rural area Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ತಡೆಗೆ ಗ್ರಾ.ಪಂ. ಕಾರ್ಯಪಡೆ ಮತ್ತಷ್ಟು ಬಲಗೊಳಿಸಿ- ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ…
ತುಮಕೂರು,ಮೇ,28,2021(www.justkannada.in):  ಗ್ರಾಮೀಣ ಪ್ರದೇಶಗಳಲ್ಲಿಯೂ ಹೆಚ್ಚಾಗಿ ಹರಡುತ್ತಿರುವ ಕೋವಿಡ್-19 ಎರಡನೇ ಅಲೆ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ  ನೀಡುವುದರೊಂದಿಗೆ ಹಳ್ಳಿಗಳ ಕೋವಿಡ್ ನಿರ್ವಹಣೆಗೆ ಗ್ರಾಮ ಪಂಚಾಯ್ತಿ ಕಾರ್ಯಪಡೆಗಳನ್ನು ಮತ್ತಷ್ಟು‌ ಬಲಪಡಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತುಮಕೂರು ಜಿಲ್ಲಾಡಳಿತಕ್ಕೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಕೋವಿಡ್-19 ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, , ಜಿಲ್ಲೆಯಲ್ಲಿ ಸೋಂಕಿನ ಪಾಸಿಟಿವ್‌ ಪ್ರಮಾಣದ ಇಳಿಕೆಗೆ ಶ್ರಮವಹಿಸಿ ಎಂದರು. ಕೋವಿಡ್ -19 ಎರಡನೇ ಅಲೆ ರಾಜ್ಯವನ್ನು ತೀವ್ರವಾಗಿ ಬಾಧಿಸಿದೆ. ಬೆಂಗಳೂರಿನ ನೆರೆಯ ಜಿಲ್ಲೆಯಾದ ತುಮಕೂರಿನಲ್ಲಿಯೂ ಪರಿಸ್ಥಿತಿ ಗಂಭೀರವಾಗಿತ್ತು. ಸಮರ್ಪಕ ನಿರ್ವಹಣೆಯಿಂದ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದು, ಸುಧಾರಣೆ ಕಂಡುಬಂದಿದೆ ಎಂದರು.

ಜಿಲ್ಲೆಯಲ್ಲಿ  ಕಳೆದ ಏಪ್ರಿಲ್ ಮಾಹೆಯಲ್ಲಿ 18,749 ಕೋವಿಡ್ ಪ್ರಕರಣ ದೃಢವಾಗಿದ್ದು, 131 ಮಂದಿ ಮೃತಪಟ್ಟಿದ್ದಾರೆ.‌ ಅದೇ ರೀತಿ ಮೇ ಮಾಹೆಯಲ್ಲಿ 48,643 ಪ್ರಕರಣಗಳು‌‌‌ ದೃಢಪಟ್ಟಿದ್ದು, 314 ಮಂದಿ ಮೃತಪಟ್ಟಿರುವುದು ವರದಿಯಾಗಿದೆ. ಏಪ್ರಿಲ್ ತಿಂಗಳಿಗಿಂತಲೂ ಮೇ ತಿಂಗಳಲ್ಲಿ ಪ್ರಕರಣಗಳ ಸಂಖ್ಯೆ ಹಾಗೂ ಮರಣದ ಸಂಖ್ಯೆ ಹೆಚ್ಚಾಗಿದ್ದು,‌ ಜನರ ಜೀವ ಉಳಿಸಲು ಸಹ ಆದ್ಯತೆ ನೀಡಬೇಕಾಗಿದೆ ಎಂದು ನಿರ್ದೇಶಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರ ನೇತೃತ್ವದಲ್ಲಿ ಜಿಲ್ಲಾಡಳಿತ ಸತತ ಪ್ರಯತ್ನ ನಡೆಸಿದ್ದರ ಫಲವಾಗಿ ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿ ಸುಧಾರಿಸುತ್ತಿರುವುದು ಸಮಾಧಾನ ತಂದಿದೆ. ಆರಂಭದಲ್ಲಿ‌ ಶೇ.45ರಷ್ಟಿದ್ದ ಸೋಂಕಿನ  ಪ್ರಮಾಣ ಹಂತ ಹಂತವಾಗಿ ಇಳಿಕೆಯಾಗಿ ಪ್ರಸ್ತುತ ಶೇ.25ಕ್ಕೆ ಇಳಿದಿದೆ.  ಪೂರ್ಣ ಪ್ರಮಾಣದಲ್ಲಿ ಸೋಂಕಿನ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು.ಸಂಘಟಿತ, ಸಾಮೂಹಿಕ ಪ್ರಯತ್ನದಿಂದ ಇದನ್ನು ಸಾಧಿಸಬೇಕು ಎಂದು ನಿರ್ದೇಶಿಸಿದರು.

ಕೋವಿಡ್ ಪರೀಕ್ಷೆಗಳನ್ನೂ ಹೆಚ್ಚಾಗಿ ನಡೆಸಬೇಕಾಗಿದೆ. ಇದಕ್ಕಾಗಿ ನಿನ್ನೆಯಷ್ಟೇ ವಿವಿಧ ಸಂಸ್ಥೆಗಳ ಸಹಕಾರದೊಂದಿಗೆ ಸಂಚಾರಿ ಪರೀಕ್ಷಾ ಪ್ರಯೋಗಾಲಯಗಳಿಗೆ ಚಾಲನೆ ನೀಡಲಾಗಿದೆ. ಜಿಲ್ಲೆಯ ಶಿರಾ ತಾಲೂಕಿನಲ್ಲಿ‌ ಮುಂದಿನ ವಾರದಲ್ಲಿ ಪ್ರಾರಂಭವಾಗುವ ನಿರೀಕ್ಷೆ ಇದೆ. ಇದರಿಂದಾಗಿ ಜಿಲ್ಲೆಯಲ್ಲಿ ಪರೀಕ್ಷಾ ವರದಿಗಳನ್ನು ಬೇಗನೆ ಪಡೆಯಲು ಅನುಕೂಲವಾಗುತ್ತದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಈವರೆಗೂ 415776 ಮಂದಿಗೆ ಮೊದಲ ಡೋಸ್ ಹಾಗೂ 1,13,781 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದ್ದು, ಮೊದಲನೇ ಡೋಸ್ ಲಸಿಕೆ ಪಡೆದವರಿಗೆ ಎರಡನೇ ಡೋಸ್ ಲಸಿಕೆ ನೀಡಲು ಆದ್ಯತೆ ನೀಡಬೇಕುಮ. ಲಭ್ಯತೆ ಆಧಾರದಲ್ಲಿ ಎಲ್ಲಾ ಅರ್ಹರಿಗೂ ಲಸಿಕೆ ನೀಡಲು ಕ್ರಮಕೈಗೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಒಟ್ಟು 566 ಆಕ್ಸಿಜನ್ ಕಾನ್ಸೆಂಟ್ರೇಟರ್ಸ್ ಗಳು ಲಭ್ಯವಿದ್ದು, 300 ಆಕ್ಸಿಜನ್ ಕಾನ್ಸೆಂಟ್ರೇಟರ್ಸ್ ಗಳನ್ನು ಹಂಚಿಕೆ ಮಾಡಲು ಬಾಕಿ ಇರುತ್ತದೆ. ಬಾಕಿ ಇರುವ ಆಕ್ಸಿಜನ್ ಕಾನ್ಸೆಂಟ್ರೇಟರ್ಸ್‍ಗಳು ಕೂಡಲೇ ಹಂಚಿಕೆ ಮಾಡಲು ಕ್ರಮಕೈಗೊಳ್ಳಿ ಎಂದು ಸಿಎಂ ಬಿಎಸ್ ವೈ ಸೂಚಿಸಿದರು.

ಸರ್ಕಾರದೊಂದಿಗೆ ಸಂಘ-ಸಂಸ್ಥೆಗಳು, ಉದ್ಯಮಿಗಳ ನೆರವಿನೊಂದಿಗೆ ಸೋಂಕು ನಿಯಂತ್ರಿಸಬೇಕು. ಗ್ರಾಮೀಣ ಜನರಿಗೆ ಸೋಂಕು ತಗುಲಿದಾಗ ಹೋಂ ಐಸೋಲೇಷನ್‍ ಗೆ  ಅವರ ಮನೆಯಲ್ಲಿ ಹೆಚ್ಚಿನ ಅನುಕೂಲತೆಗಳು ಇಲ್ಲದಿದ್ದರೆ ಕೋವಿಡ್ ಕೇರ್ ಸೆಂಟರ್ ಗಳಿಗೆ ದಾಖಲಿಸುವುದು ಸೂಕ್ತ. ಈ ನಿಟ್ಟಿನಲ್ಲಿ ಹೆಚ್ಚಿನ ಹೆಜ್ಜೆಯಿಡಬೇಕು. ಜಿಲ್ಲೆಯಲ್ಲಿ ಇಲ್ಲಿವರೆಗೂ ಕೋವಿಡ್ ಪರಿಸ್ಥಿತಿಯನ್ನು ಅತ್ಯುತ್ತಮವಾಗಿ ನಿರ್ವಹಿಸಿದ್ದೀರಿ, ಮುಂದೆಯೂ ನಿರ್ವಹಿಸುವಿರಿ ಎಂಬ ವಿಶ್ವಾಸ ನನಗಿದೆ. ಸರ್ಕಾರ ನಿಮ್ಮೊಂದಿಗಿದೆ. ನಿಮಗೆ ಕೋವಿಡ್ ನಿಯಂತ್ರಣಕ್ಕೆ ಎಲ್ಲ ರೀತಿಯಲ್ಲೂ ಬೆಂಬಲ ನೀಡುತ್ತೇನೆ ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.‌ ಮಾಧುಸ್ವಾಮಿ ಮಾತನಾಡಿ, ಕೋವಿಡ್-19 ಎರಡನೇ ಅಲೆ‌ ಆರಂಭದಲ್ಲಿ ಜಿಲ್ಲೆಯಲ್ಲಿ 29ಸಾವಿರ ಸೋಂಕಿನ ಪ್ರಕರಣಗಳು ಕಂಡುಬರುತ್ತಿತ್ತು. ಈಗ 15 ಸಾವಿರಕ್ಕೆ ಇಳಿದಿದೆ. ಶೇ.47%ರಷ್ಟಿದ್ದ ಸೋಂಕಿನ ಪ್ರಮಾಣ ಶೇ.25ಕ್ಕೆ ಇಳಿದಿದೆ.  ಇಡೀ ರಾಜ್ಯದಲ್ಲಿ ಎಲ್ಲರಿಗಿಂತಲೂ ಮೊದಲು ಕೊರೋನಾ ಆರೈಕೆ ಕೇಂದ್ರ ಪ್ರಾರಂಭಿಸಿ ಸೋಂಕಿನ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳಿಂದಾಗಿ ನಿಯಂತ್ರಕ್ಕೆ ಬಂದಿದೆ ಎಂದು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.

ಜಿಲ್ಲಾಸ್ಪತ್ರೆಯಲ್ಲಿ 285 ಕೋವಿಡ್ ಹಾಸಿಗೆಗಳು ಸೇರಿದಂತೆ ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿಯೂ 50 ಆಮ್ಲಜನಕ ಹಾಸಿಗೆಗಳ ವ್ಯವಸ್ಥೆಯಿದೆ. ಕ್ವಾರಿ, ಕ್ರಷರ್ ಸೇರಿದಂತೆ ಅನೇಕ‌ ದಾನಿಗಳ ನೆರವಿನಿಂದ 300‌ ಆಮ್ಲಜನಕ ಸಾಂದ್ರಕಗಳು ಲಭ್ಯವಿದ್ದು, ಜಿಲ್ಲೆಯಲ್ಲಿರುವ 150 ಪಿಎಚ್ ಸಿ(ನಗರ ಮತ್ತು ಗ್ರಾಮೀಣ) ಗಳಲ್ಲಿಯೂ 5-10‌ ಆಮ್ಲಜನಕ ಹಾಸಿಗೆಗಳ ವ್ಯವಸ್ಥೆ ಮಾಡಲು ಚಿಂತನೆ ನಡೆಸಲಾಗಿದೆ. ಶ್ರೀದೇವಿ, ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿಯೂ ಆಮ್ಲಜನಕದ ಅಗತ್ಯಕ್ಕೆ ಅನುಗುಣವಾಗಿ ಹಾಸಿಗೆಗಳನ್ನು ಬಳಸಿಕೊಳ್ಳಲಾಗಿದೆ. ಸಿದ್ಧಗಂಗಾ ಆಸ್ಪತ್ರೆಯಿಂದಲೂ ಸರ್ಕಾರದ ಆದೇಶದನ್ವಯ ಹಾಸಿಗೆಗಳನ್ನು ಪಡೆಯಲಾಗಿದೆ. ಜಿಲ್ಲೆಯಲ್ಲಿ ಜಿಲ್ಲಾಡಳಿತದ ಸೂಕ್ತ ನಿರ್ವಹಣೆಯಿಂದಾಗಿ ಆಮ್ಲಜನಕದ ಕೊರತೆ ನಡುವೆಯೂ ಕೋವಿಡ್ ನಿರ್ವಹಣೆ ಮಾಡಲಾಗುತ್ತಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಿಂದ ಮುಖ್ಯಮಂತ್ರಿಗಳಿಗೆ ಹಲವಾರು ಬೇಡಿಕೆ

ಜಿಲ್ಲೆಗೆ ಮಂಜೂರಾಗಿರುವ 100 ಹಾಸಿಗೆಗಳ ಎಂಸಿಎಚ್(Maternal and child health-ಗರ್ಭಿಣಿ ಮತ್ತು‌ ಮಕ್ಕಳ) ಆಸ್ಪತ್ರೆಯನ್ನು 200 ಹಾಸಿಗೆಗಳಿಗೆ ಹೆಚ್ಚಿಸಿ ಆದಷ್ಟು ಬೇಗ ಕಾಮಗಾರಿಗೆ ಚಾಲನೆ ನೀಡಬೇಕು.  ಇದರಿಂದ ಮಗು ಮತ್ತು ಬಾಣಂತಿಯರ ಆರೈಕೆ ಸುಲಭವಾಗಲಿದೆ. ಜಿಲ್ಲೆಯಲ್ಲಿ 6000 ಹೆರಿಗೆ ಆಗುತ್ತಿದ್ದು, ಎಂಸಿಹೆಚ್ ಆಸ್ಪತ್ರೆ ನಿರ್ಮಾಣವಾದಲ್ಲಿ ಹೆರಿಗೆ ಆಸ್ಪತ್ರೆಗಳ ಮೇಲಿನ ಒತ್ತಡ ಕಡಿಮೆಯಾಗುತ್ತದೆ.  ಇದಲ್ಲದೆ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕಾಗಿ ಸರ್ಕಾರದಿಂದ 100 ಕೋಟಿ ರೂ.ಈಗಾಗಲೇ ಬಿಡುಗಡೆ ಆಗಿದ್ದರೂ ಟೆಂಡರ್ ಪ್ರಕ್ರಿಯೆ ಅಂತಿಮಗೊಳ್ಳದೆ ಕಾಮಗಾರಿ ಪ್ರಾರಂಭವಾಗಿಲ್ಲ. ಇದನ್ನೂ ಬೇಗ ಮಾಡಿಕೊಡಬೇಕು ಎಂದು ಬೇಡಿಕೆ ಇಟ್ಟರಲ್ಲದೆ ಜಿಲ್ಲೆಯಲ್ಲಿ 3-4 ಕಡೆ ಸಿಟಿ ಸ್ಕ್ಯಾನ್ ವ್ಯವಸ್ಥೆ ಮಾಡಿಕೊಡಬೇಕು. ಹುಳಿಯಾರಿನಲ್ಲಿ ಸಮುದಾಯ ಆರೋಗ್ಯ ಕೇಂದ್ರ ಪ್ರಾರಂಭಿಸಬೇಕು. ಎಂದು ಮನವಿ ಮಾಡಿದರು.

ಆಮ್ಲಜನಕದ‌ ಕೊರತೆಯಿರುವುದನ್ನು ಮನಗಂಡು  ಜಿಲ್ಲೆಯಲ್ಲಿ ಮೂರು ಕಡೆ ಸರ್ಕಾರಿ ಹಣದಿಂದ ಆಕ್ಸಿಜನ್ ಘಟಕ ಸ್ಥಾಪನೆಗೆ ಅನುಮತಿ ದೊರೆತಿದೆ. ಸಚಿವ ಸುಧಾಕರ್ ಅವರೂ ಸಹ ಮತ್ತೊಂದು ಘಟಕ ಸ್ಥಾಪನೆಗೆ ಅನುದಾನ ಒದಗಿಸಲಾಗುವುದೆಂದು ಭರವಸೆ ನೀಡಿದ್ದಾರೆ.  ಇದರ ಜೊತೆಗೆ ಹೈಡಲ್ ಬರ್ಗ್ ಸಿಮೆಂಟ್ ಕಾರ್ಖಾನೆಯು ತುರುವೇಕೆರೆ, ಬಿಇಎಲ್ ಸಂಸ್ಥೆಯು ಕುಣಿಗಲ್,‌ ವಿಪ್ರೋ ಸಂಸ್ಥೆಯು ಕೊರಟಗೆರೆಯಲ್ಲಿ ಆಮ್ಲಜನಕ ಘಟಕ ಸ್ಥಾಪನೆ ಮಾಡಲು‌ ಮುಂದೆ ಬಂದಿದೆ. ಪಾವಗಡದಲ್ಲಿ ಈಗಾಗಲೇ  ಆಮ್ಲಜನಕ ಘಟಕ ಸ್ಥಾಪನೆ ಕಾರ್ಯ ಆರಂಭವಾಗಿದೆ. ಜಿಲ್ಲಾಸ್ಪತ್ರೆಗೆ ಟಿಮ್ಯಾಕ್ ಕಂಪನಿಯಿಂದಲೂ 2ಕೆಎಲ್ ಆಕ್ಸಿಜನ್ ಘಟಕ ಸ್ಥಾಪನೆಗೆ ಒಪ್ಪಿಕೊಂಡಿದ್ದಾರೆ. ಇದೆಲ್ಲವನ್ನೂ ಮುಂದಿನ ಕೋವಿಡ್ ಅಲೆಯೊಳಗೆ ಜೂನ್ ಅಂತ್ಯ ಅಥವಾ ಜುಲೈ ಮಾಹೆಯೊಳಗೆ ತಯಾರಿ‌ ಮಾಡಿಕೊಳ್ಳಲಾಗುವುದು‌ ಎಂದು ತಿಳಿಸಿದರು.

ಪ್ರತಿ ತಾಲೂಕಿನಲ್ಲಿಯೂ ಆಯಾ ಶಾಸಕರು ಮತ್ತು ಜನಪ್ರತಿನಿಧಿಗಳ ಉತ್ತಮ ಕಾರ್ಯನಿರ್ವಹಣೆಯಿಂದಾಗಿ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ನಿರೀಕ್ಷೆಗಿಂತಲೂ ಹೆಚ್ಚು ಹತೋಟಿಗೆ ಬಂದಿದೆ. ಇನ್ನೂ ಕಡಿಮೆ ಮಾಡಲು‌ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಸಚಿವ ಜೆ.ಸಿ. ಮಾಧುಸ್ವಾಮಿ ಅವರ ಮನವಿ ಆಲಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ,  ಬೇಡಿಕೆಗಳನ್ನು ಈಡೇರಿಸಲು ಸಮ್ಮತಿ ನೀಡಿದರು.

ಬಳಿಕ ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ಅವರು ಮಾತನಾಡಿ, ಸರ್ಕಾರ ಮೊದಲ ಆದ್ಯತೆಯನ್ನು ಆರೋಗ್ಯಕ್ಕೆ ನೀಡಿದೆ. ಆಸ್ಪತ್ರೆಗಳ ಸಿಬ್ಬಂದಿಗಳ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ಕಡೆ ಆಕ್ಸಿಜನ್ ಜನರೇಟ್ ಮಾಡಲು ಸೂಕ್ತ ವ್ಯವಸ್ಥೆ ಮಾಡಲಾಗುತ್ತಿದೆ. ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ರೀತಿಯ ಸವಲತ್ತು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಮಾತನಾಡಿ, ಜಿಲ್ಲೆಯಲ್ಲಿ ಅತ್ಯುತ್ತಮ ನಿರ್ವಹಣಾ ಕ್ರಮಗಳನ್ನು ಕೈಗೊಂಡು ಸೋಂಕನ್ನು ನಿಯಂತ್ರಣಕ್ಕೆ ತರಲಾಗಿದೆ. ಎಲ್ಲಿಯೂ ಸಮಸ್ಯೆಯಾಗದಂತೆ ನಿರ್ವಹಣೆ ಮಾಡಲಾಗುತ್ತಿದೆ ಎಂದು ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳನ್ನು ಮುಖ್ಯಮಂತ್ರಿಗಳಿಗೆ ಒದಗಿಸಿದರು.

ಸಭೆಯಲ್ಲಿ ಸಂಸದರಾದ ಜಿ.ಎಸ್. ಬಸವರಾಜು, ನಾರಾಯಣಸ್ವಾಮಿ, ಶಾಸಕರುಗಳು ಹಾಗೂ ಡಾ. ರಾಕೇಶ್ ಸಿಂಗ್ ಸೇರಿದಂತೆ ಜಿಲ್ಲಾ ಪಂಚಾಯತ್ ಡಾ.ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ವಂಶಿಕೃಷ್ಣ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.

ಸಭೆ ಬಳಿಕ ಸಿಎಂ ಬಿಎಸ್ ಯಡಿಯೂರಪ್ಪ  ಶ್ರೀ ಸಿದ್ಧಗಂಗಾ ಮಠದಲ್ಲಿರುವ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿ‌  ಪರೀಶಿಲನೆ ನಡೆಸಿದರು.

ಸೋಂಕಿನ ಪ್ರಮಾಣ ಶೇ.10ರೊಳಗೆ ಇಳಿಸಿ ..

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ  ಸಿಎಂ ಬಿಎಸ್ ಯಡಿಯೂರಪ್ಪ, ತುಮಕೂರು ಜಿಲ್ಲೆಗೆ ಸಂಬಂಧಿಸಿದಂತೆ ಕೋವಿಡ್-19 ಎರಡನೇ ಅಲೆಯಲ್ಲಿ 67392‌ ಪ್ರಕರಣಗಳು ಕಂಡುಬಂದಿದ್ದು, 445‌ ಸೋಂಕಿತರು ಸಾವನ್ನಪ್ಪಿದ್ದಾರೆ. ಮರಣ ಪ್ರಮಾಣ ಶೇ.0.66 ಇದ್ದು, ಪಾಸಿಟಿವ್ ಪ್ರಮಾಣ ಶೇ.25.27%ರಷ್ಟಾಗಿದೆ. ಈ ಸೋಂಕಿನ ಪ್ರಮಾಣವನ್ನು ಶೇ.10ರೊಳಗೆ ಇಳಿಸಬೇಕಾಗಿದೆ  ಎಂದರು.

ಎರಡನೇ ಅಲೆಯಲ್ಲಿ ಜಿಲ್ಲೆಯಲ್ಲಿರುವ ಎರಡು ಸರ್ಕಾರಿ ಆರ್ ಟಿಪಿಸಿಆರ್ ಲ್ಯಾಬ್ ಗಳನ್ನು ಬಳಸಿಕೊಂಡು 266645 ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಸೋಂಕು ದೃಢಪಟ್ಟವರಿಗೆ ಜಿಲ್ಲಾಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿಯು ಚಿಕಿತ್ಸೆ ನೀಡಲಾಗಿದೆ. ಜಿಲ್ಲೆಗೆ 23ಕೆಎಲ್  ಆಮ್ಲಜನಕ ಪೂರೈಕೆ ಮಾಡಿ ಯಾವುದೇ ಸೋಂಕಿತರಿಗೆ ಕೊರತೆಯಾಗದಂತೆ ನೋಡಿಕೊಳ್ಳಲಾಗಿದೆ. ನೋಡಲ್ ಅಧಿಕಾರಿಗಳನ್ನು ನೇಮಿಸಿ ಹಾಸಿಗೆಗಳ ನಿರ್ವಹಣೆ ಮಾಡಲಾಗಿದೆ. ಸರ್ಕಾರ ಹಾಗೂ ದಾನಿಗಳ ನೆರವಿನಿಂದ ಜಿಲ್ಲಾಸ್ಪತ್ರೆ ಸೇರಿದಂತೆ ಎಲ್ಲಾ ತಾಲೂಕುಗಳಲ್ಲಿಯೂ ಆಮ್ಲಜನಕ ಉತ್ಪಾದನೆ ಘಟಕ ಮಾಡಲು ಕ್ರಮ ವಹಿಸಲಾಗಿದೆ ಹಾಗೂ 566 ಆಮ್ಲಜನಕ ಸಾಂದ್ರಕಗಳನ್ನು ಪಡೆದು ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಪಾವಗಡ ತಾಲೂಕಿನಲ್ಲಿ 100 ಎಲ್ ಪಿಎಂ ಆಮ್ಲಜನಕ ಉತ್ಪಾದನಾ ಘಟಕ  ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು.

ಜಿಲ್ಲೆಯ ಪ್ರತಿಯೋರ್ವ ಸೋಂಕಿತನಿಗೂ ಅಗತ್ಯ ಔಷದೋಪಾಚಾರವನ್ನು ಒದಗಿಸಲಾಗುತ್ತಿದೆ. ಹೋಂ ಐಸೋಲೇಷನ್ ನಲ್ಲಿರುವ ಸೋಂಕಿತರಿಗೆ ಆಶಾ ಕಾರ್ಯಕರ್ತೆಯರು ಮತ್ತು ಅಧಿಕಾರಿಗಳಿಂದ ಕೋವಿಡ್ ಕಿಟ್ ನೀಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಪಾಸಿಟಿವ್ ಪ್ರಕರಣಗಳು  ಕಡಿಮೆಯಾಗುತ್ತಿದೆ. ಸೋಂಕು ಇಳಿಕೆ ಸಮಾಧಾನ ತಂದಿದೆ. ಸೋಂಕಿನ  ಪ್ರಮಾಣವನ್ನು ಶೇ.10ಕ್ಕೆ ಇಳಿಸಲು ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಲಾಗಿದೆ. ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಎಲ್ಲಾ ರೀತಿಯಲ್ಲಿಯೂ ಸಹಕಾರ ಸಿಗಲಿದೆ.‌ ಈಗಾಗಲೇ  ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದ್ದಾರೆ. ಏನೇನು ಸಾಧ್ಯವೋ ಅದನ್ನೆಲ್ಲವನ್ನೂ‌ ಈಡೇರಿಸಲು ಸಮ್ಮತಿ ನೀಡಿದ್ದೇನೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಹಿಡಿದು ಜನಪ್ರತಿನಿಧಿಗಳು ಸೇರಿದಂತೆ ವಿಶೇಷವಾಗಿ ಜಿಲ್ಲಾಡಳಿತ ಹಗಲು-ರಾತ್ರಿ ಶ್ರಮಿಸುತ್ತಿದೆ. ಅವರಿಗೆ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಸರ್ಕಾರದಿಂದ ಘೋಷಿಸಲಾಗಿರುವ ವಿಶೇಷ ಪ್ಯಾಕೇಜನ್ನು ಎಲ್ಲರಿಗೂ ತಲುಪಿಸುವ ಕಾರ್ಯ ಆರಂಭವಾಗಿದೆ. ಹಣವನ್ನು ಬಿಡುಗಡೆ ಮಾಡುತ್ತೇವೆ. ಅದರಲ್ಲಿ ಯಾವುದೇ ಅನುಮಾನ ಬೇಡ. ಯಾವುದೇ ಕಾರಣಕ್ಕೂ ಘೋಷಿಸಲಾಗಿರುವ ಹಣವನ್ನು    ಕೊಡುತ್ತೇವೆ. ಮೂರನೇ ಅಲೆ ನಿಯಂತ್ರಣಕ್ಕೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಶಕ್ತಿ ಮೀರಿ ಕೆಲಸ ಮಾಡುತ್ತೇನೆ. ಲಭ್ಯತೆ ಆಧಾರದಲ್ಲಿ 18-44 ವರ್ಷದೊಳಗಿನವರಿಗೆ ಲಸಿಕೆ ನೀಡಲಾಗುವುದು‌. ತುಮಕೂರು ಜಿಲ್ಲೆಗೂ ಹೆಚ್ಚು ಲಸಿಕೆ ನೀಡಲಾಗುವುದು ಎಂದು ಸಿಎಂ ಬಿಎಸ್ ವೈ ತಿಳಿಸಿದರು.

Key words: rural area-covid –control-task force -CM BS Yeddyurappa –tumkur-district administration

The post ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ತಡೆಗೆ ಗ್ರಾ.ಪಂ. ಕಾರ್ಯಪಡೆ ಮತ್ತಷ್ಟು ಬಲಗೊಳಿಸಿ- ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆ: ನಾಳೆ ಗ್ರಾ.ಪಂ ಪ್ರತಿನಿಧಿಗಳ ಜತೆ ಸಿಎಂ ಬಿಎಸ್ ವೈ ವಿಡಿಯೋ ಕಾನ್ಫರೆನ್ಸ್…
ಬೆಂಗಳೂರು,ಮೇ,25,2021(www.justkannada.in): ಗ್ರಾಮೀಣ ಪ್ರದೇಶಗಳಲ್ಲಿ  ಕೊರೊನಾ  2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಾಳೆ ಗ್ರಾಮ ಪಂಚಾಯಿತಿಗಳ ಪ್ರತಿನಿಧಿಗಳ ಜತೆ ಸಿಎಂ ಬಿಎಸ್ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.

ಕೊರೋನಾ ಸೋಂಕು ಹೆಚ್ಚಿರುವ ಗ್ರಾಮಪಂಚಾಯಿತಿಗಳ ಪ್ರತಿನಿಧಿಗಳು, ಪಿಡಿಒ, ಅಧ್ಯಕ್ಷರು, ಕಾರ್ಯದರ್ಶಿಗಳ ಜೊತೆ ನಾಳೆ ಸಿಎಂ ಬಿ.ಎಸ್. ಯಡಿಯೂರಪ್ಪ ವಿಡಿಯೋ  ಕಾನ್ಫರೆನ್ಸ್  ನಡೆಸಿ ಕೊರೋನಾ ನಿಯಂತ್ರಣ ಕುರಿತು ಅಗತ್ಯ ಸಲಹೆ ಸೂಚನೆ ನೀಡಲಿದ್ದಾರೆ.

ಈ ಬಗ್ಗೆ ಗೃಹ ಸಚಿವಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದು, ಕೊರೋನಾ ಸೋಂಕು ಹೆಚ್ಚಾಗಿ ಕಂಡು ಬಂದಿರುವ ಗ್ರಾಮ ಪಂಚಾಯತ್ ಪ್ರತಿನಿಧಿಗಳ  ಜತೆ ಸಿಎಂ ಬಿಎಸ್ ಸಭೆ ನಡೆಸಿ ಚರ್ಚಿಸಲಿದ್ದಾರೆ.  ಹೆಚ್ಚಿನ ಕೊರೊನಾ ಸೋಂಕಿನ ಪ್ರಕರಣಗಳು ಕಂಡು ಬಂದಿರುವ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಮೈಕ್ರೋ ಕಂಟೈನ್ಮೆಂಟ್ ಝೋನ್ ಮಾಡಲು ಸೂಚನೆ ಕೊಡಲಾಗಿದೆ. ಅದರ ಜವಾಬ್ದಾರಿ ಅಲ್ಲಿನ ಪಿಡಿಒ, ಆರೋಗ್ಯ ಅಧಿಕಾರಿಗಳು, ಸಂಬಂಧಪಟ್ಟ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ವಹಿಸಲಾಗಿದೆ ಎಂದಿದ್ದಾರೆ.

Key words: Corona Increase – Rural Area-CM BS yeddyurappa- Video Conference

The post ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆ: ನಾಳೆ ಗ್ರಾ.ಪಂ ಪ್ರತಿನಿಧಿಗಳ ಜತೆ ಸಿಎಂ ಬಿಎಸ್ ವೈ ವಿಡಿಯೋ ಕಾನ್ಫರೆನ್ಸ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

8 ವಿಧಾನಸಭಾ ಕ್ಷೇತ್ರದಲ್ಲೂ ವಿವಿಧ ಇಲಾಖೆಗಳ ಅದಾಲತ್-ಸಚಿವ ಎಸ್.ಟಿ ಸೋಮಶೇಖರ್…
ಮೈಸೂರು, ನವೆಂಬರ್,5,2020(www.justkannada.in):  ಮೈಸೂರಿನ ಗ್ರಾಮೀಣ ಭಾಗದ 8 ವಿಧಾನಸಭಾ ಕ್ಷೇತ್ರದಲ್ಲಿಯೂ ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಅದಾಲತ್ ಮಾಡಲಾಗುವುದು. ಇದಕ್ಕಾಗಿ 15 ದಿನಗಳ ಮುಂಚೆ ಮನೆ ಮನೆಗೆ ಪಾಂಪ್ಲೆಟ್ ಕೊಟ್ಟು ಸಮಸ್ಯೆಗಳ ಬಗ್ಗೆಗಮನಹರಿಸಲಾಗುವುದು. ಈ ಮೂಲಕ ಅದಾಲತ್ ನಡೆಸಿ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್‌.ಟಿ.ಸೋಮಶೇಖರ್ ಹೇಳಿದರು.

ನಮ್ಮನ್ನು ಗೆಲ್ಲಿಸುವುದು ಕಾರ್ಯಕರ್ತರು, ಈಗ ಅಂತಹ ನಿಮ್ಮಗಳ ಚುನಾವಣೆ ಬಂದಿದೆ. ಹೀಗಾಗಿ ನಿಮ್ಮ ಋಣ ತೀರಿಸುವ ಸಂದರ್ಭ ನಮಗೆ ಈಗ ಬಂದಿದೆ. ನಾವು ನಿಮ್ಮ ಚುನಾವಣೆಗೆ ಶ್ರಮಿಸುತ್ತೇವೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

ನಾನೀಗ ಎರಡನೇ ಬಾರಿಗೆ ಜಿಲ್ಲಾ ಪ್ರವಾಸ ಮಾಡಿದ್ದೇನೆ. ಈ ಮೊದಲು 10 ವರ್ಷಕ್ಕೆ ಇದ್ದ ಮೀಸಲಾತಿಯನ್ನು 5 ವರ್ಷಕ್ಕೆ ಇಳಿಸಲಾಗಿದೆ. ಹೈಕೋರ್ಟ್ ತೀರ್ಪು ಪ್ರಕಟವಾದ ನಾಲ್ಕು , ಐದು ದಿನಗಳೊಳಗೆ ಸ್ಥಳೀಯ ಸಂಸ್ಥೆ ಚುನಾವಣೆ ಘೋಷಣೆಯಾಗಬಹುದು. ಹೀಗಾಗಿ ನಾವು ಅದಕ್ಕೆ ಸಿದ್ಧವಾಗಬೇಕಿದೆ ಎಂದು ಸಚಿವರಾದ ಸೋಮಶೇಖರ್ ಹೇಳಿದರು.

ನಾನು ಕಾರ್ಯಕರ್ತರ ಸಭೆ ನಡೆಸಿದಾಗ, ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ಗೌರವವನ್ನು ಕೊಡುತ್ತಿಲ್ಲ. ಕೆಲಸ ಮಾಡಿಕೊಡುವುದಿಲ್ಲ ಎಂಬ ದೂರುಗಳು ಬಂದಿವೆ. ಆ ಬಳಿಕ ಕಾರ್ಯಕರ್ತರ ಕೆಲಸ ನ್ಯಾಯಯುತವಾಗಿದ್ದರೆ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾಗಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದ ಶಂಭುದೇವನಹಳ್ಳಿಯಲ್ಲಿ ಶಕ್ತಿ ಕೇಂದ್ರ ಹಾಗೂ ಮಹಾ ಶಕ್ತಿ ಕೇಂದ್ರದ ಪ್ರಮುಖರುಗಳ ಜೊತೆ ಪೂರ್ವಭಾವಿ ಸಭೆ ನಡೆಸಿ ಸಚಿವ ಎಸ್.ಟಿ ಸೋಮಶೇಖರ್ ಮಾತನಾಡಿದರು.

ಮೈಸೂರು ಬಿಜೆಪಿ ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷರಾದ ಮಂಗಳಾ ಸೋಮಶೇಖರ್ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಈ ಭಾಗದಲ್ಲಿ ಬಿಜೆಪಿ ಶಾಸಕರು ಆಯ್ಕೆಯಾಗಬೇಕಾದಲ್ಲಿ, ಈಗ ಬರುತ್ತಿರುವ ಗ್ರಾಮ ಪಂಚಾಯಿತಿ ಚುನಾವಣೆಯನ್ನು ನಾವು ಪ್ರತಿಷ್ಠೆಯಾಗಿ ತೆಗೆದುಕೊಂಡು ಗೆಲ್ಲಬೇಕು. ನಮ್ಮ ಎಲ್ಲ ಪ್ರಯತ್ನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಸೋಮಶೇಖರ್ ಅವರು ಸಾಥ್ ಕೊಡುತ್ತಿದ್ದು, ಬೆಂಬಲ ನೀಡುತ್ತಿದ್ದಾರೆ. ಅವರ ಈ ಸಹಕಾರ ನಮ್ಮ ಪುಣ್ಯ ಎಂದು ತಿಳಿಸಿದರು.

ಬಿಜೆಪಿ ಮುಖಂಡರು ಹಾಗೂ ಮಾಜಿ ಶಾಸಕರಾದ ಸಿ. ರಮೇಶ್ ಮಾತನಾಡಿ, 15 ರಿಂದ 20 ವರ್ಷಗಳ ಇತಿಹಾಸದಲ್ಲಿ ಇಂತಹ ಸಭೆ ನಡೆಯುತ್ತಿರುವುದು ಇದೇ ಮೊದಲು. ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್‌.ಟಿ.ಸೋಮಶೇಖರ್ ಅವರ ಪರಿಶ್ರಮ ತುಂಬಾ ಇದೆ. ಅವರು ಜಿಲ್ಲೆಯ ಎಲ್ಲ ತಾಲೂಕುಗಳಿಗೂ ಭೇಟಿ ಕೊಡುತ್ತಿದ್ದಾರೆ. ಪಕ್ಷದ ಸಂಘಟನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ತಿಳಿಸಿದರು.

ಸಚಿವರಾದ ಸೋಮಶೇಖರ್ ಅವರ ನಾಯಕತ್ವದಲ್ಲಿ ನಾವು ಈ ಬಾರಿ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಗೆಲ್ಲಿಸಿ ಕೊಡುತ್ತೇವೆ ಎಂದು ಸಚಿವರಿಗೆ ಈ ಮೂಲಕ ಮಾತುಕೊಡುತ್ತಿದ್ದೇವೆ ಎಂದು ಹೇಳಿದರು.

ನಮ್ಮ ಕಾರ್ಯಕರ್ತರಿಗೆ ಸರ್ಕಾರದ ವತಿಯಿಂದ ಏನೆಲ್ಲ ಸೌಕರ್ಯ ಮಾಡಬಹುದೋ ಅದನ್ನು ನಾವುಗಳು ಈಡೇರಿಸಿಕೊಡುತ್ತೇವೆ. ನನಗೆ ಎಲ್ಲ ಪಂಚಾಯಿತಿಗಳಲ್ಲೂ ಸಭೆ ಮಾಡಬೇಕೆಂಬುದಿತ್ತು.ಆದರೆ, ಸಮಯದ ಅಭಾವ ಹಾಗೂ ಕೊರೋನಾ ಭೀತಿ ಹಿನ್ನೆಲೆ ಈ ರೀತಿಯಾಗಿ ಎರಡು ಮೂರು ಪಂಚಾಯಿತಿಗಳನ್ನು ಸೇರಿಸಿ ಪಕ್ಷದ ಸಭೆ ನಡೆಸುತ್ತಿದ್ದೇನೆ ಎಂದರು.

ಪಕ್ಷದ ಮುಖಂಡರಾದ ಮಹದೇವಯ್ಯ ಮಾತನಾಡಿ, ಪಕ್ಷದ ಕಾರ್ಯಕರ್ತರನ್ನು ಬೇರುಮಟ್ಟದಿಂದಲೇ ಗೆಲ್ಲಿಸಬೇಕು. ಗ್ರಾಮ ಪಂಚಾಯಿತಿಯಲ್ಲಿ ಗೆದ್ದರೆ, ತಾಲೂಕು, ಜಿಲ್ಲಸ ಪಂಚಾಯಿತಿಗಳಲ್ಲೂ ಗೆಲುವು ಸಾಧಿಸಲು ಅನುಕೂಲವಾಗಲಿದೆ. ಹೀಗಾಗಿ ಚುನಾವಣೆ ಘೋಷಣೆಗೆ ಮುನ್ನವೇ ಉಸ್ತುವಾರಿ ಸಚಿವರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅವರ ಶ್ರಮಕ್ಕೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ತಿಳಿಸಿದರು.

ಟಿ.ನರಸೀಪುರ ತಾಲೂಕು ಬಿಜೆಪಿ ಘಟಕದ ಅಧ್ಯಕ್ಷರಾದ ಕೆ.ಸಿ.ಲೋಕೇಶ್, ಮಾಜಿ ಶಾಸಕರಾದ ಬಾರ್ತಿಶಂಕರ್, ಮೂಗೂರು ಕ್ಷೇತ್ರ ತಾಪಂ ಅಧ್ಯಕ್ಷ ಚಂದ್ರಶೇಖರ್ ಸೇರಿದಂತೆ ಇತರರು ಇದ್ದರು.

ಮುಡುಕನಪುರದಲ್ಲಿ ಶಕ್ತಿಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರದ ಸಭೆ

ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಮುಡುಕನಪುರದಲ್ಲಿ ಬಿಜೆಪಿ ಶಕ್ತಿಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಸೋಮಶೇಖರ್ ಅವರು, ಪಕ್ಷದ ಕಾರ್ಯಕರ್ತರಿಗೆ ಚುನಾವಣೆ ಉದ್ದೇಶ ಹಾಗೂ ಗೆಲುವಿನ ಮಹತ್ವದ ಬಗ್ಗೆ ವಿವರಿಸಿದರು. ಕಾರ್ಯಕರ್ತರ ಚುನಾವಣೆಗೆ ನಾಯಕರಾದವರು ಬೆಂಬಲಿಸುವುದು ಕರ್ತವ್ಯ. ಈ ನಿಟ್ಟಿನಲ್ಲಿ ನಮ್ಮೆಲ್ಲರ ಬೆಂಬಲವಿದೆ. ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಗೆಲ್ಲಬೇಕು ಎಂದು ಕರೆ ನೀಡಿದರು.

Key words: loka Adalat-Minister -ST Somashekhar –  8 Assembly- constituency – Mysore- Rural Area.

The post 8 ವಿಧಾನಸಭಾ ಕ್ಷೇತ್ರದಲ್ಲೂ ವಿವಿಧ ಇಲಾಖೆಗಳ ಅದಾಲತ್-ಸಚಿವ ಎಸ್.ಟಿ ಸೋಮಶೇಖರ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಗ್ರಾಮೀಣ ಭಾಗದಲ್ಲಿ ಆನ್ ಲೈನ್ ಶಿಕ್ಷಣಕ್ಕೆ ತೊಂದರೆ: ಆರ್ಥಿಕವಾಗಿ ಹಿಂದುಳಿದವರಿಗೂ ಸಹಾಯ ಮಾಡಿ- ಸುಧಾಕರ್ ಎಸ್ ಶೆಟ್ಟಿ ಮನವಿ…
ಮೈಸೂರು,ಆ,22,2020(www.justkannada.in):  ಕೊರೋನಾ ಮಹಾಮಾರಿಯಿಂದಾಗಿ  ಆನ್ ಲೈನ್ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ. ಆದರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಆನ್ ಲೈನ್ ಶಿಕ್ಷಣ ಪಡೆಯಲು ಹಲವು ಸಮಸ್ಯೆಗಳನ್ನ ಎದುರಿಸುತ್ತಿದ್ದು ಈ ಹಿನ್ನೆಲೆ ಆರ್ಥಿಕವಾಗಿ ಹಿಂದುಳಿದವರಿಗು ಸಹಾಯ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಮೈಸೂರು ವಲಯದ  ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ,(CISPMAM)ದ ಅಧ್ಯಕ್ಷ ಸುಧಾಕರ್ ಎಸ್  ಶೆಟ್ಟಿ ಮನವಿ ಮಾಡಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಸ್ವಾತಂತ್ರ ಪೂರ್ವದಲ್ಲಿ 15 ಕೋಟಿಯಿದ್ದ ಜನಸಂಖ್ಯೆ ಈಗ 138 ಕೋಟಿಯತ್ತ ದಾಪುಗಾಲು ಹಾಕುತ್ತಿದೆ. ನಗರಗಳಲ್ಲಿ 48 ಕೋಟಿ ಜನಸಂಖ್ಯೆಯ ವಾಸಿಸುತ್ತಿದ್ದು ಇನ್ನುಳಿದ 90 ಕೋಟಿ ಜನ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ.

15-34 ವಯಸ್ಸುಳ್ಳ ವಿದ್ಯಾರ್ಥಿಗಳ ಸಂಖ್ಯೆ 46 ಕೋಟಿಯಿದ್ದು, 15 ಕೋಟಿ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಇವರಿಗೆ ಆನ್ಲೈನ್ ಶಿಕ್ಷಣದ ಕೊರತೆಯಿದೆ , ಈ ಕೊರೋನವೆಂಬ ಮಹಾಮಾರಿಯಿಂದಾಗಿ ಶಿಕ್ಷಣ ಕ್ಷೇತ್ರದ ಕಲಿಕೆಯ ಕ್ರಮದಲ್ಲಿ ಕೆಲವೊಂದು ಬದಲಾವಣೆಗಳಾಗಿದ್ದು , ಶಿಕ್ಷಣವನ್ನು ಅನ್ಲೈನ್ ಮೂಲಕ ನೀಡಬೇಕೆಂದು ಸರ್ಕಾರ ನಿರ್ಧರಿಸಿದೆ. ಇದರಿಂದಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅದು ತುಂಬಾ ಕಠಿಣವಾಗಿ ಪರಿಣಮಿಸುತ್ತಿದ್ದು ಕಲಿಕೆಯನ್ನು ಮುಂದುವರಿಸುವಲ್ಲಿ ಪರಿತಪ್ಪಿಸುತ್ತಿದ್ದಾರೆ.

ಗ್ರಾಮೀಣ ಭಾಗದ   ವಿದ್ಯಾರ್ಥಿಗಳ ಬಳಿ ಕಲಿಯಲು ಯಾವುದೇ ರೀತಿಯ ಯಾಂತ್ರಿಕ ಉಪಕರಣಗಳಾದ ಮೊಬೈಲ್, ಲ್ಯಾಪ್‌ಟಾಪ್, ಟ್ಯಾಬ್ ಹಾಗೂ ಇನ್ನಿತರ ವಸ್ತುಗಳ ಲಭ್ಯತೆಗಳು ಇಲ್ಲದಿರುವುದು ಮತ್ತು ಅದನ್ನು ಕೊಂಡುಕೊಳ್ಳಲು ತಗುಲುವ ವೆಚ್ಚವನ್ನು ಸಹ ಬರಿಸಲು ಸಾಧ್ಯವಾಗದಿರುವುದು ಇದಕ್ಕೆ ಕಾರಣ.

ಹಾಗಾಗಿ ಈ ವಿಚಾರವನ್ನು ನಾನು ಈ ಸರ್ಕಾರದ  ಗಮನಕ್ಕೆ ತರಲು ಇಚ್ಛಿಸುತ್ತೇನೆ.  ತಾವು ಈ ವಿಚಾರವನ್ನು ಗಣನೆಗೆ ತೆಗೆದುಕೊಂಡು ಆರ್ಥಿಕವಾಗಿ ಹಿಂದುಳಿದವರಿಗೂ ಸಹಾಯ ನೀಡಿದಲ್ಲಿ  ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಅದು ಅನೂಕೂಲವಾಗುತ್ತದೆ ಎಂದು ಮೈಸೂರು ವಲಯದ  ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ,(CISPMAM)ದ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಒಕ್ಕೂಟ (FKCCI) ಮಾಜಿ ಅಧ್ಯಕ್ಷರಾದ ಸುಧಾಕರ ಎಸ್  ಶೆಟ್ಟಿ ಮನವಿ ಮಾಡಿದ್ದಾರೆ.

Key words: Trouble -online education – rural area-Help – economically backward-Sudhakar S Shetty

The post ಗ್ರಾಮೀಣ ಭಾಗದಲ್ಲಿ ಆನ್ ಲೈನ್ ಶಿಕ್ಷಣಕ್ಕೆ ತೊಂದರೆ: ಆರ್ಥಿಕವಾಗಿ ಹಿಂದುಳಿದವರಿಗೂ ಸಹಾಯ ಮಾಡಿ- ಸುಧಾಕರ್ ಎಸ್  ಶೆಟ್ಟಿ ಮನವಿ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.