Sophia Qureshi Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಕರ್ನಲ್ ಸೋಫಿಯಾ ಖುರೇಷಿ ಕುರಿತು ವಿವಾದಾತ್ಮಕ ಹೇಳಿಕೆ: ಸಚಿವ ವಿಜಯ್ ಶಾಗೆ ಸುಪ್ರೀಂಕೋರ್ಟ್ ತರಾಟೆ
ನವದೆಹಲಿ, ಮೇ ,15,2025 (www.justkannada.in): ಅಪರೇಷನ್ ಸಿಂಧೂರ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡುತ್ತಿದ್ದ  ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಸಚಿವ ವಿಜಯ್ ಶಾಗೆ ಸುಪ್ರೀಂ ಕೋರ್ಟ್ ಇಂದು ತರಾಟೆಗೆ ತೆಗೆದುಕೊಂಡಿದೆ.

ಕರ್ನಲ್ ಸೋಫಿಯಾ ಖುರೇಷಿ  ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ಹಿನ್ನೆಲೆ ಸಚಿವ ವಿಜಯ್ ಶಾ ವಿರುದ್ದ ಎಫ್ ಐಆರ್ ದಾಖಲಿಸುವಂತೆ ನಿನ್ನೆ ಮಧ್ಯಪ್ರದೇಶ ಹೈಕೋರ್ಟ್  ಆದೇಶಿಸಿತ್ತು. ಈ  ಆದೇಶದ ವಿರುದ್ಧ ವಿಜಯ್ ಶಾ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಇದೀಗ ಮಧ್ಯಪ್ರದೇಶ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ವಿಜಯ್ ಶಾ ಸಲ್ಲಿಸಿರುವ ಅರ್ಜಿಯನ್ನು ಮೇ 16ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದ್ದು ಇದೇ ವೇಳೆಯಲ್ಲಿ ವಿಜಯ್ ಶಾ ವಿರುದ್ದ ಸುಪ್ರೀಂಕೋರ್ಟ್ ಕಿಡಿಕಾರಿದೆ.

ಸುಪ್ರೀಂ ಕೋರ್ಟ್‌ನಲ್ಲಿ ತಮ್ಮ ಅರ್ಜಿಯ ತ್ವರಿತ ವಿಚಾರಣೆಗೆ ವಿಜಯ್ ಶಾ ಒತ್ತಾಯಿಸಿದ್ದರು. ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಪ್ರಾರಂಭಿಸಲು ಹೈಕೋರ್ಟ್ ನೀಡಿದ ನಿರ್ದೇಶನಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿತು.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಸಚಿವರ ಹೇಳಿಕೆಗಳನ್ನು ಸ್ವೀಕಾರಾರ್ಹವಲ್ಲ, ಅದು ಸಂವೇದನಾರಹಿತ ಹೇಳಿಕೆ. ಸಾಂವಿಧಾನಿಕ ಹುದ್ದೆಗಳನ್ನು ಅಲಂಕರಿಸುವ ವ್ಯಕ್ತಿಗಳು ಭಾಷಣದಲ್ಲಿ ಸಂಯಮವನ್ನು ಹೊಂದಿರಬೇಕು. “ನೀವು ಯಾವ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದೀರಿ? ನೀವು ಸ್ವಲ್ಪ ಸಂವೇದನಾಶೀಲತೆಯನ್ನು ತೋರಿಸಬೇಕು. ಹೋಗಿ ಹೈಕೋರ್ಟ್‌ನಲ್ಲಿ ಕ್ಷಮೆಯಾಚಿಸಿ. ಸಚಿವರು ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು ಎಂದು ಟೀಕಿಸಿದ್ದು ನಾಳೆಗೆ ವಿಚಾರಣೆ ಮುಂದೂಡಲಾಗಿದೆ.

ಭಾರತೀಯ ಸಶಸ್ತ್ರ ಪಡೆಗಳು ಪ್ರಾರಂಭಿಸಿದ ‘ಆಪರೇಷನ್ ಸಿಂಧೂರ್’ ಬಗ್ಗೆ ಕರ್ನಲ್ ಸೋಫಿಯಾ ಖುರೇಷಿ ಪತ್ರಿಕಾಗೋಷ್ಠಿಗಳಲ್ಲಿ ವಿವರಗಳನ್ನು ಹಂಚಿಕೊಂಡಿದ್ದರು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸಚಿವ ವಿಜಯ್ ಶಾ, “ಪಾಕಿಸ್ತಾನದ ಭಯೋತ್ಪಾದಕರು ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ನಾವು ಅವರ ಸಹೋದರಿಯನ್ನು ಮುಂದಿಟ್ಟುಕೊಂಡು ತಕ್ಕ ತಿರುಗೇಟು ನೀಡಿದ್ದೇವೆ ಎಂದಿದ್ದರು.

Key words: Supreme Court,  Minister, Vijay Shah, controversial statement, Sophia Qureshi

The post ಕರ್ನಲ್ ಸೋಫಿಯಾ ಖುರೇಷಿ ಕುರಿತು ವಿವಾದಾತ್ಮಕ ಹೇಳಿಕೆ: ಸಚಿವ ವಿಜಯ್ ಶಾಗೆ ಸುಪ್ರೀಂಕೋರ್ಟ್ ತರಾಟೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅಪರೇಷನ್ ಸಿಂಧೂರ: ಸೇನಾಧಿಕಾರಿ ಸೋಫಿಯಾ ಖುರೇಷಿ ಬೆಳಗಾವಿ ಸೊಸೆ
ಬೆಳಗಾವಿ,ಮೇ,8,2025 (www.justkannada.in): ಪಹಲ್ಗಾಮ ದಾಳಿಗೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ಪಾಕಿಸ್ತಾನ ವಿರುದ್ಧದ ಆಪರೇಷನ್ ಸಿಂಧೂರ ಹೆಸರಿನಲ್ಲಿ ದಾಳಿ ನಡೆಸಿದ್ದರ ಕುರಿತು ಸೇನೆಯ ಮಹಿಳಾ ಮಹಿಳಾ ಅಧಿಕಾರಿ ಜಗತ್ತಿಗೆ ಮಾಹಿತಿ ನೀಡಿದ್ದರು.‌ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದ ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ ಎಂಬುದು ಹೆಮ್ಮೆಯ ಸಂಗತಿ.

ಹೌದು ಮಹಿಳೆಯರ ತಿಲಕ ಅಳಿಸಿದ ಉಗ್ರರ ವಿರುದ್ಧ ಪ್ರತಿಕಾರಕ್ಕೆ ಭಾರತೀಯ ಸೇನೆ ಆಪರೇಷನ್ ಸಿಂಧೂರ ಹೆಸರಿನ ದಾಳಿ ಮೂಲಕ ಪಾಕಿಸ್ತಾನದ ಉಗ್ರರ ನೆಲೆಗಳನ್ನು ಧ್ವಂಸ ಮಾಡಿತ್ತು. ಈ ಮಹತ್ವದ ದಾಳಿ ಕುರಿತು ಭಾರತೀಯ ಸೇನೆ ಇದೆ ಮೊದಲಬಾರಿಗೆ ಮಹಿಳಾ ಅಧಿಕಾರಿಗಳಿಂದ ಕಾರ್ಯಾಚರಣೆ ಮಾಹಿತಿ ಕೊಡಿಸಿದ್ದರು. ಸಧ್ಯ ಘಟನೆ ಕುರಿತು ವಿವರಣೆ ನೀಡಿದ್ದ ಮಹಿಳಾ ಅಧಿಕಾರಿಯಲ್ಲಿ ಒಬ್ಬರಾದ ಸೋಫಿಯಾ ಖುರೇಷಿ ಅವರಿಗೆ ಕರ್ನಾಟಕ ನಂಟು ಇದೆ ಎಂಬುದು ವಿಶೇಷ.

2016 ರಲ್ಲಿ ಪುಣೆಯಲ್ಲಿ ನಡೆದ ಮಿಲಿಟರಿ ಕವಾಯತಿನಲ್ಲಿ ಭಾರತೀಯ ಸೇನಾ ತುಕಡಿ ಮುನ್ನಡೆಸಿದ ಮೊದಲ ಮಹಿಳಾ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಇವರ ಪತಿ  ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರ ಗ್ರಾಮದವರು. ತಾಜುದ್ದೀನ್ ಬಾಗೇವಾಡಿ ಅವರೂ ಕೂಡಾ ಸೈನ್ಯದಲ್ಲಿ ಇದ್ದು ಪತ್ನಿಯಂತೆ ಕರ್ನಲ್ ಆಗಿ ದೇಶ ಸೇವೆ ಮಾಡುತ್ತಿದ್ದಾರೆ.

ಸೋಫಿಯಾ ಖುರೇಷಿ ಮೂಲತಃ ಗುಜರಾತ್ ರಾಜ್ಯದ ವಡೋದರ 1981 ರಲ್ಲಿ ಜನಿಸಿದ್ದಾರೆ. ಸೈನಿಕ‌ ಕುಟುಂಬಕ್ಕೆ ಸೇರಿರುವ ಇವರ ತಂದೆ ಹಾಗೂ ಅಜ್ಜ ಇಬ್ಬರು ಭಾರತೀಯ ಸೇನೆಯಲ್ಲಿದ್ದರು. ಜೀವರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಸದ್ಯ ಜಮ್ಮುವಿನಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.‌ ಇವರ ಪತಿ ತಾಜುದ್ದೀನ್ ಬಾಗೇವಾಡಿ ಅವರೂ ಜಾನ್ಸಿಯಲ್ಲಿ ಕರ್ನಲ್ ಆಗಿ ದೇಶಸೇವೆ ಮಾಡುತ್ತಿದ್ದಾರೆ.

1999 ರಲ್ಲಿ ಭಾರತೀಯ ಸೇನೆಗೆ ಸೇರಿದ ಕರ್ನಲ್ ಸೋಫಿಯಾ ಖುರೇಷಿ ನಂತರ ಭಾರತೀಯ ಸೇನೆಯ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾದವರು. ತಾಜುದ್ದೀನ್ ಬಾಗೇವಾಡಿ ಅವರ ಜೊತೆ ಪ್ರೇಮ ಹುಟ್ಟಿಕೊಂಡ ನಂತರ ಇಬ್ಬರೂ ಪರಸ್ಪರ ಒಪ್ಪಿ  2015 ರಲ್ಲಿ ಮದುವೆಯಾಗಿದ್ದಾರೆ. ಪಾಕಿಸ್ತಾನ ಮೇಲೆ ನಡೆದ ಸೇನಾ ಕಾರ್ಯಾಚರಣೆಯ ಮಾಹಿತಿಯನ್ನು ದೇಶಕ್ಕೆ ತಿಳಿಸಿದ ಸೇನಾಧಿಕಾರಿ ಸೋಫಿಯಾ ಖುರೇಷಿ ಬೆಳಗಾವಿ ಸೊಸೆ ಎಂಬುದು ಹೆಮ್ಮೆಯ ಸಂಗತಿ.

Key words: Army officer, Sophia Qureshi, daughter-in-law, Belgaum

The post ಅಪರೇಷನ್ ಸಿಂಧೂರ: ಸೇನಾಧಿಕಾರಿ ಸೋಫಿಯಾ ಖುರೇಷಿ ಬೆಳಗಾವಿ ಸೊಸೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.