜ್ಯ ಚುನಾವಣಾ ಆಯೋಗ ತಕ್ಷಣ ಇದರ ಬಗ್ಗೆ ತನಿಖೆಗೆ ಆದೇಶಿಸಿ ಕ್ರಮ ಜರುಗಿಸಲು ಒತ್ತಾಯಿಸಿ, ರಾಜ್ಯ  ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಲಾಗುವುದು. ಆಯೋಗ ಈ ಕುರಿತು ಸೂಕ್ತ ಕ್ರಮ ಜರುಗಿಸುವ ತನಕ ಅಲ್ಲಿಯೇ ಸಂಪುಟದ ಸಚಿವರೊಂದಿಗೆ ಧರಣಿ ಕುಳಿತುಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲದೆ ಎಸ್ಐಆರ್ ಮೂಲಕ ಅಕ್ರಮ

“ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂಬ ಕಾರಣಕ್ಕಾಗಿ ಬಿಜೆಪಿ ಹಾಗೂ ಜನತಾದಳ ಇಂತಹ ಕ್ರಿಮಿನಲ್ ಷಡ್ಯಂತ್ರ ನಡೆಸುತ್ತಿರುವುದು ಜಗಜ್ಜಾಹೀರಾಗಿದೆ. ಇಡೀ ದೇಶದಲ್ಲಿಯೇ ಇಂತಹ ಕ್ರಿಮಿನಲ್ ಗಳು ಇರಲು ಸಾಧ್ಯವಿಲ್ಲ. ನಾವು ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಇಂತಹ ಕ್ರಿಮಿನಲ್ ಕೃತ್ಯಗಳು ನಡೆಯಲು ಬಿಡುವುದಿಲ್ಲ” ಎಂದು ಹೇಳಿದರು.

ಪ್ರತಿಯೊಬ್ಬರ ಮತದಾನದ ಹಕ್ಕು ರಕ್ಷಿಸಲು ಸರ್ಕಾರ ಬದ್ಧ

“ಅಲ್ಪಸಂಖ್ಯಾತರು, ಬಡವರ ಹಿತರಕ್ಷಣೆ, ಮತರಕ್ಷಣೆ ನನ್ನಿಂದ ಸಾಧ್ಯವಿಲ್ಲ ಎಂದರೆ ನಾನು ಮುಖ್ಯಮಂತ್ರಿ  ಕುರ್ಚಿಯಲ್ಲಿ ಕುಳಿತುಕೊಳ್ಳಲು ಅರ್ಹನಲ್ಲ. ವಿಶೇಷ ಎಸ್ಐಆರ್ ಮಾಡಿದ ಬಳಿಕ ನಮ್ಮ ರಾಜ್ಯದಲ್ಲಿ, ಪಕ್ಷದ ಹಾಗೂ ಸರ್ಕಾರದ ವತಿಯಿಂದ ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದ್ದೇವೆ. ರಾಜ್ಯದ ಮುಖ್ಯಮಂತ್ರಿಯಾಗಿ ಪ್ರತಿ ವರ್ಗ ಮತದಾರರಿಗೆ ತಮ್ಮ ಹಕ್ಕು ಉಳಿಸಿ ಕೊಡುವುದು ನನ್ನ ಜವಾಬ್ದಾರಿ. ರಾಜ್ಯದ ಜನತಗೆ ನನ್ನ ಮೇಲೆ ಹಾಗೂ ಸರ್ಕಾರದ ಮೇಲೆ ಸಂಪೂರ್ಣ ವಿಶ್ವಾಸ ಇರಿಸಿ ಈ ಸ್ಥಾನದಲ್ಲಿ ಕೂರಿಸಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಸ್ಐಆರ್ ದೊಡ್ಡ ವಂಚನೆ, ಹೀಗಾಗಿ ರದ್ದಾಗಬೇಕು

“ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್ ಅವರಿಗೆ ಮಾಹಿತಿ ಯಿಲ್ಲದೇ ಇಂತಹ ಕೃತ್ಯ ನಡೆಯಲು ಸಾಧ್ಯವಿಲ್ಲ. ಎಸ್ಐಆರ್ ದೇಶದ ಅತಿ ದೊಡ್ಡ ವಂಚನೆಯಾಗಿದ್ದು, ಎಸ್ಐಆರ್ ರದ್ದಾಗಬೇಕು” ಎಂದು ಆಗ್ರಹಿಸಿದರು.

“ಎಸ್ಐಅರ್ ಪ್ರಾರಂಭವಾದ ಬಳಿಕ ನಾವು ಸರ್ಕಾರದ ವತಿಯಿಂದ ಆಯೋಗಕ್ಕೆ ಎಲ್ಲಾ ಬೆಂಬಲ, ಸಹಕಾರ ನೀಡುತ್ತಾ ಬಂದಿದ್ದೇವೆ. 54 ಸಾವಿರ ಬಿಎಲ್ಎ 2 ಗಳನ್ನು ಪಕ್ಷದ ವತಿಯಿಂದ ನೇಮಕ ಮಾಡಿದ್ದೇವೆ.  ಆಯೋಗದ ಕಾರ್ಯಕ್ಕೆ ಎಲ್ಲಾ ರೀತಿಯ ನೆರವನ್ನು ಸರ್ಕಾರ ನೀಡುತ್ತಾ ಬಂದಿದೆ. ಆದರೆ ಇದೀಗ ಅರ್ಹ ಮತದಾರರನ್ನು ಅಕ್ರಮವಾಗಿ ತೆಗೆದು ಹಾಕಲು ನಡೆಯುತ್ತಿರುವ ಕ್ರಿಮಿನಲ್ ಸಂಚು ಯಶಸ್ವಿಯಾಗಲು ನಾವು ಬಿಡುವುದಿಲ್ಲ” ಎಂದರು.

“ಎಸ್ಐಆರ್ ರದ್ದುಪಡಿಸಬೇಕು. ಪ್ರತಿಯೊಬ್ಬರಿಗೂ ಮತದಾನದ ಹಕ್ಕು ಒದಗಿಸಲು ಕ್ರಮ ಕೈಗೊಳ್ಳಬೇಕು. ಇದರಲ್ಲಿ ಶಾಮೀಲಾಗಿದ್ದಾರೆ ಅಂತಹವರನ್ನು ಬಂಧಿಸಬೇಕು. ಬಿಎಲ್ಒಗಳ ಮೇಲೆ ಒತ್ತಡ ಹೇರಿದವರನ್ನು ಪತ್ತೆಹಚ್ಚಿ, ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು” ಎಂದು ಒತ್ತಾಯಿಸಿದರು.

ಚುನಾವಣಾ ಆಯೋಗದ ಸ್ವಾಯತ್ತತೆ ರಕ್ಷಿಸಲು CEC ವಜಾಗೊಳಿಸಿ, ಕ್ರಿಮಿನಲ್‌ ಪ್ರಕರಣ ದಾಖಲಿಸಿ-ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ
ಬೆಂಗಳೂರು, ಸೆಪ್ಟೆಂಬರ್,26,2026 (www.justkannada.in): ಚುನಾವಣಾ ಆಯೋಗದ ಇತ್ತೀಚಿನ ಬೆಳವಣಿಗೆಗಳು ಹಾಗೂ ಅದರ ಕಾರ್ಯವೈಖರಿ ಕುರಿತು ದೇಶದ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟಿರುವವರಲ್ಲಿ ಆತಂಕ ಮೂಡಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರನ್ನು ಕೂಡಲೇ ವಜಾಗೊಳಿಸುವುದರ ಜೊತೆಗೆ ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗ್ರಹಿಸಿದರು.

ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ಕೆಪಿಸಿಸಿ ಆಯೋಜಿಸಿದ್ದ ಸಿ ಪ್ರತಿಭಟನೆಯಲ್ಲಿ ಭಾಗವಹಿಸಿ ಸಿದ್ದರಾಮಯ್ಯ ಅವರು ಮಾತನಾಡಿದರು. ಈ ವೇಳೆ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಖಂಡನೆ ವ್ಯಕ್ತಪಡಿಸಿದ ಅವರು, ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ದೇಶಾದ್ಯಂತ ಕಾಂಗ್ರೆಸ್‌ ಪಕ್ಷದ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಭಾಗವಾಗಿ ಕರ್ನಾಟಕದಲ್ಲಿಯೂ ಇಂದು ಪ್ರತಿಭಟನೆ ನಡೆಯುತ್ತಿದೆ. ವಿವಿಧ ರಾಜಕೀಯ ಪಕ್ಷಗಳು ಹಾಗೂ ಸಂಘ ಸಂಸ್ಥೆಗಳು ಪ್ರತಿಭಟನೆಯಲ್ಲಿ ಭಾಗವಹಿಸುತ್ತಿವೆ. ಕರ್ನಾಟಕದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ರಾಹುಲ್‌ ಗಾಂಧಿ ಅವರ ಹೋರಾಟಕ್ಕೆ ಬೆಂಬಲವಾಗಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಚುನಾವಣಾ ಆಯೋಗ ಒಂದು ಸಂವಿಧಾನಾತ್ಮಕ ಸಂಸ್ಥೆ. ಸಂವಿಧಾನದ ಆಶಯದಂತೆ ಅದು ಚುನಾವಣೆಗಳನ್ನು ಸ್ವತಂತ್ರವಾಗಿ, ನಿಷ್ಪಕ್ಷಪಾತವಾಗಿ ಮತ್ತು ಪಾರದರ್ಶಕವಾಗಿ ನಡೆಸಬೇಕಾಗುತ್ತದೆ. ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣೆಗಳು ನ್ಯಾಯಸಮ್ಮತವಾಗಿ ನಡೆಯುವುದು ಪ್ರಜಾಪ್ರಭುತ್ವದ ಮೂಲಭೂತ ಅಗತ್ಯ. ಚುನಾವಣಾ ಆಯೋಗ ಸ್ವತಂತ್ರವಾಗಿ ಕಾರ್ಯನಿರ್ವಹಿಸದಿದ್ದರೆ ಪ್ರಜಾಪ್ರಭುತ್ವವೇ ಉಳಿಯುವುದಿಲ್ಲ. ಇದು ಪ್ರಜಾಪ್ರಭುತ್ವದ ಅಳಿವು-ಉಳಿವಿನ ಪ್ರಶ್ನೆಯಾಗಿದೆ ಎಂದು ಅವರು ಪ್ರತಿಪಾದಿಸಿದರು.

ಚುನಾವಣಾ ಆಯೋಗದ ಸದಸ್ಯರು ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಸಾಬೀತಾದರೆ, ಅವರ ವಿರುದ್ಧ ಸಂವಿಧಾನಬದ್ಧ ಕ್ರಮ ಜರುಗಿಸಬೇಕು. ಸಂವಿಧಾನದ ರಕ್ಷಣೆಯ ಜವಾಬ್ದಾರಿ ಹೊಂದಿರುವ ರಾಷ್ಟ್ರಪತಿಗಳು ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದರು. ಮುಖ್ಯ ಚುನಾವಣಾ ಆಯುಕ್ತರು ಅಥವಾ ಚುನಾವಣಾ ಆಯುಕ್ತರು ಯಾವುದೇ ಕಾರಣಕ್ಕೂ ಸರ್ವಾಧಿಕಾರಿ ಧೋರಣೆಯಿಂದ ಕಾರ್ಯನಿರ್ವಹಿಸಲು ಸಂವಿಧಾನ ಅವಕಾಶ ನೀಡುವುದಿಲ್ಲ ಎಂದರು.

ಚುನಾವಣಾ ಆಯೋಗವು ಯಾವುದೇ ಸರ್ಕಾರಕ್ಕೆ ಅಥವಾ ರಾಜಕೀಯ ಪಕ್ಷಕ್ಕೆ ನಿಷ್ಠವಾಗಿರಬೇಕಾದ ಸಂಸ್ಥೆಯಲ್ಲ. ಬಾಬಾಸಾಹೇಬ್‌ ಡಾ. ಬಿ.ಆರ್. ಅಂಬೇಡ್ಕರ್‌ ಅವರು ನೀಡಿದ ಸಂವಿಧಾನಕ್ಕೆ ಮಾತ್ರ ಅದು ನಿಷ್ಠವಾಗಿರಬೇಕು. ಕೇಂದ್ರ ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿಯುವ ಸಂಸ್ಥೆಯಾಗಿ ಚುನಾವಣಾ ಆಯೋಗ ಇರಬಾರದು ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಪ್ರಸ್ತುತ ಚುನಾವಣಾ ಆಯೋಗದಲ್ಲಿ ಮುಖ್ಯ ಚುನಾವಣಾ ಆಯುಕ್ತರು ಸೇರಿದಂತೆ ಮೂವರು ಸದಸ್ಯರಿದ್ದಾರೆ. ಆದರೆ, ಈ ಮೂವರ ಪೈಕಿ ಇಬ್ಬರು ಚುನಾವಣಾ ಆಯುಕ್ತರು ಹಲವು ನಿರ್ಧಾರಗಳ ಕುರಿತು ಲಿಖಿತವಾಗಿ ಆಕ್ಷೇಪ ವ್ಯಕ್ತಪಡಿಸಿರುವುದು ಮಾಧ್ಯಮ ವರದಿಗಳಿಂದ ಬಹಿರಂಗವಾಗಿದೆ. ಪತ್ರಿಕೆಯೊಂದು ನಡೆಸಿದ ತನಿಖಾ ವರದಿ ಪ್ರಕಾರ, ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು ವಿವೇಕ್‌ ಜೋಶಿ ಅವರು ಕಳೆದ ಹತ್ತು ತಿಂಗಳಲ್ಲಿ ಕನಿಷ್ಠ 14 ಬಾರಿ ಆಯೋಗದ ನಿರ್ಧಾರಗಳು ಮತ್ತು ಆದೇಶಗಳ ಕುರಿತು ಆಕ್ಷೇಪ ದಾಖಲಿಸಿದ್ದಾರೆ. ಕೆಲವು ಆಕ್ಷೇಪಗಳು ಮತದಾರರ ಸೇರ್ಪಡೆ, ಹೆಸರುಗಳ ಅಳಿಸುವಿಕೆ, ಫಾರಂ-6 ಬದಲಾವಣೆ ಹಾಗೂ ಮತದಾರರ ದತ್ತಾಂಶ ನಿರ್ವಹಣೆಗೆ ಸಂಬಂಧಿಸಿದ್ದಾಗಿವೆ ಎಂದರು.

ಇಬ್ಬರು ಚುನಾವಣಾ ಆಯುಕ್ತರು ಆಕ್ಷೇಪ ವ್ಯಕ್ತಪಡಿಸಿರುವುದನ್ನು ಉಲ್ಲೇಖಿಸಿದ ಸಿದ್ದರಾಮಯ್ಯ ಅವರು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಸರ್ವಾಧಿಕಾರದ ಧೋರಣೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿದರು. ಚುನಾವಣಾ ಆಯೋಗದೊಳಗೇ ಈ ರೀತಿಯ ಆಕ್ಷೇಪಗಳು ವ್ಯಕ್ತವಾಗಿರುವುದು ಗಂಭೀರ ವಿಚಾರ. ಸಂವಿಧಾನಾತ್ಮಕ ಸಂಸ್ಥೆಯೊಳಗೆ ಇಂತಹ ಬೆಳವಣಿಗೆ ನಡೆಯಬಾರದು ಎಂದು ಹೇಳಿದರು.

ಚುನಾವಣಾ ಆಯೋಗದ ಮುಖ್ಯ ಜವಾಬ್ದಾರಿ ಮತದಾರರ ಪಟ್ಟಿಯನ್ನು ಪರಿಷ್ಕರಿಸುವುದು, ಹೊಸ ಮತದಾರರನ್ನು ನೋಂದಾಯಿಸುವುದು, ಅರ್ಹರನ್ನು ಸೇರ್ಪಡೆಗೊಳಿಸುವುದು, ಅನರ್ಹರ ಹೆಸರುಗಳನ್ನು ತೆಗೆದುಹಾಕುವುದು ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದ ದತ್ತಾಂಶವನ್ನು ನಿರ್ವಹಿಸುವುದಾಗಿದೆ. ಯಾವುದೇ ಕಾರಣಕ್ಕೂ ಚುನಾವಣೆಗಳು ಅಕ್ರಮವಾಗಿ ನಡೆಯದಂತೆ ನೋಡಿಕೊಳ್ಳುವುದು ಅದರ ಕರ್ತವ್ಯವಾಗಿದೆ ಎಂದರು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮತಗಳ್ಳತನ ಮತ್ತು ಮತದಾರರ ಪಟ್ಟಿಯನ್ನು ತಿರುಚುವ ಪ್ರಕ್ರಿಯೆಗಳು ವ್ಯಾಪಕವಾಗಿ ನಡೆಯುತ್ತಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಲವು ಬಾರಿ ಆರೋಪಿಸಿದ್ದಾರೆ. ಈ ಕುರಿತು 2025ರಲ್ಲಿಯೇ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರು. ಮತಗಳ್ಳತನದ ಆರೋಪಗಳನ್ನು ರಾಹುಲ್‌ ಗಾಂಧಿ ಅವರು ಮುಂದಿಟ್ಟಾಗ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರು ದೇಶದ ಜನತೆಯ ಕ್ಷಮೆ ಕೇಳಬೇಕು ಎಂದು ಹೇಳಿದ್ದರು ಎಂದು ಸಿದ್ದರಾಮಯ್ಯ ಅವರು ಉಲ್ಲೇಖಿಸಿದರು.

ಇದೀಗ ಚುನಾವಣಾ ಆಯೋಗದ ಇಬ್ಬರು ಸದಸ್ಯರೇ ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರು ಒಂದು ಕ್ಷಣವೂ ಆ ಹುದ್ದೆಯಲ್ಲಿ ಮುಂದುವರಿಯಲು ಅರ್ಹರಲ್ಲ ಎಂದು ಸಿದ್ದರಾಮಯ್ಯ ಅವರು ಹೇಳಿದರು. ಇದು ಸಂವಿಧಾನಕ್ಕೆ ಮಾಡಿದ ದ್ರೋಹ ಹಾಗೂ ಕ್ರಿಮಿನಲ್‌ ಅಪರಾಧ ಎಂದು ಆರೋಪಿಸಿದ ಅವರು, ಜ್ಞಾನೇಶ್‌ ಕುಮಾರ್‌ ಅವರನ್ನು ವಜಾಗೊಳಿಸುವುದಷ್ಟೇ ಅಲ್ಲದೆ, ಅವರ ವಿರುದ್ಧ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದರು.

ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸುವ ಕುರಿತು ಸಂವಿಧಾನದ 324ನೇ ವಿಧಿ ವಿಶೇಷ ರಕ್ಷಣೆಯನ್ನು ಒದಗಿಸುತ್ತದೆ. ಅದರ ಪ್ರಕಾರ ಮುಖ್ಯ ಚುನಾವಣಾ ಆಯುಕ್ತರನ್ನು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯನ್ನು ವಜಾಗೊಳಿಸುವ ರೀತಿಯಲ್ಲೇ ಮತ್ತು ಅದೇ ಆಧಾರದ ಮೇಲೆ ವಜಾಗೊಳಿಸಬಹುದು. ಇತರ ಚುನಾವಣಾ ಆಯುಕ್ತರ ವಜಾಕ್ಕೆ ಮುಖ್ಯ ಚುನಾವಣಾ ಆಯುಕ್ತರ ಶಿಫಾರಸು ಅಗತ್ಯವಿದೆ ಎಂದರು.

ಚುನಾವಣೆಗಳನ್ನು ನಿಷ್ಪಕ್ಷಪಾತವಾಗಿ, ಸ್ವತಂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಬೇಕಾದ ಚುನಾವಣಾ ಆಯೋಗ ಕೇಂದ್ರ ಸರ್ಕಾರದ ತಾಳಕ್ಕೆ ತಕ್ಕಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದ ಸಿದ್ದರಾಮಯ್ಯ ಅವರು, ಈ ಕುರಿತು ರಾಷ್ಟ್ರಪತಿಗಳು ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಮನವಿ ಮಾಡಿದರು. ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸುವುದರ ಜೊತೆಗೆ ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಯಸ್ಸಿನ ವಿಚಾರವನ್ನೂ ಪ್ರಸ್ತಾಪಿಸಿದ ಸಿದ್ದರಾಮಯ್ಯ ಅವರು, ನರೇಂದ್ರ ಮೋದಿ ಅವರಿಗೆ 75 ವರ್ಷ ವಯಸ್ಸಾಗಿದೆ. ಇತರರಿಗೆ 75 ವರ್ಷವಾದ ಬಳಿಕ ನಿವೃತ್ತಿಯ ವಿಚಾರವನ್ನು ಮುಂದಿಡಲಾಗುತ್ತದೆ. ಆದರೆ ನರೇಂದ್ರ ಮೋದಿ ಅವರಿಗೆ ಮಾತ್ರ ಇದರಿಂದ ವಿನಾಯಿತಿ ನೀಡಲಾಗಿದೆ ಎಂದು ಟೀಕಿಸಿದರು. ಮೋದಿ ಅವರು ನಿಷ್ಪಕ್ಷಪಾತವಾಗಿ ಪ್ರಧಾನಮಂತ್ರಿಯಾಗಿಲ್ಲ, ಮತಗಳ್ಳತನದ ಮೂಲಕ ಅಧಿಕಾರಕ್ಕೆ ಬಂದಿದ್ದಾರೆ ಎಂದು ಆರೋಪಿಸಿದ ಅವರು, ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿರುವ ಪ್ರಧಾನಮಂತ್ರಿಗೆ ಒಂದು ನಿಮಿಷವೂ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ ಎಂದು ಹೇಳಿದರು.

ಈ ಕಾರಣಕ್ಕಾಗಿ ಪ್ರತಿಭಟನೆ ನಡೆಸುವುದು ಮತ್ತು ಇದನ್ನು ಖಂಡಿಸುವುದು ಅಗತ್ಯವಾಗಿದೆ. ನಾನು ಕೂಡ ರಾಹುಲ್‌ ಗಾಂಧಿ ಅವರೊಂದಿಗೆ ನಿಂತು ಈ ಹೋರಾಟವನ್ನು ಬೆಂಬಲಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಚುನಾವಣಾ ಆಯೋಗದ ಸ್ವಾಯತ್ತತೆ ಮತ್ತು ಸಂವಿಧಾನಬದ್ಧ ಕರ್ತವ್ಯಗಳ ಕುರಿತು ಗಂಭೀರ ಪ್ರಶ್ನೆಗಳು ಎದ್ದಿರುವ ಸಂದರ್ಭದಲ್ಲಿ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಬೇಕು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರನ್ನು ಕೂಡಲೇ ವಜಾಗೊಳಿಸಬೇಕು ಹಾಗೂ ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು.

ಸಂವಿಧಾನಕ್ಕಿಂತ ದೊಡ್ಡವರಲ್ಲ: RSS ನೋಂದಾಯಿಸಿ ಕಾರ್ಯ ಚಟುವಟಿಕೆ ಮಾಡಲಿ- ಸಚಿವ ಬಾಲಕೃಷ್ಣ
ರಾಮನಗರ,ಆಗಸ್ಟ್,15,2026 (www.justkannada.in): ಆರ್ ಎಸ್ ಎಸ್ ನವರು ಸರ್ಕಾರ ಸಂವಿಧಾನಕ್ಕಿಂತ ದೊಡ್ಡವರಲ್ಲ. ಆರ್ ಎಸ್ ಎಸ್ ನೋಂದಾಯಿಸಿ  ತಮ್ಮ ಕಾರ್ಯಚಟುವಟಿಕೆ ಮಾಡಲಿ ಎಂದು ಪೌರಾಡಳಿತ ಸಚಿವ ಹೆಚ್ ಸಿ ಬಾಲಕೃಷ್ಣ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಬಾಲಕೃಷ್ಣ,  ಎಲ್ಲಾ ಸಂಘಟನೆಗಳು ಕೂಡ ನೋಂದಣಿ ಮಾಡಿಸಿಕೊಳ್ಳಬೇಕು. ಎಲ್ಲಾ ಸಂಘಟನೆಗಳು ಕೂಡ ಕಾನೂನಿನಡಿ ಕೆಲಸ ಮಾಡಬೇಕು.  ಆರ್ ಎಸ್ ನಿರ್ಬಂಧ ಅಂತಾ ಯಾಕೆ ಹೇಳುತ್ತೀರಾ?  ಎಂದು ಪ್ರಶ್ನಿಸಿದರು.

ಆರ್ ಎಸ್ ಎಸ್ ಕಚೇರಿಯಲ್ಲಿ ರಾಷ್ಟ್ರಧ್ವಜ  ಹಾರಿಸದೇ ಇರುವ ವಾತಾವರಣ ಇತ್ತು.  ಇತ್ತೀಚೆಗೆ ಆರ್ ಎಸ್  ಕಚೇರಿಯಲ್ಲಿ ರಾಷ್ಟ್ರ ಧ್ವಜ  ಹಾರಿಸುತ್ತಿದ್ದಾರೆ. ನಾವೆಲ್ಲರೂ ಸಂವಿಧಾನದಡಿ ಕೆಲಸ ಮಾಡುತ್ತಿರುವವರು ಆರ್ ಎಸ್ ಎಸ್ ನವರು ಸರ್ಕಾರ ಸಂವಿಧಾನಕ್ಕಿಂತ ದೊಡ್ಡವರಲ್ಲ. ಆರ್ ಎಸ್ ನೋಂದಣಿ ಮಾಡಿ ಕಾರ್ಯ ಚಟುವಟಿಕೆ ಮಾಡಲಿ. ಆರ್ ಎಸ್ ಎಸ್ ಗೆ ಹೊರ ದೇಶದಿಂದ ಕೂಡ ಹಣ ಬರುವ ವಾತಾವರಣ ಇದೆ. ಲೆಕ್ಕ ಹೇಳಬೇಕು ಅಂದಾಗ ಬೇಕಲ್ಲವೇ ಎಂದು ಸಚಿವ ಹೆಚ್ ಸಿ ಬಾಲಕೃಷ್ಣ ಹೇಳಿದರು.

Key words: Constitution, RSS, register, work, Minister, Balakrishna

ಮಾವು-ಹಲಸು ಮಾರಾಟ ಮೇಳ: ರೈತರು ನೋಂದಾಯಿಸಿ
ಬೆಂಗಳೂರು ಗ್ರಾಮಾಂತರ, ಮೇ,7,2025 (www.justkannada.in):  ಮಾವು ಮತ್ತು ಹಲಸು ಒಂದು ಋತುಮಾನ ಬೆಳೆಯಾಗಿದ್ದು, ಪ್ರಸ್ತುತ ಹಂಗಾಮಿನಲ್ಲಿ ಮಾವು ಮತ್ತು ಹಲಸು ಬೆಳೆ ಕಟಾವಿಗೆ ಬಂದಿದ್ದು ಮಾವು ಹಾಗೂ ಹಲಸು ಬೆಳೆಯುತ್ತಿರುವ ರೈತರಿಗೆ ಉತ್ತಮ ಬೆಲೆ ಸಿಗುವಂತೆ ಮಾಡುವ ಹಿನ್ನೆಲೆಯಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಅನುಕೂಲವಾಗುವಂತೆ ತೋಟಗಾರಿಕೆ ಇಲಾಖೆ ವತಿಯಿಂದ  “ಮಾವು ಮತ್ತು ಹಲಸು ಪ್ರದರ್ಶನ ಮತ್ತು ಮಾರಾಟ ಮೇಳ’ವನ್ನು ಆಯೋಜಿಸಲು ಉದ್ದೇಶಿಸಲಾಗಿದೆ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು,   ಈ ಮೇಳದಲ್ಲಿ ಸುಮಾರು 50 ಕ್ಕೂ ಹೆಚ್ಚು ವಿವಿಧ ಮಾವು ತಳಿ, ಹಲಸು ತಳಿ ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆಯನ್ನು ಹಮ್ಮಿಕೊಂಡು ರೈತರಿಂದ ನೇರವಾಗಿ ಖರೀದಿಸಲು ಅವಕಾಶ ಕಲ್ಪಿಸಲಾಗುವುದು. ರೈತರು ತಾವು ಬೆಳೆದ ಮಾವು ಮತ್ತು ಹಲಸು ಬೆಳೆಗಳನ್ನು ಮಾರಾಟ ಮಾಡಲು ಮೇ 08 ರಿಂದ 14 ರ ವರೆಗೆ ಹತ್ತಿರದ ತಾಲೂಕು ತೋಟಗಾರಿಕೆ ಕಛೇರಿಯಲ್ಲಿ ನೊಂದಾಯಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರ ದೂರವಾಣಿ ಸಂಖ್ಯೆ 9448999214, ದೇವನಹಳ್ಳಿ ಹಿರಿಯ ಸಹಾಯಕ ತೋಟಗಾರಿಕೆ  ನಿರ್ದೇಶಕರ ದೂ.ಸಂಖ್ಯೆ 9480461234, ದೊಡ್ಡಬಳ್ಳಾಪುರ ಹಿರಿಯ ಸಹಾಯಕ ತೋಟಗಾರಿಕೆ  ನಿರ್ದೇಶಕರ ದೂ.ಸಂಖ್ಯೆ 94821296648, ಹೊಸಕೋಟೆ ಹಿರಿಯ ಸಹಾಯಕ ತೋಟಗಾರಿಕೆ  ನಿರ್ದೇಶಕರ ದೂ.ಸಂಖ್ಯೆ 9880210892 ಹಾಗೂ ನೆಲಮಂಗಲ ಹಿರಿಯ ಸಹಾಯಕ ತೋಟಗಾರಿಕೆ  ನಿರ್ದೇಶಕರ ದೂ.ಸಂಖ್ಯೆ 9880461607 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Mango sales fair,  Farmers, Register

ದ್ರಾಕ್ಷಿ, ಮಾವು ಬೆಳೆ ವಿಮೆಗೆ ನೊಂದಾಯಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್
ಬೆಂಗಳೂರು ಗ್ರಾಮಾಂತರ, ಜುಲೈ, 5, 2024 (www.justkannada.in): ತೋಟಗಾರಿಕಾ ಇಲಾಖೆ ವತಿಯಿಂದ 2024-25ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (RWBCIS)ಯಡಿ ವಿವಿಧ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸ ಬಹುದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧೀನ ತಾಲ್ಲೂಕುಗಳಾದ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳನ್ನು ವಿಮೆಯ ವ್ಯಾಪ್ತಿಗೆ ಒಳಪಡಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಲ್ಲಾಧಿಕಾರಿ ಡಾ.ಎನ್  ಶಿವಶಂಕರ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಹವಾಮಾನ ಅಂಶಗಳಾದ ತಾಪಮಾನ, ಗಾಳಿಯ ವೇಗ, ಮಳೆಯ ಪ್ರಮಾಣ, ಆರ್ದ್ರತೆ ಇತ್ಯಾದಿ ಮಾಹಿತಿಗಳನ್ನು ಸರ್ಕಾರದಿಂದ ಅಧಿಸೂಚಿತ ಟೆಲಿ ಮೆಟ್ರಿಕ್ ಮಳೆ ಮಾಪನ ಕೇಂದ್ರ ಮತ್ತು ಸ್ವಯಂಚಾಲಿತ ಹವಾಮಾನ ಕೇಂದ್ರಗಳಲ್ಲಿ ದಾಖಲಾಗುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕಿನ ಮಾವು ಬೆಳೆಯಲ್ಲಿ ಪ್ರತಿ ಹೆಕ್ಟೇರ್ ಗೆ ವಿಮಾ ಮೊತ್ತ-80,000ರೂ, ರೈತರು ಪಾವತಿಸಬೇಕಾದ ದರ (ಶೇ.5%)-4,000, ದ್ರಾಕ್ಷಿ ಬೆಳೆಯಲ್ಲಿ ಪ್ರತಿ ಹೆಕ್ಟೇರ್ ಗೆ ವಿಮಾ ಮೊತ್ತ-2,80,000ರೂ, ರೈತರು ಪಾವತಿಸಬೇಕಾದ ದರ (ಶೇ.5%ಗಳಲ್ಲಿ)-14,000 ಮಾವು ಮತ್ತು ದ್ರಾಕ್ಷಿ ಬೆಳೆಯುವ ರೈತ ಬಾಂಧವರು ಈ ಯೋಜನೆಯಡಿ ನೋಂದಾಯಿಸಿ ಉಪಯೋಗ ಪಡೆದುಕೊಳ್ಳುವುದು.

ಬೆಳೆ ಸಾಲ ಪಡೆಯದ ರೈತರು ಯೋಜನೆಯಡಿ ಭಾಗವಹಿಸಲು ನಿಗಧಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಪಹಣಿ / ಕಂದಾಯ ರಶೀದಿ / ಖಾತೆ ಪುಸ್ತಕ / ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ನಕಲು ಪ್ರತಿ ಮತ್ತು ಸ್ವಯಂಘೋಷಿತ ಬೆಳೆ ವಿವರಗಳನ್ನು ಹತ್ತಿರದ ರಾಷ್ಟ್ರೀಯ ಅಧಿಕೃತ ಬ್ಯಾಂಕು / ಸಾಮಾನ್ಯ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಲ್ಲಿ ನೋಂದಾಯಿಸುವುದು. ವಿಮೆ ಮಾಡಿಸುವ ರೈತರು ಫ್ರೂಟ್ಸ್ ತಂತ್ರಾಂಶದ ನೋಂದಣಿ ಸಂಖ್ಯೆಯನ್ನು ಹೊಂದಿರಬೇಕಿದ್ದು,  ನೋಂದಣಿ ಸಂಖ್ಯೆಗೆ ಪಹಣಿ ವಿವರಗಳನ್ನು ಜೋಡಿಸಬೇಕಿರುತ್ತದೆ. ನೋಂದಣಿ ಸಂಖ್ಯೆ ಇಲ್ಲದ ರೈತರು ನೋಂದಣಿ ಸಂಖ್ಯೆಯನ್ನು ಮಾಡಿಕೊಂಡು ವಿಮೆಯಲ್ಲಿ ಪಾಲ್ಗೊಳ್ಳಬೇಕಿರುತ್ತದೆ.

ಬೆಳೆ ಸಾಲ ಪಡೆದ ರೈತರನ್ನು ಸಂಬಂಧಿಸಿದ ಬ್ಯಾಂಕಿನವರು ವಿಮೆ ವ್ಯಾಪ್ತಿಗೆ ನೋಂದಾಯಿಸಲಿದ್ದು, ಯೋಜನೆಯಲ್ಲಿ ನೋಂದಾಯಿಸಿಕೊಳ್ಳಲು ಇಚ್ಚಿಸದ ರೈತರು ಸಂಬಂಧಿಸಿದ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರಿಗೆ ನೋಂದಣಿಯ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದ್ದಲ್ಲಿ ಅಂತಹ ರೈತರನ್ನು ಯೋಜನೆಯಿಂದ ಕೈಬಿಡಲು ಅವಕಾಶವಿರುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ KSHEMA(ಕ್ಷೇಮ) ಅಧಿಸೂಚಿತ ವಿಮಾ ಸಂಸ್ಥೆಯಾಗಿದೆ. ವಿಮೆ ನೋಂದಣಿಗೆ ಕೊನೆಯ ದಿನಾಂಕ ಜುಲೈ 31 ಆಗಿದೆ.

ಹೆಚ್ಚಿನ ಮಾಹಿತಿಗೆ ದೇವನಹಳ್ಳಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ)- 9480461234, ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ)- 9880210892, ಹೊಸಕೋಟೆ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ)- 8217210320, ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ)- 9880461607, ರೈತ ಸಂಪರ್ಕ ಕೇಂದ್ರದ ಅಧಿಕಾರಿ, ಹತ್ತಿರದ ಬ್ಯಾಂಕ್ ಶಾಖೆ ಹಾಗೂ ವಿಮಾ ಕಂಪನಿಯ ದೂ.ಸಂ-8884141262 ಸಹಾಯವಾಣಿ ಸಂಖ್ಯೆ- 080 26564537 ಈ ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಎನ್  ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Register, crop, insurance, DC, Dr. N Sivashankar

“ಸಿಡಿ ಬ್ಲಾಕ್ ಮೇಲ್ ಬಗ್ಗೆ ಸಿಎಂ ಕ್ರಿಮಿನಲ್ ಕೇಸ್ ದಾಖಲು ಮಾಡಲಿ” : ಮಾಜಿ ಸಿಎಂ ಸಿದ್ದರಾಮಯ್ಯ
ಮೈಸೂರು,ಜನವರಿ,14,2021(www.justkannada.in) : ಎಲ್ಲರಿಗೂ ಹಾಗೆ ಬ್ಲಾಕ್ ಮೇಲ್ ಮಾಡೋಕೆ ಆಗಲ್ಲ. ವೀಕ್ ಚೀಫ್ ಮಿನಿಸ್ಟರ್ ಗೆ ಮಾತ್ರ ಬ್ಲಾಕ್ ಮೇಲ್ ಮಾಡ್ತಾರೆ. ಅದರ ಬಗ್ಗೆ ಕ್ರಿಮಿನಲ್ ಕೇಸ್ ಹಾಕಲಿ. ಆ ಪಕ್ಷದವರೆ ಆರೋಪ ಮಾಡಿರೋದು, ನಾವೇನು ಆರೋಪ ಮಾಡ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅವರ ಪಕ್ಷದವರೆ ಆರೋಪ ಮಾಡ್ತಿದ್ದಾರೆ ಅಂದ್ರೆ ಅದರಲ್ಲಿ ಸತ್ಯ ಇದೆ ಅಲ್ವಾ? ನಾವ್ ಮಾಡಿದ್ರೆ ವಿರೋಧ ಪಕ್ಷದವರು ಅಂತಾರೆ. ಸಿಎಂ ಬ್ಲಾಕ್ ಮೇಲ್ ಗೆ ಒಳಗಾಗಿದ್ದಾರೋ ಅಥವಾ ಒತ್ತಡಕ್ಕೆ ಒಳಗಾಗಿದ್ದಾರೋ ಅನ್ನೋದು ನಂಗೆ ಗೊತ್ತಿಲ್ಲ. ಅದಕ್ಕೆಲ್ಲ ತನಿಖೆ ಮಾಡಿ ಅಂತ ಹೇಳಲ್ಲ,  ಕ್ರಿಮಿನಲ್ ಕೇಸ್ ಕೊಡಲಿ ಎಂದು ಹೇಳುತ್ತೇನೆ ಎಂದಿದ್ದಾರೆ.

ಬಿಜೆಪಿನಲ್ಲಿ ಕುಟುಂಬ ರಾಜಕಾರಣ ಬಗ್ಗೆ ಹಿಂದೆಯೂ ನಾನು ಹೇಳಿದ್ದೆ‌. ಬಿಡಿಎ ಹಗರಣದಲ್ಲಿ 7 ಕೋಟಿ 40 ಲಕ್ಷ ರೂ. ಅವರ ಕುಟುಂಬದವರ ಅಕೌಂಟ್ ಗೆ ಹೋಗಿತ್ತು. ಅದರ ಅರ್ಥ ಕುಟುಂಬ ರಾಜಕಾರಣ ಇದೆ ಅಂತ ಅಲ್ವಾ. ಈ ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ ಜನರೇ ಉತ್ತರ ಕೊಡುತ್ತಾರೆ. ನನ್ನ ಕಾಲದಲ್ಲಿ ಜಾರಿಗೊಳಿಸಿದ್ದ ಎಲ್ಲ ಜನಪರ ಕೆಲಸಗಳನ್ನು ನಿಲ್ಲಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನಾಯಕತ್ವ ಬದಲಾವಣೆಗೆ ಸಿದ್ದರಾಮಯ್ಯ ದಿನಾಂಕ ನಿಗದಿ ಮಾಡಲಿ ಎಂಬ ಬಿಎಸ್ವೈ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಇಷ್ಟು ದಿನಗಳ ಕಾಲ ಮಂತ್ರಿ ಮಂಡಲ ವಿಸ್ತರಣೆ ಯಾಕೆ ಮಾಡಿರಲಿಲ್ಲ.  ಮಂತ್ರಿ ಮಂಡಲ ವಿಸ್ತರಣೆಗೆ ಯಾಕೆ ಲೇಟ್ ಆಯ್ತು. ಗೋಗರೆದು, ಕೈಕಾಲು ಕಟ್ಟಿ ಮಂತ್ರಿ ಮಂಡಲ ವಿಸ್ತರಣೆ ಮಾಡಿಸಿಕೊಂಡಿರೋದು ಎಂದು ಟೀಕಿಸಿದ್ದಾರೆ.

“ವಿಶ್ವನಾಥ್ ಪಾಪ ಬಾಯಿ ಬಡ್ಕೊತ್ತಿದ್ದಾನೆ”

ಒಬ್ಬ ಮಿನಿಸ್ಟರ್ ನನ್ನು ಸಂಪುಟದಿಂದ ಬಿಟ್ಟಿದ್ದಾರೆ. ಯಾವ ಕಾರಣಕ್ಕೆ ಬಿಟ್ಟಿದ್ದಾರೆ ಎಂದು ಕಾರಣ ಕೊಟ್ಟಿಲ್ಲ. ಪಕ್ಷೇತರನಾಗಿ ಕಾಂಗ್ರೆಸ್ ಪಕ್ಷದ ಸಹಾಯದೊಂದಿಗೆ ಗೆದ್ದಿದ್ದ ಪಕ್ಷೇತರ ಶಾಸಕ ನಾಗೇಶ್ ರನ್ನ ಕೈಬಿಟ್ಟಿದ್ದಾರೆ. ಅವರನ್ನ ಯಾವ ಕಾರಣಕ್ಕೆ ಡ್ರಾಪ್ ಮಾಡಿದ್ದಾರೆ ಎಂದು ಹೇಳಿಲ್ಲ. ಅವರು ಕೂಡ ಆಪರೇಷನ್ ಕಮಲಕ್ಕೆ ಒಳಪಟ್ಟವರು ಎಂದು ಕಿಡಿಕಾರಿದ್ದಾರೆ.

ಈಗ ಮುನಿರತ್ನನನ್ನು ಕೈ ಬಿಟ್ಟಿದ್ದಾರೆ. ಕಾನೂನು ತೊಡಕಿದೆ ಎಂದು ಗೊತ್ತಿದ್ದರೂ ಯಾಕೆ  ಕರೆದುಕೊಂಡರು. ಅವನನ್ನ ಮಿನಿಸ್ಟರ್ ಮಾಡಲು ಆಗಲಿಲ್ಲ ಎಂದಮೇಲೆ ಯಾಕೆ ತಗೆದುಕೊಂಡ್ರು ಅವನನ್ನ? ವಿಶ್ವನಾಥ್ ಪಾಪ ಬಾಯಿ ಬಡ್ಕೊತ್ತಿದ್ದಾನೆ ಎಂದು ಸಿದ್ದರಾಮಯ್ಯ ವ್ಯಂಗ್ಯಮಾಡಿದ್ದಾರೆ.

key words : About-CD Black-Mail-CM Criminal–Case-Register-Former-CM Siddaramaiah

ಮೈಸೂರು ವಿವಿ ವಿದ್ಯಾರ್ಥಿಗಳ ಪ್ರತಿಭಟನೆ: ಸ್ಥಳಕ್ಕೆ ಕುಲಸಚಿವ ಶಿವಪ್ಪ ಭೇಟಿ…
ಮೈಸೂರು,ಜನವರಿ,6,2021(www.justkannada.in): ಮಾನಸ ಗಂಗೋತ್ರಿ ಪಿಜಿ ಹಾಸ್ಟೆಲ್ ಗಳಲ್ಲಿ ಸೂಕ್ತ ಮೂಲ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಇಂದು ಮೈಸೂರು ವಿಶ್ವ ವಿದ್ಯಾನಿಲಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಮೈಸೂರು ವಿವಿ ಕುವೆಂಪು ಪುತ್ಥಳಿ ಬಳಿ ಜಮಾಯಿಸಿದ ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯದಲ್ಲಿ ಮೂಲ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಧರಣಿ ನಡೆಸಿದರು. ಹಾಗೆಯೇ ಪ್ರತಿಭಟನಾ ಸ್ಥಳಕ್ಕೆ ವಿಸಿ ಆಗಮಿಸುವಂತೆ ಪ್ರತಿಭಟನಾನಿರತ ವಿದ್ಯಾರ್ಥಿಗಳು ಒತ್ತಾಯಿಸಿದರು.

ಹಾಸ್ಟೆಲ್ ನಲ್ಲಿ ಶುದ್ಧ ಕುಡಿಯುವ ನೀರು ಇಲ್ಲ. ಊಟದ ವ್ಯವಸ್ಥೆ ಕೂಡ ಸರಿಯಿಲ್ಲ. ಕೋವಿಡ್ ಸಂದರ್ಭದಲ್ಲಿ ಒಂದೇ ಕಡೆ ಎಲ್ಲಾ ವಿದ್ಯಾರ್ಥಿಗಳಿಗೆ ಊಟ ನೀಡಲಾಗುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸರಿಯಾದ ವ್ಯವಸ್ಥೆ ಮಾಡಿಲ್ಲ. ಊಟಕ್ಕಾಗಿ ಗುಂಪುಗುಂಪಾಗಿ ಸೇರಿ ಊಟ ಪಡಯಬೇಕಾದ ಅನಿವಾರ್ಯತೆ ಎದುರಾಗಿದೆ. ಅಡುಗೆ ಕೋಣೆಯಲ್ಲಿ 500 ಜನ ಒಟ್ಟಿಗೆ ಊಟ ಮಾಡ್ತಾರೆ.

ಜತೆಗೆ ಸರಿಯಾದ ನ್ಯೂಸ್ ಪೇಪರ್ ಬರುತ್ತಿಲ್ಲ. ಸೆಂಟ್ರಲೈಜ್ ಕಿಚನ್ ವ್ಯವಸ್ಥೆ ನಮಗೆ ಬೇಡ. ನಮಗ ಶುದ್ಧ ಕುಡಿಯವ ನೀರು ಪೂರೈಕೆ ಆಗಬೇಕು. ಸೋಲರ್ ವ್ಯವಸ್ಥೆ ಮಾಡಬೇಕು. ಹಾಗೆಯೇ ಸೂಕ್ತ ಗ್ರಂಥಾಲಯ ವ್ಯವಸ್ಥೆ ಮಾಡುವಂತೆ ಪ್ರತಿಭಟನಾನಿರತ ವಿದ್ಯಾರ್ಥಿಗಳು ಆಗ್ರಹಿಸಿದರು.

ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಕುಲಸಚಿವ ಶಿವಪ್ಪ ಬೇಟಿ.

ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಮೈಸೂರು ವಿವಿ ಕುಲಸಚಿವ ಶಿವಪ್ಪ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದರು. ಈ ವೇಳೆ ವಿದ್ಯಾರ್ಥಿಗಳು ರಿಜಿಸ್ಟರ್ ಶಿವಪ್ಪರನ್ನು ಸುತ್ತುವರೆದು ಸಮಸ್ಯೆ ಶೀಘ್ರವೇ ಬಗೆಹರಿಸಲು ಪಟ್ಟು ಹಿಡಿದರು. ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ರಿಜಿಸ್ಟರ್ ಶಿವಪ್ಪ ಬಳಿಕ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

ENGLISH SUMMARY…..

UoM students protest: Registrar Shivappa visits protestors

Mysuru, Jan. 06, 2021 (www.justkannada.in): Demanding proper infrastructure at the Manasa Gangotri PG hostel, the students of the University of Mysore today stated a demonstration.

The students gathered in front of the Kuvempu statue inside the University campus and demonstrated demanding proper facilities. They demanded the officials to come to the spot and listen to their woes. The protesting students alleged that the hostel lacks proper drinking water, food facility. They alleged that the food is being provided to all the students at the same hall even during Covid pandemic and there is no proper arrangement of maintaining social distance. All of them have to go together to have food. About 500 students are forced to have food in the dining hall. They also demanded to set right the solar heater facility and upgrade the library.

Shivappa, Registrar, University of Mysore, visited the spot and listened to their woes and promised to solve all their problems.

Keywords: University of Mysore/ Registrar/ students protest/ demands

Key words: Mysore university-Students –protest-Register -Shivappa -visit

ಕೊರೋನಾ ವಿರುದ್ಧ ಹೋರಾಟ: ಸ್ವಯಂ ಸೇವಕರಾಗಿ ಕೆಲಸ ಮಾಡಲು ನೋಂದಾಯಿಸಿಕೊಳ್ಳಿ-ಟ್ವೀಟ್ ಮೂಲಕ ಸಿಎಂ ಬಿಎಸ್ ವೈ ಮನವಿ…
ಬೆಂಗಳೂರು,ಜೂ,25,2020(www.justkannada.in):  ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದ್ದು ಅದರಲ್ಲು ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ರಣಕೇಕೆ ಹಾಕುತ್ತಿದೆ. ಹೀಗಾಗಿ ಕೊರೋನಾ ವಿರುದ್ದ ಹೋರಾಡಲು ಸರ್ಕಾರದ ಜತೆ ಕೈ ಜೋಡಿಸಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ರಾಜಧಾನಿ ಬೆಂಗಳೂರಿನಲ್ಲಿ ತೀವ್ರವಾಗಿ ಹರಡುತ್ತಿರುವ ಕೋವಿಡ್ ಸೋಂಕು ಮುಂದಿನ ಹಂತಗಳಲ್ಲಿ ಹರಡದಂತೆ ತಡೆಯಲು ಹೋಮ್ ಕ್ವಾರಂಟೈನ್ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಿ ಕಡ್ಡಾಯಗೊಳಿಸಲಾಗಿದೆ. ಈ ನಿಯಮಗಳ ಪಾಲನೆಯ ಮೇಲ್ವಿಚಾರಣೆ ನಡೆಸಲು ಸ್ವಯಂ ಸೇವಕರಾಗಿ ನೀವೂ ಸಹ ಕಾರ್ಯ ನಿರ್ವಹಿಸಬಹುದು ಎಂದು ಬೆಂಗಳೂರು ಜನತೆಯಲ್ಲಿ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.

ಸರ್ಕಾರದ ಹೋರಾಟದೊಂದಿಗೆ ಜತೆಯಾಗಲು ಸ್ವಯಂಪ್ರೇರಿತರಾಗಿ ನೋಂದಾಯಿಸಿಕೊಳ್ಳುವ ಮೂಲಕ ಸೋಂಕು ನಿಯಂತ್ರಿಸುವ ಕೆಲಸದಲ್ಲಿ ಕೈಜೋಡಿಸಬಹುದು.. ಬಿಬಿಎಂಪಿಯ ನಾಗರೀಕ ಕ್ವಾರಂಟೈನ್ ಸ್ಕ್ವಾಡ್ ಸದಸ್ಯರಾಗಲು ಈ https://register.quarantinesquad.in/#/p/register  ಲಿಂಕ್ ಗೆ ನಿಮ್ಮ ಮೊಬೈಲ್ ಸಂಖ್ಯೆಯನ್ನ  ನೋಂದಾಯಿಸಿಕೊಳ್ಳಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

Key words: fight –against- Corona-Register – volunteer-CM BS yeddyurappa