Simple- mass wedding Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಚಾಮುಂಡಿ ಬೆಟ್ಟದಲ್ಲಿ ಸರಳ ಸಾಮೂಹಿಕ ವಿವಾಹ: ನವಜೋಡಿಗಳಿಗೆ ಶುಭ ಹಾರೈಕೆ….
ಮೈಸೂರು,ಮಾರ್ಚ್,15,2021(www.justkannada.in): ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ಸೋಮವಾರ ಚಾಮುಂಡೇಶ್ವರಿ ಬೆಟ್ಟದಲ್ಲಿ ನಡೆದ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ.ದೇವೇಗೌಡ ಅವರು ಭಾಗವಹಿಸಿ ನೂತನವಾಗಿ ವಿವಾಹವಾದ 14 ಜೋಡಿಗಳಿಗೆ ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಪಂಚಾಯತಿಯ ಅಧ್ಯಕ್ಷೆ ಪರಿಮಳ ಶ್ಯಾಂ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ನಂದೀಶ್ ಹಂಚೆ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್.ಅರ್. ಮಹದೇವ ಸ್ವಾಮಿ, ಬಣ್ಣ ಮತ್ತು ಅರಗು ಕಾರ್ಖಾನೆಯ ಅಧ್ಯಕ್ಷ ಎನ್.ವಿ.ಫಣೀಶ್ ಸೇರಿದಂತೆ ಇತರರು ಹಾಜರಿದ್ದರು.

ಅದ್ಧೂರಿತನಕ್ಕೆ ತಡೆ ನೀಡಿ, ಸರಳತನ ರೂಢಿಸಿಕೊಳ್ಳೋಣ: ಹೊಸ ಬದಲಾವಣೆಗೆ ನಾಂದಿ ಹಾಡೋಣ-ಸಚಿವ ಎಸ್.ಟಿ ಸೋಮಶೇಖರ್…

ಚಾಮುಂಡಿ ಬೆಟ್ಟದಲ್ಲಿನ ಸರಳ-ಸಾಮೂಹಿಕ ವಿವಾಹ ಸಮಾರಂಭಕ್ಕೆ  ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಆಶಯ ನುಡಿಗಳನ್ನಾಡಿದ್ದಾರೆ.

ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ಆ ಮೂಲಕ ಬಡವರ ಬದುಕಿಗೆ ಹೊರೆಯಾಗುವ ಇಂಥ ಕಾರ್ಯಕ್ರಮಗಳು ವರವಾಗಿ ಪರಿಣಮಿಸಬೇಕು. ಈ ಕೆಲಸವನ್ನು ನಮ್ಮ ಧಾರ್ಮಿಕ ದತ್ತಿ ಇಲಾಖೆ ಹಮ್ಮಿಕೊಂಡಿರುವುದು ಸಮಯೋಚಿತ ಹಾಗೂ ಔಚಿತ್ಯಪೂರ್ಣವೂ ಹೌದು. ಹೀಗಾಗಿ ಅದ್ಧೂರಿತನಕ್ಕೆ ತಡೆ ನೀಡಿ, ಸರಳತನವನ್ನು ರೂಢಿಸಿಕೊಳ್ಳೋಣ. ಕೊರೋನಾ ಕಾಲದಲ್ಲಿ ಹೊಸ ಬದಲಾವಣೆಗೆ ನಾಂದಿ ಹಾಡೋಣ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

ಇದು ಕೊರೋನಾ ಕಾಲ ಎಂದರೆ ತಪ್ಪಲ್ಲ.. ಜೊತೆಗೆ ಇದು ನಮಗೆ ಹಲವಾರು ಪಾಠಗಳನ್ನು ಹೇಳಿಕೊಟ್ಟಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ವಚ್ಛತೆ ಕಾಪಾಡಿಕೊಳ್ಳುವುದು, ಕನಿಷ್ಠ ಮಂದಿ ಒಂದೆಡೆ ಸೇರುವುದು ಹೀಗೆ ಹತ್ತು ಹಲವು ಕಡಿವಾಣಗಳನ್ನು ನಮಗೆ ನಾವೇ ಹಾಕಿಕೊಳ್ಳುವಂತೆ ಮಾಡಿದೆ. ಇದು ಒಂದರ್ಥದಲ್ಲಿ ನಾವು ಧನಾತ್ಮಕವಾಗಿ ತೆಗೆದುಕೊಳ್ಳುವ ಅಂಶವೂ ಆಗಿದೆ ಎಂದರು.

ಇಂದು ನಮ್ಮ ಚಿಂತನೆಗಳು ಬದಲಾಗಬೇಕಿದೆ. ಸರಳ ಜೀವನ ನಮ್ಮದಾಗಬೇಕಿದೆ. ಬಹುಮುಖ್ಯವಾಗಿ ನಾವು ಮಾಡುವ ಸಮಾರಂಭಗಳು ಸೀಮತ ವ್ಯಾಪ್ತಿಗೆ ಬರಬೇಕಿದೆ. ಮದುವೆ-ಮುಂಜಿ ಸೇರಿದಂತೆ ಅನೇಕ ಸಂಭ್ರಮದ ಕಾರ್ಯಕ್ರಮಗಳು ಮನುಷ್ಯನ ಸಂತೋಷದ ದಿನಗಳ ಭಾಗ ಎಂಬುದರಲ್ಲಿ ಎರಡು ಮಾತಿಲ್ಲ. ಜೀವನದಲ್ಲಿ ಕೆಲವೇ ಕೆಲವು ಬಾರಿ ಬರುವ ಈ ಕ್ಷಣಗಳನ್ನು ಒಂದು ಕನಸಿನ ಮಾದರಿಯಲ್ಲಿ ಮಾಡುಬೇಕೆಂಬ ಹಂಬಲ ಇರುವುದೂ ತಪ್ಪಲ್ಲ. ಆದರೆ, ನಾವೀಗ ಪರಿಸ್ಥಿತಿಯನ್ನು ಅರಿತು ಹೆಜ್ಜೆ ಹಾಕಬೇಕಿದೆ. ಹೆಚ್ಚಿನ ಜನರು ಒಂದೆಡೆ ಸೇರಿದರೆ ಪರಿಣಾಮ ಏನಾದೀತು..? ಇಂತಹ ಸಮಾರಂಭಗಳಿಗೆ ಮನೆಯ ಹಿರಿಯರಿಂದ ಹಿಡಿದು ಚಿಕ್ಕ ಮಕ್ಕಳೂ ಬರುವುದು ಅನಿವಾರ್ಯ. ಹೀಗಾಗಿ ಒಂದು ವೇಳೆ ಕೊರೋನಾ ಮಹಾಮಾರಿ ಬಂದರೆ..? ಮುಂದೇನು ಎಂಬ ಅರಿವು, ಎಚ್ಚರಿಕೆ ಇರಬೇಕಾಗುತ್ತದೆ ಎಂದು ಸಚಿವ ಎಸ್.ಟಿ ಸೋಮಶೇಖರ್ ಸಲಹೆ ನೀಡಿದರು.

ಇದರ ಜೊತೆಗೆ ಅದ್ದೂರಿ ವಿವಾಹಗಳು ಬೇಕೆ ಎಂಬ ಪ್ರಶ್ನೆ. ಅದ್ದೂರಿತನ ಎಂಬುದು ಶಕ್ತಿಗನುಸಾರ ಇರಬೇಕೇ ವಿನಃ ಪ್ರತಿಷ್ಠೆಯಾಗಬಾರದು. ಅವರು ಮಾಡಿದರು, ಇವರು ಮಾಡಿದರು ಎಂದು ನಾವು ಮಾಡುವುದು ತರವಲ್ಲ. ಅದಕ್ಕಾಗಿ ಸಾಲ ಮಾಡಿ, ಭರ್ಜರಿಯಾಗಿ ವಿವಾಹ ಕಾರ್ಯಗಳನ್ನು ಮುಗಿಸಿ ಜೀವಮಾನವಿಡೀ ಸಾಲದ ಸುಳಿಯಲ್ಲಿ ಸಿಲುಕಿ, ಬಳಿಕ ನಿಮ್ಮ ಮಕ್ಕಳನ್ನೂ ಆ ಸುಳಿಗೆ ನೂಕುವುದು ಸರಿಯಲ್ಲ. ಇಂಥದ್ದಕ್ಕೆಲ್ಲ, ಸರಳ ಸಾಮೂಹಿಕ ವಿವಾಹಗಳು ಉತ್ತಮ ಪರಿಹಾರ. ಈ ನಿಟ್ಟಿನಲ್ಲಿ ನಮ್ಮ ಚಿಂತನೆಗಳು ಸಾಗಲಿ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

Key words: Simple- mass wedding – Chamundi Hill- wishes-new married

The post ಚಾಮುಂಡಿ ಬೆಟ್ಟದಲ್ಲಿ ಸರಳ ಸಾಮೂಹಿಕ ವಿವಾಹ: ನವಜೋಡಿಗಳಿಗೆ ಶುಭ ಹಾರೈಕೆ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.